Tag: The GQ

  • ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

    ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

    ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ.

    ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

    ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

    ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.