Tag: terrorist activity

  • ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ

    ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ

    ನವದೆಹಲಿ: ಭಯೋತ್ಪಾದಕರು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. ಉತ್ತರದ ರಾಜ್ಯಗಳಲ್ಲಿ ಕಾರ್ಯಚರಿಸುತ್ತಿರುವ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರು ರಾಜ್ಯಗಳಲ್ಲಿ ಇಂದು ಎನ್‌ಐಎ ಪ್ರಮುಖ ದಾಳಿ ನಡೆಸುತ್ತಿದೆ.

    ಲಾರೆನ್ಸ್ ಬಿಷ್ಣೋಯ್, ಬಾಂಬಿಹಾ ಮತ್ತು ಅರ್ಷದೀಪ್ ದಲ್ಲಾ ಗ್ಯಾಂಗ್‌ಗಳ ಸಹಚರರಿಗೆ ಸೇರಿದ 51 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಾರ್ಚ್‌ನಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಂಗ್‌ಸ್ಟರ್‌ಗಳಿಗೆ ಸೇರಿರುವ ಆಸ್ತಿಯನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಂಡಿತ್ತು. ಇದನ್ನೂ ಓದಿ: ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ 1967ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆಗಸ್ಟ್ 2020ರಂದು ಎನ್‌ಐಎ ಸುಮೊಟೊ ಪ್ರಕರಣವನ್ನು ದಾಖಲಿಸಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸೇನಾ ವಾಹನಗಳ ಮಾಹಿತಿ ರವಾನೆ – ಸೇನೆಯ ಮಾಜಿ ಸಿಬ್ಬಂದಿ ಅರೆಸ್ಟ್

    ದಾಲ ಕಳೆದ 3-4 ವರ್ಷಗಳಿಂದ ಕೆನಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಂಜಾಬ್‌ನಲ್ಲಿ ಹಲವು ಹತ್ಯೆಗಳನ್ನು ನಡೆಸಿದ್ದಾನೆ. ಅಲ್ಲದೇ ಭಾರತದಲ್ಲಿ ಭಯೋತ್ಪಾದನೆ, ಹಿಂಸಾಚಾರ ಮತ್ತು ದೊಡ್ಡ ಪ್ರಮಾಣದ ಸುಲಿಗೆಯನ್ನು ದಾಲ ಉತ್ತೇಜಿಸುತ್ತಿದ್ದಾನೆ. ಭಯೋತ್ಪಾದಕ ಗ್ಯಾಂಗ್‌ಸ್ಟರ್ ಸಂಚು ಪ್ರಕರಣದಲ್ಲಿ ಎನ್‌ಐಎ ಇದುವರೆಗೆ 16 ಜನರನ್ನು ಬಂಧಿಸಿದೆ. ಈ ಕುರಿತು ಹೆಚ್ಚಿನ ತನಿಖೆಗಳು ಮುಂದುವರಿಯುತ್ತಿವೆ. ಇದನ್ನೂ ಓದಿ: ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಬಂಡೀಪುರದ ವ್ಯಕ್ತಿ ಕೋಲಾರದಲ್ಲಿ ಅರೆಸ್ಟ್!

    ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಬಂಡೀಪುರದ ವ್ಯಕ್ತಿ ಕೋಲಾರದಲ್ಲಿ ಅರೆಸ್ಟ್!

    ಕೋಲಾರ: ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಜಿಲ್ಲೆಯ ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

    ಶೇಖರ್ ಬಂಧಿತ ಆರೋಪಿಯಾಗಿದ್ದಾನೆ. ಇವನು ಮೂಲತಃ ಚಾಮರಾಜನಗರ ಜಿಲ್ಲೆಯ ಬಂಡೀಪುರದ ನಿವಾಸಿ ಎಂದು ತಿಳಿದು ಬಂದಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹುಣಸಹಳ್ಳಿ ಗ್ರಾಮದ ಅಂಬರೀಶ್ ಎಂಬುವರ ಬಾಡಿಗೆ ಮನೆಯಲ್ಲಿ ಕಳೆದ 4 ತಿಂಗಳಿಂದ ವಾಸವಾಗಿದ್ದಾನೆ.

    ನೂರಕ್ಕು ಹೆಚ್ಚು ಸಿಮ್ ಕಾರ್ಡ್‍ಗಳನ್ನು ಖರೀದಿಸಿ, ಹಲವು ಜನರಿಗೆ ಭಯೋತ್ಪಾದನೆಗೆ ಕೈ ಜೋಡಿಸುವಂತೆ ಸಂದೇಶಗಳನ್ನು ರವಾನಿಸಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸೈಬರ್ ಕ್ರೈಂ ಹಾಗೂ ಆರ್ಥಿಕ ಮಾದಕ ದ್ರವ್ಯ ವಿಭಾಗದ ಪೊಲೀಸರು ಆರೋಪಿಯ ಮನೆಯ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ.

    ದಾಳಿ ವೇಳೆ ಆರೋಪಿ ಮನೆಯಲ್ಲಿ ನೂರಕ್ಕೂ ಹೆಚ್ಚು ಸಿಮ್ ಕಾರ್ಡ್, ಮೊಬೈಲ್ ಫೋನ್ ಹಾಗೂ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆರೋಪಿಯು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದು ಬಂದಿದೆ.

    ಹುಣಸೇಹಳ್ಳಿ ಗ್ರಾಮದಲ್ಲಿ ಶೇಖರ್ ಎಂದು ಹೆಸರು ಹೇಳಿ ಮನೆ ಪಡೆದಿದ್ದಾನೆ. ಹಲವು ವ್ಯಕ್ತಿಗಳಿಗೆ ಕಳುಹಿಸಿರುವ ಸಂದೇಶಗಳಲ್ಲಿ “ಒಸಾಮಾ ಬಿನ್ ಲಾಡೆನ್ ಮೈ ಗಾಡ್”, ಭಯೋತ್ಪಾದನೆಗೆ ಕೈ ಜೋಡಿಸುವಂತೆ ಪ್ರಚೋದನೆ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.