Tag: Telangana CM

  • ಅಲ್ಲು ಅರ್ಜುನ್‌ ವಿರುದ್ಧ ಮತ್ತೆ ಗುಡುಗಿದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

    ಅಲ್ಲು ಅರ್ಜುನ್‌ ವಿರುದ್ಧ ಮತ್ತೆ ಗುಡುಗಿದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

    ಹೈದರಾಬಾದ್: ಪುಷ್ಪ-2 (Pushpa 2) ಸಿನಿಮಾ ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಲು ನಟ ಅಲ್ಲು ಅರ್ಜುನ್‌ (Allu Arjun) ಕಾರಣ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ (Revanth Reddy) ಆರೋಪ ಮಾಡಿದ್ದಾರೆ.

    ಪೊಲೀಸರು ಅನುಮತಿ ನಿರಾಕರಿಸಿದ್ದರೂ ತೆಲುಗು ನಟ ಅಲ್ಲು ಅರ್ಜುನ್ ಡಿ.4 ರಂದು ತಮ್ಮ ಚಿತ್ರ ಪುಷ್ಪ-2 ಪ್ರದರ್ಶನಕ್ಕೆ ಹಾಜರಾಗಿದ್ದರು. ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ನಂತರವೂ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಲವಂತವಾಗಿ ಹೊರಗೆ ಕಳುಹಿಸುವವರೆಗೂ ಚಿತ್ರಮಂದಿರದಿಂದ ಹೊರಬರಲಿಲ್ಲ ಎಂದು ರೆಡ್ಡಿ ಆರೋಪಿಸಿದ್ದಾರೆ. ಇದನ್ನೂ ಓದಿ: ‘ಪುಷ್ಪ 2’ ಕಾಲ್ತುಳಿತ ಪ್ರಕರಣ: 9 ವರ್ಷದ ಬಾಲಕನ ಬ್ರೈನ್ ಡೆಡ್

    ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರು ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ನಂತರ ರೆಡ್ಡಿ ಅವರು ಈ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳನ್ನು ಉಲ್ಲೇಖಿಸಿದ ರೆಡ್ಡಿ, ಅಲ್ಲು ಅರ್ಜುನ್ ದೊಡ್ಡ ಜನಸ್ತೋಮವಿದ್ದರೂ ರೋಡ್‌ಶೋ ನಡೆಸಿ ಜನರತ್ತ ಕೈ ಬೀಸಿದ್ದು ಗೊಂದಲಕ್ಕೆ ಕಾರಣವಾಯಿತು ಎಂದು ಟೀಕಿಸಿದ್ದಾರೆ.

    ನಟ ಮತ್ತು ಇತರರ ಭೇಟಿಗೆ ಭದ್ರತೆ ಕೋರಿ ಥಿಯೇಟರ್ ಆಡಳಿತವು ಡಿ.2 ರಂದು ಪೊಲೀಸರಿಗೆ ಮನವಿ ಸಲ್ಲಿಸಿತ್ತು. ಆದರೆ, ಜನಸಂದಣಿಯನ್ನು ನಿರ್ವಹಿಸುವ ಆತಂಕದಿಂದಾಗಿ ಪೊಲೀಸರು ವಿನಂತಿಯನ್ನು ತಿರಸ್ಕರಿಸಿದ್ದರು ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ‘ಪುಷ್ಪ 2’ ನಟ ಅಲ್ಲು ಅರ್ಜುನ್‌ ಜೈಲಿಂದ ರಿಲೀಸ್‌ – ಜೈಲಲ್ಲಿ ಒಂದು ರಾತ್ರಿ ಕಳೆದ ಸ್ಟಾರ್‌

    ಅಲ್ಲು ಅರ್ಜುನ್ ಬಂಧನದ ನಂತರ ಅವರ ನಿವಾಸಕ್ಕೆ ಭೇಟಿ ನೀಡಿದ ಚಿತ್ರರಂಗದ ಗಣ್ಯರ ವಿರುದ್ಧವೂ ಸಿಎಂ ಕಿಡಿಕಾರಿದ್ದಾರೆ. ಆದರೆ, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನ ವಿಚಾರದಲ್ಲಿ ಯಾರೂ ಸಹ ನಟನಿಗೆ ತೋರಿದ ಅನುಕಂಪ ತೋರಲಿಲ್ಲ ಎಂದು ಕಿಡಿಕಾರಿದ್ದಾರೆ.

  • ನಟ ಅಲ್ಲು ಅರ್ಜುನ್ ಬಂಧನ – ಪೊಲೀಸರ ನಡೆ ಸಮರ್ಥಿಸಿಕೊಂಡ ತೆಲಂಗಾಣ ಸಿಎಂ

    ನಟ ಅಲ್ಲು ಅರ್ಜುನ್ ಬಂಧನ – ಪೊಲೀಸರ ನಡೆ ಸಮರ್ಥಿಸಿಕೊಂಡ ತೆಲಂಗಾಣ ಸಿಎಂ

    – ಸಿನಿಮಾ ತಾರೆಯರು ಹಣ ಸಂಪಾದನೆಗಾಗಿಯೇ ಇದ್ದಾರೆ
    – ನಾನು ಯಾರ ಅಭಿಮಾನಿಯೂ ಅಲ್ಲ, ನನಗೆ ನಾನೇ ಸ್ಟಾರ್

    ಅಮರಾವತಿ: ಪುಷ್ಪ 2 (Pushpa 2) ಸಿನಿಮಾ ನಟ ಅಲ್ಲು ಅರ್ಜುನ್ (Allu Arjun) ಬಂಧನ ವಿಚಾರದಲ್ಲಿ ಪೊಲೀಸರ ನಡೆಯನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಸಮರ್ಥಿಸಿಕೊಂಡಿದ್ದಾರೆ.

    ಅಲ್ಲು ಅರ್ಜುನ್ ಸುಮ್ಮನೆ ಸಿನಿಮಾ ನೋಡಿ ಹೊರ ಬಂದಿಲ್ಲ. ಅವರು ತಮ್ಮ ಕಾರಿನ ಸನ್‌ರೂಫ್‌ನಿಂದ ಹೊರಬಂದು ಅಭಿಮಾನಿಗಳತ್ತ ಕೈಬೀಸಿದರು. ಚಲನಚಿತ್ರದ ಸಂಭ್ರಮಾಚರಣೆ ಮಾಡುತ್ತಿದ್ದ ಅಭಿಮಾನಿಗಳನ್ನು ಹುರಿದುಂಬಿಸಿದರು. ಇದರಿಂದ ಪರಿಸ್ಥಿತಿ ಹತೋಟಿ ತಪ್ಪಿತು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾನು ಕಾನೂನು ಪಾಲಿಸುವ ನಾಗರಿಕ.. ತನಿಖೆಗೆ ಸಹಕರಿಸುತ್ತೇನೆ: ಜೈಲಿಂದ ರಿಲೀಸ್‌ ಆದ ಅಲ್ಲು ಅರ್ಜುನ್‌ ರಿಯಾಕ್ಷನ್‌

    ನಟನ ಬಂಧನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ, ಕಾಲ್ತುಳಿತಕ್ಕೆ ಒಳಗಾದ ಸಂತ್ರಸ್ತೆ ಮತ್ತು ಅವರ ಕುಟುಂಬದ ಬಗ್ಗೆ ಯಾರು ಕೂಡ ಮಾತನಾಡುತ್ತಿಲ್ಲ. ಬಡ ಕುಟುಂಬವೊಂದು ಸದಸ್ಯನನ್ನು ಕಳೆದುಕೊಂಡಿದೆ. ಮೃತ ಮಹಿಳೆಯ ಮಗ ಇನ್ನೂ ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದಾನೆ. ಅವನು ಕೋಮಾದಿಂದ ಹೊರಬಂದು ತನ್ನ ತಾಯಿಯಿಲ್ಲದ ಜೀವನವನ್ನು ನಡೆಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸಿನಿಮಾ ತಾರೆಯರು ಹಣ ಸಂಪಾದನೆಗಾಗಿಯೇ ಇದ್ದಾರೆ. ಜನಸಾಮಾನ್ಯರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ಪುಷ್ಪ 2’ ನಟ ಅಲ್ಲು ಅರ್ಜುನ್‌ ಜೈಲಿಂದ ರಿಲೀಸ್‌ – ಜೈಲಲ್ಲಿ ಒಂದು ರಾತ್ರಿ ಕಳೆದ ಸ್ಟಾರ್‌

    ನಿಮ್ಮ ನೆಚ್ಚಿನ ತೆಲುಗು ನಟ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೆಲಂಗಾಣ ಸಿಎಂ, ನಾನೇ ಸ್ಟಾರ್. ನಾನು ಯಾರ ಅಭಿಮಾನಿಯೂ ಅಲ್ಲ ಎಂದು ಹೇಳಿದ್ದಾರೆ.

  • ಯಾರಿಗೆ ಬೇಕು ʼದಿ ಕಾಶ್ಮೀರ್‌ ಫೈಲ್ಸ್‌ʼ: ತೆಲಂಗಾಣ ಸಿಎಂ ಪ್ರಶ್ನೆ

    ಯಾರಿಗೆ ಬೇಕು ʼದಿ ಕಾಶ್ಮೀರ್‌ ಫೈಲ್ಸ್‌ʼ: ತೆಲಂಗಾಣ ಸಿಎಂ ಪ್ರಶ್ನೆ

    ಹೈದರಾಬಾದ್: ವಿವಾದಕ್ಕೆ ಸಿಲುಕಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಪ್ರತಿಕ್ರಿಯಿಸಿದ್ದಾರೆ. ಯಾರಿಗೆ ಬೇಕು ದಿ ಕಾಶ್ಮೀರ್‌ ಫೈಲ್ಸ್‌ ಸಿನಿಮಾ ಎಂದು ಪ್ರಶ್ನಿಸಿದ್ದಾರೆ.

    ‘ದಿ ಕಾಶ್ಮೀರ್ ಫೈಲ್ಸ್’, ಹಾಗೆಂದರೇನು? ಯಾವುದೇ ಪ್ರಗತಿಪರ ಸರ್ಕಾರವಿದ್ದರೆ ನೀರಾವರಿ ಫೈಲ್ಸ್‌ (ಕಡತಗಳು), ಆರ್ಥಿಕ ಫೈಲ್ಸ್‌ ಇರಬೇಕು. ದಿ ಕಾಶ್ಮೀರ್‌ ಫೈಲ್ಸ್‌ ಯಾರಿಗೆ ಬೇಕು? ಮತಕ್ಕಾಗಿ ಕೆಲವರು ಈ ರೀತಿ ಮಾಡುತ್ತಿದ್ದಾರೆ. ನಮಗೆ ಯಾವುದೇ ಪ್ರಯೋಜನವಾಗಿಲ್ಲ ಅಂತ ದೆಹಲಿಯಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರು ಹೇಳುತ್ತಿದ್ದಾರೆ ಎಂದು ರಾವ್‌ ಕೇಂದ್ರದ ವಿರುದ್ಧ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಕಂಗನಾ ರಣಾವತ್ ಪ್ರಶ್ನೆಗೆ ಮೌನ ಮುರಿದ ಆಮೀರ್ ಖಾನ್ : ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಬೆನ್ನು ತಟ್ಟಿದ ಖಾನ್

    ಯಾಸಂಗಿ ಬೆಳೆ ಕುರಿತು ಮಾತನಾಡಿದ ಅವರು, ಯಾಸಂಗಿ ಬೆಳೆ ಖರೀದಿಸುವಂತೆ ಕೇಂದ್ರಕ್ಕೆ ಒತ್ತಾಯಿಸುತ್ತಿದ್ದೇವೆ. ನಮ್ಮ ಸಚಿವರು ನಾಳೆ ದೆಹಲಿಗೆ ಹೋಗಿ ಕೇಂದ್ರವನ್ನು ಕೇಳುತ್ತಾರೆ. ಆಹಾರ ಕ್ಷೇತ್ರವು ಭಾರತದಲ್ಲಿ ಪ್ರಮುಖ ಕ್ಷೇತ್ರವಾಗಿದೆ. ದೇಶದಲ್ಲಿ ಏಕರೂಪದ ಆಹಾರ ಧಾನ್ಯ ನೀತಿ ಜಾರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ನಾವು ಸುಮ್ಮನಿರುವುದಿಲ್ಲ, ಆಂದೋಲನ ನಡೆಸುತ್ತೇವೆ. ಶೇ.100ರಷ್ಟು ಖರೀದಿ ಆದೇಶ ಬರುವವರೆಗೂ ಹೋರಾಟ ನಡೆಸುತ್ತೇವೆ. ಯುಪಿಯಲ್ಲಿ ಬಿಜೆಪಿ ಸ್ಥಾನಗಳು ಕಡಿಮೆಯಾಗುತ್ತವೆ ಎಂದು ನಾನು ಮೊದಲೇ ಹೇಳಿದ್ದೆ, ಅದು ನಡೆದಿದೆ. MSP (ಕನಿಷ್ಠ ಬೆಂಬಲ ಬೆಲೆ) ಮೂಲಕ ಬೆಳೆಗಳನ್ನು ಖರೀದಿಸಲು ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

  • ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹೈದರಾಬಾದ್: ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯ ವಿಧಾನಸಭೆಯಲ್ಲಿ ಹಿಜಬ್‌ ವಿವಾದ ಕುರಿತು ಮಾತನಾಡಿದ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ ಸರ್ಕಾರಕ್ಕೂ ಏನು ಸಂಬಂಧ? ಹಿಜಬ್ ವಿವಾದ ಏಕೆ? ವಾತಾವರಣ ಬಿಗಡಾಯಿಸುವಂತೆ ಏಕೆ ಮಾಡುತ್ತಿದ್ದೀರಿ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

    ಇತ್ತೀಚಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದ ಬಗ್ಗೆ ತೆಲಂಗಾಣ ಸಿಎಂ ವ್ಯಾಪಕ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

    ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾರ ಹಿಜಬ್‌ ವಿವಾದ ಹೈಕೋರ್ಟ್‌ ಮೆಟ್ಟಿಲೇರಿತ್ತು. 11 ದಿನಗಳ ವಾದ-ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಿತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ಧರಿಸುವಂತಿಲ್ಲ ಎಂದು ಕೋರ್ಟ್‌ ತೀರ್ಪು ನೀಡಿದೆ. ಕೋರ್ಟ್‌ ತೀರ್ಪಿನ ವಿಚಾರವಾಗಿ ಪರ-ವಿರೋಧದ ಚರ್ಚೆ ಹುಟ್ಟುಕೊಂಡಿದೆ. ಇದನ್ನೂ ಓದಿ: ಹಿಜಬ್ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ ಸ್ವಾಗತಿಸಬೇಕು: ಬಿಎಸ್‍ವೈ

  • ತೆಲಂಗಾಣ ಸಿಎಂ ಪಾಕಿಸ್ತಾನ, ಚೀನಾ ಏಜೆಂಟ್‌ : ಬಿಜೆಪಿ

    ತೆಲಂಗಾಣ ಸಿಎಂ ಪಾಕಿಸ್ತಾನ, ಚೀನಾ ಏಜೆಂಟ್‌ : ಬಿಜೆಪಿ

    ಹೈದರಾಬಾದ್: ಸರ್ಜಿಕಲ್‌ ಸ್ಟ್ರೈಕ್‌ಗೆ ಸಂಬಂಧಿಸಿದಂತೆ ಪುರಾವೆ ತೋರಿಸಿ ಎಂದು ಕೇಳಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕೆಸಿಆರ್‌ ಒಬ್ಬ ಪಾಕಿಸ್ತಾನ, ಚೀನಾ ಏಜೆಂಟ್‌ ಎಂದು ಗುಡುಗಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಅವರು ಭಾರತೀಯ ಸೇನೆಯನ್ನು ದುರ್ಬಲಗೊಳಿಸಲು ದೇಶದ್ರೋಹಿಯಂತೆ ಮಾತನಾಡುತ್ತಿದ್ದಾರೆ. ಪಾಕಿಸ್ತಾನ ಮತ್ತು ಚೀನಾದ ಏಜೆಂಟ್‌ ಆಗಿರುವ ನಿಮ್ಮಂತಹ ದೇಶದ್ರೋಹಿ ತೆಲಂಗಾಣ ನೆಲದಲ್ಲಿರಲು ಅರ್ಹರಲ್ಲ. ತೆಲಂಗಾಣ ಜನತೆ ನಿಮ್ಮನ್ನು ಓಡಿಸುವುದು ಖಚಿತ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

    ಮುಖ್ಯಮಂತ್ರಿಗಳ ಹೇಳಿಕೆಗಳು ಜನರನ್ನು ಕೆರಳಿಸಿದ್ದು, ಅವರ ರಕ್ತ ಕುದಿಯುತ್ತಿದೆ. ಕೆಸಿಆರ್‌ ಅವರು ಭಾರತೀಯ ಸೇನೆಗೆ ಮಾಡಿದ ಅವಮಾನಕ್ಕೆ ಇಡೀ ಭಾರತವೇ ತಲೆತಗ್ಗಿಸುವಂತಾಗಿದೆ ಎಂದು ಹರಿಹಾಯ್ದಿದ್ದಾರೆ.

    ಸರ್ಜಿಕಲ್‌ ಸ್ಟ್ರೈಕ್‌ಗೆ ಸಂಬಂಧಿಸಿದ ಸಾಕ್ಷ್ಯವನ್ನು ಕೇಂದ್ರ ಸರ್ಕಾರ ತೋರಿಸಲಿ. ಈ ವಿಚಾರವಾಗಿ ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಮೊದಲು ಅವರು ಜನತೆಗೆ ಪುರಾವೆ ತೋರಿಸಲಿ ಎಂದು ಕೆಸಿಆರ್‌ ಆಗ್ರಹಿಸಿದ್ದರು. ಇದನ್ನೂ ಓದಿ: ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್

    ಉರಿಯ ಮೂಲ ಶಿಬಿರದಲ್ಲಿ ಭಾರತೀಯ ಸೇನೆಯ 19 ಯೋಧರು ಹತರಾದ ನಂತರ ಭಾರತೀಯ ಸೇನೆಯು 2016ರ ಸೆಪ್ಟೆಂಬರ್‌ನಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿತ್ತು.

    ಬಳಿಕ 2019ರ ಫೆ.14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಸಿಆರ್‌ಪಿಎಫ್‌ ಬೆಂಗಾವಲು ಪಡೆಯ ಮೇಲಿನ ದಾಳಿಯಲ್ಲಿ 40 ಯೋಧರು ಹುತಾತ್ಮರಾದರು. ಪುಲ್ವಾಮಾ ದಾಳಿಯ ಮೂರನೇ ವರ್ಷಾಚಾರಣೆ ನಿನ್ನೆ ನಡೆಯಿತು. ದೇಶದ ಜನತೆ ಹುತಾತ್ಮ ಯೋಧರನ್ನು ಸ್ಮರಿಸಿದ್ದರು.

    ಸ್ಮರಿಸಿ

  • ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಿದ ತೆಲಂಗಾಣ ಸಿಎಂ

    ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಿದ ತೆಲಂಗಾಣ ಸಿಎಂ

    ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಜನರು ಕೂಡ ಇದ್ದಾರೆ. ಹೀಗಾಗಿ ಮಾಸ್ಕ್ ಧರಿಸದೇ ಅಸಡ್ಡೆ ತೋರಿಸುವ ಜನರಿಗೆ 1,000ರೂ. ದಂಡ ವಿಧಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಗುರುವಾರ ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ ಚಂದ್ರಶೇಖರ್ ನಂತರ ಆರೋಗ್ಯ ಅಧಿಕಾರಿಗಳೊಂದಿಗೆ ಪ್ರಸ್ತುತ ಕೊರೊನಾ ಸೋಂಕಿನ ಬಗ್ಗೆ ಚರ್ಚೆ ನಡೆಸಿದರು.

    ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಿಎಂ ಚಂದ್ರಶೇಖರ್ ರಾವ್ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಎಲ್ಲ ಆರೋಗ್ಯ ಸಿಬ್ಬಂದಿಗೂ ಲಸಿಕೆ ನೀಡಬೇಕು ಹಾಗೂ ಈ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.

    ಕೊರೊನಾ ತಡೆಗಟ್ಟಲು ಮಾಸ್ಕ್ ಧರಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಮಾಸ್ಕ್ ಧರಿಸದಿದ್ದರೆ, ಪ್ರತಿ ವ್ಯಕ್ತಿಗೆ 1000 ರೂ. ದಂಡ ವಿಧಿಸಬೇಕು ಹಾಗೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ 45 ವರ್ಷಕ್ಕೂ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಆಗ್ರಹಿಸಿದರು.