Tag: telugu actress

  • ಚೆನ್ನೈನಲ್ಲಿ ನಟಿ ಕಸ್ತೂರಿ ಶಂಕರ್‌ ಅರೆಸ್ಟ್‌

    ಚೆನ್ನೈನಲ್ಲಿ ನಟಿ ಕಸ್ತೂರಿ ಶಂಕರ್‌ ಅರೆಸ್ಟ್‌

    ಚೆನ್ನೈ: ತಮಿಳುನಾಡಿನಲ್ಲಿ ತೆಲುಗು ಮಾತನಾಡುವವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ನಟಿ ಕಸ್ತೂರಿ ಶಂಕರ್‌ (Kasthuri Shankar) ಅವರನ್ನ ಹೈದರಾಬಾದ್‌ ಪೊಲೀಸರು (Hyderabad Police) ಶನಿವಾರ (ಇಂದು) ಚೆನ್ನೈನಲ್ಲಿ ಬಂಧಿಸಿದ್ದಾರೆ.

    ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ ಚೆನ್ನೈ (Chennai) ಸೇರಿದಂತೆ ತಮಿಳುನಾಡಿನ ಇನ್ನೂ ಕೆಲವು ಕಡೆ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ನಟಿ ಕಸ್ತೂರಿ ಶಂಕರ್ ರಾಜ್ಯ ಬಿಟ್ಟು ಪರಾರಿಯಾಗಿದ್ದರು. ಅದರ ಜೊತೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರಾದರೂ ಸಹ ನ್ಯಾಯಾಲಯವು ಅರ್ಜಿ ನಿರಾಕರಿಸಿದ ಬೆನ್ನಲ್ಲೇ ಇದೀಗ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಬ್ಬು ಕಟಾವು ಹಿನ್ನೆಲೆ, ಮೆಟ್ರಿಕ್ ಟನ್ ಕಬ್ಬಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ- ಬಿ.ಫೌಜಿಯಾ ತರನ್ನುಮ್

    ಇದೇ ತಿಂಗಳ ನವೆಂಬರ್‌ 3ರಂದು ʻಹಿಂದೂ ಮಕ್ಕಳ್‌ ಕಚ್ಚಿʼಯ ಸಭೆಯಲ್ಲಿ 50 ವರ್ಷ ವಯಸ್ಸಿನ ನಟಿಯ ಹೇಳಿಕೆ ಕುರಿತು ತಮಿಳುನಾಡಿನ ಬಿಜೆಪಿ ರಾಷ್ಟ್ರೀಯ ಸಹ ಉಸ್ತುವಾರಿ ಡಾ.ಪೊಂಗುಲೇಟಿ ಸುಧಾಕರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದರು. ಆ ನಂತರ ನವೆಂಬರ್‌ 6ರಂದು ನನ್ನ ಹೇಳಿಕೆ ಹಿಂಪಡೆಯುತ್ತೇನೆ ಎಂದು ಘೋಷಣೆ ಮಾಡಿದ್ದರು. ಇದನ್ನೂ ಓದಿ: 20 ವರ್ಷಗಳ ಬಳಿಕ ರಿಂಗ್‌ನಲ್ಲಿ ಘರ್ಜಿಸಿದ ಮೈಕ್‌ ಟೈಸನ್‌ – ಜೇಕ್ ಪಾಲ್ ವಿರುದ್ಧ ಸೋಲು

    ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ, ನಟಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಟಿಯ ಹೇಳಿಕೆಗಳು ದ್ವೇಷ ಭಾಷಣದಿಂದ ಕೂಡಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸುವ ಮುನ್ನ ಎರಡು ಬಾರಿ ಯೋಚಿಸಬೇಕು ಎಂದು ಪೀಠ ಹೇಳಿತ್ತು. ಅಲ್ಲದೇ ಕ್ಷಮೆ ಕೇಳಿದ ಮಾತ್ರಕ್ಕೆ ಇಂತಹ ಕ್ರಮಗಳಿಂದ ವಿನಾಯ್ತಿ ನೀಡಲಾಗುವುದಿಲ್ಲ ಎಂದೂ ಕೋರ್ಟ್‌ ಹೇಳಿತ್ತು.

    ತೆಲುಗು ಮಂದಿ:
    ಕಸ್ತೂರಿ ಶಂಕರ್‌ ಕನ್ನಡ, ತೆಲುಗು, ತಮಿಳು ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಈ ಬ್ಯೂಟಿ ರವಿಚಂದ್ರನ್‌ ಜೊತೆ ಜಾಣ, ರಮೇಶ್‌ ಜೊತೆ ತುತ್ತಾ ಮುತ್ತಾ ಸೇರಿದಂತೆ ಕೆಲವೊಂದು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳಿಂದ ದೂರಾದ ನಂತರವೂ ಕಸ್ತೂರಿ ಶಂಕರ್‌ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದರು. ಕೆಲವು ದಿನಗಳ ಹಿಂದಷ್ಟೇ ಅವರು ತೆಲುಗು ಭಾಷೆ ಮತ್ತು ತೆಲುಗು ಜನರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕಸ್ತೂರಿ ಶಂಕರ್‌ ಈ ಮಾತುಗಳು ವೈರಲ್‌ ಆಗುತ್ತಿದ್ದಂತೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ತೆಲುಗು ಮಾತನಾಡುವ ದ್ರಾವಿಡವಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಅಖಿಲ ಭಾರತ ತೆಲುಗು ಒಕ್ಕೂಟ ನಟಿ ಕಸ್ತೂರಿ ಶಂಕರ್‌ ವಿರುದ್ಧ ಚೆನೈನ ಎಗ್ಮೋರ್‌ ಪೊಲೀಸ್‌ ಠಾಣೆ ಸೇರಿ ಮಧುರೈನಲ್ಲಿಯೂ ದೂರು ದಾಖಲಿಸಲಾಗಿತ್ತು.

  • ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

    ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

    ನಾನು ಹೈದರಾಬಾದ್‍ನಲ್ಲಿ ಇದ್ದೇನೆ ಎಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಹೈಡ್ರಾಮ ಸೃಷ್ಟಿಸಿದ್ದ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

    ನಗರದ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 27ಕ್ಕೆ ವಿಚಾರಣೆಗೆ ಬರುವಂತೆ ಹೇಮಾ ಸೇರಿ ಐವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.

    ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು. ಅಲ್ಲದೇ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.

    73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.

  • ರೇವ್ ಪಾರ್ಟಿ ಸಂಕಷ್ಟ- ಹೇಮಾ ಕೂದಲು ಸ್ಯಾಂಪಲ್ ಟೆಸ್ಟ್‌ಗೆ ಮುಂದಾದ ಪೊಲೀಸ್ರು

    ರೇವ್ ಪಾರ್ಟಿ ಸಂಕಷ್ಟ- ಹೇಮಾ ಕೂದಲು ಸ್ಯಾಂಪಲ್ ಟೆಸ್ಟ್‌ಗೆ ಮುಂದಾದ ಪೊಲೀಸ್ರು

    ಬೆಂಗಳೂರು: ಇಲ್ಲಿನ ಸಿಂಗೇನ ಅಗ್ರಹಾರ ಬಳಿಯ ಜಿಆರ್ ಫಾರ್ಮ್‍ಹೌಸ್‍ನಲ್ಲಿ ನಡೀತಿದ್ದ ರೇವ್‍ಪಾರ್ಟಿ (Rave Party) ಇದೀಗ ತೆಲುಗು ನಟಿ ಹೇಮಾಗೆ ಸಂಕಷ್ಟ ತಂದೊಡ್ಡಿದೆ.

    ತೆಲುಗು ನಟಿ ಹೇಮಾ (Telugu Actress Hema) ಪಾರ್ಟಿಯಲ್ಲಿ ಇದ್ದದ್ದು ಈಗ ಜಗಜ್ಜಾಹೀರವಾಗಿದೆ. ಈ ಕುರಿತು ಖುದ್ದು ಪೊಲೀಸ್ ಆಯುಕ್ತ ದಯಾನಂದ್, ತೆಲುಗಿನ ಖ್ಯಾತ ನಟಿ ಪಾರ್ಟಿಯಲ್ಲಿ ಇದ್ದಿದ್ದನ್ನು ಬಹಿರಂಗಗೊಳಿಸಿದ್ದಾರೆ. ಇನ್ನೂ ಪಾರ್ಟಿಯಲ್ಲಿ ಇದ್ದರೂ ಕೂಡ, ನಾನು ಹೈದ್ರಾಬಾದ್‍ನಲ್ಲಿದ್ದೇನೆ ಅಂತ ನಾಟಕವಾಡಿದ್ದ ನಟಿ ಹೇಮಾಗೆ ಈಗ ಸಂಕಷ್ಟ ಎದುಗುವ ಸಾಧ್ಯತೆ ಇದೆ.

    ಸ್ಟೇಷನ್ ಬೇಲ್ ಮೇಲೆ ರಕ್ತದ ಮಾದತಿ ಕೊಟ್ಟು ಹೋಗಿರೋ ನಟಿಗೆ ಪೊಲೀಸರು ಮಾಸ್ಟರ್ ಸ್ಟ್ರೋಕ್ ಕೊಡಲು ಮುಂದಾಗಿದ್ದಾರೆ ಅನ್ನೋದು ಗೊತ್ತಾಗಿದೆ. ರೇವ್ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ್ದ ತೆಲುಗು ನಟಿ ಹೇಮಾಗೆ ಪೊಲೀಸರು ಬ್ಲಡ್ ಸ್ಯಾಂಪಲ್ ಪಡೆದು ಕಳಿಸಿದ್ದಾರೆ. ಬ್ಲಡ್ ಸ್ಯಾಂಪಲ್ ನಲ್ಲಿ ಪಾಸಿಟಿವ್ ಬಂದರೆ ಹೇರ್ ಪಾಲಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ. ಡ್ರಗ್ಸ್ ಸೇವನೆ ಮಾಡಿರೋದು ಹೇರ್ ಪಾಲಿಕಲ್ ಟೆಸ್ಟ್ ನಲ್ಲಿ ಗೊತ್ತಾಗಾಲಿದೆ. ಹಾಗಾಗಿ ಪೊಲೀಸ್ ಹೇರ್ ಪಾಲಿಕ್ ಟೆಸ್ಟ್ ಮೊರೆ ಹೋಗಲು ಮುಂದಾಗಿದ್ದಾರೆ. ಇದನ್ನೂ ಓದಿ: ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಭಾಗಿಯಾಗಿದ್ದು ನಿಜ: ಪೊಲೀಸ್ ಕಮಿಷನರ್ ಸ್ಪಷ್ಟನೆ

  • ‘ಸಾಕ್ಷಾತ್ಕರ’ ಸಿನಿಮಾದ ನಾಯಕಿ ಜಮುನಾ ವಿಧಿವಶ

    ‘ಸಾಕ್ಷಾತ್ಕರ’ ಸಿನಿಮಾದ ನಾಯಕಿ ಜಮುನಾ ವಿಧಿವಶ

    ನ್ನಡದಲ್ಲಿ ಭೂಕೈಲಾಸ, ಸಾಕ್ಷಾತ್ಕಾರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 86ರ ವಯಸ್ಸಿನ ಹಿರಿಯ ನಟಿ ಹೈದರಾಬಾದ್ ನಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

    1953ರಲ್ಲಿ ತೆರೆಕಂಡ ಪುಟ್ಟಿಲ್ಲು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದವರು ಜಮುನಾ.  ಆನಂತರ ತೆಲುಗು, ತಮಿಳು, ಹಿಂದಿ, ಕನ್ನಡ ಹೀಗೆ ನಾನಾ ಭಾಷೆಯ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ದಕ್ಷಿಣದ ಅಷ್ಟೂ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಜೊತೆ ಭೂ ಕೈಲಾಸ ಮತ್ತು ಸಾಕ್ಷಾತ್ಕಾರ ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಜಮುನಾ, ಎನ್.ಟಿ.ಆರ್. ಜಗ್ಗಯ್ಯ ಸೇರಿದಂತೆ ಆ ಕಾಲದ ಸೂಪರ್ ಸ್ಟಾರ್ ಗಳ ಜೊತೆ ನಟಿಸಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದ್ದು. ದೊಂಗ ರಾಮುಟು, ಗುಂಡಮ್ಮ ಕಥ, ತೆನಾಲಿ ರಾಮಕೃಷ್ಣ ಹೀಗೆ ಇವರ ನಟನೆಯ ಸೂಪರ್ ಹಿಟ್ ಚಿತ್ರಗಳು. ಪುಟ್ಟಣ್ಣ ಕಣಗಾಲ್ ನಿರ್ದೇಶನ ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.

    ಸಿನಿಮಾಗಳಲ್ಲಿ ಮಾತ್ರವಲ್ಲ ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಜಮುನಾ, 1980ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಅವರು 1989ರಲ್ಲಿ ರಾಜಮಂಡ್ರಿಗೆ ಎಂಪಿ ಆಗಿ ಆಯ್ಕೆಯಾದರು. 1990ರಲ್ಲಿ ಜನತಾ ಪಕ್ಷದ ಪರವಾಗಿಯೂ ಅವರು ಕೆಲಸ ಮಾಡಿದರು. ಸಿನಿಮಾ ಮತ್ತು ರಾಜಕಾರಣ ಎರಡರಲ್ಲೂ ಯಶಸ್ಸಿ ಕಂಡ ಹಿರಿಯ ಜೀವವಿದು. ನಟಿಯ ಅಗಲಿಕೆಗೆ ಚಿತ್ರೋದ್ಯಮ ಕಂಬಿನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

    ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

    ಬೆಂಗಳೂರು: ತೆಲುಗು ಸಿನೆಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗ್ತಿದೆ ಅನ್ನೋ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್ ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀ ರೆಡ್ಡಿ, ಟಾಲಿವುಡ್ ನಲ್ಲಿ ಬಹಳ ಕೀಳುಮಟ್ಟದಲ್ಲಿ ನಡೆಸಿಕೊಳ್ಳಲಾಗತ್ತೆ ಜೊತೆಗೆ ಲೈಂಗಿಕ ಕಿರುಕುಳ ಸರ್ವೇ ಸಾಮಾನ್ಯವಾಗಿದೆ ಅಂತ ಆರೋಪಿಸಿದ್ರು. ಅಲ್ಲದೇ ನಟಿ ಅರೆಬೆತ್ತಲೆಯಾಗಿ ಪ್ರತಿಭಟಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ರು. ಇದ್ರ ಬೆನ್ನಲ್ಲೇ, ಈ ಕುರಿತು ಸ್ಯಾಂಡಲ್‍ವುಡ್ ನಟಿ ಕವಿತಾ, ಅರೆಬೆತ್ತಲೆಯಾದ ವಿಡಿಯೋ ಮಾಡಿದ್ರು. ಇದನ್ನೂ ಓದಿ: ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಕನ್ನಡದ ನಟಿ ಕವಿತಾ!

    ಯಾವುದೇ ಇಂಡಸ್ಟ್ರಿ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಮಾತನಾಡಬೇಕು. ಇಲ್ಲವಾದಲ್ಲಿ ಆಯಾ ಸಿನೆಮಾ ಇಂಡಸ್ಟ್ರಿಗಳ ಲೆಜೆಂಡ್ ಗಳಿಗೆ ಅವಮಾನಮಾಡಿದಂತಾಗತ್ತೆ ಅಂತ ನಟಿ ಕವಿತಾ, ತೆಲುಗು ನಟಿ ಶ್ರೀರೆಡ್ಡಿಗೆ ವಿಡಿಯೋ ಮೂಲಕ ಟಾಂಗ್ ಕೊಟ್ಟಿದ್ರು. ಈ ಬೆನ್ನಲ್ಲೇ ನಟಿ ಕವಿತಾ ಅವರಿಗೆ ಜೀವ ಬೆದರಿಕೆ ಕರೆಗಳು ಬರ್ತಿವೆಯಂತೆ. 24 ಗಂಟೆಗಳೊಳಗಾಗಿ ನೀನು ಪೋಸ್ಟ್ ಮಾಡಿರುವ ವಿಡಿಯೋ ಡಿಲೀಟ್ ಮಾಡ್ಬೇಕು. ಅಲ್ಲದೇ ನೀನು ಅಪ್ ಲೋಡ್ ಮಾಡಿರುವ ವಿಡಿಯೋ ಬಗ್ಗೆ ಕ್ಷಮೆಯಾಚಿಸಿ ಮತ್ತೊಂದು ವಿಡಿಯೋ ಅಪ್ ಲೋಡ್ ಮಾಡ್ಬೇಕು. ಇಲ್ಲವಾದಲ್ಲಿ ನಿನ್ನ ಕಥೆ ಮುಗಿಸಲಾಗತ್ತೆ ಅಂತ ಅಪರಿಚಿತ ದುಷ್ಕರ್ಮಿಗಳು ಬೆದರಿಕೆ ಕರೆ ಮಾಡ್ತಿದ್ದಾರಂತೆ. ಇದನ್ನೂ ಓದಿ: ಶ್ರೀ ರೆಡ್ಡಿ ಬಳಿಕ ಕಾಸ್ಟಿಂಗ್ ಕೌಚ್ ಬಗ್ಗೆ ಧ್ವನಿ ಎತ್ತಿದ ಟಾಲಿವುಡ್ ನಟಿ

    ಈ ಕುರಿತು ನಟಿ ಕವಿತಾ ಶುಕ್ರವಾರ ತಡರಾತ್ರಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಲು ಬಂದಿದ್ರು. ಆದ್ರೆ ಅದು ಅವರ ವ್ಯಾಪ್ತಿಗೆ ಬಾರದ ಕಾರಣ ಉಪ್ಪಾರಪೇಟೆ ಪೊಲೀಸರು ದೂರು ಪಡೆಯದೇ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಸಲಹೆ ನೀಡಿ ಕಳುಹಿಸಿದ್ದಾರೆ. ಹೀಗಾಗಿ ಇಂದು ನಟಿ ಕವಿತಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಪೊಲೀಸರಿಗೆ ದೂರು ನೀಡಲಿದ್ದಾರೆ. ಇದನ್ನೂ ಓದಿ: ಬಾಹುಬಲಿ ಸ್ಟಾರ್ ನಟನ ಸಹೋದರ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ: ಶ್ರೀ ರೆಡ್ಡಿಯಿಂದ ಫೋಟೋ ರಿಲೀಸ್