Tag: Textbook revision

  • ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ – ಶಾಲೆಗಳಿಗೆ ಪರಿಷ್ಕೃತಗೊಂಡ ಪಠ್ಯಪುಸ್ತಕ

    ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ – ಶಾಲೆಗಳಿಗೆ ಪರಿಷ್ಕೃತಗೊಂಡ ಪಠ್ಯಪುಸ್ತಕ

    ಬೆಂಗಳೂರು: ಕಾಂಗ್ರೆಸ್‌ (Congress) ನೇತೃತ್ವದ ಸರ್ಕಾರವು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ (Textbook Revision) ಮಾಡಿದ್ದು, ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರ ‘ತಾಯಿ ಭಾರತೀಯ ಅಮರಪುತ್ರರು’ ಪಠ್ಯವನ್ನು ಸಂಪೂರ್ಣವಾಗಿ ಕೈಬಿಟ್ಟಿದೆ.

    ಪರಿಷ್ಕೃತ ಪಠ್ಯ ಪುಸ್ತಕದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್‌ ಸರ್ಕಾರ, 2022-23 ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಕನ್ನಡ ಭಾಷಾ ಮತ್ತು 6 ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, 2023-24ನೇ ಶೈಕ್ಷಣಿಕ ಸಾಲಿಗೆ ಮುದ್ರಿಸಿ ಎಲ್ಲಾ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

    ಬಿಜೆಪಿ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಅದನ್ನು ಕಾಂಗ್ರೆಸ್‌ ಸರ್ಕಾರ ಮತ್ತೆ ಪರಿಷ್ಕರಿಸಿದೆ. 10 ನೇ ತರಗತಿಯ ಕನ್ನಡ ಭಾಷಾ ವಿಷಯದಲ್ಲಿದ್ದ ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟಿದೆ. ಜೊತೆಗೆ ಕನ್ನಡದಲ್ಲಿ 9 ಹೊಸ ಪಠ್ಯಗಳನ್ನು ಸೇರ್ಪಡೆ ಮಾಡಿದೆ. ಸಮಾಜ ವಿಜ್ಞಾನದಲ್ಲಿ 9 ಪಠ್ಯಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಮಾಡಲಾಗಿದೆ.

    ಈ ಹಿಂದೆ ಇದ್ದ ಬಿಜೆಪಿ ನೇತೃತ್ವದ ಸರ್ಕಾರ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ತನಗೆ ಬೇಕಾದ ಕೆಲವು ಪಾಠಗಳನ್ನು ಸೇರಿಸಿತ್ತು. ತನ್ನ ಸಿದ್ಧಾಂತಕ್ಕೆ ಒಗ್ಗದ ಕೆಲವು ಪಾಠಗಳನ್ನು ಆಗಿನ ಸರ್ಕಾರ ಕೈಬಿಟ್ಟಿತ್ತು. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ: ಪ್ರಿಯಾಂಕ್ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ (Congress) ಸರ್ಕಾರ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಬಿಜೆಪಿ (BJP) ಶಾಸಕ ಸುನೀಲ್ ಕುಮಾರ್ (Sunil Kumar) ಪ್ರಶ್ನಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ (Bengaluru) ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು (Mangaluru) ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯ್ದೆ (Anti Conversion Law) ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

  • ಪಠ್ಯ ಪರಿಷ್ಕರಣೆಯಿಂದಲೇ ಎಳೆ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ: ರಮೇಶ್ ಕುಮಾರ್

    ಪಠ್ಯ ಪರಿಷ್ಕರಣೆಯಿಂದಲೇ ಎಳೆ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ: ರಮೇಶ್ ಕುಮಾರ್

    ಚಿತ್ರದುರ್ಗ: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಿಂದಲೇ ಬಿಜೆಪಿಯವರು ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

    ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರ ಬೇಡ ಅಂದ್ರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನರೇ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಆದ್ರೆ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಜನರು ಪ್ರತಿಭಟಿಸಿದಾಗ ಸರ್ಕಾರಕ್ಕೆ ಭಯ ಬರುತ್ತದೆ ಎಂದರು. ಇದನ್ನೂ ಓದಿ: ಪ್ರವಾಹ ಪೀಡಿತ ಅಸ್ಸಾಂ, ಮೇಘಾಲಯದ 253 ಜನರನ್ನ ರಕ್ಷಿಸಿದ IAF – ಮುಂದುವರಿದ ಶೋಧ ಕಾರ್ಯ

    TEXTBOOK

    ಇದೇ ವೇಳೆ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರ ಇರುವ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಕರ್ನಾಟಕ ಆಯ್ತು, ಮಧ್ಯಪ್ರದೇಶ ಆಯ್ತು ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ವಾಮಮಾರ್ಗ ಹಿಡಿದು ಸರ್ಕಾರ ರಚಿಸಲು ಕಾರ್ಯಪ್ರವೃತವಾಗಿದೆ. ಸಮ್ಮಿಶ್ರ ಸರ್ಕಾರ ಇರುವ ಕಡೆಯೆಲ್ಲ ಆಪರೇಷನ್ ಕಮಲ ಮಾಡಿ ಸರ್ಕಾರ ನಡೆಸಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

    ನಾವೇನು ಹೊಸದಾಗಿ ಹೇಳುವುದು ಬೇಕಾಗಿಲ್ಲ. ಜನರೇ ಸುಮ್ಮನಿರುವಾಗ ನಾವೇನು ಹೇಳುವುದು. ಜನ ಹೇಳಬೇಕು. ಜನರು ಪ್ರತಿಕ್ರಿಯೆ ನೀಡಬೇಕು. ನಾವು ಹೇಳಿದರೆ ಪಕ್ಷದ ಅಭಿಪ್ರಾಯವಾಗುತ್ತದೆ. ಸಹಜವಾಗಿ ನಾವು ಬೇರೆ ಪಕ್ಷದವರು ಸರಿಯಿಲ್ಲ ಎಂದು ಹೇಳಬಹುದು. ಆದರೆ ಜನರೇ ಇದಕ್ಕೆ ಪ್ರತಿಕ್ರಿಯೆ ನೀಡದೆ ಇದ್ದಾಗ ಏನು ಮಾಡುವುದು. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯವೇ ಅಂತಿಮವಾಗಿದ್ದಾಗ ಎಲ್ಲವನ್ನೂ ಜನರೇ ಹೇಳಬೇಕಾಗುತ್ತದೆ ಎಂದು ಕರೆ ನೀಡಿದರು. ಇದನ್ನೂ ಓದಿ: ಎಮರ್ಜೆನ್ಸಿ ವಿರೋಧಿಸಿ ಪ್ರತಿಭಟನೆ ಮಾಡ್ತಿದ್ದಾಗ ಪೊಲೀಸರನ್ನ ನೋಡಿ ಓಡಿ ಹೋಗಿದ್ವಿ: ಬೊಮ್ಮಾಯಿ

    Live Tv

  • ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

    ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

    ಬೆಂಗಳೂರು: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು ಎಂದು ಮಾಜಿ ಪ್ರಧಾನಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್‌ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾನು ಭಾಗವಹಿಸಿದ್ದಾಗ, ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದಕ್ಕೆ ಲಗತ್ತಿಸಿರುತ್ತೇನೆ. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ 

    ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ಕುವೆಂಪು ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.

    TEXTBOOK

    ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.

    ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ. ಇದನ್ನೂ ಓದಿ: ಚಿಟ್ ಫಂಡ್ ಮಾಡಿ ಜನರಿಗೆ ಚೀಟಿಂಗ್ ಮಾಡಿದ್ದ ಲೇಡಿ ಅರೆಸ್ಟ್

    ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಮ್ಮೇಲೆ ಅಥವಾ ಪ್ರತ್ಯೇಕ ಪಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ.

    ಈಗ ತಮಗೆ ಕಳುಹಿಸುತ್ತಿರುವ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ.

    Live Tv

  • ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

    ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕವಿಶೈಲದಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, ಇದರ ನೇತೃತ್ವವನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಹಿಸಿದ್ದಾರೆ.

    ಈ ಪಾದಯಾತ್ರೆಯಲ್ಲಿ ಸಾಹಿತಿಗಳು, ಪ್ರಗತಿಪರರು, ವಿವಿಧ ಸಂಘ ಸಂಸ್ಥೆ ಮುಖಂಡರು ಭಾಗಿಯಾಗಿದ್ದಾರೆ.

    ಏನಿದು ವಿವಾದ?
    ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅಲ್ಲದೇ ಅನೇಕ ಪಠ್ಯಗಳನ್ನು ಕೈಬಿಡಲಾಗಿದ್ದು, ಹಿಂದೂಪರ ಧೋರಣೆಗಳನ್ನು ಪಠ್ಯದಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಲಾಗಿತ್ತು. ಇದನ್ನೂ ಓದಿ: 2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

    ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲಾಯಿತು. ಆದರೂ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಸಾಕಷ್ಟು ಲೋಪಗಳಾಗಿವೆ. ಹೀಗಾಗಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಪಠ್ಯವನ್ನೇ ಈ ಶೈಕ್ಷಣಿಕ ಸಾಲಿನಲ್ಲೂ ಮುಂದುವರಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.