ಮುಂಬೈ: ಹಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಲೈಂಗಿಕ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಲೈಂಗಿಕ ಕಾರ್ಯಕರ್ತೆ ನೀಡಿದ ದೂರಿನ ಆಧಾರದ ಮೇಲೆ ದಂಪತಿ ಮತ್ತು ಇತರ ಇಬ್ಬರ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಭಿವಂಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು
ಸಂತ್ರಸ್ತೆ ದೂರಿನಲ್ಲಿ, ನಾನು ಮನೆಯಲ್ಲಿ ಇರುವಾಗ ಆರೋಪಿಗಳು ನನ್ನ ತಲೆಕೂದಲು ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ಮನೆಯಿಂದ ಹೊರಗೆ ಎಳೆದು ಥಳಿಸಿದ್ದಾರೆ. ಈ ವೇಳೆ ನನ್ನನ್ನು ರಕ್ಷಿಸಲು ಬಂದ ಇನ್ನೊಬ್ಬ ಲೈಂಗಿಕ ಕಾರ್ಯಕರ್ತೆಯ ಮೇಲೂ ಅವರು ಹಲ್ಲೆ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ.
ಮುಂಬೈ: 29 ಹೊಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಮಹಾರಾಷ್ಟ್ರದ ಥಾಣೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
ಸುಳಿವಿನ ಆಧಾರ ಮೇರೆಗೆ ಥಾಣೆಯ ಆರ್ಥಿಕ ಅಪರಾಧ ವಿಭಾಗ(EOW) ಪುಣೆಯ ದೇಹು ರಸ್ತೆಯಲ್ಲಿದ್ದ ಶ್ರದ್ಧಾ ಶ್ರೀಕಾಂತ್ ಪಲಾಂಡೆ ಮಹಿಳೆಯನ್ನು ಬಂಧಿಸಿದೆ ಎಂದು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಪನ್ಹಾಲೆ ತಿಳಿಸಿದರು.
ಎಂಟು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಶ್ರದ್ಧಾ ಮತ್ತು ಆಕೆಯ ಪತಿ ಶ್ರೀಕಾಂತ್ ಪಾಂಡುರಂಗ ಪಲಾಂಡೆ ವಿರುದ್ಧ ಕಾಸರವಾಡವಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಎಂಪಿಐಡಿಎಯ ಸೆಕ್ಷನ್ 420(ವಂಚನೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ದಾಳಿ ವೇಳೆ ಶ್ರದ್ಧಾ ಸಿಕ್ಕಿದ್ದು, ಶ್ರೀಕಾಂತ್ ಪರಾರಿಯಾಗಿದ್ದಾನೆ ಎಂದು ವಿವರಿಸಿದರು. ಇದನ್ನೂ ಓದಿ: ಮಹಿಳಾ ಶೌಚಾಲಯ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡ
ನಡೆದಿದ್ದೇನು?
ದಂಪತಿ ಸಲಹಾ ಸಂಸ್ಥೆಯನ್ನು ಸ್ಥಾಪಿಸಿದ್ದು, ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತೆ ಎಂದು ಆದಾಯದ ಭರವಸೆ ನೀಡುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸಿದ್ದರು. ಈ ಹಿನ್ನೆಲೆ ಇವರ ಮಾತಿಗೆ ನಂಚಿಕೆಯಿಟ್ಟು ಇಬ್ಬರು ಹೂಡಿಕೆದಾರರು ಹಣವನ್ನು ಕೊಟ್ಟಿದ್ದರು. ಆದರೆ ದಂಪತಿ ಹೂಡಿಕೆದಾರರ ಬಡ್ಡಿಯನ್ನು ಮತ್ತು ಅಸಲು ಮೊತ್ತವನ್ನು ಹಿಂದಿರುಗಿಸದೆ ಪರಾರಿಯಾಗಿದ್ದಾರೆ. ಇದೇ ರೀತಿ ಇವರು ಸುಮಾರು 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ್ದರು.
ಆರೋಪಿ ಮಹಿಳೆಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆಕೆಯನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆಕೆಯ ಪತಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದರು.
ಮುಂಬೈ: ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಕಾಳಿಚರಣ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಳಿಚರಣ್ ಮಹಾತ್ಮಾ ಗಾಂಧಿಯವರ ವಿರುದ್ಧ ಹೇಳಿಕೆಯನು ನೀಡಿದ್ದರು. ಇದನ್ನು ಹೊರತಪಡಿಸಿಯೂ ಕಾಳಿಚರಣ್ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸಿದ್ದರು. ಇದೀಗ ಮತ್ತೆ ಪೊಲೀಸರು ಕಾಳಿಚರಣ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ
ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಜಿತೇಂದ್ರ ಅವ್ಹಾದ್ ಕಾಳಿಚರಣ್‌ರ ವಿರುದ್ಧ ದೂರು ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ನೌಪಾದ ಪೊಲೀಸ್ ಠಾಣೆ ಎಂಟು ಸಿಬ್ಬಂದಿ ತಂಡ ರಾಯ್‌ಪುರಕ್ಕೆ ತೆರಳಿ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ
ಮುಂಬೈ: ಆದಿವಾಸಿಗಳು ತಮ್ಮ ಹಕ್ಕುಗಳಿಗಾಗಿ ಬೇಡಿಕೆ ಇಟ್ಟಿದಕ್ಕೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಥಾಣೆಯಲ್ಲಿ ನಡೆದಿದೆ.
ಥಾಣೆಯ ಆದಿವಾಸಿಗಳು ನಿನ್ನೆ ಉಪವಿಭಾಗಾಧಿಕಾರಿಗಳ ಆವರಣದಲ್ಲಿ ಅರಣ್ಯ ಹಕ್ಕುಗಳು, ಜಾತಿ ಪ್ರಮಾಣ ಪತ್ರಗಳು ಮತ್ತು ಇತರ ಸೌಕರ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದರು. ಈ ಸಂಬಂಧ 100ಕ್ಕೂ ಹೆಚ್ಚು ಆದಿವಾಸಿಗಳನ್ನು ಥಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡ ಆದಿವಾಸಿಗಳನ್ನು ಪೊಲೀಸರು ನಂತರ ಬಿಡುಗಡೆ ಮಾಡಿದ್ದಾರೆ. ಆದರೆ ಎನ್‍ಜಿಒ ಅಡಿಯಲ್ಲಿ ಆದಿವಾಸಿಗಳ ನಿಯೋಗವು ತಮ್ಮ ಬೇಡಿಕೆಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಉಪವಿಭಾಗಾಧಿಕಾರಿ ಅವಿನಾಶ್ ಶಿಂಧೆ ಅವರನ್ನು ಭೇಟಿ ಮಾಡಿ ಸಲ್ಲಿಸಿತ್ತು. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ನಿಂದಿಸಿದ್ದಕ್ಕೆ ಯುವಕನ ಅಪಹರಿಸಿ ಕೊಂದರು!
ಈ ಪತ್ರದಲ್ಲಿ ಬಾಕಿ ಉಳಿದಿರುವ 1,200 ಅರಣ್ಯ ಹಕ್ಕುಗಳ ಅರ್ಜಿಗಳನ್ನು ಪರಿಶೀಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಥಾಣೆ: ಹದಿಹರೆಯದ ಮಕ್ಕಳು ಹಲವಾರು ಕಾರಣಗಳಿಗೆ ನೊಂದು ಮನೆ ಬಿಟ್ಟು ಓಡಿ ಹೋಗುವ ಘಟನೆಗಳನ್ನು ನಾವು ಆಗಾಗ ನೋಡಿರುತ್ತೇವೆ. ಇಲ್ಲೊಬ್ಬ 13 ವರ್ಷದ ಹುಡುಗ ಮೊಬೈಲ್ ಆ್ಯಪ್ ಒಂದರ ಶೋಕಿಗೆ ಬಿದ್ದು, ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾನೆ.
ಈ ವಿಚಾರ ತಿಳಿದುಕೊಂಡ ಪೋಷಕರು ಪೊಲೀಸರಿಗೆ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಮುಂಬೈ ಪೊಲೀಸರು ಬಾಲಕನನ್ನು ಗೋವಾದಲ್ಲಿ ಪತ್ತೆ ಹಚ್ಚಿ ಬಳಿಕ ಆತನನ್ನು ಪೋಷಕರ ಜೊತೆ ಸೇರಿಸಿದ್ದಾರೆ.
ಏನಾಗಿತ್ತು?: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರ್ ಎಂಬಲ್ಲಿನ ಹುಡುಗ ಇದೇ ಅಕ್ಟೋಬರ್ 21ರಂದು ಮನೆಯಿಂದ ಹೊರಟಿದ್ದ. ಈ ವೇಳೆ ಪೋಷಕರಿಗೆ ನಾನು ಒಂದು ವರ್ಷ ದೂರ ಇರುವುದಾಗಿ ತಿಳಿಸಿದ್ದ. ಆದರೆ ಈ ವೇಳೆ ಪೋಷಕರಿಗೆ ಯಾವುದೇ ರೀತಿಯ ಅನುಮಾನ ಬಾರದಂತೆ ನಡೆದುಕೊಂಡಿದ್ದ ಎಂದು ಬದ್ಲಾಪುರ ಈಸ್ಟ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮೋರೆ ಮಾಹಿತಿ ನೀಡಿದ್ದಾರೆ.
ಬಾಲಕನ ಪೋಷಕರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಪೊಲೀಸರು ಬಾಲಕನ ಗೆಳೆಯರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಬಾಲಕ ಡಿಸ್ಕಾರ್ಡ್ ಎಂಬ ಆ್ಯಪ್‍ನಲ್ಲಿ ಸಕ್ರಿಯನಾಗಿದ್ದ ವಿಚಾರ ಬಯಲಾಗಿದೆ. ಗ್ರೂಪ್ ಚ್ಯಾಟ್‍ನಲ್ಲಿ ಕೆಲವರು ಜೀವನದಲ್ಲಿ ಸಾಧನೆ ಮಾಡಬೇಕು, ತಮ್ಮನ್ನು ತಾವು ಸಾಬೀತು ಪಡಿಸಬೇಕು ಎಂಬ ಕಾರಣಕ್ಕೆ ಮನೆ ಬಿಟ್ಟು ದೂರ ಹೋಗಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಇದನ್ನೂ ಓದಿ: ಜಿಮ್ ಮಾಡುವ ವೇಳೆ ಕೈ ಬೆರಳು ಮುರಿದುಕೊಂಡ Junior NTR
ಈ ಚ್ಯಾಟ್‍ಗಳಿಂದ ಪ್ರಭಾವಿತಾದ ಹುಡುಗ ಓಡಿ ಹೋಗಿದ್ದ. ಆತ ಚ್ಯಾಟಿಂಗ್ ಮಾಡಲು ಬಳಸಿದ್ದ ಮೊಬೈಲ್ ಫೋನ್‍ನ ಐಪಿ ಅಡ್ರೆಸ್ ಮೂಲಕ ಆತ ಗೋವಾದಲ್ಲಿದ್ದಾನೆ ಎಂದು ಸೈಬರ್ ಸೆಲ್ ಪೊಲೀಸರು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ
ಗೋವಾದ ಕಾಲಂಗೂಟ್ ಎಂಬಲ್ಲಿದ್ದ ಆತನನ್ನು ಮತ್ತೆ ಪೋಷಕರ ಜೊತೆ ಸೇರಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.
ಮುಂಬೈ: ಇಬ್ಬರು ಅಪ್ರಾಪ್ತರು ಸೇರಿ 30ಕ್ಕೂ ಹೆಚ್ಚು ಜನ 9 ತಿಂಗಳ ಕಾಲ 15 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯ ಡೊಂಬಿವ್ಲಿಯಲ್ಲಿ ನಡೆದಿದೆ.
ಪೊಲೀಸರು ಇದೀಗ ಇಬ್ಬರು ಅಪ್ರಾಪ್ತರು ಸೇರಿ 28 ಆರೋಪಿಗಳನ್ನು ಬಂಧಿಸಿದ್ದು, 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಭಯಾನಕ ಪ್ರಕರಣವನ್ನು ಭೇದಿಸಲು ಎಸ್‍ಐಟಿ ತಂಡವನ್ನು ರಚಿಸಲಾಗಿದೆ. ಸಂತ್ರಸ್ತೆ ಒಟ್ಟು 30 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ 28 ಜನರನ್ನು ಈಗಾಗಲೇ ಥಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದ್ದ ಕಾರಣ ಬಾಲಕಿಯನ್ನು ಪೊಲೀಸರು ಮನೆಗೆ ಕಳುಹಿಸಿದ್ದಾರೆ.
ಜನವರಿಯಿಂದ ನಿರಂತರ ಅತ್ಯಾಚಾರ
ಬಾಲಕಿಯ ಸ್ನೇಹಿತ ಜನವರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ವೀಡಿಯೋ ರೆಕಾರ್ಡ್ ಮಾಡಿದ್ದು, ಇಲ್ಲಿಂದ ಪ್ರಕರಣ ಶುರುವಾಗಿದೆ. ವೀಡಿಯೋ ರೆಕಾರ್ಡ್ ಮಾಡಿಕೊಂಡ ಬಳಿಕ ಆಕೆಯ ಸ್ನೇಹಿತ ಬಾಲಕಿಗೆ ಬೆದರಿಕೆ ಹಾಕಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ವೀಡಿಯೋವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದು, ಅವರೂ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಬಳಿಕ ಆರೋಪಿಗಳ ಗುಂಪು ಡೊಂಬಿವ್ಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದೆ. ಇದನ್ನೂ ಓದಿ: ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!
ಬಾಲಕಿಯ ಸ್ನೇಹಿತ ಜನವರಿಯಲ್ಲಿ ಅತ್ಯಾಚಾರ ಎಸಗಿದ ಬಳಿಕ ಇದು ಆರಂಭವಾಗಿದೆ. ವೀಡಿಯೋ ರೆಕಾರ್ಡ್ ಮಾಡಿಕೊಂಡು ಬಾಲಕಿಯನ್ನು ಬ್ಲ್ಯಾಕ್‍ಮೇಲ್ ಮಾಡಲು ಆರಂಭಿಸಿದ್ದಾನೆ. ಬಳಿಕ ಆತನ ಸ್ನೇಹಿತರೆಲ್ಲ ಸೇರಿಕೊಂಡು ವಿವಿಧ ಸ್ಥಳಗಳಲ್ಲಿ ಕನಿಷ್ಟ ನಾಲ್ಕೈದು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಡೊಂಬಿವ್ಲಿ, ಬದ್ಲಾಪುರ, ಮುರ್ಬಾದ್ ಹಾಗೂ ರಬಾಲೆಗಳಲ್ಲಿ ಕೃತ್ಯ ಎಸಗಿದ್ದಾರೆ ಎಂದು ಪೂರ್ವ ವಲಯದ ಎಸಿಪಿ ದತ್ತಾತ್ರೇಯ ಕರಾಳೆ ವಿವರಿಸಿದ್ದಾರೆ. ಇದನ್ನೂ ಓದಿ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ
ಸಂತ್ರಸ್ತೆ ಬುಧವಾರ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ದೂರು ನೀಡಿ ಎರಡು ದಿನ ಕಳೆದಿದೆ. ಈಗಾಗಲೇ 28 ಜನರನ್ನು ಬಂಧಿಸಿದ್ದೇವೆ. ಪ್ರಕರಣದಲ್ಲಿ ಒಟ್ಟು 33 ಜನ ಆರೋಪಿಗಳ ಹೆಸರು ಕೇಳಿ ಬಂದಿದೆ. ಬಂಧಿತರಲ್ಲಿ ಇಬ್ಬರು 17 ವರ್ಷದವರಾಗಿದ್ದಾರೆ. ಸಂತ್ರಸ್ತೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಬಾಲಕಿ ಮೇಲೆ ವಿವಿಧ ಸ್ಥಳಗಳಲ್ಲಿ ಅತ್ಯಾಚಾರ ಎಸಗಲಾಗಿದೆ. ಎಲ್ಲ ಆರೋಪಿಗಳೂ ಸಂತ್ರಸ್ತೆಗೆ ಪರಿಚಿತರು, ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹಿತರಾದವರು. ವಾಟ್ಸಪ್ ಗ್ರೂಪ್ ಹಾಗೂ ವೀಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವುದೇ ಆರೋಪಿಗೆ ರಾಜಕೀಯ ವ್ಯಕ್ತಿಗಳ ಸಂಬಂಧ ಇಲ್ಲ ಎಂದು ತನಿಖೆ ನಿರ್ವಹಿಸುತ್ತಿರುವ ಎಸಿಪಿ ಸೋನಾಲಿ ಧೋಲ್ ಮಾಹಿತಿ ನೀಡಿದ್ದಾರೆ.
ಮುಂಬೈ: ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತರು ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವನ್ನು ಹೊರಗೆ ಹೇಳಿದರೆ ನಿನ್ನ ತಂದೆಯನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಸಿದ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಜುಲೈ 2020ರಂದು 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಬಾಲಕಿಯ ತಂದೆಯನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಎಂದು ಗಣೇಶಪುರಿ ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮನೆಗೆ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳಲ್ಲಿ ಒಬ್ಬ ಹಳ್ಳಿಯ ಬಳಿಯಿರುವ ಹಳೆಯ ಪ್ರತ್ಯೇಕ ಬಂಗಲೆಗೆ ಬರುವಂತೆ ಕೇಳಿಕೊಂಡಿದ್ದಾನೆ. ನಂತರ ಆತ ಮತ್ತು ಅವನ ಮೂವರು ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿದ್ದಾರೆ. ಕೆಲವು ದಿನಗಳ ನಂತರ ಇಬ್ಬರು ಆರೋಪಿಗಳು ಅವಳನ್ನು ಕರೆದುಕೊಂಡು ಮತ್ತೆ ಅದೇ ಬಂಗಲೆಗೆ ಹೋಗಿ ಮತ್ತೆ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಾಗಿ ಹಲವು ದಿನಗಳ ನಂತರ ತಿಳಿದ ಕುಟುಂಬ ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಡೆದಿರುವ ಘಟನೆಯ ಬಗ್ಗೆ ದೂರನ್ನು ನೀಡಿದ್ದಾರೆ. ಬಳಿಕ ನಾಲ್ವರು ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ: ಅಕ್ರಮವಾಗಿ ನಡೆಸುವ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ನಗರ ಸಭೆ ಅಧಿಕಾರಿಗಳು 3 ಲಕ್ಷ ಮೌಲ್ಯದ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ದೂರಿನ ಮೇರೆಗೆ ಥಾಣೆ ಮುನ್ಸಿಪಲ್ ಕಾರ್ಪೋರೇಶನ್ (ಟಿಎಂಸಿ) ಅಧಿಕಾರಿಗಳು ಮುಂಬ್ರಾ ಪ್ರದೇಶದ ಕೌಸಾದಲ್ಲಿರುವ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೆ ಕಸಾಯಿಖಾನೆ ನಡೆಸಲಾಗುತ್ತಿತ್ತು ಎಂದು ಟಿಎಂಸಿಯ ಪಶುವೈದ್ಯಕೀಯ ವಿಭಾಗದ ಉಸ್ತುವಾರಿ ಅಧಿಕಾರಿ ಶಾಮಾ ಶಿರೋಡ್ಕರ್ ಹೇಳಿದ್ದಾರೆ.
ದಾಳಿಯಲ್ಲಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಇತರ ಕಸಾಯಿಖಾನೆಗಳನ್ನು ಪತ್ತೆಹಚ್ಚಲು ಮುಂಬ್ರಾದಲ್ಲಿ ಇನ್ನು ಹಲವು ಕಡೆ ದಾಳಿ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಸೋಮವಾರ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.
Bhai.. all your wishes🙏 Trying my best to get the maximum migrants reach their homes to their families ❣️🙏 https://t.co/ikTxiSkpBO
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ ಸಿನಿಮಾದ ನಟ ಸೋನು ಸೂದ್, “ಪ್ರತಿಯೊಬ್ಬರು ತಮ್ಮ ಕುಟುಂಬ, ಆತ್ಮೀಯರೊಂದಿಗೆ ಇರಲು ಇಷ್ಟಪಡುತ್ತಾರೆ. ಆದ್ದರಿಂದ ವಲಸಿಗರು ಮನೆಗೆ ತಲುಪಲು ಸಹಾಯ ಮಾಡಲು ಮಹಾರಾಷ್ಟ್ರ-ಕರ್ನಾಟಕ ರಾಜ್ಯ ಸರ್ಕಾರಗಳಿಂದ ಅನುಮತಿ ಕೋರಿದ್ದೆ. ಅದರಂತೆ ವಲಸೆ ಕಾರ್ಮಿಕರನ್ನು ಕಳಿಸಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
“ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಅಗತ್ಯ ದಾಖಲೆಗಳನ್ನು ಒದಗಿಸಿದರು. ವಲಸೆ ಕಾರ್ಮಿಕರು ಪುಟ್ಟ ಮಕ್ಕಳು, ವೃದ್ಧ ಪೋಷಕರನ್ನು ಕರೆದುಕೊಂಡು ರಸ್ತೆ ಮಾರ್ಗವಾಗಿ ಹೋಗುವುದನ್ನು ಕಂಡು ನನಗೆ ನೋವಾಗಿತ್ತು. ಹೀಗಾಗಿ ಅವರ ಸಹಾಯಕ್ಕೆ ನಿಂತೆ. ಇತರ ರಾಜ್ಯಗಳ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಮುಟ್ಟಿಸುವ ನನ್ನ ಕೆಲಸವನ್ನು ಮುಂದುವರಿಸುತ್ತೇನೆ” ಎಂದು ಸೋನು ಸೂದ್ ಹೇಳಿದ್ದಾರೆ.
46 ವರ್ಷದ ನಟ ಪಂಜಾಬ್‍ನಾದ್ಯಂತ 1,500ಕ್ಕೂ ಹೆಚ್ಚು ಪಿಪಿಇ ಕಿಟ್‍ಗಳನ್ನು ವೈದ್ಯರಿಗೆ ನೀಡಿದ್ದರು. ಅಷ್ಟೇ ಅಲ್ಲದೆ ವೈದ್ಯಕೀಯ ಸಿಬ್ಬಂದಿಯ ವಸತಿಗಾಗಿ ಅವರ ಮುಂಬೈ ಹೋಟೆಲ್ ಅನ್ನು ನೀಡಿದ್ದಾರೆ.
– ಮೂವರು ಸ್ನೇಹಿತರಿಂದ ಇಂಜಿನಿಯರ್ ವಿದ್ಯಾರ್ಥಿ ಬರ್ಬರ ಹತ್ಯೆ
ಥಾಣೆ: 15 ಸಾವಿರ ಸಾಲ ಪಡೆದು ಸರಿಯಾದ ಸಮಯಕ್ಕೆ ವಾಪಸ್ ಕೊಡಲಿಲ್ಲ ಎಂದು ಸ್ನೇಹಿತನನ್ನೇ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿಕೊಂಡು 11 ಮಹಡಿಯಿಂದ ಕೆಳಗೆ ತಳ್ಳಿ ಕೊಲೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಮೂವರು ಆರೋಪಿಗಳನ್ನು ಅಭಿನವ್ ಜಾಧವ್, ಅಕ್ಷಯ್ ಗೊರಾಡೆ ಮತ್ತು ತೇಜಸ್ ಗುಜಾರ್ ಎಂದು ಗುರುತಿಸಲಾಗಿದೆ. ಮೃತನನ್ನು ಸಾಗರ್ ಚಿಲ್ವೆರಿ ಎಂದು ಗುರುತಿಸಲಾಗಿದೆ. ಕೊಲೆಯಾದ ಸಾಗರ್ ಮತ್ತು ಆರೋಪಿಗಳು ಫ್ಲ್ಯಾಟ್‍ನಲ್ಲಿ ಒಟ್ಟಿಗೆ ಇರುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಸಾಗರ್ ಜನವರಿ 9 ರಂದು ಅಭಿನವ್ ಜಾಧವ್ ಕಡೆಯಿಂದ ಶೇ.10 ಬಡ್ಡಿಗೆ 15 ಸಾವಿರ ಸಾಲ ಪಡೆದುಕೊಂಡಿರುತ್ತಾನೆ. ಈ ಹಣವನ್ನು ಕಳೆದ ಸೋಮವಾರಕ್ಕೆ ವಾಪಸ್ ಕೊಡುವುದಾಗಿ ಸಾಗರ್ ಹೇಳಿರುತ್ತಾನೆ. ಆದರೆ ಕೊಡಲು ಸಾಧ್ಯವಾಗಿರಲಿಲ್ಲ. ಈ ವಿಚಾರಕ್ಕೆ ಫ್ಲ್ಯಾಟ್‍ನ ಪಾರ್ಕಿಂಗ್ ಜಾಗದಲ್ಲಿ ಜಾಧವ್ ಮತ್ತು ಸಾಗರ್ ಜಗಳವಾಡಿರುತ್ತಾರೆ. ಆಗ ಮಧ್ಯೆ ಬಂದ ಸೆಕ್ಯೂರಿಟಿ ಗಾರ್ಡ್ ಜಗಳ ಬಿಡಿಸಿ ವಾಪಸ್ ಕಳುಹಿಸಿರುತ್ತಾರೆ.
ಈ ಘಟನೆಯ ನಂತರ ಫ್ಲ್ಯಾಟ್‍ಗೆ ಹೋದ ಇಬ್ಬರು ಮತ್ತೆ ಜಗಳವಾಡುತ್ತಾರೆ. ಈ ವೇಳೆ ಜಾಧವ್‍ಗೆ ಅಕ್ಷಯ್ ಮತ್ತು ತೇಜಸ್ ಸಾಥ್ ಕೊಡುತ್ತಾರೆ. ಆಗ ಮೂವರು ಸೇರಿಕೊಂಡು ಸಾಗರ್ ಅನ್ನು 11 ಮಹಡಿಯಿಂದ ತಳ್ಳಿದ್ದಾರೆ. ಇದನ್ನು ನೋಡಿದ ಸೆಕ್ಯೂರಿಟಿ ಗಾರ್ಡ್, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ತಕ್ಷಣ ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸೆಕ್ಯೂರಿಟಿ ಗಾರ್ಡ್ ನೀಡಿದೆ ಹೇಳಿಕೆ ಮೇಲೆ ಅಭಿನವ್ ಜಾಧವ್, ಅಕ್ಷಯ್ ಗೊರಾಡೆ ಮತ್ತು ತೇಜಸ್ ಗುಜಾರ್ ಮೂವರನ್ನು ಬಂಧಿಸಿದ್ದಾರೆ.