Tag: Text Book Revision

  • ಇತಿಹಾಸ ಹೇಳಿದ್ರೆ ಕಾಂಗ್ರೆಸ್‌ನವ್ರಿಗೆ ಮೈಯೆಲ್ಲಾ ಉರಿಯುತ್ತೆ, ಜನಕ್ಕೆ ಮೊದಲು ಗ್ಯಾರಂಟಿ ಕೊಡಿ – ಸೂಲಿಬೆಲೆ ತಿರುಗೇಟು

    ಇತಿಹಾಸ ಹೇಳಿದ್ರೆ ಕಾಂಗ್ರೆಸ್‌ನವ್ರಿಗೆ ಮೈಯೆಲ್ಲಾ ಉರಿಯುತ್ತೆ, ಜನಕ್ಕೆ ಮೊದಲು ಗ್ಯಾರಂಟಿ ಕೊಡಿ – ಸೂಲಿಬೆಲೆ ತಿರುಗೇಟು

    ಬೆಂಗಳೂರು: ಕಾಂಗ್ರೆಸ್‌ನವ್ರಿಗೆ (Congress) ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಮೈಯೆಲ್ಲಾ ಉರಿಯುತ್ತೆ. ಭಗತ್ ಸಿಂಗ್, ರಾಜ್‌ಗುರು, ಸಾವರ್ಕರ್ ಇತಿಹಾಸ ಕೇಳೋದಿಲ್ಲ. ರಾಷ್ಟ್ರೀಯತೆಯನ್ನ ಕಂಡರೆ ಅವರಿಗೆ ಕೋಪ, ಎಲ್ಲರೂ ಒಂದುಗೂಡುವುದು ಅವರಿಗೆ ಇಷ್ಟವಿಲ್ಲ ಎಂದು ಯುವಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಾಗ್ದಾಳಿ ನಡೆಸಿದ್ದಾರೆ.

    ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಹೇಳಿಕೆಗೆ ಸೂಲಿಬೆಲೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಪಠ್ಯಪುಸ್ತಕದ ಕೆಲಸವೇ ಆದ್ಯತೆಯ ಕೆಲಸ ಅನ್ನೋದು ಅಚ್ಚರಿಯಾಗಿಬಿಟ್ಟಿದೆ. ಪ್ರಿಯಾಂಕ್ ಖರ್ಗೆ ಅವರು ನನ್ನ ವಿದ್ಯಾರ್ಹತೆಯನ್ನ ಪ್ರಶ್ನೆ ಮಾಡಿದ್ದಾರೆ. ಜನ ಏನಾದ್ರೂ ಅವರ ವಿದ್ಯಾರ್ಹತೆ ಪ್ರಶ್ನೆ ಮಾಡಿದ್ರೆ ಕಷ್ಟ ಆಗೋದು ಅವರಿಗೇನೆ. ನನ್ನ ಬಗ್ಗೆ ಮಾತನಾಡದೇ ಇದ್ದರೆ ಒಳ್ಳೆಯದು ಎಂದು ಕುಟುಕಿದ್ದಾರೆ.

    ಪಠ್ಯಪುಸ್ತಕ ಬದಲಾವಣೆ ಮಾಡ್ತಾರೆ ಅನ್ನೋದು ಮುಂಚೆಯೇ ಗೊತ್ತಿತ್ತು. ದೇಶದ ಇತಿಹಾಸ ಮುಚ್ಚಿಡೋದು ಅವರಿಗೆ ಅಭ್ಯಾಸ ಆಗಿದೆ. ಸಿಖ್ಖರ ಹತ್ಯಾಕಾಂಡ, ತುರ್ತು ಪರಿಸ್ಥಿತಿ ಸಮಯದಲ್ಲಿ ಏನಾಯ್ತು? ಅದೆಲ್ಲವನ್ನ ಮುಚ್ಚಿಟ್ಟಿದ್ದಾರೆ. ಇತಿಹಾಸವನ್ನ ಮುಚ್ಚಿಟ್ಟು ಅದರ ಮೇಲೆ ಕೂತಿದ್ದಾರೆ. ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಅವರಿಗೆ ಮೈಯೆಲ್ಲಾ ಉರಿಯುತ್ತೆ. ರಾಷ್ಟ್ರೀಯತೆ ಕಂಡರೆ ಅವರಿಗೆ ಕೋಪ, ಎಲ್ಲರೂ ಒಂದುಗೂಡುವುದು ಅವರಿಗೆ ಇಷ್ಟವಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಎಇಇ

    ಮುಂದುವರಿದು, ನೀವು ಪಠ್ಯವನ್ನಾದರೂ ಬದಲಾವಣೆ ಮಾಡಿ ಪಾಠವನ್ನಾದರೂ ಮಾಡಿ, ಆದ್ರೆ ಮೊದಲು ಹೇಳಿರುವ ಗ್ಯಾರಂಟಿಗಳನ್ನ ಕೊಡಿ. ಮಕ್ಕಳು ಓದಲು 200 ಯೂನಿಟ್ ಕರೆಂಟ್ ಫ್ರೀ ಕೊಡಿ, ಮಗುವಿನ ತಾಯಿಗೆ 2,000 ಸಾವಿರ ರೂ. ಕೊಡಿ, ಮಗುವಿನ ಟೀಚರ್‌ಗೆ ಬಸ್ ಫ್ರೀ ಮಾಡಿ, ನೀವು ಹೇಳಿದ್ದ ಗ್ಯಾರೆಂಟಿಗಳನ್ನ ಯಾವುದೇ ಕಂಡಿಷನ್ ಇಲ್ಲದೇ ಜಾರಿಗೆ ತನ್ನಿ ಎಂದು ಒತ್ತಾಯಿಸಿದ್ದಾರೆ.

  • ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ (Chakravarti Sulibele) ಬರೆದಿರುವ ಪಠ್ಯ ತೆಗೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸ್ಪಷ್ಟನೆ ನೀಡಿದ್ದಾರೆ.

    ಬಿಜೆಪಿ (BJP) ಅವಧಿಯ ಪಠ್ಯ ಪರಿಷ್ಕರಣೆ (Text Book Revision) ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ? ಅವರು ಪಿಹೆಚ್‌ಡಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಎಇಇ

    ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದೋರುವವರು ಇವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಸಿದ್ದು ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳ ವ್ಯಕ್ತಿ – ತನಿಖೆಗೆ ರಾಜ್ಯಪಾಲರ ಪತ್ರ

    ಚಕ್ರವರ್ತಿ ಸೂಲಿಬೆಲೆಯವರು ಭಗತ್‌ಸಿಂಗ್, ಸುಖದೇವ್ ಅವರ ಬಗ್ಗೆ ಬರೆದಿರುವುದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವವಿದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ನಾನು ನಾಸ್ತಿಕ ಏಕೆ ಆಗಿದ್ದೇನೆ ಎಂಬ ಭಗತ್ ಸಿಂಗ್ ಪುಸ್ತಕವಿದೆ. ಅದನ್ನು ಚಕ್ರವರ್ತಿ ಸೂಲಿಬೆಲೆ ಓದಲಿ ಸಾಕು. ಇತಿಹಾಸ ತಿರುಚಿಲ್ಲದ ಪಾಠ ನಾವು ಇಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅತ್ತೆ, ಸೊಸೆ ಇಬ್ಬರಿಗೂ ಎರಡು ಸಾವಿರ ಹಣ ನೀಡಿ: ರೇಣುಕಾಚಾರ್ಯ

    ಚಕ್ರವರ್ತಿಗಿಂತ ಒಳ್ಳೆಯ ಸಾಹಿತಿಗಳು ನಮ್ಮಲ್ಲಿ ಇಲ್ಲವಾ? ಚಕ್ರವರ್ತಿ ಸೂಲಿಬೆಲೆ ವಾಸ್ತವ ಹೇಳುವ ವ್ಯಕ್ತಿ ಅಲ್ಲ. ಅವರು ಬರೆದಿರುವ ಪಠ್ಯ ನಾನು ಯಾಕೆ ಓದಲಿ? ನನಗೆ ಓದೋಕೆ ಸಾಕಷ್ಟಿದೆ. ಅವರು ಬರೆದಿರುವ ಪಠ್ಯ ನಾನು ಓದಿಲ್ಲ. ಚಕ್ರವರ್ತಿ ಸೂಲಿಬೆಲೆ ಪಾಠ ನಮ್ಮ ಜನರಿಗೆ, ಮಕ್ಕಳಿಗೆ ಅಗತ್ಯವಿಲ್ಲ. ಯಾವುದು ಕೇಸರೀಕರಣವಿದೆ. ಯಾವುದು ಸತ್ಯ ಅಲ್ಲ ಅದೆಲ್ಲವನ್ನೂ ತೆಗೆಯುತ್ತೇವೆ ಎಂದರು.  ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

    ಸಾಹಿತಿಗಳ ಹಿನ್ನೆಲೆ ಇಲ್ಲದೇ ಬರೆದವರ ಪಠ್ಯ ಯಾಕೆ ಓದಬೇಕು? ಆಡಳಿತ ಪಕ್ಷಕ್ಕೆ ಹತ್ತಿರದವರಾಗಿದ್ದೆ ಎಂದು ಪಠ್ಯ ಹಾಕುವುದು ಸರಿನಾ? ನಾವು ಅದರ ವಿರುದ್ಧ ಇದ್ದೇವೆ. ನಮ್ಮ ಮಕ್ಕಳು ವಾಟ್ಸಪ್ ಯೂನಿವರ್ಸಿಟಿ ಓದಬೇಕಾ ಅಥವಾ ಒಳ್ಳೆಯ ಯೂನಿವರ್ಸಿಟಿ ಓದಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

    ಗೃಹಲಕ್ಷ್ಮೀ (Gruhalakshmi) ವಿಚಾರದಲ್ಲಿ ಮಕ್ಕಳು ತೆರಿಗೆ ಕಟ್ಟಿದರೆ ಯೋಜನೆ ಅನ್ವಯ ಆಗಲ್ಲ ಎಂಬ ನಿಯಮ ಕುರಿತು ಮಾತನಾಡಿದ ಅವರು, ಮಾರ್ಗಸೂಚಿಗಳು ಈಗ ಕ್ಲಿಯರ್ ಆಗಿವೆ. ಟ್ಯಾಕ್ಸ್ ಕಟ್ಟೋರು, ಜಿಎಸ್‌ಟಿ ಕಟ್ಟುವವರಿಗೆ ಯೋಜನೆ ಅನ್ವಯ ಆಗಲ್ಲ ಎಂದು ಹೇಳಿದ್ದೇವೆ. ಆ ನಿಯಮ ಸರಿಯಾಗಿಯೇ ಇದೆ. ಮುಂಚೆಯೂ ನಾವು ಹೇಳಿದ್ದೆವು. ಸಮಾಜದ ಕಟ್ಟ ಕಡೆಯ ಮನುಷ್ಯನನ್ನು ಸಮಾಜದ ಮುಖ್ಯವಾಹಿನಿಗೆ ತರೋದು ನಮ್ಮ ಸರ್ಕಾರದ ಮೂಲ ಉದ್ದೇಶ. ಫೇಸ್ 1ರಲ್ಲಿ ಈಗ ಇರುವ ನಿಯಮವೇ ಅಂತಿಮ. ಫೇಸ್ 2ರಲ್ಲಿ ಇದೆಲ್ಲವನ್ನೂ ಮುಂದೆ ನೋಡೋಣ ಎಂದು ಕಾಂಗ್ರೆಸ್ (Congress) ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು – ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಏನಾಯ್ತು?

  • ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ: ಬಿ.ಸಿ.ನಾಗೇಶ್

    ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ: ಬಿ.ಸಿ.ನಾಗೇಶ್

    ಬೆಂಗಳೂರು: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ. ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

    ನಗರದಲ್ಲಿ ಪಬ್ಲಿಕ್‌ ಟಿವಿ ಜೊತೆಗೆ ಮಾತನಾಡಿದ ಅವರು, ಉದ್ದೇಶ ಪೂರ್ವಕವಾಗಿ ಪರಿಷ್ಕರಣೆಯಲ್ಲಿ ತಪ್ಪಾಗಿದೆ ಅಂತ ಹೇಳುತ್ತಿದ್ದಾರೆ. ಹೀಗಾಗಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ. ಮುಡಂಬಡಿತ್ತಾಯ ಸಮಿತಿಯಲ್ಲಿ ಏನ್ ಇತ್ತು, ಬರಗೂರು ಸಮಿತಿ ಏನ್ ಮಾಡಿದೆ, ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ ಎರಡು ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

    ಕಾಂಗ್ರೆಸ್ ದಿಕ್ಕೆಟ್ಟಿದೆ. ಅದಕ್ಕಾಗಿ ಹೀಗೆ ಈ ವಿಚಾರವಾಗಿ ವಿವಾದ ಮಾಡುತ್ತಿದೆ. ಕಾಂಗ್ರೆಸ್‍ಗೆ ಭಯ ಶುರುವಾಗಿದೆ. ದಿಕ್ಕು ತಪ್ಪಿದೆ ಹೀಗಾಗಿ ಇಂತಹ ಸುಳ್ಳು ಹೇಳುತ್ತಿದೆ. ಸಿದ್ದರಾಮಯ್ಯ ಇಷ್ಟು ದಿನ ನಿದ್ರೆ ಮಾಡಿದ್ದರು. ಈಗ ಎದ್ದು ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಾರೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಿಶ್ವಾಸ ಮತದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

    ಕಾಂಗ್ರೆಸ್‍ಗೆ ರಾಷ್ಟ್ರೀಯತೆ ಬಗ್ಗೆ ಮಕ್ಕಳು ಕಲಿಯುವುದು ಇಷ್ಟ ಇಲ್ಲ. ದೇಶಭಕ್ತಿ ಬಗ್ಗೆ ಕಲಿಯುವುದು ಬೇಕಿಲ್ಲ. ಹೀಗಾಗಿ ಎಲ್ಲದ್ದಕ್ಕೂ ವಿರೋಧ ಮಾಡುತ್ತಿದೆ. ನರಸಿಂಹರಾವ್ ಬರುವವರೆಗೂ ಒಂದೇ ಸಮುದಾಯದವರು ಶಿಕ್ಷಣ ಮಂತ್ರಿ ಆಗಿದ್ದರು ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. 75 ವರ್ಷದ ಕಾಂಗ್ರೆಸ್ ದುರಾಡಳಿತ ಜನರಿಗೆ ಗೊತ್ತಾಗುತ್ತದೆ ಅಂತ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ರೈತನ ಬಳಿ ಹಣ ಕಸಿದು ನಂದಿಬೆಟ್ಟಕ್ಕೆ ಹೋಗಿ ಮಜಾ ಮಾಡಿದ್ದ ಯುವಕರು ಅರೆಸ್ಟ್