Tag: thalapathy 69

  • Thalapathy 69: ದಳಪತಿ ವಿಜಯ್ ಕೊನೆಯ ಸಿನಿಮಾದಲ್ಲಿ ಶಿವಣ್ಣ

    Thalapathy 69: ದಳಪತಿ ವಿಜಯ್ ಕೊನೆಯ ಸಿನಿಮಾದಲ್ಲಿ ಶಿವಣ್ಣ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ನಟ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾದಲ್ಲಿ ನಟಿಸುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಬಳಿಕ ರಿಲೀಸ್ ಆಗಲಿದೆ ರಶ್ಮಿಕಾ ನಟನೆಯ ಬ್ಯಾಕ್ ಟು ಬ್ಯಾಕ್ ಚಿತ್ರಗಳು

    ಶಿವಣ್ಣ ಮಾತನಾಡಿ, ‘ದಳಪತಿ 69’ ಚಿತ್ರತಂಡವು ಒಂದೊಳ್ಳೆಯ ಪಾತ್ರ ಮಾಡಲು ನನ್ನನ್ನು ಅಪ್ರೋಚ್ ಮಾಡಿದ್ದು ನಿಜ. ಆ ಪಾತ್ರದ ಬಗ್ಗೆ ಕೇಳಿದಾಗ ಇಂಟರೆಸ್ಟಿಂಗ್ ಎಂದೆನಿಸಿತು. ಆದರೆ ಡೇಟ್ಸ್ ಅದೆಷ್ಟರ ಮಟ್ಟಿಗೆ ಹೊಂದಾಣಿಕೆ ಆಗಲಿದೆ ಎಂಬುದು ನನಗೆ ಗೊತ್ತಿಲ್ಲ. ನನ್ನ ಡೇಟ್ ನೋಡಿಕೊಂಡೆ ಎಲ್ಲವೂ ಪ್ಲ್ಯಾನ್ ಆಗುತ್ತದೆ ಅನಿಸುತ್ತದೆ.

    ವಿಜಯ್ ಒಳ್ಳೆಯ ನಟ. ಇದು ಅವರ ಕೊನೆಯ ಸಿನಿಮಾ ಎಂದು ನಾವು ಹೇಳಲೇಬಾರದು. ಅವರು ಸಿನಿಮಾ ಮತ್ತು ರಾಜಕೀಯ ಎರಡನ್ನು ಚೆನ್ನಾಗಿಯೇ ತಿಳಿದುಕೊಂಡಿದ್ದಾರೆ. ಆದರೆ ವಿಜಯ್ ಸಿನಿಮಾ ಮಾಡೋದನ್ನು ಬಿಡಬಾರದು. ಅವರು ಚಿತ್ರಗಳನ್ನು ಮಾಡುತ್ತಲೇ ಇರಬೇಕು ಎಂದು ಶಿವಣ್ಣ ಮುಕ್ತವಾಗಿ ಹೇಳಿದ್ದಾರೆ. ಸದ್ಯ ವಿಜಯ್ ಸಿನಿಮಾದಲ್ಲಿ ಕನ್ನಡದ ನಟ ಕಾಣಿಸಿಕೊಳ್ಳುತ್ತಿರುವ ವಿಚಾರ ಕೇಳಿಯೇ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

    ಇನ್ನೂ ಅದಷ್ಟೇ ಅಲ್ಲ, ತೆಲುಗು ನಟ ರಾಮ್ ಚರಣ್ (Ram Charan) ಜೊತೆ ಕೂಡ ಶಿವಣ್ಣ ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ನಲ್ಲಿ ಶಿವಣ್ಣ ಫ್ಯಾನ್ಸ್‌ಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಹಬ್ಬ ಎಂದೇ ಹೇಳಬಹುದು.

  • ಸರಳವಾಗಿ ಜರುಗಿತು ವಿಜಯ್ ದಳಪತಿ, ಪೂಜಾ ಹೆಗ್ಡೆ ನಟನೆಯ ಸಿನಿಮಾ ಮುಹೂರ್ತ

    ಸರಳವಾಗಿ ಜರುಗಿತು ವಿಜಯ್ ದಳಪತಿ, ಪೂಜಾ ಹೆಗ್ಡೆ ನಟನೆಯ ಸಿನಿಮಾ ಮುಹೂರ್ತ

    ನ್ನಡದ ಕೆವಿಎನ್ ಪ್ರೋಡಕ್ಷನ್ಸ್ ನಿರ್ಮಾಣದ ‘ದಳಪತಿ 69’ (Thalapathy 69) ಚಿತ್ರದ ಮುಹೂರ್ತ ಕಾರ್ಯಕ್ರಮ ಇಂದು (ಅ.4) ಅದ್ಧೂರಿಯಾಗಿ ನಡೆಯಿತು. ಮುಹೂರ್ತ ಕಾರ್ಯಕ್ರಮದ ಫೋಟೋಗಳನ್ನು ನಿರ್ಮಾಣ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ:ಗುಂಡೇಟಿನಿಂದ ಆಸ್ಪತ್ರೆ ಸೇರಿದ್ದ ನಟ ಗೋವಿಂದ ಡಿಸ್ಚಾರ್ಜ್

    ವಿಜಯ್ ದಳಪತಿ ಮತ್ತು ಪೂಜಾ ಹೆಗ್ಡೆ (Pooja Hegde) ನಟನೆಯ ಹೊಸ ಸಿನಿಮಾಗೆ ಇಂದು ಚಾಲನೆ ನೀಡಲಾಗಿದೆ. ‘ದಳಪತಿ 69’ ಚಿತ್ರದಲ್ಲಿ ವಿಜಯ್ ಜೊತೆ ಯಾರೆಲ್ಲಾ ನಟನೆ ಮಾಡ್ತಾರೆ ಎಂದು ಚಿತ್ರತಂಡ ರಿವೀಲ್ ಮಾಡಿದ ಬೆನ್ನಲ್ಲೇ ಈಗ ಸಿನಿಮಾ ಮುಹೂರ್ತ ಚೆನ್ನೈನಲ್ಲಿ ನೆರವೇರಿದೆ.

    ಈ ಕಾರ್ಯಕ್ರಮದಲ್ಲಿ ಕೆವಿಎನ್ ಸಂಸ್ಥೆಯ ನಿರ್ಮಾಪಕರು, ವಿಜಯ್ ದಳಪತಿ, ಪೂಜಾ ಹೆಗ್ಡೆ, ಅನಿಮಲ್ ನಟ ಬಾಬಿ ಡಿಯೋಲ್ ಸೇರಿದಂತೆ ಅನೇಕರು ಭಾಗಿದ್ದರು.

    ಇನ್ನೂ ಈ ಚಿತ್ರವು ವಿಜಯ್ ನಟಿಸಲಿರುವ ಕೊನೆಯ ಸಿನಿಮಾ ಆಗಿದ್ದು, ರಾಜಕೀಯ ಕುರಿತು ಸಿನಿಮಾ ಮೂಡಿ ಬರಲಿದೆ ಎನ್ನಲಾಗಿದೆ.

  • Thalapathy 69: ವಿಜಯ್‌ ಜೊತೆ ಕನ್ನಡದ ನಟಿ ಪ್ರಿಯಾಮಣಿ ಹೊಸ ಸಿನಿಮಾ

    Thalapathy 69: ವಿಜಯ್‌ ಜೊತೆ ಕನ್ನಡದ ನಟಿ ಪ್ರಿಯಾಮಣಿ ಹೊಸ ಸಿನಿಮಾ

    ಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ (Priyamani) ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಜವಾನ್’ (Jawan) ಸಿನಿಮಾದ ಸಕ್ಸಸ್ ನಂತರ ನಟಿಯ ಬೇಡಿಕೆ ಹೆಚ್ಚಾಗಿದೆ. ಇದೀಗ ವಿಜಯ್ ನಟನೆಯ ಕೊನೆಯ ಸಿನಿಮಾದಲ್ಲಿ ಪ್ರಿಯಾಮಣಿ ಕೂಡ ನಟಿಸುತ್ತಿದ್ದಾರೆ. ನಟಿ ಕೂಡ ಚಿತ್ರತಂಡ ಸೇರ್ಪಡೆಯಾಗಿರುವ ಬಗ್ಗೆ ತಂಡ ಅಧಿಕೃತ ಘೋಷಣೆ ಮಾಡಿದೆ.

    ಇದೇ ಮೊದಲ ಬಾರಿಗೆ ನಟಿ ಪ್ರಿಯಾಮಣಿ ಅವರು ವಿಜಯ್ ದಳಪತಿ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ರಿವೀಲ್ ಮಾಡಿಲ್ಲ. ಆದರೆ ಪವರ್‌ಫುಲ್ ಪಾತ್ರದಲ್ಲಿ‌ ನಟಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೂಜಾ ಹೆಗ್ಡೆ (Pooja Hegde), ಮಮಿತಾ ಬೈಜು (Mamitha Baiju), ಪ್ರಕಾಶ್ ರಾಜ್ ಚಿತ್ರತಂಡ ಸೇರಿಕೊಂಡ ಬೆನ್ನಲ್ಲೇ ಪ್ರಿಯಾಮಣಿ ಕೂಡ ‘ದಳಪತಿ 69’ ತಂಡ ಸೇರಿಕೊಂಡಿದ್ದಾರೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

     

    View this post on Instagram

     

    A post shared by KVN Productions (@kvn.productions)

    ಇನ್ನೂ ಇತ್ತೀಚಿನ ದಿನಗಳಲ್ಲಿ ಅವರಿಗೆ ಬಾಲಿವುಡ್‌ನಿಂದ ಉತ್ತಮ ಅವಕಾಶಗಳು ಸಿಗುತ್ತಿವೆ. ಪ್ರಿಯಾಮಣಿ ನಟಿಸಿರುವ ಜವಾನ್, ಆರ್ಟಿಕಲ್ 370, ಮೈದಾನ್ ಚಿತ್ರಗಳು ಸಕ್ಸಸ್ ಕಂಡಿವೆ. ತೆಲುಗು, ತಮಿಳು, ಹಿಂದಿಯಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.

    ಅಂದಹಾಗೆ, ಸ್ಯಾಂಡಲ್‌ವುಡ್‌ನಲ್ಲಿ ರಾಮ್, ಅಣ್ಣಾಬಾಂಡ್, ಚಾರುಲತಾ, ಅಂಬರೀಶ, ಕಲ್ಪನಾ 2 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

  • ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

    ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

    ‘ಪ್ರೇಮಲು’ ಸಿನಿಮಾದ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ನಟಿ ಮಮಿತಾ ಬೈಜುಗೆ (Mamitha Baiju) ಗೋಲ್ಡನ್ ಚಾನ್ಸ್‌ವೊಂದು ಸಿಕ್ಕಿದೆ. ವಿಜಯ್ ದಳಪತಿ (Vijay Thalapathy) ನಟನೆಯ ಕೊನೆಯ ಸಿನಿಮಾದಲ್ಲಿ ನಟಿಸುವ ಬಂಪರ್ ಅವಕಾಶವನ್ನು ನಟಿ ಬಾಚಿಕೊಂಡಿದ್ದಾರೆ.

    ವಿಜಯ್ ಕೊನೆಯ ಚಿತ್ರವನ್ನು ಕನ್ನಡದ ‘ಕೆವಿಎನ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ದಳಪತಿ 69 ಸಿನಿಮಾದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬುದನ್ನು ತಂಡ ರಿವೀಲ್ ಮಾಡುತ್ತಿದೆ. ಬಾಬಿ ಡಿಯೋಲ್, ಪೂಜಾ ಹೆಗ್ಡೆ (Pooja Hegde) ನಟಿಸುತ್ತಿರುವ ಸುದ್ದಿ ಅಫಿಷಿಯಲ್ ಆಗಿ ತಿಳಿಸಿದ ಬಳಿಕ ಮಾಲಿವುಡ್ ಬ್ಯೂಟಿ ಮಮಿತಾ ಬೈಜು ಕೂಡ ಚಿತ್ರದ ಭಾಗವಾಗಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ.

     

    View this post on Instagram

     

    A post shared by KVN Productions (@kvn.productions)

    ವಿಜಯ್ ಸಿನಿಮಾದಲ್ಲಿ ಪೂಜಾ ಹೆಗ್ಡೆ ಅಂತೆಯೇ ಮಮಿತಾ ಬೈಜು ಅವರಿಗೂ ಉತ್ತಮ ಪಾತ್ರ ಸಿಕ್ಕಿದೆಯಂತೆ. ನಟನೆಗೆ ಸ್ಕೋಪ್ ಇರುವ ಇದಾಗಿದೆ ಎನ್ನಲಾಗಿದೆ.

    ಅಂದಹಾಗೆ, ರೆಬೆಲ್, ಪ್ರೇಮಲು (Premalu) ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ಮಮಿತಾಗೆ ತಮಿಳು, ತೆಲುಗು ಮತ್ತು ಮಾಲಿವುಡ್‌ನಿಂದ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ.

  • Thalapathy 69: ವಿಜಯ್ ಕೊನೆಯ ಚಿತ್ರಕ್ಕೆ ಪೂಜಾ ಹೆಗ್ಡೆ ಹೀರೋಯಿನ್

    Thalapathy 69: ವಿಜಯ್ ಕೊನೆಯ ಚಿತ್ರಕ್ಕೆ ಪೂಜಾ ಹೆಗ್ಡೆ ಹೀರೋಯಿನ್

    ರಾವಳಿ ಬೆಡಗಿ ಪೂಜಾ ಹೆಗ್ಡೆ (Pooja Hegde) ಸಕ್ಸಸ್ ಸಿಗದೆ ಇದ್ದರೂ ಅವಕಾಶಗಳ ಕೊರತೆಯಿಲ್ಲ. ಕಾಲಿವುಡ್‌ನಲ್ಲಿ ಮತ್ತೊಂದು ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಮತ್ತೊಮ್ಮೆ ಸ್ಟಾರ್ ನಟ ವಿಜಯ್ ದಳಪತಿಗೆ (Vijay Thalapathy) ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಈ ಗುಡ್ ನ್ಯೂಸ್ ಅನ್ನು ಕೆವಿಎನ್ ನಿರ್ಮಾಣ ಸಂಸ್ಥೆ ಅಫಿಷಿಯಲ್ ಆಗಿ ತಿಳಿಸಿದೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

    ವಿಜಯ್ ನಟನೆಯ ಕೊನೆಯ ಸಿನಿಮಾ ‘ದಳಪತಿ 69ನೇ’ (Thalapathy 69) ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮತ್ತೊಮ್ಮೆ ವಿಜಯ್ ಜೊತೆ ರೊಮ್ಯಾನ್ಸ್ ಮಾಡುವ ಅವಕಾಶವನ್ನು ಪೂಜಾ ಹೆಗ್ಡೆ ಗಿಟ್ಟಿಸಿಕೊಂಡಿದ್ದಾರೆ.

     

    View this post on Instagram

     

    A post shared by KVN Productions (@kvn.productions)

    ಈ ಹಿಂದೆ ಕೂಡ 2022ರಲ್ಲಿ ತೆರೆಕಂಡ ‘ಬೀಸ್ಟ್’ ಚಿತ್ರದಲ್ಲಿ ವಿಜಯ್‌ಗೆ ಪೂಜಾ ನಾಯಕಿಯಾಗಿ ನಟಿಸಿದ್ದರು. ಆದರೆ ಈ ಚಿತ್ರ ಚಿತ್ರಮಂದಿರದಲ್ಲಿ ಮಕಾಡೆ ಮಲಗಿತ್ತು. ಈಗ ಮತ್ತೆ ವಿಜಯ್ ಜೊತೆ ನಟಿಸುವ ಚಾನ್ಸ್ ಸಿಕ್ಕಿದೆ. ಇನ್ನೂ ಬಾಬಿ ಡಿಯೋಲ್ (Bobby Deol) ಕೂಡ ನಟಿಸುವ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ ಚಿತ್ರತಂಡ.

    ಅಂದಹಾಗೆ, ಶಾಹಿದ್ ಕಪೂರ್ ಜೊತೆ ‘ದೇವ’, ಸೂರ್ಯ 44, ಅಹಾನ್ ಶೆಟ್ಟಿ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ.

  • ವಿಜಯ್ ಕೊನೆಯ ಸಿನಿಮಾದಲ್ಲಿ ಬಾಬಿ ಡಿಯೋಲ್ ವಿಲನ್

    ವಿಜಯ್ ಕೊನೆಯ ಸಿನಿಮಾದಲ್ಲಿ ಬಾಬಿ ಡಿಯೋಲ್ ವಿಲನ್

    ಮಿಳಿನ ಸ್ಟಾರ್ ನಟ ವಿಜಯ್ ದಳಪತಿ (Vijay Thalapathy) ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದಲ್ಲಿ ಬಾಬಿ ಡಿಯೋಲ್ (Bobby Deol) ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಹೀರೋ ಆದ ‘ಶ್ರೀಗೌರಿ’ ಸೀರಿಯಲ್ ವಿಲನ್- ‘ಪೀಟರ್’ ಚಿತ್ರಕ್ಕೆ ಡಾಲಿ, ವಿಜಯ್ ಸೇತುಪತಿ ಸಾಥ್

    ವಿಜಯ್ ನಟನೆಯ 69ನೇ ಸಿನಿಮಾದಲ್ಲಿ ‘ಅನಿಮಲ್’ (Animal) ಖ್ಯಾತಿಯ ನಟ ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನನ್ನು ಚಿತ್ರತಂಡ ಸಂಪರ್ಕಿಸಿದೆ. ವಿಜಯ್ ಸಿನಿಮಾದಲ್ಲಿ ನಟಿಸುವ ಕುರಿತು ಬಾಬಿ ಡಿಯೋಲ್‌ ಜೊತೆ ಒಂದು ಹಂತದ ಮಾತುಕತೆಯಾಗಿದ್ದು, ಕಥೆ ಮತ್ತು ಪಾತ್ರದ ಕುರಿತು ಚರ್ಚೆಯಾಗಿದೆ ಎನ್ನಲಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ‘ದಳಪತಿ 69’ ಮೇಲೆ ಬಲು ನಿರೀಕ್ಷೆ ಇರೋದ್ರಿಂದ ಭರ್ತಿ 500 ಕೋಟಿಯಲ್ಲಿ ಚಿತ್ರ ತಯಾರಾಗುತ್ತಿದೆ. ತಮಿಳು ಚಿತ್ರಪ್ರೇಮಿಗಳ ಪಾಲಿನ ಮಾಸ್‌ ಮ್ಯಾನ್ ಇನ್ಮುಂದೆ ಬಣ್ಣ ಹಚ್ಚೋದಿಲ್ಲ ಅನ್ನುವ ಕೊರಗಿನ ಮಧ್ಯೆ ದಳಪತಿ 69 ಮೇಲೆ ನಿರೀಕ್ಷೆಯಂತೂ ದುಪ್ಪಟ್ಟಾಗಿದೆ. ಈ ನಡುವೆ ಇನ್ನೊಂದು ವಿಷಯ ಭಾರೀ ಆಶ್ಚರ್ಯ ಹುಟ್ಟಿಸಿದೆ. ಅದುವೇ ವಿಜಯ್ ಸಂಭಾವನೆ.

    ಇನ್ನೂ ದಳಪತಿ 69 ಚಿತ್ರಕ್ಕೆ ವಿಜಯ್ ಭರ್ತಿ 275 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾಂತೆ. ಚಿತ್ರದ ಬಜೆಟ್‌ನ ಅರ್ಧ ಭಾಗದಷ್ಟು ವಿಜಯ್ ಸಂಭಾವನೆ ಇರುತ್ತದೆ ಎಂದು ಸುದ್ದಿಯಾಗಿದೆ. ಹಿಂದಿನ ‘ದಿ ಗೋಟ್’ ಚಿತ್ರಕ್ಕೆ ವಿಜಯ್ ಬರೋಬ್ಬರಿ 200 ಕೋಟಿ ಸಂಭಾವನೆ ಪಡೆದಿದ್ದರು ಎಂಬ ವದಂತಿ ಇದೆ. ಈ ಬೆನ್ನಲ್ಲೇ ಅದಕ್ಕಿಂತಲೂ ಹೆಚ್ಚು 275 ಕೋಟಿ ಹಣ ಸಂಭಾವನೆ ರೂಪದಲ್ಲಿ ವಿಜಯ್ ಪಡೆಯಲಿದ್ದಾರೆ ಎಂಬುದೇ ಕುತೂಹಲದ ಸಂಗತಿ.

    2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ವಿಜಯ್ ಅಣಿಯಾಗುತ್ತಿದ್ದಾರೆ. ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ. ಲೋಗೋ ಮತ್ತಿತರ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಈ ನಡುವೆ ವರ್ಷ ಕಳೆಯುವದರೊಳಗೆ ವಿಜಯ್ ಒಪ್ಪಿಕೊಂಡ 69ನೇ ಚಿತ್ರ ಮುಗಿಸಿ ಕೊಡಬೇಕಾಗಿದೆ. ಹೀಗಾಗಿ ಶೀಘ್ರದಲ್ಲೇ ‘ದಳಪತಿ 69’ ಚಿತ್ರೀಕರಣ ಶುರುವಾಗಲಿದೆ ಎಂಬ ಮಾಹಿತಿ ಇದೆ. ಇನ್ನು ವಿಜಯ್ ಪಡೆದುಕೊಳ್ತಿರುವ 275 ಕೋಟಿ ಸಂಭಾವನೆ ಸುದ್ದಿಯಂತೂ ಇನ್ನುಳಿದ ಸ್ಟಾರ್ ನಟರಿಗೆ ಆಶ್ಚರ್ಯ ಮೂಡಿಸಿದೆ. ಇಲ್ಲಿಯವರೆಗೆ 200 ಕೋಟಿ ಸಂಭಾವನೆಯನ್ನ ಭಾರತದಲ್ಲಿ ಸ್ಟಾರ್ ನಟರು ನೇರವಾಗಿ ಪಡೆದಿರಲಿಲ್ಲ. ಶೇರ್ ರೂಪದಲ್ಲಿ ಬಂದಿರೋ ಆದಾಯದಲ್ಲಿ ಲೆಕ್ಕ ಚುಕ್ತಾ ಮಾಡಿಕೊಳ್ತಿದ್ದರು. ಅದನ್ನೇ ಸಂಭಾವನೆಯಾಗಿ ಲಾಭ ಗಳಿಸಿಸುತ್ತಿದ್ದ ಹಲವರು ನಟರ ಉದಾಹರಣೆ ಇದೆ. ಆದರೆ ಈಗ ವಿಜಯ್ ಭರ್ತಿ 275 ಕೋಟಿ ಮೊತ್ತದ ರೂಪದಲ್ಲೇ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ವಿಷಯ ಭಾರೀ ಚರ್ಚೆಗೀಡು ಮಾಡಿದೆ.