Tag: Thawarchand Gehlot

  • 9 ವಿಶ್ವವಿದ್ಯಾಲಯಗಳ ಸ್ಥಗಿತ ವಿಚಾರ – ರಾಜ್ಯಪಾಲರ ಮಧ್ಯಪ್ರವೇಶ ಒತ್ತಾಯಿಸಿ ಬಿಜೆಪಿ ದೂರು

    9 ವಿಶ್ವವಿದ್ಯಾಲಯಗಳ ಸ್ಥಗಿತ ವಿಚಾರ – ರಾಜ್ಯಪಾಲರ ಮಧ್ಯಪ್ರವೇಶ ಒತ್ತಾಯಿಸಿ ಬಿಜೆಪಿ ದೂರು

    ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ (BJP) ನಿಯೋಗವು ಇಂದು  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ಗೆ (Thawar Chand Gehlot) ಮನವಿ ಸಲ್ಲಿಸಿದೆ.

    ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಶ್ರೀಮತಿ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಇದನ್ನೂ ಓದಿ: ಕಾಪು ಮಾರಿಗುಡಿಗೆ ಕಂಗನಾ ರಣಾವತ್ ಭೇಟಿ

    9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಗಮನಕ್ಕೆ ತರಲಾಯಿತು. ಇದನ್ನೂ ಓದಿ: ನಮ್ಮ ನಾಯಕರು ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು – ನಿನ್ನೆ ಸಮರ್ಥನೆ, ಇಂದು ರಮ್ಯಾ ಆಕ್ಷೇಪ

    ರಾಜ್ಯ ಸರ್ಕಾರದ ಈ ಕ್ರಮವನ್ನು ತಕ್ಷಣ ಹಿಂಪಡೆದುಕೊಳ್ಳುವಂತೆ ಸೂಚಿಸಿ, ಸೂಕ್ತ ನಿರ್ಧಾರ ಕೈಗೊಂಡು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್‌ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ

  • ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ವೀಕ್ಷಿಸಿದ ರಾಜ್ಯಪಾಲರು

    ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ವೀಕ್ಷಿಸಿದ ರಾಜ್ಯಪಾಲರು

    ಬೆಂಗಳೂರು: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರು ಭಾನುವಾರ ವಿಧಾನಸೌಧ (Vidhana Soudha) ಆವರಣದಲ್ಲಿ ವಿಧಾನಸಭೆ ಸಚಿವಾಲಯ ಆಯೋಜಿಸಿದ್ದ ಪುಸ್ತಕ ಮೇಳಕ್ಕೆ (Book Fair) ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ರಾಜ್ಯಪಾಲರು ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳನ್ನು ವೀಕ್ಷಿಸಿದರು ಮತ್ತು ಮೇಳದಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು.

    ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ್ ಎಸ್.ಹೊರಟ್ಟಿ ಅವರು ರಾಜ್ಯಪಾಲರೊಂದಿಗೆ ಓದು ಮತ್ತು ಜ್ಞಾನ ಪ್ರಸರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಈ ಮೇಳದ ಉದ್ದೇಶದ ಬಗ್ಗೆ ವಿವರಿಸಿದರು. ಇದನ್ನೂ ಓದಿ: ಡಿಕೆಶಿ ಪರ ಬ್ಯಾಟ್ ಬೀಸಿದ ರಮ್ಯಾ

    ಪುಸ್ತಕ ಮೇಳ ವೀಕ್ಷಣೆಗೆ ಬಂದಿದ್ದ ಕೆಲ ಮಕ್ಕಳನ್ನು ರಾಜ್ಯಪಾಲರು ಕನ್ನಡದಲ್ಲಿ ಮಾತನಾಡಿಸಿದ್ದು, ನೆರೆದಿದ್ದವರ ಗಮನ ಸೆಳೆಯಿತು. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋದು ಸೆಟಲ್ಡ್ ಮ್ಯಾಟರ್, ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೊಯ್ಲಿ

  • ಭಾರತದ ಕಡೆ ವಿಶ್ವ ತಿರುಗುತ್ತಿದೆ: ರಾಜ್ಯಪಾಲ ಗೆಹ್ಲೋಟ್

    ಭಾರತದ ಕಡೆ ವಿಶ್ವ ತಿರುಗುತ್ತಿದೆ: ರಾಜ್ಯಪಾಲ ಗೆಹ್ಲೋಟ್

    ಬೆಂಗಳೂರು/ತುಮಕೂರು: ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು.

    ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಬಿದನಗೆರೆ ಶ್ರೀಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಭಾಷಣದ ಆರಂಭದಲ್ಲಿ ಕನ್ನಡದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ರಾಜ್ಯಪಾಲರು, ಮಠದ ಸಂತರು, ಋಷಿಮುನಿಗಳು, ಆಚಾರ್ಯರು ಮತ್ತು ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಸಮಾರಂಭಕ್ಕೆ ಆಗಮಿಸುವ ಮೂಲಕ ನಿಮ್ಮೆಲ್ಲರ ಒಡನಾಟದಲ್ಲಿರುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ತುಮಕೂರು ಜಿಲ್ಲೆ, ಕಲ್ಪತರು ನಾಡಿನ ಕುಣಿಗಲ್ ತಾಲೂಕಿನಲ್ಲಿರುವ ‘ಬಿದನಗೆರೆ ಬಸವೇಶ್ವರ ಮಠ’ ಧಾರ್ಮಿಕ ಸ್ಥಳವಲ್ಲದೆ, ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಸ್ಫೂರ್ತಿಯ ಮೂಲವಾಗಿದೆ. ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.

    ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ. ಇಲ್ಲಿಗೆ ಬರುವ ಜನರು ಬಸವೇಶ್ವರರ ಬೋಧನೆಗಳನ್ನು ಆಸ್ವಾಧಿಸುವ ಜೊತೆಗೆ ಜೀವನದಲ್ಲಿ ನೈತಿಕತೆ, ಸಮಾನತೆ ಮತ್ತು ಭಕ್ತಿಯನ್ನು ಅನುಸರಿಸಲು ಸ್ಫೂರ್ತಿ ಪಡೆಯುತ್ತಾರೆ. ನಮ್ಮ ಋಷಿಮುನಿಗಳು ಮತ್ತು ಗುರುಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿರುವ ನಮ್ಮ ಸಂಸ್ಕೃತಿಯು ಶಾಶ್ವತವಾಗಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ವಿಶ್ವ ಕಲ್ಯಾಣ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆ ಎಂದು ಹೇಳಿದರು.

    ಈ ಪವಿತ್ರ ಸ್ಥಳದಲ್ಲಿ ವಿಶ್ವವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಶ್ರೀಶನೇಶ್ವರ ಸ್ವಾಮಿ ಮತ್ತು ನವಗ್ರಹಗಳ ದರ್ಶನಕ್ಕಾಗಿ ದೇಶ-ವಿದೇಶಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಪ್ರದೇಶವನ್ನು ‘ಕರ್ನಾಟಕದ ಶನಿ ಸಿಂಗನಾಪುರ’ ಎಂದೂ ಕರೆಯುತ್ತಾರೆ. ಶ್ರೀಮಠದ ಪೀಠಾಧೀಶ್ವರರಾದ ಶ್ರೀ ಧನಂಜಯ ಗುರೂಜಿ ಅವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ರಕ್ಷಕರ ಜೊತೆಗೆ ಚಿಂತನಶೀಲರು ಮತ್ತು ಸಂವೇದನಾಶೀಲರು ಎಂದು ಬಣ್ಣಿಸಿದರು.

    ಬಹು ಆಯಾಮದ ಸಂಸ್ಥೆಯಾಗಿರುವ ಈ ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ದಾಸೋಹ ಅಂದರೆ ಅನ್ನದಾನವನ್ನು ನೀಡಲಾಗುತ್ತದೆ. ಸಮಾಜದಲ್ಲಿ ಪ್ರಚಲಿತದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಿಮ್ಮಿಂದ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು.

    ಭಾಷಣದ ಕಡೆಯಲ್ಲಿ ‘ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ’ ಪ್ರಾರ್ಥನೆಯೊಂದಿಗೆ ನಾನು ಇಲ್ಲಿ ಇರುವ ಎಲ್ಲಾ ಸಂತರು ಮತ್ತು ಮಹಾಪುರುಷರಿಂದ ಆಶೀರ್ವಾದವನ್ನು ಕೋರುತ್ತೇನೆ ಎಂದು ಧನ್ಯವಾದ ತಿಳಿಸಿದರು.

  • ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ

    – ರಾಜ್ಯಪಾಲರ ಆಕ್ಷೇಪಗಳಿಗೆ ಸೂಕ್ತ ಸ್ಪಷ್ಟೀಕರಣ ಕಳಿಸಲು ಸರ್ಕಾರದ ಸಿದ್ಧತೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ವ್ಯಕ್ತಪಡಿಸಿರುವ ಎಲ್ಲ ಆಕ್ಷೇಪಣೆಗಳಿಗೂ ಕಾನೂನು ಇಲಾಖೆ ಸೂಕ್ತ ಸ್ಪಷ್ಟೀಕರಣಗಳನ್ನು ಸಿದ್ಧಪಡಿಸಿದೆ. ನಾಳೆ ಸ್ಪಷ್ಟೀಕರಣ ಸಹಿತ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಕಳಿಸಲಾಗ್ತಿದೆ. ಸದ್ಯ ಕಾನೂನು ಇಲಾಖೆ ಸಿದ್ಧಪಡಿಸಿರುವ ಸ್ಪಷ್ಟೀಕರಣಗಳನ್ನು ಸಿಎಂ ಅವಗಾಹನೆಗೆ ಕಳಿಸಲಾಗಿದೆ. ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ ರಾಜ್ಯಪಾಲರಿಗೆ ನಾಳೆ ಕಳಿಸಲಾಗುತ್ತದೆ.

    ಸರ್ಕಾರವು ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡು ಸ್ಪಷ್ಟೀಕರಣ ಕೊಡಲು ಮುಂದಾಗಿದೆ. ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ. ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ. ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ಸ್ಪಷ್ಟನೆ ಕೊಡಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಇತ್ತೀಚೆಗಷ್ಟೇ ವಾಪಸ್ ಕಳುಹಿಸಿದ್ರು. ಸುಗ್ರೀವಾಜ್ಞೆಯು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

    ಸರ್ಕಾರದ ಸ್ಪಷ್ಟೀಕರಣಗಳೇನು?
    * ಸುಗ್ರೀವಾಜ್ಞೆ ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ.
    * ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ.
    * ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ.
    * ಕಾನೂನಿನ ಪ್ರಕಾರ ವಿಧಿಸಿದ ಬಡ್ಡಿ ಮೇರೆಗೆ ನೀಡಿದ ಸಾಲ ಮಾತ್ರ ವಸೂಲಿಗೆ ಅರ್ಹ.
    * ಅಕ್ರಮ ಸಾಲ ಮತ್ತು ಬಡ್ಡಿ ವಸೂಲಾತಿ ಅರ್ಜಿಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯಗಳು ಕೂಡಾ ವಿಚಾರಣೆಗೆ ಒಳಪಡಿಸಲು ಸಾಧ್ಯವೇ ಇಲ್ಲ.
    * ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲ
    ಎಂದು ಸುಗ್ರೀವಾಜ್ಞೆಯಲ್ಲಿ ಸರ್ಕಾರ ಎಲ್ಲಿಯೂ ಹೇಳಿಲ್ಲ.
    * ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು/ನಿಷೇಧಿಸಲು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ.
    * ಸಾಲ ನೀಡಿದವರು ಅನುಸರಿಸುವ ಕಾನೂನುಬಾಹಿರ ಕ್ರಮಗಳನ್ನು, ಆ ಕ್ರಮಗಳ ಸ್ವರೂಪದ ಕಾರಣಕ್ಕೆ ಶಿಕ್ಷಿಸಲು ಕಾನೂನುಗಳಿವೆ. ಆದರೆ ಸಾಲದ ಕಾರಣಕ್ಕೆ ಇಂತಹ ಕೃತ್ಯ ಎಸಗಿದಾಗ ಶಿಕ್ಷೆಗೆ ಒಳಪಡಿಸಲು ನಿರ್ದಿಷ್ಟ ಕಾನೂನು ಇಲ್ಲ. ಸಾಲಗಾರರ ಹಿತ ಕಾಪಾಡಲು ಪ್ರತ್ಯೇಕ ಕಾನೂನಿನ ಅವಶ್ಯಕತೆ ಇದೆ.
    * ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ರಿಸರ್ವ್‌ ಬ್ಯಾಂಕ್‌ನ ಮಾರ್ಗಸೂಚಿಗಳು ನೋಂದಾಯಿತ ಮತ್ತು ಪರವಾನಗಿ ಹೊಂದಿದ ಕಂಪನಿಗಳಿಗಷ್ಟೇ ಅನ್ವಯವಾಗುತ್ತದೆ. ನೋಂದಣಿ ಮತ್ತು ಪರವಾನಗಿ ಇಲ್ಲದ ಕಂಪನಿಗಳಿಗೆ ಇದು ಅನ್ವಯವಾಗುವುದಿಲ್ಲ. ಅವುಗಳ ಕಾನೂನುಬಾಹಿರ ನಡೆಗಳಿಂದ ಜನರನ್ನು ರಕ್ಷಿಸಲು ಸುಗ್ರೀವಾಜ್ಞೆ ಅಗತ್ಯ.

  • ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ತುಮಕೂರು: ಡಾ. ಶಿವಕುಮಾರ್ ಮಹಾಶಿವಯೋಗಿಗಳ (Shivakumar Swamiji) ಜೀವನ ಪಯಣ ಸೇವೆ, ಸಮರ್ಪಣೆ ಮತ್ತು ಪರೋಪಕಾರದ ವಿಶಿಷ್ಟ ಉದಾಹರಣೆಯಾಗಿದೆ. ನಿಜವಾದ ಮಾನವೀಯತೆ ಜಾತಿ, ಧರ್ಮ ಮತ್ತು ಭೌತಿಕತೆಯನ್ನು ಮೀರಿದೆ ಎಂದು ಅವರ ಜೀವನ ನಮಗೆ ಕಲಿಸುತ್ತದೆ. ಅವರ ಕೊಡುಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದರು.

    ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ – ಮಲ್ಲಿಕಾರ್ಜುನ ಖರ್ಗೆ

    ಶಿವಕುಮಾರ ಮಹಾಸ್ವಾಮೀಜಿ ಅವರು ಸರಳ ಜೀವನ ಮತ್ತು ಉನ್ನತ ಚಿಂತನೆಯ ತತ್ವವನ್ನು ಅನುಸರಿಸಿ, ಇತರರನ್ನು ಅದೇ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸಿದರು. ಅವರು ಮಾನವೀಯತೆಯ ನಿಜವಾದ ಸಂಕೇತವಾಗಿದ್ದಾರೆ. ಅವರು ಜಾತಿ ಮತ್ತು ಧರ್ಮವನ್ನು ಮೀರಿ ಸಮಾಜಕ್ಕೆ ಸೇವೆ ಸಲ್ಲಿಸಿದ ಮಹಾನ್ ಜ್ಞಾನಿ. ಅವರಿಗೆ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಭಾರತ ಸರ್ಕಾರವು ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದರು. ಇದನ್ನೂ ಓದಿ: ಸಿ.ಟಿ ರವಿಯನ್ನ ಊರೆಲ್ಲ ತಿರುಗಿಸಿದ್ದೇ ಸಾಧನೆ ಅಲ್ಲ – ಸಾಲು ಸಾಲು ದರೋಡೆಗೆ ಕೋಟಾ ಕಿಡಿ

    ಭಾರತೀಯ ಸಂಸ್ಕೃತಿ ಅನಂತವಾದುದು. ಇದನ್ನು ನಮ್ಮ ಸಂತರು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಿದ್ದಾರೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ನಮ್ಮ ಧರ್ಮದ ಏಕತೆ ಮತ್ತು ಸಮಗ್ರತೆಗೆ ಮತ್ತು ಸನಾತನ ಧರ್ಮದ ಪರಂಪರೆಯನ್ನು ಶ್ರೀಮಂತಗೊಳಿಸಲು ಸಾಧುಗಳು ಮತ್ತು ಸಂತರು ದೊಡ್ಡ ಕೊಡುಗೆ ನೀಡಿದ್ದಾರೆ. ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆ. ಪ್ರಸ್ತುತ ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ‘ಮಹಾ ಕುಂಭ’ ಒಂದು ಉದಾಹರಣೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಟ ದರ್ಶನ್‌ ಗನ್‌ ಸೀಜ್‌ ಮಾಡಿದ ಪೊಲೀಸರು

    111 ವರ್ಷಗಳಿಂದ ಮಾನವೀಯತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಪರಮ ಪೂಜ್ಯ ಡಾ.ಶಿವಕುಮಾರ್ ಸ್ವಾಮೀಜಿಯವರ ಆರನೇ ಪುಣ್ಯತಿಥಿಗೆ ಆಗಮಿಸುವ ಮೂಲಕ ಪೂಜ್ಯರ ದರ್ಶನ ಮತ್ತು ಆಶೀರ್ವಾದ ಪಡೆಯುವ ಅವಕಾಶ ನನಗೆ ದೊರತಿರುವುದು ಸಂತಸ ತಂದಿದೆ. ಧಾರ್ಮಿಕತೆ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ನಾಡಾಗಿರುವ ಶ್ರೀ ಸಿದ್ದಗಂಗಾ ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ ಎಂದು ನುಡಿದರು. ಇದನ್ನೂ ಓದಿ: Ramanagara | ಮೈಕ್ರೋ ಫೈನಾನ್ಸ್ ಹಾವಳಿ – ಮಹಿಳೆ ಆತ್ಮಹತ್ಯೆ

    ಸಿದ್ದಗಂಗಾ ಮಠಕ್ಕೆ 600 ವರ್ಷಗಳ ಇತಿಹಾಸವಿದೆ. ಈ ಮಠವು ಧಾರ್ಮಿಕ ಸ್ಥಳವಾಗಿದೆ ಮತ್ತು ಶಿಕ್ಷಣ, ಸೇವೆ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಈ ಮಠ ಸಮಾಜವನ್ನು ಸಮರ್ಪಣೆ, ದಾನ, ಮಾನವೀಯತೆಯ ಸೇವೆ ಮತ್ತು ಜ್ಞಾನದ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸುತ್ತಿದೆ. ಅಲ್ಲದೇ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಪ್ರಚಾರ ಮತ್ತು ಸಾಮಾಜಿಕ ಪ್ರಗತಿಯಲ್ಲಿ ಪ್ರಮುಖ ಕೊಡುಗೆಯನ್ನು ನೀಡಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ – ಅಡಿಕೆ, ಕೊಬ್ಬರಿ ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಸಚಿವರ ಚರ್ಚೆ

    ಸಿದ್ಧಗಂಗಾ ಮಠವು ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ತರುವ ಮೂಲಕ ಸಮಾಜವನ್ನು ಸ್ವಾವಲಂಬಿ ಮಾಡುವ ಮಹತ್ವದ ಕೆಲಸವನ್ನು ಮಾಡುತ್ತಿದೆ ಮತ್ತು ಸಾಮಾಜಿಕ ಸಮಾನತೆ ಮತ್ತು ಸಮಾನತೆ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಮೌಲ್ಯಯುತವಾದ ಶಿಕ್ಷಣವನ್ನು ನೀಡುತ್ತಿದೆ. ‘ನಡೆದಾಡುವ ದೇವರು’ ಎಂದು ಕರೆಯಲ್ಪಡುವ ಡಾ.ಶಿವಕುಮಾರ್ ಮಹಾಶಿವಯೋಗಿ ಅವರು ತನ್ನ ಸಂಪೂರ್ಣ ಜೀವನವನ್ನು ಮಾನವ ಸೇವೆ, ಶಿಕ್ಷಣ ಮತ್ತು ಸಾಮಾಜಿಕ ಉನ್ನತಿಗೆ ಮುಡಿಪಾಗಿಟ್ಟವರು. ಕರ್ನಾಟಕ ಮತ್ತು ಭಾರತದಾದ್ಯಂತ ಅವರ ಕೊಡುಗೆ ಅನನ್ಯ ಮತ್ತು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನ ವದಂತಿ – ಕಿಲೋ ಮೀಟರ್‌ಗಟ್ಟಲೇ ಕ್ಯೂ ನಿಂತ ಜನ!

    ಡಾ.ಶಿವಕುಮಾರ ಸ್ವಾಮೀಜಿಯವರು ಶಿಕ್ಷಣವನ್ನು ಸಮಾಜದ ಬದಲಾವಣೆಯ ಪ್ರಮುಖ ಸಾಧನವೆಂದು ಪರಿಗಣಿಸಿದ್ದಾರೆ. ಅವರು ಶಾಲೆಗಳು, ಕಾಲೇಜುಗಳು ಮತ್ತು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನು ಒಳಗೊಂಡಂತೆ 125 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಮಠದ ಅಡಿಯಲ್ಲಿ ನಡೆಯುವ ಸಂಸ್ಥೆಗಳು ಜಾತಿ, ಧರ್ಮ, ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೇ ಶಿಕ್ಷಣವನ್ನು ನೀಡುತ್ತಿವೆ. ಲಕ್ಷಾಂತರ ಬಡ ಮತ್ತು ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಗದ್ಗುರು ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ತಮ್ಮ ದೂರದೃಷ್ಟಿ ಮತ್ತು ಸದ್ಭಾವನೆಯಿಂದ ಮಠದ ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳನ್ನು ಮುನ್ನಡೆಸುತ್ತಿದ್ದಾರೆ ಮತ್ತು ಮಠದ ಸೇವಾ ಮನೋಭಾವ ಮತ್ತು ಕೀರ್ತಿಯನ್ನು ಜಾಗತಿಕ ಆಯಾಮಗಳಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಪ್ರಶಂಸಿದರು. ಇದನ್ನೂ ಓದಿ: ವಕೀಲೆಗೆ ಲೈಂಗಿಕ ಕಿರುಕುಳ ಆರೋಪ – ಐಟಿ ಅಧಿಕಾರಿ ವಿರುದ್ಧ ಎಫ್‍ಐಆರ್

    ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್, ಸಿದ್ದಲಿಂಗ ಮಹಾಸ್ವಾಮಿಗಳು ಮತ್ತು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಕೇಂದ್ರ ಮಾನವಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಶಾಸಕರಾದ ಬಿ. ಸುರೇಶ್ ಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ

  • ಸರ್ಕಾರ ರಾಜಭವನದ ಮಧ್ಯೆ ‘ಪತ್ರ’ ಸಮರ – ರಾಜ್ಯಪಾಲರು ಬರೆದ 35 ಪತ್ರಗಳಿಗೆ ಬಂದಿಲ್ಲ ಉತ್ತರ

    ಸರ್ಕಾರ ರಾಜಭವನದ ಮಧ್ಯೆ ‘ಪತ್ರ’ ಸಮರ – ರಾಜ್ಯಪಾಲರು ಬರೆದ 35 ಪತ್ರಗಳಿಗೆ ಬಂದಿಲ್ಲ ಉತ್ತರ

    ಬೆಂಗಳೂರು: ಸರ್ಕಾರ ವರ್ಸಸ್ ರಾಜಭವನದ ಮಧ್ಯೆ ಪತ್ರ ಸಮರ ನಿಲ್ಲುವ ಸೂಚನೆ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ಯಪಾಲರು ಸರ್ಕಾರಕ್ಕೆ ಮಾಹಿತಿ ಕೇಳಿ ಒಟ್ಟು 35 ಪತ್ರಗಳನ್ನು ಬರೆದಿದ್ದಾರೆ.

    ಪದೇ ಪದೇ ರಾಜ್ಯಪಾಲರು ಮಾಹಿತಿ ಕೇಳುವುದು ಸರಿಯಿಲ್ಲ, ಅಧಿಕಾರಿಗಳು ನೇರವಾಗಿ ಉತ್ತರಿಸದಂತೆ ಈ ಹಿಂದೆಯೇ ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸಿದೆ. ಆದರೆ, ಇದನ್ನು ಪರಿಗಣಿಸಲು ಒಪ್ಪದ ರಾಜ್ಯಪಾಲರು ಸರ್ಕಾರಕ್ಕೆ ಮಾಹಿತಿ ಕೇಳಿ ಒಟ್ಟು 35 ಪತ್ರಗಳನ್ನು ಬರೆದಿದ್ದಾರೆ. ಆದ್ರೆ ರಾಜ್ಯಪಾಲರ ಯಾವುದೇ ಪತ್ರಗಳಿಗೂ ಸರ್ಕಾರ ತೆಲೆಕೆಡಿಸಿಕೊಂಡಿಲ್ಲ. ಇದನ್ನೂ ಓದಿ: ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿಎಂ ಅಪರಾಧಿ – ಶೋಭಾ ಕರಂದ್ಲಾಜೆ

    ಉತ್ತರ ಕೊಡುವ ಗೋಜಿಗೆ ಹೋಗಿಲ್ಲ. ಆದರೂ, ಪಟ್ಟುಬಿಡದ ರಾಜ್ಯಪಾಲರು ನೆನಪೋಲೆಗಳನ್ನು ಮೇಲಿಂದ ಮೇಲೆ ಸರ್ಕಾರಕ್ಕೆ ರವಾನೆ ಮಾಡುತ್ತಿದ್ದಾರೆ. ಇತ್ತ, ನಮ್ಮನ್ನ ಕೇಳದೆ ಮಾಹಿತಿ ಕೊಡುವ ಹಾಗಿಲ್ಲ ಎಂದು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

    ಹೀಗಾಗಿ, ರಾಜ್ಯಪಾಲರ ಪತ್ರಗಳಿಗೆ ಉತ್ತರಿಸಲಾಗದೇ, ಉನ್ನತ ಅಧಿಕಾರಿಗಳು ಪೀಕಲಾಟಕ್ಕೆ ಸಿಲುಕಿದ್ದಾರೆ. ಅಂದ ಹಾಗೇ, ಇಂದಿನ ಕ್ಯಾಬಿನೆಟ್‌ನಲ್ಲಿ ರಾಜ್ಯಪಾಲರ ಪತ್ರಕ್ಕೆ ಉತ್ತರ ಬಂದಿಲ್ಲ ಎಂಬ ರಾಜಭವನದ ರಿಮೈಂಡ್ ಕಾಪಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎನ್ನಲಾಗಿದೆ. ಇದು ಮುಂದೆ ಎಲ್ಲಿಗೆ ಮುಟ್ಟುತ್ತೋ ಎಂಬ ಆತಂಕ, ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

  • ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯಪಾಲರ (Thawarchand Gehlot) ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡೋ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕ್ಷುಲ್ಲಕ ವಿಷಯಕ್ಕೂ ರಿಪೋರ್ಟ್ ಕೇಳಿದರೆ ಹೇಗೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯಪಾಲರ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ.

    ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೂರು ಕೊಡುವ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ರಾಜ್ಯಪಾಲರು ಸಣ್ಣ ಸಣ್ಣ ವಿಚಾರಕ್ಕೆ ಹೀಗೆ ಮಾಡುತ್ತಿದ್ದಾರೆ. ಯಾರೋ ಒಬ್ಬ ಸಣ್ಣ ದೂರು ಕೊಟ್ಟಿದ್ದಾನೆ. ಮೈಸೂರಿನವನು (Mysuru) ದೂರು ಕೊಟ್ಟಿದ್ದಾನೆ. ಸಿದ್ದರಾಮಯ್ಯ ಯಾವಾಗಲೂ ಕನ್ನಡದಲ್ಲಿ ಸಹಿ ಹಾಕುತ್ತಾರೆ. ಆದರೆ ಇಂಗ್ಲಿಷ್‌ನಲ್ಲಿ ಸಹಿ ಮಾಡಿದ್ದಾರೆ. ಅದಕ್ಕೆ ತನಿಖೆ ಮಾಡಿ ಅಂತ ದೂರು ಕೊಟ್ಟಿದ್ದಾನೆ. ಇದು ವಿಷಯನಾ? ಅದು ವಿಷಯನಾ? ಎಂದು ರಾಜ್ಯಪಾಲರನ್ನು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಸಹಿ ಕನ್ನಡದಲ್ಲಿ ಆದರು ಮಾಡಬಹುದು, ಇಂಗ್ಲಿಷ್‌ನಲ್ಲಿ ಬೇಕಾದರೂ ಮಾಡಬಹುದು. ಯಾವ ಭಾಷೆ ಬರುತ್ತೋ ಆ ಭಾಷೆಯಲ್ಲಿ ಸಹಿ ಮಾಡಬಹುದು. ನಾನು ಸಾಮಾನ್ಯವಾಗಿ ಕನ್ನಡದಲ್ಲಿ ಇರೋ ಡ್ರಾಫ್ಟ್ಗಳಿಗೆ ಕನ್ನಡದಲ್ಲಿ ಸಹಿ ಮಾಡುತ್ತೇನೆ. ಇಂಗ್ಲಿಷ್‌ನಲ್ಲಿ ಡ್ರಾಫ್ಟ್ ಇದ್ದರೆ, ಬೇರೆ ರಾಜ್ಯಗಳಿಗೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ ಇಂಗ್ಲಿಷ್‌ನಲ್ಲಿ ಸಹಿ ಮಾಡುತ್ತೇನೆ. ಅದರಲ್ಲಿ ತಪ್ಪೇನು? ಇಂತಹ ಕ್ಷುಲ್ಲಕ ವಿಚಾರಕ್ಕೆ ರಿಪೋರ್ಟ್ ಕೇಳಿದರೆ ಹೇಗೆ ಎಂದರು. ಇದನ್ನೂ ಓದಿ: ಅಣ್ಣನ ಲವ್‌ಸ್ಟೋರಿಗೆ ತಮ್ಮನ ಕೊಲೆ ಪ್ರಕರಣ- 6 ಆರೋಪಿಗಳ ಬಂಧನ

  • ರಹಸ್ಯ ಮಾಹಿತಿ ಸೋರಿಕೆ ಬಗ್ಗೆ ಮಾಹಿತಿ ಕೊಡಿ: ಸರ್ಕಾರಕ್ಕೆ ರಾಜ್ಯಪಾಲರ ಪತ್ರ

    ರಹಸ್ಯ ಮಾಹಿತಿ ಸೋರಿಕೆ ಬಗ್ಗೆ ಮಾಹಿತಿ ಕೊಡಿ: ಸರ್ಕಾರಕ್ಕೆ ರಾಜ್ಯಪಾಲರ ಪತ್ರ

    ಬೆಂಗಳೂರು: ಲೋಕಾಯುಕ್ತದವರು ರಾಜ್ಯಪಾಲರಿಗೆ ಬರೆದ ರಹಸ್ಯ ಪತ್ರ ಸೋರಿಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಪತ್ರ ಬರೆದಿದ್ದಾರೆ.

    ರಾಜ್ಯ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗಿದ್ದು, ಆ.28 ರಂದು ಸರ್ಕಾರದಿಂದ ಸ್ಪಷ್ಟನೆ ಕೇಳಿ ರಾಜ್ಯಪಾಲರು ಪತ್ರ ಬರೆದಿದ್ದಾರೆ. ವಿಪಕ್ಷ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೇಳಿ ಲೋಕಾಯುಕ್ತದಿಂದ (Lokayukta) ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಈ ಪತ್ರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕ್ಯಾಬಿನೆಟ್ ನಿರ್ಣಯ ಕಳುಹಿಸಿಕೊಡಲಾಗಿದೆ. ಆದರೆ ಲೋಕಾಯಕ್ತದವರು ರಾಜ್ಯಪಾಲರಿಗೆ ಬರೆದ ರಹಸ್ಯ ಪತ್ರದ ಬಗ್ಗೆ ಸರ್ಕಾರಕ್ಕೆ ಹೇಗೆ ಮಾಹಿತಿ ಬಂತು? ಅದರ ಬಗ್ಗೆ ಸ್ಪಷ್ಟನೆ ನೀಡಿ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ವಿಪಕ್ಷ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಕ್ಯಾಬಿನೆಟ್ ನಿರ್ಣಯ ಹಾಗೂ ಪ್ರಾಸಿಕ್ಯೂಷನ್ ಕೇಳಿ ಲೋಕಾಯುಕ್ತ ಬರೆದ ಪತ್ರದ ಬಗೆಗಿನ ನಿರ್ಣಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಲೋಕಾಯುಕ್ತ, ಎಸ್‌ಐಟಿಗೂ ಪತ್ರ ಬರೆದಿರುವ ಗವರ್ನರ್ ರಹಸ್ಯ ಮಾಹಿತಿ ಸೋರಿಕೆ ಬಗ್ಗೆ ಮಾಹಿತಿ ಕೇಳಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

    ರಾಜ್ಯಪಾಲರ ಪತ್ರದಲ್ಲಿ ಏನಿದೆ?
    ಆ.26ನೇ ತಾರೀಕು ಸಂಜೆ 5 ಕ್ಕೆ ರಾಜಭವನಕ್ಕೆ ಸರ್ಕಾರದಿಂದ ಪತ್ರ ಬಂದಿದೆ. ಕ್ಯಾಬಿನೆಟ್ ನಿರ್ಣಯದ ದಾಖಲೆಗಳ ಕುರಿತು ಮುಚ್ಚಿದ ಲಕೋಟೆ ಬಂದಿದೆ. ಆದರೆ ಆ ಲಕೋಟೆಯೊಳಗೆ 16ನೇ ಸಚಿವ ಸಂಪುಟ ಸಭೆಯ ಅಜೆಂಡಾ ಹಾಗೂ 17ನೇ ಸಚಿವ ಸಂಪುಟದ ಹೆಚ್ಚುವರಿ ಅಜೆಂಡಾ ಕಾಪಿ ಮಾತ್ರ ಇತ್ತು. ಸಭೆಯಲ್ಲಿ ಕೈಗೊಂಡಿರುವ ನಿರ್ಣಯದ ಬಗ್ಗೆ ದಾಖಲೆಗಳು ಇರಲಿಲ್ಲ. ಕ್ಯಾಬಿನೆಟ್ ವಿಭಾಗಕ್ಕೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ. ಮಾಹಿತಿ ನೀಡಿದ ಬಳಿಕ 27 ರಂದು ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಕೈಗೊಂಡ ನಿರ್ಣಯಗಳ ದಾಖಲೆ ರಾಜಭವನಕ್ಕೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಮುನಿರತ್ನ, ಹೆಚ್‌ಡಿಕೆ ವಿರುದ್ಧದ ಪ್ರಕರಣಗಳ ತನಿಖೆಗೆ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಸಿಎಂಗೆ ಮನವಿ

    ಆ ಮಾಹಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ಹೆಚ್ಚುವರಿ ಅಜೆಂಡಾದ ನಿರ್ಣಯಗಳು ನಮಗೆ ಲಭ್ಯವಾಗಿಲ್ಲ. ಆದರೆ 23 ರಂದು ಮಾಧ್ಯಮಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಲು ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡಿದೆ ಎಂದು ವರದಿ ಆಗಿದೆ. ಗೌಪ್ಯವಾದ ಮಾಹಿತಿ ಸಚಿವ ಸಂಪುಟ ಸಭೆಯಲ್ಲಿ ಹೇಗೆ ಚರ್ಚಿಸಲಾಯಿತು?

    ಕ್ಯಾಬಿನೆಟ್ ನೋಟ್‌ನಲ್ಲಿ ಯಾವ ದಿನಾಂಕದಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೇಳಿದೆ ಎಂಬುದನ್ನ ಉಲ್ಲೇಖಿಸಲಾಗಿದೆ. ನನಗೆ ಈಗ ಕುತೂಹಲ ಹೆಚ್ಚಾಗಿದೆ. ಹೇಗೆ ಲೋಕಾಯುಕ್ತ ವಿಶೇಷ ತನಿಖಾ ತಂಡ ರಾಜ್ಯಪಾಲರಿಗೆ ಬರೆದ ಪತ್ರ ಬಹಿರಂಗವಾಯಿತು? ಲೋಕಾಯುಕ್ತ ಎಂಬುದು ಸ್ವಾಯತ್ತ ತನಿಖಾ ಸಂಸ್ಥೆ, ಲೋಕಾಯುಕ್ತ ಎಸ್‌ಐಟಿ ಗೌಪ್ಯವಾಗಿ ಅಭಿಯೋಜನಾ ಮಂಜೂರಾತಿಯನ್ನ ಕೇಳಿದ ಪತ್ರ ಸರ್ಕಾರ ಹಾಗೂ ಕ್ಯಾಬಿನೆಟ್‌ಗೆ ತಲುಪಿದ್ದು ಹೇಗೆ? ಹೀಗಾಗಿ ಈ ಪತ್ರ ತಲುಪಿದ ಕೂಡಲೇ ಪ್ರಾಮಾಣಿಕವಾಗಿ ರಾಜಭವನಕ್ಕೆ ವರದಿ ನೀಡಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ಅಮರಾವತಿ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ (Thawarchand Gehlot) ಅವರು ತಿರುಪತಿಗೆ (Tirupati) ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.

    ಬುಧವಾರ ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಕರ್ನಾಟಕದ ರಾಜ್ಯಪಾಲ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಪ್ರಸಂಗ ಬಂದ್ರೆ ನಾನೇ ಸ್ಪರ್ಧೆ ಮಾಡ್ತೀನಿ: ಶಾಮನೂರು ಶಿವಶಂಕರಪ್ಪ

    ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.

  • 3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

    3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

    ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅಂಕಿತ ಹಾಕಿದ್ದಾರೆ.

    ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್

    ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು