Tag: Telugu

  • ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ವಾರ ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಥಿಯೇಟರ್ (Theatre) ಸಿಗುತ್ತಾ ಎನ್ನುವ ಆತಂಕ ಎದುರಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಸಾಮಾನ್ಯವಾಗಿ ತೆಲುಗು ಮತ್ತು ತಮಿಳಿನ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುವುದು ವಾಡಿಕೆ. ಈ ಬಾರಿಯೂ ಅಂತಹ ದೊಡ್ಡ ಬಜೆಟ್  ಮತ್ತು ಹೆಸರಾಂತ ನಟರೇ ನಟಿಸಿರುವ ಚಿತ್ರಗಳು ತೆರೆ ಕಾಣುತ್ತಿವೆ. ಆ ನಟರ ಚಿತ್ರಗಳು ಕರ್ನಾಟಕದಲ್ಲೂ ಈ ಹಿಂದೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿವೆ. ಹೀಗಾಗಿ ಕನ್ನಡ ಚಿತ್ರಗಳಿಗೆ ಅವುಗಳಿಂದಾಗಿ ನಾನಾ ಸಮಸ್ಯೆಗಳು ಎದುರಾಗಬಹುದು.

    ತಮಿಳಿನ ಹೆಸರಾಂತ ನಟ ವಿಜಯ್ (Vijay) ಹಾಗೂ ರಶ್ಮಿಕಾ ಮಂದ‍ಣ್ಣ ಕಾಂಬಿನೇಷನ್ ನ ‘ವಾರಿಸು’ ಮತ್ತು ಅಜಿತ್ ಕುಮಾರ್ (Ajith) ನಟನೆಯ ‘ತುನಿವು’ ಸಿನಿಮಾ ಜನವರಿ 11 ರಂದು ತೆರೆ ಕಾಣುತ್ತಿವೆ. ತೆಲುಗಿನ ಖ್ಯಾತ ನಟ ಬಾಲಕೃಷ್ಣ (Balayya) ಮತ್ತು ಕನ್ನಡದ ದುನಿಯಾ ವಿಜಯ್ ವಿಲನ್ ಆಗಿ ನಟಿಸಿರುವ ‘ವೀರಸಿಂಹ ರೆಡ್ಡಿ’ ಚಿತ್ರ ಜನವರಿ 12 ರಂದು ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಅಲ್ಲದೇ, ಜನವರಿ 13ಕ್ಕೆ ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟನೆಯ ‘ವಾಲ್ತೇರು ವೀರಯ್ಯ’ ಕೂಡ ರಿಲೀಸ್ ಆಗುತ್ತಿದೆ. ಈ ಸಿನಿಮಾಗಳಲ್ಲಿ ಕೆಲವು ಕನ್ನಡಕ್ಕೆ ಡಬ್ ಆಗಿಯೂ ಬಿಡುಗಡೆ ಆಗುತ್ತಿವೆ. ಹಾಗಾಗಿ ಕನ್ನಡ ಸಿನಿಮಾಗಳಿಗೆ ಥಿಯೇಟರ್ ಸಿಗುತ್ತವಾ ಎನ್ನುವುದೇ ಆತಂಕಕ್ಕೆ ಕಾರಣವಾಗಿವೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ರು ತಮನ್ನಾ

     

    ಎದುರಾಗಬಹುದಾದ ಇಂತಹ ಆತಂಕವನ್ನು ಗಮನಿಸಿಯೇ ತೆಲುಗು ಚಿತ್ರರಂಗ ಈ ಹಿಂದೆ ತೀರ್ಮಾನವೊಂದನ್ನು ತಗೆದುಕೊಂಡಿದೆ. ಮೊದಲ ತೆಲುಗು ಸಿನಿಮಾಗಳಿಗೆ ಥಿಯೇಟರ್ ಕೊಡಬೇಕು. ನಂತರ ಇತರ ಭಾಷೆಯ ಚಿತ್ರಗಳಿಗೆ ಅವಕಾಶ  ನೀಡಬೇಕು ಎಂದು. ಆದರೂ, ತೆಲುಗು ವಿತರಕ ದಿಲ್ ರಾಜು, ಈ ನಿಯಮಕ್ಕೆ ಸೆಡ್ಡು ಹೊಡೆದು ತಮಿಳಿನ ವಾರಿಸು ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ, ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಿಗೆ ರಿಲೀಸ್ ಮಾಡಲು ಹೊರಟಿದ್ದರು. ಈ ವಿಷಯದಲ್ಲಿ ಕೊನೆಗೂ ದಿಲ್ ರಾಜು ಸೋತಿದ್ದಾರೆ. ಚಿತ್ರೋದ್ಯಮದ ಒಗ್ಗಟ್ಟಿನ ಪರಿಣಾಮವಾಗಿ, ಹೆಚ್ಚಿನ ಸಂಖ್ಯೆಯ ಥಿಯೇಟರ್ ಗಳು ತೆಲುಗು ಚಿತ್ರಗಳಿಗೆ ಸಿಕ್ಕಿವೆ. ಅಲ್ಲದೇ ಡಬ್ ಸಿನಿಮಾ ರಿಲೀಸ್ ದಿನಾಂಕವನ್ನು ಅವರು ಮೂರು ದಿನಗಳ ಕಾಲ ಮುಂದೂಡಿದ್ದಾರೆ.

    ಕನ್ನಡ ಚಿತ್ರೋದ್ಯಮದಲ್ಲಿ ಇಂತಹ ಯಾವುದೇ ನಿಯಮಗಳಿಲ್ಲ. ಒಗ್ಗಟ್ಟಿನ ಮಂತ್ರವೂ ಇಲ್ಲ. ಹಾಗಾಗಿ ದೊಡ್ಡ ದೊಡ್ಡ ಪರಭಾಷಾ ಚಿತ್ರಗಳು ತೆರೆಕಂಡಾಗ ಕನ್ನಡದ ನಿರ್ಮಾಪಕರು ಥಿಯೇಟರ್ ಗಾಗಿ ಪರದಾಡಿದ ಸಾಕಷ್ಟು ಉದಾಹರಣೆಗಳಿವೆ. ಈ ವಾರ ಕೂಡ ಕನ್ನಡದ ಅನೇಕ ಚಿತ್ರಗಳಿಗೆ ಬೇಡಿಕೆಗೆ ತಕ್ಕಂತೆ ಚಿತ್ರಮಂದಿರಗಳು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡು ವರ್ಷ ಮೊದಲೇ 30ನೇ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಜ್ಯೂ.ಎನ್.ಟಿ.ಆರ್

    ಎರಡು ವರ್ಷ ಮೊದಲೇ 30ನೇ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಜ್ಯೂ.ಎನ್.ಟಿ.ಆರ್

    ಭಿಮಾನಿಗಳ ಜೊತೆ ಸಂಭ್ರಮವನ್ನು ಹಂಚಿಕೊಳ್ಳುವುದರಲ್ಲಿ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಯಾವತ್ತಿಗೂ ಮುಂದು. ಸಮಯ ಸಿಕ್ಕಾಗೆಲ್ಲ ಒಂದಲ್ಲ ಒಂದು ವಿಷಯದ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಯಾವತ್ತಿಗೂ ಅವರು ಸಮಯಪಾಲನೆ ಮಾಡುತ್ತಾರೆ. ಈ ಹೊಸ ವರ್ಷಕ್ಕೂ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎರಡು ವರ್ಷ ಮೊದಲೇ ತಮ್ಮ 30ನೇ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

    ಆ ಹೊಸ ಸಿನಿಮಾದ ಶೂಟಿಂಗ್ ಇನ್ನೂ ಶುರುವಾಗಿಲ್ಲ, ಚಿತ್ರಕ್ಕೆ ಟೈಟಲ್ ಕೂಡ ಇಟ್ಟಿಲ್ಲ. ಮುಂದಿನ ತಿಂಗಳಿಂದ ಚಿತ್ರೀಕರಣ ಆರಂಭ ಮಾಡುವುದಾಗಿ ಅಷ್ಟೇ ಹೇಳಿದ್ದಾರೆ. ಆದರೂ, ಆ ಸಿನಿಮಾವನ್ನು 5 ಏಪ್ರಿಲ್ 2024ಕ್ಕೆ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಪಕ್ಕಾ ತಯಾರಿ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ನಲ್ಲಿ ತೊಡಗುವುದರಿಂದ ಅಂದುಕೊಂಡ ದಿನಾಂಕದಂದೇ ಆ ಸಿನಿಮಾವನ್ನು ರಿಲೀಸ್ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾನ್ಯ ಮನೆಯಿಂದ ಮದುವೆ ಪ್ರಪೋಸಲ್ ಬಂದರೆ ರೂಪೇಶ್ ಶೆಟ್ಟಿ ಹೇಳೋದೇನು?

    ಅಂದಹಾಗೆ ಈ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ವಿಭಿನ್ನ ಚಿತ್ರಗಳನ್ನು ಮಾಡುವುದರಲ್ಲಿ ಶಿವ ಎತ್ತಿದ ಕೈ. ಅದರಲ್ಲೂ ಮಾಸ್ ಸಿನಿಮಾಗಳನ್ನು ಮಾಡುವುದರಲ್ಲಿ ಸಿದ್ಧಹಸ್ತರು. ಹಾಗಾಗಿ ಜ್ಯೂನಿಯರ್ ನಟನೆಯ 30ನೇ ಸಿನಿಮಾ ಕೂಡ ಪಕ್ಕಾ ಮಾಸ್ ಎಂಟರ್ ಟೈನರ್ ಎಂದು ಹೇಳಲಾಗುತ್ತಿದೆ. ಭರ್ಜರಿ ಸಾಹಸ ಸನ್ನಿವೇಶಗಳನ್ನೂ ಈ ಚಿತ್ರ ಒಳಗೊಂಡಿರಲಿದೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    ಈ ಸಿನಿಮಾ ಮುಗಿಸುತ್ತಿದ್ದಂತೆಯೇ ಜ್ಯೂನಿಯರ್ ಎನ್.ಟಿ.ಆರ್ ಮತ್ತೊಂದು ಸಿನಿಮಾಗೆ ತಯಾರಿ ಮಾಡಿಕೊಳ್ಳಬೇಕಿದೆ. ಈ ಸಿನಿಮಾವನ್ನು ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ. ಅಲ್ಲದೇ, ಈ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಕೂಡ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೊಂದು ಫ್ಯಾಂಟಸಿ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಕುರಿತು ಅಷ್ಟೇನೂ ಮಾಹಿತಿಯನ್ನು ಜ್ಯೂನಿಯರ್ ಇನ್ನೂ ಹಂಚಿಕೊಂಡಿಲ್ಲ. ಇದು ಅವರ 31ನೇ ಸಿನಿಮಾ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ನಿನ್ನೆ ನಿಧನರಾದ ಕೈಕಾಲ ಸತ್ಯನಾರಾಯಣ ಜೊತೆ 30 ಚಿತ್ರಗಳಲ್ಲಿ ನಟಿಸಿದ್ದರು ಸುಮಲತಾ ಅಂಬರೀಶ್

    ನಿನ್ನೆ ನಿಧನರಾದ ಕೈಕಾಲ ಸತ್ಯನಾರಾಯಣ ಜೊತೆ 30 ಚಿತ್ರಗಳಲ್ಲಿ ನಟಿಸಿದ್ದರು ಸುಮಲತಾ ಅಂಬರೀಶ್

    ತೆಲುಗು ಸಿನಿಮಾ ರಂಗದ ದಂತಕಥೆ, ಸಾವಿರಾರು ಚಿತ್ರಗಳಲ್ಲಿ ನಟಿಸಿರುವ ಕೈಕಾಲ ಸತ್ಯನಾರಾಯಣ (Satyanarayana) ಅವರ ನಿಧನಕ್ಕೆ ಸಂಸದೆ, ನಟಿ ಸುಮಲತಾ (Sumalatha Ambarish) ಕಂಬನಿ ಮೀಡಿದಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದಲ್ಲಿ ಅವರು ತಂದೆಯ ಪಾತ್ರ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ಮೂವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರೊಂದಿಗೆ ನಟಿಸಿದ್ದನ್ನು ಸ್ಮರಿಸಿದ್ದಾರೆ. ಹಿರಿಯ ನಿಧನಕ್ಕೆ ಸಂತಾಪ ವ್ಯಕ್ತ ಪಡಿಸಿ, ಮೃತರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ.

    ಕೈಕಾಲ ಸತ್ಯನಾರಾಯಣ ಅವರು ನಿನ್ನೆ ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಮುಂಜಾನೆ ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಐದು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿರುವ ಇವರು, 1962ರಲ್ಲಿ ತೆರೆಗೆ ಬಂದ ರಾಜಕುಮಾರ್ ನಟನೆಯ ಸ್ವರ್ಣಗೌರಿ ಸಿನಿಮಾದಲ್ಲಿ ಇವರು ಶಿವನ ಪಾತ್ರಧಾರಿಯಾಗಿ ನಟಿಸಿದ್ದಾರೆ.

    ಸಿಪಾಯಿ ಕೂತುರು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಸತ್ಯನಾರಾಯಣ ಈವರೆಗೂ ಏಳು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಎನ್.ಟಿ.ಆರ್ ಸೇರಿದಂತೆ ಅನೇಕ ಹೆಸರಾಂತ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ನಾಲ್ಕು ವರ್ಷಗಳ ಹಿಂದೆ ತೆರೆಕಂಡ  ಮಹೇಶ್ ಬಾಬು ನಟನೆಯ ಮಹರ್ಷಿ ಇವರ ನಟನೆಯ ಕೊನೆಯ ಸಿನಿಮಾವಾಗಿದೆ. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    1935ರ ಜುಲೈ 25 ರಂದು ಆಂಧ್ರಪ್ರದೇಶದಲ್ಲಿ ಜನಿಸಿರುವ ಸತ್ಯನಾರಾಯಣ, ಸಿನಿಮಾ ರಂಗದ ಮೇಲೆ ಸೆಳೆತ ಹಾಗೂ ರಂಗಭೂಮಿ ಮೇಲಿನ ಒಲವಿನಿಂದಾಗಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು. ವಿವಿಧ ಪಾತ್ರಗಳೇ ಅವರನ್ನು ಮತ್ತಷ್ಟು ಅವಕಾಶ ಸಿಗುವಂತೆ ಮಾಡಿದವು. ನಾಗೇಶ್ವರಮ್ಮ ಅವರನ್ನು ಮದುವೆಯಾಗಿರುವ ಈ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಸತ್ಯನಾರಾಯಣ ಅವರ ನಿಧನಕ್ಕೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಟ ಕೈಕಾಲ ಸತ್ಯನಾರಾಯಣ ನಿಧನ

    ಹಿರಿಯ ನಟ ಕೈಕಾಲ ಸತ್ಯನಾರಾಯಣ ನಿಧನ

    ತೆಲುಗು ಸಿನಿಮಾ ರಂಗದ ಹಿರಿಯ ನಟ ಹಾಗೂ ಕನ್ನಡದ ಡಾ.ರಾಜಕುಮಾರ್ (Rajkumar) ಜೊತೆ ನಟಿಸಿದ್ದ ಕೈಕಾಲ ಸತ್ಯನಾರಾಯಣ (Satyanarayana) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಐದು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿರುವ ಇವರು, 1962ರಲ್ಲಿ ತೆರೆಗೆ ಬಂದ ರಾಜಕುಮಾರ್ ನಟನೆಯ ಸ್ವರ್ಣಗೌರಿ ಸಿನಿಮಾದಲ್ಲಿ ಇವರು ಶಿವನ ಪಾತ್ರಧಾರಿಯಾಗಿ ನಟಿಸಿದ್ದಾರೆ.

    ಸಿಪಾಯಿ ಕೂತುರು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಸತ್ಯನಾರಾಯಣ ಈವರೆಗೂ ಏಳು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಎನ್.ಟಿ.ಆರ್ ಸೇರಿದಂತೆ ಅನೇಕ ಹೆಸರಾಂತ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ನಾಲ್ಕು ವರ್ಷಗಳ ಹಿಂದೆ ತೆರೆಕಂಡ  ಮಹೇಶ್ ಬಾಬು ನಟನೆಯ ಮಹರ್ಷಿ ಇವರ ನಟನೆಯ ಕೊನೆಯ ಸಿನಿಮಾವಾಗಿದೆ. ಇದನ್ನೂ ಓದಿ: ‘ಪುಷ್ಪಾ 2’ ಟೀಮ್ ಸೇರಿಕೊಂಡ ನಟಿ ಸಾಯಿ ಪಲ್ಲವಿ: ರಶ್ಮಿಕಾ ಮಂದಣ್ಣ ಪಾತ್ರವೇನು?

    1935ರ ಜುಲೈ 25 ರಂದು ಆಂಧ್ರಪ್ರದೇಶದಲ್ಲಿ ಜನಿಸಿರುವ ಸತ್ಯನಾರಾಯಣ, ಸಿನಿಮಾ ರಂಗದ ಮೇಲೆ ಸೆಳೆತ ಹಾಗೂ ರಂಗಭೂಮಿ ಮೇಲಿನ ಒಲವಿನಿಂದಾಗಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು. ವಿವಿಧ ಪಾತ್ರಗಳೇ ಅವರನ್ನು ಮತ್ತಷ್ಟು ಅವಕಾಶ ಸಿಗುವಂತೆ ಮಾಡಿದವು. ನಾಗೇಶ್ವರಮ್ಮ ಅವರನ್ನು ಮದುವೆಯಾಗಿರುವ ಈ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಸತ್ಯನಾರಾಯಣ ಅವರ ನಿಧನಕ್ಕೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ಪರಭಾಷೆಯಲ್ಲೂ ಶಿವರಾಜ್ ಕುಮಾರ್ ಬ್ಯುಸಿ : ಎರಡು ತಮಿಳು, ಒಂದು ತೆಲುಗು ಚಿತ್ರದಲ್ಲಿ ನಟನೆ

    ಪರಭಾಷೆಯಲ್ಲೂ ಶಿವರಾಜ್ ಕುಮಾರ್ ಬ್ಯುಸಿ : ಎರಡು ತಮಿಳು, ಒಂದು ತೆಲುಗು ಚಿತ್ರದಲ್ಲಿ ನಟನೆ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivraj Kumar) ಭಾರತೀಯ ಸಿನಿಮಾ ರಂಗದಲ್ಲೇ ಹೆಚ್ಚು ಬ್ಯುಸಿ ಇರುವಂತಹ ನಟ. ಒಂದು ಅಂದಾಜಿನ ಪ್ರಕಾರ ಇನ್ನೂ ಹತ್ತು ವರ್ಷಕ್ಕೆ ಆಗುವಷ್ಟು ಸಿನಿಮಾಗಳನ್ನು ಶಿವಣ್ಣ ಒಪ್ಪಿಕೊಂಡಿದ್ದಾರೆ ಎನ್ನುವುದು ಗಾಂಧಿನಗರದ ಮಾತು. ನಿರಂತರವಾಗಿ ಕನ್ನಡ ಸಿನಿಮಾಗಳನ್ನೇ ಮಾಡುತ್ತಾ ಬಂದಿರುವ ಅವರು, ಇದೀಗ ಪರಭಾಷೆಯಲ್ಲೂ ಬ್ಯುಸಿಯಾಗುತ್ತಿದ್ದಾರೆ. ಎರಡು ತಮಿಳು (Tamil) ಮತ್ತು ಒಂದು ತೆಲುಗು ಚಿತ್ರವನ್ನು ಅವರು ಒಪ್ಪಿಕೊಂಡಿದ್ದಾರೆ.

    ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಹೊಸ ಸಿನಿಮಾದಲ್ಲಿ ಈಗಾಗಲೇ ಶಿವರಾಜ್ ಕುಮಾರ್ ನಟಿಸಿ ಬಂದಿದ್ದು, ಮತ್ತೋರ್ವ ತಮಿಳು ನಟ ಧನುಷ್ (Dhanush) ಅವರ ಚಿತ್ರಕ್ಕೂ ಅವರು  ಸಹಿ ಮಾಡಿದ್ದಾರೆ. ಎರಡೂ ಸಿನಿಮಾದಲ್ಲೂ ಅವರು ಪ್ರಮುಖ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಈ ನಡುವೆ ತೆಲುಗು ಸಿನಿಮಾವನ್ನು ಒಪ್ಪಿಕೊಂಡಿರುವುದಾಗಿ ಸ್ವತಃ ಶಿವರಾಜ್ ಕುಮಾರ್ ಅವರೇ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಈ ವಯಸ್ಸಲ್ಲೂ ಶಿವರಾಜ್ ಕುಮಾರ್ ನಿರಂತರವಾಗಿ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಯುವ ನಟರಿಗೆ ಮಾದರಿ ಆಗುತ್ತಿದ್ದಾರೆ. ಅಲ್ಲದೇ, ಅವರು ಒಪ್ಪಿಕೊಂಡ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನೇ ನಿರ್ವಹಿಸುತ್ತಿದ್ದಾರೆ. ಈ ಕಾರಣದಿಂದಾಗಿಯೇ ಇನ್ನೂ ಹಲವು ವರ್ಷಗಳ ಕಾಲ ಶಿವರಾಜ್ ಕುಮಾರ್ ಬುಕ್ ಆಗಿದ್ದಾರೆ. ಈಗಾಗಲೇ 125ನೇ ಸಿನಿಮಾವನ್ನು ಪೂರೈಸಿರುವ ಶಿವರಾಜ್ ಕುಮಾರ್, ಅತೀ ವೇಗದಲ್ಲೇ ಸೆಂಚ್ಯುರಿ ಕೂಡ ಹೊಡೆದಿದ್ದರು.

    ಸಿನಿಮಾಗಳಲ್ಲಿ ನಟನೆಯ ಜೊತೆ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆಯನ್ನೂ ಶುರು ಮಾಡಿದ್ದಾರೆ. ಈ ಸಂಸ್ಥೆಯ ಮೂಲಕ ವರ್ಷಕ್ಕೆ ಹಲವು ಸಿನಿಮಾಗಳನ್ನು ತಯಾರಿಸುವ ಗುರಿಯನ್ನೂ ಹೊಂದಿದ್ದಾರೆ. ಕೇವಲ ಸಿನಿಮಾಗಳನ್ನು ಮಾತ್ರವಲ್ಲ, ವೆಬ್ ಸೀರಿಸ್ ಅನ್ನು ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಸಂಸ್ಥೆಯನ್ನು ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ನಿರ್ವಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರಿಪ್ರಿಯಾ-ವಸಿಷ್ಠ ಸಿಂಹ ಪ್ರೇಮ್ ಕಹಾನಿಗೆ ಈ ತೆಲುಗು ಸಿನಿಮಾ ಕಾರಣ

    ಹರಿಪ್ರಿಯಾ-ವಸಿಷ್ಠ ಸಿಂಹ ಪ್ರೇಮ್ ಕಹಾನಿಗೆ ಈ ತೆಲುಗು ಸಿನಿಮಾ ಕಾರಣ

    ಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಮದುವೆ ಆಗುತ್ತಿರುವ ವಿಚಾರ ಸ್ಯಾಂಡಲ್ ವುಡ್ ನಲ್ಲಿ ಅಚ್ಚರಿಗೆ ಕಾರಣವಾಗಿದೆ. ಯಾವುದೇ ಸುಳಿವು ಕೊಡದೇ ಏಕಾಏಕಿಯಾಗಿ ಇಂಥದ್ದೊಂದು ಸುದ್ದಿ ಕೊಟ್ಟ ತಾರೆಯರು, ಭೇಟಿಯಾಗಿದ್ದು ಎಲ್ಲಿ? ಪ್ರೇಮ ಶುರುವಾಗಿದ್ದು ಯಾವಾಗ? ಮೊದಲು ಪ್ರಪೋಸ್ ಮಾಡಿದ್ದು ಯಾರು ಇತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ. ಇವರಿಬ್ಬರೂ ಪರಸ್ಪರ ಪ್ರೇಮಿಸೋಕೆ ಶುರು ಮಾಡಿದ್ದು ತೆಲುಗು ಸಿನಿಮಾವೊಂದರಿಂದ ಎಂದು ಹೇಳಲಾಗುತ್ತಿದೆ.

    ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ತೆಲುಗಿನ ‘ಎವರು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಬೇಕಿದೆ. ಈ ಸಿನಿಮಾದಲ್ಲೇ ಇವರಿಬ್ಬರೂ ಪರಸ್ಪರ  ಅರ್ಥ ಮಾಡಿಕೊಂಡರು ಎಂದು ಹೇಳಲಾಗುತ್ತಿದೆ. ಅಲ್ಲದೇ, ಗೆಳೆತನ ಗಟ್ಟಿಯಾಗಿ ಆ ನಂತರವಷ್ಟೇ ಮದುವೆ ಆಗುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎನ್ನುತ್ತಾರೆ ಆಪ್ತರು. ಮದುವೆ ಕುರಿತಾಗಿ ಇಷ್ಟೊಂದು ಸುದ್ದಿಯಾದರೂ, ವಸಿಷ್ಠ ಆಗಲಿ ಅಥವಾ ಹರಿಪ್ರಿಯಾ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಮೊನ್ನೆಯಷ್ಟೇ ನಟಿ ಹರಿಪ್ರಿಯಾಗೆ ಮೂಗು ಚುಚ್ಚಿಸಿಕೊಂಡಿದ್ದರು. ಆ ಎಕ್ಸಿಪೀರಿಯನ್ಸ್ ಕೂಡ ಹಂಚಿಕೊಂಡಿದ್ದರು. ಸಡನ್ನಾಗಿ ಹರಿಪ್ರಿಯಾ ಮೂಗು ಚುಚ್ಚಿಕೊಳ್ಳಲು ಕಾರಣವೇನು ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಸದ್ಯದಲ್ಲೇ ಹರಿಪ್ರಿಯಾ ಮದುವೆ ಆಗುತ್ತಿದ್ದು, ಮದುವೆಯ ಮುನ್ನ ಹೊಸ ಜೀವನಕ್ಕೆ ಕಾಲಿಡುತ್ತಿರುವ ಹುಡುಗನೇ ಹರಿಪ್ರಿಯಾಗೆ ಮೂಗು ಚುಚ್ಚಿಸಿದ್ದಾರೆ. ಆ ಹುಡುಗ ಬೇರೆ ಯಾರೂ ಅಲ್ಲ, ನಟ ವಸಿಷ್ಠ ಸಿಂಹ ಎನ್ನುವುದು ವಿಶೇಷ.

    ಮೂಗು ಚುಚ್ಚಿಸಿಕೊಂಡ ವಿಡಿಯೋದಲ್ಲಿ ವಸಿಷ್ಠ ಸಿಂಹ ಕೂಡ ಇದ್ದು, ಅವರೇ ಮುಂದೆ ನಿಂತು ತನ್ನ ಹುಡುಗಿಗೆ ಮೂಗು ಚುಚ್ಚಿಸಿದ್ದಾರೆ. ವಿಡಿಯೋ ಹಂಚಿಕೊಂಡ ಸಂದರ್ಭದಲ್ಲಿ ಆ ಹುಡುಗ ಯಾರು ಎಂದು ಗೊತ್ತಾಗಿರಲಿಲ್ಲ. ಇಬ್ಬರ ಮದುವೆ ವಿಚಾರ ಹೊರಬೀಳುತ್ತಿದ್ದಂತೆಯೇ ವಿಡಿಯೋದಲ್ಲಿ ವಸಿಷ್ಠ ಇರುವುದನ್ನು ಪತ್ತೆ ಮಾಡಲಾಗಿದೆ. ಆ ವಿಡಿಯೋ ಮತ್ತೆ ಈಗ ವೈರಲ್ ಕೂಡ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಮೆಗಾಸ್ಟಾರ್ ಚಿರಂಜೀವಿಗೆ  IFFI ವ್ಯಕ್ತಿತ್ವ ಪ್ರಶಸ್ತಿ: ಹಾಡಿ ಹೊಗಳಿದ ಪ್ರಧಾನಿ ಮೋದಿ

    ಮೆಗಾಸ್ಟಾರ್ ಚಿರಂಜೀವಿಗೆ IFFI ವ್ಯಕ್ತಿತ್ವ ಪ್ರಶಸ್ತಿ: ಹಾಡಿ ಹೊಗಳಿದ ಪ್ರಧಾನಿ ಮೋದಿ

    ಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್ ಪ್ರಶಸ್ತಿಯು ಮೆಗಾಸ್ಟಾರ್ ಮತ್ತು ನಟ-ನಿರ್ಮಾಪಕ ಚಿರಂಜೀವಿ ಕೊನಿಡೇಲ ಅವರಿಗೆ ಸಂದಿದೆ.  ಗೋವಾದಲ್ಲಿ ಇಂದು ನಡೆದ  ಐಎಫ್‌ಎಫ್‌ಐನ 53ನೇ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಈ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಈ ಪ್ರಶಸ್ತಿ ಪಡೆದ ಚಿರಂಜೀವಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ನಾಲ್ಕು ದಶಕಗಳಿಗೂ ಹೆಚ್ಚು ಕಾಲ  ಚಲನಚಿತ್ರರಂಗದಲ್ಲಿರುವ   ಚಿರಂಜೀವಿ ಇದೂವರೆಗೂ  ತೆಲುಗಿನಲ್ಲಿ 150 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ, ಜೊತೆಗೆ ಹಿಂದಿ, ತಮಿಳು ಮತ್ತು ಕನ್ನಡದ ಕೆಲವು ಚಲನಚಿತ್ರಗಳಲ್ಲಿ ಕೂಡ ಚಿರಂಜೀವಿ‌ ಅಭಿನಯಿಸಿದ್ದಾರೆ.  ಚಿರಂಜೀವಿ ಅವರು ತೆಲುಗು ಚಿತ್ರರಂಗದ ಅತ್ಯಂತ ಯಶಸ್ವಿ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಇದನ್ನೂ ಓದಿ:ರೂಪೇಶ್ ರಾಜಣ್ಣ ಸ್ವಾರ್ಥ ಬುದ್ದಿಗೆ ಶಿಕ್ಷೆ ಕೊಟ್ರು ಸುದೀಪ್‌

     ಅವರು 1982 ರಲ್ಲಿ “ಇನಿತ್ಲೋ ರಾಮಯ್ಯ ವೀಡಿಲೋ ಕೃಷ್ಣಯ್ಯ” ಚಿತ್ರದಲ್ಲಿ  ಮೊದಲ ಬಾರಿಗೆ ನಟಿಸಿ  ತಮ್ಮ ಅಭಿನಯದ ಮೂಲಕ ಜನಮಾನಸವನ್ನು ತಮ್ಮತ್ತ ಸೆಳೆದುಕೊಂಡರು. ಅವರ ಉತ್ಸಾಹಭರಿತ ನೃತ್ಯ ಪ್ರದರ್ಶನಗಳು ಮತ್ತು ಶಕ್ತಿಯುತ  ಹೋರಾಟದ  ದೃಶ್ಯಗಳಿಂದಾಗಿ ಜನರ ಇನ್ನಷ್ಟು  ಮೆಚ್ಚುಗೆ ಪಡೆದಿದ್ದಾರೆ. ಇವರ  ಈ ಆಕರ್ಷಕ ನಟನೆ ಹಾವಭಾವ ಶೈಲಿಯ ಪ್ರಭಾವವೇ ಅವರಿಗೆ “ಮೆಗಾಸ್ಟಾರ್” ಎಂಬ ಬಿರುದನ್ನು ತಂದುಕೊಟ್ಟಿದೆ. 2006 ರಲ್ಲಿ, ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

    ಐಎಫ್‌ಎಫ್‌ಐ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಕಾರ್ಯಕ್ರಮದ ವೇದಿಕೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರಿಗೆ  ಈ ಪ್ರಶಸ್ತಿಯನ್ನು ಘೋಷಿಸಿದ್ದಾರೆ.  ಈ ಪ್ರಶಸ್ತಿಯು ಸಿನಿಮಾ, ಜನಪ್ರಿಯ ಸಂಸ್ಕೃತಿ ಮತ್ತು ಸಾಮಾಜಿಕವಾಗಿ ಮಹತ್ವದ ಕಲಾತ್ಮಕ ಕೆಲಸಕ್ಕಾಗಿ ಅವರು ನೀಡಿರುವ  ಕೊಡುಗೆಗಳಿಂದಾಗಿ ಜನರಿಂದ (ಪ್ರೇಕ್ಷಕರಿಂದ) ಹೆಚ್ಚು ಆರಾಧಿಸಲ್ಪಟ್ಟ ಮೆಗಾಸ್ಟಾರ್‌ಗೆ  ಈ ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರಶಸ್ತಿಯು ಚಿರಂಜೀವಿ ಅವರಿಗೆ ರಾಷ್ಟ್ರವು ನೀಡುವ ಮನ್ನಣೆಯಾಗಿದೆ.

    ಈ ಸಂದರ್ಭದಲ್ಲಿ ಈ ಹಿರಿಯ ನಟನನ್ನು ಅಭಿನಂದಿಸಿ ಮಾತನಾಡಿದ  ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್‌, ಚಿರಂಜೀವಿ ಅವರು ಸುಮಾರು ನಾಲ್ಕು ದಶಕಗಳ ಕಾಲ ಸುದೀರ್ಘವಾಗಿ ಚಲನಚಿತ್ರ ರಂಗದಲ್ಲಿ ತೊಡಗಿಸಿಕೊಳ್ಳುವ  ವೃತ್ತಿಜೀವನವನ್ನು ಹೊಂದಿದ್ದಾರೆ, ನಟ, ನರ್ತಕ ಹಾಗೂ  ನಿರ್ಮಾಪಕರಾಗಿ 150 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ನಟಿಸಿದ್ದಾರೆ ಎಂದರು.

    ಚಿರಂಜೀವಿ ಅವರು  ತೆಲುಗು ಚಿತ್ರರಂಗದಲ್ಲಿ ಅಗಾಧವಾದ ಜನಪ್ರಿಯತೆಯನ್ನು ಹೊಂದುವ  ಮೂಲಕ ತಮ್ಮ ಅಭಿನಯದಿಂದಾಗಿ ಪ್ರೇಕ್ಷಕರ (ಜನರ) ಮನೆ,ಮನ, ಹೃದಯಗಳನ್ನು ಸ್ಪರ್ಶಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಇನ್ನು  ಚಿತ್ರರಂಗದ ದಿಗ್ಗಜರಾದ ಹಿರಿಯ ನಟರಾದ ವಹೀದಾ ರೆಹಮಾನ್, ರಜನಿಕಾಂತ್, ಇಳಯರಾಜ, ಎಸ್.ಪಿ.ಬಾಲಸುಬ್ರಹ್ಮಣ್ಯಂ, ಅಮಿತಾಬ್ ಬಚ್ಚನ್, ಸಲೀಂ ಖಾನ್, ಬಿಸ್ವಜಿತ್ ಚಟರ್ಜಿ, ಹೇಮಾ ಮಾಲಿನಿ ಮತ್ತು ಪ್ರಸೂನ್ ಜೋಷಿ ಅವರು ಈ ಹಿಂದೆ  IFFI (ಐಎಫ್‌ಎಫ್‌ಐ) ವ್ಯಕ್ತಿತ್ವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ನಿರ್ಮಾಪಕರೊಬ್ಬರು ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ ಮಾಡಿದ ಘಟನೆ ತೆಲುಗು ಚಿತ್ರೋದ್ಯಮದಲ್ಲಿ ನಡೆದಿದೆ. ತೆಲುಗು ಸಿನಿಮಾ ರಂಗದಲ್ಲಿ ಸಾಕಷ್ಟು ಹಿಟ್ ಸಿನಿಮಾಗಳನ್ನು ತಯಾರಿಸಿದ ನಿರ್ಮಾಪಕ ಹಾಗೂ ವಿತರಕರೂ ಆಗಿರುವ ಬನ್ನಿ ವಾಸು ಆಫೀಸ್ ಮುಂದೆ ಹೈಡ್ರಾಮಾ ನಡೆದಿದ್ದು, ನಟಿ ಸುನಿತಾ ಬೋಯಾ ಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಬೆಳಗ್ಗೆ ಬನ್ನಿ ವಾಸು ಅವರ ಗೀತಾ ಆರ್ಟ್ಸ್ ಕಚೇರಿ ಮುಂದೆ ಬಂದ ನಟಿ ಸುನಿತಾ ಬೋಯಾ, ಬೆತ್ತಲೆಯಾಗಿ ಪ್ರತಿಭಟನೆಗೆ ಕೂತಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಟಿಯನ್ನು ವಶಕ್ಕೆ ಪಡೆದಿದ್ದಾರೆ. ಆನಂತರ ಆಕೆಗೆ ಬಟ್ಟೆ ಹಾಕಿ ಸಮಾಧಾನದ ಮಾತುಗಳನ್ನೂ ಆಡಿದ್ದಾರೆ. ಸುನಿತಾಗೆ ಆದ ಮೋಸವನ್ನು ಕೇಳಿದ್ದಾರೆ. ನಂತರ ಆಕೆಗೆ ಸ್ವಲ್ಪ ಹಣ ಕೊಟ್ಟೂ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

    ಬನ್ನಿ ವಾಸು ನಿರ್ಮಾಣದ ಧಾರಾವಾಹಿಯಲ್ಲಿ ಸುನಿತಾ ನಟಿಸುತ್ತಿದ್ದರಂತೆ. ಅವರಿಗೆ ಕೊಡಬೇಕಾದ ಹಣವನ್ನು ಪಾವತಿಸಿಲ್ಲವಂತೆ. ಹಾಗಾಗಿ ತಮಗೆ ಬದುಕು ನಡೆಸಲೂ ಕಷ್ಟವಾಗುತ್ತಿದೆ. ನನಗೆ ದುಡ್ಡು ಕೊಡದೇ ಸತಾಯಿಸುತ್ತಿದ್ದಾರೆ ಎಂದು ನಟಿ ಪೊಲೀಸ್ ಮುಂದೆ ಹೇಳಿಕೊಂಡಿದ್ದಾರೆ. ಕೂಡಲೇ ವಾಸು ಅವರನ್ನು ಪೊಲೀಸರು ಸಂಪರ್ಕಿಸಿ, ಹಣ ಕೊಡುವ ಭರವಸೆಯನ್ನೂ ನಟಿಗೆ ಕೊಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಡಬ್ಬಿಂಗ್ ಸಿನಿಮಾದಿಂದ ತೆಲುಗು ಚಿತ್ರೋದ್ಯಮಕ್ಕೆ ಹಾನಿ: ಒಟ್ಟಾದ ನಿರ್ಮಾಪಕರು

    ಡಬ್ಬಿಂಗ್ ಸಿನಿಮಾದಿಂದ ತೆಲುಗು ಚಿತ್ರೋದ್ಯಮಕ್ಕೆ ಹಾನಿ: ಒಟ್ಟಾದ ನಿರ್ಮಾಪಕರು

    ರಭಾಷೆಯ ಚಿತ್ರಗಳು ತೆಲುಗಿಗೆ ಡಬ್ ಆಗಿ ಬಂದು ಮೂಲ ತೆಲುಗು ಸಿನಿಮಾಗಳಿಗೆ ತೊಂದರೆ ಮಾಡುತ್ತಿವೆ ಎಂದು ಅಲ್ಲಿನ ನಿರ್ಮಾಪಕರು ದೂರಿದ್ದಾರೆ. ಈ ಕಾರಣದಿಂದಾಗಿಯೇ ಅವರು ಮಹತ್ವದ ನಿರ್ಣಯವೊಂದನ್ನು ತಗೆದುಕೊಂಡಿದ್ದು, ಹಬ್ಬಗಳಲ್ಲಿ ಹೆಚ್ಚೆಚ್ಚು ತೆಲುಗು ಸಿನಿಮಾಗಳಿಗೆ ಚಿತ್ರಮಂದಿರ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ, ಡಬ್ಬಿಂಗ್ ಸಿನಿಮಾಗಳಿಗೆ ಕಡಿವಾಣ ಹಾಕುವಂತಹ ಕೆಲಸಗಳು ಆಗಬೇಕು ಎಂದು ಹೇಳಿದ್ದಾರೆ.

    ಡಬ್ಬಿಂಗ್ ಸಿನಿಮಾಗಳಿಂದ ಮೂಲ ತೆಲುಗು ಚಿತ್ರಗಳಿಗೆ ಹಾನಿ ಆಗುತ್ತಿರುವುದನ್ನು ಗಮನಿಸಿ ಇಂಥದ್ದೊಂದು ತೀರ್ಮಾನ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡ ಹಬ್ಬಗಳಲ್ಲಿ ಈ ಬಾರಿ ತೆಲುಗಿಗಿಂತ ಬೇರೆ ಭಾಷೆ ಚಿತ್ರಗಳೇ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದು, ಅಲ್ಲಿನ ನಿರ್ಮಾಪಕರಿಗೆ ನಿದ್ದೆಗೆಡಿಸಿದೆ. ಅಲ್ಲದೇ, ಕೆಲವರು ಬೇರೆ ಭಾಷೆಯ ಸಿನಿಮಾಗಳಿಗೆ ಮಣೆ ಹಾಕುತ್ತಿರುವುದರಿಂದ ತೆಲುಗು ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ:ದೊಡ್ಮನೆಯಲ್ಲಿ ರಂಪಾಟ: ಕೈ ಕೈ ಮಿಲಾಯಿಸಿದ ಸಂಬರ್ಗಿ-ಗೊಬ್ಬರಗಾಲ

    ನಿರ್ಮಾಪಕರೆಲ್ಲ ಒಟ್ಟಾಗಿ ತೆಲುಗು ಚಿತ್ರೋದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಹಲವು ಮೀಟಿಂಗ್ ಗಳನ್ನು ಮಾಡಿದ್ದು, ಅದರಲ್ಲಿ ಕೆಲ ನಿರ್ಣಯಗಳನ್ನೂ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ದೊಡ್ಡ ಹಬ್ಬಗಳಲ್ಲಿ ಚಿತ್ರಮಂದಿರಗಳು ತೆಲುಗು ಸಿನಿಮಾಗೇ ಮೀಸಲಿಡಬೇಕು. ಆ ವೇಳೆಯಲ್ಲಿ ಆದಷ್ಟು ಡಬ್ಬಿಂಗ್ ಸಿನಿಮಾಗಳನ್ನು ದೂರಿಡಬೇಕು ಎನ್ನುವುದು ಅಲ್ಲಿನ ನಿರ್ಮಾಪಕರ ಆಗ್ರಹ ಕೂಡ ಆಗಿದೆಯಂತೆ.

    ತೆಲುಗು ನಿರ್ಮಾಪಕರು ಅಂಥದ್ದೊಂದು ನಿರ್ಧಾರ ತಗೆದುಕೊಳ್ಳಲು ನೇರವಾಗಿ ಕೆಜಿಎಫ್ 2, ಕಾಂತಾರ ಸಿನಿಮಾ  ಕಾರಣ ಎನ್ನವ ಚರ್ಚೆಯೂ ಆಗುತ್ತಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಬಾಚಿದ್ದರಿಂದ ನಿರ್ಮಾಪಕರು ಒಟ್ಟಾಗಿ, ಚರ್ಚಿಸಿ ಇಂಥದ್ದೊಂದು ತೀರ್ಮಾನ ತಗೆದುಕೊಳ್ಳಲು ಒಂದಾಗಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಕಲ ಸರಕಾರಿ ಗೌರವದೊಂದಿಗೆ ಇಂದು ಸೂಪರ್ ಸ್ಟಾರ್ ಕೃಷ್ಣ ಅವರ ಅಂತ್ಯಕ್ರಿಯೆ

    ಸಕಲ ಸರಕಾರಿ ಗೌರವದೊಂದಿಗೆ ಇಂದು ಸೂಪರ್ ಸ್ಟಾರ್ ಕೃಷ್ಣ ಅವರ ಅಂತ್ಯಕ್ರಿಯೆ

    ತೆಲುಗಿನ ಸೂಪರ್ ಸ್ಟಾರ್ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸರಕಾರಿ ಸಕಲ ಗೌರವಗಳೊಂದಿಗೆ ನಡೆಯಲಿದೆ. ಪದ್ಮಾಲಯ ಸ್ಟುಡಿಯೋದಲ್ಲಿ ಅಭಿಮಾನಿಗಳಿಗಾಗಿ ಇಂದು ಮಧ್ಯಾಹ್ನ 12.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆನಂತರ ಪಾರ್ಥೀವ ಶರೀರವನ್ನು ಮಹಾಪ್ರಸ್ಥಾನಂಗೆ ಶಿಫ್ಟ್ ಮಾಡಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮಂಗಳವಾರ ಸಂಜೆಯೇ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕಿತ್ತು. ಅದು ಸಾಧ್ಯವಾಗದೇ ಇರುವ ಕಾರಣಕ್ಕಾಗಿ ಇಂದು ಮಧ್ಯಾಹ್ನ 12.30ರವರೆಗೂ ವ್ಯವಸ್ಥೆ ಮಾಡಲಾಗಿದೆ.

    ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದು, ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ವೃತ್ತಿ ಜೀವನದ ಸಾಧನೆಯನ್ನು ಕೊಂಡಾಡುತ್ತಲೇ, ಈ ಸಂದರ್ಭದಲ್ಲಿ ದುಃಖದಲ್ಲಿರುವ ಕೃಷ್ಣ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ‘ಕೃಷ್ಣ ಲೆಜೆಂಡರಿ ನಟರಾಗಿದ್ದು, ತಮ್ಮ ನಟನೆ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿ ಇದ್ದರು’ ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸಿನಿಮಾದ ಶೂಟಿಂಗ್ ಮುಕ್ತಾಯ

    ಸಿನಿಮಾ, ನಾಟಕಗಳಲ್ಲಿ ಮಾತ್ರವಲ್ಲ, ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದವರು ಕೃಷ್ಣ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಲೋಕಸಭಾ ಸದಸ್ಯರಾಗಿಯೂ ಜನಪರ ಕೆಲಸಗಳನ್ನೂ ಮಾಡಿದ್ದಾರೆ. ಇವರ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಿಂದ ದೂರವಿದ್ದರೂ, ಇವರ ಪುತ್ರ ಮಹೇಶ್ ಬಾಬು ತೆಲುಗು ಸಿನಿಮಾ ರಂಗದ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

    ಮಹೇಶ್ ಬಾಬು ಕುಟುಂಬದಲ್ಲಿ ಈ ವರ್ಷ ಸೂತಕದ ವರ್ಷವೆಂದೇ ಹೇಳಬಹುದು. ಜನವರಿಯಲ್ಲಿ ಕೃಷ್ಣ ಅವರ ಹಿರಿಯ ಮಗ ರಮೇಶ್ ಬಾಬು ನಿಧನಹೊಂದಿದ್ದರೆ, ಎರಡು ತಿಂಗಳ ಹಿಂದೆಯಷ್ಟೇ ಕೃಷ್ಣ ಅವರ ಎರಡನೇ ಪತ್ನಿ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಮೊದಲನೇ ಹೆಂಡತಿ  ವಿಜಯ ನಿರ್ಮಲಾ ನಾಲ್ಕು ವರ್ಷಗಳ ಹಿಂದೆ ಬಾರದ ಲೋಕಕ್ಕೆ ಹೋಗಿದ್ದಾರೆ. ಇದೀಗ ಕೃಷ್ಣ ಕೂಡ ಕಣ್ಮರೆಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]