Tag: therapy

  • ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ಶಾಕ್ – ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ

    ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ಶಾಕ್ – ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ

    ಬೆಂಗಳೂರು: ಇತ್ತೀಚೆಗಷ್ಟೇ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಇದೀಗ ಆ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಘಟನೆಯೊಂದು ಶುಕ್ರವಾರ ಸಂಜೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನ 7ನೇ ಕ್ರಾಸ್‍ನಲ್ಲಿ ನಡೆದಿದೆ.

    9 ವರ್ಷದ ಸಾಯಿ ಚರಣ್ ಗಾಯಕ್ಕೊಳಗಾಗಿರುವ ಬಾಲಕ. ನಾಗಮ್ಮ ನಾಗಲಿಂಗೇಶ್ವರ ದೇವಾಲಯದ ಬಳಿ ಬಸವರಾಜ್ ಮತ್ತು ರೇವತಿ ದಂಪತಿಯ ಪುತ್ರ ಸಾಯಿ ಚರಣ್ ನಿನ್ನೆ ಸಂಜೆ ಸ್ನೇಹಿತರೊಂದಿಗೆ ಬಾಲ್ ಆಟ ಆಡುತ್ತಿದ್ದನು.

    ಈ ವೇಳೆ ವಿದ್ಯುತ್ ಕಂಬದ ಹತ್ತಿರ ಹೋದಾಗ ಕಂಬದಿಂದ ಜೋತು ಬಿದ್ದಿದ್ದ ವಯರ್‌ನಿಂದ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 24 ಗಂಟೆಗಳ ಕಾಲ ಏನೂ ಹೇಳುವುದಕ್ಕೂ ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

    ಬೆಸ್ಕಾಂ ಅಧಿಕಾರಿಗಳು ವಾರಕ್ಕೊಮ್ಮೆ ಕಂಬದ ವಯರ್‌ಗಳು ಕೆಳಗೆ ಬಿದ್ದಿದ್ದರೆ, ಅದನ್ನು ಮೇಲೆ ಎತ್ತಿ ಕಟ್ಟಿ ಹೋಗುತ್ತಿದ್ದಾರೆ. ಆದರೆ ಶಾಶ್ವತ ಪರಿಹಾರ ಮಾಡುತ್ತಿಲ್ಲ. ಘಟನೆ ನಡೆದ ಸ್ಥಳಕ್ಕೆ ಬಾರದ ಅಧಿಕಾರಿಗಳು ಫೋನಿನಲ್ಲಿ ಬಂದು ಪರಿಶೀಲನೆ ಮಾಡುತ್ತೇವೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕು – ಬೆಂಗಳೂರಿನತ್ತ ಸಿಎಂ

    ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕು – ಬೆಂಗಳೂರಿನತ್ತ ಸಿಎಂ

    ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡೇ ದಿನಕ್ಕೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಹೊರಟಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಆರೋಗ್ಯ ಸುಧಾರಿಸಲು ನಾನು ಉಡುಪಿಗೆ ಬಂದಿದ್ದೆ. ಆದರೆ ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ಸೋಮವಾರದಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ಬಾಂಬ್ ಪ್ರಕರಣದಲ್ಲಿ ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಮೂರು ನಾಲ್ಕು ದಿನ ಕಾಪುವಿನಲ್ಲಿ ಆಯುರ್ವೇದಿಕ್ ಚಿಕಿತ್ಸೆಗೆಂದು ಉಳಿದುಕೊಳ್ಳಬೇಕೆಂದಿದ್ದೆ. ಆದರೆ ನಿನ್ನೆಯಿಂದ ನನಗೆ ನೋವನ್ನು ತಡೆದುಕೊಳ್ಳಲಾಗುತ್ತಿಲ್ಲ. ಹೀಗಾಗಿ ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. ಅವರು 27 ರ ನಂತರ ಮತ್ತೆ ಉಡುಪಿಗೆ ಬರಲು ಸೂಚಿಸಿದ್ದಾರೆ. ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ಹೇಳಿದರು.

    ಅತ್ಯಂತ ಮೃಗೀಯ ಘಟನೆ
    ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‍ಸ್ಫೋಟ ಅತ್ಯಂತ ಮೃಗೀಯವಾದ ಘಟನೆಯಾಗಿದೆ. ಈ ಘಟನೆಯಲ್ಲಿ ಅಲ್ಲಿನ ಜನರು ಮತ್ತು ಪ್ರವಾಸಿಗರು ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ಇದು ನಿಜಕ್ಕೂ ಖಂಡನೀಯ. ನಮ್ಮ ರಾಜ್ಯದಿಂದ ಅನೇಕರು ಶ್ರೀಲಂಕಾಗೆ ಪ್ರವಾಸಹೋಗಿದ್ದರು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಮೊದಲು ನಾನು ನೊಂದ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

    ಅದರಲ್ಲೂ ನನ್ನ ಪಕ್ಷದ ಐದು ಜನ ನಾಯಕರು ಮೃತಪಟ್ಟಿದ್ದಾರೆ. ಅವರು ಪಕ್ಷದ ಆಧಾರ ಸ್ತಂಭಗಳಾಗಿದ್ದರು. ಇದರಿಂದ ಪಕ್ಷಕ್ಕೆ ಮತ್ತು ಅವರ ಕುಟುಂಬಕ್ಕೆ ಆಘಾತ ತಂದಿದೆ. ಈ ರೀತಿ ನನ್ನ ಪಕ್ಷದ ನಾಯಕರು ಮೃತಪಡುತ್ತಾರೆ ಎಂದು ನಾನು ಕನಸಿನಲ್ಲೂ ಊಹಿಸಿರಲಿಲ್ಲ. ಹನುಮಂತರಾಯಪ್ಪ, ರಂಗಣ್ಣ, ಶಿವಣ್ಣ, ಲಕ್ಷ್ಮೀನಾರಾಯಣ, ರಮೇಶ್ ನನ್ನ ಜೊತೆ ಬಹಳ ಆತ್ಮೀಯರಾಗಿದ್ದರು. ಈ ಐವರು ನಮ್ಮ ಪಕ್ಷದ ಶಕ್ತಿಯಾಗಿದ್ದು, ಅವರ ಅಗಲಿಕೆಯಿಂದ ನೆಲಮಂಗಲದಲ್ಲಿ 50% ಶಕ್ತಿ ಕುಸಿತವಾಗಿದೆ. ಪ್ರಾಮಾಣಿಕ, ಸಾಮಾಜಿಕ ಸೇವೆ ಮಾಡುವವರನ್ನು ಕಳೆದುಕೊಂಡಿದ್ದೇವೆ ಎಂದು ದುಃಖದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದರು.

    ಸದ್ಯಕ್ಕೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಶ್ರೀಲಂಕಾ ಸಚಿವಾಲಯ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇವೆ. ಈಗಾಗಲೇ ಏಳು ಪಾರ್ಥಿವ ಶರೀರವನ್ನು ಗುರುತಿಸಲಾಗಿದೆ. ಅಧಿಕಾರಿ ಮಂಜುನಾಥ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಗಾಗ ಕರೆ ಮಾಡಿ ನಾನು ಮಾತನಾಡುತ್ತಿದ್ದೇನೆ. ಮರಣೋತ್ತರ ಪ್ರಕ್ರಿಯೆ ಶೀಘ್ರವಾಗಿ ಮುಗಿಸಲು ಮನವಿ ಮಾಡಲಾಗಿದ್ದು, 24 ಗಂಟೆಯೊಳಗೆ ಪಾರ್ಥೀವ ಶರೀರ ಕಳುಹಿಸಲು ಪ್ರಯತ್ನಿಸುತ್ತೇವೆ. ಕೃಷ್ಣಪ್ಪ ಮತ್ತು ಶ್ರೀನಿವಾಸ ಮೂರ್ತಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಜೊತೆಗೆ ಖಾಸಗಿ ಏರ್ ಕಾರ್ ಕಾರ್ಗೋಗೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಬೆಳಗ್ಗೆಯೊಳಗೆ ಮೃತದೇಹ ಕರ್ನಾಟಕಕ್ಕೆ ಬರಬೇಕು. ಈ ಬಗ್ಗೆ ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು.

    https://www.youtube.com/watch?v=iukluBDu-WA

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರು – ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರು – ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ.

    ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ರೀಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಮತ್ತು ಮಕ್ಕಳು ಆಗಮಿಸುತ್ತಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಸಿದ್ದಗಂಗಾ ಮಠಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ. ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

    ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ದರ್ಶನ ಪಡೆದ ಮಹಾತ್ಮ ಗಾಂಧೀಜಿ ಮೊಮ್ಮಗಳು

    ಸಿದ್ದಗಂಗಾ ಶ್ರೀಗಳ ದರ್ಶನ ಪಡೆದ ಮಹಾತ್ಮ ಗಾಂಧೀಜಿ ಮೊಮ್ಮಗಳು

    ತುಮಕೂರು: ಮಹಾತ್ಮ ಗಾಂಧೀಜಿ ಅವರ ಮೊಮ್ಮಗಳಾದ ಸುಮಿತ್ರಾ ರಾಮ್ ದಾಸ್ ಗಾಂಧಿ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದಿದ್ದಾರೆ. ಮಹಾತ್ಮ ಗಾಂಧಿ ಮೂರನೇ ಮಗ ರಾಮ್ ದಾಸ್ ಗಾಂಧಿ ಪುತ್ರಿ ಸಮಿತ್ರಾ ರಾಮ್ ದಾಸ್ ಗಾಂಧಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

    ಸಿದ್ದಗಂಗಾ ಶ್ರೀಗಳಿಗೆ ಆಸ್ಪತ್ರೆಯಲ್ಲೇ ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದು, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬೆಳಗ್ಗೆ ಕಿರಿಯ ಶ್ರೀಗಳ ಸಹಾಯದೊಂದಿಗೆ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದರು.

    ಸಿದ್ದಗಂಗಾ ಮಠಕ್ಕೆ ಬಿಜಿಎಸ್ ವೈದ್ಯ ಡಾ .ರವೀಂದ್ರ ಆಗಮಿಸಿ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದರು. ವೈದ್ಯರು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಮಾಹಿತಿಯಂತೆ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಆಗಿದೆ. ಸ್ವಂತ ಶಕ್ತಿಯಿಂದ ಶ್ರೀಗಳ ಸತತ 3 ರಿಂದ 4 ಗಂಟೆ ಉಸಿರಾಟ ನಡೆಸಿದ್ದಾರೆ. ಶ್ವಾಸಕೋಶದಲ್ಲಿ ನೀರು ಶೇಖರಣೆ ಆಗುತ್ತಿರುವುದರಿಂದ ಅದನ್ನು ಹೊರತೆಗೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಗಳ ಚಿಕಿತ್ಸೆಗೆ ಶಿಷ್ಯರು ಮಂತ್ರ, ಭಜನೆಗಳನ್ನ ಕೇಳಿಸುವ ಮೂಲಕ ಸಹಾಯ ಮಾಡುತ್ತಿದ್ದು, ಇಂದು ಭಾನುವಾರ ಆದ ಕಾರಣ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಮಠದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

    ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

    ಮಂಡ್ಯ: ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯ ಪೀಡಿತರಾಗಿದ್ದು, ಹಾಸಿಗೆ ಹಿಡಿದಿದ್ದಾರೆ.

    ಮಂಡ್ಯ ತಾಲೂಕಿನ ನೊದೇಕೊಪ್ಪಲು ಗ್ರಾಮದವರಾದ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದಾರೆ. ತಿಥಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರಿಗೆ ನಾಲ್ಕು ದಿನಗಳ ಹಿಂದೆ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಅವರಿಗೆ ಮಾತನಾಡಲೂ ಕೂಡ ಕಷ್ಟ ಆಗಿದೆ.

    ಮೊದಲೇ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ್ದರಿಂದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯಕ್ಕೆ ಗಡ್ಡಪ್ಪಗೆ ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಗಡ್ಡಪ್ಪಗೆ ಚಿಕಿತ್ಸೆ ನೀಡಿರುವ ವೈದ್ಯರು ಬೆಡ್ ರೆಸ್ಟ್ ತೆಗೆದುಕೊಳ್ಳಲು ಸೂಚಿಸಿದ್ದಾರೆ. ವೈದ್ಯರ ಸಲಹೆಯಂತೆ ಗಡ್ಡಪ್ಪಗೆ ಸಂಬಂಧಿಕರು ಔಷಧೋಪಚಾರ ಮಾಡುತ್ತಿದ್ದಾರೆ.

    ತಿಥಿ ಸಿನಿಮಾವನ್ನು ಈರೇಗೌಡ ಕಥೆ ರಚಿಸಿ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕರ್ನಾಟಕದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿತ್ತು. ಅಷ್ಟೇ ಅಲ್ಲದೇ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪ್ರಾದೇಶಿಕ ಚಲನಚಿತ್ರ ವಿಭಾಗ ಪ್ರಶಸ್ತಿಗಳಲ್ಲಿ ‘ತಿಥಿ’ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚೆನ್ನೈನಲ್ಲಿಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ – ರಾತ್ರಿ ಪ್ರಸಾದ ಸೇವಿಸಿ, ವಾಕಿಂಗ್ ಮಾಡಿದ್ರು ನಡೆದಾಡುವ ದೇವ್ರು

    ಚೆನ್ನೈನಲ್ಲಿಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ – ರಾತ್ರಿ ಪ್ರಸಾದ ಸೇವಿಸಿ, ವಾಕಿಂಗ್ ಮಾಡಿದ್ರು ನಡೆದಾಡುವ ದೇವ್ರು

    ಚೆನ್ನೈ: ಪಿತ್ತಕೋಶದ ಸೋಂಕಿನಿಂದ ಬಳಲುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಇಂದು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ವಿವಿಧ ಬಗೆಯ ಚಿಕಿತ್ಸೆ ನಡೆಯಲಿದೆ.

    ಈ ಬಗ್ಗೆ ಚರ್ಚೆ ಮಾಡಿರುವ ವೈದ್ಯರು ಇಂದು ಬೆಳಗ್ಗೆ 8.30ಕ್ಕೆ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಮೊದಲನೆಯದಾಗಿ ಅಲ್ಟ್ರಾ ಲೆಪ್ಟೋಸ್ಕೋಪ್, ಎರಡನೆಯದಾಗಿ ಎಂಡೋಸ್ಕೋಪಿ ಈ ಎರಡು ಆಗದೆ ಇದ್ದ ಪಕ್ಷದಲ್ಲಿ ಸರ್ಜರಿ ಮಾಡಬೇಕಾಗುತ್ತೆ ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

    ಅಕಸ್ಮಾತ್ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿರ್ವಾಯತೆ ಸೃಷ್ಟಿಯಾದರೆ ಡಾ.ರೇಲಾ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಶುಕ್ರವಾರ ರಾತ್ರಿ ಪ್ರಸಾದ ಸೇವಿಸಿದ ಶ್ರೀಗಳು ವಾಕಿಂಗ್ ಮಾಡಿದ್ದರು. ಸುತ್ತೂರು ಶ್ರೀಗಳು ಚೆನ್ನೈನ ರೇಲಾ ಆಸ್ಪತ್ರೆಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

    ಶುಕ್ರವಾರ ಶ್ರೀಗಳನ್ನು ತುಮಕೂರಿನ ಸಿದ್ದಗಂಗಾ ಮಠದಿಂದ ರಸ್ತೆಮಾರ್ಗವಾಗಿ ಬೆಂಗಳೂರಿನ ಹೆಚ್‍ಎ ಎಲ್ ವಿಮಾನ ನಿಲ್ದಾಣಕ್ಕೆ ಹೋಗಿದ್ದು, ಬಳಿಕ ಬೆಂಗಳೂರಿನಿಂದ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿದೆ. ವಿಶೇಷ ಏರ್ ಅಂಬುಲೆನ್ಸ್ ಮೂಲಕ ಚೆನ್ನೈನಲ್ಲಿರುವ ಪ್ರತಿಷ್ಠಿತ ರೆಲಾ ವೈದ್ಯಕೀಯ ಸಂಸ್ಥೆಗೆ ಹೋಗಿದ್ದಾರೆ. ಸ್ವಾಮೀಜಿಗಳಿಗೆ ಈಗಾಗಲೇ 5 ಸ್ಟಂಟ್ ಅಳವಡಿಸಲಾಗಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಶ್ರೀಗಳಿಗೆ ಭಾರತದ ಖ್ಯಾತ ಲಿವರ್ ಸ್ಪೆಷಲಿಸ್ಟ್ ಡಾ. ಮೊಹಮ್ಮದ್ ರೇಲಾ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರತಿ ದಿನ ಸೆಕ್ಸ್ ಗೆ ಹಂಬಲಿಸುತ್ತಿದ್ದಾಕೆ ಆತ್ಮಹತ್ಯೆಗೆ ಮುಂದಾದ್ಲು!-ತನ್ನ ವಿಚಿತ್ರ ಕಥೆಯನ್ನ ಬಿಚ್ಚಿಟ್ಟ ಮಹಿಳೆ

    ಪ್ರತಿ ದಿನ ಸೆಕ್ಸ್ ಗೆ ಹಂಬಲಿಸುತ್ತಿದ್ದಾಕೆ ಆತ್ಮಹತ್ಯೆಗೆ ಮುಂದಾದ್ಲು!-ತನ್ನ ವಿಚಿತ್ರ ಕಥೆಯನ್ನ ಬಿಚ್ಚಿಟ್ಟ ಮಹಿಳೆ

    ವಾಷಿಂಗ್ಟನ್ ಡಿಸಿ: ಸೆಕ್ಸ್ ಅಡಿಕ್ಟ್ ಆಗಿದ್ದ 30 ವರ್ಷದ ಮಹಿಳೆಯೊಬ್ಬರು ತಮ್ಮ ಜೀವನದ ಕಥೆಯನ್ನು ಜನರೊಂದಿಗೆ ಹಂಚಿಕೊಂಡಿದ್ದಾರೆ. ತಾವು ಹೇಗೆ ಆತ್ಮಹತ್ಯಗೆ ಪ್ರಯತ್ನಿಸಿದೆ ಮತ್ತು ಭವಿಷ್ಯದಲ್ಲಿ ಜೀವನ ಕಟ್ಟಿಕೊಂಡ ಬಗೆ ಹೇಗೆ ಎಂಬುದರ ಬಗ್ಗೆ ಮಾತನಾಡಿದ್ದಾರೆ.

    ಅಮೆರಿಕಾದ ಟೆಕ್ಸಾಸ್ ನಿವಾಸಿ ಜೆಸ್ ಡೌನಿ ಎಂಬ ಮಹಿಳೆ ನಿಂಫೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು. ನಿಂಫೋನಿಯಾ ಮಹಿಳೆಯರಲ್ಲಿ ಕಾಡುವ ವಿಚಿತ್ರ ಕಾಯಿಲೆಯಾಗಿದ್ದು, ಯಾವಾಗಲೂ ಸೆಕ್ಸ್ ಗಾಗಿ ಹಂಬಲಿಸುತ್ತಿರುತ್ತಾರೆ. ನಿಂಫೋನಿಯಾ ಲಕ್ಷಣ ಹೊಂದಿರುವ ಮಹಿಳೆಯರಲ್ಲಿ ಸೆಕ್ಸ್ ಇಚ್ಚೆ ಅತಿರೇಕದಲ್ಲಿರುತ್ತದೆ.

    ಜೆಸ್ ಹೇಳೋದೇನು?: ನಾನು ಐದು ವರ್ಷದವಳಿದ್ದಾಗ ಸ್ವಂತ ತಂದೆಯೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ನನ್ನ ಪೋಷಕರು ವಿಚ್ಛೇದನ ಪಡೆದಿದ್ದರಿಂದ ರಜಾ ದಿನಗಳಲ್ಲಿ ಮಾತ್ರ ತಂದೆ ಮನೆಯಲ್ಲಿರುತ್ತಿದ್ದೆ. ಅವನು ಸಹ ಸೆಕ್ಸ್ ಅಡಿಕ್ಟ್ ಆಗಿದ್ದು, ಪ್ರತಿನಿತ್ಯ ಮದ್ಯ ಸೇವನೆ ಮಾಡುತ್ತಿದ್ದನು. ತಂದೆ ನಿರಂತರವಾಗಿ ಎರಡು ವರ್ಷಗಳವರೆಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಾ ಬಂದು, ಮುಂದೊಂದು ದಿನ ಏನು ಹೇಳದೆ ತನ್ನ ಹೀನ ಕೃತ್ಯವನ್ನು ನಿಲ್ಲಿಸಿದ್ದ.

    ಸೆಕ್ಸ್ ಅಡಿಕ್ಟ್ ನಿಂದ ಬಳಲುತ್ತಿದ್ದಾಗ ಹಲವು ಬಾರಿ ಅಪರಿಚಿತ ಅಜ್ಞಾತ ಸ್ಥಳದಲ್ಲಿ ಪುರುಷರನ್ನು ಭೇಟಿ ಮಾಡುತ್ತಿದ್ದೆ. ಆದ್ರೆ ನಾನು ಯಾರೊಂದಿಗೆ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿರಲಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿಯೂ ಸಹ ನಾನು ಅನೈತಿಕ ಚಟುವಟಿಕೆಗಳನ್ನು ತೊಡಗಿಕೊಳ್ಳುತ್ತಿದ್ದೆ. ಇದನ್ನೂ ಓದಿಸಮಯವಲ್ಲದ ಸಮಯದಲ್ಲಿ  ಸೆಕ್ಸ್ ಗಾಗಿ ಪೀಡಿಸುತ್ತಿದ್ದ ಪತ್ನಿಯನ್ನು ಕೊಂದೇ ಬಿಟ್ಟ!

    ಉದ್ಯೋಗವೂ ಹೋಯ್ತು: ನಾನು ಕೆಲಸದ ವೇಳೆಯಲ್ಲಿಯೂ ಸೆಕ್ಸ್ ಫಿಲ್ಮ್ ಗಳ ವೀಕ್ಷಣೆ ಮಾಡುತ್ತಿದ್ದೆ. ಆಫೀಸ್ ನ ಕೊಠಡಿಗಳ ಕಿಟಕಿಗಳು ಗಾಜಿನಿಂದ ಮಾಡಲ್ಪಟ್ಟಿದ್ದರಿಂದ ಸೆಕ್ಸ್ ಸಿನಿಮಾಗಳನ್ನು ನೋಡುತ್ತಿರುವುದು ಎಲ್ಲ ಸಹದ್ಯೋಗಿಗಳಿಗೆ ಗೊತ್ತಿತ್ತು. ಮುಂದೊಂದು ದಿನ ಇದೇ ಕಾರಣ ನೀಡಿ ನನ್ನನ್ನು ಕೆಲಸದಿಂದ ತೆಗೆಯಲಾಯ್ತು.

    ಮಾನಸಿಕ ಖಿನ್ನತೆ: ತನಗಿರುವ ಕಾಯಿಲೆಯಿಂದ ಉದ್ಯೋಗ, ಬರುತ್ತಿದ್ದ ಆದಾಯ, ಆರೋಗ್ಯ ಎಲ್ಲವು ಕಳೆದು ಹೋಗಲು ಆರಂಭಿಸಿತು. ಈ ತರಹದ ಘಟನೆಗಳಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ 2014ರಲ್ಲಿ ನಾನು ಸೂಸೈಡ್ ಚೆಕ್ ಲಿಸ್ಟ್ ರೆಡಿ ಮಾಡಲು ಮುಂದಾದೆ. ಮುಂದೆ ನನ್ನ ಸಾವಿನಿಂದ ಯಾರಿಗೂ ತೊಂದರೆ ಆಗಬಾರದೆಂದು ಆತ್ಮಹತ್ಯೆಯ ಪಟ್ಟಿ ತಯಾರಿಸಲು ಸಿದ್ಧತೆ ನಡೆಸಿದೆ. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳದೆ ಇದ್ದರೆ ಲೈಂಗಿಕ ಆಸಕ್ತಿ ನನ್ನನ್ನು ಮದ್ಯ ವ್ಯಸನಿ ಅಥವಾ ಡ್ರಗ್ಸ್ ಸೇವಿಸಲು ಪ್ರೇರಿಸಬಹುದೆಂಬ ವಿಚಾರಗಳು ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದವು.

    ಕೊನೆಗೆ ತನಗಿರುವ ಕಾಯಿಲೆಗೆ ಅಂತ್ಯ ಹಾಡಬೇಕೆಂದು ನಿರ್ಧರಿಸಿ, ಮಾನಸಿಕ ತಜ್ಞರ ಸಲಹೆ ಪಡೆಯಲು ಮುಂದಾದೆ. ಚಿಕಿತ್ಸೆಗೆ ಒಳಗಾದ ಬಳಿಕ ಸೆಕ್ಸ್ ತೊರೆದು ಸುದೀರ್ಘ ಎರಡು ವರ್ಷಗಳ ಕಾಲ ಪ್ರವಾಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

    ಸದ್ಯ ಜೆಸ್ ಗುಣಮುಖರಾಗಿದ್ದು, ತನ್ನಂತೆಯೇ ನಿಂಫೋನಿಯಾ ಕಾಯಿಲೆಯಿಂದ ಬಳಲುವ ಮಹಿಳೆಯರಿಗೆ ಸಲಹೆ ಮತ್ತು ಸೂಕ್ತ ಚಿಕಿತ್ಸೆಯ ಸಹಾಯ ಮಾಡುತ್ತಿದ್ದಾರೆ.

  • ಖಾಸಗಿ ವೈದ್ಯರ ಮುಷ್ಕರದ ಎಫೆಕ್ಟ್- ನಕಲಿ ವೈದ್ಯನ ಬಳಿ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

    ಖಾಸಗಿ ವೈದ್ಯರ ಮುಷ್ಕರದ ಎಫೆಕ್ಟ್- ನಕಲಿ ವೈದ್ಯನ ಬಳಿ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

    ಚಿಕ್ಕಬಳ್ಳಾಪುರ: ರಾಜ್ಯಾದ್ಯಾಂತ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ನಕಲಿ ವೈದ್ಯರಿಗೆ ವರ ಎಂಬಂತಾಗಿದೆ. ಚಿಕಿತ್ಸೆ ನೀಡುವ ಹೆಸರಿನಲ್ಲಿ ದುಡ್ಡು ಮಾಡೋಕೆ ಹೋದ ನಕಲಿ ವೈದ್ಯ ಅಮಾಯಕ ವ್ಯಕ್ತಿಯನ್ನು ಬಲಿ ಪಡೆದಿದ್ದಾನೆ.

    ಬಾಗೇಪಲ್ಲಿ ತಾಲೂಕು ಘಂಟವಾರಿಪಲ್ಲಿ ಗ್ರಾಮದ 40 ವರ್ಷದ ನರಸಪ್ಪ ಮೃತ ದುರ್ದೈವಿ. ಕೈಗೆ ಗಾಯವಾದ ಕಾರಣ ಪ್ರಾಥಮಿಕ ಚಿಕಿತ್ಸೆಗೆ ನರಸಪ್ಪ ಪಟ್ಟಣದ ಟಿಬಿ ಕ್ರಾಸ್ ನ ಅಶ್ವಿನಿ ಕ್ಲಿನಿಕ್ ತೆರಳಿದ್ದಾರೆ. ಕ್ಲಿನಿಕ್‍ನಲ್ಲಿ ಆಂಧ್ರ ಮೂಲದ ಆರ್‍ಎಂಪಿ ವೈದ್ಯ ಇನಾಯತ್ ಉಲ್ಲಾ ಎಂಬಾತ ಚಿಕಿತ್ಸೆ ನೀಡಿದ್ದಾನೆ. ಚಿಕಿತ್ಸೆ ಪಡೆದ ನಂತರ ನರಸಪ್ಪ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.

    ನರಸಪ್ಪ ಮೃತಪಟ್ಟ ಕೂಡಲೇ ಖುದ್ದು ನಕಲಿ ವೈದ್ಯ ಇನಾಯತ್ ಉಲ್ಲಾ ನರಸಪ್ಪ ರನ್ನು ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ನಾಟಕವಾಡಿದ್ದಾನೆ. ಆದರೆ ಅಷ್ಟರಲ್ಲಿ ವಿಷಯ ತಿಳಿದ ಮೃತನ ಸಂಬಂಧಿಕರು ಹಾಗೂ ಘಂಟವಾರಿಪಲ್ಲಿ ಗ್ರಾಮಸ್ಥರು ನಕಲಿ ವೈದ್ಯನನ್ನು ತರಾಟೆಗೆ ತೆಗೆದುಕೊಂಡು ಬಾಗೇಪಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಾಗೇಪಲ್ಲಿ ಪೊಲೀಸರು ಇನಾಯತ್ ಉಲ್ಲಾನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.