Tag: Telugu

  • ಕನ್ನಡ, ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಣವಾಗಲಿದೆ ರಿಷಬ್ ಶೆಟ್ಟಿ ಹೊಸ ಚಿತ್ರ

    ಕನ್ನಡ, ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಣವಾಗಲಿದೆ ರಿಷಬ್ ಶೆಟ್ಟಿ ಹೊಸ ಚಿತ್ರ

    ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ತೆಲುಗಿನ ಖ್ಯಾತ ಚಿತ್ರನಿರ್ಮಾಣ ಸಂಸ್ಥೆ ಸಿತಾರಾ ಎಂಟರ್ಟೈನ್ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಪ್ರಾಜೆಕ್ಟ್ ಜೊತೆಗೆ ಆಗಮಿಸುತ್ತಿದೆ. ‘ಪ್ರೊಡಕ್ಷನ್ ನಂಬರ್ 36’ (Production No.36) ಹೆಸರಿನ ಬಿಗ್ ಬಜೆಟ್ ಸಿನಿಮಾ ಘೋಷಣೆ ಮಾಡಿದೆ. ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಐತಿಹಾಸಿಕ ಆಕ್ಷನ್ ಡ್ರಾಮಾ ಹಿನ್ನೆಲೆಯ ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಾಯಕನಾಗಿ ನಟಿಸಲಿದ್ದಾರೆ. ಚಿತ್ರದ ಅನೌನ್ಸ್‌ಮೆಂಟ್ ಪೋಸ್ಟರ್ ಸಹ ರಿಲೀಸ್ ಆಗಿದೆ.

    ‌’ಕಾಂತಾರ’ (Kantara) ಸಿನಿಮಾದ ಮೂಲಕ ಭಾರತೀಯ ಚಿತ್ರರಂಗವನ್ನೇ ಬೆರಗುಗೊಳಿಸಿದ ನಟ ರಿಷಬ್ ಶೆಟ್ಟಿ, ಈಗ ‘ಕಾಂತಾರ-1’ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆಯೇ ಸಿತಾರ ಎಂಟರ್ಟೈನ್ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, 18ನೇ ಶತಮಾನದ ಕಥೆ ಹೇಳಲು ಮುಂದಾಗಿದ್ದಾರೆ. ಇದನ್ನೂ ಓದಿ: ʻಲೂಸ್ ಮಾದʼ ಚಿತ್ರಕ್ಕೆ ಯೋಗಿನೇ ಹೀರೋ

    ಈ ಐತಿಹಾಸಿಕ ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಿರ್ದೇಶಕ ಅಶ್ವಿನ್ ಗಂಗರಾಜು. ‘ಪ್ರೊಡಕ್ಷನ್ ನಂ.36’ ಮೂಲಕ ಈ ಬಾರಿ ಇನ್ನಷ್ಟು ಭರ್ಜರಿ ದೃಶ್ಯ ವೈಭವದ ಕಥಾನಕವನ್ನು ತೆರೆ ಮೇಲೆ ತರುವುದಾಗಿ ನಿರ್ಧರಿಸಿದ್ದಾರೆ. ಈ ಚಿತ್ರವನ್ನು ಕನ್ನಡ ಮತ್ತು ತೆಲುಗಿನಲ್ಲಿ ಒಂದೇ ಸಮಯದಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ. ಇನ್ನುಳಿದಂತೆ ತಮಿಳು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.

    ಸೂರ್ಯದೇವರ ನಾಗವಂಶಿ ಮತ್ತು ಸಾಯಿ ಸೌಜನ್ಯಾ, ಸಿತಾರ ಎಂಟರ್ಟೈನ್ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನೆಮಾಸ್‌ಗಳ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಶ್ರೀಕರ ಸ್ಟುಡಿಯೋಸ್ ಈ ಮಹಾಕಾವ್ಯವನ್ನು ಪ್ರಸ್ತುತಪಡಿಸುತ್ತಿದೆ. ಇನ್ನುಳಿದಂತೆ ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಕನ್ನಡಿಗರು ಕೂಡಿರುವುದಲ್ಲದೆ, ಬಹುಭಾಗ ಚಿತ್ರೀಕರಣ ಕರ್ನಾಟಕದಲ್ಲೇ ಮಾಡಲಾಗುವುದು. ಯಾವಾಗ ಶುರು, ಪಾತ್ರವರ್ಗ ಮತ್ತು ತಾಂತ್ರಿಕ ವರ್ಗದ ಹೆಚ್ಚಿನ ವಿವರ ಮುಂದಿನ ದಿನಗಳಲ್ಲಿ ಲಭ್ಯವಾಗಲಿದೆ. ಇದನ್ನೂ ಓದಿ: I Stand With Darshan Sir – ದರ್ಶನ್, ಧ್ರುವ ನಡುವಿನ ಬಿರುಕು ಶಮನ?

  • ಅಧಿಕೃತವಾಗಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಕಂಟೆಸ್ಟೆಂಟ್ : ನಟ ನಾಗಾರ್ಜುನ ಬದಲಾಗಲಿಲ್ಲ

    ಅಧಿಕೃತವಾಗಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಕಂಟೆಸ್ಟೆಂಟ್ : ನಟ ನಾಗಾರ್ಜುನ ಬದಲಾಗಲಿಲ್ಲ

    ಬಿಗ್ ಬಾಸ್ ತೆಲುಗು ಸೀಸನ್ 8(Bigg Boss Season 8)  ಶುರುವಾಗಿದೆ. ಈ ಸೀಸನ್‍ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿತ್ತು. ಕಳೆದ ವರ್ಷದಂತೆ ಈ ವರ್ಷವೂ ನಿರೂಪಕರ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ಎದ್ದಿತ್ತು. ನಟ ನಾಗಾರ್ಜುನ (Nagarjuna) ಬದಲು ಬೇರೆ ನಿರೂಪಕರು ಈ ಬಾರಿ ಇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಮಾತು ಸುಳ್ಳಾಗಿದೆ. ಬಿಗ್ ಬಾಸ್ ತೆಲುಗು ಸೀಸನ್ 8 ಅನ್ನು ನಾಗಾರ್ಜುನ ಅವರೇ ನಡೆಸಿಕೊಡುತ್ತಿದ್ದಾರೆ.

    ಈ ಸೀಸನ್ ಸಾಕಷ್ಟು ಕಾರಣಗಳಿಂದಾಗಿ ನೋಡುಗರ ಗಮನ ಸೆಳೆಯಲಿದೆ. ಕನ್ನಡದ ನಾಲ್ವರು ಈ ಬಾರಿ ಬಿಗ್ ಬಾಸ್ ತೆಲುಗು ಶೋನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಕನ್ನಡದಲ್ಲಿ ಮೂಡಿ ಬಂದ ಮನೆಯೇ ಮಂತ್ರಾಲಯ ಧಾರಾವಾಹಿಯ ನಿಖಿಲ್, ವಿದ್ಯಾ ವಿನಾಯಕ ನಟಿ ಯಶ್ಮಿ ಗೌಡ, ಕನ್ನಡದ ಬಿಗ್ ಬಾಸ್ ನಲ್ಲೂ ಕಾಣಿಸಿಕೊಂಡಿದ್ದ ಪ್ರೇರಣಾ, ಪೃಥ್ವಿರಾಜ್ ಶೆಟ್ಟಿ ಹೀಗೆ ನಾಲ್ವರು ಕಲಾವಿದರು ಈ ಬಾರಿ ತೆಲುಗು ಬಿಗ್ ಬಾಸ್ ಮನೆಯ ಪ್ರವೇಶ ಮಾಡಿದ್ದಾರೆ.

    ಕನ್ನಡದಲ್ಲಿ ಬಿಗ್ ಬಾಸ್ ಶುರುವಾಗೋ ಮುನ್ನವೇ ತೆಲುಗಿನಲ್ಲಿ ಗ್ರ್ಯಾಂಡ್ ಓಪನಿಂಗ್ ಆಗಿದೆ. 14 ಸ್ಪರ್ಧಿಗಳು ದೊಡ್ಮನೆಗೆ ಪ್ರವೇಶ ಮಾಡಲಿದ್ದಾರೆ. ಅದರಲ್ಲಿ ನಾಲ್ವರು ಕನ್ನಡದ ಮೂಲದವರೇ ಇದ್ದಾರೆ ಅನ್ನೋದು ವಿಶೇಷ. ಮುಂದಿನ ದಿನಗಳಲ್ಲಿ ಯಾವೆಲ್ಲ ಕಂಟೆಸ್ಟೆಂಟ್ ಗಳು ಗಮನ ಸೆಳೆಯುತ್ತಾರೆ ಅನ್ನೋದನ್ನ ಕಾದು ನೋಡಬೇಕು.

  • ನಟಿ ಪವಿತ್ರಾ ಜಯರಾಮ್ ಸಾವಿನ ಬಳಿಕ ಸ್ನೇಹಿತ ಚಂದು ಆತ್ಮಹತ್ಯೆ

    ನಟಿ ಪವಿತ್ರಾ ಜಯರಾಮ್ ಸಾವಿನ ಬಳಿಕ ಸ್ನೇಹಿತ ಚಂದು ಆತ್ಮಹತ್ಯೆ

    ಧಾರಾವಾಹಿ ನಟಿ ಪವಿತ್ರಾ ಜಯರಾಮ್ (Pavitra Jayaram) ಅಪಘಾತ ಪ್ರಕರಣದಲ್ಲಿ ತಿರುವು ಸಿಕ್ಕಿದೆ. ಪವಿತ್ರಾ ಗೆಳೆಯ, ಸೀರಿಯಲ್‌ ನಟ ಚಂದು (Chandu) ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು, ಮಿದುಳಿನ ಕಾಯಿಲೆ ಇದ್ದು ಸಾಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದರು.

    ಐದು ದಿನಗಳ ಹಿಂದಷ್ಟೇ ಮೆಹಬೂಬ್‌ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪವಿತ್ರಾ ಸಾವನ್ನಪ್ಪಿದ್ದರು. ಬೆಂಗಳೂರಿನಿಂದ ಹೈದರಾಬಾದ್‌ಗೆ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಿತ್ರಾ ಸಾವಿಗೀಡಾಗಿದ್ದರು. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಚಂದು ತ್ರಿನಯನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಂದುಗೆ ಶಿಲ್ಪಾ ಎಂಬವರ ಜೊತೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಿರುತೆರೆ ನಟಿ ಪವಿತ್ರಾ ಜಯರಾಮ್ ಹಾಗೂ ಜಂದು ಸ್ನೇಹಿತರಾಗಿದ್ದರು ಎನ್ನಲಾಗಿದೆ.

    ರಾಧಮ್ಮ ಪೆಳ್ಳಿ ಮತ್ತು ಕಾರ್ತಿಕ ದೀಪಂ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆತ್ಮಹತ್ಯೆಗೆ ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ‘ಮಾರಣಾಯುಧಂ’ ಹೆಸರಿನಿಂದ ರೆಡಿಯಾಗಿದೆ ಮಾಲಾಶ್ರೀ ನಟನೆಯ ಚಿತ್ರ

    ‘ಮಾರಣಾಯುಧಂ’ ಹೆಸರಿನಿಂದ ರೆಡಿಯಾಗಿದೆ ಮಾಲಾಶ್ರೀ ನಟನೆಯ ಚಿತ್ರ

    ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ (Malashree) ಪ್ರಮುಖಪಾತ್ರದಲ್ಲಿ ನಟಿಸಿದ್ದ ‘ಮಾರಕಾಸ್ತ್ರ’ ಚಿತ್ರ ಕಳೆದ ವರ್ಷ  ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ (Telugu) ನಿರ್ಮಾಣವಾಗಿದ್ದು ‘ಮಾರಣಾಯುಧಂ’ (Maranayudham) ಎಂದು ಹೆಸರಿಡಲಾಗಿದೆ. ಆಂಧ್ರ ಹಾಗು ತೆಲಂಗಾಣದಲ್ಲಿ ಈ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿನ ಜನರ ಮನ ಗೆದ್ದಿದೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.‌ ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಮ್ಮ ಮಾರಕಾಸ್ತ್ರ ಚಿತ್ರವನ್ನು ಕಳೆದವರ್ಷ ಬಿಡುಗಡೆ ಮಾಡಿದ್ದೆವು.  ಆ ಸಮಯದಲ್ಲಿ ಭಾರತ – ಪಾಕ್ ಮ್ಯಾಚ್, ಹಬ್ಬಗಳು ಬಂದವು. ಹಾಗಾಗಿ ಅಷ್ಟು ಜನ ನಮ್ಮ ಸಿನಿಮಾ‌ ನೋಡಲು ಆಗಲಿಲ್ಲ. ಆದರೆ ಚಿತ್ರ ನೋಡಿದ ತೆಲುಗು ವಿತರಕರಾದ ವೆಂಕಟೇಶ್ ರಾವ್ ಅವರು ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಿ ಎಂದರು. ಮಾರಕಾಸ್ತ್ರ ಈಗ ಮಾರಣಾಯುಧಂ ಎಂಬ ಹೆಸರಿನಿಂದ ಇದೇ ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ಶನಿವಾರ( 27) ದಂದು ಪೌರ ಕಾರ್ಮಿಕರು ಸೇರಿದಂತೆ ಅನೇಕ ಶ್ರಮಿಕ ವರ್ಗದವರಿಗೆ ಒಂದು ಉಚಿತ ಪ್ರದರ್ಶನದ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ನಟರಾಜ್.

    ಮಾರಕಾಸ್ತ್ರ ಚಿತ್ರವನ್ನು ಬಿಡುಗಡೆ ಮಾಡಿದಾಗ ಚಿತ್ರದ ಅವಧಿ ಸ್ವಲ್ಪ ಹೆಚ್ಚಿದೆ ಎಂದಿದ್ದರು ಈಗ 26 ನಿಮಿಷ ಕಡಿಮೆ ಮಾಡಿದ್ದೇವೆ. ಮಾಲಾಶ್ರೀ, ಆನಂದ್ ಆರ್ಯ, ಹರ್ಷಿಕಾ ಪೂಣಚ್ಛ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ ತಿಳಿಸಿದರು. ನಾನು ಮೊದಲು ಮಾರಕಾಸ್ತ್ರ ಚಿತ್ರದಲ್ಲಿ ನಟಿಸಲು ಒಪ್ಪಿರಲಿಲ್ಲ. ಆನಂತರ ನಿರ್ದೇಶಕರು ಕಥೆ ಹೇಳಿದ ರೀತಿ ಇಷ್ಟವಾಯಿತು. ಅದರಲ್ಲೂ ನಿರ್ದೇಶಕರಿಗೆ ಕಾಲಿನ ಸಮಸ್ಯೆಯಿದೆ. ಅಂತಹುದರಲ್ಲೂ ಅವರಿಗಿರುವ ಸಿನಿಮಾ ಪ್ರೀತಿ ಕಂಡು ಖುಷಿಯಾಯಿತು. ತೆಲುಗಿನ ಜನರು ನನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಇದೇ ಶುಕ್ರವಾರ ಕರ್ನಾಟಕದಲ್ಲೂ ಬಿಡುಗಡೆಯಾಗಲಿದೆ. ಎಲ್ಲರೂ ಚಿತ್ರ ನೋಡಿ ಎಂದರು ನಟಿ ಮಾಲಾಶ್ರೀ.

    ಚಿತ್ರದ ವಿತರಕ ಯಾದವ್, ಕಾರ್ಯಕಾರಿ ನಿರ್ಮಾಪಕ ವೆಂಕಟೇಶ್ ರಾವ್, ನಾಯಕ ಆನಂದ್ ಆರ್ಯ, ರವಿಚೇತನ್ , ಶಶಿಧರ್, ಮಂಜುನಾಥ್, ಮಂಜುಳಾ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ತೆಲುಗು, ತಮಿಳು ಸಿನಿಮಾ ಒಪ್ಪಿಕೊಂಡ ಆಶಿಕಾ ರಂಗನಾಥ್

    ತೆಲುಗು, ತಮಿಳು ಸಿನಿಮಾ ಒಪ್ಪಿಕೊಂಡ ಆಶಿಕಾ ರಂಗನಾಥ್

    ಚುಟುಚುಟು ಖ್ಯಾತಿಯ ಹುಡುಗಿ ಆಶಿಕಾ ರಂಗನಾಥ್ (Ashika Ranganath) ಪರಭಾಷಾ ಸಿನಿಮಾಗಳಲ್ಲೂ ಬ್ಯುಸಿ ಆದಂತೆ ಕಾಣುತ್ತಿದೆ. ಈಗಾಗಲೇ ತಮಿಳು (Tamil) ಮತ್ತು ತೆಲುಗಿನಲ್ಲಿ (Telagu) ಆಶಿಕಾ ನಟಿಸಿದ್ದರು. ಸಿದ್ದಾರ್ಥ ಜೊತೆಗಿನ ಚಿತ್ರದ ಶೂಟಿಂಗ್ ಮುಗಿಸಿಕೊಂಡಿದ್ದಾರೆ. ಆ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕು. ಇದಕ್ಕೂ ಮೊದಲು ನಾಗಾರ್ಜುನ ಅಕ್ಕಿನೇನಿಗೆ ಜೋಡಿಯಾಗಿ ‘ನಾ ಸಾಮಿ ರಂಗ’ (Naa Saami Ranga) ಸಿನಿಮಾದಲ್ಲಿ ನಟಿಸಿದ್ದರು.

    ಜ.14ರಂದು ‘ನಾ ಸಾಮಿ ರಂಗ’ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ನಾಗಾರ್ಜುನ ಮತ್ತು ಆಶಿಕಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಸಿನಿಮಾ ನೋಡಿ ಅಭಿಮಾನಿಗಳು ಕೂಡ ಮೆಚ್ಚಿಕೊಂಡಿದ್ದರು. ಡ್ಯಾನ್ಸ್ ಮಾಸ್ಟರ್ ವಿಜಯ್ ಬಿನ್ನಿ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಗ್ರಾಮೀಣ ಸೊಗಡಿನ ಕಥೆಯನ್ನು ಈ ಚಿತ್ರದ ಮೂಲಕ ತೋರಿಸಿದ್ದರು. ನಾಗಾರ್ಜುನ ಅವರನ್ನು ಡಿಫರೆಂಟ್ ಆಗಿ ಅಭಿಮಾನಿಗಳಿಗೆ ತೋರಿಸುವ ಮೂಲಕ ಸದ್ದು ಮಾಡಿದ್ದರು. ಆಶಿಕಾ ಕೂಡ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದರು.

    ಈ ಸಿನಿಮಾ ಗೆಲುವು ಸಾಧಿಸುತ್ತಿರುವಂತೆ ಮತ್ತೆ ತಮಿಳು ಹಾಗೂ ತೆಲುಗು ಚಿತ್ರರಂಗಗಳಿಂದ ಆಶಿಕಾಗೆ ಅವಕಾಶ ಹುಡುಕಿ ಬಂದಿದೆ. ಅವರೇ ಹೇಳುವಂತೆ ತೆಲುಗಿನಲ್ಲೊ ಒಂದು ಹಾಗೂ ತಮಿಳಿನಲ್ಲಿ ಒಂದು ಚಿತ್ರವನ್ನು ಒಪ್ಪಿಕೊಂಡಿದ್ದಾರಂತೆ. ಎರಡೂ ಚಿತ್ರಗಳು ಶೂಟಿಂಗ್ ಶುರುವಾಗಬೇಕು.

     

    ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ 02 ಚಿತ್ರದಲ್ಲೂ ಆಶಿಕಾ ನಟಿಸಿದ್ದಾರೆ. ಮೊದಲ ಬಾರಿಗೆ ಡಾಕ್ಟರ್ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಆಶಿಕಾ ಜೊತೆ ಮುಖ್ಯಭೂಮಿಕೆಯಲ್ಲಿ ಮಲೆನಾಡಿನ ಪ್ರತಿಭೆ ಪ್ರವೀಣ್ ತೇಜ್ ನಟಿಸಿದ್ದಾರೆ.

  • ಏಪ್ರಿಲ್ 6ಕ್ಕೆ ತೆಲುಗಿನಲ್ಲಿ ರಿಲೀಸ್ ಆಗಲಿದೆ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ

    ಏಪ್ರಿಲ್ 6ಕ್ಕೆ ತೆಲುಗಿನಲ್ಲಿ ರಿಲೀಸ್ ಆಗಲಿದೆ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ

    ಲಯಾಳಂ ಸೂಪರ್ ಹಿಟ್ ಸಿನಿಮಾ ಮಂಜುಮ್ಮೇಲ್ ಬಾಯ್ಸ್ (Manjummel Boys) ಏಪ್ರಿಲ್ 6ರಂದು ತೆಲುಗಿನಲ್ಲಿ (Telugu) ಬಿಡುಗಡೆ ಆಗುತ್ತಿದೆ. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿಗಳನ್ನು ಬಾಚಿರುವ ಈ ಚಿತ್ರ ತೆಲುಗಿನಲ್ಲಿ ಹೇಗೆ ಮೋಡಿ ಮಾಡಬಹುದು ಎನ್ನುವ ಕುತೂಹಲ ಮೂಡಿದೆ. ತೆಲುಗಿಗೆ ಡಬ್ಬಿಂಗ್ ರೈಟ್ಸ್ ತಗೆದುಕೊಂಡಾಗಲೇ ಭಾರೀ ಸದ್ದು ಮಾಡಿತ್ತು. ಇದೀಗ ಅಷ್ಟೇ ಉತ್ಸಾಹದಿಂದಲೇ ತೆಲುಗಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

    ಮೊನ್ನೆಯಷ್ಟೇ ಈ ಸಿನಿಮಾವನ್ನು ವೀಕ್ಷಿಸಿದ್ದ ರಜನಿಕಾಂತ್ ಚಿತ್ರತಂಡವನ್ನು ಮನೆಗೆ ಕರೆಸಿ ಸತ್ಕರಿಸಿದ್ದರು. ಪ್ರತಿಯೊಬ್ಬ ಸದಸ್ಯನ ಶ್ರಮಕ್ಕೆ ತಲೈವಾ ಭೇಷ್ ಎಂದಿದ್ದರು. ಇಂತಹ ಸಿನಿಮಾಗಳನ್ನು ಎಲ್ಲರೂ ಮೆಚ್ಚಬೇಕು ಎಂದು ಕರೆ ನೀಡಿದ್ದರು.

    ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಕಮಲ್ ಹಾಸನ್ ನಂತರ ರಜನಿಕಾಂತ್ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ ಚಿತ್ರತಂಡವನ್ನು ರಜನಿಕಾಂತ್ ಸತ್ಕರಿಸಿದ್ದಾರೆ. ನಟರಾದ ಗಣಪತಿ, ಚಂದು ಸಲೀಂಕುಮಾರ್, ದೀಪಕ್ ಪರಂಬೋಲ್, ನಟ ಅರುಣ್ ಜೊತೆ ಡೈರೆಕ್ಟರ್ ಚಿದಂಬರಂ ಅವರು ರಜನಿಕಾಂತ್‌ರನ್ನು ಭೇಟಿಯಾಗಿ ಸಂಭ್ರಮಿಸಿದ್ದಾರೆ.

     

    ರಜನಿಕಾಂತ್ (Rajanikanth) ಅವರಿಗೆ ಯಾವುದೇ ಸಿನಿಮಾ ಅವರಿಗೆ ಇಷ್ಟವಾದಲ್ಲಿ ಆ ಚಿತ್ರತಂಡವನ್ನು ಮನೆಗೆ ಕರೆಸಿ ಉಪಚರಿಸುತ್ತಾರೆ. ಚಿತ್ರತಂಡಕ್ಕೆ ಮೆಚ್ಚುಗೆ ತಿಳಿಸುತ್ತಾರೆ. ಈ ಹಿಂದೆ ಕೂಡ ‘ಕಾಂತಾರ’ (Kantara) ಚಿತ್ರದ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರನ್ನು ಸತ್ಕರಿಸಿದ್ದರು. ‘ಕಾಂತಾರ’ ಚಿತ್ರವನ್ನು ತಲೈವಾ ಹಾಡಿ ಹೊಗಳಿದ್ದರು. ಅದಷ್ಟೇ ಅಲ್ಲ, ಚಿನ್ನದ ಚೈನ್ ಅನ್ನು ಉಡುಗೊರೆಯಾಗಿ ನೀಡಿದ್ದರು.

  • ಶಿವಣ್ಣ-ರಾಮ್ ಚರಣ್ ಕಾಂಬಿನೇಷನ್ ಚಿತ್ರಕ್ಕೆ ಮಾ.20ಕ್ಕೆ ಮುಹೂರ್ತ

    ಶಿವಣ್ಣ-ರಾಮ್ ಚರಣ್ ಕಾಂಬಿನೇಷನ್ ಚಿತ್ರಕ್ಕೆ ಮಾ.20ಕ್ಕೆ ಮುಹೂರ್ತ

    ಟ ಶಿವರಾಜ್ ಕುಮಾರ್ (Shivaraj Kumar) ಮತ್ತು ತೆಲುಗಿನ ಹೆಸರಾಂತ ನಟ ರಾಮ್ ಚರಣ್ (Ram Charan) ಕಾಂಬಿನೇಷನ್ ನ ಚಿತ್ರವೊಂದು ಮೂಡಿ ಬರಲಿದೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿಯೇ ಈ ಕಾಂಬಿನೇಷನ್ ಚಿತ್ರಕ್ಕೆ ಇದೇ ಮಾರ್ಚ್ 20ಕ್ಕೆ ಮುಹೂರ್ತ ನಡೆಯಲಿದ್ದು, ಈ ಚಿತ್ರಕ್ಕೆ ಪೆದ್ದಿ ಎಂದು ಹೆಸರಿಡಲಾಗಿದೆಯಂತೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ. ಇದು ಸಿನಿಮಾದ ಕಾನ್ಸೆಕ್ಟ್ ಕೂಡ ಆಗಿರಲಿದೆಯಂತೆ.

    ಈ ಸಿನಿಮಾದ ಕುರಿತಂತೆ ಹಲವಾರು ವಿಚಾರಗಳು ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಗಿರಕಿ ಹೊಡೆಯುತ್ತಿವೆ. ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

    ಜೈಲರ್ ಒಪ್ಪಿಕೊಳ್ಳುವಾಗಲೇ ಧನುಷ್ (Dhanush) ನಟನೆಯ ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೂ ಸಹಿ ಮಾಡಿದ್ದರು ಶಿವರಾಜ್ ಕುಮಾರ್. ನಂತರ ರಾಮ್ ಚರಣ್ ಅವರ ಸಿನಿಮಾದಲ್ಲೂ ನಟಿಸಲು ಮನಸ್ಸು ಮಾಡಿದ್ದರಂತೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ ಎನ್ನುವುದು ಹಲವರ ಲೆಕ್ಕಾಚಾರ.

     

    ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ಈ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ.

  • ಬಾಲಿವುಡ್ ಆಫರ್ ತಿರಸ್ಕರಿಸಿದ್ದು ನಿಜ : ನಟ ಮಹೇಶ್ ಬಾಬು

    ಬಾಲಿವುಡ್ ಆಫರ್ ತಿರಸ್ಕರಿಸಿದ್ದು ನಿಜ : ನಟ ಮಹೇಶ್ ಬಾಬು

    ತೆಲುಗಿನ ಹೆಸರಾಂತ ನಟ ಮಹೇಶ್ ಬಾಬು ಅವರಿಗೆ ಬಾಲಿವುಡ್ (Bollywood) ನಿಂದ ಆಫರ್ ಬಂದಿರೋ ವಿಚಾರ ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿತ್ತು. ಬಾಲಿವುಡ್ ಬಗ್ಗೆ ಸದಾ ತಾತ್ಸಾರದ ಮಾತುಗಳನ್ನು ಆಡುವ ಮಹೇಶ್ ಬಾಬು ಅವರಿಗೆ ನಿಜವಾಗಿಯೂ ಬಾಲಿವುಡ್ ನಿಂದ ಆಫರ್ ಬಂದಿದ್ಯಾ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಮಹೇಶ್ ಬಾಬು ಉತ್ತರಿಸಿದ್ದಾರೆ. ಆಫರ್ ಬಂದಿದ್ದು ನಿಜ. ಆದರೆ, ನಾನು ಅದನ್ನು ಒಪ್ಪಿಕೊಳ್ಳಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ಈ ಪ್ರತಿಕ್ರಿಯೆ ಏನೇ ಇದ್ದರೂ, ಇವರ ಮತ್ತೊಂದು ಚಿತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ನ ಚಿತ್ರ ಇನ್ನೂ ಸೆಟ್ಟೇರಿಲ್ಲ. ಕಥೆ ಕೂಡ ಲಾಕ್ ಆಗಿಲ್ಲ. ಆದರೂ, ಈ ಚಿತ್ರದ ಬಗ್ಗೆ ನಿರಂತರವಾಗಿ ನಾನಾ ರೀತಿಯ ಸುದ್ದಿಗಳು ಬರುತ್ತಲೇ ಇವೆ. ಇದೀಗ ಮಹೇಶ್ ಬಾಬು ಈ ಸಿನಿಮಾಗಾಗಿ ಸಿಕ್ಸ್ ಪ್ಯಾಕ್ (Six Pack) ಮಾಡಿಕೊಳ್ಳುತ್ತಿದ್ದಾರಂತೆ. ಈ ಸಿನಿಮಾದಲ್ಲಿ ಅವರದ್ದು ಹೊಸ ಬಗೆಯ ಪಾತ್ರವಾಗಿದ್ದರಿಂದ ಬಹಿರಂಗವಾಗಿ ಕಾಣಿಸಿಕೊಳ್ಳದಂತೆ ನಟನಿಗೆ ರಾಜಮೌಳಿ ಷರತ್ತು ಕೂಡ ಹಾಕಿದ್ದಾರಂತೆ.

    ಈ ನಡುವೆ ಚಿತ್ರದ ಟೈಟಲ್ ಬಗ್ಗೆಯೂ ಸುದ್ದಿಯೊಂದು ಹರಿದಾಡುತ್ತಿದೆ. ರಾಜಮೌಳಿ (Rajamouli) ಮತ್ತು ಮಹೇಶ್ ಬಾಬು (Mahesh Babu) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಸಿಂಪಲ್ ಆಗಿರುವಂತಹ ಶೀರ್ಷಿಕೆ (Title) ಇಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜಮೌಳಿ ಎರಡು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದರಲ್ಲಿ ಒಂದನ್ನು ಪಕ್ಕಾ ಮಾಡಲಿದ್ದಾರೆ. ಮಹಾರಾಜ್ ಅಥವಾ ಚಕ್ರವರ್ತಿ ಎನ್ನುವ ಹೆಸರನ್ನು ರಾಜಮೌಳಿ ಆಯ್ಕೆ ಮಾಡಿದ್ದಾರೆ.

    ಒಂದು ಕಡೆ ಶೀರ್ಷಿಕೆ ಪಕ್ಕಾ ಮಾಡುವಲ್ಲಿ ರಾಜಮೌಳಿ ತೊಡಗಿದ್ದರೆ ಮತ್ತೊಂದು ಕಡೆ ಈ ಸಿನಿಮಾಗೆ ಇಂಡೋನೇಷಿಯಾದ ನಟಿ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ (Chelsea Elizabeth Islan) ಅವರನ್ನು ನಾಯಕಿಯಾಗಿ ಚಿತ್ರತಂಡ ಫೈನಲ್ ಮಾಡಿದೆ ಎನ್ನುವ ಸುದ್ದಿಯೂ ಇದೆ. ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಇದರ ಜೊತೆಗೆ ಚಿತ್ರಕ್ಕೆ ಬೇಕಾಗಿರೋ ಪಾತ್ರಧಾರಿಗಳ ಹುಡುಕಾಟ ಕೂಡ ನಡೆಯುತ್ತಿದೆ.

     

    ನಟಿ ಚೆಲ್ಸಿಯಾ ಅವರನ್ನು ಕೆಲದಿನಗಳ ಹಿಂದೆ ಸ್ಕ್ರೀನ್ ಟೆಸ್ಟ್ ಕೂಡ ಮಾಡಿದ್ದರು ಎನ್ನಲಾಗುತ್ತಿದೆ. ಇಂಡೋನೇಷಿಯಾದ ಮೂಲದ ಈ ನಟಿ ‘ಟೇಂಟಂಗಾ ಮೆಸಾ ಗಿಟು’ ಹೆಸರಿನ ಟಿವಿ ಸರಣಿ ಮೂಲಕ ಜನಪ್ರಿಯತೆ ಗಳಿಸಿದವರು. ನಟ ಮಹೇಶ್ ಬಾಬುಗೆ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ ನಾಯಕಿ ಎಂಬ ಸುದ್ದಿ ಚಿತ್ರತಂಡದಿಂದ ಅಧಿಕೃತವಾಗಿ ಹೊರಬಿದ್ದಿಲ್ಲ. ಆದರೆ ಸುದ್ದಿ ಕೇಳಿರೋ ಪ್ರಿನ್ಸ್ ಮಾತ್ರ ಸಖತ್ ಖುಷಿಪಟ್ಟಿದ್ದಾರೆ. ವಿಷ್ಯ ಏನೇ ಇರಲಿ ಸಿನಿಮಾ ಬೇಗ ತೆರೆಯ ಮೇಲೆ ನೋಡಬೇಕು ಅಂತ ಅಭಿಮಾನಿಗಳು ಕಾಯ್ತಿದ್ದಾರೆ.

  • ಅಧಿಕೃತವಾಗಿ ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಸಪ್ತಮಿ

    ಅಧಿಕೃತವಾಗಿ ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಸಪ್ತಮಿ

    ತೆಲುಗು ಸಿನಿಮಾ ರಂಗಕ್ಕೆ ಕಾಂತಾರ ಬೆಡಗಿ ಸಪ್ತಮಿ ಗೌಡ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅದು ಈಗ ನಿಜವಾಗಿದೆ. ತಮ್ಮುಡು ಸಿನಿಮಾದ ಮೂಲಕ ಸಪ್ತಮಿ ತೆಲುಗು ಸಿನಿಮಾ ರಂಗವನ್ನು ಪ್ರವೇಶ ಮಾಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಕೂಡ ಶುರುವಾಗಿದೆ.

    ಈ ಹಿಂದೆ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ತಮ್ಮುಡು (Thammadu) ಚಿತ್ರದ ಮೂಲಕ ತೆಲುಗು (Telugu) ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದಂತಾಗಿದೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

    ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ  ಸಪ್ತಮಿ ಗೌಡ ನಟಿಸುತ್ತಿದ್ದಾರೆ.  ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

     

     ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ `ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾದರು. ಮತ್ತೆ ಇದೀಗ ಡಾಲಿ ಜೊತೆಯೂ ಒಂದು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉತ್ತರಕಾಂಡ ಸಿನಿಮಾದಲ್ಲೂ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

  • ರಾಮ್ ಚರಣ್ ಚಿತ್ರದಲ್ಲಿ ಶಿವಣ್ಣ: ಸದ್ಯಕ್ಕೆ ಏನೂ ಹೇಳಲಾರೆ ಎಂದ ನಟ

    ರಾಮ್ ಚರಣ್ ಚಿತ್ರದಲ್ಲಿ ಶಿವಣ್ಣ: ಸದ್ಯಕ್ಕೆ ಏನೂ ಹೇಳಲಾರೆ ಎಂದ ನಟ

    ಗಾಗಲೇ ಎರಡು ತಮಿಳು ಸಿನಿಮಾದಲ್ಲಿ ನಟಿಸಿರುವ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivaraj Kumar), ಇದೀಗ ತೆಲುಗು (Telugu) ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ತೆಲುಗಿನ ಹೆಸರಾಂತ ನಟ ರಾಮ್ ಚರಣ್ ನಟನೆಯ ಹೊಸ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

    ರಾಮ್ ಚರಣ್ (Ram Charan) ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

    ಒಂದು ವೇಳೆ ಆ ಸಿನಿಮಾದಲ್ಲಿ ಶಿವಣ್ಣ ನಟಿಸದೇ ಇದ್ದರೆ ಅಭಿಮಾನಿಗಳಿಗೆ ನಿರಾಸೆ ಆಗೋದು ಬೇಡ ಎನ್ನುವುದು ಚಿತ್ರದ ಬಗ್ಗೆ ಮಾತನಾಡದೇ ಇರುವುದಕ್ಕೆ ಕಾರಣವಂತೆ. ಮುಂದಿನ ದಿನಗಳಲ್ಲಿ ಚಿತ್ರ ತಂಡವೇ ಹಲವು ವಿಷಯಗಳನ್ನು ಹೇಳಬಹುದು ಎನ್ನುವುದು ಶಿವಣ್ಣ ಅವರ ಲೆಕ್ಕಾಚಾರ.

    ಸದ್ಯ ಶಿವರಾಜ್ ಕುಮಾರ್ ಅವರು ತಮ್ಮ ತಮಿಳಿನ ಮತ್ತೊಂದು ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಧನುಷ್ ಜೊತೆ ಆಕ್ಟ್ ಮಾಡಿರೋ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಇದೇ ಸಂಕ್ರಾಂತಿಗೆ ಬಿಡುಗಡೆ ಆಗುತ್ತಿದೆ. ನಿನ್ನೆಯಷ್ಟೇ ಹಾಡು ಕೂಡ ರಿಲೀಸ್ ಆಗಿದೆ. ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಶಿವಣ್ಣ ಕೂಡ ಭಾಗಿಯಾಗಿದ್ದರು.