Tag: The Kashmir Files

  • ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ಕಲಬುರಗಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ನಿಜ ಅದನ್ನು ಸರಿಪಡಿಸಿ ಅವರಿಗೆ ಮನೆ, ಜಮೀನು ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ. ದೇಶಕ್ಕಾಗಿ ಲಕ್ಷಾಂತರ ಜನ ಪ್ರಾಣ ಬಿಟ್ಟಿದ್ದಾರೆ ಅಂತವರ ಚಿತ್ರ ತೆಗೆಯಿರಿ ಎಂದು ಬಿಜೆಪಿ ವಿರುದ್ಧ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯೇ ಜನರನ್ನು ನೋಡಿ ಎಂದು ಹೇಳಿ ಪ್ರಚೋದಿಸುತ್ತಿದ್ದಾರೆ. ಆ ಚಿತ್ರ ತೆಗೆದ ಅಗ್ನಿಹೋತ್ರಿ ಅವರ ಪಕ್ಷದವರೆ ಆಗಿದ್ದಾರೆ. ಆ ಚಿತ್ರದ ಅನುಪಮ್ ಖೇರ್ ಪತ್ನಿ ಬಿಜೆಪಿಯಲ್ಲಿದ್ದಾರೆ. ಈ ಚಿತ್ರವನ್ನು ಬಿಜೆಪಿ ಪಾರ್ಟಿ ಮಿಟಿಂಗ್‍ನಲ್ಲಿ ಚಿತ್ರ ನೋಡಲು ಹೇಳುತ್ತಿದೆ. ನಾವು ಜೈಹಿಂದ್ ಅಂದ್ರೆ ಅವರು ಬೇರೆನೆ ಹೇಳ್ತಾರೆ. 2024 ರವರೆಗೆ ಇಂತಹ ಹಲವು ಚಿತ್ರಗಳು ಬರುತ್ತವೆ. ನಾನು ಕಾಶ್ಮೀರ್ ಫೈಲ್ಸ್ ಚಿತ್ರ ನೋಡಿಲ್ಲ, ಮೋದಿ ನೋಡಿ ಎಂದು ಹೇಳಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ: ಕೇಂದ್ರದ ವಿರುದ್ಧ ಕೃಷ್ಣಬೈರೇಗೌಡ ವಾಗ್ದಾಳಿ

    ಯಾರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡ್ತಾರೆ. ಅವರಿಂದ ನಾವು ಫೇರ್ ರಾಜಕಾರಣ ನೀರಿಕ್ಷಿಸಲು ಆಗಲ್ಲ. ಈ ಹಿಂದಿನ ಯಾವ ರಾಜಕಾರಣಿ ಸಹ ಹೀಗೆ ಮಾಡಿರಲಿಲ್ಲ. ಆದ್ರೆ ಸದ್ಯ ಧರ್ಮದ ಮೇಲೆ ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ಗುಡುಗಿದರು.

    ಗುಜರಾತ್ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಕುರಿತು ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಈಗ ಏನು ಮಾತನಾಡಲ್ಲ. ಒಂದು ಕಡೆ ಟೆಸ್ಟ್‌ಬುಕ್ ಕಮಿಟಿ ನಿರ್ಧಾರ ಅಂತಾರೆ. ಇನ್ನೊಂದು ಕಡೆ ಅವರೆ ನಿಯಮ ಮುರಿಯುತ್ತಾರೆ. ಭಗವದ್ಗೀತೆ ಕಡ್ಡಾಯ ಬಗ್ಗೆ ನಾನು ಈಗ ಮಾತನಾಡಿ ವಿವಾದ ಮಾಡಿಕೊಳ್ಳಲ್ಲ. ಈ ಬಗ್ಗೆ ಸದನದಲ್ಲಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

    ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಮಾತನಾಡಿ, ಪಂಜಾಬ್‍ನಲ್ಲಿ ಒಳಜಗಳದಿಂದ ನಾವು ಅಧಿಕಾರ ಕಳೆದುಕೊಂಡಿದ್ದೇವೆ. ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ನಮ್ಮ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ರಚಿಸಿತ್ತು. ಜನ ಎಲ್ಲೆಲ್ಲಿ ನಮ್ಮ ಪಕ್ಷಕ್ಕೆ ಸಪೋರ್ಟ್ ಮಾಡಿದರು ಇವರು ಬಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕೊಲೆಯಾಗಿದೆ. ನಮ್ಮ ಸರ್ಕಾರ ರಚನೆ ಆಗುವಾಗ ಐಟಿ-ಇಡಿ ಮೂಲಕ ಹೆದರಿಸಿ ಸರ್ಕಾರ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಯಾವ ಪ್ರಧಾನಿ ಸಹ ತಿಂಗಳುಗಟ್ಟಲೆ ಪ್ರಚಾರಕ್ಕೆ ಹೋಗಿದ್ದರು?. ಪ್ರಧಾನಿ ದೇಶದ ಕೆಲಸ ಬಿಟ್ಟು ನೀತಿ ಸಂಹಿತೆ ಉಲಂಘಿಸಿ ಪ್ರಚಾರ ನಡೆಸಿದ್ದಾರೆ ಎಂದು ಜರಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

    ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನಲ್ಲಿ ಬದಲಾವಣೆ ವಿಚಾರ ಮಾತನಾಡಿ, ಮೊನ್ನೆಯವರಗೆ ಸೋನಿಯಾ ಗಾಂಧಿ ಅವರನ್ನು ಹೊಗಳುತ್ತಿದ್ದರು. ಗೆದ್ದಾಗ ಇದೇ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಹೊಗಳಿದ್ದರು. ಕೆಲ ಜನರಿಗೆ ಅಧಿಕಾರ ಬೇಕು ಆದ್ರೆ ಅವರು ಅಷ್ಟು ಶಾಸಕರನ್ನೇ ಗೆಲ್ಲಿಸಿಲ್ಲಾ. ಇದೇ ನಾಯಕರೇ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಕರೆತಂದಿದ್ದು ಇದೀಗ ಅವರೇ ಅವರ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ ಗಾಂಧಿ ಗುಂಡಿಗೆ ಬಲಿಯಾಗಿದ್ದಾರೆ. ಈವರು ಯಾರಾದ್ರು ದೇಶಕ್ಕಾಗಿ ಜೀವ ಕೊಟ್ಟಿದ್ದಾರಾ. ಪಕ್ಷದ ಮೇಲೆ ಅಭಿಮಾನ ಇರುವವರು ಈ ರೀತಿ ಮಾತನಾಡುವುದು ಸರಿಯಲ್ಲ. CWC ಸಭೆಯಲ್ಲಿ ಇವರೆಲ್ಲ ಮಾತನಾಡಲ್ಲಾ. ಹೊರಗಡೆ ಮಾತ್ರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

  • ಅವರು ನನ್ನನ್ನು ನರೇಂದ್ರ ಮೋದಿ ಚಮಚಾ ಅಂತಾರೆ: ಪ್ರಕಾಶ್ ಬೆಳವಾಡಿ

    ಅವರು ನನ್ನನ್ನು ನರೇಂದ್ರ ಮೋದಿ ಚಮಚಾ ಅಂತಾರೆ: ಪ್ರಕಾಶ್ ಬೆಳವಾಡಿ

    ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ ನಂತರ ನನ್ನನ್ನು ನರೇಂದ್ರ ಮೋದಿ ಚಮಚಾ ಎನ್ನುತ್ತಿದ್ದಾರೆ. ಸತ್ಯವನ್ನು ಒಪ್ಪಿಕೊಳ್ಳಲು ಕಷ್ಟವಾದವರು ಈ ರೀತಿ ಮಾತನಾಡುವುದು ಸಹಜ ಎಂದಿದ್ದಾರೆ ನಟ ಪ್ರಕಾಶ್ ಬೆಳವಾಡಿ.

    ಇಂದು ಮೈಸೂರಿನಲ್ಲಿ ‘ಮೈಸೂರು ಸಿನಿಮಾ ಸೊಸೈಟಿ’ ಏರ್ಪಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಕಾಶ್ ಬೆಳವಾಡಿ, “ಈ ಸಿನಿಮಾ ಪ್ರಾಪಗೆಂಡಾಕೆ ಬಳಕೆ ಆಗುತ್ತಿದೆ. ಜಾತಿರಾಜಕಾರಣಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ ಎಂದು ಮಾತನಾಡುತ್ತಿದ್ದಾರೆ. ಸಿನಿಮಾ ಇರುವುದೇ ಸತ್ಯ ಹೇಳುವುದಕ್ಕೆ. ಈ ಸಿನಿಮಾ ಸತ್ಯವನ್ನೇ ಹೇಳಿದೆ’ ಎಂದರು. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಮತ್ತು ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ತಮ್ಮನ್ನು ನರೇಂದ್ರ ಮೋದಿ ಅವರ ಚಮಚಾ ಎಂದು ಕರೆಯುತ್ತಿರುವ ವಿಷಯವನ್ನೂ ಅವರು ಹೇಳಿಕೊಂಡರು. ಕೆಲವು ವಿಷಯಗಳನ್ನು ಮೋದಿ ಅವರನ್ನು ಬೆಂಬಲಿಸಿದ್ದು ನಿಜ ಎಂದು ಪ್ರಕಾಶ್ ಬೆಳವಾಡಿ ಒಪ್ಪಿಕೊಂಡರು. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನು ಸತ್ಯದ ಪರ ಇರುವುದಾಗಿ ಅವರು ಸ್ಪಷ್ಟ ಪಡಿಸಿದರು. ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರದೇ ಇದ್ದರೆ ಸಿನಿಮಾ ಬಿಡುಗಡೆಯೇ ಆಗುತ್ತಿರಲಿಲ್ಲ ಎಂದರು ಪ್ರಕಾಶ್ ಬೆಳವಾಡಿ. ಇದನ್ನೂ ಓದಿ: ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ನಿರ್ದೇಶಕನಿಗೆ ಇರಬೇಕಾದ ಜವಾಬ್ದಾರಿಗಳ ಬಗ್ಗೆಯೂ ಮಾತನಾಡಿದ ಅವರು, ನಿರ್ದೇಶಕರು ಸತ್ಯದ ಪರವಾಗಿ ಕೆಲಸ ಮಾಡಬೇಕು. ಅವನು ಕಾರಕೂನನಂತೆ ಕೆಲಸ ಮಾಡಬಾರದು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಹಾಗಾಗಿ ಅವರನ್ನು ಎಲ್ಲರೂ ಅಭಿನಂದಿಸಬೇಕು ಎಂದಿದ್ದಾರೆ ಬೆಳವಾಡಿ.

  • ಜೋಕರ್ ಹೋಲಿಕೆಗೆ ದಿ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಮೆಚ್ಚುಗೆ

    ಜೋಕರ್ ಹೋಲಿಕೆಗೆ ದಿ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಮೆಚ್ಚುಗೆ

    ಮುಂಬೈ: ದೇಶದಲ್ಲಿ ಭಾರಿ ಸುದ್ದಿ ಮಾಡುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಟ ಅನುಪಮ್ ಖೇರ್ ಮತ್ತು ಜೋಕರ್ ಪಾತ್ರದಲ್ಲಿ ಜನಮನ್ನಣೆ ಗಳಿಸಿಕೊಂಡಿದ್ದ ಹೀತ್ ಲೆಡ್ಜರ್ಸ್ ಪಾತ್ರವನ್ನು ಎಂದಿಗೂ ವಿಶ್ವ ಮರೆಯುವುದಿಲ್ಲ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜೋಕರ್ ಪಾತ್ರದಲ್ಲಿ ಹೀತ್ ಲೆಡ್ಜರ್ಸ್ ಮನೋಜ್ಞವಾಗಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ. ಅದೇ ರೀತಿ ಇದೀಗ ಬಾಲಿವುಡ್‍ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಪುಷ್ಕರ್ ನಾಥ್ ಪಂಡಿತ್ ಪಾತ್ರವನ್ನು ಅನುಪಮ್ ಖೇರ್ ನಿರ್ವಹಿಸಿದ್ದು, ಅವರ ಅದ್ಭುತವಾದ ನಟನೆ ಕಂಡು ಚಿತ್ರ ಪ್ರೇಮಿಗಳು ಶಹಭಾಷ್ ಎಂದಿದ್ದಾರೆ. ಅಲ್ಲದೇ ಈ ಎರಡು ಪಾತ್ರಗಳು ಅಭಿಮಾನ ಕಾರಣದಿಂದಾಗಿ ಮತ್ತೆ ಮತ್ತೆ ಕಾಡಲಿದೆ ಎಂಬ ಅಭಿಪ್ರಾಯವನ್ನು ನೋಡುಗರು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ

    ಸಾಮಾಜಿಕ ಜಾಲತಾಣದಲ್ಲಿ ಹೀತ್ ಲೆಡ್ಜರ್ಸ್ ಮತ್ತು ಅನುಪಮ್ ಖೇರ್ ನಿರ್ವಹಿಸಿದ ಪಾತ್ರಗಳ ಫೋಟೋಗಳು ಹರಿದಾಡುತ್ತಿದ್ದಂತೆಯೇ ಈ ಬಗ್ಗೆ ಅನುಪಮ್ ಕೇರ್ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈ ಎರಡು ಪಾತ್ರಗಳನ್ನು ಹೋಲಿಕೆ ಮಾಡಿ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ಇಂತಹ ಉತ್ತಮ ಪ್ರತಿಕ್ರಿಯೆಗೆ ಬಂದಿರುವುದು ಸಂತೋಷವಾಗಿದೆ’ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಾಲಿವುಡ್ ಪಾಪ ತೊಳೆದ ದಿ ಕಾಶ್ಮೀರ್ ಫೈಲ್ಸ್: ಕಂಗನಾ ರಣಾವತ್

    ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾದಲ್ಲಿ ಏನಿದೆ:
    ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಸಿನಿಮಾ ಮಾಡಿದ್ದಾರೆ. ಅದನ್ನು ‘ದಿ ಕಾಶ್ಮೀರ್ ಫೈಲ್ಸ್’ ಹೆಸರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಶೀರ್ಷಿಕೆಯೇ ಪ್ರಚುರಪಡಿಸುವಂತೆ ನರಮೇಧದ ಹಿಂದಿರುವ ಇತಿಹಾಸವನ್ನು ಬಿಚ್ಚಿಡುವಂತಹ ಫೈಲ್ಸ್ ಇದಾಗಿದೆ. ಈ ಫೈಲ್ ನ ಪುಟಪುಟದಲ್ಲೂ ರಕ್ತಸಿಕ್ತ ಅಧ್ಯಾಯಗಳಿವೆ. ಬರೆದ ಶಾಹಿ ಕೂಡ ಕೆಂಪಾಗಿದೆ. ಇಂತಹ ಹತ್ಯಾಕಾಂಡವನ್ನು ಸಿನಿಮಿಯ ರೂಪದಲ್ಲಿ ತರದೇ, ನಡೆದ ಘಟನೆಯನ್ನು ಹಸಿಹಸಿಯಾಗಿಯೇ ತರುವ ಪ್ರಯತ್ನ ಈ ಸಿನಿಮಾದಲ್ಲಿ ಆಗಿದೆ.

  • ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

    ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ

    ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಯಾದಾಗಿನಿಂದ ದೇಶಾದ್ಯಂತ ದೊಡ್ಡಮಟ್ಟದ ಸಂಚಲನ ಮೂಡಿಸಿದೆ. 3 ದಶಕಗಳ ಹಿಂದೆ ಕಾಶ್ಮೀರಿ ಪಂಡಿತರು ಅನುಭವಿಸಿದ ಹಿಂಸಾಚಾರ ಹಾಗೂ ವಲಸೆಯ ನಿಜ ಕಥೆಯಾದಾರಿತ ಸಿನಿಮಾಗೆ ಜನಸಾಮಾನ್ಯರಿಂದ ಹಿಡಿದು ದೊಡ್ಡ ದೊಡ್ಡ ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ದೇಶಾದ್ಯಂತ ಸರ್ಕಾರವೂ ಈ ಸಿನಿಮಾವನ್ನು ಜನರಿಗೆ ತೋರಿಸುವ ಸಲುವಾಗಿ ಟ್ಯಾಕ್ಸ್ ರಹಿತ ಟಿಕೆಟ್ ಒದಗಿಸಿದೆ. ಇದೀಗ ವಾಟ್ಸಪ್‌ನಾದ್ಯಂತ ದಿ ಕಾಶ್ಮೀರದ ಫೈಲ್ಸ್ ಸಿನಿಮಾದ ಡೌನ್ಲೋಡಿಂಗ್ ಲಿಂಕ್‌ಗಳು ಶೇರ್ ಆಗುತ್ತಿದ್ದು, ಈ ಲಿಂಕ್‌ಗಳನ್ನು ವಂಚನೆಗಾಗಿ ಕಿಡಿಗೇಡಿಗಳು ಹಂಚಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ

    ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರವನ್ನು ಉತ್ತಮ ಗುಣಮಟ್ಟದಲ್ಲಿ ಡೌನ್‌ಲೋಡ್ ಮಾಡಲು ಈ ಲೀಕ್ ಅನ್ನು ಕ್ಲಿಕ್ ಮಾಡಿ ಎಂಬ ಸಂದೇಶದೊಂದಿಗೆ ಶೇರ್ ಆಗುತ್ತಿದೆ. ಲಿಂಕ್ ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿದ ವಾಟ್ಸಪ್ ಬಳಕೆದಾರರು ಬಳಿಕ ತಮ್ಮ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳೆದುಕೊಂಡಿರುವುದಾಗಿ ಹಲವೆಡೆ ವರದಿಯಾಗಿದೆ.

    ವಾಟ್ಸಪ್ ಬಳಕೆದಾರರು ಲಿಂಕ್ ಕ್ಲಿಕ್ ಮಾಡುತ್ತಿದ್ದಂತೆ ಹ್ಯಾಕರ್‌ಗಳು ಈ ಲಿಂಕ್‌ಗಳ ಮುಖಾಂತರ ಜನರ ಗೌಪ್ಯ ಮಾಹಿತಿಗಳನ್ನು ಪಡೆಯುತ್ತಿದ್ದಾರೆ ಹಾಗೂ ಬ್ಯಾಂಕ್ ಖಾತೆಗಳನ್ನು ಪ್ರವೇಶಿಸಿ ಹಣವನ್ನು ದೋಚುವ ಹುನ್ನಾರ ನಡೆಸಿದ್ದಾರೆ. ಹೀಗಾಗಿ ಇಂತಹ ಲಿಂಕ್‌ಗಳನ್ನು ಕ್ಲಿಕ್ ಮಾಡಿ ವಂಚನೆಗೆ ಒಳಗಾಗದೇ ಎಚ್ಚರವಹಿಸುವಂತೆ ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 2023ರಲ್ಲಿ ಬರಲಿದೆ ಭಾರತದ ಮೊದಲ RRTS ರೈಲು

    ಇತ್ತೀಚೆಗೆ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರ ದೇಶಾದ್ಯಂತ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು, ನೈಜ ಕಥೆಯಾಧಾರಿತ ಸಿನಿಮಾವನ್ನು ವೀಕ್ಷಿಸಲು ಜನರು ಥಿಯೇಟರ್‌ನೆಡೆಗೆ ಓಡುತ್ತಿದ್ದಾರೆ. ಭಾರೀ ಕುತೂಹಲ ಮೂಡಿಸಿರುವ ಸಿನಿಮಾವನ್ನೇ ಇದೀಗ ಸೈಬರ್ ವಂಚಕರು ಲಾಭ ಪಡೆಯಲು ಮುಂದಾಗಿದ್ದಾರೆ.

  • ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿ ಭಾವುಕರಾದ ಶಾಸಕ ಡಾ.ಭರತ್ ಶೆಟ್ಟಿ

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿ ಭಾವುಕರಾದ ಶಾಸಕ ಡಾ.ಭರತ್ ಶೆಟ್ಟಿ

    ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ತನ್ನ ಕ್ಷೇತ್ರದ ಕಾರ್ಯಕರ್ತರಿಗಾಗಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಉಚಿತವಾಗಿ ಅವಕಾಶ ಕಲ್ಪಿಸಿದ್ದರು. ಈ ವೇಳೆ ಅವರೇ ಸಿನಿಮಾ ನೋಡಿ ಭಾವುಕರಾಗಿ ಹೊರಬಂದಿದ್ದಾರೆ.

    ಮಂಗಳೂರಿನ ಭಾರತಗ ಸಿನಿಮಾ ಮಲ್ಟಿಫ್ಲೆಕ್ಸ್‍ನಲ್ಲಿ ಭರತ್ ಶೆಟ್ಟಿ ಅವರೇ ವೈಯಕ್ತಿಕವಾಗಿ ಎಲ್ಲರ ಟಿಕೆಟ್‍ಗಳನ್ನು ಖರೀದಿಸಿ ವೀಕ್ಷಣೆಗೆ ಪೆÇ್ರೀತ್ಸಾಹಿಸಿದರು. ಮೂರು ಗಂಟೆಗಳ ಕಾಲ ಸಿನಿಮಾವನ್ನ ಕಾರ್ಯಕರ್ತರೊಂದಿಗೆ ಅವರೂ ವೀಕ್ಷಿಸಿ ಹೊರಬಂದ ಭರತ್ ಶೆಟ್ಟಿ ಭಾವುಕರಾಗಿದ್ದರು.  ಇದನ್ನೂ ಓದಿ: ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

    ಈ ಹಿಂದೆ ನಿಜವಾಗಿ ನಡೆದ ಅತ್ಯಾಚಾರ, ನರಮೇಧ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಿನಿಮಾ ನೋಡಿದ ಮೇಲೆ ಕಣ್ಣಾರೆ ಕಂಡ ರೀತಿ ಇದೆ. ಈ ದೃಶ್ಯಗಳನ್ನು ನೋಡಿ ಮನಸ್ಸು ಭಾರವಾಗಿ ವಿಚಲಿತಗೊಂಡಿದೆ. ಮಾತಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

    ಈ ಹಿಂದೆ ಸರ್ಕಾರ ಪೊಲೀಸ್ ಕಾನೂನು ಇದ್ದರೂ ಏನು ಮಾಡಲು ಸಾಧ್ಯವಾಗದೆ ಇಂತಹ ನರಮೇಧವನ್ನು ಮೌನವಾಗಿ ಸಹಿಸಿಕೊಂಡು ಇದ್ದದ್ದಾದರೂ ಯಾಕೆ ಎಂಬ ಪ್ರಶ್ನೆ ನನ್ನಲ್ಲಿ ಉದ್ಭವಿಸಿದೆ. ಇಂತಹ ಘಟನೆ ಮುಂದೆ ಮರುಕಳಿಸಬಾರದು ಎಂದರು.

    ವಿದೇಶಿ ಶಕ್ತಿಗಳ ಉಗ್ರಗಾಮಿಗಳ ಕೈವಾಡ ಹಾಗೂ ಜನಾಂಗೀಯತೆಯನ್ನು ಬೆಳೆಯಲು ಬಿಡದೆ ದೇಶವನ್ನು ಸದೃಢವಾಗಿ ಬೆಳೆಸುವ ಹಾಗೂ ಕಾಶ್ಮೀರಿ ಪಂಡಿತರಿಗೆ ಅವರ ನ್ಯಾಯಯುತ ಹಕ್ಕನ್ನು ಒದಗಿಸಿಕೊಡುವ ಕೆಲಸವಾಗಬೇಕಾಗಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನದ ರಜೆ: ಅಸ್ಸಾಂ ಸಿಎಂ

    ಪ್ರಸಿದ್ಧ ಭಾಗವತ್ ಪಟ್ಲ, ಸತೀಶ್ ಶೆಟ್ಟಿ ಅವರು ಮಾಧ್ಯಮದೊಂದಿಗೆ ಮಾತನಾಡಿದ್ದು, ಒಮ್ಮೆಯಾದರೂ ಜನರು ಈ ಸಿನಿಮಾವನ್ನು ನೋಡಲೇ ಬೇಕಿದೆ. ಮನಸ್ಸು ಪರಿವರ್ತನೆಯಾಗುವ ಚಲನಚಿತ್ರವಿದು ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿ ಇಂತಹ ದುರ್ಘಟನೆ ನಡೆದಿದೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ನೋವನ್ನು ತೋಡಿಕೊಂಡರು.

  • ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕ್ಬೇಡಿ: ಸಿ.ಟಿ.ರವಿ

    ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕ್ಬೇಡಿ: ಸಿ.ಟಿ.ರವಿ

    ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನವಿ ಮಾಡಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಶ್ಮೀರ ಫೈಲ್ ಸಿನಿಮಾವು ಸತ್ಯಾಂಶಗಳ ಮೇಲೆ ತೆಗೆದಿರುವ ಸಿನಿಮಾವಾಗಿದೆ. ಇದು ಸಹ ಸಂದೇಶ ಇರುವ ಸಿನಿಮಾ. ಇದಕ್ಕೂ ಸಹ ತೆರಿಗೆ ವಿನಾಯಿತಿ ಕೊಡಲಿ. ಆದರೆ ಎರಡು ಸಿನಿಮಾಗಳನ್ನು ಹೋಲಿಕೆ ಮಾಡುವುದು ಬೇಡ ಎಂದರು. ಇದನ್ನೂ ಓದಿ: ಗುರುವಾರಕ್ಕೂ ಪುನೀತ್ ಸಿನಿಮಾ ರಿಲೀಸಿಗೂ ಏನದು ನಂಟು?

    ಪುನೀತ್ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಸಂಭ್ರಮಿಸಿ ಕುಣಿದಾಡಬೇಕಿದ್ದ ಅಭಿಮಾನಿಗಳು ದುಃಖದಲ್ಲಿ ಅವರ ಹುಟ್ಟು ಹಬ್ಬ ಆಚರಿಸಿಕೊಳ್ಳಬೇಕಿದೆ. ಪುನೀತ್ ರಾಜಕುಮಾರ್ ಒಬ್ಬ ಮಾದರಿ ವ್ಯಕ್ತಿ. ಅವರ ನಡೆಯನ್ನು ಅಭಿಮಾನಿಗಳು ಅನುಸರಿಸಿದರೆ ಅದೇ ನಾವು ಅವರಿಗೆ ಕೊಡುವ ಗೌರವ ಅವರ ನಡೆಯಲ್ಲಿ ನಾವೆಲ್ಲಾ ನಡೆಯಬೇಕಿದೆ. ಕಾಶ್ಮೀರ ಫೈಲ್ ರೀತಿ ತೆರಿಗೆ ವಿನಾಯಿತಿ ಕೊಡುವ ವಿಚಾರ ಎರಡು ಸಿನಿಮಾಗಳಿಗೆ ತಂದು ಹಾಕುವ ಕೆಲಸ ಬೇಡ ಎಂದು ತಿಳಿಸಿದರು. ಇದನ್ನೂ ಓದಿ: ಟಿವಿಯಲ್ಲಿ ಬಂದಾಗ ಜೇಮ್ಸ್ ಚಿತ್ರ ನೋಡ್ತೀನಿ: ಸಿದ್ದರಾಮಯ್ಯ

  • ಕಾಶ್ಮೀರ್‌ ಫೈಲ್ಸ್‌ನಂತೆ ಲಖಿಂಪುರ್‌ ಫೈಲ್ಸ್‌ನ್ನು ಯಾಕೆ ಮಾಡ್ಬಾರ್ದು: ಅಖಿಲೇಶ್ ಯಾದವ್ ಪ್ರಶ್ನೆ

    ಕಾಶ್ಮೀರ್‌ ಫೈಲ್ಸ್‌ನಂತೆ ಲಖಿಂಪುರ್‌ ಫೈಲ್ಸ್‌ನ್ನು ಯಾಕೆ ಮಾಡ್ಬಾರ್ದು: ಅಖಿಲೇಶ್ ಯಾದವ್ ಪ್ರಶ್ನೆ

    ಲಕ್ನೋ: ಕಾಶ್ಮೀರದ ಕುರಿತಾದ ಸಿನೆಮಾ ದಿ ಕಾಶ್ಮೀರ್‌ ಫೈಲ್ಸ್‌ನ್ನು ಮಾಡಬಹುದಾದರೆ, ಲಖಿಂಪುರ್‌ ಫೈಲ್ಸ್‌ನ್ನು ಮಾಡಬಾರದು ಎಂದು ಸಮಾಜವಾದಿ ಪಕ್ಷದ(ಎಸ್‍ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಹಿಂಸಾಚಾರದ ಕುರಿತು ಸಿನಿಮಾ ಮಾಡಬಹುದಾದರೇ, ಲಖಿಂಪುರದಲ್ಲಿ ಪ್ರತಿಭಟನಾನಿರತ ರೈತರ ಗುಂಪಿನ ಮೇಲೆ ಜೀಪ್ ಹರಿಸಿದ ಘಟನೆ ಮೇಲೆ ಲಖಿಂಪುರ ಫೈಲ್ಸ್‌ಗಳನ್ನು ಏಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

    ಕಳೆದ ವರ್ಷ ಅಕ್ಟೋಬರ್ 3ರಂದು, ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ರೈತರ ಮೇಲೆ ಕೇಂದ್ರ ಸಚಿವರೊಬ್ಬರ ಪುತ್ರನ ಜೀಪ್ ಹರಿಸಿದ್ದರು. ಇದರಿಂದಾಗಿ ಲಖಿಂಪುರದಲ್ಲಿ ಹಿಂಸಾಚಾರ ಅಧಿಕವಾಗಿತ್ತು. ಈ ಘಟನೆಯಲ್ಲಿ ನಾಲ್ವರು ರೈತರು ಹಾಗೂ ಪತ್ರಕರ್ತರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ – ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

    ರಾಜ್ಯದಲ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಚುನಾವಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ ಬೆಂಬಲದಿಂದ ಸಮಾಜವಾದಿ ಪಕ್ಷದ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.

    ನಮಗೆ ನೈತಿಕ ಜಯ ಸಿಕ್ಕಿದೆ. ಭವಿಷ್ಯದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆ ಆಗಲಿದೆ. ಬಿಜೆಪಿಯ ಜಯದ ಹಾದಿಯಲ್ಲಿ ಇನ್ನೂ ಮೂಲಭೂತ ಸಮಸ್ಯೆಗಳಿವೆ. ಯುವಜನರಲ್ಲಿ ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಹೆಚ್ಚುತ್ತಿದೆ. ಅದನ್ನು ರಾಜ್ಯದಲ್ಲಿ ಆಡಳಿತ ಪಕ್ಷವು ಇನ್ನೂ ಪರಿಹರಿಸಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ – ಸಮಾಧಿ ಬಳಿ ಕೇಕ್ ಕತ್ತರಿಸಿದ ದೊಡ್ಮನೆ ಕುಟುಂಬ

    ಉತ್ತರಪ್ರದೇಶ ಚುನಾವಣೆಯಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 255 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‍ಪಿ ಪಕ್ಷ 111 ಸ್ಥಾನಗಳನ್ನು ಪಡೆದುಕೊಂಡಿದೆ.

  • ಪುನೀತ್ ನಟನೆಯ ಜೇಮ್ಸ್ ಗೆ ತೆರಿಗೆ ಮುಕ್ತ ಮಾಡಿ: ಮಾಜಿ ಸಚಿವ ಎಂ.ಬಿ.ಪಾಟೀಲ್

    ಪುನೀತ್ ನಟನೆಯ ಜೇಮ್ಸ್ ಗೆ ತೆರಿಗೆ ಮುಕ್ತ ಮಾಡಿ: ಮಾಜಿ ಸಚಿವ ಎಂ.ಬಿ.ಪಾಟೀಲ್

    ರಭಾಷಾ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯತಿ ನೀಡಿದಂತೆ, ಕನ್ನಡದ್ದೇ ಆದ ‘ಜೇಮ್ಸ್’ ಚಿತ್ರಕ್ಕೂ ತೆರಿಗೆ ವಿನಾಯತಿ ಕೊಡಬೇಕು ಎಂಬ ಕೂಗು ಎರಡು ದಿನಗಳಿಂದ ರಾಜ್ಯದಲ್ಲಿ  ಕೇಳಿ ಬರುತ್ತಿದೆ. ಈವರೆಗೂ ಪುನೀತ್ ಅವರ ಅಭಿಮಾನಿಗಳು, ಕನ್ನಡ ಪರ ಕೆಲಸ ಸಂಘಟನೆಗಳು ಮಾತ್ರ ಸೋಷಿಯಲ್ ಮೀಡಿಯಾ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದರು. ಇದೀಗ ಆ ಪಟ್ಟಿಗೆ ಜನಪ್ರತಿನಿಧಿಗಳು ಕೂಡ ಧ್ವನಿಗೂಡಿಸಿದ್ದಾರೆ. ಇದನ್ನೂ ಓದಿ : ಮಾಲ್ಡೀವ್ಸ್ ಬೀಚ್ ನಲ್ಲಿ ಬಿಕಿನಿರಾಣಿಯಾದ ವರಲಕ್ಷ್ಮಿ

    ಮಾಜಿ ಸಚಿವ ಎಂ.ಬಿ. ಪಾಟೀಲ್ ಈ ಕುರಿತು ಟ್ವೀಟ್ ಮಾಡಿದ್ದು, “ನಮ್ಮೆಲ್ಲರ ಪ್ರೀತಿ ಅಪ್ಪು ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಇದೇ ಮಾರ್ಚ್ 17ರಂದು ಬಿಡುಗಡೆ ಆಗುತ್ತಿದೆ. ಅಂದು ಪುನೀತ್ ಅವರ ಜನ್ಮದಿನ ಕೂಡ. ಈ ಚಿತ್ರವನ್ನು ನೋಡಲು ರಾಜ್ಯವೇ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕೆ ಟ್ಯಾಕ್ಸ್ ಫ್ರಿ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?

    ಕೆಲ ಕನ್ನಡ ಪರ ಸಂಘಟನೆಗಳು ಕೂಡ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿಧಿಸಬೇಡಿ ಎಂದು ಕೇಳಿದ್ದವು. ಅದಕ್ಕೆ ಕಾರಣ ಪರಭಾಷಾ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ಗೆ ತೆರೆಗೆ ಮುಕ್ತ ಮಾಡಿದ್ದರ ಹಿನ್ನೆಲೆಯಿತ್ತು. ಹೀಗಾಗಿ ಸೋಷಿಯಲ್ ಮೀಡಿಯಾ ಮೂಲಕವೇ ಕನ್ನಡ ಚಿತ್ರಗಳಿಗೆ ತೆರಿಗೆ ವಿಧಿಸಿ, ಅನ್ಯ ಭಾಷಾ ಚಿತ್ರಗಳಿಗೆ ತೆರಿಗೆ ವಿನಾಯತಿ ನೀಡುವುದು ಸರಿಯಲ್ಲ ಎಂದು ಬರೆದುಕೊಂಡಿದ್ದವು. ಕೆಲಸವು ಟ್ವೀಟರ್ ಅಭಿಯಾನವನ್ನೇ ಮಾಡಿದ್ದರು. ಇದೀಗ ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯತಿ ಕೊಡಿ ಎಂಬ ಕೂಗು ಎದ್ದಿದೆ. ಇದನ್ನೂ ಓದಿ : ಐದು ಮಕ್ಕಳಿಗೆ ‘ಪುನೀತ್ ರಾಜಕುಮಾರ್’ ಅಂತ ನಾಮಕರಣ ಮಾಡಿದ ನಟಿ ತಾರಾ

    ನಾಳೆ ವಿಶ್ವದಾದ್ಯಂತ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ರಿಲೀಸ್ ಆಗುತ್ತಿದೆ. ಸಾವಿರಾರು ಚಿತ್ರಮಂದಿರಗಳಲ್ಲಿ ಜೇಮ್ಸ್ ‍ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ಟ್ಯಾಕ್ಸ್ ಮತ್ತಿತರ ವಿಚಾರಗಳು ಮುನ್ನೆಲೆಗೆ ಬಂದಿವೆ.

  • ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಡಿಸ್ಪುರ್:  ಅಸ್ಸಾಂನ ಜನಸಂಖ್ಯೆಯಲ್ಲಿ ಶೇ.35 ರಷ್ಟು ಮುಸ್ಲಿಮರಿದ್ದು, ಇನ್ನು ಮುಂದೆ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುವುದಿಲ್ಲ ಎಂದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.

    ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮಾಡುತ್ತಿರುವಾಗ ಶರ್ಮಾ ಅವರು, ಮುಸ್ಲಿಂ ಸಮುದಾಯದ ಜನರು ವಿರೋಧ ಪಕ್ಷದ ನಾಯಕರು, ಶಾಸಕರು, ಸಮಾನ ಅವಕಾಶ ಮತ್ತು ಅಧಿಕಾರವನ್ನು ಹೊಂದಿದ್ದಾರೆ. ಅದನ್ನು ಖಚಿತಪಡಿಸಿಕೊಳ್ಳುವುದು ಅವರ ಕರ್ತವ್ಯವಾಗಿದೆ ಎಂದು ಮಾತನ್ನು ಆರಂಭಿಸಿದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ: ಅಸ್ಸಾಂ ಸಿಎಂ

    ಅಧಿಕಾರವು ಜವಾಬ್ದಾರಿಯೊಂದಿಗೆ ಬರುತ್ತೆ. ಮುಸ್ಲಿಮರು ಅಸ್ಸಾಂನ ಜನಸಂಖ್ಯೆ ಶೇ.35 ರಷ್ಟಿದ್ದಾರೆ. ಇಲ್ಲಿನ ಅಲ್ಪಸಂಖ್ಯಾತರನ್ನು ರಕ್ಷಿಸುವುದು ಅವರ ಕರ್ತವ್ಯ. ಅಸ್ಸಾಮಿಗರು ಭಯದಲ್ಲಿದ್ದಾರೆ. ತಮ್ಮ ಸಂಸ್ಕೃತಿ ಮತ್ತು ನಾಗರಿಕತೆ ರಕ್ಷಣೆಯಾಗುತ್ತ ಎಂಬ ಭಯವಿದೆ. ಸಾಮರಸ್ಯ ಎರಡು ಧರ್ಮಗಳ ನಡುವೆ ತುಂಬಾ ಮುಖ್ಯ. ಸಂಕರಿ ಸಂಸ್ಕೃತಿ, ಸತ್ರಿಯಾ ಸಂಸ್ಕೃತಿ ರಕ್ಷಣೆ ಬಗ್ಗೆ ಮುಸ್ಲಿಮರು ಮಾತನಾಡಲಿ. ಆಗ ಎಲ್ಲರ ನಡುವೆ ಸೌಹಾರ್ದತೆ ಇರುತ್ತದೆ. ಹತ್ತು ವರ್ಷಗಳ ಹಿಂದೆ, ನಾವು ಅಲ್ಪಸಂಖ್ಯಾತರಾಗಿರಲಿಲ್ಲ ಆದರೆ ಈಗ ನಾವಿದ್ದೇವೆ ಎಂದು ತಿಳಿಸಿದರು.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಅಸ್ಸಾಂ ಜನರೊಂದಿಗೆ ಸಮೀಕರಿಸಿ ಮಾತನಾಡಿದ ಅವರು, ಅಸ್ಸಾಮಿಗಳು ಕಾಶ್ಮೀರಿ ಪಂಡಿತರಂತೆಯೇ ಅದೇ ಭವಿಷ್ಯವನ್ನು ಎದುರಿಸುತ್ತಾರೆಯೇ ಎಂದು ಜನರು ನನ್ನನ್ನು ಕೇಳುತ್ತಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ತೋರಿಸಿದಂತೆ ಎಲ್ಲಿ ನಮ್ಮ ಪರಿಸ್ಥಿತಿಯಾಗುತ್ತೆ ಎಂದು ಕೆಲವರು ಭಯಪಟ್ಟುಕೊಂಡಿದ್ದಾರೆ. ಈ ಭಯವನ್ನು ಹೋಗಲಾಡಿಸುವುದು ಮುಸ್ಲಿಮರ ಕರ್ತವ್ಯ. ಮುಸ್ಲಿಮರು ಬಹುಸಂಖ್ಯಾತರಂತೆ ವರ್ತಿಸಬೇಕು ಮತ್ತು ಇಲ್ಲಿ ಕಾಶ್ಮೀರದ ರೀತಿ ಪುನರಾವರ್ತನೆಯಾಗುವುದಿಲ್ಲ ಎಂಬ ಭರವಸೆಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ

  • ವಾಸ್ತವವನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಹಿಂಜರಿಯುತ್ತಿದೆ: ಬಿಜೆಪಿ

    ವಾಸ್ತವವನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಹಿಂಜರಿಯುತ್ತಿದೆ: ಬಿಜೆಪಿ

    ಬೆಂಗಳೂರು: ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡ್ತಿದ್ದಾರೆ. ಆ ಮೂಲಕ ವಾಸ್ತವವನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಹಿಂಜರಿಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಟೀಕಿಸಿದೆ.

    ಟ್ವೀಟ್‍ನಲ್ಲಿ ಏನಿದೆ?:
    ದಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುತ್ತಿದ್ದಾರೆ. ಆ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ. ವಾಸ್ತವವನ್ನು ಒಪ್ಪಿಕೊಳ್ಳಲೂ ಕಾಂಗ್ರೆಸ್ ಹಿಂಜರಿಯುತ್ತಿದೆ. ಏಕೆಂದರೆ ಇದರ ರೂವಾರಿಗಳು ಅವರೇ ಆಗಿದ್ದಾರೆ. ವಿಧಾನ ಮಂಡಲದ ಉಭಯ ಸದನದಲ್ಲಿ ಕಾಶ್ಮೀರ್‌ ಫೈಲ್ಸ್ ಸಿನಿಮಾ ಬಗ್ಗೆ ಕಾಂಗ್ರೆಸ್ ಪ್ರತಿರೋಧ ತೋರುತ್ತಿದೆ. ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುತ್ತಿದೆಯೇ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ

    ಕಾಂಗ್ರೆಸ್ ಪಕ್ಷ ಕಾಶ್ಮೀರ್‌ ಫೈಲ್ಸ್ ಸಿನಿಮಾವನ್ನು ಏಕೆ ವಿರೋಧಿಸುತ್ತಿದೆ ಗೊತ್ತೇ? ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ, ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆಸಿದವರಿಗೆ, ಸೇನಾಪಡೆಗಳ ಮೇಲೆ ದಾಳಿ ನಡೆಸಿದವರಿಗೆ ಕಾಂಗ್ರೆಸ್ ಹತ್ತಿರವಾಗಿತ್ತು. ಸಾಕ್ಷ್ಯ ಇಲ್ಲಿದೆ, ಮಾಜಿ ಪ್ರಧಾನಿ ಭಯೋತ್ಪಾದಕನೊಂದಿಗೆ ಸಂವಾದ ನಡೆಸುತ್ತಿರುವ ಕ್ಷಣಗಳು!!! ಎಂದು ವೀಡಿಯೋವೊಂದನ್ನು ಹಂಚಿಕೊಂಡಿದೆ. ಈ ಮೂಲಕ ಬಿಜೆಪಿ ಕಾಂಗ್ರೆಸ್ ಮೇಲೆ ಆರೋಪ ಮಾಡಿದೆ.