Tag: terror attacks

  • ಜಮ್ಮು-ಕಾಶ್ಮೀರದಲ್ಲಿ 1,800 CRPF ಸೈನಿಕರನ್ನು ನಿಯೋಜಿಸಲು ಮುಂದಾದ ಸರ್ಕಾರ

    ಜಮ್ಮು-ಕಾಶ್ಮೀರದಲ್ಲಿ 1,800 CRPF ಸೈನಿಕರನ್ನು ನಿಯೋಜಿಸಲು ಮುಂದಾದ ಸರ್ಕಾರ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ ಜಿಲ್ಲೆಯಲ್ಲಿ (Rajouri District) ಹಿಂದೂ ಕುಟುಂಬಗಳ (Hindu Families) ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ.

    ಕಳೆದ ಎರಡು ವಾರಗಳ ಅವಧಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಿಂದ (Terror Attacks) ರಾಜೌರಿಗೆ ಜಿಲ್ಲೆಗೆ CRPF ನ (ಕೇಂದ್ರ ಮೀಸಲು ಪೊಲೀಸ್ ಪಡೆ) 1,800 ಸಿಬ್ಬಂದಿ ನಿಯೋಜಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ಇನ್ನೊಂದು ಆಘಾತ – ಸ್ನೇಹ ಕೊನೆಗೊಳಿಸಲು ಬಯಸಿದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ

    ಕಳೆದ ಮೂರು ದಿನಗಳಿಂದಲೂ ರಜೌರಿಯಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಿಸಿದ್ದು, ಶೋಧ ಮುಂದುವರಿದಿದೆ. ಭಾನುವಾರ ಭಯೋತ್ಪಾದಕ ದಾಳಿಯ ನಂತರ ಸೇನೆ, ಪೊಲೀಸರೊಂದಿಗೆ CRPF ತುಕಡಿಗಳು ಕಾರ್ಯಾಚರಣೆ ಆರಂಭಿಸಿವೆ. CRPF ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಅಸ್ತಿತ್ವವ ಹೊಂದಿದೆ. ಇದರೊಂದಿಗೆ ಸಿಆರ್‌ಪಿಎಫ್‌ನ ಒಟ್ಟು ಬಲದ ಮೂರನೇ ಒಂದು ಭಾಗದಷ್ಟು 70ಕ್ಕೂ ಹೆಚ್ಚು ಬೆಟಾಲಿಯನ್‌ಗಳನ್ನು ಕೇಂದ್ರಾಡಳಿತ ಪ್ರದೇಶದಲ್ಲಿ ನಿಯೋಜಿಸಲಾಗಿದೆ.

    2ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: 6 ಮಂದಿಯನ್ನು ಬಲಿಪಡೆದು 11 ಮಂದಿಯನ್ನು ಗಾಯಾಳುಗಳನ್ನಾಗಿ ಮಾಡಿದ ರಜೌರಿಯ ಅವಳಿ ಭಯೋತ್ಪಾದನಾ ದಾಳಿಯ ವಿರುದ್ಧ ಪೂಂಛ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಈ ದಾಳಿಯ ವಿರುದ್ಧ ಇಡೀ ಜಮ್ಮುವಿನಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ

    ಪ್ರತಿಭಟನೆ ವೇಳೆ ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು, ಅಲ್ಪಸಂಖ್ಯಾತರಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಇದೇ ವೇಳೆ, ಪಾಕಿಸ್ತಾನದ ಪ್ರತಿಕೃತಿಯನ್ನು ದಹಿಸಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದಾಳಿಯ ಬಗ್ಗೆ ಭಾರತ ಮೊದಲೇ ಎಚ್ಚರಿಕೆ ನೀಡಿತ್ತು: ಶ್ರೀಲಂಕಾ ಅಧ್ಯಕ್ಷ

    ದಾಳಿಯ ಬಗ್ಗೆ ಭಾರತ ಮೊದಲೇ ಎಚ್ಚರಿಕೆ ನೀಡಿತ್ತು: ಶ್ರೀಲಂಕಾ ಅಧ್ಯಕ್ಷ

    ಕೊಲಂಬೋ: ದಾಳಿಯ ಬಗ್ಗೆ ಭಾರತ ಎಚ್ಚರಿಕೆ ನೀಡಿದ್ದರೂ ದೇಶದ ಭದ್ರತಾ ಸಂಸ್ಥೆ ನನ್ನ ಗಮನಕ್ಕೆ ತಂದಿರಲಿಲ್ಲ ಎಂದು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಗಂಭೀರ ಆರೋಪ ಮಾಡಿದ್ದಾರೆ.

    ಈಸ್ಟರ್ ಭಾನುವಾರದ ವೇಳೆ ನಡೆದ ಸರಣಿ ಬಾಂಬ್ ಸ್ಫೋಟದ ಕುರಿತು ದೇಶವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ ದೂರದರ್ಶದ ಮೂಲಕ ಮಾತನಾಡಿದ ಅಧ್ಯಕ್ಷರು, ಉಗ್ರರ ದಾಳಿ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ದಾಳಿಯ ಬಗ್ಗೆ ದೇಶದ ಭದ್ರತಾ ಸಂಸ್ಥೆಗೆ ಗುಪ್ತಚರ ಇಲಾಖೆ ಹಾಗೂ ಭಾರತದಿಂದ ಮೊದಲೇ ಮಾಹಿತಿ ಸಿಕ್ಕಿತ್ತು. ದರೆ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರದೇ ನಿಷ್ಕಾಳಜಿ ತೋರಿದ್ದಾರೆ ಎಂದರು.

    ಭದ್ರತಾ ಸಂಸ್ಥೆಯು ದಾಳಿಯ ಬಗ್ಗೆ ನನಗೆ ಮಾಹಿತಿ ನೀಡಿದ್ದರೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಸೂಚನೆ ನೀಡುತ್ತಿದ್ದೆ. ಆದರೆ ಅವರು ಹಾಗೇ ಮಾಡಲಿಲ್ಲ. ಹೀಗಾಗಿ ಮಾಹಿತಿ ರವಾನಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. 24 ಗಂಟೆಯ ಒಳಗಾಗಿ ದೇಶದ ಭದ್ರತಾ ಪಡೆಯನ್ನು ಪುನರಚಿಸಲಾಗುವುದು ಎಂದು ತಿಳಿಸಿದರು.

    ಭಾರತ ಏನು ಹೇಳಿತ್ತು?
    ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ದೇಶದ ಒಳಗಡೆ ಇರುವ ಕೆಲವು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿತ್ತು. ಇವರ ವಿಚಾರಣೆ ವೇಳೆ ಒಬ್ಬಾತ ಶ್ರೀಲಂಕಾದ ಝಾರಂ ಹಸೀಂ ಬಗ್ಗೆ ಬಾಯಿ ಬಿಟ್ಟಿದ್ದ. ಈತ ಶ್ರೀಲಂಕಾದ ಮುಸ್ಲಿಂ ಸಂಘಟನೆಯ ಬಗ್ಗೆ ಸಂಪರ್ಕದಲ್ಲಿದ್ದಾನೆ ಎಂದು ತಿಳಿಸಿದ್ದ. ಈ ಮಾಹಿತಿಯನ್ನು ಭಾರತ ಶ್ರೀಲಂಕಾದ ಅಧಿಕಾರಿಗಳಿಗೆ ಹಂಚಿಕೊಂಡಿತ್ತು.

    ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕನ್ನಡಿಗರು, ಭಾರತೀರು ಸೇರಿದಂತೆ 321 ಮಂದಿ ಸಾವನ್ನಪ್ಪಿದ್ದು, 500 ಜನರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ನಾವೇ ನಡೆಸಿದ್ದೇವೆ ಎಂದು ಐಸಿಸ್ ಉಗ್ರ ಸಂಘಟನೆ ಹೇಳಿಕೊಂಡಿದೆ. ಘಟನೆ ನಡೆದ 2 ದಿನಗಳ ನಂತರ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಶ್ರೀಲಂಕಾ ಕ್ರಿಶ್ಚಿಯನ್ ಹಾಗೂ ವಿದೇಶಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ತಿಳಿಸಿದೆ. ತನ್ನ `ಅಮಾಕ್’ ನ್ಯೂಸ್ ಮೂಲಕ ಐಸಿಸ್ ಈ ವಿಚಾರವನ್ನು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಒಟ್ಟಿನಲ್ಲಿ ಈಗ ಇರಾಕ್, ಸಿರಿಯಾ ಬಳಿಕ ಶ್ರೀಲಂಕಾದಲ್ಲೂ ಐಸಿಸ್ ತನ್ನ ಜಾಲವನ್ನು ಹಬ್ಬಿಸಿರುವುದು ದೃಢಪಟ್ಟಿದೆ.

    ಘಟನೆ ಸಂಬಂಧ ಶ್ರೀಲಂಕಾ ಪೊಲೀಸ್ ತನಿಖೆ ನಡೆಸಿ ವಶಕ್ಕೆ ಪಡೆದಿರುವ 40ಕ್ಕೂ ಹೆಚ್ಚು ಮಂದಿಯನ್ನು ಪ್ರಶ್ನಿಸಲಾಗಿದೆ. ಅಲ್ಲದೇ ಸ್ಥಳೀಯರು ನೀಡಿದ ಮಾಹಿತಿ ಅನ್ವಯ ಸಿರಿಯಾ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಕೊಲಂಬೋದಲ್ಲಿ ನಡೆದ ದಾಳಿಯಲ್ಲಿ ಮೊದಲ 6 ದಾಳಿಗಳಲ್ಲಿ ಮೂರು ಚರ್ಚ್‍ನಲ್ಲಿ ಹಾಗೂ 3 ಹೋಟೆಲ್ ಗಳಲ್ಲಿ ನಡೆಸಲಾಗಿತ್ತು. ಕೇವಲ 20 ನಿಮಿಷಗಳ ಅವಧಿಯಲ್ಲಿ ಈ ದಾಳಿ ನಡೆಸಲಾಗಿತ್ತು. ಆ ಬಳಿಕ ಮತ್ತೆರಡು ಬಾಂಬ್ ಸ್ಫೋಟಗಳು ನಡೆದಿತ್ತು. ಘಟನೆಯಲ್ಲಿ 38 ವಿದೇಶಿಯರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು ಶ್ರೀಲಂಕಾ ಸರ್ಕಾರ ತಿಳಿಸಿದ್ದು, ಇದರಲ್ಲಿ ಭಾರತ ಸೇರಿದಂತೆ ಇಂಗ್ಲೆಂಡ್, ಯುಎಸ್, ಆಸ್ಟ್ರೇಲಿಯಾ, ಟರ್ಕಿ, ಚೀನಾ, ಡ್ಯಾನಿಷ್, ಡಚ್ ಮತ್ತು ಪೋರ್ಚುಗಿಸ್ ಪ್ರಜೆಗಳು ಸೇರಿದ್ದಾರೆ.