Tag: Telugu

  • ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ಸೆಟ್ಟೇರಲಿದೆ ರಿಷಿ ಸಿನಿಮಾ

    ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ಸೆಟ್ಟೇರಲಿದೆ ರಿಷಿ ಸಿನಿಮಾ

    ವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಅವರು ನಟಿಸುತ್ತಿರುವ ಬಹುಕೋಟಿ ಬಜೆಟ್ ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ (Rishi) ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿರುತ್ತಾರೆ ಮತ್ತು ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ.

    ಈ ಚಿತ್ರ ಜೂನ್ ಎರಡರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ.   ಸಿನಿಮಾದ ಹೆಸರು. ನಿರ್ಮಾಣ ಸಂಸ್ಥೆ ಮತ್ತು ತಾರಾ ಬಳಗದ ಬಗ್ಗೆ ಜೂನ್ 2ರಂದು ಚಿತ್ರತಂಡ ತಿಳಿಸಲಿದೆ.  ಈ ಚಿತ್ರವನ್ನು ಡಿಯರ್ ವಿಕ್ರಂ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ ಎಸ್ ನಂದೀಶ್ (K.S. Nandish) ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ತಮ್ಮ ಪ್ರಥಮ ಚಿತ್ರ ಓ ಟಿ ಟಿ ಯಲ್ಲಿ ಬಿಡುಗಡೆಗೊಂಡು ಅದ್ಭುತ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ಮತ್ತು ಪ್ರೋತ್ಸಾಹ ಕೊಟ್ಟಿದೆ. ಡಿಯರ್ ವಿಕ್ರಂ ಚಿತ್ರವನ್ನು ಓಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ

    ನೈಜ ಘಟನೆಗಳ ಆದರಿಸಿದ ಚಿತ್ರ “ಡಿಯರ್ ವಿಕ್ರಂ”, ನಕ್ಸಲ್ ಮತ್ತು ರಾಜಕೀಯ ಕಥಾಂದರ ಗಳನ್ನು ಒಳಗೊಂಡ ಚಿತ್ರವಾಗಿತ್ತು. ಓ ಟಿ ಟಿ ಯಲ್ಲಿ ಬಿಡುಗಡೆಗೊಂಡ ನಂತರ ತುಂಬಾ ಜನ ಇದು ಥಿಯೇಟರ್ ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಮಾತನಾಡಿದ್ದಾರೆ..

    ಆದರೆ ನಿರ್ದೇಶಕರು ನೇರವಾಗಿ ಓಟಿಟಿ ನಲ್ಲಿ ಬಿಡುಗಡೆಗೊಂಡಿದ್ದಕ್ಕೆ ಯಾವುದೇ ಬೇಸರವಿಲ್ಲ ಯಾಕೆಂದರೆ ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ. ಥಿಯೇಟರ್ ನಷ್ಟೇ ಓಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ ಎಂದು ಹೇಳಿದ್ದಾರೆ. ಆದರೆ ಈಗ ತಯಾರಿ ನಡೆಯುತ್ತಿರುವ ಈ ಚಿತ್ರ, ಚಿತ್ರಮಂದಿರಗಳಲ್ಲಿ ಮತ್ತು ಓ ಟಿ ಟಿ ಯಲ್ಲಿ ಬಿಡುಗಡೆಗೊಳ್ಳುತ್ತದೆ.
    ತಾರಾ ಬಳಗದಲ್ಲಿ ತೆಲುಗಿನ ಕೆಲವು ಪ್ರಖ್ಯಾತ ನಟರು ಕೂಡ ನಟಿಸುತ್ತಿದ್ದಾರೆ.

  • ಖ್ಯಾ ತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆ

    ಖ್ಯಾ ತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆ

    ತೆಲುಗು (Telugu) ಸಿನಿಮಾ ರಂಗದ ಖ್ಯಾತ ಕೋರಿಯೊಗ್ರಾಫರ್ (Choreographer) ಚೈತನ್ಯ (Chaitanya) ಸಾಲಬಾಧೆ ತಾಳದೇ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸಾಕಷ್ಟು ಸಾಲ ಮಾಡಿಕೊಂಡಿದ್ದ ಚೈತನ್ಯ ಅದನ್ನು ತೀರಿಸಲಾಗದೆ ಹಲವು ದಿನಗಳಿಂದ ಮನನೊಂದಿದ್ದರು ಎನ್ನಲಾಗುತ್ತಿದೆ. ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಅವರು ಈ ಸಾವಿಗೆ ಸಾಲವೇ ಕಾರಣವೆಂದು ಹೇಳಿದ್ದಾರೆ.

    ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಅವರು ವಾಸವಿದ್ದು, ಸಾಯುವುದಕ್ಕೂ ಮುನ್ನ ವಿಡಿಯೋವೊಂದನ್ನು ಮಾಡಿದ್ದಾರೆ. ‘ನನ್ನ ತಂದೆ ತಾಯಿ ಹಾಗೂ ಸಹೋದರಿ ಚೆನ್ನಾಗಿ ನೋಡಿಕೊಂಡರು. ಆದರೆ, ನಾನು ಅನಿವಾರ್ಯ ಕಾರಣಗಳಿಂದಾಗಿ ಸಾಲ ಮಾಡಿಕೊಂಡೆ. ಅದನ್ನು ತೀರಿಸಲು ಕಷ್ಟವಾಯಿತು. ಹಾಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನೆಲ್ಲೂರಿನಲ್ಲಿ ಇಂದು ನನ್ನ ಕೊನೆಯ ದಿನ’ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಇದನ್ನು ಓದಿ:ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕಿರೀಟಕ್ಕೆ ಮತ್ತೊಂದು ಗರಿ

    ತೆಲುಗಿನ ಜನಪ್ರಿಯ ಡ್ಯಾನ್ಸ್ ಶೋ ‘ಧೀ’ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಅವರು, ಪ್ರಭುದೇವ ಸೇರಿದಂತೆ ಹಲವರೊಂದಿಗೆ ಕೆಲಸ ಮಾಡಿದ್ದಾರೆ. ಅಲ್ಲದೇ, ಅನೇಕ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿಯೂ ಕೆಲಸ ಮಾಡಿದ್ದಾರೆ. ಚೈತನ್ಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.

  • ಸಮಂತಾಗೆ ಧೈರ್ಯವಿದ್ದರೆ ನನ್ನ ಹೆಸರು ಪ್ರಸ್ತಾಪಿಸಲಿ : ನಿರ್ಮಾಪಕ ಚಿಟ್ಟಿಬಾಬು

    ಸಮಂತಾಗೆ ಧೈರ್ಯವಿದ್ದರೆ ನನ್ನ ಹೆಸರು ಪ್ರಸ್ತಾಪಿಸಲಿ : ನಿರ್ಮಾಪಕ ಚಿಟ್ಟಿಬಾಬು

    ತೆಲುಗಿನ ಹೆಸರಾಂತ ನಟಿ ಸಮಂತಾ ರುತ್ ಪ್ರಭು ಮೇಲೆ ಗುರುತರ ಆರೋಪಗಳನ್ನು ಮಾಡಿರುವ ನಿರ್ಮಾಪಕ ಚಿಟ್ಟಿಬಾಬು, ಇದೀಗ ಮತ್ತೆ ಮಾತಿನ ದಾಳಿ ಮಾಡಿದ್ದಾರೆ. ‘ನನ್ನ ವಿರುದ್ಧ ಹಾಕುತ್ತಿರುವ ಪೋಸ್ಟ್ ನಲ್ಲಿ ನನ್ನ ಹೆಸರನ್ನು ಪ್ರಸ್ತಾಪಿಸಿಲ್ಲ. ಧೈರ್ಯವಿದ್ದರೆ ಹೆಸರು ಹಾಕಲಿ, ಆಮೇಲೆ ನೋಡೋಣ. ನಾನು ಸತ್ಯಗಳನ್ನು ಬಾಯ್ಬಿಟ್ಟರೆ ಅವುಗಳನ್ನು ಎದುರಿಸುವ ಶಕ್ತಿ ಆ ನಟಿಗಿಲ್ಲ’ ಎಂದಿದ್ದಾರೆ. ಸಮಂತಾ ಹಾಗೂ ನಿರ್ಮಾಪಕ ಚಿಟ್ಟಿಬಾಬು ನಡುವಿನ ಗಲಾಟೆ ಇಲ್ಲಿಗೆ ಮುಗಿಯುವಂತೆ ಕಾಣುತ್ತಿಲ್ಲ. ಚಿಟ್ಟಿಬಾಬು ಬಗ್ಗೆ ದಿನಕ್ಕೊಂದು ಪೋಸ್ಟ್ ಮಾಡುತ್ತಿರುವ ಸಮಂತಾ ಬಗ್ಗೆ ಚಿಟ್ಟಿಬಾಬು ಮತ್ತೆ ಗುಡುಗಿದ್ದಾರೆ. ‘ನಾನೇನಾದರೂ ಮಾತಾಡಿದರೆ ಸಮಂತಾ ಕಥೆ ಅಷ್ಟೆ’ ಎಂದು ಕಿಡಿಕಾರಿದ್ದಾರೆ.

    ಕೆಲ ದಿನಗಳ ಹಿಂದೆ ಇದೇ ಚಿಟ್ಟಿಬಾಬು (Chittibabu)  ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ‘ಸಮಂತಾ ಮುಖ ಕಿತ್ತು ಹೋಗಿದೆ. ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ’ ಎಂದು ಕಾಮೆಂಟ್ ಮಾಡಿದ್ದರು. ಮುಂದುವರೆದು ಮಾತನಾಡಿದ್ದ ಅವರು ‘ಸಮಂತಾಗೆ (Samantha) ಇದೀಗ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ (Pushpa) ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂʼ (Shakuntalam) ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲೆ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ’ ಎಂದು ಚಿಟ್ಟಿಬಾಬು ಪ್ರಶ್ನೆ ಮಾಡಿದ್ದರು.

    ನಂತರ ದಿನಗಳಲ್ಲಿ ಇದೇ ನಿರ್ಮಾಪಕನಿಗೆ ಸಮಂತಾ ಸರಿಯಾಗಿ ತಿರುಗೇಟು ನೀಡಿದ್ದರು. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಒಂದು ಸ್ಕ್ರೀನ್ ಶಾಟ್ ಹಂಚಿಕೊಳ್ಳುವ ಮೂಲಕ ಅವರು ವ್ಯಂಗ್ಯ ಮಾಡಿದ್ದರು. ನೇರವಾಗಿ ಚಿಟ್ಟಿಬಾಬು ಹೆಸರನ್ನು ಸಮಂತಾ ಪ್ರಸ್ತಾಪ ಮಾಡದಿದ್ದರೂ ಕೂಡ ನೆಟ್ಟಿಗರಿಗೆ ಅರ್ಥವಾಗಿದೆ. ಚಿಟ್ಟಿಬಾಬು ಅವರ ಕಿವಿಯಲ್ಲಿ ಸಿಕ್ಕಾಪಟ್ಟೆ ಕೂದಲು ಇದೆ. ಅದರ ರಹಸ್ಯವನ್ನು ಬಹಿರಂಗಪಡಿಸುವ ಮೂಲಕ ಸಮಂತಾ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಗೂಗಲ್ ಮಾಡಿದ್ದು ಅದರ ಸ್ಕ್ರಿನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

    ಸಮಂತಾ ಶೇರ್ ಮಾಡಿರುವ ಪೋಸ್ಟ್‌ನಲ್ಲಿ ‘ಮನುಷ್ಯರ ಕಿವಿ ಮೇಲೆ ಕೂದಲು ಯಾಕೆ ಬೆಳೆಯುತ್ತದೆ’ ಎಂದು ಸಮಂತಾ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದರು. ಅದಕ್ಕೆ ಗೂಗಲ್ ತೋರಿಸಿದ ಉತ್ತರವನ್ನು ಸ್ಕ್ರೀನ್ ಶಾಟ್ ತೆಗೆದುಕೊಂಡು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಲೈಂಗಿಕ ಆಸಕ್ತಿಗೆ ಹೆಚ್ಚಿಸುವ ಟೆಸ್ಟಾಸ್ಟಿರಾನ್ ಹಾರ್ಮೋನ್ ಜಾಸ್ತಿ ಇರುವ ಪುರುಷರ ಕಿವಿಯಲ್ಲಿ ಕೂದಲು ಬೆಳೆಯುತ್ತದೆ’ ಎಂಬ ಮಾಹಿತಿ ಈ ಸ್ಕ್ರಿನ್ ಶಾಟ್‌ನಲ್ಲಿತ್ತು. ಇದು ನಿರ್ಮಾಪಕ ಚಿಟ್ಟಿಬಾಬು ಕುರಿತಾಗಿಯೇ ಸಮಂತಾ ಹೇಳಿದ್ದು, ಎಂದು ಅಭಿಮಾನಿಗಳು ಹೇಳಿದ್ದರು. ಸಮಂತಾ ಅವರ ಈ ಪೋಸ್ಟ್ ವೈರಲ್ ಆಗಿತ್ತು. ಹಾಗಾಗಿ ಚಿಟ್ಟೆ ಬಾಬು ಮತ್ತೆ ಗುಡುಗಿದ್ದಾರೆ.

  • ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

    ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

    ತೆಲುಗಿನ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಿರ್ಮಾಪಕ ಚಿಟ್ಟಿಬಾಬು ನಡುವಿನ ಗಲಾಟೆ ಇಲ್ಲಿಗೆ ಮುಗಿಯುವಂತೆ ಕಾಣುತ್ತಿಲ್ಲ. ಚಿಟ್ಟಿಬಾಬು ಬಗ್ಗೆ ದಿನಕ್ಕೊಂದು ಪೋಸ್ಟ್ ಮಾಡುತ್ತಿರುವ ಸಮಂತಾ ಬಗ್ಗೆ ಚಿಟ್ಟಿಬಾಬು ಮತ್ತೆ ಗುಡುಗಿದ್ದಾರೆ. ‘ನಾನೇನಾದರೂ ಮಾತಾಡಿದರೆ ಸಮಂತಾ ಕಥೆ ಅಷ್ಟೆ’ ಎಂದು ಕಿಡಿಕಾರಿದ್ದಾರೆ. ‘ಧೈರ್ಯವಿದ್ದರೆ ಆಕೆ ನನ್ನ ಹೆಸರನ್ನೂ ಬರೆಯಲಿ’ ಎಂದು ಸವಾಲು ಕೂಡ ಹಾಕಿದ್ದಾರೆ.

    ಕೆಲ ದಿನಗಳ ಹಿಂದೆ ಇದೇ ಚಿಟ್ಟಿಬಾಬು (Chittibabu)  ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ‘ಸಮಂತಾ ಮುಖ ಕಿತ್ತು ಹೋಗಿದೆ. ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ’ ಎಂದು ಕಾಮೆಂಟ್ ಮಾಡಿದ್ದರು. ಮುಂದುವರೆದು ಮಾತನಾಡಿದ್ದ ಅವರು ‘ಸಮಂತಾಗೆ (Samantha) ಇದೀಗ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ (Pushpa) ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂʼ (Shakuntalam) ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲೆ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ’ ಎಂದು ಚಿಟ್ಟಿಬಾಬು ಪ್ರಶ್ನೆ ಮಾಡಿದ್ದರು.

    ನಂತರ ದಿನಗಳಲ್ಲಿ ಇದೇ ನಿರ್ಮಾಪಕನಿಗೆ ಸಮಂತಾ ಸರಿಯಾಗಿ ತಿರುಗೇಟು ನೀಡಿದ್ದರು. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಒಂದು ಸ್ಕ್ರೀನ್ ಶಾಟ್ ಹಂಚಿಕೊಳ್ಳುವ ಮೂಲಕ ಅವರು ವ್ಯಂಗ್ಯ ಮಾಡಿದ್ದರು. ನೇರವಾಗಿ ಚಿಟ್ಟಿಬಾಬು ಹೆಸರನ್ನು ಸಮಂತಾ ಪ್ರಸ್ತಾಪ ಮಾಡದಿದ್ದರೂ ಕೂಡ ನೆಟ್ಟಿಗರಿಗೆ ಅರ್ಥವಾಗಿದೆ. ಚಿಟ್ಟಿಬಾಬು ಅವರ ಕಿವಿಯಲ್ಲಿ ಸಿಕ್ಕಾಪಟ್ಟೆ ಕೂದಲು ಇದೆ. ಅದರ ರಹಸ್ಯವನ್ನು ಬಹಿರಂಗಪಡಿಸುವ ಮೂಲಕ ಸಮಂತಾ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಗೂಗಲ್ ಮಾಡಿದ್ದು ಅದರ ಸ್ಕ್ರಿನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

    ಸಮಂತಾ ಶೇರ್ ಮಾಡಿರುವ ಪೋಸ್ಟ್‌ನಲ್ಲಿ ‘ಮನುಷ್ಯರ ಕಿವಿ ಮೇಲೆ ಕೂದಲು ಯಾಕೆ ಬೆಳೆಯುತ್ತದೆ’ ಎಂದು ಸಮಂತಾ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದರು. ಅದಕ್ಕೆ ಗೂಗಲ್ ತೋರಿಸಿದ ಉತ್ತರವನ್ನು ಸ್ಕ್ರೀನ್ ಶಾಟ್ ತೆಗೆದುಕೊಂಡು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಲೈಂಗಿಕ ಆಸಕ್ತಿಗೆ ಹೆಚ್ಚಿಸುವ ಟೆಸ್ಟಾಸ್ಟಿರಾನ್ ಹಾರ್ಮೋನ್ ಜಾಸ್ತಿ ಇರುವ ಪುರುಷರ ಕಿವಿಯಲ್ಲಿ ಕೂದಲು ಬೆಳೆಯುತ್ತದೆ’ ಎಂಬ ಮಾಹಿತಿ ಈ ಸ್ಕ್ರಿನ್ ಶಾಟ್‌ನಲ್ಲಿತ್ತು. ಇದು ನಿರ್ಮಾಪಕ ಚಿಟ್ಟಿಬಾಬು ಕುರಿತಾಗಿಯೇ ಸಮಂತಾ ಹೇಳಿದ್ದು, ಎಂದು ಅಭಿಮಾನಿಗಳು ಹೇಳಿದ್ದರು. ಸಮಂತಾ ಅವರ ಈ ಪೋಸ್ಟ್ ವೈರಲ್ ಆಗಿತ್ತು. ಹಾಗಾಗಿ ಚಿಟ್ಟೆ ಬಾಬು ಮತ್ತೆ ಗುಡುಗಿದ್ದಾರೆ.

  • ನಟ ಚಲಕಿ ಛಂಟಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ನಟ ಚಲಕಿ ಛಂಟಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ತೆಲುಗು (Telugu) ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಚಲಕಿ ಛಂಟಿಗೆ (Chalaki Chanti) ಹೃದಯಾಘಾತವಾಗಿದ್ದು (Heart Attack), ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರವೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಕೂಡಲೇ ಅವರನ್ನು ಹೈದರಾಬಾದ್ (Hyderabad) ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

    ವೈದ್ಯರ ಮಾಹಿತಿಯ ಪ್ರಕಾರ ಚಲಕಿ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರಂತೆ. ಮೊದಲು ಚಲಕಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ. ವೈದ್ಯರು ತಪಾಸಣೆ ವೇಳೆ ಹಾರ್ಟ್ ಅಟ್ಯಾಕ್ ಆಗಿರುವುದು ದೃಢಪಟ್ಟಿದೆ. ಕೂಡಲೇ ಅವರಿಗೆ ವೈದ್ಯರು ಚಿಕಿತ್ಸೆ ಪ್ರಾರಂಭಿಸಿದ್ದಾರೆ.  ಇದನ್ನೂ ಓದಿ:ಕುಟುಂಬ ಸಮೇತ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ

    ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ಚಲಕಿ ಅವರ ನಿಜವಾದ ಹೆಸರು ವಿನಯ್ ಮೋಹನ್. ನಟನೆ ಕಾರಣದಿಂದಾಗಿ ಹೆಸರು ಬದಲಾಯಿಸಿಕೊಂಡಿದ್ದಾರೆ. ಬಿಗ್ ಬಾಸ್ (Bigg Boss)ತೆಲುಗು 6ನೇ ಆವೃತ್ತಿಯಲ್ಲಿ ಇವರು ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ, ಹಲವಾರು ಕಾಮಿಡಿ ಟಿವಿ ಶೋಗಳನ್ನು ಇವರು ಮಾಡಿದ್ದಾರೆ.

  • ದಿನದ ಲೆಕ್ಕದಲ್ಲಿ ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ ಪವನ್ ಕಲ್ಯಾಣ್

    ದಿನದ ಲೆಕ್ಕದಲ್ಲಿ ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ ಪವನ್ ಕಲ್ಯಾಣ್

    ಕ್ಷಿಣ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಸಂಭಾವನೆ (Remuneration) ಪಡೆಯುವ ನಟರ ಪಟ್ಟಿಯಲ್ಲಿ ತಮಿಳು ಮತ್ತು ತೆಲುಗು (Telugu) ನಟರೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಚಿತ್ರವೊಂದಕ್ಕೆ  ಕನಿಷ್ಠ ಹತ್ತು ಕೋಟಿಯಿಂದ ಗರಿಷ್ಠ ನೂರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ನಟರು ಅಲ್ಲಿದ್ದಾರೆ. ಹಾಗಾಗಿ ಸಂಭಾವನೆ ವಿಚಾರ ಬಂದರೆ ರಜನಿಕಾಂತ್, ಕಮಲ್ ಹಾಸನ್, ದಳಪತಿ ವಿಜಯ್, ಪವನ್ ಕಲ್ಯಾಣ್ (Pawan Kalyan) , ಚಿರಂಜೀವಿ, ಜ್ಯೂನಿಯರ್ ಎನ್.ಟಿ.ಆರ್ ಹೀಗೆ ಪ್ರಮುಖ ನಟರ ಹೆಸರು ಕೇಳಿ ಬರುತ್ತವೆ. ಇವರ ಸಂಭಾವನೆ ವಿಚಾರ ನಾನಾ ರೀತಿಯಲ್ಲೂ ಚರ್ಚೆ ಆಗಿದ್ದಿದೆ. ಆದರೆ, ಈವರೆಗೂ ಅಧಿಕೃತವಾಗಿ ಯಾರೂ ತಮ್ಮ ಸಂಭಾವನೆ ಬಗ್ಗೆ ಮಾತನಾಡಿರಲಿಲ್ಲ.

    ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ್ ಅಧಿಕೃತವಾಗಿ ತಮ್ಮ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. ತಾವು ಚಿತ್ರವೊಂದಕ್ಕೆ ಎಷ್ಟು ಸಂಭಾವನೆ ಪಡೆಯುತ್ತೇನೆ ಮತ್ತು ಎಷ್ಟು ದಿನ ಕಾಲ್ ಶೀಟ್ ನೀಡುತ್ತೇನೆ ಎನ್ನುವ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಜನಸೇನಾ ಪಕ್ಷದ 10ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ತಮ್ಮ ಸಂಭಾವನೆ ಎಷ್ಟು ಮತ್ತು ಹೇಗೆ ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ. ಇದನ್ನೂ ಓದಿ: ಡಾಲಿ ನಟನೆಯ `ಹೊಯ್ಸಳ’ ಚಿತ್ರದ ಟೈಟಲ್ ಬದಲಾಗಿದ್ದೇಕೆ?

    ಪವನ್ ಕಲ್ಯಾಣ್ ಜನಸೇನಾ (Janasena) ಪಕ್ಷ ಕಟ್ಟಿದಾಗಿನಿಂದ ಅವರ ಸಂಭಾವನೆ ವಿಚಾರವಾಗಿ ವಿರೋಧಿಗಳು ಮಾತನಾಡುತ್ತಲೇ ಇದ್ದರು. ಅಭಿಮಾನಿಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷ ಕಟ್ಟುತ್ತಿದ್ದಾರೆ. ಆ ಪಕ್ಷದ ಹಿಂದೆ ಹಣ ಮಾಡುವ ಉದ್ದೇಶವಿದೆ ಎಂದು ಟೀಕೆ ಮಾಡಿದ್ದೂ ಇದೆ. ಅದೆಲ್ಲದಕ್ಕೂ ಉತ್ತರ ನೀಡಿರುವ ಪವನ್ ಕಲ್ಯಾಣ್, ‘ನನಗೆ ದುಡ್ಡಿನ ಚಿಂತೆ ಇಲ್ಲ. ನಾನು ದುಡ್ಡು ಮಾಡುವುದಕ್ಕೂ ಬಂದಿಲ್ಲ. ಸಿನಿಮಾ ಒಪ್ಪಿಕೊಂಡರೆ ದಿನಕ್ಕೆ 2 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತೇನೆ. ಒಂದು ಚಿತ್ರಕ್ಕೆ 22 ದಿನಗಳ ಕಾಲ್ ಶೀಟ್ ಕೊಡುವೆ. 44 ಕೋಟಿ ರೂಪಾಯಿ ಬರುತ್ತದೆ. ಊಟ ಮಾಡುವುದೇ ದಿನಕ್ಕೆ ಒಂದೇ ಸಲ’ ಎಂದು ಭಾವುಕರಾಗಿ ಮಾತನಾಡಿದ್ದಾರೆ.

    ತಮ್ಮ ಭಾಷಣದಲ್ಲಿ ಸಂಭಾವನೆಯ ವಿಚಾರವಷ್ಟೇ ಅಲ್ಲ, ತಾವು ಚಿತ್ರಕ್ಕೆ ಕೊಡುವ ಡೇಟ್ ಬಗ್ಗೆಯೂ ಮಾಹಿತಿಯನ್ನು ಹೊರ ಹಾಕಿದ್ದಾರೆ. ಕೋಟಿ ಕೋಟಿ ಸಂಪಾದನೆಯನ್ನು ಸಿನಿಮಾದಲ್ಲೇ ಮಾಡುತ್ತೇನೆ. ಅದಕ್ಕೆ ರಾಜಕೀಯಕ್ಕೆ ಬರಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಜನಸೇವೆಗೆ ತಾವು ಜನಸೇನಾ ಪಕ್ಷ ಕಟ್ಟಿರುವುದಾಗಿಯೂ ತಿಳಿಸಿದ್ದಾರೆ.

  • ತೆಲುಗಿನ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಪತ್ನಿ ಕೆ.ಜಯಲಕ್ಷ್ಮಿ ನಿಧನ

    ತೆಲುಗಿನ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಪತ್ನಿ ಕೆ.ಜಯಲಕ್ಷ್ಮಿ ನಿಧನ

    ಶಂಕರಾಭರಣಂ  ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ತೆಲುಗಿನ (Telugu) ಹೆಸರಾಂತ ನಿರ್ದೇಶಕ ಕೆ.ವಿಶ್ವನಾಥ್ (K. Vishwanath) ಪತ್ನಿ ಕೆ.ಜಯಲಕ್ಷ್ಮಿ (Jayalakshmi) ನಿಧನರಾಗಿದ್ದಾರೆ (Passed Away). ಕೆ.ವಿಶ್ವನಾಥ್ ವಿಧಿವಶರಾಗಿ 24 ದಿನಗಳ ನಂತರ ಪತ್ನಿಯೂ ನಿಧನರಾಗಿದ್ದಾರೆ. ಹಾಗಾಗಿ ವಿಶ್ವನಾಥ್ ಕುಟುಂಬಕ್ಕೆ ಎರಡೆರಡು ಆಘಾತ ಎದುರಿಸಬೇಕಾಗಿದೆ. ಜಯಲಕ್ಷ್ಮಿಗೆ 88 ವರ್ಷ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

    ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಹುಟ್ಟಿದ್ದ ಜಯಲಕ್ಷ್ಮಿ, 22ನೇ ವಯಸ್ಸಿನಲ್ಲಿ ವಿಶ್ವನಾಥ್ ಅವರ ಜೊತೆ ಸಪ್ತಪದಿ ತುಳಿದಿದ್ದರು. 60ಕ್ಕೂ ಹೆಚ್ಚು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದಾರೆ. ಪತಿಯ ನಿಧನಾನಂತರ ಅವರ ಆರೋಗ್ಯ ಮತ್ತಷ್ಟು ಹದೆಗೆಟ್ಟಿತ್ತು ಎಂದು ಹೇಳಲಾಗುತ್ತಿದೆ. ಇಂದು ಹೈದರಾಬಾದ್ (Hyderabad) ನಲ್ಲಿರುವ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

    ಸಾಗರ ಸಂಗಮಂ, ಸ್ವರ್ಣ ಕಮಲಂ ಚಿತ್ರಗಳನ್ನು ಪತಿಯು ನಿರ್ದೇಶನ ಮಾಡಿದಾಗ, ಸದಾ ಅವರ ಬೆಂಬಲವಾಗಿ ನಿಂತವರು ಜಯಲಕ್ಷ್ಮಿ. ಪತಿಯು ಸಿನಿಮಾ ರಂಗದಲ್ಲಿ ಬ್ಯುಸಿಯಾದಾಗ ಇಡೀ ಕುಟುಂಬವನ್ನು ನಿಭಾಯಿಸಿಕೊಂಡು ಹೋಗುತ್ತಿದ್ದರಂತೆ. ಪತಿಯ ಬೇಕು ಬೇಡಿಕೆಗಳಿಗೆ ಜಯಲಕ್ಷ್ಮಿ ಇರಲೇಬೇಕು ಎನ್ನುವಂತಹ ದಾಂಪತ್ಯ ಜೀವನ ಇವರದ್ದಾಗಿತ್ತು ಎನ್ನುತ್ತಾರೆ ಅವರ ಆಪ್ತರು.

  • ನಟಿ ರಶ್ಮಿಗೆ ನಾನಾ ರೀತಿಯಲ್ಲಿ ಕೊಲೆ ಬೆದರಿಕೆ : ದೂರು ನೀಡಲು ಚಿಂತನೆ

    ನಟಿ ರಶ್ಮಿಗೆ ನಾನಾ ರೀತಿಯಲ್ಲಿ ಕೊಲೆ ಬೆದರಿಕೆ : ದೂರು ನೀಡಲು ಚಿಂತನೆ

    ತೆಲುಗು ಸಿನಿಮಾ ರಂಗದ ಹೆಸರಾಂತ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದಿಲ್ಲೊಂದು ಫೋಟೋ ಹಾಗೂ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದವರು, ಇದ್ದಕ್ಕಿದ್ದಂತೆ ಆಘಾತ ಮೂಡಿಸುವಂತಹ ಪೋಸ್ಟ್ ವೊಂದನ್ನು ಹಾಕಿದ್ದಾರೆ. ಇಂತಹ ಘಟನೆಗಳು ಇತ್ತೀಚಿಗೆ ಹೆಚ್ಚಾಗುತ್ತಿರುವ ಕುರಿತು ಅವರು ಕಳವಳ ವ್ಯಕ್ತ ಪಡಿಸಿದ್ದಾರೆ.

    ತೆಲುಗು ಚಿತ್ರರಂಗದಲ್ಲಿ ರಶ್ಮಿಗೆ ಸಾಕಷ್ಟು ಬೇಡಿಕೆಯಿದೆ. ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎನ್ನುವ ಕೀರ್ತಿಗೂ ಅವರು ಪಾತ್ರರಾಗಿದ್ದಾರೆ. ಅಲ್ಲದೇ, ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ನಟಿಯನ್ನು ಫಾಲೋ ಮಾಡುತ್ತಾರೆ. ಅದೇ ಸೋಷಿಯಲ್ ಮೀಡಿಯಾದಲ್ಲಿ ಅವರಿಗೆ ಆಸಿಡ್ ಹಾಕುವ ಹಾಗೂ ಕಾರಿನಿಂದ ಗುದ್ದಿಸಿ ಸಾಯಿಸುವ ಕುರಿತು ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ಅನ್ನು ಅವರು ಶೇರ್ ಮಾಡಿದ್ದಾರೆ. ಇದನ್ನೂ ಓದಿ: KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    ಈ ಹಿಂದೆ ಕೆಲವರು ನನ್ನ ಮದುವೆ ಬಗ್ಗೆ ಕಾಳಜಿ ತೋರುತ್ತಿದ್ದರು. ಬೇಗ ಮದುವೆ ಆಗು ಎನ್ನುತ್ತಿದ್ದರು. ಇದೀಗ ಆಸಿಡ್ ಹಾಕುವುದಾಗಿ, ಆಕ್ಸಿಡೆಂಟ್ ಮಾಡಿಸಿ ಸಾಯಿಸುವುದಾಗಿ ಹೇಳುತ್ತಿದ್ದಾರೆ. ಇಂಥವರಿಗೆ ಏನು ಮಾಡೋದು? ದೂರು ಕೊಡಲೆ? ಎಂದು ಅದೇ ಸೋಷಿಯಲ್ ಮೀಡಿಯಾದಲ್ಲಿ ಕೇಳಿದ್ದಾರೆ. ಈ ರೀತಿಯ ಬೆದರಿಕೆಗಳನ್ನು ಗಂಭೀರವಾಗಿ ತಗೆದುಕೊಳ್ಳಬೇಕೋ? ಅಥವಾ ಸುಮ್ಮನೆ ಇದ್ದುಬಿಡಬೇಕು ಎನ್ನುವ ಗೊಂದಲವನ್ನೂ ಅವರು ವ್ಯಕ್ತ ಪಡಿಸಿದ್ದಾರೆ.

    ಈ ರೀತಿಯಲ್ಲಿ ವ್ಯಕ್ತಿಗಳು ಕಾಮೆಂಟ್ ಮಾಡುವುದಕ್ಕೆ ಕಾರಣ ಏನು ಎನ್ನುವುದನ್ನು ಅವರೇ ಹೇಳಿಕೊಂಡಿದ್ದಾರೆ. ಕಾಮೆಂಟ್ ಮಾಡಿದವರು ಸ್ಕ್ರೀನ್ ಶಾಟ್ ತಗೆದು ಅದನ್ನು ಅವರು ಪೋಸ್ಟ್ ಮಾಡಿದ್ದಾರೆ. ಒಂದು ಪೋಸ್ಟ್ ನಲ್ಲಿ ನಿನಗೆ ವಯಸ್ಸಾಗುತ್ತಿದೆ, ಬೇಗ ಮದುವೆಯಾಗು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ನಿನ್ನ ಪಾಡಿಗೆ ನೀನು ಇರು. ಇಷ್ಟಬಂದಂತೆ ವರ್ತಿಸಬೇಡ ಎಂದಿದೆ.

  • ಮಾನಸಿಕ ಖಿನ್ನತೆಯೇ ನಟ ಸುಧೀರ್ ಆತ್ಮಹತ್ಯೆಗೆ ಕಾರಣ

    ಮಾನಸಿಕ ಖಿನ್ನತೆಯೇ ನಟ ಸುಧೀರ್ ಆತ್ಮಹತ್ಯೆಗೆ ಕಾರಣ

    ನಿನ್ನೆಯಷ್ಟೇ ತೆಲುಗಿನ ಯುವನಟ ಸುಧೀರ್ ವರ್ಮಾ (Sudhir Verma) ಆತ್ಮಹತ್ಯೆಗೆ (Suicide) ಶರಣಾಗಿದ್ದರು. ಸುಂದರವಾದ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದ ಈ ನಟ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಹಜವಾಗಿ ಸಿನಿಮಾ ರಂಗವನ್ನು ದಿಗಿಲು ಮೂಡಿಸಿತ್ತು. ಸುಧೀರ್ ಸಾವಿಗೆ ಶರಣಾಗಲು ಕಾರಣವೇನು ಎನ್ನುವ ಚರ್ಚೆ ಕೂಡ ನಡೆದಿತ್ತು. ಈ ನಟನನ್ನು ಹತ್ತಿರದಿಂದ ಬಲ್ಲವರು ಹೇಳುವ ಪ್ರಕಾರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ಅವಕಾಶಕ್ಕಾಗಿ ಅಲೆಯುತ್ತಿದ್ದವರಿಗೆ ಸೂಕ್ತ ಮನ್ನಣೆ ಸಿಗದೇ ಇರುವ ಕಾರಣದಿಂದಾಗಿ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಇವರು ಮೆಗಾಸ್ಟಾರ್ ಚಿರಂಜೀವಿ (Chiranjeevi) ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ (Shootout) ವೆಬ್ ಸಿರೀಸ್ ನಲ್ಲಿ ನಟಿಸಿದ್ದರು. ಅಲ್ಲದೇ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ನಂತರ ಅವಕಾಶಕ್ಕಾಗಿ ಅಲೆಯುತ್ತಿದ್ದರು. ಅಂದುಕೊಂಡಿದ್ದು ಆಗದೇ ಇರುವ ಕಾರಣಕ್ಕಾಗಿ ಅವರು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿಚಿತ್ರರಂಗ ನನ್ನ ಸ್ವತ್ತಲ್ಲ, ಕೆಸಿಸಿಗೆ ಎಲ್ಲರಿಗೂ ಆಹ್ವಾನವಿದೆ: ಕಿಚ್ಚ ಸುದೀಪ್

    ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸೆಕೆಂಡ್ ಹ್ಯಾಂಡ್, ಕುಂದನಪು ಬೊಮ್ಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಸುಧೀರ್, ಎರಡೂ ಚಿತ್ರಗಳ ಮೂಲಕ ಒಳ್ಳೆಯ ಹೆಸರನ್ನು ಸಂಪಾದಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಹಾಗಾಗಿ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಜ್ಯೂನಿಯರ್ ಆರ್ಟಿಸ್ಟ್ ಆಗಿ ಸಿನಿಮಾ ರಂಗಕ್ಕೆ ಬಂದವರು, ನಂತರ ಕಷ್ಟಪಟ್ಟು ನಾಯಕನ ಸ್ಥಾನ ಏರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತೆಲುಗು ಯುವನಟ ಸುಧೀರ್ ಆತ್ಮಹತ್ಯೆ: ಚಿತ್ರೋದ್ಯಮಕ್ಕೆ ಮತ್ತೊಂದು ಆಘಾತ

    ತೆಲುಗು ಯುವನಟ ಸುಧೀರ್ ಆತ್ಮಹತ್ಯೆ: ಚಿತ್ರೋದ್ಯಮಕ್ಕೆ ಮತ್ತೊಂದು ಆಘಾತ

    ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ (Shootout) ವೆಬ್ ಸಿರೀಸ್ ನಲ್ಲಿ ನಟಿಸಿದ್ದ ಹಾಗೂ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು (Telugu) ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ (Sudhir Verma) ಇಹಲೋಕ ತ್ಯಜಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

    ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇಂದು ಅಥವಾ ನಾಳೆ ಸುಧೀರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗದೇ ಇದ್ದರೂ, ವೈಯಕ್ತಿಕ ಕಾರಣಕ್ಕಾಗಿ ಅವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಾನ್ಯ ಅಯ್ಯರ್‌ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್‌ ಆದ ನೆಟ್ಟಿಗರು

    ಸೆಕೆಂಡ್ ಹ್ಯಾಂಡ್, ಕುಂದನಪು ಬೊಮ್ಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಸುಧೀರ್, ಎರಡೂ ಚಿತ್ರಗಳ ಮೂಲಕ ಒಳ್ಳೆಯ ಹೆಸರನ್ನು ಸಂಪಾದಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಹಾಗಾಗಿ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಜ್ಯೂನಿಯರ್ ಆರ್ಟಿಸ್ಟ್ ಆಗಿ ಸಿನಿಮಾ ರಂಗಕ್ಕೆ ಬಂದವರು, ನಂತರ ಕಷ್ಟಪಟ್ಟು ನಾಯಕನ ಸ್ಥಾನ ಏರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k