Tag: Tejasvi Surya

  • ಹಿಂಸಾಚಾರ ಪೀಡಿತ ಪ್ರದೇಶ ಭೇಟಿಗೆ ಮುಂದಾದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ

    ಹಿಂಸಾಚಾರ ಪೀಡಿತ ಪ್ರದೇಶ ಭೇಟಿಗೆ ಮುಂದಾದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ

    ಜೈಪುರ: ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಗೆ ಭೇಟಿ ನೀಡಲು ಮುಂದಾಗಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರನ್ನು ತಡೆದಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರಾಜ್ಯ ಪೊಲೀಸರು ದೌಸಾ ಗಡಿಯಲ್ಲಿ ತಡೆದಾಗ ಸಂಸದ ತೇಜಸ್ವಿ ಸೂರ್ಯ, ರಾಜಸ್ಥಾನದ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ಹಲವಾರು ಬೆಂಬಲಿಗರೊಂದಿಗೆ ಇದ್ದರು. ಸೂರ್ಯ ಈ ಹಿಂದೆ ತಮ್ಮ ಭೇಟಿ ಕುರಿತು ಟ್ವೀಟ್ ಮಾಡಿದ್ದರು. ಬಿಜೆಪಿ ಬೆಂಬಲಿಗರು ಅಲ್ಲಿಗೆ ತಲುಪಬೇಕು ಎಂದು ಕರೆ ನೀಡಿದ್ದರು. ಇದನ್ನೂ ಓದಿ: ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಗುಂಪು ಪ್ರವೇಶಿಸದಂತೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ. ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಭೇಟಿ ನೀಡುವುದನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಬಂಧಿಸಿದೆ ಎಂದು ಆರೋಪಿಸಿರುವ ಸೂರ್ಯ, ಅಲ್ಲಿಗೆ ತಲುಪುವವರೆಗೂ ನಾವು ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಏಪ್ರಿಲ್‌ 2ರಂದು ನವರಾತ್ರಿ ಸಂದರ್ಭದಲ್ಲಿ ಕರೌಲಿಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆಯಾಗಿತ್ತು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈ ಪ್ರದೇಶದಲ್ಲಿ ಏ.12ರವರೆಗೂ ಕರ್ಫ್ಯೂ ಘೋಷಿಸಲಾಗಿತ್ತು. ಇದನ್ನೂ ಓದಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ನವ ಸಂವತ್ಸರದಂದು (ಹಿಂದೂ ಹೊಸ ವರ್ಷ) ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಸಾಗುತ್ತಿದ್ದ ಬೈಕ್ ರ‍್ಯಾಲಿ ವೇಳೆ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಕೃತ್ಯಗಳ ನಂತರ ಕರ್ಫ್ಯೂ ವಿಧಿಸಲಾಗಿತ್ತು. ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ ರ‍್ಯಾಲಿಯಲ್ಲಿದ್ದವರು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದರು. ಇದು ಗುಂಪು ದಾಳಿಗೆ ಕಾರಣವಾಗಿತ್ತು. ಈ ವೇಳೆ 8 ಪೊಲೀಸರು ಸೇರಿದಂತೆ 11 ಮಂದಿ ಗಾಯಗೊಂಡಿದ್ದರು.

    ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಸಂಘಟನೆಗಳು ರ‍್ಯಾಲಿ ನಡೆಸಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಕೋಮು ಹಿಂಸಾಚಾರದ ನಂತರ ಪೊಲೀಸರು 46 ಜನರನ್ನು ಬಂಧಿಸಿ ವಿಚಾರಣೆಗಾಗಿ ಏಳು ಮಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಭರತ್‌ಪುರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ ಪ್ರಶಾನ್ ಕುಮಾರ್ ಖಮೇಸ್ರಾ ಮಾಹಿತಿ ನೀಡಿದ್ದಾರೆ.

  • ಬೆಂಗಳೂರಿನಲ್ಲಿ ಮೊದಲ ಬಾರಿಗೆ ಶ್ರೀರಾಮ ರಥಯಾತ್ರೆ

    ಬೆಂಗಳೂರಿನಲ್ಲಿ ಮೊದಲ ಬಾರಿಗೆ ಶ್ರೀರಾಮ ರಥಯಾತ್ರೆ

    ಬೆಂಗಳೂರು: ಶ್ರೀರಾಮನವಮಿ ಪ್ರಯುಕ್ತ ಪದ್ಮನಾಭನಗರದಲ್ಲಿ ಅದ್ಧೂರಿ ಶ್ರೀರಾಮ ರಥಯಾತ್ರೆ ನಡೀತು. ಸಾವಿರಾರು ರಾಮನ ಭಕ್ತರು ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಎಲ್ಲೆಲ್ಲೂ ಜೈ ಶ್ರೀರಾಮ್ ಘೋಷಣೆ ಮುಗಿಲು ಮುಟ್ಟಿತ್ತು.

    ಪದ್ಮನಾಭನಗರ ಶಾಸಕ ಹಾಗೂ ಕಂದಾಯ ಸಚಿವ ಆರ್‌.ಅಶೋಕ್ ನೇತೃತ್ವದಲ್ಲಿ ಅದ್ಧೂರಿ ರಥಯಾತ್ರೆ ಜರುಗಿತು. ಪದ್ಮನಾಭನಗರದಿಂದ ಸುಮಾರು 6 ಕಿಲೋಮೀಟರ್ ನಡೆದ ರಥಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಶ್ರೀರಾಮನ ಕೃಪೆಗೆ ಪಾತ್ರರಾದರು. ಕನಕಪೀಠದ ಈಶ್ವರಾನಂದಪುರಿ ಶ್ರೀಗಳು ಹಾಗೂ ಮಾದರ ಚೆನ್ನಯ್ಯ ಶ್ರೀಗಳು ರಥಯಾತ್ರೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ

    ಹೂಗಳಿಂದ ಅಲಂಕಾರವಾದ ಭವ್ಯವಾದ ರಥಯಾತ್ರೆಯಲ್ಲಿ ಶ್ರೀರಾಮನು ಕಂಗೊಳಿಸುತ್ತಿದ್ದನು. ಪದ್ಮನಾಭನಗರದಿಂದ ಪ್ರಾರಂಭ ಆದ ರಥಯಾತ್ರೆ, ಕರೀಸಂದ್ರ ವಾರ್ಡ್, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್, ತ್ಯಾಗರಾಜನಗರ, ಉಮಾ ಮಹೇಶ್ವರಿ ದೇವಾಲಯ, ಕೆ.ಆರ್. ರೋಡ್, ವ್ಯಾಪ್ತಿಯಲ್ಲಿ ರಥಯಾತ್ರೆ ನಡೀತು. ಅಂತಿಮವಾಗಿ ಅಶೋಕ್ ಕಚೇರಿ ಬಳಿ ರಥಯಾತ್ರೆ ಮುಕ್ತಾಯ ಆಯಿತು. ಇದನ್ನೂ ಓದಿ: ಕಲ್ಲಂಗಡಿ ಹಣ್ಣಿನ ಬಗ್ಗೆ ಕನಿಕರ ತೋರಿದವರು, ತಲೆ ಹೊಡೆದಾಗ ಏಕೆ ತೋರಲಿಲ್ಲ: ಸಿ.ಟಿ.ರವಿ ಪ್ರಶ್ನೆ

    ರಥಯಾತ್ರೆ ಪ್ರಾರಂಭ ಆಗುತ್ತಿದ್ದಂತೆ ಜೈ ಶ್ರೀರಾಮ ಘೋಷಣೆಗಳು ಮೊಳಗಿದವು, ಸಾವಿರಾರು ಭಕ್ತರು ಕೇಸರಿ ಶಾಲು, ಕೇಸರಿ ಪೇಟ ಧರಿಸಿ ರಥಯಾತ್ರೆಯಲ್ಲಿ ಭಾಗಿಯಾಗಿದ್ದರು. ಎಲ್ಲೆಲ್ಲೂ ಭಗವತ್ ಧ್ವಜ, ರಾಮನ ಧ್ವಜ ರಾರಾಜಿಸಿದವು. ಕರಡಿ ಕುಣಿತ, ಕಂಸಾಳೆ ಪದ ಸೇರಿದಂತೆ ಜನಪದ ಕಲಾ ತಂಡಗಳು ರಥಯಾತ್ರೆಗೆ ಮತ್ತಷ್ಟು ಮೆರುಗು ತಂದವು. ಪಾದಯಾತ್ರೆಯಲ್ಲಿ ಅಶೋಕ್, ಸಂಸದ ತೇಜಸ್ವಿ ಸೂರ್ಯ ನೃತ್ಯ ಮಾಡಿ ರಥಯಾತ್ರೆಯನ್ನು ಸಂಭ್ರಮಿಸಿದರು.

    ರಥಯಾತ್ರೆಯಲ್ಲಿ ಮಾತನಾಡಿದ ಅಶೋಕ್, ಕರ್ನಾಟಕ ರಾಮ ರಾಜ್ಯ ಆಗಬೇಕು. ವಿಜೃಂಭಣೆಯಿಂದ ರಥಯಾತ್ರೆ ಆಗಿದೆ. ಮುಂದಿನ ವರ್ಷದಲ್ಲಿ ಬೆಂಗಳೂರಿನ 27 ಕ್ಷೇತ್ರ ಹಾಗೂ ಇಡೀ ರಾಜ್ಯದಲ್ಲಿ ರಾಮ ರಥಯಾತ್ರೆ ಮಾಡ್ತೀವಿ. ಗಲ್ಲಿ ಗಲ್ಲಿಗಳಲ್ಲಿ ರಾಮನನ್ನು ಪ್ರತಿಷ್ಠಾಪನೆ ಮಾಡ್ತೀವಿ ಎಂದು ಅಭಿಪ್ರಾಯಪಟ್ಟರು.

  • ಭಾರತ ದರ್ಶನ ಸುಶಾಸನ ಯಾತ್ರೆಗೆ ಅಮಿತ್ ಶಾ ಚಾಲನೆ

    ಭಾರತ ದರ್ಶನ ಸುಶಾಸನ ಯಾತ್ರೆಗೆ ಅಮಿತ್ ಶಾ ಚಾಲನೆ

    ಬೆಂಗಳೂರು: ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ಆಯೋಜನೆಗೊಂಡಿರುವ “ಭಾರತ ದರ್ಶನ ಸುಶಾಸನ ಯಾತ್ರೆ”ಗೆ ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಸಂಸದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಹಾಗೂ ಯುವಮೋರ್ಚಾ ಪದಾಧಿಕಾರಿಗಳ ಸಮ್ಮುಖದಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಿದರು.

    ಭಾರತ ದರ್ಶನ ಯಾತ್ರೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರಿಗೆ ದೇಶದ ವೈವಿಧ್ಯಮಯ ಸಾಂಸ್ಕೃತಿಕ, ಐತಿಹಾಸಿಕ ಸಿರಿವಂತಿಕೆಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಲಾಗಿದೆ. ಇದೇ ಸಂದರ್ಭದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು, ಸ್ಟಾರ್ಟ್ ಅಪ್‍ಗಳ ಕುರಿತಾದ ಅಧ್ಯಯನ, ಉದ್ಯಮಿಗಳ ಜೊತೆಗಿನ ಸಂವಾದ, ರೈತ ಸಂಘಟನೆಗಳ ಪ್ರಮುಖರೊಂದಿಗೆ ಭೇಟಿಯನ್ನು ಕೂಡ ಆಯೋಜಿಲಾಗುತ್ತಿದೆ. ಇದರಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ಹಾಗೂ ಮಂಡಲ ಮಟ್ಟದ ಕಾರ್ಯಕರ್ತರಿಗೆ ದೇಶದ ವೈವಿಧ್ಯತೆ ಅರಿತುಕೊಳ್ಳಲು ಸಹಕಾರಿಯಾಗಲಿದೆ. ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ: ಮೋದಿ

    ಕಾರ್ಯಕ್ರಮ ಚಾಲನೆ ನಂತರ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರದ ಸಾಂಸ್ಕೃತಿಕ ಐಕ್ಯತೆಗೆ, ಹಿತಾಸಕ್ತಿಗೆ ಪೂರಕವಾಗಿ ಹಲವು ಕಠಿಣ ನಿರ್ಧಾರಗಳ ಮೂಲಕ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಆಗಮಿಸಿ, ಭಾರತ ದರ್ಶನ ಯಾತ್ರೆಗೆ ಚಾಲನೆ ನೀಡಿ, ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಬಿಜೆಪಿ ಕಾರ್ಯಕರ್ತರಿಗೆ ಹಾರೈಸಿದ್ದು ಯಾತ್ರೆಯ ವಿಶೇಷಗಳಲ್ಲೊಂದು ಎಂದು ತಿಳಿಸಿದರು.

    ಭಾರತ ದರ್ಶನ ಯಾತ್ರೆಯು ಶುಕ್ರವಾರದಿಂದ ಬೆಂಗಳೂರಿನಿಂದ ಆರಂಭಗೊಂಡಿದ್ದು, 4 ದಿನಗಳ ವರೆಗೆ ಮೊದಲ ಹಂತದಲ್ಲಿ ನಡೆಯಲಿದೆ. ಇದರಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರು ಉತ್ತರ ಮತ್ತು ಈಶಾನ್ಯ ಭಾರತದ ಬಿಜೆಪಿ ಕಾರ್ಯಕರ್ತರಾಗಿದ್ದು, ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ, ಔದ್ಯೋಗಿಕ ರಂಗದ ಪರಿಚಯ ಮಾಡಿಕೊಡಲಾಗುತ್ತಿದೆ. ವಿಜಯನಗರದ ಅರಸರ ಐತಿಹಾಸಿಕ ಹಂಪಿ, ಪ್ರಮುಖ ಕೈಗಾರಿಕಾ ಸ್ಥಳವಾಗಿರುವ ಹೆಚ್‍ಎಎಲ್‍ಗೆ ತೆರಳಿ ಅತ್ಯಾಧುನಿಕ ತೇಜಸ್ ಲಘು ಯುದ್ಧ ವಿಮಾನ ಉತ್ಪಾದನಾ ವಿಭಾಗಕ್ಕೂ ಭೇಟಿ ನೀಡಲಿದ್ದಾರೆ. ನ್ಯಾಸ್ಕಾಂ, ಓಲಾ ಕಚೇರಿಗಳಿಗೆ ಭೇಟಿ ನೀಡಿ ನಗರದ ನಾವೀನ್ಯಪೂರ್ಣ ಸ್ಟಾರ್ಟ್ ಅಪ್ ಲೋಕ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಕನಸಿನ ಹಸಿರು ಔದ್ಯೋಗಿಕ ರಂಗ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶದ 2ನೇ ಅತಿ ದೊಡ್ಡ ಪಾವಗಡ ಸೋಲಾರ್ ಪಾರ್ಕ್ ಕೂಡ ಯಾತ್ರೆಯ ಭಾಗವಾಗಿರಲಿದೆ. ಇದನ್ನೂ ಓದಿ: ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ಕಾರ್ಯಕ್ರಮದ ಉದ್ದೇಶದ ಕುರಿತು ವಿವರಿಸಿದ ಸಂಸದ ತೇಜಸ್ವಿ ಸೂರ್ಯ, ಭಾರತವು ಕೇವಲ ಭೂಭಾಗ ಮಾತ್ರ ಅಷ್ಟೇ ಅಲ್ಲ. ಇದೊಂದು ಹಲವು ವೈವಿಧ್ಯಮಯ ಸಾಂಸ್ಕೃತಿಕ ಹೆಗ್ಗುರುತುಗಳನ್ನು, ಭಾವನೆಗಳ ಮಿಶ್ರಣಗಳನ್ನು ಹೊಂದಿರುವ ಅಪರೂಪದ ದೇಶ. ದೇಶದ ಸಮಸ್ತ ಜನತೆಯ ಸಾಂಸ್ಕೃತಿಕ ಒಗ್ಗೂಡುವಿಕೆಯನ್ನು ಪರಿಚಯಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶ. ಸಾವಿರಾರು ವರ್ಷಗಳ ಐತಿಹಾಸಿಕ ಸಿರಿವಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ. ನಾಗರಿಕತೆಯ ಉಗಮದ ಕಾಲದಿಂದಲೂ ಇಲ್ಲಿನ ಕಲೆ, ಇತಿಹಾಸ, ಸಂಸ್ಕೃತಿ ಎಲ್ಲೆಡೆ ಛಾಪು ಮೂಡಿಸಿದೆ. ಹಲವು ಹೆರಿಟೇಜ್ ಕೇಂದ್ರಗಳು, ಐತಿಹಾಸಿಕ ಸ್ಥಳಗಳು, ಔದ್ಯೋಗಿಕ ಪ್ರಾಮುಖ್ಯತೆಯ ಸ್ಥಳಗಳನ್ನು ಪ್ರವಾಸದ ಭಾಗವಾಗಿಸಿ, ಯಾತ್ರೆಯನ್ನು ಫಲಪ್ರದವಾಗಿಸಲು ತೀರ್ಮಾನಿಸಲಾಗಿದೆ ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಡಾ.ಸಂದೀಪ್ ಕುಮಾರ್, ಅಜಿತ್ ಹೆಗಡೆ ಹಾಗೂ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಬೆಂಗಳೂರಿನಿಂದ ಕೋಲಾರದವರೆಗೆ ಸೈಕಲ್ ರ್‍ಯಾಲಿ ಕೈಗೊಂಡ ತೇಜಸ್ವಿ ಸೂರ್ಯ

    ಬೆಂಗಳೂರಿನಿಂದ ಕೋಲಾರದವರೆಗೆ ಸೈಕಲ್ ರ್‍ಯಾಲಿ ಕೈಗೊಂಡ ತೇಜಸ್ವಿ ಸೂರ್ಯ

    ಬೆಂಗಳೂರು: ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಹಿನ್ನೆಲೆ ಭಾನುವಾರದಂದು ಇತರ ಸೈಕ್ಲಿಸ್ಟ್‌ಗಳೊಂದಿಗೆ ಸೈಕಲ್ ಟು ಫ್ರೀಡಂ ಅಭಿಯಾನದ ಅಂಗವಾಗಿ ಬೆಂಗಳೂರಿನ ವಿಧಾನ ಸೌಧದಿಂದ ಕೋಲಾರದವರೆಗೆ 75ಕಿ.ಮೀ ಸೈಕಲ್ ರ್‍ಯಾಲಿ ನಡೆಸುವ ಮೂಲಕ ಸಂಸದ ತೇಜಸ್ವಿ ಸೂರ್ಯ ಗಮನ ಸೆಳೆದಿದ್ದಾರೆ.

    Tejasvi Surya

    ಬೆಳಗ್ಗೆ 7 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಂತರ 5 ಘಂಟೆಗಳ ಅವಧಿಯಲ್ಲಿ ನಗರದ 450ಕ್ಕೂ ಅಧಿಕ ಉತ್ಸಾಹಿ ಸೈಕ್ಲಿಸ್ಟ್‌ಗಳೊಂದಿಗೆ ಆರಂಭಗೊಂಡ ಸೈಕಲ್ ರ್‍ಯಾಲಿ ನರಸಾಪುರದಿಂದ ಜೊತೆಗೂಡಿದ ಕೋಲಾರ ಸಂಸದರಾದ ಎಸ್. ಮುನಿಸ್ವಾಮಿ ಸಹ ಸಾಥ್ ನೀಡಿದ್ದು ವಿಶೇಷ. ಇದನ್ನೂ ಓದಿ: ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿ

    Tejasvi Surya

    7.5 ಕಿಮೀ ಪ್ರಾಯೋಗಿಕ ಹಂತದ ಸೈಕ್ಲಿಂಗ್‍ನಲ್ಲಿ 300 ನಾಗರಿಕರನ್ನು ಒಳಗೊಂಡಂತೆ ಸ್ವಾತಂತ್ರ್ಯದ 75ನೇ ವರ್ಷಾಚರಣೆಗೆ 750 ಜನ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದು ಗಮನಾರ್ಹ. ಇದೇ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಕ್ರೀಡೆ ಮತ್ತು ಸದೃಢ ಆರೋಗ್ಯ ವೃದ್ಧಿಗೆ ಸಾಕಷ್ಟು ಉತ್ತೇಜನ ದೊರಕಿದ್ದು, ವಿಶ್ವ ಯೋಗ ದಿನಾಚರಣೆ, ಫಿಟ್ ಇಂಡಿಯಾ ಅಭಿಯಾನ, ಒಲಿಂಪಿಕ್ಸ್ ಕ್ರೀಡೆಗಳನ್ನು ಒಳಗೊಂಡಂತೆ ಅನೇಕ ಉತ್ತೇಜನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೈಕಲ್ ಟು ಫ್ರೀಡಂನ ಮೂಲಕ ನರೇಂದ್ರ ಮೋದಿಯವರ ಆಶಯಕ್ಕೆ ಬೆಂಗಳೂರಿನ ಸೈಕ್ಲಿಂಗ್ ಸಮುದಾಯ ಜೊತೆಗೂಡಿದ್ದು ಅನುಕರಣೀಯ ಎಂದು ತಿಳಿಸಿದರು.

    Tejasvi Surya

    ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಡಾ. ಕೆ.ವೈ.ವೆಂಕಟೇಶ್, ಪ್ಯಾರಾ ಅಥ್ಲೀಟ್ ಪಟು ಆನಂದ್ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮದ ನೇರಪ್ರಸಾರ ಮಾಡಲಾಗಿದ್ದು, ಸಾವಿರಾರು ಜನರು ಫಿಟ್‍ನೆಸ್ ಕಾರ್ಯಕೈಗೊಳ್ಳಲು ಇದರಿಂದ ಸ್ಫೂರ್ತಿ ಪಡೆದುಕೊಳ್ಳಲು ಪ್ರೇರಣೆಯಾಗಲಿದೆ.

    Tejasvi Surya

    ಇದೇ ಸಂದರ್ಭದಲ್ಲಿ ಮಾತನಾಡಿದ ಕೋಲಾರ ಸಂಸದ ಎಸ್.ಮುನಿಸ್ವಾಮಿ, ಇಂತಹ ಅಭಿಯಾನಗಳು ಯುವಕರು ಫಿಟ್‍ನೆಸ್ ಕಡೆಗೆ ಗಮನ ಹರಿಸಲು ಪೂರಕವಾಗಿದ್ದು, ಸಾರ್ವಜನಿಕರಿಗೆ ಇಂತಹ ಅಭಿಯಾನಗಳಿಂದ ಸದೃಢ ಆರೋಗ್ಯದೆಡೆಗೆ ಗಮನ ಹರಿಸಲು ಸ್ಫೂರ್ತಿ ದೊರಕಲಿದೆ ಎಂದು ತಿಳಿಸಿದರು. ಈ ಅಭಿಯಾನಕ್ಕೆ ಡೆಕತ್ಲಾನ್, ಫಾಸ್ಟ್ ಆ್ಯಂಡ್ ಅಪ್, ಜಯಂತ್ ಪ್ರೊ ಬೈಕ್ಸ್, ಬೆಂಗಳೂರು ಡೋನಿಯರ್ಸ್, ರೆಕಾರ್ಡ್ ಮತ್ತು ನಿತ್ಯ ನಿರಂತರ ಸೇವಾ ಟ್ರಸ್ಟ್‌ಗಳ ಸಹಯೋಗ ನೀಡಿ, ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದ್ದು ಶ್ಲಾಘನೀಯ. ಇದನ್ನೂ ಓದಿ: ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

    Tejasvi Surya

    2021ರ ಆಗಸ್ಟ್‌ನಲ್ಲಿ ಲೇಹ್, ಲಡಾಖ್‌ನಂತರ ಎತ್ತರದ ಪ್ರದೇಶಗಳಲ್ಲಿ ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ, ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 3 ದಿನಗಳ ಯುವ ಸಂಕಲ್ಪ ಯಾತ್ರೆಯ ಅಂಗವಾಗಿ ಸೈಕ್ಲಿಂಗ್ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಕ್ರೀಡಾ ಉತ್ತೇಜನದ ಭಾಗವಾಗಿ 250 ತಂಡಗಳನ್ನು ಒಳಗೊಂಡಂತೆ ತೇಜಸ್ವಿ ಸೂರ್ಯ ಫುಟ್‍ಬಾಲ್ ಕಪ್ ಆಯೋಜನೆಗೊಳಿಸಿದ್ದು, ಬಿಜೆಪಿ ಯುವ ಮೋರ್ಚಾ ವತಿಯಿಂದ ಒಲಿಂಪಿಕ್ಸ್‌ ಆಟಗಾರರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ‘ಬಿ ಲೈಕ್ ಓಲಂಪಿಯನ್’ ಹೆಸರಿನಲ್ಲಿ ಅಭಿಯಾನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಮುಂದಿನ ಕೆಲವು ತಿಂಗಳುಗಳಲ್ಲಿ 8 ಪ್ರಮುಖ ಕ್ರೀಡೆಗಳನ್ನು ಒಳಗೊಂಡ ಸಂಸದರ ಕ್ರೀಡಾ ಉತ್ಸವ ಆಯೋಜನೆಗೊಳಿಸಲಾಗುತ್ತಿರುವುದು ಗಮನಾರ್ಹ.

  • ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ

    ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ

    ಬೆಂಗಳೂರು: ಸರ್ಕಾರ ಏನೂ ಕೆಲಸ ಮಾಡದೇ ಹೋಗಿದ್ದರೆ ಇಂದು ವಿದ್ಯಾರ್ಥಿಗಳು ಉಕ್ರೇನ್‌ನಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆ ಕೆಲ ವಿದ್ಯಾರ್ಥಿಗಳು ಆಕ್ರೋಶದಲ್ಲಿ ಹೀಗೆ ಹೇಳಿದರು ಎಂಬುದು ತಿಳಿಯುತ್ತಿಲ್ಲ. ಉಕ್ರೇನ್ ಇಲ್ಲಿಂದ ಶ್ರೀನಿವಾಸಪುರ ಅಥವಾ ಬಸವನಗುಡಿಗೆ ಹೋದಷ್ಟು ಹತ್ತಿರವಿಲ್ಲ. ಅವರೆಲ್ಲರನ್ನೂ ಅಷ್ಟು ದೂರದಿಂದ ಕೆರೆದುಕೊಂಡು ಬಂದಿರುವ ಬಳಿಕವೂ ಸರ್ಕಾರ ಏನೂ ಮಾಡಿಲ್ಲ ಎನ್ನುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸರ್ಕಾರಿ ವಿರೋಧಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು.

    ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲಿನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದ್ರಾ ಅಥವಾ ನಮ್ಮ ದೇಶ ಕಳುಹಿಸಿದ ವಿಮಾನದಲ್ಲಿ ಬಂದ್ರಾ..? ಈ ರೀತಿಯಾಗಿ ಸರ್ಕಾರವನ್ನು ದೂರುವುದು ತಪ್ಪು ಎಂದು ಹೇಳಿದರು. ಇದನ್ನೂ ಓದಿ: ಕಂದಾಯ ದಾಖಲೆ ಮನೆ ಬಾಗಿಲಿಗೆ- ಯೋಜನೆಗೆ ಸಿಎಂ ಚಾಲನೆ

    ನವೀನ್ ಮೃತದೇಹ ತರುವ ವಿಚಾರವಾಗಿ ಮಾತನಾಡಿದ ತೇಜಸ್ವಿ ಸೂರ್ಯ, ಅಲ್ಲಿನ ಇಂಡಿಯನ್ ಎಂಬಸಿ ಮೃತದೇಹ ಪತ್ತೆ ಮಾಡಿದೆ. ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡುತ್ತಿದೆ. ಜನರಲ್ ರಾವತ್ ಮರಣ ಸಂದರ್ಭದಲ್ಲೂ ದೇಹವನ್ನು ಗುರುತಿಸುವಲ್ಲಿ ತಡವಾಗಿತ್ತು. ಈ ಬಗ್ಗೆ ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ. ಅಲ್ಲಿ ಯುದ್ಧದ ಪರಿಸ್ಥಿತಿ ಹೇಗೆ ಇರುತ್ತದೆ ಎಂಬುದು ಅಲ್ಲಿಯವರಿಗೆ ಮಾತ್ರ ತಿಳಿದಿರುತ್ತದೆ. ಹೀಗಾಗಿ ನವೀನ್ ಮೃತದೇಹ ಬರುತ್ತದೆ ಎಂಬ ಭರವಸೆ ಇಟ್ಟುಕೊಳ್ಳೋಣ ಎಂದು ಹೇಳಿದರು.

    3 ವಾರಗಳಿಂದ ಆಪರೇಶನ್ ಗಂಗಾ ಯೋಜನೆ ಜಾರಿಯಲ್ಲಿತ್ತು. ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದ 19,448 ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ಅದರಲ್ಲಿ 633 ಕರ್ನಾಟಕದ ವಿದ್ಯಾರ್ಥಿಗಳು ಇದ್ದರು. ಆಪರೇಶನ್ ಗಂಗಾ ಕಾರ್ಯಾಚರಣೆ ಅತ್ಯಂತ ಜಟಿಲವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಸತತ ಪ್ರಯತ್ನದಿಂದ ಉಕ್ರೇನ್ ಹಾಗೂ ರಷ್ಯಾ ಅಧ್ಯಕ್ಷರ ಜೊತೆ ಸಂಪರ್ಕ ಮಾಡಿ ಅದನ್ನು ಯಶಸ್ವಿಯಾಗಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಪರವಾಗಿ ನಾನು ಪ್ರಧಾನಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರ ತಾರತಮ್ಯ ಮಾಡುತ್ತಿದೆ, ಬಿಜೆಪಿ ಶಾಸಕರಿಗೆ ಹೆಚ್ಚು ನಮಗೆ ಕಡಿಮೆ ಅನುದಾನ ನೀಡಿದೆ: ರಾಮಲಿಂಗಾ ರೆಡ್ಡಿ

    ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲ, ಅವರ ಸಾಕು ಪ್ರಾಣಿಗಳನ್ನೂ ಆಪರೇಶನ್ ಗಂಗಾ ಮೂಲಕ ಸುರಕ್ಷಿತವಾಗಿ ಕರೆತರಲಾಗಿದೆ. ನನ್ನ ಕಚೇರಿಯಿಂದಲೂ ಸಾಕಷ್ಟು ಕೆಲಸ ಮಾಡಲಾಗಿದೆ. 400 ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಉಕ್ರೇನ್‌ನ ವಾಟ್ಸಪ್ ಗ್ರೂಪ್‌ಗಳಿಗೆ ಸೇರಿಸಿ ವಿದ್ಯಾರ್ಥಿಗಳ ಸಂಪರ್ಕ ಪಡೆಯಲಾಗಿತ್ತು. ಈ ವಿಚಾರವಾಗಿ ಕೆಲಸ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ವಿದ್ಯಾರ್ಥಿಗಳನ್ನು ಕರೆತರಲು ಹೋಗಿದ್ದ ಹರ್ದೀಪ್ ಸಿಂಗ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

    2014ರ ಮೊದಲು ಈ ದೇಶದಲ್ಲಿ ಮೆಡಿಕಲ್ ಕಾಲೇಜು ಸೀಟ್‌ಗಳ ಸಂಖ್ಯೆ 54 ಸಾವಿರ ಇತ್ತು. ಮೋದಿ ಪ್ರಧಾನಿಯಾದ ಬಳಿಕ 86,648 ರಷ್ಟು ಹೆಚ್ಚಳವಾಗಿದೆ. ಮೋದಿ 7 ವರ್ಷಗಳಲ್ಲಿ ಶೇ.55 ರಷ್ಟು ಮೆಡಿಕಲ್ ಸೀಟ್‌ಗಳನ್ನು ಹೆಚ್ಚಳ ಮಾಡಿದ್ದಾರೆ. ಪಿಜಿ ಸೀಟ್‌ಗಳು 24 ಸಾವಿರ ಇತ್ತು. 6 ವರ್ಷಗಳಲ್ಲಿ ಶೇ.73 ರಷ್ಟು ಹೆಚ್ಚಳ ಮಾಡಿದ್ದಾರೆ ಎಂದರು.

  • ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

    ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

    ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

    ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

    ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

    ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

    2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

  • ಕೋಟಿಗಟ್ಟಲೆ ಯುವಕರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ: ತೇಜಸ್ವಿ ಸೂರ್ಯ

    ಕೋಟಿಗಟ್ಟಲೆ ಯುವಕರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ: ತೇಜಸ್ವಿ ಸೂರ್ಯ

    ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‍ನ್ನು ಕರ್ನಾಟಕದ ಜನರ ಪರವಾಗಿ ನಾನು ಕೇಂದ್ರದ ಬಜೆಟ್‍ನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನರ ಪರವಾಗಿ ನಾನು ಕೇಂದ್ರದ ಬಜೆಟ್‍ನ್ನು ಸ್ವಾಗತ ಮಾಡುತ್ತೇನೆ. ಈ ಬಜೆಟ್‍ನಲ್ಲಿ ಸರಿಸುಮಾರು 10 ಲಕ್ಷ ಕೋಟಿ ಹಣವನ್ನು ಬರುವಂತಹ ವರ್ಷದಲ್ಲಿ ಸಾರ್ವಜನಿಕ ಮೂಲಸೌಕರ್ಯ ಅಭಿವೃದ್ದಿಗೆ ತೊಡಗಿಸಿಕೊಳ್ಳಬೇಕು ಎಂದು ನಿಶ್ಚಯವಾಗಿದೆ ಎಂದು ಹೇಳಿದ್ದಾರೆ.

    ಹೈವೆ, ಡ್ಯಾಮ್, ರೈಲ್ವೆ ಮಾರ್ಗಗಳನ್ನು ಮಾಡುವಲ್ಲಿ ಹಣವನ್ನು ವ್ಯಯ ಮಾಡಲಾಗುತ್ತದೆ. ಈ ಇಷ್ಟು ದೊಡ್ಡ ಮೊತ್ತದ ಹಣವನ್ನು ಈ ಅಭಿವೃದ್ಧಿ ವಿನಿಯೋಗ ಮಾಡುವುದರಿಂದ ಬರುವ ದಿನಗಳಲ್ಲಿ ಕೋಟಿ,ಕೋಟಿಗಟ್ಟಲೆ ಯುವಕರಿಗೆ ಹೊಸ ಉದ್ಯೋಗ ಅವಕಾಶ ದೇಶದಲ್ಲಿ ನಿರ್ಮಾಣವಾಗುತ್ತದೆ. ರೈಲ್ವೆ ಹಳಿ, ರಸ್ತೆಗಳ ನಿರ್ಮಾಣವನ್ನು ಭಾರತದ ಆರ್ಥಿಕತೆಯನ್ನು ಗಟ್ಟಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

    ಯಾವುದೇ ದೊಡ್ಡ ಯೋಜನೆಗಳು ಇದ್ದಾಗ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಒಟ್ಟಿಗೆ ಕುಳಿತು ಅಭಿವೃದ್ಧಿ ಮಾಡಬೇಕಾಗುತ್ತದೆ. ಜಿಎಸ್‍ಟಿ ಅಂತಹ ಯೋಜನೆಯನ್ನು ಬಹಳ ಯಶಸ್ವಿಯಾಗಿ ನಿರ್ವಹಿಸಿದೆ. ಹಾಗೆ ಮುಂದೆಯು ಸಮನ್ವತೆಯಿಂದ ಸರ್ಕಾರ ಕೆಲಸ ಮಾಡಲಿದೆ. ಯಾವುದು ಅಸಾಧ್ಯವೋ ಅದನ್ನು ಸಾಧ್ಯ ಮಾಡುವುದು ನರೇಂದ್ರ ಮೋದಿ ಸರ್ಕಾರದ ಶಕ್ತಿಯಾಗಿದೆ ಎಂದು ಹೇಳಿದ್ದಾರೆ.

  • ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

    ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

    ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು: ತೇಜಸ್ವಿ ಸೂರ್ಯ

    ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

  • ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು: ತೇಜಸ್ವಿ ಸೂರ್ಯ

    ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು: ತೇಜಸ್ವಿ ಸೂರ್ಯ

    ಉಡುಪಿ: ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

    ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೇ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದರು.

    ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ಇದರಿಂದಾಗಿ ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು. ನಾವು ದೊಡ್ಡದಾಗಿ ಕನಸನ್ನು ಕಾಣಬೇಕು. ನಮ್ಮ ಮನೆಯ ಅಕ್ಕಪಕ್ಕ, ಗ್ರಾಮ, ಊರುಗಳಲ್ಲಿ ಘರ್ ವಾಪಸಿ ಮಾಡಬೇಕು ಎಂದು ತಿಳಿಸಿದರು. ದನ್ನೂ ಓದಿ: ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು: ಮೋದಿ

    ದೇಶದಲ್ಲಿ ರಾಮಮಂದಿರವನ್ನು ಸ್ಥಾಪನೆ ಮಾಡಿದ್ದೇವೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ಕಾಯ್ದೆಯನ್ನು ತೆಗೆದುಹಾಕಿದ್ದೇವೆ. ಘರ್ ವಾಪಸಿ ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ. ಮಠ, ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಸಲಹೆ ನೀಡಿದರು. ದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

  • ಅವನ್ಯಾರೋ ಎಂಪಿ ಬಹಳ ಬುದ್ದಿವಂತ, ಅವನಷ್ಟು ನಾವು ಓದಿಲ್ಲ – ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್

    ಅವನ್ಯಾರೋ ಎಂಪಿ ಬಹಳ ಬುದ್ದಿವಂತ, ಅವನಷ್ಟು ನಾವು ಓದಿಲ್ಲ – ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್

    ಬೆಂಗಳೂರು: ಅವನ್ಯಾರೋ ಎಂಪಿ ಬಹಳ ಬುದ್ದಿವಂತ. ಅವನಷ್ಟು ನಾವು ಓದಿಲ್ಲ, ಮಾಡಿಲ್ಲ. ಮುಸ್ಲಿಂ ಸಮಯದಾಯದವರನ್ನು ಪಂಕ್ಚರ್ ಹಾಕೋರು ಅಂದ ಎಂದು ತೇಜಸ್ವಿ ಸೂರ್ಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

    ಪರ್ಲ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕೋವಿಡ್ ವಾರಿಯರ್ಸ್‍ಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಬೌರಿಂಗ್ ಹಾಸ್ಪಿಟಲ್ ಜಾತಿ ಧರ್ಮದ ಆಧಾರದ ಮೇಲಿದೆಯಾ? ಪಂಕ್ಚರ್ ಇವರು ಹಾಕ್ತಾರಾ? ರಾಜ್ಯದ ಎಲ್ಲ ಧರ್ಮದವರ ಸಾವಿನ ಹೆಣ ಹೊತ್ತವರು ಮುಸ್ಲಿಂ ಸಮುದಾಯದವರು. ಈಗ ಮಾತಾಡೋ ಗಂಡುಗಳು ಯಾರಾದರೂ ಹೆಣಗಳಿಗೆ ಕೈ ಕೊಟ್ಟಿದ್ದಾರಾ? ಸುರೇಶ್ ಅಂಗಡಿಯವರ ಹೆಣವನ್ನು ಅವರ ಕುಟುಂಬಸ್ಥರೂ ನೋಡುವುದಕ್ಕೆ ಆಗಲಿಲ್ಲ. ಇದೇನಾ ದೇಶದ ಸಂಸ್ಕೃತಿ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ವಿಷ ಬೀಜ – ಡಿಕೆಶಿ ಕಿಡಿ

    ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸತ್ತರು. 36 ಜನ ಕುಟುಂಬಸ್ಥರ ನೋವನ್ನು ನಾನು ವೀಡಿಯೋ ಮಾಡಿ ಯೂ ಟ್ಯೂಬ್ ನಲ್ಲಿ ಹಾಕಿಸುತ್ತಿದ್ದೇನೆ. 4 ಲಕ್ಷ ಜನ ಕೋವಿಡ್ ನಿಂದ ಸತ್ತರು. ಬೆಡ್ ಸಿಗದೆ, ಓಡಾಡಿ ನೂರಾರು ಜನ ಸತ್ತರು. ಆದರೆ ಬಿಜೆಪಿ ಸರ್ಕಾರ ಪರಿಹಾರ ಕೊಡಬೇಕಾಗುತ್ತದೆ ಅಂತ ಆ ಲೆಕ್ಕವನ್ನೇ ತೆಗೆದುಬಿಟ್ಟಿದ್ದಾರೆ. ಅಸೆಂಬ್ಲಿ ಬಂದಾಗ ನಾವು ವಿಚಾರ ಎತ್ತಿ ಹೋರಾಟ ಮಾಡುತ್ತೇವೆ ಎಂದು ಗುಡುಗಿದರು.

    ಸರ್ಕಾರ ಕೋವಿಡ್ ನಿಂದ ಸತ್ತವರಿಗೆ ಯಾರಿಗೂ ಸಹಾಯ ಮಾಡಿಲ್ಲ. ವ್ಯಾಪಾರಿಗಳಿಗೆ ಯಾವೊಂದು ಟ್ಯಾಕ್ಸ್ ಕಡಿಮೆ ಮಾಡಲಿಲ್ಲ. ಸರ್ಕಾರ ಒಬ್ಬರಿಗೂ ನೆರವಾಗಲಿಲ್ಲ. ನನ್ನ ವಿರುದ್ದ ಬೇಕಾದಷ್ಟು ಟೀಕೆ ಟಿಪ್ಪಣಿ ಮಾಡುತ್ತಾರೆ. ನಾನು ಮುಸ್ಲಿಂರನ್ನು ಓಲೈಕೆ ಮಾಡುತ್ತೇನೆ. ಹಾಗೇ ಹೀಗೆ ಅಂತ ಬೇಕಾದಷ್ಟು ಮಾತಾಡಿಬಿಟ್ಟರು. ಹೌದು, ನಾನು ಒಪ್ಪಿಕೊಳ್ಳುತ್ತೇನೆ ಮುಸ್ಲಿಂರೆಲ್ಲ ನನ್ನ ಸಹೋದರರು ಎಂದರು. ಇದನ್ನೂ ಓದಿ: ಬೆಡ್ ದಂಧೆ ನಡೆಯೋದು ಹೇಗೆ ಅನ್ನೋದನ್ನ ವಿವರಿಸಿದ ತೇಜಸ್ವಿ ಸೂರ್ಯ

    ವಿನಯ್ ಕುಲಕರ್ಣಿಯನ್ನು ಪೂರ್ಣ ಪ್ರಮಾಣದಲ್ಲಿ ಪಕ್ಷದ ಕೆಲಸಕ್ಕೆ ಬಳಸಿಕೊಳ್ಳುತ್ತೇವೆ. ಅದರಲ್ಲಿ ಅನುಮಾನವೇ ಬೇಡ ವಿನಯ್ ಕುಲಕರ್ಣಿ ನಮ್ಮ ಹಿರಿಯ ನಾಯಕರು, ಮಂತ್ರಿ ಆಗಿದ್ದವರು ಜಮೀರ್ ಹಾಗೂ ವಿನಯ್ ಕುಲಕರ್ಣಿ ಪರ ನಮ್ಮ ಪಕ್ಷ ಇದೆ. ವಿನಯ್ ಕುಲಕರ್ಣಿ ವಿರುದ್ದ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್ ಮಾಡಿದ್ದಾರೆ. ಬಹಳ ಸಂತೋಷ, ಆದರೆ ಇವರ ಕೇಂದ್ರ ಮಂತ್ರಿಗಳು ಎಲ್ಲ ನಿಯಮ ಪಾಲನೆ ಮಾಡಿದ್ದಾರಾ? ಕೇಂದ್ರ ಸಚಿವರಿಗೆ ಒಂದು ಕಾನೂನು? ಇವರಿಗೊಂದು ಕಾನೂನಾ ಎಂದು ಪ್ರಶ್ನೆ ಮಾಡಿದರು.