Tag: Theerthahalli

  • ಲಾರಿ, ಕಾರಿನ ಮಧ್ಯೆ ಭೀಕರ ಅಪಘಾತ – ಓರ್ವ ಸಾವು

    ಲಾರಿ, ಕಾರಿನ ಮಧ್ಯೆ ಭೀಕರ ಅಪಘಾತ – ಓರ್ವ ಸಾವು

    ಶಿವಮೊಗ್ಗ: ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ನಡೆದಿದೆ.

    ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮೆಟ್ರೋ ದರ ಏರಿಕೆಯಿಂದ BMTCಗೆ ಬಂಪರ್ – ಆದಾಯ 7.25 ಕೋಟಿಗೆ ಏರಿಕೆ

    ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ನಂದಿಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ – ಬಯಲು ಸೀಮೆ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ?

  • ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಶಿವಮೊಗ್ಗ: ಬೆಂಗಳೂರಿನಲ್ಲಿ (Benagluru) ಹತ್ಯೆಯಾಗಿರುವ ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ (Deputy Director) ಪ್ರತಿಮಾ ಅವರು ತಮ್ಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿದ್ದರು. ಆದರೆ ಅಧಿಕಾರಿಯ ಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

    ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಗ್ರಾಮದ ಸುಬ್ಬಣ್ಣ ಎಂಬವರ ಪುತ್ರಿ ಪ್ರತಿಮಾ, ತೀರ್ಥಹಳ್ಳಿಯಲ್ಲಿ ವ್ಯಾಸಂಗ ನಡೆಸಿದ್ದರು. ಕೆಪಿಎಸ್‌ಸಿ ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ (FDA) ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೇರ್ಪಡೆಯಾಗಿದ್ದರು. ನಂತರ ಅದೇ ಇಲಾಖೆಯಲ್ಲಿ ಉಪ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಪ್ರತಿಮಾ ತೀರ್ಥಹಳ್ಳಿ ಮೂಲದ ಸತ್ಯನಾರಾಯಣ ಎಂಬುವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಓರ್ವ ಪುತ್ರ ಸಹ ಇದ್ದ. ಆರಂಭದಲ್ಲಿ ಅನ್ಯೋನ್ಯವಾಗಿದ್ದ ಸಂಸಾರದಲ್ಲಿ ಬರುಬರುತ್ತಾ ಭಿನ್ನಾಭಿಪ್ರಾಯ ಉಂಟಾಗಿದೆ. ಹೀಗಾಗಿ ಈ ದಂಪತಿ ವಿಚ್ಛೇದನ ಪಡೆದಿತ್ತು. ವಿಚ್ಛೇದನದ ಬಳಿಕ ಪುತ್ರ ಪತಿಯ ಜೊತೆಯಲ್ಲೇ ವಾಸವಾಗಿದ್ದ. ಇದನ್ನೂ ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಗಂಡ-ಹೆಂಡತಿ ವಿಚ್ಛೇದನ ಪಡೆದಿದ್ದರಿಂದ ಪ್ರತಿಮಾ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಾಗಿದ್ದರು. ತೀರ್ಥಹಳ್ಳಿಗೆ ಆಗಾಗ ಭೇಟಿ ನೀಡಿ ಪುತ್ರನನ್ನು ನೋಡಿಕೊಂಡು ಹೋಗುತ್ತಿದ್ದರು. ಅಲ್ಲದೇ ಪ್ರತಿಮಾ ಪತಿ ಸತ್ಯನಾರಾಯಣ ತೀರ್ಥಹಳ್ಳಿಯಲ್ಲಿ ಹೊಸ ಮನೆ ಕಟ್ಟಿಸಿದ್ದು, ನೂತನ ಮನೆಯ ಗೃಹ ಪ್ರವೇಶ ಸಮಾರಂಭ ಕಳೆದ ವಾರ ನಡೆದಿತ್ತು. ಈ ಗೃಹ ಪ್ರವೇಶ ಸಮಾರಂಭದಲ್ಲಿ ಪ್ರತಿಮಾ ಭಾಗವಹಿಸಿದ್ದರು.

    ವಿಚ್ಛೇದನ ಪಡೆದಿದ್ದರೂ ಮಗನ ನೋಡುವ ಸಲುವಾಗಿ ಆಗಾಗೆ ಪತಿಯ ಮನೆ ಬಳಿ ಹೋಗುತ್ತಿದ್ದರು. ಆದರೆ ಶನಿವಾರ ರಾತ್ರಿ ನಡೆದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬ ಆಗ್ರಹಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

  • ವೃದ್ಧೆಯ ಕತ್ತು ಹಿಸುಕಿ ಕಳ್ಳರಿಂದ ಹಣ ದೋಚಲು ಯತ್ನ – ಓರ್ವ ಸೆರೆ

    ವೃದ್ಧೆಯ ಕತ್ತು ಹಿಸುಕಿ ಕಳ್ಳರಿಂದ ಹಣ ದೋಚಲು ಯತ್ನ – ಓರ್ವ ಸೆರೆ

    – ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ವೃದ್ಧೆ

    ಶಿವಮೊಗ್ಗ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕತ್ತು ಹಿಸುಕಿ ಯುವಕರಿಬ್ಬರು ಹಣ ದೋಚಲು ಯತ್ನಿಸಿದ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದೆ.

    ಭವಾನಿಯಮ್ಮ (85) ಕೊಲೆಯಾದ ವೃದ್ಧೆ. ಕಟ್ಟೆಹಕ್ಕಲು ಗ್ರಾಮದ ಗಣಪತಿ ದೇವಸ್ಥಾನದ ಮುಂಭಾಗದ ಮನೆಯಲ್ಲಿ ಭವಾನಿಯಮ್ಮ ವಾಸವಾಗಿದ್ದರು. ಭವಾನಿಯಮ್ಮ ಅವರ ಮನೆಗೆ ಶಿವಮೊಗ್ಗದ ಶಿವು ಹಾಗೂ ನಿತಿನ್ ನೀರು ಕೇಳುವ ನೆಪದಲ್ಲಿ ಬಂದಿದ್ದಾರೆ, ವೃದ್ಧೆಯ ಮೇಲೆ ದಾಳಿ ನಡೆಸಿ ಹಣ ದೋಚಲು ಯತ್ನಿಸಿದ್ದಾರೆ. ನಂತರ ವೃದ್ಧೆ ಚೀರಾಟ ನಡೆಸಿದ್ದರಿಂದ ಕಳ್ಳರು ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಸ್ಥಳೀಯರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಘಟನೆಯಿಂದಾಗಿ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಸ್ಥಳೀಯರು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ವೃದ್ದೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಈ ಇಬ್ಬರು ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ದೇವಸ್ಥಾನದ ಆಭರಣ ಹಾಗೂ ಹುಂಡಿ ಕಳ್ಳತನ ನಡೆಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎನ್ನಲಾಗಿದೆ. ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ತಮ್ಮ ಚಾಳಿಯನ್ನು ಮಾತ್ರ ಬಿಡದೇ ಮುಂದುವರಿಸಿದ್ದಾರೆ. ಇವರ ಕಳ್ಳತನದ ದಾಹಕ್ಕೆ ಅಮಾಯಕ ವೃದ್ದೆಯೊಬ್ಬರು ಬಲಿಯಾಗುವಂತೆ ಆಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಆರೋಪಿ ನಿತಿನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿ ಶಿವು ಪತ್ತೆಗೆ ಬಲೆ ಬೀಸಿದ್ದಾರೆ.

     

  • ಸೇತುವೆ ಶಿಥಿಲ- ತೀರ್ಥಹಳ್ಳಿ- ಉಡುಪಿ ಹೆದ್ದಾರಿ ಬಂದ್

    ಸೇತುವೆ ಶಿಥಿಲ- ತೀರ್ಥಹಳ್ಳಿ- ಉಡುಪಿ ಹೆದ್ದಾರಿ ಬಂದ್

    ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಹಾಗೂ ಉಡುಪಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ಸೇತುವೆ ಶಿಥಿಲಗೊಂಡಿದ್ದು, ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೆ ತಾತ್ಕಾಲಿಕವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ.

    ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದ ಬಳಿಯ ಸೇತುವೆ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಎ ಗೆ ನಿರ್ಮಿಸಲಾಗಿರುವ ಸೇತುವೆ ಇದಾಗಿದ್ದು, ತೀರ್ಥಹಳ್ಳಿ- ಉಡುಪಿ ನಡುವೆ ಸಂಪರ್ಕ ಕಲ್ಪಿಸುತ್ತದೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಸೇತುವೆ ಮೇಲೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

    ಇದು 100 ವರ್ಷಕ್ಕೂ ಹಳೆಯ ಸೇತುವೆಯಾಗಿದ್ದು, ಇಟ್ಟಿಗೆಯಿಂದ ನಿರ್ಮಿಸಲಾಗಿದೆ. ಹೀಗಾಗಿಯೇ ಸೇತುವೆ ಶಿಥಿಲಗೊಂಡಿದೆ. ಇನ್ನೆರಡು ದಿನಗಳಲ್ಲಿ ಸೇತುವೆ ದುರಸ್ಥಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುತ್ತೇವೆ ಎಂದು ಎನ್.ಎಚ್. ಅಧಿಕಾರಿ ನಾಗರಾಜನಾಯ್ಕ್ ತಿಳಿಸಿದ್ದಾರೆ.