Tag: The Elephant Whisperers

  • ನಿರ್ಮಾಪಕಿಗೆ 2 ಕೋಟಿ ರೂ. ಮೊತ್ತದ ನೋಟಿಸ್ ಕಳುಹಿಸಿದ ಬೆಳ್ಳಿ-ಬೊಮ್ಮನ್

    ನಿರ್ಮಾಪಕಿಗೆ 2 ಕೋಟಿ ರೂ. ಮೊತ್ತದ ನೋಟಿಸ್ ಕಳುಹಿಸಿದ ಬೆಳ್ಳಿ-ಬೊಮ್ಮನ್

    ಸ್ಕರ್ (Oscar) ಪ್ರಶಸ್ತಿ ವಿಜೇತ ನಿರ್ಮಾಪಕಿ, ದಿ ಎಲಿಫೆಂಟ್ ವಿಸ್ಪರರ್ಸ್ (The Elephant Whisperers) ಡಾಕ್ಯುಮೆಂಟರಿ ನಿರ್ಮಾಣ ಮಾಡಿರುವ ಕಾರ್ತಿಕಿ ಗೊನ್ಸಾಲ್ವೆನ್ಸ್ (Karthiki Gonsalves) ಅವರಿಗೆ ಈ ಸಾಕ್ಷ್ಯ ಚಿತ್ರದ ನಿಜವಾದ ಹೀರೋಗಳಾದ ಬೆಳ್ಳಿ (Belli) ಮತ್ತು ಬೊಮ್ಮನ್ (Bomman) ಎರಡು ಕೋಟಿ ರೂಪಾಯಿಯ ನೆರವು ಕೋರಿ ನೋಟಿಸ್ ಕಳುಹಿಸಿದ್ದಾರೆ. ಜೊತೆಗೆ ಕೆಲವು ಆರೋಪಗಳನ್ನೂ ಅವರು ಮಾಡಿದ್ದಾರೆ.

    ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರವು ಕಾವಾಡಿಗಳಾದ ಬೊಮ್ಮನ್ ಮತ್ತು ಬೆಳ್ಳಿ ಕುರಿತಾದದ್ದು. ಆನೆಯೊಂದನ್ನು ಸಾಕಿದ ಈ ಜೋಡಿಯ ಕಥನವನ್ನೇ ಇಟ್ಟುಕೊಂಡು ಈ ಸಾಕ್ಷ್ಯ ಚಿತ್ರವನ್ನು ತಯಾರು ಮಾಡಲಾಗಿತ್ತು. ಈ ಸಮಯದಲ್ಲಿ ಬೊಮ್ಮನ್ ಮತ್ತು ಬೆಳ್ಳಿ ದಂಪತಿಗೆ ನಿರ್ಮಾಪಕಿ ಕಾರ್ತಿಕಿ ಹಲವು ಆಮಿಷಗಳನ್ನು ಒಡ್ಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಇದುವರೆಗೂ ಅವುಗಳನ್ನು ಈಡೇರಿಸಿಲ್ಲ ಎನ್ನುವುದು ಬೆಳ್ಳಿ ಆರೋಪ.

    ಸಾಕ್ಷ್ಯ ಚಿತ್ರ ತಯಾರಿಸುವಾಗ ಬೆಳ್ಳಿಗೆ ಮನೆ ಕಟ್ಟಿಕೊಡುವುದಾಗಿ ಭರವಸೆ ಕೊಟ್ಟಿದ್ದರಂತೆ ನಿರ್ಮಾಪಕಿ. ಅಲ್ಲದೇ ಒಂದು ವಾಹನದ ವ್ಯವಸ್ಥೆ ಮತ್ತು ಹಣವನ್ನೂ ನೀಡುವುದಾಗಿ ಹೇಳಿದ್ದರಂತೆ. ತಮ್ಮ ಹೆಸರು ಹೇಳಿಕೊಂಡು ಸಾಕಷ್ಟು ಸವಲತ್ತುಗಳನ್ನು ಪಡೆದಿರುವ ನಿರ್ಮಾಪಕಿ ಇದೀಗ ತಮ್ಮ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಬೆಳ್ಳಿ ಹೇಳಿಕೊಂಡಿದ್ದಾರೆ.

     

    ಆಸ್ಕರ್ ಪ್ರಶಸ್ತಿ ಪಡೆದದ್ದಷ್ಟೇ ಅಲ್ಲದೇ, ಸರಕಾರಗಳಿಂದಲೂ ನಿರ್ಮಾಪಕಿ ಆರ್ಥಿಕ ನೆರವು ಪಡೆದಿದ್ದಾರಂತೆ. ಆದರೆ, ಬೆಳ್ಳಿ ಮತ್ತು ಬೊಮ್ಮನ್ ಗೆ ನಯಾಪೈಸೆಯನ್ನೂ ನೀಡಿಲ್ಲ ಎನ್ನುವುದು ಬೆಳ್ಳಿ ದಂಪತಿಯ ಆರೋಪ. ಈ ಕಾರಣದಿಂದಾಗಿ 2 ಕೋಟಿ ರೂಪಾಯಿ ನೆರವಿನ ನೋಟಿಸ್ ಕಳುಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ ನೀಡಿದ ತಮಿಳುನಾಡು ಸರಕಾರ

    ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ ನೀಡಿದ ತಮಿಳುನಾಡು ಸರಕಾರ

    ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಿನಿಮಾದ ಮೂಲಕ ಜಗತ್ತಿಗೆ ಪರಿಚಯವಾಗಿದ್ದ ಬೊಮ್ಮನ್ (Bomman) ಮತ್ತು ಬೆಳ್ಳಿಯ (Belli) ಮುಖದಲ್ಲಿ ಮಂದಹಾಸ ಮೂಡಿಸಿದೆ ತಮಿಳುನಾಡು  (Tamil Nadu) ಸರಕಾರ. ಆರ್ಥಿಕ ಸಂಕಷ್ಟದಿಂದ  ಈ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

    ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆಪಡುವಂತೆ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ನಟಿಸಿದ್ದ ಬೊಮ್ಮನ್- ಬೆಳ್ಳಿ ಅವರಿಗೆ ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ಮಾಡಿ ಅಭಿನಂದಿಸಿದ್ದರು. ಇದನ್ನೂ ಓದಿ:ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

    ಬೊಮ್ಮನ್-ಬೆಳ್ಳಿ ಅವರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸವಾಗಿದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಭೇಟಿ ನೀಡಿದ್ದರು. ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಭೇಟಿಯಾದ ಮೋದಿ ಅವರ ಫೋಟೋ ಸಖತ್ ವೈರಲ್ ಆಗಿತ್ತು.

    ಈ ವರ್ಷದ 95ನೇ ಸಾಲಿನ ಅಕಾಡೆಮಿ ಅವಾರ್ಡ್‌ನಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ದೀಪಿಕಾ ಪಡುಕೋಣೆ ಅವರು ಭಾರತವನ್ನು ಪ್ರತಿನಿಧಿಸಿದ ಆಸ್ಕರ್ ಅಂಗಳದಲ್ಲಿ ನಿರೂಪಣೆ ಮಾಡಿದ್ದರು. ಆಸ್ಕತ್ ಪ್ರಶಸ್ತಿಯ ಬಳಿಕ ಬೊಮ್ಮನ್- ಬೆಳ್ಳಿ ಜನಪ್ರಿಯತೆ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮನ್-ಬೆಳ್ಳಿ ಜೋಡಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಬೊಮ್ಮನ್-ಬೆಳ್ಳಿ ಜೋಡಿಯನ್ನು ಸನ್ಮಾನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಟಿಟಿ ಮೂಲಕ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಿನಿಮಾ ಸಿನಿ ಪ್ರೇಕ್ಷಕರ ಮನಗೆದ್ದಿದೆ. ಈ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆಪಡುವಂತೆ ಮಾಡಿದ್ದರು. ಇದರಲ್ಲಿ ಪ್ರಮುಖವಾಗಿ ನಟಿಸಿದ್ದ ಬೊಮ್ಮನ್- ಬೆಳ್ಳಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನ ಮಾಡಿದ್ದಾರೆ. ಈ ಕುರಿತ ಫೋಟೋವನ್ನ ರಾಷ್ಟ್ರಪತಿ ದ್ರೌಪದಿ ಅವರು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಭಾವಿ ಪತ್ನಿ ಲಾವಣ್ಯ ಜೊತೆ ವರುಣ್ ತೇಜ್ ಕಾಫಿ ಡೇಟ್

    ಈ ವರ್ಷದ 95ನೇ ಸಾಲಿನ ಅಕಾಡೆಮಿ ಅವಾರ್ಡ್‌ನಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ದೀಪಿಕಾ ಪಡುಕೋಣೆ ಅವರು ಭಾರತವನ್ನು ಪ್ರತಿನಿಧಿಸಿದ ಆಸ್ಕರ್ ಅಂಗಳದಲ್ಲಿ ನಿರೂಪಣೆ ಮಾಡಿದ್ದರು. ಆಸ್ಕತ್ ಪ್ರಶಸ್ತಿಯ ಬಳಿಕ ಬೊಮ್ಮನ್- ಬೆಳ್ಳಿ ಜನಪ್ರಿಯತೆ ಪಡೆದರು.

    ಆಸ್ಕರ್ ಪ್ರಶಸ್ತಿ ಪಡೆದ ‘ದಿ ಎಲಿಫೆಮಂಟ್ ವಿಸ್ಪರರ್ಸ್’ನಲ್ಲಿ ಮುಖ್ಯವಾಗಿ ಕಾಣಿಸಿಕೊಂಡ ಬೊಮ್ಮನ್- ಬೆಳ್ಳಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸನ್ಮಾನಿಸಿದರು. ಆನೆ ಮರಿಗಳನ್ನು ನೋಡಿಕೊಳ್ಳಲು ಜೀವನ ಮುಡಿಪಿಟ್ಟ ಅವರನ್ನು ಶ್ಲಾಘಿಸಲಾಯಿತು ಎಂದು ರಾಷ್ಟ್ರಪತಿ ಟ್ವಿಟ್ಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ.

    ಬೊಮ್ಮನ್-ಬೆಳ್ಳಿ ಅವರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸವಾಗಿದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಭೇಟಿ ನೀಡಿದ್ದರು. ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಭೇಟಿಯಾದ ಮೋದಿ ಅವರ ಫೋಟೋ ಸಖತ್ ವೈರಲ್ ಆಗಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿ ನಮಗೆ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ: ಬೊಮ್ಮನ್

    ಮೋದಿ ನಮಗೆ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ: ಬೊಮ್ಮನ್

    ಚಾಮರಾಜನಗರ: ಬಂಡೀಪುರ ಸಫಾರಿ ಬಳಿಕ ಪ್ರಧಾನಿ ಮೋದಿ ಎಲಿಫೆಂಟ್ ವಿಸ್ಪರರ್ಸ್ (The Elephant Whisperers) ಖ್ಯಾತಿಯ ಬೊಮ್ಮನ್- ಬೆಳ್ಳಿ (Bomman- Belly) ದಂಪತಿ ಹಾಗೂ ಕೆಲ ಮಾವುತರ ಕಷ್ಟ ಸುಖ ಆಲಿಸಿದ್ದರು. ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ (Congress), ಮೋದಿ (Narendra Modi) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಾಡಿದೆ. ಮಾವುತರಿಗೆ ಮೋದಿ ಒಂದು ಲಕ್ಷ ರೂ ಹಣ ಕೊಟ್ಟಿದ್ದಾರೆಂದು ದೂರಿದೆ. ಆದರೆ ಈ ಆರೋಪವನ್ನು ಅಲ್ಲಗಳೆಯುವ ಮೂಲಕ ಬೊಮ್ಮನ್ ವಿವಾದಕ್ಕೆ ತೆರೆ ಎಳೆದಿದ್ದಾರೆ.

    MK Stalin (1)

    ಬೊಮ್ಮನ್ ಹೇಳಿದ್ದೇನು..?: ಕಾಂಗ್ರೆಸ್ ಆರೋಪದ ಕುರಿತು ತಮಿಳುನಾಡಿನ ಮುದುಮಲೈನ ತೆಪ್ಪಕಾಡು ಆನೆ ಶಿಬಿರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬೊಮ್ಮನ್, ಪ್ರಧಾನಿ ಮೋದಿ ನಮಗೆ ಭರವಸೆ ಕೊಟ್ಟಿಲ್ಲ, ಪ್ರೀತಿ ಕೊಟ್ಟಿದ್ದಾರೆ. ದೆಹಲಿಗೆ ಬರಲೂ ಹೇಳಿದ್ದಾರೆ. ನಮಗೆ ಹಣ ಕೊಟ್ಟಿದ್ದು ಮೋದಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್. ಮೋದಿ ಬಂದಿದ್ದು ತುಂಬಾ ಖುಷಿಯಿದೆ. ಡಾಕ್ಯುಮೆಂಟರಿಯಲ್ಲಿರುವ ರೋ ಆನೆಗೆ ಕಬ್ಬು ಕೊಟ್ಟರು. ಬೇರೆ ಆನೆಗಳಿಗೂ ಕಬ್ಬು ಕೊಟ್ಟಿದ್ದಾರೆ. ಅವರು ಭೇಟಿ ಕೊಟ್ಟಿದ್ದು ಮುದುಮಲೈ ಅರಣ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಮೋದಿ ಬಂಡೀಪುರ ವೀಕೆಂಡ್‌ ಸಫಾರಿ – ಇಲ್ಲಿವೆ ನೋಡಿ Photos

    ಸ್ಟಾಲಿನ್ (Stalin) ಚೆನ್ನೈನಲ್ಲಿ ಕಾರ್ಯಕ್ರಮ ಮಾಡಿ ಆಸ್ಕರ್ ಅವಾರ್ಡ್ ಬಂದಿದ್ದಕ್ಕೆ ಒಂದು ಲಕ್ಷ ಹಣ ಕೊಟ್ಟಿದ್ದಾರೆ. ಕ್ಯಾಂಪ್‍ನಲ್ಲಿರುವ ಮಾವುತ, ಕಾವಾಡಿಗಳಿಗೂ ಹಣ ಕೊಟ್ಟಿದ್ದಾರೆ. ಮೋದಿ ಬಂದ ವೇಳೆ ಯಾವುದೇ ಗಿಫ್ಟ್, ಹಣ ಕೊಟ್ಟಿಲ್ಲ. ಇದನ್ನೂ ಓದಿ: ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯ ಚಿತ್ರಕ್ಕೆ ಆಸ್ಕರ್ ಬಂದಾಗ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ತಮ್ಮನ್ನು ಸನ್ಮಾನಿಸಿದ್ದರು. ಈ ಸಂದರ್ಭದಲ್ಲಿ ಒಂದು ಲಕ್ಷ ರೂ. ಹಣವನ್ನೂ ಕೊಟ್ಟಿದ್ದರು. ಈ ವಿಚಾರವನ್ನು ನಾನು ಎಲ್ಲರೊಂದಿಗೂ ಹಂಚಿಕೊಂಡಿದ್ದೆ. ಆದರೆ ಅದನ್ನೇ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ಮೋದಿ ಅವರು ಹಣ ಕೊಟ್ಟಿಲ್ಲ. ಪ್ರೀತಿ ಕೊಟ್ಟು, ಹತ್ತಿರದಲ್ಲಿ ಕೂರಿಸಿಕೊಂಡು ಮಾತಾಡಿದ್ದಾರೆ. ಮೋದಿ ಬಳಿ ನಮ್ಮ ಸಮಸ್ಯೆ ಹೇಳಿಕೊಂಡಿದ್ವಿ. ಅದನ್ನು ಇಲ್ಲಿನ ಅಧಿಕಾರಿಗಳು ಕೂಡ ಜೊತೆಗೂಡಿ ಬಗೆಹರಿಸ್ತೇವೆ ಅಂದಿದ್ದಾರೆಂದು ಬೊಮ್ಮನ್ ಸ್ಪಷ್ಟಪಡಿಸಿದ್ದಾರೆ.

  • ಆಸ್ಕರ್ ಪಡೆದ ಡಾಕ್ಯುಮೆಂಟರಿಯ ಬೆಳ್ಳಿ-ಬೊಮ್ಮನ್ ದಂಪತಿಗೆ ನಾಳೆ ಪ್ರಧಾನಿ ಸನ್ಮಾನ

    ಆಸ್ಕರ್ ಪಡೆದ ಡಾಕ್ಯುಮೆಂಟರಿಯ ಬೆಳ್ಳಿ-ಬೊಮ್ಮನ್ ದಂಪತಿಗೆ ನಾಳೆ ಪ್ರಧಾನಿ ಸನ್ಮಾನ

    ದಿ ಎಲಿಫೆಂಟ್ ವಿಸ್ಪರರ್ಸ್ (The Elephant Whisperers)  ಡಾಕ್ಯುಮೆಂಟರಿಯ ಹೀರೋ ಬೊಮ್ಮನ್ ಹಾಗೂ ನಾಯಕಿ ಬೆಳ್ಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗೌರವಿಸಲಿದ್ದಾರೆ. ಆಸ್ಕರ್ ಪ್ರಶಸ್ತಿ ಬಂದ ಬೆನ್ನಲ್ಲೇ ದಂಪತಿ ಇರುವ ಸ್ಥಳಕ್ಕೆ ಪ್ರಧಾನಿ ಭೇಟಿಯಾಗಲಿದ್ದು, ಅಲ್ಲಿ ಅವರಿಗೆ ಸನ್ಮಾನ ಮಾಡಲಿದ್ದಾರೆ. ಈ ಹಿಂದೆ ಸೋಷಿಯಲ್ ಮೀಡಿಯಾ ಮೂಲಕ ಈ ದಂಪತಿಗೆ ಮೋದಿ ಶುಭಾಶಯ ಕೋರಿದ್ದರು.

    ಈ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದ ಬೆನ್ನಲ್ಲೇ ಅಭಿಮಾನದ ಮಹಾಪೂರವೇ ಹರಿದು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಬಹುತೇಕ ಗಣ್ಯರು ಎರಡೂ ಚಿತ್ರತಂಡಕ್ಕೆ ಮನಸಾರೆ ಪ್ರಶಂಸಿಸಿದ್ದರು. ಶುಭಾಶಯ ತಿಳಿಸಿದ್ದರು.  ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ (MK Stalin) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯ ಕಥಾ ನಾಯಕ ಮತ್ತು ನಾಯಕಿಗೆ ಭರ್ಜರಿ ಬಹುಮಾನ ಘೋಷಿಸಿದ್ದರು.

    ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ (Bomman) ಮತ್ತು ಹೀರೋಯಿನ್ ಬೆಳ್ಳಿ (Belli) ಎಂಬ ಮಾವುತ ದಂಪತಿಗಳು. ಈ ಡಾಕ್ಯುಮೆಂಟರಿ ಇವರ ಬದುಕನ್ನೇ ಕೇಂದ್ರೀಕರಿಸಿ ಮಾಡಿದ್ದು. ಹಾಗಾಗಿ ಸ್ಟಾಲಿನ್ ಇವರಿಬ್ಬರನ್ನೂ ಸಿಎಂ ಕಚೇರಿಗೆ ಕರೆಯಿಸಿಕೊಂಡು ನೆನಪಿನ ಫಲಕ ಮತ್ತು ಎರಡು ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ.

    ಕೇವಲ ಈ ಇಬ್ಬರಿಗೆ ಮಾತ್ರ ಬಹುಮಾನ ನೀಡಿಲ್ಲ. ಆನೆ ಶಿಬಿರದಲ್ಲಿ ಕೆಲಸ ಮಾಡುತ್ತಿರುವ 91 ಮಾವುತರಿಗೂ ತಲಾ ಒಂದೊಂದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಸನ್ಮಾನಿಸಿ ಚೆಕ್ ನೀಡಿರುವ ಫೋಟೋವನ್ನು ಸ್ಟಾಲಿನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು ಆ ರಾಜ್ಯದ ಅಧಿಕಾರಿಗಳು. ಸ್ಟಾಲಿನ್ ನಡೆಗೆ ಶ್ಲ್ಯಾಘನೆ ವ್ಯಕ್ತವಾಗಿತ್ತು. ಇದೀಗ ಮೋದಿ ಕೂಡ ಸನ್ಮಾನ ಮಾಡುವ ಮೂಲಕ ಗೌರವಿಸುತ್ತಿದ್ದಾರೆ.

  • ಆಸ್ಕರ್ ಪ್ರಶಸ್ತಿ : ಮಾವುತರಿಗೆ ಬಂಪರ್ ಬಹುಮಾನ ಘೋಷಿಸಿದ ಸಿಎಂ ಸ್ಟಾಲಿನ್

    ಆಸ್ಕರ್ ಪ್ರಶಸ್ತಿ : ಮಾವುತರಿಗೆ ಬಂಪರ್ ಬಹುಮಾನ ಘೋಷಿಸಿದ ಸಿಎಂ ಸ್ಟಾಲಿನ್

    ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದ ಬೆನ್ನಲ್ಲೇ ಅಭಿಮಾನದ ಮಹಾಪುರವೇ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಬಹುತೇಕ ಗಣ್ಯರು ಎರಡೂ ಚಿತ್ರತಂಡಕ್ಕೆ ಮನಸಾರೆ ಪ್ರಂಶಸಿಸಿದ್ದಾರೆ. ಶುಭಾಶಯ ತಿಳಿಸಿದ್ದಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ (MK Stalin) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯ ಕಥಾ ನಾಯಕ ಮತ್ತು ನಾಯಕಿಗೆ ಭರ್ಜರಿ ಬಹುಮಾನ ಘೋಷಿಸಿದ್ದಾರೆ.

    ಈ ಬಾರಿ ತೆಲುಗಿನ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಮತ್ತು ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಬಂದಿರುವ ವಿಚಾರ ಗೊತ್ತೇ ಇದೆ. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ (Bomman) ಮತ್ತು ಹಿರೋಯಿನ್ ಬೆಳ್ಳಿ (Belli) ಎಂಬ ಮಾವುತ ದಂಪತಿಗಳು. ಈ ಡಾಕ್ಯುಮೆಂಟರಿ ಇವರ ಬದುಕನ್ನೇ ಕೇಂದ್ರಿಕರಿಸಿದ್ದು ಮಾಡಿದ್ದು. ಹಾಗಾಗಿ ಸ್ಟಾಲಿನ್ ಇವರಿಬ್ಬರನ್ನೂ ಸಿಎಂ ಕಚೇರಿಗೆ ಕರೆಯಿಸಿಕೊಂಡು ನೆನಪಿನ ಫಲಕ ಮತ್ತು ಎರಡು ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ. ಇದನ್ನೂ ಓದಿ:  ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ಕೇವಲ ಈ ಇಬ್ಬರಿಗೆ ಮಾತ್ರ ಬಹುಮಾನ ನೀಡಿಲ್ಲ. ಆನೆ ಶಿಬಿರದಲ್ಲಿ ಕೆಲಸ ಮಾಡುತ್ತಿರುವ 91 ಮಾವುತರಿಗೂ ತಲಾ ಒಂದೊಂದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ದಂಪತಿಗೆ ಸನ್ಮಾನಿಸಿ ಚೆಕ್ ನೀಡಿರುವ ಫೋಟೋವನ್ನು ಸ್ಟಾಲಿನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಆ ರಾಜ್ಯದ ಅಧಿಕಾರಿಗಳು. ಸ್ಟಾಲಿನ್ ನಡೆಗೆ ಶ್ಲ್ಯಾಘಿಸಿದ್ದಾರೆ.

  • Oscars- ‘ಆಸ್ಕರ್’ ವಿಜೇತರಿಗೆ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

    Oscars- ‘ಆಸ್ಕರ್’ ವಿಜೇತರಿಗೆ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

    ಬಾರಿ ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು (Natu Natu) ಹಾಡು ಅತ್ಯುತ್ತಮ ಓರಿಜನ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ, ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭಾಶಯಗಳನ್ನು ಕೋರಿದ್ದಾರೆ. ಇದೊಂದು ಐತಿಹಾಸಿ ಕ್ಷಣ ಎಂದು ಬಣ್ಣಿಸಿದ್ದಾರೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ (All That Breaths) ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಇತ್ತು. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

    ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5.30 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಯಿತು. ಭಾರತಕ್ಕೆ ಮೊದಲ ಪ್ರಶಸ್ತಿಯು ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಡೆದುಕೊಳ್ಳುವ ಮೂಲಕ ಶುಭಾರಂಭ ಮಾಡಿತು. ಈ ಪ್ರಶಸ್ತಿ ಪ್ರಕಟವಾದ ಕೆಲವೇ ಹೊತ್ತಿಗೆ ನಾಟು ನಾಟು ಹಾಡಿಗೂ ಆಸ್ಕರ್ ಪ್ರಶಸ್ತಿ ಘೋಷಣೆ ಆಯಿತು. ಆಲ್ ದೆಟ್ ಬ್ರೆತ್ಸ್ ಡಾಕ್ಯುಮೆಂಟರಿಗೂ ಪ್ರಶಸ್ತಿ ಬಂದರೆ, ಭಾರತ ಹ್ಯಾಟ್ರಿಕ್ ಸಾಧಿಸಲಿದೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಈ ಡಾಕ್ಯುಮೆಂಟರಿಗೆ ಪ್ರಶಸ್ತಿ ಬರಲಿಲ್ಲ. ‘ರಷ್ಯನ್ ನಾವಲ್ನಿ’ ಡಾಕ್ಯುಮೆಂಟರಿ ಪ್ರಶಸ್ತಿ ಪಡೆಯುವ ಮೂಲಕ ಆಲ್ ದೆಟ್ ಬ್ರೆತ್ಸ್ ಅನ್ನು ಹಿಂದಿಕ್ಕಿತು.

    ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • Oscars- ಭಾರತಕ್ಕೆ ಹ್ಯಾಟ್ರಿಕ್ ಆಸ್ಕರ್ ತಪ್ಪಿಸಿದ ‘ಆಲ್ ದೆಟ್ ಬ್ರೆತ್ಸ್’ ಡಾಕ್ಯುಮೆಂಟರಿ

    Oscars- ಭಾರತಕ್ಕೆ ಹ್ಯಾಟ್ರಿಕ್ ಆಸ್ಕರ್ ತಪ್ಪಿಸಿದ ‘ಆಲ್ ದೆಟ್ ಬ್ರೆತ್ಸ್’ ಡಾಕ್ಯುಮೆಂಟರಿ

    ಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ (All That Breaths) ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಇತ್ತು.

    ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5.30 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಯಿತು. ಭಾರತಕ್ಕೆ ಮೊದಲ ಪ್ರಶಸ್ತಿಯು ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಡೆದುಕೊಳ್ಳುವ ಮೂಲಕ ಶುಭಾರಂಭ ಮಾಡಿತು. ಈ ಪ್ರಶಸ್ತಿ ಪ್ರಕಟವಾದ ಕೆಲವೇ ಹೊತ್ತಿಗೆ ನಾಟು ನಾಟು ಹಾಡಿಗೂ ಆಸ್ಕರ್ ಪ್ರಶಸ್ತಿ ಘೋಷಣೆ ಆಯಿತು. ಆಲ್ ದೆಟ್ ಬ್ರೆತ್ಸ್ ಡಾಕ್ಯುಮೆಂಟರಿಗೂ ಪ್ರಶಸ್ತಿ ಬಂದರೆ, ಭಾರತ ಹ್ಯಾಟ್ರಿಕ್ ಸಾಧಿಸಲಿದೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಈ ಡಾಕ್ಯುಮೆಂಟರಿಗೆ ಪ್ರಶಸ್ತಿ ಬರಲಿಲ್ಲ. ‘ರಷ್ಯನ್ ನಾವಲ್ನಿ’ ಡಾಕ್ಯುಮೆಂಟರಿ ಪ್ರಶಸ್ತಿ ಪಡೆಯುವ ಮೂಲಕ ಆಲ್ ದೆಟ್ ಬ್ರೆತ್ಸ್ ಅನ್ನು ಹಿಂದಿಕ್ಕಿತು. ಇದನ್ನೂ ಓದಿ: ಕಪ್ಪು ಬಣ್ಣದ ಮಾಡ್ರನ್ ಸೀರೆಯಲ್ಲಿ ಕಂಗೊಳಿಸಿದ ರಶ್ಮಿಕಾ ಮಂದಣ್ಣ

    ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

    Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

    ಮ್ಮ ಮೊದಲ ನಿರ್ದೇಶನದ ಕಿರುಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಪಡೆದಿದ್ದಾರೆ ತಮಿಳಿನ ಕಾರ್ತಿಕಿ ಗೊನ್ಸಾಲ್ವೆಸ್ (Karthik Gonsalves). ಭಾರತಕ್ಕೆ ಘೋಷಣೆಯಾದ ಮೊದಲ ಪ್ರಶಸ್ತಿ ಇದಾಗಿತ್ತು. ಹಾಗಾಗಿ ಈ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಇಡೀ ಭಾರತವೇ ಸಂಭ್ರಮಿಸಿತು. ಸಾಕುವ ಆನೆ ಮರಿಗಳ ಕಥೆಯನ್ನು ಹೊಂದಿರುವ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಹಲವು ವಿಶೇಷತೆಗಳನ್ನು ಒಳಗೊಂಡಿದೆ.

    ಒಂದು ಅನಾಥ ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಕ್ಷಿಣ ಭಾರತೀಯ ದಂಪತಿಯ ಕಥೆಯನ್ನು ಈ ಸಾಕ್ಷ್ಯಚಿತ್ರ ಒಳಗೊಂಡಿದೆ. ತಮಿಳು ನಾಡಿನ (Tamil Nadu) ಮುದಮಲೈ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕುಟುಂಬವೊಂದರ ಕಥೆಯೂ ಇದರಲ್ಲಿದೆ. ತಮಿಳು ನಾಡಿನ ಮೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎನ್ನುವ ಅನಾಥ ಆನೆ ಮರಿ ನಡುವೆ ಬೆಳೆದ ಬಾಂಧವ್ಯವನ್ನು ಭಾವನಾತ್ಮಕವಾಗಿ ಸೆರೆ ಹಿಡಿದಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಬಿದಿರಿನ ಉಡುಪಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟ ಉರ್ಫಿ ಜಾವೇದ್

    41 ನಿಮಿಷಗಳ ಸಾಕ್ಷ್ಯಚಿತ್ರ ಇದಾಗಿದ್ದು, ಇಡೀ ಕಿರುಚಿತ್ರ ಕಾಡು ಮತ್ತು ಕಾಡಿನ ಸುತ್ತಮುತ್ತಲು ನಡೆಯುತ್ತದೆ. ಆನೆಮರಿಯ ಕಥೆಯ ಜೊತೆಗೆ ನೈಸರ್ಗಿಕ ಸೌಂದರ್ಯವನ್ನು ಮೊಗೆದು ಮೊಗೆದು ಕೊಟ್ಟಿದ್ದಾರೆ ನಿರ್ದೇಶಕರು. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿರ್ದೇಶಕರು ಮೂಲತಃ ತಮಿಳುನಾಡಿನ ಊಟಿಯವರು. ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಅನಿಮಲ್ ಪ್ಲಾನೆಟ್, ಡಿಸ್ಕವರಿ ಚಾನೆಲ್ ಗಳಲ್ಲಿ ಕೆಲಸ ಮಾಡಿದ ಅನುಭವವೂ ಇವರದ್ದು.

    ಆಸ್ಕರ್ ಪ್ರಶಸ್ತಿಯನ್ನು ಪಡೆದು ಮಾತನಾಡಿರುವ ಕಾರ್ತಿಕೆ, ಮೊದಲ ತಮ್ಮ ಆಸ್ಕರ್ ಪ್ರಶಸ್ತಿಯನ್ನು ತಾಯ್ನೆಲಕ್ಕೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಅರಣ್ಯ ಮತ್ತು ಕಾಡು ಪ್ರಾಣಿಗಳ ಮಹತ್ವವನ್ನು ಸಾರುವ ಪ್ರತಿಯೊಬ್ಬರಿಗೂ ಈ ಗೌರವ ಸಂದಿದೆ ಎಂದು ಮಾತನಾಡಿದ್ದಾರೆ.