Tag: Thanks

  • ಚೀನಾ, ಇಟಲಿ, ಇರಾನಿನಲ್ಲಿ ನಾವಿಲ್ಲ, ಭಾರತದಲ್ಲಿದ್ದೇವೆ – ಸಾವು ಗೆದ್ದ ಟೆಕ್ಕಿಯ ಪತ್ನಿಯ ಮಾತು

    ಚೀನಾ, ಇಟಲಿ, ಇರಾನಿನಲ್ಲಿ ನಾವಿಲ್ಲ, ಭಾರತದಲ್ಲಿದ್ದೇವೆ – ಸಾವು ಗೆದ್ದ ಟೆಕ್ಕಿಯ ಪತ್ನಿಯ ಮಾತು

    – ಆಸ್ಪತ್ರೆಯ ವೈದ್ಯರಿಗೆ, ಸಿಬ್ಬಂದಿಗೆ ಧನ್ಯವಾದ
    – ಈಗ ಮತ್ತೆ ನಮಗೆ ಆತ್ಮವಿಶ್ವಾಸ ಮೂಡಿದೆ

    ಬೆಂಗಳೂರು: ಇಡೀ ಜಗತ್ತೇ ಕೊರೊನಾ ವೈರಸ್‍ಗೆ ಸಿಲುಕಿ ಒದ್ದಾಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಆಗಿದೆ. ಆದರೆ ಈ ಹೊತ್ತಲ್ಲಿ ಕರ್ನಾಟಕದ ಮಂದಿಗೆ ಸಿಹಿಸುದ್ದಿ ಸಿಕ್ಕಿದೆ.

    ಕೊರೊನಾ ಸೋಂಕಿಗೆ ತುತ್ತಾಗಿದ್ದ ಬೆಂಗಳೂರಿನ ಕುಟುಂಬ ಕೊರೊನಾ ಜಯಿಸಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಸತತ 10 ದಿನಗಳ ಚಿಕಿತ್ಸೆ ಪಡೆದ ಟೆಕ್ಕಿ ಕುಟುಂಬ ಕೊರೊನಾ ಸೋಂಕಿನಿಂದ ಪಾರಾಗಿದೆ. ತಮ್ಮ ಇಡೀ ಕುಟುಂಬವನ್ನು ಕೊರೊನಾದಿಂದ ಪಾರು ಮಾಡಿದ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ವೈದ್ಯರಿಗೆ, ನರ್ಸ್‌ಗಳಿಗೆ ಸಿಬ್ಬಂದಿಗೆ ಟೆಕ್ಕಿ ಪತ್ನಿ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಮತ್ತೊಂದು ಪಾಸಿಟಿವ್ – ದುಬೈನಿಂದ ಬಂದ ಬೆಂಗ್ಳೂರಿನ ಮಹಿಳೆಗೆ ಕೊರೊನಾ

    ಪತ್ರದಲ್ಲಿ ಏನಿದೆ?
    ನಾನು ಮತ್ತು ನನ್ನ ಕುಟುಂಬ ಕೊರೊನಾ ಸೋಂಕಿತರಾಗಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾದ್ವಿ. ಅಂದಿನಿಂದ ನಮ್ಮನ್ನು ಐಸೋಲೇಷನ್‍ನಲ್ಲಿ ಇಟ್ಟಿದ್ದರು. ಅಂದಿನಿಂದ ನಮಗೆ ಸರ್ಕಾರಿ ಸೌಲಭ್ಯದೊಂದಿಗೆ ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಯಲ್ಲಿ ನಮಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡರು. ನಮಗೆ ಈ ರೋಗದ ಭೀತಿಯಿಂದ ಹೊರಬರಲು ನೆರವಾದರು.

    ಕೊರೊನಾ ವೈರಸ್ ಎಂಬುದು ಜನರನ್ನು ಭಯಬೀತರಾಗಿ ಮಾಡಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ವೈದ್ಯರು ಪ್ರಬುದ್ಧವಾಗಿ, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ನನ್ನ ಪತಿಗೆ ಕೊರೊನಾ ಲಕ್ಷಣಗಳು ಕಾಣಿಸಿದಾಗ ನಾನೇ ಸ್ವತಃ ಅಂಬುಲೆನ್ಸ್‌ಗೆ ಕರೆ ಮಾಡಿ ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಈ ವೇಳೆ ನಾವು ಯಾವುದೇ ಸಾರ್ವಜನಿಕರು, ಸಾರ್ವಜನಿಕ ಮತ್ತು ಖಾಸಗಿ ವಾಹನಕ್ಕೆ ತೊಂದರೆ ಮಾಡಲಿಲ್ಲ.

    ಆಗ ವೈದ್ಯರು, ನರ್ಸ್ ಮತ್ತು ಇತರ ಎಲ್ಲ ಸಹಾಯಕ ಸಿಬ್ಬಂದಿ ನಮ್ಮ ಬಳಿ ಬಂದರು. ನಂತರ ಸ್ಕ್ರೀನಿಂಗ್ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದರು. ವರದಿಯಲ್ಲಿ ನಮಗೆ ಪಾಸಿಟಿವ್ ಬಂದ ಬಳಿಕ ನಮ್ಮನ್ನು ಐಸೋಲೇಷನ್ ವಾರ್ಡ್‌ಗೆ ಶಿಫ್ಟ್ ಮಾಡಿದರು. ವಾರ್ಡ್‍ನಲ್ಲಿ ಶುಚಿತ್ವದೊಂದಿಗೆ ನಮಗೆ ಬೇಕಾದ ಅಗತ್ಯತೆಗಳನ್ನು ನೋಡಿಕೊಂಡರು.

    ನಮಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ನಾವು ಸಂಪರ್ಕದಲ್ಲಿದ್ದವರಿಗೂ ಸಹ ಕ್ವಾರಂಟೇನ್ ಮಾಡಲಾಯಿತು. ನನ್ನ ಪತಿಯ ಕಂಪನಿ, ಸಹೋದ್ಯೋಗಿಗಳು, ನನ್ನ ಮಗುವಿನ ಶಾಲೆ, ಸ್ನೇಹಿತರು, ಕ್ಲಾಸ್‍ಮೆಟ್ಸ್, ನನ್ನ ಸ್ನೇಹಿತರು, ನೆರೆಹೊರೆಯವರು, ಅಪಾರ್ಟ್ ಮೆಂಟ್‍ನಲ್ಲಿದ್ದವರ ಮೇಲೆ ತುಂಬಾ ಅಚ್ಚುಕಟ್ಟಾಗಿ ನಿಗಾ ವಹಿಸಲಾಯಿತು.

    ಆರೋಗ್ಯಾಧಿಕಾರಿಗಳು ನಮ್ಮ ಗುರುತು ಹೊರಗೆ ಗೊತ್ತಾಗದಂತೆ ನೋಡಿಕೊಂಡರು. ಯಾವುದೇ ಮಾಧ್ಯಮದವರು ಸಂಪರ್ಕಿಸಲು ಬಿಡಲಿಲ್ಲ. ನಮಗೆ ಅತ್ಯುತ್ತಮ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಮಾಡಿದ್ದಾರೆ. ಇದು ನಮ್ಮಲ್ಲಿ ಮತ್ತೆ ಆತ್ಮವಿಶ್ವಾಸ ಮೂಡಿಸಿದೆ. ನಮಗೆ ಅತ್ಯುತ್ತಮವಾದ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್‌ಗಳು, ವೈದ್ಯಕೀಯ ಸಿಬ್ಬಂದಿ ವರ್ಗದವರ ತಾಳ್ಮೆ, ಕ್ರಮಬದ್ಧ ಚಿಕಿತ್ಸೆ, ಚಿಕಿತ್ಸೆ ನೀಡಿದ ಪರಿ ನೋಡಿ ನಮ್ಮಲ್ಲಿ ಭವಿಷ್ಯದ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚು ಮಾಡಿತು.

    ನಮ್ಮನ್ನು ಚೆನ್ನಾಗಿ ನೋಡಿಕೊಂಡ ವೈದ್ಯರು, ನರ್ಸ್‌ಗಳು, ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳು, ಸರ್ಕಾರ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದ ಹೇಳುತ್ತೇನೆ. ನಮ್ಮೆಲ್ಲರನ್ನೂ ಸುರಕ್ಷಿತವಾಗಿಡಲು ಎಲ್ಲರೂ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಚೀನಾ, ಇಟಲಿ, ಇರಾನಿನಲ್ಲಿ ನಾವಿಲ್ಲ, ನಾವು ಭಾರತದಲ್ಲಿ ಇದ್ದೇವೆ ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ನಮ್ಮನ್ನು ಕೊರೊನಾ ಸೋಂಕಿನಿಂದ ಪಾರು ಮಾಡಲು ಅವರು ಪಟ್ಟ ಶ್ರಮ ಪ್ರಶಂಸನೀಯ. ನಮ್ಮ ವ್ಯವಸ್ಥೆಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಪತ್ರದಲ್ಲಿ ಬರೆದು ತಿಳಿಸಿದ್ದಾರೆ.

    ಟೆಕ್ಕಿ ಮಾರ್ಚ್ 1ರಂದು ನ್ಯೂಯಾರ್ಕ್-ದುಬೈ ಮೂಲಕ ಬೆಂಗಳೂರಿಗೆ ಬಂದಿದ್ದ. ಮಾರ್ಚ್ 8ರಂದು ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಕೂಡಲೇ ಆತನನ್ನು ಮತ್ತು ಆತನ ಪತ್ನಿ ಮತ್ತು ಪುತ್ರಿಯನ್ನು ರಾಜೀವ್ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. 20 ತಜ್ಞ ವೈದ್ಯರು, 60 ದಾದಿಯರು ಹಗಲಿರುಳೆನ್ನದೇ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ.

  • ಪುನೀತ್‍ಗೆ ಧನ್ಯವಾದ ತಿಳಿಸಿದ ಸುರೇಶ್ ಕುಮಾರ್

    ಪುನೀತ್‍ಗೆ ಧನ್ಯವಾದ ತಿಳಿಸಿದ ಸುರೇಶ್ ಕುಮಾರ್

    ಬೆಂಗಳೂರು: ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಹುಟ್ಟುಹಬ್ಬ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಧನ್ಯವಾದ ತಿಳಿಸಿದ್ದಾರೆ.

    ಕೊರೊನಾ ವೈರಸ್ ಹರಡುವ ಆತಂಕದಲ್ಲಿ ಸಿಎಂ ಯಡಿಯೂರಪ್ಪ ಅವರು ಒಂದು ವಾರ ಕರ್ನಾಟಕ ಬಂದ್ ಮಾಡಿ ಆದೇಶ ಹೊರಡಿಸಿದ್ದರು. ಅದರ ಬೆನ್ನಲ್ಲೇ ಪುನೀತ್ ರಾಜ್‍ಕುಮಾರ್ ಕೂಡ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದರು. ಹೀಗಾಗಿ ಸಚಿವ ಸುರೇಶ್ ಕುಮಾರ್ ಪುನೀತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಪ್ರೀತಿ, ವಿಶ್ವಾಸ ನನ್ನ ಮೇಲೆ ಇರುತ್ತೆ – ಅಭಿಮಾನಿಗಳಲ್ಲಿ ಪುನೀತ್ ಮನವಿ

    ಪುನೀತ್ ಮಾತನಾಡಿದ್ದ ಟ್ವಿಟ್ಟರ್ ವಿಡಿಯೋವನ್ನು ಶೇರ್ ಮಾಡಿದ ಸಚಿವರು ಅದಕ್ಕೆ, “ಇದಕ್ಕೆನ್ನುತ್ತಾರೆ ಸಮಾಜಮುಖಿ ಸಂದೇಶ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

    ಪುನೀತ್ ವಿಡಿಯೋದಲ್ಲಿ ಹೇಳಿದ್ದೇನು?
    “ಎಲ್ಲಾ ಸಮಸ್ತ ಅಭಿಮಾನಿ ದೇವರುಗಳಿಗೆ ನಮಸ್ಕಾರ. ಈ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಯಾರೂ 17 ರಂದು ತಮ್ಮ ತಮ್ಮ ಊರುಗಳಿಂದ ಮನೆಯ ಹತ್ತಿರ ಬರಬೇಡಿ. ನಾನು ಮನೆಯಲ್ಲೂ ಇರುವುದಿಲ್ಲ” ಎಂದು ಮನವಿ ಮಾಡಿಕೊಂಡಿದ್ದಾರೆ.

    “ಯಾಕೆಂದರೆ ಇಡೀ ದೇಶದಲ್ಲಿ ಕೊರೊನಾ ವೈರಸ್ ಸಮಸ್ಯೆ ಇದೆ. ಇದಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವೆಲ್ಲರೂ ಸೇರಿ ಕೈ ಜೋಡಿಸಬೇಕು. ಹಾಗಾಗಿ ಬೇರೆ ಬೇರೆ ಊರುಗಳಿಂದ ಬಂದು ನಿಮ್ಮ ಪ್ರೀತಿ, ವಿಶ್ವಾಸ ತೋರಿಸುತ್ತಿದ್ರಿ. ಖಂಡಿತವಾಗಿ ನಿಮ್ಮ ಪ್ರೀತಿ ಮತ್ತು ವಿಶ್ವಾಸ ನನ್ನ ಮೇಲೆ ಇರುತ್ತದೆ ಎಂದು ನಾನು ಭಾವಿಸಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ” ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

  • ಸತ್ಯವಾದ ವಿಡಿಯೋ ಬಿಡುಗಡೆ ಮಾಡಿದ ಹೆಚ್‍ಡಿಕೆಗೆ ಧನ್ಯವಾದ: ಖಾದರ್

    ಸತ್ಯವಾದ ವಿಡಿಯೋ ಬಿಡುಗಡೆ ಮಾಡಿದ ಹೆಚ್‍ಡಿಕೆಗೆ ಧನ್ಯವಾದ: ಖಾದರ್

    ಮಂಗಳೂರು: ಡಿಸೆಂಬರ್ 19 ರಂದು ನಡೆದ ಮಂಗಳೂರಿನ ಗಲಭೆಯ ಸತ್ಯಾಸತ್ಯತೆಯ ಎಲ್ಲಾ ವೀಡಿಯೋಗಳನ್ನು ಬಿಡುಗಡೆ ಮಾಡಿ ಸತ್ಯವನ್ನು ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಯವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

    ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿರೋದು ಸಂತಸ ತಂದಿದೆ. ಸತ್ಯಕ್ಕೆ ಸಾವಿಲ್ಲ. ಸತ್ಯ ಇಂದಲ್ಲ ನಾಳೆ ಹೊರ ಜಗತ್ತಿಗೆ ಗೊತ್ತಾಗುತ್ತದೆ. ಸರ್ಕಾರ ತನ್ನ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಪ್ರಯತ್ನ ಪಟ್ಟಿತ್ತು. ಆದರೆ ಅದು ಇದೀಗ ಸಾಧ್ಯವಾಗಿಲ್ಲ ಎಂದರು.

    ನನ್ನ ಮೇಲೆ ಕೂಡ ಕೇಸ್ ಹಾಕಿ ಬೇರೆ ರೀತಿ ಬಿಂಬಿಸಲು ಸರ್ಕಾರ ಹೊರಟಿತ್ತು. ಆದರೆ ಈ ವಿಡಿಯೋ ಅಂದಿನ ಘಟನೆ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೊತ್ತಾಗಿದೆ. ನಾನು ಅವತ್ತೇ ಹೇಳಿದ್ದೆ, ಎಲ್ಲಾ ವಿಡಿಯೋ ಬಿಡುಗಡೆ ಮಾಡಿಲ್ಲ ಎಂದು. ಇವತ್ತು ಎಲ್ಲಾ ವಿಡಿಯೋವನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಜನರಿಗೆ ಸತ್ಯ ಗೊತ್ತಾಗಿದೆ. ಹೀಗಾಗಿ ಎಚ್‍ಡಿಕೆಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ: ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ತಪ್ಪಿತಸ್ಥರನ್ನು ತನಿಖೆಯಿಂದ ಕೈಬಿಡಿ ಎಂದು ನಾವು ಎಲ್ಲೂ ಹೇಳುತ್ತಿಲ್ಲ. ಆದರೆ ಅಮಾಯಕರನ್ನು ಪ್ರಕರಣದಿಂದ ಕೈಬಿಡಬೇಕು. ನ್ಯಾಯಾಂಗ ತನಿಖೆಗೆ ಆದರೆ ಮಾತ್ರ ಇದೆಲ್ಲಾ ಸರಿಯಾಗಿ ನಡೆಯುತ್ತೆ. ಆದ್ದರಿಂದ ನಾವು ನ್ಯಾಯಾಂಗ ತನಿಖೆಯನ್ನು ಮಾಡಲು ಒತ್ತಾಯಿಸುತ್ತಿದ್ದೇವೆ. ಈ ವೀಡಿಯೋವನ್ನು ನಾವು ಬಿಡುಗಡೆ ಮಾಡಿದರೆ ಇದು ಫೇಕ್ ಎಂದು ಹೇಳಿ ಅದಕ್ಕೆ ಜಾತಿ ಧರ್ಮದ ಲೇಪ ಹಚ್ಚುತ್ತಿದೆ ಎಂದು ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದರು.

  • ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ಪೀಕರ್​ಗೆ ಅಭಿನಂದನೆ – ಸಿದ್ದರಾಮಯ್ಯ

    ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ಪೀಕರ್​ಗೆ ಅಭಿನಂದನೆ – ಸಿದ್ದರಾಮಯ್ಯ

    ಬೆಂಗಳೂರು: 14 ತಿಂಗಳು ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ರಮೇಶ್ ಕುಮಾರ್ ಇಂದು ತನ್ನ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ವೀಕರ್ ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಸದನದಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚನೆ ಮಾಡಿದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಸಮಯದಲ್ಲಿ ಅವರು ತಮ್ಮ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನವನ್ನು ಸಿದ್ದರಾಮಯ್ಯ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದು, ಕೆ.ಆರ್ ರಮೇಶ್ ಕುಮಾರ್ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತೆಗೆದುಕೊಂಡ ಪ್ರಾಮಾಣಿಕ ನಿರ್ಧಾರಗಳು ದೇಶದಲ್ಲಿ ಓರ್ವ ಸ್ಪೀಕರ್ ಆಗಿದ್ದವರು ಹೇಗೆ ವರ್ತಿಸಬೇಕು ಎಂಬುದನ್ನು ತೋರಿಸಿದ್ದಾರೆ. ಸ್ಪೀಕರ್ ಆಗಿ ನಿಮ್ಮ ಸೇವೆಗೆ ನನ್ನ ಪ್ರಾಮಾಣಿಕ ಧನ್ಯವಾದಗಳು ಎಂದು ಹೇಳಿದ್ದಾರೆ.

    ತಮ್ಮ ಫೇಸ್ ಬುಕ್ ಖಾತೆಯಲ್ಲೂ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ರಮೇಶ್ ಕುಮಾರ್ ಅವರು ಸಭಾಧ್ಯಕ್ಷರಾಗಿ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನ ಮತ್ತು ಸಂವಿಧಾನ, ಪ್ರಜಾಪ್ರಭುತ್ವದ ಕಡೆಗೆ ಅವರು ತೋರಿದ ಬದ್ಧತೆ ಅನುಕರಣೀಯವಾದುದು. ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ಅವರು ಕರ್ತವ್ಯ ನಿರ್ವಹಿಸಿದ ರೀತಿ ಪ್ರಶಂಸನೀಯ. ಅವರಿಗೆ ನಮ್ಮ ಪಕ್ಷದ ಪರವಾದ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ಹೇಳಿದರು.

  • ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಕನ್ನಡದಲ್ಲಿ ಧನ್ಯವಾದ

    ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಕನ್ನಡದಲ್ಲಿ ಧನ್ಯವಾದ

    ಬೆಂಗಳೂರು: ಐಪಿಎಲ್ 2019ನೇ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ತಂಡ ಹೊರಬಿದ್ದಿದ್ದರೂ ಅಭಿಮಾನಿಗಳು ತಂಡಕ್ಕೆ ಬೆಂಬಲ ನೀಡಿದ್ದರು. ಈಗ ಅಭಿಮಾನಿಗಳ ಪ್ರೋತ್ಸಾಹ ನೋಡಿ ನಾಯಕ ವಿರಾಟ್ ಕೊಹ್ಲಿ ಕನ್ನಡದಲ್ಲೇ ಧನ್ಯವಾದ ತಿಳಿಸಿದ್ದಾರೆ.

    ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಫೋಟೋ, ತಮ್ಮ ತಂಡದ ಫೋಟೋ ಹಾಗೂ ಬೆಂಗಳೂರಿನ ಚಿನ್ನಾಸ್ವಾಮಿ ಕ್ರೀಡಾಂಗಣ ಸಿಬ್ಬಂದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಕನ್ನಡದಲ್ಲಿಯೇ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ನಮಗೆ ಪ್ರೀತಿ ಹಾಗೂ ಬೆಂಬಲ ನೀಡಿದ್ದ ನನ್ನ ತಂಡಕ್ಕೆ, ಅಭಿಮಾನಿಗಳಿಗೆ, ಕ್ರೀಡಾಂಗಣದ ಸಿಬ್ಬಂದಿಗೆ ಹಾಗೂ ನಮ್ಮನ್ನು ಬೆಂಬಲಿದ ಸಿಬ್ಬಂದಿಗೆ ಧನ್ಯವಾದಗಳು. ನಾವು ಮುಂದಿನ ವರ್ಷ ಮತ್ತಷ್ಟು ಶಕ್ತಿಶಾಲಿಯಾಗಿ ಬರುತ್ತೇವೆಂದು ಮಾತು ನೀಡುತ್ತೇನೆ. “ನೀವು ಇಲ್ಲಾಂದ್ರೆ ನಾವು ಏನು ಅಲ್ಲಾ” ಎಂದು ಕನ್ನಡದಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

    ವಿರಾಟ್ ಅವರ ಈ ಪೋಸ್ಟ್ ಗೆ ಹೆಚ್ಚು ಲೈಕ್ಸ್ ಹಾಗೂ ಕಮೆಂಟ್ಸ್ ಬರುತ್ತಿದೆ. ಆರ್‌ಸಿಬಿ ತಂಡ ಯಾವ ರೀತಿಯಾಗಿ ಆಡಿದರೂ ನಾವು ಯಾವಾಗಲೂ ಬೆಂಬಲ ನೀಡುತ್ತೇವೆ. ಮುಂದಿನ ವರ್ಷ ಚೆನ್ನಾಗಿ ಆಟವನ್ನು ಆಡಿ ಎಂದು ಕಮೆಂಟ್ ಮಾಡಿದ್ದಾರೆ.

    ಆರ್‌ಸಿಬಿ ಒಟ್ಟು 14 ಪಂದ್ಯದಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ, 8 ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ಆರ್‌ಸಿಬಿ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.

  • ತನ್ನ ಸಾಧನೆಗೆ ಕಾರಣಳಾದ ಪ್ರೇಯಸಿಗೆ ಧನ್ಯವಾದ ತಿಳಿಸಿದ ಯುಪಿಎಸ್‍ಸಿ ಟಾಪರ್!

    ತನ್ನ ಸಾಧನೆಗೆ ಕಾರಣಳಾದ ಪ್ರೇಯಸಿಗೆ ಧನ್ಯವಾದ ತಿಳಿಸಿದ ಯುಪಿಎಸ್‍ಸಿ ಟಾಪರ್!

    ನವದೆಹಲಿ: ಶುಕ್ರವಾರ ಯುಪಿಎಸ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಮುಂಬೈ ಐಐಟಿನ ಬಿಟೆಕ್ ವಿದ್ಯಾರ್ಥಿ ಕನಿಷ್ಕ್ ಕಟಾರಿಯಾ ಅಗ್ರಸ್ಥಾನ ಪಡೆದಿದ್ದಾರೆ. ಹೀಗಾಗಿ ಈ ಶ್ರೇಯಸ್ಸಿಗೆ ತನ್ನ ಪ್ರೇಯಸಿಯೇ ಕಾರಣ ಎಂದು ಆಕೆಗೆ ಪ್ರೀತಿಯಿಂದ ಧನ್ಯವಾದ ತಿಳಿಸಿದ್ದಾರೆ.

    ಯುಪಿಎಸ್‍ಸಿ ಟಾಪರ್ ತಮ್ಮ ಶ್ರೇಯಸ್ಸಿನಲ್ಲಿ ತಮ್ಮ ಪ್ರೇಯಸಿಯ ಪಾತ್ರ ಹೆಚ್ಚಾಗಿದೆ ಎನ್ನುವುದನ್ನು ಅವರೇ ಸ್ವತಃ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಹೌದು ಯುಪಿಎಸ್‍ಸಿ ಅಂತಹ ಉನ್ನತ ಪರೀಕ್ಷೆಯಲ್ಲಿ ತಾನು ಟಾಪರ್ ಆಗಲು ತನ್ನ ತಂದೆ, ತಾಯಿ ಹಾಗೂ ತನ್ನ ಪ್ರೇಯಸಿಯ ಪ್ರೋತ್ಸಾಹವೇ ಕಾರಣವೆಂದು ತಿಳಿಸಿದರು.

    ಯುಪಿಎಸ್‍ಸಿ ಟಾಪರ್ ಓರ್ವ ತನ್ನ ಶ್ರೇಯಸ್ಸಿಗೆ ತನ್ನ ಪ್ರೇಯಸಿಯೇ ಕಾರಣವೆಂದು ತಿಳಿಸಿದ್ದು ಇದೇ ಮೊದಲ ಬಾರಿಯಾಗಿದ್ದು, ಕನಿಷ್ಕ್ ಕಟಾರಿಯಾ ಅವರ ಈ ಮಾತನ್ನು ಕೇಳಿದ ಮಂದಿ ಅಬ್ಬ ಎಂತಾ ಆದರ್ಶ ಪ್ರೇಮಿಗಳು ಎಂದು ಒಂದು ಕ್ಷಣ ಅಚ್ಚರಿಪಟ್ಟಿದಂತೂ ಸತ್ಯ.

    ಯುಪಿಎಸ್‍ಸಿಯಲ್ಲಿ ಮೊದಲ ಸ್ಥಾನವನ್ನು ಕನಿಷ್ಕ್ ಕಟಾರಿಯಾ ಗಳಿಸಿದ್ದು, ಇನ್ನು ಎರಡು ಹಾಗೂ ಮೂರನೇ ಸ್ಥಾನವನ್ನು ಕ್ರಮವಾಗಿ ಅಕ್ಸತ್ ಜೈನ್ ಮತ್ತು ಜುನೈದ್ ಅಹ್ಮದ್ ಪಡೆದಿದ್ದಾರೆ. ಹಾಗೆಯೇ ಐದನೇ ಸ್ಥಾನವನ್ನು ಗಳಿಸಿರುವ ಸೃಷ್ಟಿ ಜಯಂತ್ ದೇಶ್ಮುಖ್ ಮಹಿಳೆಯರಲ್ಲಿಯೇ ಅಗ್ರಸ್ಥಾನ ಪಡೆದಿದ್ದಾರೆ.

    ಈ ಬಾರಿ ಒಟ್ಟು 759 ಅಭ್ಯರ್ಥಿಗಳು (577 ಪುರುಷರು ಮತ್ತು 182 ಮಹಿಳೆಯರು) ಐಎಎಸ್, ಐಪಿಎಸ್ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಕರ್ನಾಟಲ ರಾಜ್ಯದ ಒಟ್ಟು 24 ಜನರು ಐಎಎಸ್, ಐಪಿಎಸ್ ನೇಮಕಾತಿಗೆ ಆಯ್ಕೆಯಾಗಿದ್ದಾರೆ. ರಾಹುಲ್ ಶರಣಪ್ಪ ದೇಶಕ್ಕೆ 17ನೇ ರ್ಯಾಂಕ್ ಗಳಿಸಿದ್ದು, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

  • ಹೃದಯ ತುಂಬಿ ಬಂತು – ಜೈಲು ಶಿಕ್ಷೆಯಿಂದ ಪಾರು ಮಾಡಿದ ಅಣ್ಣನಿಗೆ ಅನಿಲ್ ಅಂಬಾನಿ ಧನ್ಯವಾದ

    ಹೃದಯ ತುಂಬಿ ಬಂತು – ಜೈಲು ಶಿಕ್ಷೆಯಿಂದ ಪಾರು ಮಾಡಿದ ಅಣ್ಣನಿಗೆ ಅನಿಲ್ ಅಂಬಾನಿ ಧನ್ಯವಾದ

    ನವದೆಹಲಿ: ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

    ಎರಿಕ್ಸನ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್(ಆರ್‌ಕಾಂ) ತಪ್ಪು ಎಸಗಿದ್ದು ಈ ಆದೇಶ ಪ್ರಕಟವಾದ 4 ವಾರದ ಒಳಗಡೆ ಹಣವನ್ನು ಪಾವತಿಸಬೇಕು. ಒಂದು ವೇಳೆ ಹಣವನ್ನು ಪಾವತಿ ಮಾಡದಿದ್ದಲ್ಲಿ ಅನಿಲ್ ಅಂಬಾನಿಯನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಫೆ.20 ರಂದು ಮಹತ್ವದ ಆದೇಶ ಪ್ರಕಟಿಸಿತ್ತು.

    ಈ ಅವಧಿ ಮುಗಿಯುವ ಒಂದು ದಿನದ ಮೊದಲು ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಹಣ ಪಾವತಿ ಸಂಬಂಧ ಅನಿಲ್ ಅಂಬಾನಿಗೆ ಸಹಾಯ ಮಾಡಿದ್ದರು. ಮುಕೇಶ್ ಅಂಬಾನಿ ಹಣ ನೀಡಿದ ಬಳಿಕ ಸೋಮವಾರ ಆರ್‌ಕಾಂ ಕಂಪನಿ ಎರಿಕ್ಸನ್ ಕಂಪನಿಗೆ 458.77 ಕೋಟಿ ರೂ. ಹಣವನ್ನು ಪಾವತಿಸಿದೆ.

    ಈ ಸಂಬಂಧ ಹೇಳಿಕೆ ಆರ್‌ಕಾಂ ವಕ್ತಾರರು ಅನಿಲ್ ಅಂಬಾನಿ ಅವರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. “ಕಷ್ಟದ ಸಮಯದಲ್ಲಿ ನನ್ನ ಬೆಂಬಲವಾಗಿ ನಿಂತ ಅಣ್ಣ ಮುಕೇಶ್ ಅಂಬಾನಿ ಮತ್ತು ಅತ್ತಿಗೆ ನೀತಾ ಅವರಿಗೆ ಧನ್ಯವಾದಗಳು. ನಮ್ಮ ನಡುವಿನ ಗಟ್ಟಿಯಾದ ಕುಟುಂಬದ ಬಾಂಧವ್ಯದ ಮಹತ್ವವನ್ನು ಮತ್ತೊಮ್ಮೆ ಎತ್ತಿ ಹಿಡಿದು ಸಹಾಯ ಮಾಡಿದ್ದಕ್ಕೆ ನಾನು ಚಿರಋಣಿಯಾಗಿದ್ದಾನೆ, ನನ್ನ ಹೃದಯ ತುಂಬಿ ಬಂದಿದೆ” ಎಂದು ಅನಿಲ್ ಅಂಬಾನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಏನಿದು ನ್ಯಾಯಾಂಗ ನಿಂದನೆ ಕೇಸ್?
    ಸ್ವೀಡನ್ ಮೂಲದ ದೂರ ಸಂಪರ್ಕ ಉಪಕರಣಗಳ ನಿರ್ಮಾಣ ಕಂಪನಿ ಎರಿಕ್ಸನ್‍ಗೆ ರಿಲಯನ್ಸ್ ಕಮ್ಯುನಿಕೇಷನ್ಸ್ 550 ಕೋಟಿ ರೂ. ಪಾವತಿಸಬೇಕಿತ್ತು. ಈ ಹಣವನ್ನು ಅಂಬಾನಿ ಪಾವತಿ ಮಾಡದ ಹಿನ್ನೆಲೆಯಲ್ಲಿ ಎರಿಕ್ಸನ್ ಈ ಹಿಂದೆ ಸುಪ್ರೀಂ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಬಾಕಿ ಹಣವನ್ನು 2018ರ ಸೆ.30ರ ಒಳಗಡೆ ಪಾವತಿಸುವಂತೆ ಆರ್‌ಕಾಂ ಗೆ ಸೂಚಿಸಿತ್ತು. ಈ ಗಡುವಿನ ಒಳಗಡೆ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಎರಿಕ್ಸನ್ ಕಂಪನಿ ಅಕ್ಟೋಬರ್ ನಲ್ಲಿ ಮತ್ತೆ ಕೋರ್ಟ್ ಮೊರೆ ಹೋಗಿತ್ತು. ಈ ವೇಳೆ ಕೋರ್ಟ್ ಡಿಸೆಂಬರ್ 15ರ ಒಳಗಡೆ ಹಣವನ್ನು ಪಾವತಿಸಬೇಕೆಂದು ಆದೇಶಿಸಿತ್ತು. ಈ ಆದೇಶವನ್ನೂ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಎರಿಕ್ಸನ್ ಕಂಪನಿ ರಿಲಯನ್ಸ್ ಕಮ್ಯೂನಿಕೇಶನ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿತ್ತು.

    ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಆರ್.ಎಫ್.ನಾರಿಮನ್ ಮತ್ತು ವಿನೀತ್ ಸಹರಾನ್ ಅವರು ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಜೊತೆ ರಿಲಯನ್ಸ್ ಟೆಲಿಕಾಂ ಮುಖ್ಯಸ್ಥ ಸತೀಶ್ ಸೇಠ್ ಮತ್ತು ರಿಲಯನ್ಸ್ ಇನ್ಫ್ರಾಟೆಲ್ ಮುಖ್ಯಸ್ಥೆ ಛಾಯಾ ವೈರನಿ ಸಹ ದೋಷಿಯಾಗಿದ್ದಾರೆ ಎಂದು ಹೇಳಿ ಅವರಿಗೂ ದಂಡ ವಿಧಿಸಿದ್ದರು.

    ರಿಲಯನ್ಸ್ ಕಮ್ಯುನಿಕೇಷನ್, ರಿಲಯನ್ಸ್ ಟೆಲಿಕಮ್ಯುನಿಕೇಶನ್ ಮತ್ತು ರಿಲಯನ್ಸ್ ಇನ್ಫ್ರಾಟೆಲ್‍ ನಾಲ್ಕು ವಾರದಲ್ಲಿ ಹಣವನ್ನು ಪಾವತಿಸಬೇಕು. ಇಲ್ಲವಾದಲ್ಲಿ ಈ ಕಂಪೆನಿಗಳ ಅಧ್ಯಕ್ಷರು ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೀಠ ಬಿಸಿ ಮುಟ್ಟಿಸಿತ್ತು. ಇದರ ಜೊತೆಯಲ್ಲಿ ರಿಲಯನ್ಸ್ ಕಮ್ಯೂನಿಕೇಶನ್ ಈಗಾಗಲೇ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಟ್ಟಿರುವ 118 ಕೋಟಿ ರೂ. ಹಣವನ್ನು ಎರಿಕ್ಸನ್ ಕಂಪನಿಗೆ ಒಂದು ವಾರದ ಒಳಗಡೆ ಪಾವತಿಸಬೇಕೆಂದು ಪೀಠ ಸೂಚಿಸಿತ್ತು.

    ಎರಿಕ್ಸನ್ ಕಂಪನಿಗೆ ಪಾವತಿಸಬೇಕಿದ್ದ 550 ಕೋಟಿ ರೂ. ಪಾವತಿಸಲು ಈ ಹಿಂದೆ 120 ದಿನಗಳ ಅವಕಾಶ ನೀಡಲಾಗಿತ್ತು. ಮತ್ತೆ 60 ದಿನಗಳ ಅವಕಾಶವನ್ನು ವಿಸ್ತರಿಸಿದರೂ ಹಣವನ್ನು ಪಾವತಿಸದೇ ತನ್ನ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಿಲಯನ್ಸ್ ಸಲ್ಲಿಸಿದ ಕ್ಷಮಾಯಾಚನೆಯನ್ನು ಕೋರ್ಟ್ ತಿರಸ್ಕರಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರು ಪೊಲೀಸ್ರಿಗೆ Love You ಹೇಳಿ ಧನ್ಯವಾದ ತಿಳಿಸಿದ್ರು ಹಾಟ್ ಬೆಡಗಿ

    ಬೆಂಗ್ಳೂರು ಪೊಲೀಸ್ರಿಗೆ Love You ಹೇಳಿ ಧನ್ಯವಾದ ತಿಳಿಸಿದ್ರು ಹಾಟ್ ಬೆಡಗಿ

    ಬೆಂಗಳೂರು: ಬಾಲಿವುಡ್ ನ ಮೋಹಕ ಬೆಡಗಿ ನಟಿ ಸನ್ನಿ ಲಿಯೋನ್ ಅವರು ಬೆಂಗಳೂರು ಪೊಲೀಸರಿಗೆ ವಿಡಿಯೋ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

    ನಟಿ ಸನ್ನಿ ಲಿಯೋನ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಒಂದು ವಿಡಿಯೋವನ್ನು ಅಪ್ಲೋಡ್ ಮಾಡಿ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. “ಬೆಂಗಳೂರು ನಗರ ಪೊಲೀಸರು ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಜೊತೆಗೆ ಬಾಲಿವುಡ್ ನಲ್ಲಿ ಭದ್ರತೆಯನ್ನು ನೀಡುವ ಯೂಸುಫ್ ಇಬ್ರಾಹಿಂ ಮತ್ತು ನನ್ನ ತಂಡದವರು ಕೂಡ ಹಾರ್ಡ್ ವರ್ಕ್ ಮಾಡಿದ್ದಾರೆ ಅವರಿಗೆಲ್ಲಾ ಧನ್ಯವಾದಗಳು. ಬೆಂಗಳೂರು ಜನರು ನೈಟ್ ಕಾರ್ಯಕ್ರಮದಲ್ಲಿ ಕೆಟ್ಟದಕ್ಕಿಂತ ಹೆಚ್ಚಾಗಿ ಒಳ್ಳೆಯ ರೀತಿ ನಡೆದುಕೊಂಡಿದ್ದಾರೆ, ಲವ್ ಯು” ಎಂದು ಸನ್ನಿ ಟ್ವೀಟ್ ಮಾಡಿದ್ದಾರೆ.

    ಶನಿವಾರ ರಾತ್ರಿ ಬೆಂಗಳೂರಿನ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಆದರೆ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ಮುಂಜಾಗೃತ ಕ್ರಮವಾಗಿ ಸುಮಾರು 300ಕ್ಕೂ ಅಧಿಕ ಪೊಲೀಸರ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಮಗೆ ಭದ್ರತೆ ನೀಡಿದ್ದ ಪೊಲೀಸರಿಗೆ ಸನ್ನಿ ಲಿಯೋನ್ ಧನ್ಯವಾದವನ್ನು ತಿಳಿಸಿದ್ದಾರೆ.

    ಸನ್ನಿ ಲಿಯೋನ್ ಕನ್ನಡದಲ್ಲಿ ರಾಜ್ಯೋತ್ಸವದ ಶುಭಾಶಯ ಹೇಳಿ, ಕನ್ನಡದ ಹಾಡುಗಳಿಗೂ ಸಖತ್ ಸ್ಟೆಪ್ ಹಾಕಿದ್ದರು. ಸನ್ನಿ ಸ್ಟೆಪ್‍ಗೆ ನೆರೆದಿದ್ದ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದು, ಪಡ್ಡೆ ಹೈಕ್ಳು ಫುಲ್ ಫಿದಾ ಆಗಿದ್ದರು. ಇನ್ನು ಗಾಯಕ ರಘು ದೀಕ್ಷಿತ್ ಕೂಡ ಸಾಂಗ್ ಹಾಡುವ ಮೂಲಕ ಸಖತ್ ಮನರಂಜನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv