Tag: Terrorist Organization

  • ಭಾರತದಲ್ಲಿ ಆತ್ಮಾಹುತಿ ದಾಳಿಗೆ ಸ್ಕೆಚ್ ಹಾಕಿದ್ದ ISIS ಭಯೋತ್ಪಾದಕ ರಷ್ಯಾದಲ್ಲಿ ಅರೆಸ್ಟ್

    ಭಾರತದಲ್ಲಿ ಆತ್ಮಾಹುತಿ ದಾಳಿಗೆ ಸ್ಕೆಚ್ ಹಾಕಿದ್ದ ISIS ಭಯೋತ್ಪಾದಕ ರಷ್ಯಾದಲ್ಲಿ ಅರೆಸ್ಟ್

    ನವದೆಹಲಿ: ಭಾರತದಲ್ಲಿ ಭಯೋತ್ಪಾದಕ ಸಂಚು ಹೆಚ್ಚುತ್ತಿರುವಂತೆ ಕಾಣುತ್ತಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ವೇಳೆ ಹಲವು ದಾಳಿಗೆ ಪ್ರಯತ್ನಗಳು ನಡೆದಿದ್ದಿದ್ದವು. ಇವು ವಿಫಲವಾದ ಬೆನ್ನಲ್ಲೇ ಭಾರತದಲ್ಲಿ ನಡೆಸಲು ಸಂಚು ರೂಪಿಸಿದ್ದ ಬಹುದೊಡ್ಡ ಆತ್ಮಾಹುತಿ ದಾಳಿಯ ಸ್ಕೆಚ್ ಬಯಲಾಗಿದೆ.

    ಭಾರತದ ರಾಜಕೀಯ ನಾಯಕರೊಬ್ಬರ ಮೇಲೆ ಆತ್ಮಾಹುತಿ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದ ಆತ್ಮಾಹುತಿ ದಾಳಿಕೋರನನ್ನು ರಷ್ಯಾದಲ್ಲಿ ಬಂಧಿಸಲಾಗಿದೆ. ರಷ್ಯಾದ ಫೆಡರಲ್ ಭದ್ರತಾ ಸೇವಾ ಅಧಿಕಾರಿಗಳು ಈ ಉಗ್ರಗಾಮಿಯನ್ನು ಬಂಧಿಸಿದ್ದು, ಆತ ಐಸಿಸ್ ಭಯೋತ್ಪಾದಕ ಸಂಘಟನೆಗೆ ಸೇರಿದವನು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಂಡಿತ್‌ ಕುಟುಂಬದ ಭೇಟಿ ತಡೆಯಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ: ಮುಫ್ತಿ

    ಮಧ್ಯ ಏಷ್ಯಾ ಪ್ರಾಂತ್ಯದಲ್ಲಿ ಸಕ್ರಿಯವಾಗಿರುವ ಐಸಿಸ್ ಸಂಘಟನೆಗೆ ರಷ್ಯಾದಲ್ಲಿ ನಿಷೇಧ ಹೇರಲಾಗಿದೆ. ಈ ಸಂಘಟನೆಯ ಸದಸ್ಯನನ್ನು ಮಾಸ್ಕೋನಲ್ಲಿ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ ಘಟಕವು ಸೆರೆ ಹಿಡಿದಿದೆ. ಬಂಧಿತ ವ್ಯಕ್ತಿ ಯಾವ ದೇಶದ ಪ್ರಜೆ ಎಂದು ತಿಳಿದು ಬಂದಿಲ್ಲ. ಆದರೆ, ಆತನನ್ನು ಆತ್ಮಹುತಿ ದಾಳಿ ನಡೆಸುವ ಸಲುವಾಗಿಯೇ ಟರ್ಕಿ ದೇಶದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

    ಬಿಜೆಪಿ ಪ್ರಮುಖರೇ ಟಾರ್ಗೆಟ್: ವಿಚಾರಣೆ ವೇಳೆ ಶಂಕಿತ ಉಗ್ರ ಸ್ಫೋಟಕ ಹೇಳಿಕೆ ನೀಡಿದ್ದಾನೆ. ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದು ಬಿಜೆಪಿ ನಾಯಕರು ನಮ್ಮ ಟಾರ್ಗೆಟ್ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಮೊಟ್ಟೆ ಎಸೆದ ಪ್ರಕರಣಕ್ಕೆ- ಮದುವೆಯ ಫೋಟೋನಾ ಬಿಜೆಪಿಯವ್ರು ಎಡಿಟ್ ಮಾಡಿದ್ದಾರೆ: ಜೀವಿಜಯ

    ಇನ್ನು ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲೆಂದು ಈ ಶಂಕಿತ ಉಗ್ರನನ್ನು ಐಸಿಸ್ ನೇಮಕ ಮಾಡಿಕೊಂಡಿದೆ. ಈ ಉಗ್ರ ಭಾರತ ಪ್ರವೇಶ ಮಾಡುವ ಬಗ್ಗೆ ತಯಾರಿ ಆರಂಭಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

    ಉಗ್ರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದು, ಮಧ್ಯ ಏಷ್ಯಾ, ಭಾರತ ಮತ್ತು ರಷ್ಯಾಕ್ಕಿರುವ ಸಂಬಂಧಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಇನ್ನಷ್ಟು ಮಾಹಿತಿಗಳು ತನಿಖೆಯ ಬಳಿಕವೇ ಗೊತ್ತಾಗಲಿದೆ ಎಂಬುದಾಗಿ ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ – 8 ಮಂದಿ ಸಾವು

    ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ – 8 ಮಂದಿ ಸಾವು

    ಕಾಬೂಲ್: ಕಾರಿನಲ್ಲಿದ್ದ ಬಾಂಬ್ ಸ್ಫೋಟವಾಗಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

    ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆ ಸಂಬಂಧ ಯಾವುದೇ ಭಯೋತ್ಪಾದಕ ಸಂಘಟನೆ ಹೊಣೆ ಹೊತ್ತಿಲ್ಲ ಎಂದು ಸ್ಥಳೀಯ ಪೋಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಅಫ್ಘಾನಿಸ್ತಾನದ ಮತ್ತೊಂದೆಡೆ ಫಿರಂಗಿ ಸ್ಫೋಟಕ್ಕೆ 5 ಮಕ್ಕಳು ಮೃತಪಟ್ಟಿದ್ದಾರೆ. ಈ ಘಟನೆ ವರ್ಜಾ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

  • ಉಗ್ರರ ಮೂವರು ಸಹಚರರು ಅರೆಸ್ಟ್

    ಉಗ್ರರ ಮೂವರು ಸಹಚರರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮಿರದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯನ್ನು ಪೊಲೀಸರು ಭೇದಿಸಿದ್ದು, ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ.

    ಪೊಲೀಸರು ನೀಡಿದ ಹೇಳಿಕೆಯ ಪ್ರಕಾರ, ಪುಲ್ವಾಮಾ ಪೊಲೀಸರು 55 ಆರ್‍ಆರ್ ಮತ್ತು 182/183 ಬಿಎನ್ ಸಿಆರ್‍ಪಿಎಫ್ ಜೊತೆಗೆ ಜೆಎಂನ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ. ಬಂಧಿತ ಸಹಚರರನ್ನು ಜಂಡ್ವಾಲ್‍ನ ಓವೈಸ್ ಅಲ್ತಾಫ್, ಗುಡೂರಿನ ಅಕಿಬ್ ಮಂಜೂರ್, ಕರಿಮಾಬಾದ್ ಪುಲ್ವಾಮಾದ ವಸೀಮ್ ಅಹ್ಮದ್ ಪಂಡಿತ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

    ಈ ಮೂವರು ಜೆಇಎಂ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದು, ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಬೆಂಬಲ ಮತ್ತು ಸಾರಿಗೆಯನ್ನು ಒದಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 01 ಎಕೆ ರೈಫಲ್ 03 ನಿಯತಕಾಲಿಕೆಗಳು, 69 ಎಕೆ ಗುಂಡುಗಳು ಮತ್ತು 01 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    ಎಫ್‍ಐಆರ್ ನಂ. 77/2022 ಕಾನೂನಿನ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ಪುಲ್ವಾಮಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ವರ್ಷ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯ ವಿವಿಧ ಭಾಗಗಳಿಂದ ಜನವರಿಯಿಂದ 162 ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ.

  • ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಕಾರವಾರ: ಉಗ್ರ ಸಂಘಟನೆಗೆಗಳ ಸಂಘಟನೆಗಾಗಿ ಶಿರಸಿ ತಾಲೂಕಿನ ಬನವಾಸಿಯ ಮೌಲ್ವಿ ಹೆಸರಿನಲ್ಲಿ ಸಿಮ್ ಬಳಕೆಯಾಗಿದೆ. ಈ ಕುರಿತು ಶಿರಸಿ ತಾಲೂಕಿನ ಬನವಾಸಿ ಮೂಲದ ಮೌಲ್ವಿ ಅಬ್ದುಲ್ ಮತೀನ್‍ನನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ತನಿಖೆ ನಡೆಸಿ ಬಿಡುಗಡೆಗೊಳಿಸಿದ್ದಾರೆ.

    ಅಬ್ದುಲ್ ಮತೀನ್ ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಅಧ್ಯಯನ ಮಾಡುತ್ತಿದ್ದ, ಈ ವೇಳೆಯಲ್ಲಿ ಈತನೊಂದಿಗೆ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳು ಸಹ ಮದರಸಾದಲ್ಲಿ ಓದುತ್ತಿದ್ದು, ಈ ವೇಳೆ ಶಿರಸಿಯ ಅಬ್ದುಲ್ ಮತೀನ್ ತನ್ನ ಸಹಪಾಠಿಗಳಾದ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳಿಗೆ ತನ್ನದೇ ಹೆಸರಿನ ದಾಖಲೆಗಳಲ್ಲಿ ಸಿಮ್ ಕೊಡಿಸಿದ್ದ.

    ಈತ ವಿದ್ಯಾಭ್ಯಾಸ ಮುಗಿಸಿ ಮಂಗಳೂರಿನ ಮದರಸಾ ಒಂದರಲ್ಲಿ ಸಹಾಯಕ ಮೌಲ್ವಿಯಾಗಿ ಕಾರ್ಯ ನಿರ್ವಹಿಸುತಿದ್ದ. ಆದರೇ ಈತ ತನ್ನ ಸ್ನೇಹಿತರಿಗೆ ತನ್ನ ಹೆಸರಿನಲ್ಲಿ ಸಿಮ್ ಕೊಡಿಸಿದ್ದು, ಈ ಸಿಮ್‍ಗಳು ಪಶ್ಚಿಮ ಬಂಗಾಳ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಬಳಕೆಯಾಗುತ್ತಿವೆ. ಈತನ ಹೆಸರಿನಲ್ಲಿರುವ ಸಿಮ್ ನಿಷೇಧಿತ ಜೆ.ಎಮ್.ಬಿ ಸಂಘಟನೆಯ ಸಂಘಟನೆಗೂ ಬಳಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿ.ಸಿ.ಬಿ, ಇಡಿ, ಎನ್.ಐ.ಎ ಕೂಡ ಈತನನ್ನು ಕರೆಯಿಸಿ ಹೆಚ್ಚಿನ ತನಿಖೆ ಕೈಗೊಂಡಿದೆ.

    ಶಿರಸಿಯ ಬನವಾಸಿ ಮೌಲ್ವಿ ಹೆಸರಿನಲ್ಲಿ ಒಂಬತ್ತಕ್ಕೂ ಹೆಚ್ಚು ಸಿಮ್ ಬಳಕೆಯಾಗುತ್ತಿವೆ. ಇತನ ಹೆಸರಿನಲ್ಲಿ ಬಳಕೆಯಾಗುತ್ತಿರುವ ಸಿಮ್‍ಗಳು ಪಶ್ಚಿಮ ಬಂಗಾಳ, ಜಮ್ಮು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಕ್ರಿಯವಾಗಿವೆ. ತನಿಖೆ ವೇಳೆ ತಾನು ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಕಲಿಯುತಿದ್ದಾಗ ತನ್ನ ಸ್ನೇಹಿತರಿಗೆ ತನ್ನ ದಾಖಲೆ ಮೂಲಕ ಅಬ್ದುಲ್ ಮತೀನ್ ಸಿಮ್ ಖರೀದಿಸಿ ನೀಡಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಯಾರು ಯಾರಿಗೆ ಸಿಮ್ ನೀಡಿದ್ದೇನೆ ಎಂಬುವ ಮಾಹಿತಿಯನ್ನು ಕೇಂದ್ರ ತನಿಖಾ ಸಂಸ್ಥೆಗೆ ಮಾಹಿತಿ ನೀಡಿದ್ದಾನೆ.

    ಕಳೆದ ಆರು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ-ಅಂಕೋಲ ಗಡಿಯಲ್ಲಿ ನಿಷೇಧಿತ ಸೆಟಲೈಟ್ ಫೋನ್‍ಗಳು ಸಕ್ರಿಯವಾಗಿದ್ದು, ಐದಕ್ಕೂ ಹೆಚ್ಚು ಬಾರಿ ಬಳಸಲಾಗಿದೆ. ಈ ಕುರಿತು ಸಹ ಜಿಲ್ಲಾ ಪೊಲೀಸರು, ಸಿಸಿಬಿ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಕಾರವಾರ, ಯಲ್ಲಾಪುರ ಭಾಗದ ಕಾಡುಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಆದರೇ ಇದರ ಬಗ್ಗೆ ಹೆಚ್ಚಿನ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಬರಿಗೈಯಲ್ಲಿ ಹಿಂತಿರುಗುವಂತಾಗಿತ್ತು.

  • ದಾವೂದ್ ನಮ್ಮಲ್ಲೇ ಇದ್ದಾನೆ – ಒಪ್ಪಿಕೊಂಡ ಪಾಕ್

    ದಾವೂದ್ ನಮ್ಮಲ್ಲೇ ಇದ್ದಾನೆ – ಒಪ್ಪಿಕೊಂಡ ಪಾಕ್

    ಇಸ್ಲಾಮಾಬಾದ್: ಭೂಗತ ಲೋಕದ ಪಾತಾಕಿ ದಾವೂದ್ ಇಬ್ರಾಹಿಂ ನಮ್ಮಲ್ಲೇ ಇದ್ದಾನೆ ಎಂದು ಪಾಕಿಸ್ತಾನ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ.

    ಭಾರತದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡು ಪಾಕಿಸ್ತಾನದಲ್ಲಿ ಅವಿತು ಕೂತಿದ್ದಾನೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಮಾತನ್ನು ಪಾಕಿಸ್ತಾನ ತಳ್ಳಿ ಹಾಕಿಕೊಂಡು ಬಂದಿತ್ತು. ಆದರೆ ಇದೀಗ ಸ್ವತಃ ಪಾಕಿಸ್ತಾನವೇ ದಾವೂದ್ ನಮ್ಮ ಕರಾಚಿಯಲ್ಲೇ ಇದ್ದಾನೆ ಎಂದು ಒಪ್ಪಿಕೊಂಡಿದೆ.

    ಆರ್ಥಿಕ ನಿರ್ಬಂಧದಿಂದ ಹೊರ ಬರಲು ಪಾಕಿಸ್ತಾನ ತಮ್ಮ ದೇಶದಲ್ಲಿ ಸಕ್ರಿಯವಾಗಿರುವ 88 ಉಗ್ರ ಸಂಘಟನೆಗಳನ್ನು ಬ್ಯಾನ್ ಮಾಡುವುದಾಗಿ ಹೇಳಿಕೊಂಡಿತ್ತು. ಇದರ ಭಾಗವಾಗಿ ದಾವೂದ್ ನಮ್ಮಲ್ಲಿಯೇ ಇದ್ದಾನೆ ಎಂದು ಒಪ್ಪಿಕೊಂಡಿದ್ದು, ಪಾಕಿಸ್ತಾನ ಸೇರಿದಂತೆ 14 ರಾಷ್ಟ್ರಗಳ ಪಾಸ್‍ಪೋರ್ಟ್‍ಗಳು ದಾವೂದ್ ಬಳಿ ಇವೆ ಎಂದು ಮಾಹಿತಿ ನೀಡಿದೆ. ಅಲ್ಲದೆ ದಾವೂದ್ ಆಸ್ತಿ, ಬ್ಯಾಂಕ್ ಅಕೌಂಟ್ ಸೀಜ್ ಮಾಡಿ ಆರ್ಥಿಕ ದಿಗ್ಬಂಧನ ಹೇರುತ್ತೇವೆ ಎಂದೂ ಕೂಡ ಹೇಳಿದೆ.

    ಪ್ಯಾರಿಸ್ ಮೂಲದ ಎಫ್‍ಎಟಿಎಫ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್) ಉಗ್ರರನ್ನು ಮಟ್ಟಹಾಕದೇ ಇದ್ದರೆ, ನಿಮ್ಮನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಈ ಹಿಂದೆ ಎಚ್ಚರಿಕೆ ನೀಡಿತ್ತು. ಇದರಿಂದ ಹೆದರಿದ ಪಾಕಿಸ್ತಾನ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿಯ ಹಫೀಜ್ ಸಯೀದ್, ಜೆಇಎಂನ ಮಸೂದ್ ಅಜರ್ ಮತ್ತು ದಾವೂದ್ ಇಬ್ರಾಹಿಂ ಸೇರಿದಂತೆ 88 ಉಗ್ರ ಸಂಘಟನೆಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಲು ನೋಟಿಸ್ ನೀಡಿದೆ.

    ಉಗ್ರ ಸಂಘಟನೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಪ್ಯಾರೀಸ್ ಮೂಲದ ಎಫ್‍ಎಟಿಎಫ್ 2019ರಲ್ಲಿ ಪಾಕಿಸ್ತಾನಕ್ಕೆ ಡೆಡ್‍ಲೈನ್ ವಿಧಿಸಿತ್ತು. ಆದರೆ ಈ ಡೆಡ್‍ಲೈನ್ ಅನ್ನು ಕೊರೊನಾ ಕಾರಣದಿಂದಾಗಿ ಮುಂದಕ್ಕೆ ಹಾಕಲಾಗಿತ್ತು. ಈಗ ಈ ಗಡುವು ಮುಗಿದಿದ್ದು, ಕಪ್ಪುಪಟ್ಟಿಗೆ ಸೇರುವ ಭಯದಲ್ಲಿ ಪಾಕಿಸ್ತಾನ ತನ್ನ ಉದರದಲ್ಲಿ ಬಚ್ಚಿಟ್ಟಿಕೊಂಡಿದ್ದ ಉಗ್ರಕ್ರಿಮಿಗಳಿಗೆ ನೋಟಿಸ್ ನೀಡಿದೆ.

  • ಕರಾವಳಿ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆ ಕೆಲಸ ಮಾಡುತ್ತಿರುವುದು ಸತ್ಯ: ಶೋಭಾ ಕರಂದ್ಲಾಜೆ

    ಕರಾವಳಿ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆ ಕೆಲಸ ಮಾಡುತ್ತಿರುವುದು ಸತ್ಯ: ಶೋಭಾ ಕರಂದ್ಲಾಜೆ

    ಬೆಳಗಾವಿ: ಕರಾವಳಿಯ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಗಳು ಕೆಲಸ ಮಾಡುತ್ತಿರುವುದು ಸತ್ಯ. ಕೇರಳ ಹಾಗೂ ಬೇರೆ ಬೇರೆ ಭಾಗಗಳಿಂದ ಬಂದವರು ಸಮಾಜ ದ್ರೋಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಬಾಂಬ್ ಪತ್ತೆಯಾದ ಪ್ರಕರಣ ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

    ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಬಗ್ಗೆ ಯಾರು? ಏಕೆ? ಇಟ್ಟಿದ್ದಾರೆ. ಹೇಗೆ ಅಲ್ಲಿಗೆ ಬಂತು ಎಂಬ ಕುರಿತಾಗಿ ತನಿಖೆ ನಡೆಯಬೇಕಿದೆ. ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದರು.

    ಕರಾವಳಿಯ ಭಾಗದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿ ತೊಡಗಿಕೊಂಡಿವೆ. ಅಲ್ಲದೇ ಸ್ಥಳೀಯ ಮಂಗಳೂರಿಗರನ್ನು ಕೆಲವರು ದುರುಪಯೋಗ ಮಾಡುತ್ತಿದ್ದಾರೆ. ಯಾವ ಸಂಘಟನೆಯ ಜೊತೆ ಯಾರು? ಯಾವುದರಲ್ಲಿ ಶಾಮಿಲಾಗಿದ್ದಾರೆ. ಇಷ್ಟು ದಿನ ಕಾಶ್ಮೀರ, ಸಿರಿಯಾ, ಪಿಓಕೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವಂಥ ಸಂಘಟನೆಯೊಂದಿಗೆ ಶಾಮೀಲಾಗಿದ್ದಾರೆ ಎನ್ನುವುದನ್ನು ತನಿಖೆ ಮಾಡಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿಕೊಂಡು ತನಿಖೆಯನ್ನು ಚುರುಕುಗೊಳಿಸುತ್ತದೆ. ಭಯೋತ್ಪಾದಕ ಚುಟುವಟಿಕೆಯಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಕೊಡಿಸಿ ತಪ್ಪಿತಸ್ಥರ ಮುಖವಾಡ ಕಳಚುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.

    ಪಿಎಫ್‍ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರ ಮಾಹಿತಿಯನ್ನು ಕಲೆ ಹಾಕುತ್ತಿದೆ. ಎಸ್‍ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧ ಮಾಡಬೇಕು. ಕಾರಣ ಈ ಸಂಘಟನೆಯ ಹಲವರು ಸಮಾಜ ದ್ರೋಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಕಷ್ಟು ಕೊಲೆ ಪ್ರಕರಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ತನ್ವಿರ್ ಸೇಠ್ ಅವರಿಗೂ ಕೂಡ ಚೂರಿ ಹಾಕಿ ಹತ್ಯೆ ಮಾಡುವ ಸಂಚು ರೂಪಿಸಿದ್ದ ಇಂಥ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂದರು.