Tag: Terror attack

  • ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    – ದೆಹಲಿಯ ಹಲವೆಡೆ ಭಯೋತ್ಪಾದಕ ದಾಳಿಗೆ ಪ್ಲ್ಯಾನ್‌
    – ಆತ್ಮಹತ್ಯಾ ದಾಳಿಗೆ ತರಬೇತಿ ಪಡೆಯುತ್ತಿದ್ದ ಶಂಕಿತರು

    ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ.

    ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌ ವಿಶೇಷ ಘಟಕ (Delhi Police Speical Unit) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್‌ ಮಾಡ್ಯೂಲ್‌ (ISIS Module) ಭೇದಿಸಿದ್ದು, ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬನನ್ನ ಅದ್ನಾನ್‌ ಎಂದು ಗುರುತಿಸಲಾಗಿದೆ. ಈತ ಮೂಲತಃ ಮಧ್ಯಪ್ರದೇಶದ ಭೋಪಾಲ್ ಮೂಲದವನು, ಮತ್ತೊಬ್ಬ ಶಂಕಿತನನ್ನ ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿದೆ. ಈ ಇಬ್ಬರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ದೆಹಲಿಯಲ್ಲಿ ಪ್ರಮುಖ ದಾಳಿ ನಡೆಸಲು ಪ್ಲ್ಯಾನ್‌ ಮಾಡುತ್ತಿದ್ದರು. ಇಬ್ಬರು ಫಿದಾಯೀನ್ (ಆತ್ಮಹತ್ಯಾ) ದಾಳಿಗಳಿಗೆ ತರಬೇತಿ ಪಡೆದಿದ್ದರು. ಸದ್ಯ ಇಬ್ಬರನ್ನ ಬಂಧಿಸಿದ್ದು, ಅವರ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಸ್ಫೋಟಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆರ್‌ಎಸ್‌ಎಸ್ ಫೈಟ್‌ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ

    ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಅಧಿಕಾರಿಗಳು ಸಂಪೂರ್ಣ ಜಾಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಐಸಿಸ್‌ ಜಾಲದಲ್ಲಿ ಇನ್ನು ಎಷ್ಟು ಮಂದಿ ಇದ್ದಾರೆ? ಭಾರತದಲ್ಲಿ ಬೇರೆ ಎಲ್ಲೆಲ್ಲಿ ದಾಳಿಗೆ ಯೋಜನೆ ರೂಪಿಸಲಾಗಿದೆ? ಎಂಬೆಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

  • ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

    ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

    – ಭಾರತ – ಪಾಕಿಸ್ತಾನ ಎರಡರೊಂದಿಗೂ ಸಂಬಂಧ ಕಾಪಾಡಿಕೊಳ್ಳುವುದಾಗಿ ಪ್ರತಿಪಾದನೆ

    ವಾಷಿಂಗ್ಟನ್‌: ಭಯೋತ್ಪಾದನೆ (Terrorism) ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಅದ್ಭುತ ಪಾಲುದಾರ ಎಂದು ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ನ ಕಮಾಂಡರ್ ಜನರಲ್ ಮೈಕೆಲ್ ಕುರಿಲ್ಲಾ (Michael Kurilla) ಬಣ್ಣಿಸಿದ್ದಾರೆ.

    ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ (Asim Munir) ಅವರನ್ನು ಆಹ್ವಾನಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮುಂದಾಗಿದ್ದಾರೆ. ಈ ನಡುವೆ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್-ಖೋರಾಸನ್) ಉಗ್ರರನ್ನು ಸದೆಬಡಿಯುವಲ್ಲಿ ಪಾಕಿಸ್ತಾನ (Pakistan) ನೀಡಿದ ಸಹಕಾರವನ್ನು ಅಮೆರಿಕ ಮಿಲಿಟರಿ ಕಮಾಂಡರ್‌ ಹಾರಿ ಹೊಗಳಿದ್ದಾರೆ.

    ಅಮೆರಿಕದ ಸಂಸತ್ತಿನಲ್ಲಿ ಸಶಸ್ತ್ರ ಸೇವೆಗಳ ಸಮಿತಿ ವಿಚಾರಣೆ ಸಂದರ್ಭದಲ್ಲಿ ಕುರಿಲ್ಲಾ ಮಾತನಾಡಿದ್ದು, ಇಸ್ಲಾಮಾಬಾದ್‌ ಪಾತ್ರವನ್ನು ಹಾಡಿಹೊಗಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಯೋತ್ಪಾದನೆ ಪ್ರಾಯೋಜಿತ ಪಾಕ್‌ ಮುಖವಾಡವನ್ನು ಬಯಲುಮಾಡಲು ಭಾರತ ಸರ್ವಪಕ್ಷ ನಿಯೋಗವನ್ನು ವಿದೇಶಗಳಿಗೆ ಕಳುಹಿಸಿದೆ. ಈ ಹೊತ್ತಿನಲ್ಲೇ ಪಾಕಿಸ್ತಾನವನ್ನು ಅಮೆರಿಕ ಮಿಲಿಟರಿ ಅಧಿಕಾರಿ ಹಾಡಿಹೊಗಳಿದ್ದಾರೆ. ಅಲ್ಲದೇ ನಾವು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವುದಾಗಿಯೂ ಪ್ರತಿಪಾದಿಸಿದ್ದಾರೆ.

    ಪಾಕಿಸ್ತಾನ ಪ್ರಸ್ತುತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ, ಹಾಗೂ ಭಯೋತ್ಪಾದನೆ ನಿಗ್ರಗದಲ್ಲಿ ಅಭೂತಪೂರ್ವ ಪಾಲುದಾರನಾಗಿದೆ ಎಂದರಲ್ಲದೇ ನವದೆಹಲಿ ಮತ್ತು ಇಸ್ಲಾಮಾಬಾದ್/ರಾವಲ್ಪಿಂಡಿ ಎರಡರೊಂದಿಗೂ ವಾಷಿಂಗ್ಟನ್ ಬಲವಾದ ಸಂಬಂಧ ಹೊಂದಿರಬೇಕು. ಭಯೋತ್ಪಾದನೆಯ ವಿರುದ್ಧದ ಅಮೆರಿಕದ ಹೋರಾಟಕ್ಕೆ ಭಾರತ, ಪಾಕಿಸ್ತಾನ ಎರಡೂ ರಾಷ್ಟ್ರಗಳ ನೆರವು ಬೇಕೆಂದು ಮನವಿ ಮಾಡಿದ್ದಾರೆ.

    ಅಫ್ಘಾನಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಐಸಿಸ್-ಖೋರಾಸನ್, ಅಮೆರಿಕದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ವಿವಿಧೆಡೆ ಭಯೋತ್ಪಾದಕ ದಾಳಿ ನಡೆಸುತ್ತಿರುವ ಸಕ್ರೀಯ ಸಂಘಟನೆಗಳಲ್ಲಿ ಒಂದಾಗಿದೆ. ಆದ್ರೆ ಇಸ್ಲಾಮಾಬಾದ್ ಐಸಿಸ್ ಹೋರಾಟಗಾರರನ್ನು ಗುರಿಯಾಗಿಸಲು ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಡಜನ್ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಶ್ಲಾಘಿಸಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಲು ಭಾರತವು ರಾಜತಾಂತ್ರಿಕ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಕುರಿಲ್ಲಾ ಅವರ ಹೇಳಿಕೆಗಳು ಬಂದಿವೆ.

  • ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

    ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

    ಶ್ರೀನಗರ: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ (Nagrota) ಭಾರತೀಯ ಸೇನೆ ಮತ್ತು ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

    ನಾಗ್ರೋಟಾದ ಸೇನಾ ಘಟಕದಲ್ಲಿ ಗುಂಡಿನ ದಾಳಿ ನಡೆದಿದೆ. ಸ್ಥಳದಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂದಿದೆ. ಆದರೆ ಆರಂಭಿಕ ಕಾರ್ಯಾಚರಣೆಯ ನಂತರ ಯಾವುದೇ ಸಂಪರ್ಕ ಕಂಡುಬಂದಿಲ್ಲ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

    ಪರಿಧಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ನಗ್ರೋಟಾ ಮಿಲಿಟರಿ ಠಾಣೆಯ ಕಾವಲುಗಾರ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಶಂಕಿತ ವ್ಯಕ್ತಿಯೊಂದಿಗೆ ಸ್ವಲ್ಪ ಸಮಯದವರೆಗೆ ಗುಂಡಿನ ಚಕಮಕಿ ನಡೆದಿದೆ. ಕಾವಲುಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನುಸುಳುಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ಕದನ ವಿರಾಮ ಒಪ್ಪಂದ ಆಯಿತು. ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಗಡಿ ಭಾಗದಲ್ಲಿ ಪಾಕ್‌ ಡ್ರೋನ್‌ ದಾಳಿ ನಡೆಸಿದೆ. ಪಾಕ್‌ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇದನ್ನೂ ಓದಿ: ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

  • ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನವದೆಹಲಿ: ಪಹಲ್ಗಾಮ್ ಘಟನೆಯ (Pahalgam Terror Attack) ಬಗ್ಗೆ ನ್ಯಾಯಾಂಗ ತನಿಖೆಗೆ ( Judicial Probe) ಕೋರಿ ಸಲ್ಲಿಸಲಾದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ವಿಚಾರಣೆ ಸಂದರ್ಭದಲ್ಲಿ ಕೋರ್ಟ್‌, ನೀವು ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸಲು ಬಯಸುತ್ತೀರಾ ಎಂದು ಪ್ರಶ್ನಿಸುವ ಮೂಲಕ ಅರ್ಜಿದಾರರಿಗೆ ಚಾಟಿ ಬೀಸಿದೆ.

    ಅರ್ಜಿದಾರರಾದ ಫತೇಶ್ ಕುಮಾರ್ ಶಾಹು, ಮೊಹಮ್ಮದ್ ಜುನೈದ್ ಮತ್ತು ವಿಕ್ಕಿ ಕುಮಾರ್ ಅವರು ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾ ಎನ್.ಕೆ. ಸಿಂಗ್ ಅವರಿಂದ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ

     

    ಈ ವೇಳೆ, ಪ್ರತಿಯೊಬ್ಬ ಭಾರತೀಯರು ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ನಮ್ಮ ಪಡೆಗಳನ್ನು ಸ್ಥೈರ್ಯ ಕುಗ್ಗಿಸಬೇಡಿ. ಸಮಸ್ಯೆಯ ಸೂಕ್ಷ್ಮತೆಯನ್ನು ನೋಡಿ ಅರ್ಜಿ ಸಲ್ಲಿಸಿ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಇಂತಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಜವಾಬ್ದಾರರಾಗಿರಿ. ನಿಮಗೂ ದೇಶದ ಬಗ್ಗೆ ಕರ್ತವ್ಯವಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಯೋತ್ಪಾದನಾ ನಿಗ್ರಹ ವಿಷಯಗಳಲ್ಲಿ ಯಾವಾಗದಿಂದ ತಜ್ಞರಾಗಿದ್ದಾರೆ ಎಂದು ನ್ಯಾ.ಸೂರ್ಯ ಕಾಂತ್‌ ಖಾರವಾಗಿ ಪ್ರಶ್ನಿಸಿದರು.

    ಈ ವೇಳೆ ಪಹಲ್ಗಾಮ್‌ ದಾಳಿಯ ಬಳಿಕ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ ನ್ಯಾಯಾಧೀಶರು ಈ ವಿಚಾರವನ್ನು ಅರ್ಜಿಯಲ್ಲಿ ಎಲ್ಲಿ ಉಲ್ಲೇಖ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಈ ವಿಚಾರ ಬೇಕಾದರೆ ಹೈಕೋರ್ಟ್‌ಗೆ ಹೋಗಿ ಅರ್ಜಿ ಸಲ್ಲಿಸಿ ಎಂದು ಸೂಚಿಸಿದರು.

  • 4 ದಿನದ ಮೊದಲೇ ಪಹಲ್ಗಾಮ್‌ನಿಂದ 7 ಕಿ.ಮೀ ದೂರದ ಜಾಗಕ್ಕೆ ಬಂದಿದ್ದ ಉಗ್ರರು

    4 ದಿನದ ಮೊದಲೇ ಪಹಲ್ಗಾಮ್‌ನಿಂದ 7 ಕಿ.ಮೀ ದೂರದ ಜಾಗಕ್ಕೆ ಬಂದಿದ್ದ ಉಗ್ರರು

    ನವದೆಹಲಿ: ಪಹಲ್ಗಾಮ್‌ನಲ್ಲಿ ದಾಳಿ (Pahalgam Terror Attack) ನಡೆಸಿದ ಉಗ್ರರು ಹಿಂದೆಯೇ ಬಂದು ನೆಲೆಸಿದ್ದರು ಎನ್ನುವುದಕ್ಕೆ ಪುಣೆ ಕುಟುಂಬವೊಂದರ (Pune Family) ರೀಲ್ಸ್‌ನಲ್ಲಿ ಸಾಕ್ಷಿ ಸಿಕ್ಕಿದೆ.

    ಪಹಲ್ಗಾಮ್‌ನಿಂದ ಏಳೂವರೆ ಕಿ.ಮೀ. ದೂರದ ಬೇತಾಬ್ ವ್ಯಾಲಿಯಲ್ಲಿ ಮಧ್ಯಾಹ್ನ 2:30ಕ್ಕೆ ಇಬ್ಬರು ಉಗ್ರರು ನಡೆದಾಡಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆ ವ್ಯಕ್ತಿ ಸಲ್ಲಿಸಿರುವ ವಿಡಿಯೋವನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಈಗ ಪರಿಶೀಲಿಸುತ್ತಿದ್ದಾರೆ.  ಇದನ್ನೂ ಓದಿ: ಉಗ್ರರ ದಾಳಿ ಹಿಂದೆ ಪಾಕ್, ಐಎಸ್‌ಐ ನಂಟು – ಪಾಕ್ ಪ್ಯಾರಾ ಕಮಾಂಡೋ ಆಗಿದ್ದ ಹಾಶೀಮ್ ಮೂಸಾ!

     

    ಪುಣೆಯ ಸಾಮಾಜಿಕ ಕಾರ್ಯಕರ್ತ ಶ್ರೀಜಿತ್ ರಮೇಶನ್ ಅವರು ಮಾತನಾಡಿ, ಏಪ್ರಿಲ್ 18ರಂದು ನಾವು ಪಹಲ್ಗಾಮ್‌ಗೆ ತೆರಳಿದ್ದೆವು. `ಮಿನಿ ಸ್ವಿಟ್ಜರ್‌ಲ್ಯಾಂಡ್’ ಬೈಸರನ್ ಬಳಿಕ ಪಹಲ್ಗಾಮ್‌ನಿಂದ ಏಳೂವರೆ ಕಿ.ಮೀ. ದೂರದ ಬೇತಾಬ್ ವ್ಯಾಲಿಗೆ ಹೋಗಿದ್ದೆವು. ಅಲ್ಲಿ ನನ್ನ 6 ವರ್ಷದ ಮಗಳು ರೀಲ್ಸ್ ಮಾಡುತ್ತಿದ್ದನ್ನು ನಾನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದೆ. ಪ್ರವಾಸ ಮುಗಿಸಿ ವಾಪಸ್ ಮನೆಗೆ ಬಂದಾ ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ತಿಳಿಯಿತು. ನಾಲ್ವರು ಉಗ್ರರ ಫೋಟೋ ಬಿಡುಗಡೆ ಮಾಡಿದ್ದನ್ನು ನೋಡಿದೆವು. ಆ ಫೋಟೋದಲ್ಲಿದ್ದ ಇಬ್ಬರ ಮುಖವನ್ನು ನೋಡಿದಂತೆ ಇದೆ. ನಮ್ಮ ರೀಲ್ಸ್‌ನಲ್ಲಿ ಹಿಂದುಗಡೆ ನಡೆದುಕೊಂಡು ಹೋಗುತ್ತಿದ್ದ ವಿಡಿಯೋಗೆ ಹೋಲಿಕೆ ಮಾಡಿದಾಗ ಸಾಮ್ಯತೆ ಕಂಡು ಬಂತು. ಹಾಗಾಗಿ ದೆಹಲಿ ಎನ್‌ಐಎಗೆ ವಿಡಿಯೋ ಕಳುಹಿಸಿಕೊಟ್ಟಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಉಗ್ರರು ಗುಂಡು ಹಾರಿಸುವ ಹೊತ್ತಲ್ಲಿ 3 ಬಾರಿ ‘ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

  • ಮತ್ತೊಬ್ಬ ಉಗ್ರನ ಮನೆ ಉಡೀಸ್‌ – ಇಲ್ಲಿಯವರೆಗೆ 8 ಉಗ್ರರ ನಿವಾಸ ಧ್ವಂಸ

    ಮತ್ತೊಬ್ಬ ಉಗ್ರನ ಮನೆ ಉಡೀಸ್‌ – ಇಲ್ಲಿಯವರೆಗೆ 8 ಉಗ್ರರ ನಿವಾಸ ಧ್ವಂಸ

    ಶ್ರೀನಗರ: ಪಹಲ್ಗಾಮ್‌ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭದ್ರತಾ ಪಡೆಗಳ ಸಚ್ಛ ಕಾಶ್ಮೀರ (Jammu Kashmir) ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ. ಉಗ್ರರ ಮನೆಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿರುವ ಭದ್ರತಾ ಈಗ ಮತ್ತೊಬ್ಬ ಉಗ್ರನ ಮನೆಯನ್ನು (House) ಸ್ಫೋಟಿಸಿದೆ.

    ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಭಯೋತ್ಪಾದಕ ಜಮೀಲ್ ಅಹ್ಮದ್‌ನ ಮನೆಯನ್ನು ಭದ್ರತಾ ಪಡೆಗಳು ಸ್ಫೋಟಿಸಿವೆ. ಈ ಮೂಲಕ ಕಳೆದ ಮೂರು ದಿನಗಳಲ್ಲಿ 8 ಉಗ್ರರ ಮನೆಗಳನ್ನು ಧ್ವಂಸಗೊಳಿಸಿದಂತಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ ಬೆಂಬಲಿಸಿ ಪೋಸ್ಟ್‌ – ಶಾಸಕ, ಶಿಕ್ಷಕ, ವಕೀಲ ಸೇರಿ 19 ಮಂದಿ ಅರೆಸ್ಟ್‌

     

    ಕಳೆದ ಮೂರು ದಿನಗಳಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ, ಭದ್ರತಾ ಪಡೆಗಳು ಕಣಿವೆಯಾದ್ಯಂತ ಹಲವಾರು ಭಯೋತ್ಪಾದಕರ ಆಸ್ತಿಗಳನ್ನು ಧ್ವಂಸಗೊಳಿಸಿವೆ. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ದಾಳಿ – NIA ಹೆಗಲಿಗೆ ತನಿಖೆಯ ಹೊಣೆ

    ಭದ್ರತಾ ಪಡೆಗಳು ಈಗ ಅನುಮಾನ ಬಂವರ ಮನೆಗಳನ್ನು ಹುಡುಕಿ ಶಸ್ತ್ರಸ್ತ್ರ ಪತ್ತೆ ಮಾಡುತ್ತಿದ್ದಾರೆ. ಉಗ್ರರಿಗೆ ಸಹಕಾರ ನೀಡಿದ ಆರೋಪದ ಅಡಿ ನೂರಾರು ಮಂದಿ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ಸೌದಿಯಿಂದ ಬರೋವಾಗ ಪಾಕ್ ವಾಯುಸೀಮೆ ಬಳಸದೇ ದೆಹಲಿಗೆ ಬಂದ ಮೋದಿ

    ಸೌದಿಯಿಂದ ಬರೋವಾಗ ಪಾಕ್ ವಾಯುಸೀಮೆ ಬಳಸದೇ ದೆಹಲಿಗೆ ಬಂದ ಮೋದಿ

    ನವದೆಹಲಿ: ಸೌದಿಯಿಂದ ಬರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಏರ್‌ ಇಂಡಿಯಾ ಒನ್‌ ವಿಮಾನ ಪಾಕ್ ವಾಯುಸೀಮೆ ಬಳಸದೇ ಭಾರತದ ವಾಯುಸೀಮೆ ಬಳಸಿ ದೆಹಲಿಯಲ್ಲಿ ಲ್ಯಾಂಡ್‌ ಆಗಿದೆ.

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಕೃತ್ಯದ ಬಳಿಕ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ಪ್ರಧಾನಿ ಮೋದಿ ಇಂದು ಮುಂಜಾನೆ ದೆಹಲಿಗೆ ಆಗಮಿಸಿ ವಿಮಾನ ನಿಲ್ದಾಣದಲ್ಲೇ ಸಭೆ ನಡೆಸಿದ್ದರು. ಇದನ್ನೂ ಓದಿ: ಬಾಲಾಕೋಟ್‌ ಏರ್‌ಸ್ಟ್ರೈಕ್‌ನಂತೆ ದಾಳಿ ಭೀತಿ – ಗಡಿಗೆ ವಿಮಾನಗಳನ್ನು ಸಾಗಿಸುತ್ತಿದೆ ಪಾಕ್‌ 

    ಸೌದಿ ಅರೇಬಿಯಾಕ್ಕೆ ಹೊರಡುವಾಗ ಪಾಕಿಸ್ತಾನ ವಾಯು ಸೀಮೆ ಬಳಸಿದ್ದ ಮೋದಿ ಪಹಲ್ಗಾಮ್‌ ದಾಳಿಯ ನಂತರ ಭಾರತಕ್ಕೆ ಮರಳುವಾಗ ಮಾರ್ಗ ಬದಲಾಯಿಸಿರುವುದು ಟ್ರಾವೆಲ್‌ ಹಿಸ್ಟರಿಯಿಂದ ಕಂಡುಬಂದಿದೆ. ಇದನ್ನೂ ಓದಿ: ಗುಡ್ಡಕುಸಿತವಾಗಿದ್ದಕ್ಕೆ ಬಚಾವ್ – ಪಹಲ್ಗಾಮ್‌ಗೆ ಹೋಗಬೇಕಿದ್ದ 13 ಕನ್ನಡಿಗರು ಅದೃಷ್ಟವಶಾತ್ ಪಾರು

    ಸೌದಿಗೆ ಪ್ರವಾಸ ಹೊರಡುವಾಗ ಪ್ರಧಾನಿ ಮೋದಿ ಅವರ IAF ಬೋಯಿಂಗ್ 777-300 (K7067) ವಿಮಾನವು ಪಾಕಿಸ್ತಾನ ವಾಯುಪ್ರದೇಶದಿಂದ ಒಮನ್‌ ತಲುಪಿದ್ದು, ಅಲ್ಲಿಂದ ಜೆಡ್ಡಾಗೆ ತಲುಪಿತ್ತು. ಆದ್ರೆ ಭಯೋತ್ಪಾದಕ ದಾಳಿಯ ಬಳಿಕ ತುರ್ತಾಗಿ ದೆಹಲಿಗೆ ಹಿಂತಿರುಗುವಾಗ ಪಾಕಿಸ್ತಾನ ವಾಯುಪ್ರದೇಶ ಬಳಸದೇ ಭಾರತಕ್ಕೆ ಮರಳಿತು. ಇದಕ್ಕೆ ಸಂಬಂಧಿಸಿದ ಮ್ಯಾಪ್‌ ಚಿತ್ರಗಳು ಲಭ್ಯವಾಗಿದೆ.

    ದೆಹಲಿಗೆ ಮರಳಿದ ಬಳಿಕ ವಿಮಾನ ನಿಲ್ದಾಣದಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಅಲ್ಲದೇ ಇಂದು ಸಂಜೆ 6 ಗಂಟೆಗೆ ಭದ್ರತೆ ಕುರಿತಂತೆ ಸಂಪುಟ ಸಭೆ ನಡೆಯಲಿದೆ.  ಇದನ್ನೂ ಓದಿ: Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಶಾಗೆ ಸೂಚನೆ ನೀಡಿದ್ದ ಮೋದಿ:
    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಕರೆ ಮಾಡಿದ್ದ ಮೋದಿ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದ್ದರು. ಅದರಂತೆ ಮಂಗಳವಾರ ರಾತ್ರಿಯೇ ಶ್ರೀನಗರಕ್ಕೆ ಭೇಟಿ ನೀಡಿ ಉನ್ನತ ಅಧಿಕಾರಿಗಳೊಂದಿಗೆ ಅಮಿತ್‌ ಶಾ ಸಭೆ ನಡೆಸಿದ್ದರು. ಅಲ್ಲದೇ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಮೋದಿ, ಈ ಹತ್ಯಾಕಾಂಡದ ಹಿಂದೆ ಯಾರೇ ಇದ್ದರೂ ಬಿಡೋದಿಲ್ಲ ಎಂದು ಶಪಥ ಮಾಡಿದ್ದರು. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!

  • ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Terror Attack) ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ. ಈ ದಾಳಿಯ ಬಗ್ಗೆ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಈ ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

    ಪೋಸ್ಟ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

    ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವ ಉಗ್ರರನ್ನು ಸುಮ್ಮನೆ ಬಿಡಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮಾಯಕ ನಾಗರಿಕರ ಮೇಲಿನ ದಾಳಿ ಹೇಡಿತನ ಮತ್ತು ಅತ್ಯಂತ ಖಂಡನೀಯವಾದದ್ದು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ – ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

  • ಪಾಕಿಸ್ತಾನದಲ್ಲಿ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ – 50 ಜನ ಸಾವು

    ಪಾಕಿಸ್ತಾನದಲ್ಲಿ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ – 50 ಜನ ಸಾವು

    ಇಸ್ಲಾಮಾನಾದ್: ಪಾಕಿಸ್ತಾನ (Pakistan) ವ್ಯಾಯುವ್ಯ ಭಾಗದಲ್ಲಿ ನಾಗರಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, 50 ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಗುರುವಾರ (ನ.21) ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೆಶಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Chikkamagaluru | ಹಣಕ್ಕಾಗಿ ಮಲೆನಾಡಲ್ಲಿ ನಡೆಯಿತು ಜೋಡಿ ಕೊಲೆ

    ದಾಳಿಯ ವೇಳೆ ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವನ್ನಪ್ಪಿದವರ ಪೈಕಿ ಶಿಯಾ ಸಮುದಾಯಕ್ಕೆ ಸೇರಿದವರು ಹೆಚ್ಚಿನವರಿದ್ದಾರೆ ಎಂದು ತಿಳಿಸಿದ್ದಾರೆ.

    ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಖಾನ್ ಗಂದಾಪುರ್ ಅವರು, ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

    ಪ್ರಾಂತ್ಯದ ಎಲ್ಲಾ ರಸ್ತೆಗಳನ್ನು ಸುರಕ್ಷಿತವಾಗಿರಿಸುವಂತೆ ಪೊಲೀಸರಿಗೆ ಸೂಚಿಸಿದ್ದು, ಪ್ರಾಂತೀಯ ಹೆದ್ದಾರಿ ಪೊಲೀಸ್ ಘಟಕವನ್ನು ಸ್ಥಾಪಿಸುವಂತೆ ತಿಳಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಗಳಿಗೆ ಸಾಂತ್ವನ ನೀಡಿ, ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದರು. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: axis MY INDIA Exit Poll: ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಅಧಿಕಾರ

  • ನಾವು ಪಾಕಿಸ್ತಾನದ ಭಾಗವಾಗಲ್ಲ: ಉಗ್ರರ ದಾಳಿಗೆ ಫಾರೂಕ್‌ ಅಬ್ದುಲ್ಲಾ ಕೆಂಡ

    ನಾವು ಪಾಕಿಸ್ತಾನದ ಭಾಗವಾಗಲ್ಲ: ಉಗ್ರರ ದಾಳಿಗೆ ಫಾರೂಕ್‌ ಅಬ್ದುಲ್ಲಾ ಕೆಂಡ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ವಿರುದ್ಧ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ ಗರಂ ಆಗಿದ್ದಾರೆ. ನಾವು ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಅವರ ಕಾಮೆಂಟ್ ಹಿಂದಿನ ರಾಜ್ಯದಲ್ಲಿ ನಡೆದ ಆತಂಕಕಾರಿ ಸರಣಿಯ ಭಯೋತ್ಪಾದಕ ದಾಳಿಯನ್ನು ಅನುಸರಿಸುತ್ತದೆ, ಇದರಲ್ಲಿ ಗುರುವಾರ ತಡರಾತ್ರಿ ಬಾರಾಮುಲ್ಲಾದಲ್ಲಿ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ನಾಲ್ಕು ಜನರು – ಇಬ್ಬರು ಸೈನಿಕರು ಮತ್ತು ಇಬ್ಬರು ನಾಗರಿಕರು ಕೊಲ್ಲಲ್ಪಟ್ಟರು. ಮೂರು ದಿನಗಳ ಹಿಂದೆ ಆರು ಕಟ್ಟಡ ಕಾರ್ಮಿಕರು ಮತ್ತು ಒಬ್ಬ ವೈದ್ಯರನ್ನು ಗುಂಡಿಕ್ಕಿ ಕೊಲ್ಲಲಾಯಿತು.

    ನಮಗೆ ಸೂಕ್ತ ಪರಿಹಾರ ಸಿಗುವವರೆಗೆ ರಾಜ್ಯದಲ್ಲಿ ಈ (ಭಯೋತ್ಪಾದನಾ ದಾಳಿ) ಮುಂದುವರಿಯುತ್ತದೆ… ನಮಗೆಲ್ಲ ಮೂಲ ಅರಿವಿದೆ. 30 ವರ್ಷಗಳಿಂದ ಅಮಾಯಕರ ಹತ್ಯೆಯನ್ನು ನಾನು ಕಣ್ಣಾರೆ ಕಂಡಿದ್ದೇನೆ. ಅವರು (ಪಾಕಿಸ್ತಾನ) ಏಕೆ ಹೀಗೆ ಮಾಡುತ್ತಿದ್ದಾರೆ. ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ನಾವು ಯಾವಾಗಲೂ ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ನಮ್ಮ ಅನೇಕ ಸಹೋದ್ಯೋಗಿಗಳು ಹುತಾತ್ಮರಾಗಿದ್ದಾರೆ. ಆದರೆ ಇದು ಪ್ರತಿ ವರ್ಷವೂ ಮುಂದುವರಿಯುತ್ತದೆ ಇದಕ್ಕೆ ಕಾರಣ ಯಾರು ಎಂದು ನಿಮಗೆ ತಿಳಿದಿದೆ. ಇಂತಹ ಕೃತ್ಯಗಳಿಂದ ಕಾಶ್ಮೀರವು ಪಾಕಿಸ್ತಾನದೊಂದಿಗೆ ಸೇರಿಸಬಹುದು ಎಂದು ಅವರು ತಪ್ಪಾಗಿ ಭಾವಿಸಿದ್ದಾರೆಂದು ಟೀಕಿಸಿಸಿದ್ದಾರೆ.

    ಅವರು ತಮ್ಮ ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಇದನ್ನು ಕೊನೆಗಾಣಿಸಲು ಮತ್ತು ಸ್ನೇಹದಿಂದಿರಲು ಒಂದು ಮಾರ್ಗವನ್ನು ಕಂಡುಕೊಳ್ಳಲು ನಾನು ಅವರನ್ನು ಒತ್ತಾಯಿಸುತ್ತೇನೆ. ಇಲ್ಲದಿದ್ದರೆ, ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಸಿದ್ದಾರೆ.