Tag: the National Radio

  • ಹೋಗಿ ಬಾ ನನ್ನ ಗೆಳೆಯ – ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್​

    ಹೋಗಿ ಬಾ ನನ್ನ ಗೆಳೆಯ – ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್​

    ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ನಿಧನಕ್ಕೆ ಗೆಳತಿ ಬಾಲಿವುಡ್‌ನ ಹಿರಿಯ ನಟಿ ಸಿಮಿ ಗರೆವಾಲ್​ (Simi Garewal) ಎಕ್ಸ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡು ಭಾವುಕ ಪೋಸ್ಟ್​ ಮಾಡಿದ್ದಾರೆ.

    ನೀವು ಹೋಗಿದ್ದೀರಿ ಎಂದು ಎಲ್ಲರೂ ಹೇಳುತ್ತಿದ್ದಾರೆ, ನೀವು ನಮ್ಮ ಜೊತೆಗೆ ಇಲ್ಲ ಎನ್ನುವ ಸತ್ಯವನ್ನು ಅರಗಿಸಿಕೊಳ್ಳುವುದು ತುಂಬಾ ಕಷ್ಟ. ಹೋಗಿ ಬನ್ನಿ ನನ್ನ ಗೆಳೆಯ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ. ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರೊಂದಿಗಿನ ಸಂಬಂಧದ ಬಗ್ಗೆ 2011 ರಲ್ಲಿ ನೀಡಿದ ಸಂದರ್ಶನದಲ್ಲಿ ಖ್ಯಾತ ಹಿಂದಿ ಸಿನಿಮಾ ನಟಿ ಸಿಮಿ ಸ್ವತಃ ಬಹಿರಂಗಪಡಿಸಿದ್ದರು. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

    ಸಿಮಿ ಅವರು ಪರಿಪೂರ್ಣ ವ್ಯಕ್ತಿ, ಹಾಸ್ಯ ಪ್ರಜ್ಞೆ ಕೂಡ ಚೆನ್ನಾಗಿತ್ತು, ಸಭ್ಯರು, ಯಾವಾಗಲೂ ಅವರು ಶ್ರೀಮಂತಿಕೆ ತೋರಿಸಿಕೊಂಡವರಲ್ಲ ಎಂದು ಹೇಳಿದ್ದರು. ಇಷ್ಟು ಆತ್ಮೀಯವಾಗಿದ್ದರೂ ರತನ್ ಹಾಗೂ ಸಿಮಿಯ ಗೆಳೆತನ ಹೆಚ್ಚು ದಿನ ಉಳಿಯಲಿಲ್ಲ, ಸಿಮಿ ಬೇರೊಬ್ಬರನ್ನು ಮದುವೆಯಾದರು, ಸಾಕಷ್ಟು ವರ್ಷಗಳ ಕಾಲ ಸಿಮಿ ಹಾಗೂ ರತನ್ ಒಳ್ಳೆಯ ಸ್ನೇಹಿತರಾಗಿದ್ದರು.

    ಸಂದರ್ಶನವೊಂದರಲ್ಲಿ ಸ್ವತಃ ರತನ್ ಟಾಟಾ ಅವರು ನಾಲ್ಕು ಬಾರಿ ಪ್ರೀತಿಯಲ್ಲಿ ಬಿದ್ದಿದ್ದರೂ ಅದು ಮದುವೆಯ ಹಂತವನ್ನು ತಲುಪಲಿಲ್ಲ ಎಂದು ಬಹಿರಂಗಪಡಿಸಿದ್ದರು. 1960 ರ ದಶಕದಲ್ಲಿ ಅಮೆರಿಕದಲ್ಲಿ ಕೆಲಸ ಮಾಡುವಾಗ ರತನ್ ಟಾಟಾ ಬೇರೊಬ್ಬ ಹುಡುಗಿಯನ್ನು ಇಷ್ಟಪಟ್ಟಿದ್ದರು. 1962ರ ಭಾರತ-ಚೀನಾ ಯುದ್ಧ ಸಮಯದಲ್ಲಿ ಅದು ಕೊನೆಗೊಂಡಿತ್ತು. ಏಕೆಂದರೆ ಯುದ್ಧದ ಸಮಯದಲ್ಲಿ ಆಕೆಗೆ ಅಮೆರಿಕವನ್ನು ಬಿಟ್ಟು ಭಾರತಕ್ಕೆ ಹೋಗಲು ಪೋಷಕರು ಅನುಮತಿ ನೀಡಿರಲಿಲ್ಲ. ಇದನ್ನೂ ಓದಿ: ಮೊದಲ ಉದ್ಯಮದಲ್ಲೇ ಯಶಸ್ಸು ಕಂಡಿದ್ದ ಉದ್ಯಮ ಸಾಮ್ರಾಟ

  • ಮೊದಲ ಉದ್ಯಮದಲ್ಲೇ ಯಶಸ್ಸು ಕಂಡಿದ್ದ ಉದ್ಯಮ ಸಾಮ್ರಾಟ

    ಮೊದಲ ಉದ್ಯಮದಲ್ಲೇ ಯಶಸ್ಸು ಕಂಡಿದ್ದ ಉದ್ಯಮ ಸಾಮ್ರಾಟ

    ಮುಂಬೈ: ಉದ್ಯಮಿಯಾಗಿ ಸಾರ್ಥಕ ಬದುಕು ನಡೆಸಿದ ರತನ್‌ ಟಾಟಾ (Ratan Tata) ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ಸಾಧನೆಗಳು ಒಂದೊಂದೇ ಬೆಳಕಿಗೆ ಬರುತ್ತಿವೆ.

    1991ರಲ್ಲಿ ಟಾಟಾ ಗ್ರೂಪ್ಸ್‌ ಅಧ್ಯಕ್ಷರಾಗಿ ನೇಮಕಗೊಂಡ ರತನ್ ಟಾಟಾ ಅವರು ಕೈ ಹಾಕಿದ್ದ ಮೊದಲ ಉದ್ಯಮದಲ್ಲಿ ಜಯಭೇರಿ ಬಾರಿಸಿದ್ದರು. ಇದನ್ನೂ ಓದಿ: ಮಧ್ಯಮ ವರ್ಗದ ಭಾರತೀಯರ ಕನಸು ನನಸು ಮಾಡಿದ್ದ ರತನ್‌ – ಮೊದಲ ದೇಶೀ ಕಾರು ಮಾರುಕಟ್ಟೆಗೆ ಬಂದಿದ್ದು ಯಾವಾಗ?

    ಟಾಟಾ ಸಮೂಹದ ʻದಿ ನ್ಯಾಷನಲ್ ರೇಡಿಯೋʼ ಮತ್ತು ʻಎಲೆಕ್ಟ್ರಾನಿಕ್ ಕಂಪನಿ ಲಿಮಿಟೆಡ್ʼ (Electronic Company Limited) ಅಳಿವಿನಂಚಿನಲ್ಲಿತ್ತು. ಆಗಿನ ಟಾಟಾ ಗ್ರೂಪ್ ಅಧ್ಯಕ್ಷರಾಗಿದ್ದ ಜೆಆರ್‌ಡಿ ಟಾಟಾ ಅವರು ಕಂಪನಿಯ ಪುನಶ್ವೇತನದ ಆಸೆಯನ್ನು ಬಿಟ್ಟಿದ್ದರು. ಅಂತಹ ಸಂದರ್ಭದಲ್ಲಿ ಅಂದರೆ 1971ರಲ್ಲಿ ರತನ್ ಟಾಟಾ ಅವರು ನ್ಯಾಷನಲ್ ರೇಡಿಯೋ ಮತ್ತು ಎಲೆಕ್ಟ್ರಾನಿಕ್ಸ್ ಕಂಪನಿ ಲಿಮಿಟೆಡ್ (ಎನ್‌ಇಎಲ್‌ಸಿಒ)ಗೆ ನಿರ್ದೇಶಕರಾಗಿ ನೇಮಕಗೊಂಡರು.

    ಕಂಪನಿಯ ಸಾಂಪ್ರದಾಯಿಕ ಪದ್ಧತಿಗಳಿಗೆ ಅಂಟಿಕೊಂಡು ಕುಳಿತುಕೊಳ್ಳದ ಅವರು ಆಧುನಿಕ ಹಾಗೂ ಉನ್ನತ ತಂತ್ರಜ್ಞಾನ ಹೊಂದಿದ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸಲು ಕೈ ಹಾಕಿದರು. ಇದರಿಂದ ಎನ್‌ಇಎಲ್‌ಸಿಒ ಹಂತ ಹಂತವಾಗಿ ಚೇತರಿಸಿಕೊಳ್ಳುತ್ತಾ ಸಾಗಿತು. ರತನ್ ಟಾಟಾ ಅವರು ಬರುವ ಮುನ್ನ ಶೇ.2 ರಷ್ಟಿದ್ದ ಕಂಪನಿಯ ಮಾರುಕಟ್ಟೆ ಶೇರು ಶೇ.30ಕ್ಕೇರಿತು. ಹಾಗಾಗಿ ಕಂಪನಿ ನಷ್ಟದ ಭಯದಿಂದ ಆಚೆ ಬಂದಿತ್ತು. ಇದನ್ನೂ ಓದಿ: ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

    ಬಳಿಕ 1975ರ ತುರ್ತು ಪರಿಸ್ಥಿತಿಯಿಂದಾಗಿ ಕಂಪನಿ ವಹಿವಾಟಿನಲ್ಲಿ ಆರ್ಥಿಕ ಹಿನ್ನಡೆ ಕಂಡುಬಂದಿತು. ಸಮಸ್ಯೆ ಅರ್ಥಮಾಡಿಕೊಳ್ಳದ ಕಾರ್ಮಿಕ ಒಕ್ಕೂಟ ಧರಣಿಯಲ್ಲಿ ನಿರತವಾಯಿತು. ಇದರಿಂದ ಉತ್ಪಾದನೆ ಸ್ಥಗಿತವಾಗಿ ಕಂಪನಿಯನ್ನೇ ಮುಚ್ಚಬೇಕಾಯಿತು. ಇದನ್ನೂ ಓದಿ: ಅವಮಾನಿಸಿದ್ದ ಕಂಪನಿಯನ್ನೇ ಖರೀದಿಸಿ ಮೆರೆದಿದ್ದ ಯಶಸ್ವಿ ಉದ್ಯಮಿ ರತನ್‌ ಟಾಟಾ!