Tag: terrorists

  • ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು; ಇಬ್ಬರ ಬಂಧನ

    – ಪ್ರಮುಖ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಶಂಕಿತ ಭಯೋತ್ಪಾದಕರು

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾದೊಂದಿಗೆ ಸಂಯೋಜಿತವಾಗಿರುವ ಭಯೋತ್ಪಾದಕ ಮಾಡ್ಯೂಲ್ ಅನ್ನು ದೆಹಲಿ ಪೊಲೀಸರು (Delhi Police) ಭೇದಿಸಿದ್ದಾರೆ. ಈ ಜಾಲದಲ್ಲಿದ್ದ ಇಬ್ಬರು ಶಂಕಿತರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳು ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿವೆ.

    ಬಂಧಿತರ ಪೈಕಿ ಓರ್ವ ಅದ್ನಾನ್ ಮಧ್ಯಪ್ರದೇಶದ ಭೋಪಾಲ್ ಮೂಲದವನಾಗಿದ್ದು, ಮತ್ತೊಬ್ಬ ಆರೋಪಿ ದೆಹಲಿಯವನು ಎಂದು ತಿಳಿದು ಬಂದಿದೆ. ದೆಹಲಿಯ ಸಾದಿಕ್ ನಗರ ಮತ್ತು ಭೋಪಾಲ್‌ನಲ್ಲಿ ನಡೆದ ಸಂಘಟಿತ ಕಾರ್ಯಾಚರಣೆಯಲ್ಲಿ ಮಾಹಿತಿ ಪಡೆದ ನಂತರ ಇಬ್ಬರನ್ನು ಬಂಧಿಸಲಾಗಿದೆ. ಶಂಕಿತರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ಆರೋಪಿಗಳು ಐಸಿಸ್ (ISIS) ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ದೆಹಲಿ ಪೊಲೀಸರು ಸೆಪ್ಟೆಂಬರ್‌ನಲ್ಲೂ ದೆಹಲಿ, ಜಾರ್ಖಂಡ್, ತೆಲಂಗಾಣ ಮತ್ತು ಮಧ್ಯಪ್ರದೇಶದಾದ್ಯಂತ ಹಲವಾರು ದಾಳಿಗಳನ್ನು ನಡೆಸಿ ಪಾಕಿಸ್ತಾನ ಮೂಲದ ಇದೇ ರೀತಿಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿದ್ದರು. ದಾಳಿಗಳ ನಂತರ, ಪೊಲೀಸರು ಐವರು ಭಯೋತ್ಪಾದಕರನ್ನು ಬಂಧಿಸಿದ್ದರು. ಅವರನ್ನು ಅಶರ್ ದಾನಿಶ್, ಅಫ್ತಾಬ್, ಸುಫಿಯಾನ್, ಮುಜಾಪಾ ಮತ್ತು ಕಮ್ರಾನ್ ಖುರೇಷಿ ಅಲಿಯಾಸ್ ಸಮರ್ ಖಾನ್ ಎಂದು ಗುರುತಿಸಲಾಗಿತ್ತು. ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

  • ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

    – ದೆಹಲಿಯ ಹಲವೆಡೆ ಭಯೋತ್ಪಾದಕ ದಾಳಿಗೆ ಪ್ಲ್ಯಾನ್‌
    – ಆತ್ಮಹತ್ಯಾ ದಾಳಿಗೆ ತರಬೇತಿ ಪಡೆಯುತ್ತಿದ್ದ ಶಂಕಿತರು

    ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ.

    ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌ ವಿಶೇಷ ಘಟಕ (Delhi Police Speical Unit) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್‌ ಮಾಡ್ಯೂಲ್‌ (ISIS Module) ಭೇದಿಸಿದ್ದು, ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬನನ್ನ ಅದ್ನಾನ್‌ ಎಂದು ಗುರುತಿಸಲಾಗಿದೆ. ಈತ ಮೂಲತಃ ಮಧ್ಯಪ್ರದೇಶದ ಭೋಪಾಲ್ ಮೂಲದವನು, ಮತ್ತೊಬ್ಬ ಶಂಕಿತನನ್ನ ದೆಹಲಿಯ ಸಾದಿಕ್ ನಗರದಲ್ಲಿ ಬಂಧಿಸಲಾಗಿದೆ. ಈ ಇಬ್ಬರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ದೆಹಲಿಯಲ್ಲಿ ಪ್ರಮುಖ ದಾಳಿ ನಡೆಸಲು ಪ್ಲ್ಯಾನ್‌ ಮಾಡುತ್ತಿದ್ದರು. ಇಬ್ಬರು ಫಿದಾಯೀನ್ (ಆತ್ಮಹತ್ಯಾ) ದಾಳಿಗಳಿಗೆ ತರಬೇತಿ ಪಡೆದಿದ್ದರು. ಸದ್ಯ ಇಬ್ಬರನ್ನ ಬಂಧಿಸಿದ್ದು, ಅವರ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಸ್ಫೋಟಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆರ್‌ಎಸ್‌ಎಸ್ ಫೈಟ್‌ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ

    ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಅಧಿಕಾರಿಗಳು ಸಂಪೂರ್ಣ ಜಾಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಐಸಿಸ್‌ ಜಾಲದಲ್ಲಿ ಇನ್ನು ಎಷ್ಟು ಮಂದಿ ಇದ್ದಾರೆ? ಭಾರತದಲ್ಲಿ ಬೇರೆ ಎಲ್ಲೆಲ್ಲಿ ದಾಳಿಗೆ ಯೋಜನೆ ರೂಪಿಸಲಾಗಿದೆ? ಎಂಬೆಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಬಲಿ

  • ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    – ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್‌ ಪ್ಯಾಡ್‌ಗಳು ಸಕ್ರಿಯ; ಗುಪ್ತಚರ ವರದಿ

    ಶ್ರೀನಗರ: ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.

    ಹೌದು. ಗುಪ್ತಚರ ವರದಿಗಳ ಪ್ರಕಾರ, ಎಲ್‌ಒಸಿ ಗಡಿಯುದ್ಧಕ್ಕೂ ಹಲವಾರು ಲಾಂಚ್‌ ಪ್ಯಾಡ್‌ಗಳಲ್ಲಿ ಭಯೋತ್ಪಾದಕರು (Terrorists) ಕಣಿವೆಯೊಳಗೆ ನುಸುಳಲು ಕಾಯುತ್ತಿದ್ದಾರೆ. ಚಳಿಗಾಲದ ಸಂದರ್ಭದಲ್ಲಿ ಇದು ನಡೆಯುತ್ತಿರುತ್ತದೆ. ಹಾಗಾಗಿ ಚಳಿಗಾಲಕ್ಕೂ ಮುನ್ನವೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಎಸ್‌ಎಫ್‌ ಮೂಲಗಳು ತಿಳಿಸಿವೆ.

    ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ʻವುಲರ್ 2.0ʼ ಮ್ಯಾರಥಾನ್ ವೇಳೆ ಈ ಕುರಿತು ಬಿಎಸ್‌ಎಫ್ ಹೆಚ್ಚುವರಿ ಮಹಾನಿರ್ದೇಶಕ (ADG) ಸತೀಶ್ ಎಸ್. ಖಂಡ್ರೆ ಮಾತನಾಡಿದರು.

    ಚಳಿಗಾಲ ಶುರುವಾಗುತ್ತಿದ್ದಂತೆ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಹಾಗಾಗಿ ಗಡಿಯಲ್ಲಿ ಕಣ್ಗಾವಲು ಬಲಪಡಿಸಿದ್ದೇವೆ. ನಮ್ಮ ಸೈನಿಕರು, ಅಧಿಕಾರಿಗಳನ್ನ ಅಲರ್ಟ್‌ ಮಾಡಿದ್ದೇವೆ. ಗುಪ್ತಚರ ಮಾಹಿತಿಯ ಪ್ರಕಾರ, ಈಗಾಗಲೇ ಗಡಿಯಲ್ಲಿ ಹಲವಾರು ಭಯೋತ್ಪಾದಕ ಲಾಂಚ್‌ ಪ್ಯಾಡ್‌ಗಳನ್ನ ಸಕ್ರಿಯಗೊಳಿಸಿದೆ. ಅಲ್ಲಿಂದ ಭಯೋತ್ಪಾದಕರು ಒಳನುಸುಳಲು ತಯಾರಿ ನಡೆಸುತ್ತಿದ್ದಾರೆ. ಸದ್ಯಕ್ಕೆ ಎಷ್ಟು ಉಗ್ರರು ಇದ್ದಾರೆ ಅನ್ನೋದು ಅಂದಾಜು ಮಾಡುವುದು ಕಷ್ಟ. ಆದ್ರೆ ಕೆಲ ಚಟುವಟಿಕೆಗಳು ಸಕ್ರಿಯಗೊಂಡಿರುವ ಬಗ್ಗೆ ವರದಿ ಬಂದಿದೆ. ಹಾಗಾಗಿ ನಾವು ಗಡಿಯ ಎಲ್ಲಾ ಭಾಗದಲ್ಲು ಸಕ್ರಿಯವಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಸೇನೆ, ಬಿಎಸ್‌ಎಫ್‌ ಜಂಟಿ ಕಣ್ಗಾವಲು
    ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್‌ಎಫ್‌ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ನಮ್ಮ ಸೈನಿಕರ ಕಣ್ತಪ್ಪಿಸಿ‌ ಬರಲು ಯಾರಿಂದಲೂ ಸಾಧ್ಯವಿಲ್ಲ ಎಂದಿದೆ ಬಿಎಸ್‌ಎಪ್.

    ಚಳಿಗಾಲದಲ್ಲಿ ಏಕೆ ನುಸುಳುವಿಕೆ ಹೆಚ್ಚಳ?
    ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್‌ಎಫ್‌ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್‌ಗಳನ್ನು ಸಹ ನಿಯೋಜನೆ ಮಾಡಲಾಗಿದೆ.

  • ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ದಾಳಿ (Pahalgam Attack) ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬಂಧಿಸಿದ್ದಾರೆ.

    ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳ ಪತ್ತೆಗೆ ನೆರವಾಯ್ತು ಬುಲೆಟ್‌ ಶೆಲ್‌ ಟೆಸ್ಟಿಂಗ್‌ – ಬ್ಯಾಲಿಸ್ಟಿಕ್ಸ್‌ ಮ್ಯಾಚಿಂಗ್‌ ಹೇಗೆ ನಡೆಯುತ್ತೆ?

    ಕಟಾರಿಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಗೆ ಕಾರಣರಾದ ಎಲ್ಲರನ್ನು ಪತ್ತೆಹಚ್ಚುವಲ್ಲಿ ಸರ್ಕಾರ ನಿರಂತರ ಗಮನಹರಿಸುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ.

    ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಬಣವು ಪಹಲ್ಗಾಮ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಶ್ರೀನಗರ ಬಳಿಯ ಡಚಿಗಮ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮೇ 22 ರಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಅದರ ಬೆನ್ನಲ್ಲೇ ಆಪರೇಷನ್ ಮಹಾದೇವ್ ನಡೆಸಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

  • ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ – ಮತ್ತಿಬ್ಬರು ಅಡಗಿರುವ ಶಂಕೆ, ತೀವ್ರ ಶೋಧ

    ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ – ಮತ್ತಿಬ್ಬರು ಅಡಗಿರುವ ಶಂಕೆ, ತೀವ್ರ ಶೋಧ

    – ಮೂವರು ಯೋಧರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ (Pakistan) ಮೂಲದ ಲಷ್ಕರ್-ಎ-ತೈಬಾ (LeT) ಸಂಘಟನೆಯ ಪ್ರಮುಖ ಉಗ್ರ (Terrorists) ಸೇರಿದಂತೆ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಸೇನೆಗೆ ನೀಡಿದ್ದರು. ಈ ಮಾಹಿತಿ ಆಧರಿಸಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ಗುಂಡು ಹಾರಿಸಿದ್ದಾರೆ. ಸೇನೆ ನಡೆಸಿದ ದಾಳಿಯಿಂದ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಅಮಿತ್‌ ಶಾ ಜಮ್ಮು ಕಾಶ್ಮೀರದಲ್ಲಿದ್ದಾಗಲೇ ಒಳನುಸುಳಲು ಯತ್ನ – ಶಂಕಿತ ಉಗ್ರರ ಮೇಲೆ ಗುಂಡಿನ ದಾಳಿ

    ಹತ್ಯೆಯಾದ ಎಲ್‌ಇಟಿಯ ಪ್ರಮುಖ ಉಗ್ರನನ್ನು ರೆಹಮಾನ್ ಭಾಯ್ ಎಂದು ಗುರುತಿಸಲಾಗಿದೆ. ಆತನ ಮೃತದೇಹವನ್ನು ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಸೇನೆ ಪತ್ತೆ ಹಚ್ಚಿದೆ.

    ಕಾರ್ಯಾಚರಣೆಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಸೇರಿದಂತೆ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂರು ಭಯೋತ್ಪಾದಕರು ಅಡಗಿರಬಹುದು ಎಂಬ ಶಂಕೆ ಇದೆ. ಈ ಭಾಗದಲ್ಲಿ ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

  • ಇಸ್ರೇಲಿನ ಜೆರುಸಲೇಂನಲ್ಲಿ ಉಗ್ರರ ದಾಳಿ – ಕನಿಷ್ಠ 5 ಬಲಿ, ಹಲವು ಮಂದಿಗೆ ಗಾಯ

    ಇಸ್ರೇಲಿನ ಜೆರುಸಲೇಂನಲ್ಲಿ ಉಗ್ರರ ದಾಳಿ – ಕನಿಷ್ಠ 5 ಬಲಿ, ಹಲವು ಮಂದಿಗೆ ಗಾಯ

    ಟೆಲ್‌ ಅವಿವ್‌: ಇಸ್ರೇಲಿನ (Israel) ಪೂರ್ವ ಜೆರುಸಲೇಂನಲ್ಲಿ (Jerusalem) ಭಯೋತ್ಪಾದನ ದಾಳಿ ನಡೆದಿದ್ದು ಕನಿಷ್ಠ 5 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

    ಜೆರುಸಲೆಮ್‌ನ ಯಿಗಲ್ ಯಾಡಿನ್ ಸ್ಟ್ರೀಟ್‌ನಲ್ಲಿರುವ ರಾಮೋಟ್ ಜಂಕ್ಷನ್‌ ಈ ದಾಳಿ ನಡೆದಿದೆ. ಉಗ್ರರು ಬಸ್ಸನ್ನು ಹತ್ತಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರಿಂದ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

    ಉಗ್ರರ ದಾಳಿ ವಿಚಾರ ತಿಳಿದು ಇಸ್ರೇಲ್‌ ಭದ್ರತಾ ಪಡೆ ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ಹತ್ಯೆಗೈದಿದೆ. ಇಸ್ರೇಲ್‌ ಕಾಲಮಾನ ಬೆಳಗ್ಗೆ 10:13ಕ್ಕೆ ದಾಳಿ ನಡೆದಿದೆ. ಇದನ್ನೂ ಓದಿ: ಕೆಂಪು ಸಮುದ್ರದಲ್ಲಿ ಟಾಟಾ ಫೈಬರ್‌ ಕೇಬಲ್‌ ತುಂಡು ಭಾರತ ಸೇರಿ ಹಲವು ದೇಶಗಳಲ್ಲಿ ಇಂಟರ್‌ನೆಟ್‌ ವ್ಯತ್ಯಯ

    ಗುಂಡಿನ ದಾಳಿ ನಡೆದ ಜಾಗ ಜನನಿಬಿಡ ಪ್ರದೇಶವಾಗಿತ್ತು. ಗುಂಡಿನ ಶಬ್ಧ ಕೇಳುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ.

    ಉಗ್ರಗಾಮಿ ಸಂಘಟನೆ ಹಮಾಸ್‌ಗೆ ಶಸ್ತ್ರಾಸ್ತ್ರಗಳನ್ನು ಕೈಬಿಟ್ಟು ಶರಣಾಗಬೇಕು ಇಲ್ಲದೇ ಇದ್ದರೆ ಸಂಪೂರ್ಣ ನಾಶಪಡಿಸಲಾಗುವುದು ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಪ್ಯಾಲೆಸ್ಟೀನಿಯನ್ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಈ ಗುಂಡಿನ ದಾಳಿ ನಡೆದಿದೆ.

  • Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ –  ಇಬ್ಬರು ಉಗ್ರರ ಎನ್‌ಕೌಂಟರ್

    Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಶ್ರೀನಗರ: ಜಮ್ಮು ಕಾಶ್ಮೀರದ (Jammu and Kashmir) ಬಂಡಿಪೋರಾ (Bandipora) ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ (LoC) ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಹೊಡೆದುರುಳಿಸಿದೆ.

    ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

  • ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    – ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲೇ ಗಡಿಯಲ್ಲಿ ಒಳನುಸುಳಲು ಉಗ್ರರ ಯತ್ನ

    ಶ್ರೀನಗರ: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳ ನುಸುಳುಕೋರರನ್ನು ಬಂಧಿಸಲಾಗಿತ್ತು.

    ಹಿರಾನಗರ ವಲಯದ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ 4 ಗಂಟೆ ಸುಮಾರಿಗೆ ಜಾಗೃತ ಪಡೆಗಳು ಒಳನುಗ್ಗುವವರನ್ನು ಗಮನಿಸಿದರು. ಅವರನ್ನು ನಿಲ್ಲಿಸಲು ಸವಾಲು ಹಾಕಲಾಯಿತು. ನುಸುಳುಕೋರರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೇಳದ ಹಿನ್ನಲೆ ಮುಂಭಾಗದ ಪೋಸ್ಟ್‌ಗಳನ್ನು ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಒಳನುಗ್ಗುವವರಲ್ಲಿ ಒಬ್ಬರಿಗೆ ಗಾಯವಾಯಿತು.

  • ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಶ್ರೀನಗರ: ಜುಲೈ 28ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವದಲ್ಲಿ (Operation Mahadev) ಮೃತಪಟ್ಟ ಮೂವರು ಉಗ್ರರು ಪಾಕಿಸ್ತಾನದವರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಭದ್ರತಾ ಸಂಸ್ಥೆ ತಿಳಿಸಿದೆ.

    ಭಾರತೀಯ ಭದ್ರತಾ ಏಜೆನ್ಸಿಗಳು ಕಲೆಹಾಕಿದ ಮಾಹಿತಿಗಳು ಸೇರಿದಂತೆ ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆ ಮತ್ತು ಬಯೋಮೆಟ್ರಿಕ್ ದಾಖಲೆಗಳನ್ನು ತನಿಖೆ ನಡೆಸಿದ ವೇಳೆ ಪಹಲ್ಗಾಮ್‌ನಲ್ಲಿ ದಾಳಿ (Pahalgam Terrorists) ನಡೆಸಿದ್ದ ಈ ಮೂವರು ಪಾಕಿಸ್ತಾನದವರು ಎಂಬುದು ತಿಳಿದುಬಂದಿದೆ. ಉಗ್ರರನ್ನು ಎಲ್‌ಇಟಿ ಹಿರಿಯ ಕಾರ್ಯಕರ್ತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

    ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಈ ಉಗ್ರರು ಡಚಿಗಮ್-ಹರ್ವಾನ್ ಅರಣ್ಯ ಪ್ರದೇಶದಲ್ಲಿ (Dachigam-Harwan Forest) ಅಡಗಿಕೊಂಡಿದ್ದರು. ಇದನ್ನೂ ಓದಿ: ಸಾರಿಗೆ ಮುಷ್ಕರ – ಸಿಎಂ ಸಭೆಯಲ್ಲಿ ಏನಾಯ್ತು? ಸಾರಿಗೆ ಮುಖಂಡರು ಸಂಧಾನ ತಿರಸ್ಕರಿಸಿದ್ದು ಯಾಕೆ?

    ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ಮತ್ತು ನೋಂದಣಿ ಪ್ರಾಧಿಕಾರದ ಬಯೋಮೆಟ್ರಿಕ್ ದಾಖಲು, ಮತದಾರರ ಗುರುತಿನ ಚೀಟಿಗಳು ಮತ್ತು ಡಿಜಿಟಲ್ ಸ್ಯಾಟಲೈಟ್ ಫೋನ್ ಮಾಹಿತಿ, ಲಾಗ್‌ಗಳು ಮತ್ತು ಜಿಪಿಎಸ್ ವೇ ಪಾಯಿಂಟ್‌ಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಗ್ರಹಿಸಿದ ಪ್ರಮುಖ ಪುರಾವೆಗಳಲ್ಲಿ ಮೂವರು ಭಯೋತ್ಪಾದಕರು ಪಾಕಿಸ್ತಾನದವರು ಎಂಬುದು ದೃಢಪಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರವೇ ನೀಡಿರುವ ದಾಖಲೆಗಳು ದೊರೆತಿದ್ದು, ಯಾವುದೇ ಸಂಶಯವಿಲ್ಲದೇ ಉಗ್ರರು ಪಾಕಿಸ್ತಾನಿಗಳು ಎಂಬುದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಸುಲೇಮಾನ್ ಶಾ ಅಲಿಯಾಸ್ ‘ಫೈಜಲ್ ಜತ್’ ಎ ಗ್ರೇಡ್ ಉಗ್ರನಾಗಿದ್ದು, ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದಾನೆ. ಈತನ ಆಪ್ತ ಅಬು ಹಮಾಜಿ ಅಲಿಯಾಸ್ ಅಫ್ಘಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದ. ಮತ್ತೋರ್ವ ಯಾಸಿರ್ ಅಲಿಯಾಸ್ ಜಿಬ್ರಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದು, ಮೂವರನ್ನು ಕೂಡ ಆಪರೇಷನ್ ಮಹಾದೇವ ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

  • Gujarat | ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ

    Gujarat | ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ

    ಅಹಮದಾಬಾದ್: ನಕಲಿ ನೋಟು ದಂಧೆ ಹಾಗೂ ಭಯೋತ್ಪಾದನೆಯ ಸಿದ್ಧಾಂತವನ್ನು ಹರಡುತ್ತಿದ್ದ ಅಲ್-ಖೈದಾ (Al-Qaeda )ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಎಟಿಎಸ್ (Gujarat ATS) ಬಂಧಿಸಿದೆ.

    ಮೊಹಮ್ಮದ್ ಫೈಕ್, ಮೊಹಮ್ಮದ್ ಫರ್ದೀನ್, ಸೆಫುಲ್ಲಾ ಕುರೇಶಿ ಮತ್ತು ಜೀಶನ್ ಅಲಿ ಬಂಧಿತ ಉಗ್ರರು. ಇಬ್ಬರು ಉಗ್ರರನ್ನು ಗುಜರಾತ್, ಇನ್ನೋರ್ವ ದೆಹಲಿ ಹಾಗೂ ಮತ್ತೋರ್ವ ಉಗ್ರನನ್ನು ನೋಯ್ಡಾದಿಂದ ಬಂಧಿಸಲಾಗಿದೆ. ಈ ನಾಲ್ವರು ಭಯೋತ್ಪಾದಕರು ಸಾಮಾಜಿಕ ಜಾಲತಾಣದ ಅಪ್ಲಿಕೇಶನ್‌ಗಳ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ಎಟಿಎಸ್ ಡಿಐಜಿ ಸುನಿಲ್ ಜೋಶಿ ತಿಳಿಸಿದರು. ಇದನ್ನೂ ಓದಿ: ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

    ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಗಳನ್ನು ರೂಪಿಸಲು ಸಂಚು ರೂಪಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ನಾವು ಬಂಧಿಸಿದ್ದೇವೆ. ವಾಟ್ಸಾಪ್ ಮೂಲಕ ಜಿಹಾದಿ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಯುವಕರು ಭಯೋತ್ಪಾದನೆಯಲ್ಲಿ ತೊಡಗುವಂತೆ ಪ್ರಚೋದಿಸುತ್ತಿದ್ದರು. ಅಲ್ಲದೇ ಈ ಕುರಿತು ಯಾವುದೇ ಮಾಹಿತಿ ಸಿಗದಂತೆ ಅಟೋ ಡಿಲೀಟ್ ಆಪ್‌ಗಳನ್ನು ಬಳಸುತ್ತಿದ್ದರು ಎಂದು ಸುನಿಲ್ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಅಡಿಕೆ ಶೆಡ್ ನಿರ್ಮಾಣ ಮಾಡ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ – ಮೂವರು ದುರ್ಮರಣ