ಟ್ವೀಟ್‍ನಲ್ಲೇನಿದೆ..?: ಕಾಂಗ್ರೆಸ್ಸಿಗರೇ, ನಮಗೂ ನಿಮ್ಮ ಹಾಗೆಯೇ, ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು. ಆದರೆ ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದಾರೆ, ಎಂತಹ ಅಪ್ರಬುದ್ಧ ಕೆಪಿಸಿಸಿ (KPCC) ಅಧ್ಯಕ್ಷ ಎನ್ನಬಹುದು. ಆದರೆ ನಾವು ಆ ಕೆಲಸ ಮಾಡುವುದಿಲ್ಲ ಎಂದು ಕೂಡ ಬಿಜೆಪಿಯ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಳ್ಳಲಾಗಿದೆ.
ದೋಸೆ ವಿವಾದ: ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದವು.
ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಾಂಗ್ರೆಸ್ (Congress) ಪಕ್ಷಕ್ಕೆ ಮಾಡುವುದಕ್ಕೆ ಕೆಲಸ ಇಲ್ಲ. ಫೇಕ್ ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ (Tejasvi Surya) ಕಿಡಿಕಾರಿದ್ದಾರೆ.
ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ (Rain) ಸಮಸ್ಯೆ ಆಗಿದೆ. ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದರು.
ನಮ್ಮ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಬಸ್ ಉದ್ಘಾಟನೆ ಇತ್ತು ಅಂದ್ರೆ ಅದಕ್ಕೂ ಹೋಗ್ತೀವಿ. ದೋಸೆ ಅಂಗಡಿ ಉದ್ಘಾಟನೆಗೆ ಕರೆಯುತ್ತಾರೆ. ಅದಕ್ಕೂ ಹೋಗ್ತೀವಿ, ಗಣಪತಿ ಇಟ್ಟಿದ್ರೆ ಅಲ್ಲಿಗೂ ಹೋಗ್ತೀವಿ. ಒಬ್ಬ ಜನ ಪ್ರತಿನಿಧಿಯಾಗಿ ನಾನು ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಬಿಗ್ ಬುಲೆಟಿನ್‍ನಲ್ಲಿ ಪ್ರಸ್ತಾಪ – ಸಿದ್ದರಾಮಯ್ಯ ಪ್ರಶಂಸೆ
ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!
ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.
ಏನಿದು ದೋಸೆ ವಿವಾದ..?: ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಇದನ್ನೂ ಓದಿ: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
Live Tv
[brid partner=56869869 player=32851 video=960834 autoplay=true]
ಭೋಪಾಲ್: ಉಜ್ಜಯಿನಿಯ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ, ಬಿಜೆಪಿ ಯುವ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೆಂಬಲಿಗರು, ಮತ್ತು ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ದೇವಸ್ಥಾನದ ಭೇಟಿಗೆ ತೇಜಸ್ವಿ ಸೂರ್ಯ ತೆರಳಿದ ವೇಳೆ ಈ ಗಲಭೆ ನಡೆದಿದೆ. ಉಜ್ಜಯಿನಿಗೆ ತೆರಳಿದ್ದ ತೇಜಸ್ವಿ ಸೂರ್ಯ ನಿನ್ನೆ ಬೆಳಗ್ಗೆ ದೇವರ ದರ್ಶನಕ್ಕೆ ತೆರಳಿದ್ದರು. ಪೂಜೆಗಾಗಿ ಸೂರ್ಯ ಗರ್ಭಗುಡಿಯ ಕಡೆಗೆ ಹೋದರು. ಅವರನ್ನೇ ಅನುಸರಿಸಿದ ಬೆಂಬಲಿಗರು, ಕಾರ್ಯಕರ್ತರು ಗರ್ಭಗುಡಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ಗರ್ಭಗುಡಿ ಪ್ರವೇಶ ಮಾಡದಂತೆ ಮಂದಿರದ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿಗೆ ರಾಖಿ ಕಟ್ಟಿದ ಮಕ್ಕಳು
कलेक्टर @collectorUJN ने सख्ती दिखाते हुए कर्मचारियों से बदसलूकी और धक्का मुक्की करने वालों के खिलाफ FIR के निर्देश दिए 👍 जरूरी है… 👍 https://t.co/3Y5mz2l1TD
ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಮಂದಿರದ ಸಿಬ್ಬಂದಿ ಜೊತೆಗೆ ಗಲಾಟೆ ನಡೆಸಿದರು. ಬ್ಯಾರಿಕೇಡ್‍ಗಳನ್ನು ತೆಗೆದುಹಾಕಿ ಒಳಗೆ ಪ್ರವೇಶಿಸಿದರು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್
Live Tv
[brid partner=56869869 player=32851 video=960834 autoplay=true]
ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಪ್ರವೀಣ್ ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಪ್ರವೀಣ್‍ನನ್ನು ಕಳೆದುಕೊಂಡದ್ದು ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ
ಈ ರೀತಿಯ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಯುವ ಮೋರ್ಚಾ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ. ಸಮಸ್ತ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಸ್ಲಾಮೀ ಜಿಹಾದ್‍ನ್ನು ಮೂಲದಿಂದ ಉಚ್ಚಾಟನೆ ಮಾಡೋದಕ್ಕೆ ನಾವು ಬದ್ಧ ಎಂದು ಭರವಸೆ ಕೊಟ್ಟರು.
ಪ್ರವೀಣ್ ಸಾವು ಆಗಬಾರದಿತ್ತು. ಪ್ರತಿ ಬಾರಿ ಕಾರ್ಯಕರ್ತರನ್ನು ಬೀಳ್ಕೊಟ್ಟಾಗಲೂ ಈ ಮಾತು ಹೇಳುತ್ತೇವೆ. ಈ ಬಾರಿ ಇಡೀ ರಾಜ್ಯ, ದೇಶ ಎಚ್ಚೆತ್ತಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಪ್ರವೀಣ್ ಅವರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಮಗನೇ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇದು ಅತ್ಯಂತ ಬೇಸರ ಸಂಗತಿಯಾಗಿದೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್
ಜಿಹಾದಿ ಮನಸ್ಥಿತಿ ಯಾವ ಮಟ್ಟದಲ್ಲಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿಯ ಕಾರ್ಯಕರ್ತರು ಧೃತಿಗೆಡಬೇಡಿ. ನಾರಾಯಣ ಗುರು, ಶಿವಾಜಿಯ ಕ್ಷಾತ್ರ ರಕ್ತ ನಮ್ಮಲ್ಲಿದೆ. ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್‍ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ನಮ್ಮ ನಿಷ್ಟೆ ಪ್ರಶ್ನಾತೀತವಾಗಿದೆ. ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತೆ. ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಎಚ್ಚೆತ್ತು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ
Live Tv
[brid partner=56869869 player=32851 video=960834 autoplay=true]
ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರವಿದ್ದಿದ್ದರೇ ಬೀದಿಯಲ್ಲಿ ಕಲ್ಲು ಹೊಡೆಯಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ.
ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಂಗಡಿ ನಡುವೆ ನಡೆದ ಮೊಬೈಲ್ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರವೀಣ್ ನೆಟ್ಟಾರ್ ಹತ್ಯೆಯಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ 9 ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿನ್ನೆ ಸಾಮೂಹಿಕ ರಾಜೀನಾಮೆ ನೀಡಿದ್ದರು. ರಾಜ್ಯದಲ್ಲಿ ಹಿಂದೂಗಳ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ಬಾರಿ ಹತ್ಯೆಯಾದಗಲೂ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ನೀಡುತ್ತಿರುವ ಭರವಸೆ ಬರೀ ಭರವಸೆಯಾಗಿ ಉಳಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಬಳಿಕ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಸಂದೀಪ್ ಅರವಿನಂಗಡಿ ಅವರಿಗೆ ದೂರವಾಣಿ ಕರೆ ಮಾಡಿ ಸಾಮಾಹಿಕ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ಮಾತುಕತೆ ಸಂದರ್ಭದಲ್ಲಿ ಪ್ರವೀಣ್ ಹತ್ಯೆ ವಿಚಾರವಾಗಿ ನಮಗೂ ಬೇಸರ ಮೂಡಿಸಿದೆ. ನಿಮಗಿಂತ ಹತ್ತು ಪರ್ಸೆಂಟ್ ಜಾಸ್ತಿ ರೋಷವಿದೆ. ರಾಜ್ಯದಲ್ಲಿ ನಮ್ಮದೆ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೇ ಬೀದಿಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು ಎಂದ ಅವರು, ರಾಜೀನಾಮೆಯನ್ನು ವಾಪಸ್ ಪಡೆದುಕೊಳ್ಳಿ. ಯುವ ಮೋರ್ಚಾದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹತ್ಯೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸೋಣ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರತಿ ಜಿಲ್ಲೆಯಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ಹತ್ಯೆಯಾಗಿದೆ. ಇಡೀ ರಾಜ್ಯದಲ್ಲಿ ಬೇಸರ, ದುಃಖ, ಅಸಹಾಯಕತೆ, ಆಕ್ರೋಶದ ಭಾವನೆ ಮೂಡಿಸಿದೆ. ಪ್ರವೀಣ್ ಒಂಬತ್ತು ತಿಂಗಳ ಮಗುವಿನ ತಂದೆಯಾಗಿದ್ದರು. ಯಾವುದೇ ತಪ್ಪಿಲ್ಲದಿದ್ದರೂ ದುಷ್ಕರ್ಮಿಗಳು ಹತ್ಯೆಯನ್ನು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಈ ಆಘಾತ ಸಹಿಸಲು ಕುಟುಂಬಕ್ಕೆ ಶಕ್ತಿ ಕೊಡಲಿ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತ ಅವರ ಜೊತೆಗಿದ್ದಾರೆ ಎಂದರು.
ಪ್ರತಿ ಜಿಲ್ಲೆಯಿಂದ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ. ಮಂಗಳೂರಿಗೆ ತೆರಳಿ ಆರ್ಥಿಕ ಸಹಾಯ ಮಾಡಲಿದ್ದೇವೆ. ಜೊತೆಗೆ ಹಿರಿಯ ನಾಯಕರ ಜೊತೆಗೆ ಮಾತನಾಡಿದ್ದೇವೆ. ಈ ಸರಣಿ ಹತ್ಯೆ ಹಿಂದಿರುವ ಗುಂಪು ಪತ್ತೆ ಹಚ್ಚಲು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ
ಘಟನೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಜಮೀರ್‌ರಂತಹ ರಾಜಕಾರಣಿಗಳು ಯಾವ ರೀತಿ ಕುಮ್ಮಕ್ಕು ನೀಡಲಾಗುತ್ತಿದೆ ಹಿಂದೂಗಳು ಗಮನಿಸಬೇಕು. ಯಾರ ಮೇಲೆ ಹಿಂದೆ ಹತ್ಯೆಯ ಕೇಸಿತ್ತೋ ಅವರ ಮೇಲಿನ ಎಫ್‍ಐಆರ್ ರದ್ದು ಮಾಡಲಾಗಿತ್ತು. ರಾಜಸ್ಥಾನದಲ್ಲೂ ಕನ್ಹಯ್ಯ ಲಾಲ್ ಹತ್ಯೆ ಮಾಡಲಾಯಿತು. ಈ ರೀತಿ ಆಗುತ್ತಾ ಹೋದರೆ ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯವಾ. ಇದು ಮತಾಂಧತೆ ಮತ್ತು ಸಿದ್ಧಾಂತದ ಸಮಸ್ಯೆ ಎಂದು ಕಿಡಿಕಾರಿದರು.
ಹಿಂದೂಗಳ ಹತ್ಯೆಯನ್ನು ಕಾಂಗ್ರೆಸ್ ರಾಜಕೀಯ ಪ್ರಯೋಗ ಮಾಡುತ್ತಿದೆ. ವ್ಯಕ್ತಿಯ ಹತ್ಯೆ ಎನ್ನುವುದು ರಾಜಕೀಯ ಪ್ರಯೋಗನಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಈ ರೀತಿಯ ಪ್ರಯೋಗ ಮಾಡಲ್ಲ. ಕಾರ್ಯಕರ್ತರ ಆಕ್ರೋಶ ಪಕ್ಷದ ಮೇಲೆ ಅಲ್ಲ. ಹಿಂದೂ ಸಮಾಜ ಹೋಗುತ್ತಿರುವ ದಿಕ್ಕು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಯಾರು ರಾಜೀನಾಮೆ ನೀಡಬಾರದು ಎಂದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಸಾವಿರ ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿರುವ ಪೊಲೀಸರು ಗುಂಪು ಕಟ್ಟಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಮಾಡಿರುವ ಆರೋಪ ಹೊರಿಸಲಾಗಿದೆ.
ಚಾರ್ಜ್‍ಶೀಟ್ ನಲ್ಲಿ ಹಲವು ಐಪಿಸಿ ಸೆಕ್ಷನ್ ಗಳನ್ನು ಉಲ್ಲೇಖಿಸಲಾಗಿದೆ. ಪ್ರತಿಭಟನೆ ಹೆಸರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಡಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಲಾಗಿದೆ, ಸರ್ಕಾರಿ ಕೆಲಸಕ್ಕೆ ಅಡ್ಡಿ, ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿರುವುದು ಸೇರಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ ಆರೋಪಗಳನ್ನು ಮಾಡಲಾಗಿದೆ. ಇದನ್ನೂ ಓದಿ: ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ
ಅಲ್ಲದೇ ಪ್ರತಿಭಟನಾಕಾರರು ಒಂದು ಹಂತ ಅಲ್ಲದೇ, ಮೂರು ವಿಭಿನ್ನ ಭದ್ರತಾ ಪದರಗಳಲ್ಲಿ ಪೊಲೀಸರ ನಿರ್ದೇಶನಗಳನ್ನು ಉಲ್ಲಂಘಿಸಿದ್ದಾರೆ. ಸಿಎಂ ಮನೆಯಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಪ್ರತಿಭಟನಾಕಾರರು ಉಲ್ಲಂಘಿಸಿದ್ದಾರೆ ಎಂದು ಚಾರ್ಜ್‍ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಕಾಶ್ಮೀರಿ ಫೈಲ್ಸ್ ಸಿನಿಮಾಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆಯನ್ನು ಖಂಡಿಸಿ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ಹೆಸರಿನಲ್ಲಿ ಅರವಿಂದ್ ಕೇಜ್ರಿವಾಲ್ ನಿವಾಸದೊಳಗೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಟ್ಟ ಪ್ರತಿಭಟನಾಕಾರರು ಬ್ಯಾರಿಕೇಡ್ ಕೆಡವಿ ಗಲಭೆ ಎಬ್ಬಿಸಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಉತ್ತರಪ್ರದೇಶ, ಮಧ್ಯಪ್ರದೇಶ ಮಾದರಿಯ ಬುಲ್ಡೋಜರ್ ಕ್ರಮ ರಾಜ್ಯದಲ್ಲೂ ಅಗತ್ಯಬಿದ್ದರೆ ಹೊಸ ಕಾನೂನಿನ ಮೂಲಕ ಜಾರಿಗೆ ತರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸರ್ಕಾರಕ್ಕೆ ಆಗ್ರಹಿಸಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಇವತ್ತು ರಾಜಕೀಯಪ್ರೇರಿತ ಗಲಭೆಗಳು ಜಾಸ್ತಿಯಾಗ್ತಿವೆ. ಇವುಗಳ ನಿಯಂತ್ರಣ ಅನಿವಾರ್ಯ. ಹೀಗಾಗಿ ಕಾನೂನು ತಂದು ಬುಲ್ಡೋಜರ್ ಕ್ರಮ ಜಾರಿಗೆ ತರಬಹುದು. ದಂಗೆಕೋರರ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಬೇಕು. ಗುಜರಾತ್, ಉತ್ತರ ಪ್ರದೇಶ, ಮದ್ಯಪ್ರದೇಶಗಳಲ್ಲಿ ಗಲಭೆ ನಿಯಂತ್ರಣಕ್ಕೆ ಕಠಿಣ ಕಾನೂನುಗಳಿವೆ. ಇದರಲ್ಲಿ ಯಾವುದೇ ಜಾತಿ ಮತ ಪಂಥಗಳ ಭೇದ ಇಲ್ಲ. ಇನ್ನೊಂದು ವರ್ಷ ಇಂಥ ಗಲಭೆಗಳನ್ನು ಸೃಷ್ಟಿ ಮಾಡ್ತಾರೆ. ಇದರ ವಿರುದ್ಧ ಕಠೋರ ಕಾನೂನುಗಳು ಬೇಕು. ಸಮಾಜದ ಆಸ್ತಿ ನಾಶ, ಸರ್ಕಾರಿ ಕಚೇರಿಗೆ, ಪೊಲೀಸ್ ಠಾಣೆಗೆ ಬೆಂಕಿ ಹಾಕುವುದು, ಪೊಲೀಸರ, ಸಮಾಜದ ಸ್ಥೈರ್ಯ ಕುಂದಿಸುವ ಕೆಲಸಗಳೆಲ್ಲ ಭಯೋತ್ಪಾದನೆಗೆ ಸಮ. ಅಂತಹ ವಿಚಾರಗಳಲ್ಲಿ ಸರ್ಕಾರ ಕಠಿಣ ತೀರ್ಮಾನ ತೆಗೆದುಕೊಳ್ಳಬೇಕು. ದಂಗೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಂಡರೂ ತಪ್ಪಿಲ್ಲ. ಇದನ್ನು ಸರ್ಕಾರಕ್ಕೆ ಬಿಜೆಪಿ ಪಕ್ಷ ಒತ್ತಾಯಿಸುತ್ತದೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್
ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ರಾಜ್ಯ ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರದ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯ ಮಟ್ಟದಿಂದ ಬೂತ್ ಮಟ್ಟದ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ-ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಒಂದು ಮಂಡಲದಿಂದ ಇನ್ನೊಂದು ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, ಶೇ.90ರಷ್ಟು ಕಾರ್ಯ ಮುಕ್ತಾಯವಾಗಿದೆ. ಪಕ್ಷದ ಸ್ಥಿತಿಗತಿಯ ಅವಲೋಕನವೂ ನಡೆಯುತ್ತಿದೆ. ಹೊಸಪೇಟೆ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ್ ಅವರು ಪಾಲ್ಗೊಂಡು ಮಾರ್ಗದರ್ಶನ ನೀಡಿದ ಕುರಿತು ವಿವರಿಸಿ. ಕಾರ್ಯಕಾರಿಣಿ ಯಶಸ್ವಿಯಾಗಿದೆ. ಸರ್ಕಾರದ ಹತ್ತಾರು ಸಾಧನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಲಾಗಿದೆ ಎಂದು ನುಡಿದರು. ಇದನ್ನೂ ಓದಿ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಕೊಟ್ಟರೆ ಬೇಡ ಅನ್ನಲ್ಲ: ಎನ್.ಮಹೇಶ್
ಕಾಂಗ್ರೆಸ್ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಹಾಸನ, ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ಕುರಿತು ಚರ್ಚಿಸಲಾಗಿದೆ. ಕಾಂಗ್ರೆಸ್ ಕಾಲೆಳೆಯುವ, ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಗಲಭೆ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಮತೀಯವಾದದ ಹೆಸರಿನಲ್ಲಿ ಬೆಂಕಿ ಹಾಕುವ ಕೆಲಸವನ್ನು ಮಾಡುತ್ತಿದೆ. ಅಧಿಕಾರ ಪಡೆಯಲು ಅರಾಜಕತೆ ಸೃಷ್ಟಿಸುವ ಪ್ರವೃತ್ತಿ ಕಾಂಗ್ರೆಸ್ ಪಕ್ಷದ್ದು, ಡಿಜೆ.ಹಳ್ಳಿ, ಕೆಜಿ.ಹಳ್ಳಿ ಪ್ರಕರಣ, ಹರ್ಷ ಕೊಲೆ ಪ್ರಕರಣ, ಹುಬ್ಬಳ್ಳಿ ಹಿಂಸಾಚಾರದ ಘಟನೆ ಇದಕ್ಕೆ ಉದಾಹರಣೆ ಎಂದು ತಿಳಿಸಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ಮಹಿಳಾಮಣಿಗಳು
ಭಿಂದ್ರನ್‍ವಾಲೆ, ದಾವೂದ್ ಇಬ್ರಾಹಿಂಗೆ ಬೆಂಬಲ ಕೊಡುವ ಮೂಲಕ ಕಾಂಗ್ರೆಸ್ ಪಕ್ಷವು ಭಯೋತ್ಪಾದನೆಗೆ ಪ್ರೇರಣೆ ಮತ್ತು ಭ್ರಷ್ಟಾಚಾರಕ್ಕೂ ಪ್ರೇರಣೆ ನೀಡಿದೆ ಎಂದು ಟೀಕಿಸಿದ ಅವರು, ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯಲು ಹವಣಿಸುತ್ತಿದೆ. ಜೀಪ್ ಹಗರಣ, ನೆಹರೂವಿನಿಂದ ಹಿಡಿದು ಮನಮೋಹನ್ ಸಿಂಗ್ ವರೆಗೆ ಎಲ್ಲರ ಅಧಿಕಾರದ ಸಂದರ್ಭದಲ್ಲೂ ಒಟ್ಟು 4 ಲಕ್ಷ ಕೋಟಿಗಿಂತ ಹೆಚ್ಚು ಮೊತ್ತದ ಭ್ರಷ್ಟಾಚಾರ ಹಗರಣಗಳು ನಡೆದಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ ಎಂಬಂತಾಗಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕಾಲ ಹೊರತುಪಡಿಸಿ ಇತರ ಎಲ್ಲ ಕಾಂಗ್ರೆಸ್ ಪ್ರಧಾನಿಗಳ ಅವಧಿಯಲ್ಲಿ ಒಂದಲ್ಲೊಂದು ಭ್ರಷ್ಟಾಚಾರ ಪ್ರಕರಣಗಳು ನಡೆದಿವೆ. ಕಾಂಗ್ರೆಸ್ ಮುಕ್ತ ಭಾರತ ಎಂದರೆ ಭ್ರಷ್ಟಾಚಾರದಿಂದ ಮುಕ್ತಿ ಎಂಬ ಅರ್ಥದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿಯವರು ತಿಳಿಸಿದ್ದಾರೆ ಎಂದರು.
ಪಿಎಎಸ್‍ಐ ಹಗರಣದಡಿ ಯಾವುದೇ ಪಕ್ಷದವರಾದರೂ ಬಂಧನ ನಡೆಯುತ್ತಿದೆ. ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕೆಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಮತ್ತು ರಾಹುಲ್ ಕಾಂಗ್ರೆಸ್ ಬಿಟ್ಟು ಹೊರಬರಲಿ. ಆಗ ಆ ಪಕ್ಷಕ್ಕೆ ಒಳಿತಾದೀತು ಎಂದು ವ್ಯಂಗ್ಯವಾಗಿ ಉತ್ತರ ನೀಡಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯದ ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ಎಲ್. ರವಿಸುಬ್ರಹ್ಮಣ್ಯ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಎನ್.ಆರ್. ರಮೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಮಠದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಮಹಿಳಾಮಣಿಗಳು ಸಂಸದ ತೇಜಸ್ವಿ ಸೂರ್ಯ ಜೊತೆ ಸೆಲ್ಫಿಗಾಗಿ ಮುಗಿಬಿದ್ದಿದ್ದರು.
ಕಳೆದ 12 ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಶಾರದಾ ಲಕ್ಷ್ಮಿ ನರಸಿಂಹಸ್ವಾಮಿ ದೇಗುಲದಲ್ಲಿ ಕುಂಭಾಭಿಷೇಕ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಕೂಡ ಆಗಮಿಸಿದ್ದರು. ಈ ವೇಳೆ ಸಂಸದರ ಜೊತೆ ಮಹಿಳೆಯರು ಸೆಲ್ಫಿಗಾಗಿ ಮುಗಿಬಿದ್ದಿದ್ದರು. ಇದನ್ನೂ ಓದಿ: ಧರ್ಮವೇ ಮುಖ್ಯ- ಹಾಲ್ ಟಿಕೆಟ್ ಪಡೆದರೂ ಪರೀಕ್ಷೆಗೆ ಬಾರದ ಉಡುಪಿಯ ಅಲ್ಮಾಸ್
ಒಬ್ಬರಾದ ಮೇಲೋಬ್ಬರಂತೆ ಸರ್.. ನಮ್ಮ ಜೊತೆ ಒಂದು.. ಸರ್.. ನಮ್ಮ ಜೊತೆ ಒಂದು ಎನ್ನುತ್ತಾ ಒಬ್ಬರಾದ ಫೋಟೋಗಾಗಿ ಕ್ಯೂ ನಿಂತರು. ತೇಜಸ್ವಿ ಸೂರ್ಯ ಸಾಕು ಬಿಡಿ. ಇದು ಧಾರ್ಮಿಕ ಕಾರ್ಯಕ್ರಮ ಎಂದರೂ ಬಿಡದೇ ಸರ್.. ಒಂದು, ಒಂದು ಎಂದು ಅಕ್ಕಪಕ್ಕದವರ ಕೈಯಲ್ಲಿ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಂಡರು. ತೇಜಸ್ವಿ, ಸಾಕು ಬಿಡಿ ಎಂದು ಬಂದವರಿಗೆಲ್ಲಾ ಕೈಮುಗಿದರೂ ಒಬ್ಬೊಬ್ಬರೇ ಬರುತ್ತಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‍ಗಾಗಿ ವೇದಿಕೆ ಮುಂಭಾಗದಲ್ಲೇ ಕಾಯುತ್ತಿದ್ದ ತೇಜಸ್ವಿಯನ್ನು ಕಂಡ ಮಹಿಳೆಯರು ವೇದಿಕೆ ಮುಂಭಾಗದಲ್ಲೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.
ಮಹಿಳೆಯರ ಸರದಿ ಮುಗಿಯುತ್ತಿದ್ದಂತೆ ಆಮೇಲೆ ಪುರುಷರ ಸರದಿಯೂ ಶುರುವಾಗಿತ್ತು. ತೇಜಸ್ವಿ ಅವರು ಹೋಗಿ ಕೂತರೂ ಬಿಡದ ಜನ ಕೂತಲ್ಲೇ ಫೋಟೋ-ಸೆಲ್ಫಿ ಕ್ಲಿಕ್ಕಿಸಿಕೊಂಡರು. ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ, ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಡಿ.ಎನ್.ಜೀವರಾಜ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರವಿಸುಬ್ರಹ್ಮಣ್ಯ, ಅಶೋಕ್ ಹಾರ್ನಳ್ಳಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್
ಜೈಪುರ: ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಕರೌಲಿಗೆ ಬಂದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಕೆರಳಿಸಲು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.
ತೇಜಸ್ವಿ ಸೂರ್ಯ ಹಿಂಸಾಚಾರ ಪೀಡಿತ ಕರೌಲಿಗೆ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಹೆಸರು ತೇಜಸ್ವಿ ಸೂರ್ಯ ಆದರೆ ಅವರು ಇಲ್ಲಿಗೆ ಬಂದಿದ್ದನ್ನು ನೋಡಿ, ಕರೌಲಿಯಲ್ಲಿ ನಡೆದ ಘಟನೆ ದುರದೃಷ್ಟಕರ. ಈ ಜನರು ಪರಿಸ್ಥಿತಿಯನ್ನು ಮತ್ತಷ್ಟು ಕೆರಳಿಸಲು ಬಂದಿದ್ದಾರೆ ಎಂದು ನಾನು ಈಗಾಗಲೇ ಹೇಳಿದ್ದೇನೆ. ಕರೌಲಿಯಂತಹ ಘಟನೆಗಳು ನಡೆಯಬಾರದು ಎಂದು ಹೇಳಿದರು. ಇದನ್ನೂ ಓದಿ: ಎಲೋನ್ ಮಸ್ಕ್ ಟ್ವಿಟ್ಟರ್ ಮಂಡಳಿಯ ಭಾಗವಲ್ಲ: ಪರಾಗ್ ಅಗರ್ವಾಲ್
ಇತರ ರಾಜ್ಯಗಳಲ್ಲಿ ಗಲಭೆಗಳು ನಡೆದಾಗ, ಸರ್ಕಾರಗಳು ಮನೆಗಳನ್ನು ನೆಲಸಮಗೊಳಿಸಿದವು. ಯಾವುದೇ ತನಿಖೆಯಿಲ್ಲದೆ ಇಂತಹ ಕ್ರಮ ಕೈಗೊಳ್ಳಲು ಪ್ರಧಾನಿ ಅಥವಾ ಸಿಎಂಗೆ ಯಾವುದೇ ಹಕ್ಕಿಲ್ಲ. ಹಾಗೆ ಮಾಡಲು ಕಾನೂನಿಗೆ ಮಾತ್ರ ವಿಶೇಷ ಅಧಿಕಾರವಿದೆ. ಅದು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್ ರಾಜೀನಾಮೆ
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ಪಕ್ಷದ ರಾಜಸ್ಥಾನ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತು ಇತರರನ್ನು ಬುಧವಾರ ಹಿಂಸಾಚಾರ ಪೀಡಿತ ಕರೌಲಿಗೆ ಭೇಟಿ ನೀಡುವುದನ್ನು ತಡೆಯಲಾಯಿತು. ಅವರನ್ನು ದೌಸಾ-ಕರೌಲಿ ಗಡಿಯಲ್ಲಿ ತಡೆಹಿಡಿಯಲಾಯಿತು. ಆದರೆ ಹಿಂದೂ ಹೊಸ ವರ್ಷವನ್ನು ಆಚರಿಸಲು ನಡೆಸುತ್ತಿದ್ದ ಬೈಕ್ ರ್ಯಾಲಿಯಲ್ಲಿ ಕಲ್ಲು ತೂರಾಟ ನಡೆಸಿದ ನಂತರ ಭುಗಿಲೆದ್ದ ಏಪ್ರಿಲ್ 2 ಹಿಂಸಾಚಾರದ ಸಂತ್ರಸ್ತರನ್ನು ಭೇಟಿ ಮಾಡಲು ಅವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಹಿಂಸಾಚಾರದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕರೌಲಿ ಗಲಭೆಗಳು ರಾಜಸ್ಥಾನದಲ್ಲಿ ಸ್ಪಷ್ಟ ಕಾನೂನುಬಾಹಿರತೆಯನ್ನು ಸೂಚಿಸುತ್ತವೆ. ರಾಮನವಮಿ ಶೋಭಾ ಯಾತ್ರೆಗೆ ಅಡ್ಡಿಪಡಿಸುವ ಉದ್ದೇಶಪೂರ್ವಕ ಪ್ರಯತ್ನ ಮತ್ತು ಗಲಭೆಕೋರರರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗದಿರುವುದು ಶೋಚನೀಯ ಎಂದು ಬಿಜೆಪಿಯ ಯುವ ಘಟಕವಾದ ಬಿಜೆವೈಎಂ ಮುಖ್ಯಸ್ಥರೂ ಆಗಿರುವ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.