Tag: terrorists

  • ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    – ಭಾರತಕ್ಕೆ ಬೇಕಾಗಿದ್ದ ಉಗ್ರರನ್ನು ಹೊಡೆದಿದ್ದೇವೆ

    ಹುಬ್ಬಳ್ಳಿ: ಇನ್ನು ಮುಂದೆ ಪಾಕಿಸ್ತಾನ ಕೆಮ್ಮಿದ್ರೆ ಸಾಕು, ಭಾರತೀಯ ಸೇನೆ(Indian Army) ಪಾಕ್ ಬಾರ್ಡರಿಗೆ ನುಗ್ಗುತ್ತದೆ ಎಂದು ದೊಡ್ಡ ಸಂದೇಶವನ್ನು ಜಗತ್ತಿಗೆ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹೇಳಿದರು.

    ಹುಬ್ಬಳ್ಳಿಯಲ್ಲಿ(Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವದ ನಾಲ್ಕನೇ ಅತಿ ದೊಡ್ಡ ಮಿಲಿಟರಿ ಹೊಂದಿರುವುದು ಭಾರತ ವಿಶ್ವಸಂಸ್ಥೆಯ ನಿಯಮಗಳನ್ನು ಧಿಕ್ಕರಿಸಿ ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದ್ದೇವೆ. ಬಹಳಷ್ಟು ಸಂಖ್ಯೆ ಹೇಳಲ್ಲ. ಆದ್ರೆ ಭಾರತಕ್ಕೆ ಬೇಕಾದ ಉಗ್ರರಲ್ಲಿ ಒಂದಿಬ್ಬರನ್ನು ಬಿಟ್ರೆ ಎಲ್ಲಾ ಉಗ್ರರನ್ನು ಹೊಡೆದಿದ್ದೇವೆ ಎಂದರು. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಾಕ್ ಡ್ರಿಲ್‌ನಲ್ಲಿ ಸ್ವದೇಶಿ ನಿರ್ಮಿತ ಫೈರ್ ಬೋಟ್ ಬಳಕೆ

    ಭಾರತ ಅಭಿವೃದ್ಧಿಯನ್ನು ಹೊಂದುತ್ತಿದೆ. ಆದರೆ ಇದು ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಮೀಸಲಾತಿ, ಸಂವಿಧಾನದ ಬದಲಾವಣೆ ಮಾಡುತ್ತದೆ ಎಂದು ದೇಶದೊಳಗೆ ಆಂತರಿಕ ಸಮಸ್ಯೆ ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ

    ಸದ್ಯಕ್ಕೆ ಕದನ ವಿರಾಮ ಆಗಿದೆ. ಈಗಾಗಲೇ ನಾವು ಭಯೋತ್ಪಾದನೆಯ ವಿರುದ್ಧ ಯುದ್ಧ(War on Terror) ಎಂದು ಪರಿಗಣಿಸಿದ್ದೇವೆ. ಉಗ್ರರು ಶುದ್ಧರಾಗಿಲ್ಲ. ಮೂರ್ನಾಲ್ಕು ದಿನಗಳ ಆಪರೇಷನ್‌ನಲ್ಲಿ ಉಗ್ರರ ಅಡಗುತಾಣ, ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಅಮೆರಿಕ ಮಧ್ಯಸ್ಥಿಕೆ ಕುರಿತು ಈಗಾಗಲೇ ಹೇಳಿಕೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ದೇಶ ಒಂದಾಗಿರಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡುತ್ತೇನೆ. ಎಲ್ಲಿ ಏನಾಗಿದೆ ಎನ್ನುವುದನ್ನು ತಿಳಿದು ಶಿವಸೇನಾ ಮುಖಂಡರು ಮಾತನಾಡಬೇಕು. ಭಾರತ ಮತ್ತು ಪಾಕಿಸ್ತಾನದ(Pakistan) ಡಿಜಿಎಂ ಮಾತುಕತೆ ಮೇಲೆ ಈ ಪ್ರಕ್ರಿಯೆಯಾಗಿದೆ. ಬಹಳ ಸ್ಪಷ್ಟವಾಗಿ ಕೆಲವು ಶರತ್ತುಗಳ ಮೇಲೆ ಈ ಪ್ರಕ್ರಿಯೆಯಾಗಿದೆ ಎಂದರು. ಇದನ್ನೂ ಓದಿ: ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

    ಇನ್ನೂ ಆಹಾರ ಸಂಸ್ಕರಣೆ ಬೆಲೆ ಏರಿಕೆ ಮಾಡುವ ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, ನಮ್ಮ ದೇಶದಲ್ಲಿ ಅಕ್ಕಿ ಗೋಧಿ ಸೇರಿದಂತೆ ದವಸ ಧಾನ್ಯಗಳು ಒಂದೂವರೆ ವರ್ಷಕ್ಕೆ ಆಗುವಷ್ಟು ಇದೆ. ಸಂಗ್ರಹಣೆ ಹಾಗೂ ಸಾಗಾಟ ಮಾಡುವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ನಮ್ಮ ಇಲಾಖೆಯಿಂದ ಅಧಿಸೂಚನೆ ಸಹ ನೀಡಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಬಹಳ ದೊಡ್ಡ ಪ್ರಮಾಣದಲ್ಲಿ ನಮ್ಮ ಬಳಿ ಆಹಾರ ಸಂಗ್ರಹಣೆ ಇದೆ ಎಂದು ಹೇಳಿದರು.

  • ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ ಸೇನೆ (Indian Army) ತಿಳಿಸಿದೆ.

    ಹಿರಿಯ ಮಿಲಿಟರಿ ಅಧಿಕಾರಿಗಳು ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು. ಆಪರೇಷನ್ ಸಿಂಧೂರ ಅಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಟಾರ್ಗೆಟ್‌ ಮಾಡಿತು. ಮೇ 7 ರಂದು ದಾಳಿಗಳನ್ನು ನಡೆಸಿ, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತು ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ

    ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮೇಲೆ ಭಾರತ ನಡೆಸಿದ ಮಿಲಿಟರಿ ದಾಳಿಗಳು ಭಯೋತ್ಪಾದಕರನ್ನು ಕೊಲ್ಲುವ ಉದ್ದೇಶವನ್ನು ಹೊಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ಬಗ್ಗೆ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ, ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಮತ್ತು ಮೇಜರ್ ಜನರಲ್ ಸಂದೀಪ್ ಎಸ್ ಶಾರದಾ ವಿವರ ನೀಡಿದ್ದಾರೆ.

    ಪಾಕಿಸ್ತಾನ ನಡೆಸಿದ ಡ್ರೋನ್‌ ದಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಭಾರತದ ವಾಯು ರಕ್ಷಣಾ ಪಡೆ ಯಶಸ್ವಿಯಾಗಿದೆ. ಜೊತೆಗೆ ಪ್ರತಿದಾಳಿ ಕೂಡ ನಡೆಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿರುವ ರೆಡಾರ್‌ ಸ್ಥಾಪನೆಯನ್ನು ನಾಶಪಡಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

    ಪಾಕಿಸ್ತಾನದ ದಾಳಿಯನ್ನು ತಡೆಯಲು ಸೇನೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ವಿವರಿಸಿದ್ದಾರೆ.

  • ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ಶ್ರೀನಗರ: ಕಾಶ್ಮೀರದಲ್ಲಿ (Jammu Kashmir) ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು (Terrorists) ಬಂಧಿಸಲಾಗಿದೆ.

    ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದಕ್ಷಿಣ ಏಷ್ಯಾ ಶಾಂತಿಗಾಗಿ ಪಾಕ್‌ಗೆ ನಮ್ಮ ಬೆಂಬಲವಿದೆ – ಚೀನಾ


    ಬಂಧಿತರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ.

  • ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ (Poonch) ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು (Indian Army) ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

    ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್(Surankot) ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಇದನ್ನೂ ಓದಿ: ಅಮೆರಿಕದ ಹೊರಗಡೆ ತಯಾರಾದ ಸಿನಿಮಾಗಳಿಗೆ 100% ಸುಂಕ – ಟ್ರಂಪ್ ಘೋಷಣೆ

    ಭದ್ರತಾ ಪಡೆಯು ಅಡಗುತಾಣದಲ್ಲಿ ಪತ್ತೆಯಾದ ಸಂಹವನ ಉಪಕರಣವನ್ನು ವಶಕ್ಕೆ ಪಡೆದಿದೆ. ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಭಯೋತ್ಪಾದಕ ಕೇಂದ್ರಬಿಂದುವಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡದ ನಡುವೆ BSFಗೆ ಇನ್ನಷ್ಟು ಬಲ – 16 ಹೊಸ ಬೆಟಾಲಿಯನ್ ಸೇರ್ಪಡೆ?

    ಭಯೋತ್ಪಾದಕರ (Terrorists) ಈ ಅಡಗುತಾಣವನ್ನು ಪತ್ತೆ ಹಚ್ಚುವ ಮೂಲಕ ಸೇನೆಯು ಅತಿದೊಡ್ಡ ದುರಂತವನ್ನೇ ತಪ್ಪಿಸಿದೆ. ಅಲ್ಲದೇ ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ಉಗ್ರರು ಜಮ್ಮು ಕಾಶ್ಮೀರದಲ್ಲಿ ಮತ್ತೆ ದಾಳಿಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.

  • ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಉಗ್ರರಿಗೆ ಆಹಾರ, ಆಶ್ರಯ ನೀಡಿದ್ದ ವ್ಯಕ್ತಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಗೆ ಆಹಾರ ಮತ್ತು ಆಶ್ರಯ ನೀಡಿ ಸಹಾಯ ಮಾಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    23 ವರ್ಷದ ಇಮಿತಿಯಾಜ್ ಅಹ್ಮದ್ ಮ್ಯಾಗ್ರೆ ನದಿಗೆ ಹಾರಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹೌತಿ ಬಂಡುಕೋರ ಮೇಲೆ ಸರಣಿ ದಾಳಿ ನಡೆಸಿ ಪೆಟ್ಟು ಕೊಡ್ತೇವೆ: ಬೆಂಜಮಿನ್ ನೆತನ್ಯಾಹು

    ಶನಿವಾರ (ಮೇ 3) ಪೊಲೀಸರು ಮ್ಯಾಗ್ರೆನನ್ನ ಬಂಧಿಸಿದ್ದರು. ವಿಚಾರಣೆ ವೇಳೆ ಕುಲ್ಗಾಮ್‌ನ ತಂಗ್‌ಮಾರ್ಗ್‌ನಲ್ಲಿರುವ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿರುವುದಾಗಿ ಆತ ಒಪ್ಪಿಕೊಂಡಿದ್ದ. ಬಳಿಕ ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಲು ಭದ್ರತಾ ಪಡೆ ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ರಜೆ ರದ್ದು – ಅತ್ತ DRDOದಿಂದ ಏರ್‌ಶಿಪ್‌ ಪ್ರಯೋಗ ಯಶಸ್ವಿ

    ಭಾನುವಾರ ಬೆಳಗ್ಗೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ವೇಶಾವ್‌ ನದಿಗೆ ಹಾರಿದ್ದಾನೆ. ಆದರೆ ನೀರಿನ ರಭಸಕ್ಕೆ ಸಿಲುಕಿ, ನೀರಿನಲ್ಲೇ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ ನೀರಿನಲ್ಲಿ ಮುಳುಗುತ್ತಿರುವ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಆಯ್ಕೆ ಮಾಡಿದ್ದು 4, ಟಾರ್ಗೆಟ್‌ 1 – ದಾಳಿಗೆ ಪಕ್ಕಾ ಪ್ಲ್ಯಾನ್‌ ಮಾಡಿದ್ದ ಉಗ್ರರು

    ಆಯ್ಕೆ ಮಾಡಿದ್ದು 4, ಟಾರ್ಗೆಟ್‌ 1 – ದಾಳಿಗೆ ಪಕ್ಕಾ ಪ್ಲ್ಯಾನ್‌ ಮಾಡಿದ್ದ ಉಗ್ರರು

    – ಪಹಲ್ಗಾಮ್‌ ಜೊತೆಗೆ ನಾಲ್ಕು ತಾಣಗಳಲ್ಲಿ ದಾಳಿಗೆ ಹೊಂಚು ಹಾಕಿದ್ದ ಭಯೋತ್ಪಾದಕರು

    ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ (Pahalgam Terror Attack) ತನಿಖೆಗಿಳಿದಿರುವ ತನಿಖಾ ಸಂಸ್ಥೆಗಳು ಹಲವಾರು ಅಚ್ಚರಿದಾಯಕ ಅಂಶಗಳನ್ನು ಬಹಿರಂಗಪಡಿಸಿವೆ. ಭಯೋತ್ಪಾದಕರು ಪಹಲ್ಗಾಮ್‌ ಜೊತೆ ಇನ್ನೂ ಮೂರು ತಾಣಗಳನ್ನು ಟಾರ್ಗೆಟ್‌ ಮಾಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.

    ಏಪ್ರಿಲ್ 22 ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯನ್ನು ನಡೆಸಿದ ಭಯೋತ್ಪಾದಕರು ಘಟನೆಗೆ ಎರಡು ದಿನಗಳ ಮೊದಲೇ ಬೈಸರನ್ ಕಣಿವೆಯಲ್ಲಿ ಇದ್ದರು ಎಂದು ಮೂಲಗಳು ತಿಳಿಸಿವೆ. ಬೈಸರನ್‌ ವ್ಯಾಲಿಯಲ್ಲಿ ದಾಳಿಗೂ ಮುನ್ನ ಉಗ್ರರು ಪರಿಶೀಲನೆ ನಡೆಸಿದ್ದರು. ದಾಳಿಗೆ ಪಕ್ಕಾ ಪ್ಲ್ಯಾನ್‌ ಮಾಡಿದ್ದರು ಎಂಬ ವಿಚಾರವನ್ನು ದಾಳಿಗೆ ಸಂಬಂಧಿಸಿದಂತೆ ಬಂಧಿತ ಓವರ್ ಗ್ರೌಂಡ್ ವರ್ಕರ್ (OGW) ಗಳಲ್ಲಿ ಒಬ್ಬನಾದ ಸ್ಥಳೀಯ ವ್ಯಕ್ತಿ ಬಾಯ್ಬಿಟ್ಟಿದ್ದಾನೆ. ಈತ ಉಗ್ರರಿಗೆ ಸಹಾಯ ಮಾಡಿದ್ದ. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಆಯ್ಕೆ 4, ಟಾರ್ಗೆಟ್ 1
    ಉಗ್ರರು ಪಹಲ್ಗಾಮ್ ಬೈಸರನ್ ವ್ಯಾಲಿ ಜೊತೆಗೆ ಅರು ವ್ಯಾಲಿ, ಸ್ಥಳೀಯ ಅಮ್ಯೂಸ್ ಮೆಂಟ್ ಪಾರ್ಕ್, ಬೇತಾಬ್ ವ್ಯಾಲಿ (ಪುಣೆ ವ್ಯಕ್ತಿಯ ಮಗಳು ರೀಲ್ಸ್ ಮಾಡಿದ್ದ ಜಾಗ)ಯನ್ನೂ ದಾಳಿಗೆ ಗುರಿಯಾಗಿಸಿದ್ದರು. ಆದರೆ, ಕೊನೆಗೆ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದಾರೆ.

    ಪಹಲ್ಗಾಮ್ ಹೊರತುಪಡಿಸಿ ಉಳಿದ ಎಲ್ಲ ಕಡೆ ಬಿಗಿ ಭದ್ರತೆ ಇತ್ತು. ಹೀಗಾಗಿ, ಕೊನೆಗೆ ಬೈಸರನ್ ವ್ಯಾಲಿಯಲ್ಲಿ ದಾಳಿ ನಡೆಸುವ ಪ್ಲ್ಯಾನ್ ಅನ್ನು ಉಗ್ರರು ಫೈನಲ್‌ ಮಾಡಿದ್ದರು. ನಾಲ್ವರು ಸ್ಥಳೀಯರಿಂದ (Over Ground Workers or OGWs) ಉಗ್ರರಿಗೆ ಸಹಾಯ ಸಿಕ್ಕಿತ್ತು. ಲಾಜಿಸ್ಟಿಕ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹಿಂದಿನ ‘ನೀನು ಹಿಂದೂನಾ’ ಅಂತ ಒಬ್ಬ ನನಗೆ ಕೇಳಿದ್ದ – ಉಗ್ರನ ಬಗ್ಗೆ ಪ್ರವಾಸಿಗರೊಬ್ಬರ ಸ್ಫೋಟಕ ಹೇಳಿಕೆ

    ಸ್ಥಳೀಯ 20 ಮಂದಿಯು ಉಗ್ರರಿಗೆ ಸಹಾಯ ಮಾಡಿದ್ದಾರೆ. ಇವರಲ್ಲಿ ಕೆಲವರನ್ನು ಬಂಧಿಸಿರುವ ಎನ್‌ಐಎ ಇನ್ನೂ ಕೆಲ ಶಂಕಿತರ ಮೇಲೆ ಕಣ್ಗಾವಲು ಇರಿಸಿದೆ. ದಾಳಿಗೂ ಮುನ್ನ ಈ ಏರಿಯಾದಲ್ಲಿ ಮೂರು ಸ್ಯಾಟಲೈಟ್ ಫೋನ್‌ಗಳ ಬಳಕೆಯಾಗಿವೆ. ಇದರಲ್ಲಿ 2 ಫೋನ್‌ಗಳ ಸಿಗ್ನಲ್‌ ಟ್ರೇಸ್ ಮಾಡುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ.

    ಇದುವರೆಗೆ 2,500 ಜನರ ವಿಚಾರಣೆ ನಡೆಸಲಾಗಿದೆ. 186 ಮಂದಿಯನ್ನು ತನಿಖಾ ತಂಡ ವಶಕ್ಕೆ ತೆಗೆದುಕೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ – LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ

  • ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು: ಉಗ್ರ ಪುತ್ರನಿಗೆ ತಾಯಿ ಮನವಿ

    ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು: ಉಗ್ರ ಪುತ್ರನಿಗೆ ತಾಯಿ ಮನವಿ

    – ಪಹಲ್ಗಾಮ್‌ ದಾಳಿಯ ಶಂಕಿತ ಆದಿಲ್‌ ಹುಸೇನ್‌ ಮನೆ ಧ್ವಂಸ; ಕುಟುಂಬಸ್ಥರು ಕಣ್ಣೀರು

    ಶ್ರೀನಗರ: ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು ಎಂದು ಪುತ್ರ ಉಗ್ರನಿಗೆ ಆತನ ತಾಯಿ ಮನವಿ ಮಾಡಿಕೊಂಡಿದ್ದಾರೆ.

    ಪಹಲ್ಗಾಮ್‌ ದಾಳಿ (Pahalgam Terror Attack) ಬೆನ್ನಲ್ಲೇ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಹಲವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಭಯೋತ್ಪಾದಕರ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ. ಉಗ್ರ ಆದಿಲ್‌ ಹುಸೇನ್‌ ಥೋಕರ್‌ ಮನೆ ಕೂಡ ಧ್ವಂಸ ಮಾಡಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿಯಲ್ಲಿ ಅನೇಕರ ಜೀವ ಉಳಿಸಿದ ನನ್ನ ಪತಿಗೆ ‘ಹುತಾತ್ಮ’ ಸ್ಥಾನಮಾನ ಕೊಡಿ: ಸಂತ್ರಸ್ತೆ ಒತ್ತಾಯ

    ಭದ್ರತಾ ಪಡೆಗಳು ಸ್ಫೋಟಕ ಬಳಸಿ ಮನೆ ಧ್ವಂಸ ಮಾಡಿವೆ. ಹಿಂದೊಮ್ಮೆ ಉಗ್ರ ಆದಿಲ್‌ ಊಟ ಮಾಡಲು ಬಂದಿದ್ದ ಸ್ಥಳವನ್ನು ಆತ ತಾಯಿ ಶಹಜಾದಾ ಬಾನೊ, ಭದ್ರತಾ ಪಡೆ ಸಿಬ್ಬಂದಿಗೆ ತೋರಿಸಿದ್ದಾರೆ.

    ಸೈನಿಕರು ಅನಂತನಾಗ್ ಜಿಲ್ಲೆಯಲ್ಲಿನ ಕುಟುಂಬದ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಬಾನೊ ಅವರನ್ನು ಪಕ್ಕದ ಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಶಿಫ್ಟ್‌ ಮಾಡಿದ್ದಾರೆ. ಒಂದು ಕಾಲದಲ್ಲಿ ಭರವಸೆಯ ವಿದ್ಯಾರ್ಥಿಯಾಗಿದ್ದ ಆದಿಲ್, ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಪ್ರಮುಖ ಶಂಕಿತರಲ್ಲಿ ಒಬ್ಬನಾಗಿದ್ದಾನೆ. 2018 ರಿಂದ ಅವನೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಆತನ ಕುಟುಂಬ ಹೇಳಿಕೊಂಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರ | ಉಗ್ರರ ಗುಂಡೇಟಿಗೆ ಸಾಮಾಜಿಕ ಕಾರ್ಯಕರ್ತ ಬಲಿ

    ನನ್ನ ಮಗ ಈ ಹತ್ಯೆಗಳಲ್ಲಿ ಭಾಗಿಯಾಗಿಲ್ಲ. ಒಂದು ವೇಳೆ ಭಾಗಿಯಾಗಿದ್ದರೆ, ಅವನಿಗೆ ಸೈನಿಕರು ತಕ್ಕ ಶಿಕ್ಷೆ ಕೊಡಲಿ ಎಂದು ಆದಿಲ್‌ನ ತಾಯಿ ಶಹಜಾದಾ ಬಾನೊ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಪುತ್ರನಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ‘ನಾವು ನೆಮ್ಮದಿಯಿಂದ ಬದುಕಬೇಕು. ನೀನು ಬಂದು ಶರಣಾಗು’ ಎಂದು ಪುತ್ರನಿಗೆ ಕೇಳಿಕೊಂಡಿದ್ದಾರೆ.

    ಆದಿಲ್ ತಂದೆ ವಲೀಮ್, ಸಹೋದರರಾದ ಜಹೀರ್ ಮತ್ತು ಅರ್ಶ್ಲಾಮ್ ಮತ್ತು ಸೋದರಸಂಬಂಧಿಗಳಾದ ಜುಲಂಕರ್ ಮತ್ತು ಸಜ್ಜದ್ ಎಲ್ಲರೂ ಬಂಧನದಲ್ಲಿದ್ದಾರೆ. ಅವರ ತಾಯಿಯನ್ನು ಒಂದು ದಿನದ ಮಟ್ಟಿಗೆ ವಶಕ್ಕೆ ಪಡೆಯಲಾಗಿತ್ತು. ಇದನ್ನೂ ಓದಿ: ಧರ್ಮ ಕೇಳಿ ಉಗ್ರರಿಂದ ದಾಳಿ – ಬೇಸತ್ತು ಇಸ್ಲಾಂ ತ್ಯಜಿಸಿದ ಶಿಕ್ಷಕ

  • ಪಹಲ್ಗಾಮ್ ದಾಳಿಕೋರನ ಮನೆ ಧ್ವಂಸ – 24 ಗಂಟೆಗಳಲ್ಲಿ 3ನೇ ಮನೆ ಉಡೀಸ್

    ಪಹಲ್ಗಾಮ್ ದಾಳಿಕೋರನ ಮನೆ ಧ್ವಂಸ – 24 ಗಂಟೆಗಳಲ್ಲಿ 3ನೇ ಮನೆ ಉಡೀಸ್

    ಶ್ರೀನಗರ: ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಭಾಗಿಯಾಗಿರುವ ಶಂಕೆಯ ಮೇಲೆ ಮತ್ತೊಬ್ಬ ಭಯೋತ್ಪಾದಕ (Terrorist) ಎಹ್ಸಾನ್ ಉಲ್ ಹಕ್‌ನ ಮನೆಯನ್ನು ಭದ್ರತಾ ಪಡೆಯು ಧ್ವಂಸ ಮಾಡಿದೆ. ಸೇನೆಯು ಈವರೆಗೆ 24 ಗಂಟೆಯಲ್ಲಿ ಮೂವರು ಉಗ್ರರ ಮನೆಯನ್ನು ಉಡೀಸ್ ಮಾಡಿದೆ.

    ಪುಲ್ವಾಮದಲ್ಲಿರುವ (Pulwama) ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ಎಹ್ಸಾನ್‌ನ ಮನೆಯನ್ನು ಸೇನೆಯು ಕೆಡವಿದೆ. ಪೆಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಮನೆ ನಾಶ ಮಾಡಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ನಡೆದಿದ್ದು ಘೋರ ದುರಂತ – ಭಾರತ, ಪಾಕ್‌ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ: ಟ್ರಂಪ್

    ಉಗ್ರ ಎಹ್ಸಾನ್ 2018ರಲ್ಲಿ ಪಾಕಿಸ್ತಾನದಿಂದ ತರಬೇತಿ ಪಡೆದಿದ್ದನೆಂದು ಹೇಳಲಾಗಿದ್ದು, ಇತ್ತೀಚೆಗೆ ಕಾಶ್ಮೀರದ ಕಣಿವೆಯನ್ನು ಮತ್ತೆ ಪ್ರವೇಶಿಸಿದ್ದನು. ಇದನ್ನೂ ಓದಿ: ಬಲೂಚ್ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – ಆಕ್ರಮಿತ ಪಾಕಿಸ್ತಾನಿ ಸೇನೆಯ 10 ಸಿಬ್ಬಂದಿ ಹತ್ಯೆ

    ಶುಕ್ರವಾರ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾದ ಟ್ರಾಲ್‌ನ ಗೋರಿ ಪ್ರದೇಶದಲ್ಲಿ ಸೇನೆಯು ಸಕ್ರಿಯ ಭಯೋತ್ಪಾದಕನ ಮನೆಯನ್ನು ಬಾಂಬ್‌ನಿಂದ ಸ್ಫೋಟಿಸಿತ್ತು. ಮತ್ತೊಬ್ಬ ಶಂಕಿತ ಉಗ್ರನ ಮನೆಯನ್ನು ಬುಲ್ಡೋಜರ್‌ನಿಂದ ಕೆಡವಲಾಗಿತ್ತು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ – ಜಮ್ಮು ಸರ್ಕಾರ ಅಲರ್ಟ್; ವೈದ್ಯಕೀಯ ಸಿಬ್ಬಂದಿ ರಜೆ ರದ್ದು

    ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ನಿವಾಸಿ ಲಷ್ಕರ್ ಭಯೋತ್ಪಾದಕ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟಾಯ ಮನೆಯನ್ನೂ ಸಹ ಧ್ವಂಸ ಮಾಡಲಾಗಿದೆ. ಈತ ಕಳೆದ ನಾಲ್ಕು ವರ್ಷಗಳಿಂದ ಉಗ್ರ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ದೇಶ ವಿರೋಧಿ ಕಾರ್ಯಗಳಿಗೆ ಬೆಂಬಲಿಸುತ್ತಿದ್ದನು ಎಂದು ಮೂಲಗಳು ತಿಳಿಸಿವೆ.

  • Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ (Terrorists) ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

    ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ

    ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

  • ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಶ್ರೀನಗರ: ಭದ್ರತಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದೆ.

    ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

    ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು (Pahalgam Terror Attack) ಪ್ರವಾಸಿಗರ ಮೇಲೆ ದಾಳಿ ನಡೆಸಿದ ಒಂದು ಘಟನೆಯ ನಂತರ ಈ ಕಾರ್ಯಾಚರಣೆ ನಡೆದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿಯಲಿ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನೌಕಾಪಡೆಯ ಒಬ್ಬ ಅಧಿಕಾರಿ ಹಾಗೂ ಗುಪ್ತಚರ ಬ್ಯೂರೋದ ಅಧಿಕಾರಿಯೊಬ್ಬರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್‌ ಬಲಿ

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಪ್ರಧಾನಿ ಮೋದಿಯವರು (Narendra Modi) ಖಂಡಿಸಿದ್ದಾರೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ. ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

    ಸೌದಿ ಅರೇಬಿಯಾದ ತಮ್ಮ ಪ್ರವಾಸವನ್ನು ಅರ್ಧಕ್ಕೆ ಕೈಬಿಟ್ಟು ಬುಧವಾರ ಬೆಳಗ್ಗೆ ಭಾರತಕ್ಕೆ ಹಿಂತಿರುಗಿದರು. ಬಳಿಕ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.