Tag: Textile

  • ಗುಡ್‍ನ್ಯೂಸ್ – ಜವಳಿ ಮೇಲಿನ ಜಿಎಸ್‍ಟಿ ಏರಿಕೆ ಇಲ್ಲ

    ಗುಡ್‍ನ್ಯೂಸ್ – ಜವಳಿ ಮೇಲಿನ ಜಿಎಸ್‍ಟಿ ಏರಿಕೆ ಇಲ್ಲ

    ನವದೆಹಲಿ: ಜವಳಿ ಮೇಲಿನ ಜಿಎಸ್‍ಟಿಯನ್ನು ಶೇ.5 ರಿಂದ ಶೇ.12ಕ್ಕೆ ಹೆಚ್ಚಿಸದೇ ಇರಲು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಕೌನ್ಸಿಲ್ ನಿರ್ಧರಿಸಿದೆ.

    ಇಂದು ತುರ್ತು ಸಭೆ ನಡೆಸಿದ ಜಿಎಸ್‍ಟಿ ಮಂಡಳಿ ಮುಂದಿನ ಕೌನ್ಸಿಲ್ ಸಭೆಯಲ್ಲಿ ಈ ವಿಷಯವನ್ನು ಮತ್ತೊಮ್ಮೆ ಚರ್ಚಿಸಲಾಗುವುದು ಎಂದು ಹೇಳಿದೆ. ಈ ನಿರ್ಧಾರದಿಂದಾಗಿ ಜವಳಿ ಮೇಲಿನ ಜಿಎಸ್‍ಟಿ ದರ ಯಥಾಸ್ಥಿತಿಯಲ್ಲೇ ಮುಂದುವರಿಯಲಿದೆ.

    ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಜವಳಿ ವಿಚಾರಕ್ಕಾಗಿ ತುರ್ತು ಸಭೆಯನ್ನು ನಡೆಸಲಾಗಿತ್ತು. ಈ ಸಭೆಯಲ್ಲಿ ದರ ನಿಗದಿ ಸಂಬಂಧ ಕರ್ನಾಟಕ ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿ ಪರಿಶೀಲಿಸಿ ವರದಿ ನೀಡಿದ ಬಳಿಕ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ಜ.15ರವರೆಗೆ 144 ಸೆಕ್ಷನ್ ಜಾರಿ – ಸಂಜೆ 5 ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ

    ಸಭೆಯಲ್ಲಿ ಜವಳಿ ಜಿಎಸ್‍ಟಿಯ ವಿಚಾರವಾಗಿ ಮಾತ್ರವೇ ಚರ್ಚೆ ನಡೆಸಲಾಗಿದ್ದು, ಪಾದರಕ್ಷೆಯ ದರಗಳ ಮೇಲಿನ ಹೆಚ್ಚಳದ ಬಗ್ಗೆ ಚರ್ಚಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಐದು ಜಿಲ್ಲೆಗಳ ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ

    ಸಪ್ಟೆಂಬರ್ 17ರಂದು ಲಕ್ನೋದಲ್ಲಿ ಜಿಎಸ್‍ಟಿ ಕೌನ್ಸಿಲ್ ಸಭೆ ನಡೆದಿತ್ತು. ಈ ವೇಳೆ ಜವಳಿ ಹಾಗೂ ಪಾದರಕ್ಷೆಗಳ ಮೇಲಿನ ಜಿಎಸ್‍ಟಿಯನ್ನು ಶೇ.5 ರಿಂದ ಶೇ.12 ಕ್ಕೆ ಹೆಚ್ಚಿಸುವ ಹಾಗೂ 2022ರ ಜನವರಿ 1 ರಂದು ಜಾರಿಗೊಳಿಸಲು ನಿರ್ಧರಿಸಲಾಗಿತ್ತು.

  • ಟೆಕ್ಸ್ ಟೈಲ್, ಫಾರ್ಮಾ ಉದ್ಯಮಗಳ ಆರಂಭಕ್ಕೆ ಯತ್ನ: ಡಾ.ಕೆ.ಸುಧಾಕರ್

    ಟೆಕ್ಸ್ ಟೈಲ್, ಫಾರ್ಮಾ ಉದ್ಯಮಗಳ ಆರಂಭಕ್ಕೆ ಯತ್ನ: ಡಾ.ಕೆ.ಸುಧಾಕರ್

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಟೆಕ್ಸ್ ಟೈಲ್, ಫಾರ್ಮಾ ಉದ್ಯಮಗಳನ್ನು ಆರಂಭಿಸಿ ಹೆಚ್ಚು ಯುವಜನರಿಗೆ ಉದ್ಯೋಗ ನೀಡುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಜಿಲ್ಲಾಡಳಿತದಿಂದ ನಡೆದ ಮಿನಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಗುರುತಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಕುರಿತು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ್ದು, ಈ ಭಾಗದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲು ಸಲಹೆ ಸಿಕ್ಕಿದೆ. ಟೆಕ್ಸ್ ಟೈಲ್ ಜೊತೆಗೆ ಫಾರ್ಮಾ ಉದ್ಯಮವನ್ನೂ ಆರಂಭಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಜಾರಿಯಲ್ಲಿದೆ. ವಿದ್ಯಾರ್ಥಿಗಳು ಸಂಶೋಧನಾ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇದಕ್ಕೆ ಪೂರಕವಾಗಿ ಶಿಕ್ಷಕರು ಮಾರ್ಗದರ್ಶನ ನೀಡಬೇಕು ಎಂದಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಡು ಜಿಲ್ಲೆ ಎನ್ನಲಾಗುತ್ತದೆ. ಆದರೂ ಗುಣಮಟ್ಟದ ತರಕಾರಿ, ಹಣ್ಣು, ಹೂಗಳನ್ನು ಕೃಷಿಕರು ರಫ್ತು ಮಾಡುತ್ತಿದ್ದಾರೆ. ಇದನ್ನು ಯುವ ಜನರೇ ಮಾಡುತ್ತಿದ್ದಾರೆ. ಅನೇಕರು ಉನ್ನತ ಶಿಕ್ಷಣ ವ್ಯಾಸಂಗ ಮಾಡಿ, ಪಾಲಿಹೌಸ್ ಮಾಡಿ ಯಶಸ್ವಿಯಾಗಿದ್ದಾರೆ. ಈ ಶತಮಾನದಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ. ವಿದ್ಯಾವಂತರು ಕೃಷಿ ಮಾಡುವುದಿಲ್ಲ ಎಂಬ ಮಾತು ನಿಜವಲ್ಲ. ಐಟಿ, ಎಂಜಿನಿಯರ್‍ಗಳು ಕೂಡ ಕೃಷಿಯಲ್ಲಿ ತೊಡಗಿ ಹೆಚ್ಚು ಹಣ ಗಳಿಸುತ್ತಿದ್ದಾರೆ. ಉದ್ಯೋಗ ಮಾಡುವ ಜೊತೆಗೆ, ಸ್ವಯಂ ಉದ್ಯೋಗ ಮಾಡಿ ಬೇರೆಯವರಿಗೆ ಉದ್ಯೋಗ ನೀಡಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಕೊಪ್ಪಳದಲ್ಲಿ ಮಕ್ಕಳ ಆಸ್ಪತ್ರೆಗಳು ಬಹುತೇಕ ಫುಲ್

    ರಾಜ್ಯದಲ್ಲಿ ಅನೇಕ ಯುವಜನರಿಗೆ ಕೌಶಲ್ಯ ತರಬೇತಿ ಮುಖ್ಯ. ಕೌಶಲ್ಯವಿಲ್ಲದಿದ್ದರೆ ವಿದ್ಯಾಭ್ಯಾಸ ಪೂರ್ಣವಾಗುವುದಿಲ್ಲ. ಉದ್ಯೋಗದಾತರಿಗೆ ಬೇಕಾದ ಕೌಶಲ್ಯವನ್ನು ಯುವಜನರಿಗೆ ನೀಡಬೇಕು. ಕೈಗಾರಿಕಾ ಸಂಸ್ಥೆಗಳು ಹಾಗೂ ಕಾಲೇಜುಗಳ ನಡುವೆ ಈಗ ಒಪ್ಪಂದಗಳಾಗುತ್ತಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಕೌಶಲ್ಯ ತರಬೇತಿ ಕೂಡ ನಡೆಯುತ್ತಿದೆ ಎಂದು ನುಡಿದಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ತ್ರೀ ಶಕ್ತಿ ಸಂಘಗಳ ಬಲವರ್ಧನೆಗೆ ಒತ್ತು ನೀಡಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ. ಆರೋಗ್ಯ ಇಲಾಖೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಕ್ರಮ ವಹಿಸಲಾಗಿದೆ. ಆರೋಗ್ಯ ಇಲಾಖೆಗೆ ನರ್ಸಿಂಗ್‍ಗೆ ಬೇಡಿಕೆ ಇದೆ. ಇಂತಹ ಬೇಡಿಕೆಯನ್ನು ಪ್ರತಿ ಕ್ಷೇತ್ರದಲ್ಲಿ ಅರ್ಥ ಮಾಡಿಕೊಂಡು ಆ ಶಿಕ್ಷಣ ಪಡೆಯಬೇಕು. ಉದ್ಯೋಗ ಮೇಳ ಸತತವಾಗಿ ನಡೆಯಬೇಕು. ದೊಡ್ಡಮಟ್ಟದ ಉದ್ಯೋಗ ಮೇಳ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ:ಇತಿಹಾಸ ಪ್ರಸಿದ್ಧ ತುಂಬಿದ ಕೆರೆಗೆ ಬಾಗಿನ ಸಮರ್ಪಿಸಿದ ಹಿರೇಮಠದ ಶ್ರೀ

    BASAVARAJ BOMMAI

    ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಆಂತರಿಕ ವಿಚಾರ. ಇದಕ್ಕೆ ಬೇರೆ ಪಕ್ಷಗಳು ತಲೆ ಹಾಕದಿರುವುದೇ ಒಳ್ಳೆಯದು. ಆ ಪಕ್ಷದಲ್ಲಿ ಒಬ್ಬ ಮಹಿಳಾ ನಾಯಕಿ ರಾಜೀನಾಮೆ ನೀಡಿದ್ದಾರೆ. ಇಂತಹ ವಿಚಾರಗಳನ್ನು ನಾವು ಕೇಳುವುದಿಲ್ಲ ಎಂದು ಕಿಡಿಕಾರಿದ್ದಾರೆ.