Tag: TET Exam

  • ಟಿಇಟಿ ಪರೀಕ್ಷೆ ಹಾಲ್ ಟಿಕೆಟ್‍ನಲ್ಲಿ ಸನ್ನಿ ಲಿಯೋನ್‍ ಅಶ್ಲೀಲ ಫೋಟೋ ಅಪ್‍ಲೋಡ್ – ದೂರು ದಾಖಲು

    ಟಿಇಟಿ ಪರೀಕ್ಷೆ ಹಾಲ್ ಟಿಕೆಟ್‍ನಲ್ಲಿ ಸನ್ನಿ ಲಿಯೋನ್‍ ಅಶ್ಲೀಲ ಫೋಟೋ ಅಪ್‍ಲೋಡ್ – ದೂರು ದಾಖಲು

    ಶಿವಮೊಗ್ಗ: ಟಿಇಟಿ ಪರೀಕ್ಷೆಯ (TET Exam) ಮಹಿಳಾ ಅಭ್ಯರ್ಥಿಯೊಬ್ಬರ ಹಾಲ್‍ಟಿಕೆಟ್‍ನಲ್ಲಿ ಸನ್ನಿಲಿಯೋನ್ (Sunny Leone) ಅಶ್ಲೀಲ ಭಾವಚಿತ್ರವೊಂದು ಅಪ್‌ಲೋಡ್‌ ಆಗಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಇತ್ತೀಚೆಗೆ ನಡೆದ ಟಿಇಟಿ ಪರೀಕ್ಷೆಯ ವೇಳೆ ಮಹಿಳಾ ಅಭ್ಯರ್ಥಿಯೊಬ್ಬರ ಹಾಲ್ ಟಿಕೆಟ್‍ನಲ್ಲಿ ಸನ್ನಿ ಲಿಯೋನ್ ಫೋಟೋ ಬಂದಿತ್ತು. ಅಷ್ಟೇ ಅಲ್ಲದೇ ಇದು ವೈರಲ್‌ ಆಗಿತ್ತು. ಈ ಹಿನ್ನೆಲಯಲ್ಲಿ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಸನ್ನಿ ಲಿಯೋನ್ ಅಶ್ಲೀಲ ಭಾವಚಿತ್ರ ಹಾಲ್ ಟಿಕೆಟ್‍ನಲ್ಲಿ ಬಂದಿದ್ದಾದರೂ ಹೇಗೆ? ಫೋಟೋ ಎಲ್ಲಿಂದ ಅಪ್‍ಲೋಡ್ ಆಯ್ತು ಎಂಬುದರ ಬಗ್ಗೆ ಇದೀಗ ಶಿವಮೊಗ್ಗದ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

    POLICE JEEP

    ಕಳೆದ ಅ. 6 ರ ಭಾನುವಾರದಂದು ಶಿವಮೊಗ್ಗದಲ್ಲಿ ನಡೆದ ಟಿಇಟಿ ಪರೀಕ್ಷೆಗೆ ಹಾಜರಾಗಬೇಕಿದ್ದ ಮಹಿಳಾ ಅಭ್ಯರ್ಥಿಯೊಬ್ಬರ ಹಾಲ್‍ಟಿಕೆಟ್‍ನಲ್ಲಿ ಯಾರದ್ದೋ ಅಚಾತುರ್ಯದಿಂದಾಗಿ, ಸನ್ನಿಲಿಯೋನ್ ಭಾವಚಿತ್ರ ಪ್ರಕಟಗೊಂಡಿತ್ತು. ಇದು ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಪರೀಕ್ಷೆ ಬರೆದಿದ್ದ ಅಭ್ಯರ್ಥಿ ಪೇಚಿಗೆ ಸಿಲುಕುವಂತಾಗಿದೆ.

    ಹಾಲ್‍ಟಿಕೆಟ್ ವೈರಲ್ ಆದ ಹಿನ್ನೆಲೆಯಲ್ಲಿ ಶಿವಮೊಗ್ಗ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ದೂರು ದಾಖಲಿಸಿದೆ. ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಕಾಲೇಜು ಹೆಚ್.ಎಸ್. ರುದ್ರಪ್ಪ ಕಾಲೇಜಿನ ಪ್ರಾಂಶುಪಾಲರ ಮೂಲಕ ದೂರು ದಾಖಲಿಸಿದೆ.

    ಪರೀಕ್ಷಾ ಕೇಂದ್ರದಲ್ಲಿ ಬಂದಿದ್ದ ಮಹಿಳಾ ಅಭ್ಯರ್ಥಿಯ ಹಾಲ್ ಟಿಕೆಟ್‍ನಲ್ಲಿ ಅಂದೇ ಭಾವಚಿತ್ರ ಬದಲಾಯಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದ್ದು, ಇಂದು ಈ ಹಾಲ್ ಟಿಕೆಟ್ ಗೊಂದಲದ ಬಗ್ಗೆ ಸೂಕ್ತ ತನಿಖೆ ನಡೆಸಲು ಪ್ರಕರಣ ದಾಖಲಿಸಲಾಗಿದೆ.

    ಇದೀಗ ಈ ಪ್ರಕರಣವನ್ನು ಎಸ್.ಪಿ. ಕಚೇರಿಯಿಂದ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾಯಿಸಿ, ಇದರ ಹಿಂದೆ ಯಾರ ಕೈವಾಡ ಇದೆ ಎಂದು ತನಿಖೆ ನಡೆಸಲು ಆದೇಶಿಸಲಾಗಿದೆ. ಹೀಗಾಗಿ ಖುದ್ದು ಎಸ್.ಪಿ. ಮಿಥುನ್ ಕುಮಾರ್, ಕೂಡಲೇ ಈ ಬಗ್ಗೆ ತನಿಖೆ ನಡೆಸಲು, ಪೊಲೀಸರಿಗೆ ಸೂಚಿಸಿದ್ದಾರೆ. ಈಗಾಗಲೇ, ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆಯಲ್ಲದೇ, ಅಭ್ಯರ್ಥಿ ಬಳಿ ಮಾಹಿತಿ ಕೂಡ ಪಡೆಯಲಾಗಿದೆ. ಅರ್ಜಿ ಸಲ್ಲಿಕೆಗಾಗಿ ಬೇರೆಯವರಿಗೆ ಹೇಳಲಾಗಿತ್ತು ಎಂದು ಅಭ್ಯರ್ಥಿ ಪೊಲೀಸರಿಗೆ ತಿಳಿಸಿದ್ದು, ಸಂಬಂಧಪಟ್ಟ ಮೂವರನ್ನು ವಿಚಾರಣೆಗೆ ಕರೆಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ- ಸೋಂಕಿತರಿಗೆ ಪ್ರತ್ಯೇಕ ಕೇಂದ್ರ

    ನಾಳೆ ರಾಜ್ಯಾದ್ಯಂತ ಟಿಇಟಿ ಪರೀಕ್ಷೆ- ಸೋಂಕಿತರಿಗೆ ಪ್ರತ್ಯೇಕ ಕೇಂದ್ರ

    ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಟಿಇಟಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ನಿಯಮಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

    ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಹುತೇಕ ಪಿಯುಸಿ, ಎಸ್‍ಎಸ್‍ಎಲ್‍ಸಿ ಮಾರ್ಗಸೂಚಿಗಳು ಅನ್ವಯವಾಗಲಿವೆ. ಒಟ್ಟು 2.44 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದ 886 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲ ಕೇಂದ್ರಗಳಲ್ಲಿಯೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೊರೊನಾ ನಿಯಮದಂತೆ ಪರೀಕ್ಷೆ ನಡೆಸಲಾಗುತ್ತಿದೆ.

    ಕೊರೊನಾ ಹಿನ್ನೆಲೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹುತೇಕ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯ ನಿಯಮಗಳನ್ನೇ ಅಳವಡಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿದೆ.