Tag: the india house film

  • ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ‘ಆರ್‌ಆರ್‌ಆರ್’ (RRR) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸ್ಟಾರ್ ನಟ ರಾಮ್ ಚರಣ್ (Ram Charan) ಇತ್ತೀಚೆಗೆ ‘ವಿ ಮೆಗಾ ಪಿಕ್ಚರ್ಸ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಮೊದಲ ಸಿನಿಮಾಗೆ ಸಾವರ್ಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ‘ದಿ ಇಂಡಿಯಾ ಹೌಸ್’ (The India House) ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ‘ದಿ ಇಂಡಿಯಾ ಹೌಸ್’ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

    ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ‍್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಇದನ್ನೂ ಓದಿ:‘ಡಾರ್ಲಿಂಗ್’ ಎನ್ನುತ್ತಾ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ನಭಾ ನಟೇಶ್

    ಈ ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ಧಾರ್ಥ್‌ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ (Saiee Manjrekar) ಬಣ್ಣ ಹಚ್ಚಲಿದ್ದಾರೆ.

    ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮೂಡಿ ಬರಲಿದೆ. ‘ಕಾರ್ತಿಕೇಯ 2’ ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ‘ದಿ ಇಂಡಿಯಾ ಹೌಸ್’ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ರೆಗ್ಯುಲರ್ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ.