ಗದಗ: ಇಲ್ಲಿನ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಯುವಕ ಭಯದಿಂದ ತೆಂಗಿನ ಮರವೇರಿ ಕುಳಿತ ಘಟನೆ ನಡೆದಿದೆ.
ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು 40 ಅಡಿ ಎತ್ತರದ ತೆಂಗಿನ ಮರವನ್ನು ಏರಿ ಕುಳಿತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಕಬ್ಬೂರು ಗ್ರಾಮದ ನಿವಾಸಿಯಾಗಿರುವ ಬಸವರಾಜ್, ನಸುಕಿನ ಜಾವ ರೈಲಿನಲ್ಲಿ ಬಂದು ಗದಗದಲ್ಲಿ ಇಳಿದಿದ್ದ. ನಂತರ ವಿವೇಕಾನಂದ ಬಡಾವಣೆಯ ಮನೆ ಬಾಗಿಲು ಬಡಿದಿದ್ದ ಎನ್ನಲಾಗಿದೆ. ಇದನ್ನೂ ಓದಿ: ದಾವಣಗೆರೆ | ಇಬ್ಬರು ಬೈಕ್ ಕಳ್ಳರ ಬಂಧನ – 16.52 ಲಕ್ಷ ಮೌಲ್ಯದ 30 ಬೈಕ್ ವಶಕ್ಕೆ
ಇದರಿಂದ ಭಯಗೊಂಡ ಸ್ಥಳೀಯರು ಆತನನ್ನು ಕಳ್ಳ ಎಂದು ಶಂಕಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ವಾಹನದ ಸೈರನ್ ಶಬ್ದ ಕೇಳುತ್ತಿದ್ದಂತೆ ಭಯಗೊಂಡ ಬಸವರಾಜ್, ತಪ್ಪಿಸಿಕೊಳ್ಳಲು ತೆಂಗಿನ ಮರ ಏರಿದ್ದ.
ಸ್ಥಳೀಯರು ಕೆಳಗೆ ಇಳಿಯುವಂತೆ ಸಾಕಷ್ಟು ಮನವಿ ಮಾಡಿಕೊಂಡರೂ ಇಳಿಯದೇ ಸುಮಾರು ಎರಡರಿಂದ ಮೂರು ಗಂಟೆಗೂ ಹೆಚ್ಚು ಕಾಲ ಮರದಲ್ಲೇ ಕುಳಿತಿದ್ದ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಸುರಕ್ಷಿತವಾಗಿ ಆತನನ್ನು ಕೆಳಗಿಳಿಸಿದ್ದಾರೆ. ನಂತರ ಯುವಕನನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣ ವ್ಯಾಪ್ತಿಯ ಚೆಂಗದಾರಹಳ್ಳಿ ಗ್ರಾಮದ ರೋಡ್ ಮಾರಿಯಮ್ಮ ದೇವಸ್ಥಾನದಲ್ಲಿ ಮೇ 19ರಂದು ದೇವರ ಕೊರಳಿಗೆ ಹಾಕಿದ್ದ 10 ಗ್ರಾಂ ಚಿನ್ನದ ತಾಳಿಯನ್ನು ಈತ ಕಳ್ಳತನ ಮಾಡಿದ್ದ. ಈ ಸಂಬಂಧ ಅರ್ಚಕ ರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಕೌದಳ್ಳಿಯ ಗಿರವಿ ಅಂಗಡಿಯಲ್ಲಿ ದೇವಸ್ಥಾನದ ಚಿನ್ನದ ತಾಳಿ ಮಾರಾಟ ಮಾಡಲು ನಿಂತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಯ ನಂತರ ದೇವಸ್ಥಾನದ ಗರ್ಭಗುಡಿಯ ದೇವರ ಮೇಲಿದ್ದ 10 ಗ್ರಾಂ ಚಿನ್ನದ ತಾಳಿಯನ್ನು ಕದ್ದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!
ಕೋಲಾರ: 7ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್‌ಗಳಲ್ಲಿ ಸರಣಿ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಕೋಲಾರ ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಶೆಟರ್ ಮುರಿದು ಸರಣಿ ಕಳವು ಮಾಡಲಾಗಿದೆ. ಅಪೊಲೊ ಮೆಡಿಕಲ್ಸ್, ಮೆಡ್ ಪ್ಲಸ್ ಸೇರಿ ದಿನಸಿ ಸಾಮಗ್ರಿ ಮಾರ್ಟ್‌ಗಳಲ್ಲಿ ಕಳವು ಮಾಡಿರುವ ಕಳ್ಳರ ಕೈ ಚಳಕ ಅಂಗಡಿಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿಗಳಲ್ಲಿ ಸೆರೆಯಾಗಿದೆ. ರಾಡ್‌ನಿಂದ ಮುಂಭಾಗದ ಬಾಗಿಲು ಒಡೆದು ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ನೇಮಕ ವಿಚಾರದಲ್ಲಿ ಗಲಾಟೆ – ಕೇಂದ್ರಕ್ಕೆ ಸ್ಥಳೀಯರಿಂದಲೇ ಬೀಗ
ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಬೆರಳಚ್ಚು ತಂಡ ಹಾಗೂ ಶ್ವಾನ ದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಹುಟುಕಾಟಕ್ಕೆ ಮುಂದಾಗಿದ್ದಾರೆ. ಇನ್ನೂ ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನ ಆದಷ್ಟು ಬೇಗ ಪತ್ತೆಹಚ್ಚುವ ಮೂಲಕ ಕೋಲಾರ ನಗರ ಜನರ ಆತಂಕವನ್ನ ದೂರ ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್. ಅಶೋಕ್
ತುಮಕೂರು: ಪೊಲೀಸ್ ಕಸ್ಟಡಿಯಿಂದ (Police Custody) ಕಳ್ಳ (Thief) ಎಸ್ಕೇಪ್ ಆದ ಹಿನ್ನೆಲೆ ಗುಬ್ಬಿ ಪೊಲೀಸ್ ಠಾಣೆ ಪಿಎಸ್‌ಐ (PSI) ಸೇರಿ ಐವರು ಪೊಲೀಸರನ್ನು ಅಮಾನತು (Suspend) ಮಾಡಲಾಗಿದೆ.
ಪಿಎಸ್‌ಐ ದೇವಿಕಾ, ಮೂವರು ಹೆಡ್ ಕಾನ್ಸ್ಟೇಬಲ್, ಒಬ್ಬ ಪೊಲೀಸ್ ಪೇದೆ ಸೇರಿ ಒಟ್ಟು ಐವರನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯಲೋಪ ಹಿನ್ನೆಲೆ ಪಿಎಸ್‌ಐ ಸೇರಿ ಐವರು ಪೊಲೀಸರು ಅಮಾನತು ಮಾಡಿದ್ದು, ತುಮಕೂರು ಎಸ್‌ಪಿ ಅಶೋಕ್ ಕೆವಿ ಐವರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಗುಬ್ಬಿ ಠಾಣೆಗೆ ಕರೆತಂದಿದ್ದರು. ಕಳೆದ ಗುರುವಾರ ಬೆಳಗ್ಗಿನಜಾವ 4 ಗಂಟೆಯಲ್ಲಿ ಆರೋಪಿ ಠಾಣೆಯಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಮುಸ್ಲಿಮರ ತುಷ್ಟೀಕರಣಕ್ಕೆ ಶುಕ್ರವಾರ ಮಧ್ಯಾಹ್ನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಗದಿ: ಮುತಾಲಿಕ್ ಆರೋಪ
ಆರೋಪಿ ಸೈಯದ್ ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿ ಆಗಿದ್ದು, ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಸದ್ಯ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದ್ದು, ಮೂರು ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊಡಗಿನ ಚೇಲವಾರ ಫಾಲ್ಸ್‌ನಲ್ಲಿ ಮುಳುಗಿ ಕೇರಳದ ಯುವಕ ಸಾವು
ಕಲಬುರಗಿ: ನಗರದಲ್ಲಿ ಮತ್ತೆ ಪೊಲೀಸರ (Kalaburgi) ಕಳ್ಳಾಟ ಬಯಲಾಗಿದ್ದು, ಈ ಬಾರಿ ಮಹಿಳಾ ಪೇದೆಯ (Women Constable) ಮೊಬೈಲ್ ನಂಬರ್‌ನ ಸಿಡಿಆರ್ (ಕರೆ ವಿವರದ ದಾಖಲೆಗಳು) ಅನ್ನು ಕಳ್ಳನಿಗೆ ಪೊಲೀಸರು ಮಾರಾಟ ಮಾಡಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಮಹಿಳಾ ಪೇದೆಗೆ ಒನ್ ಸೈಡ್ ಲವ್ (Onne Side Love) ಮಾಡುತ್ತಿದ್ದ ಅಶೋಕ ನಗರ ಠಾಣಾ ವ್ಯಾಪ್ತಿಯ ಕಳ್ಳನಾದ ಮಹೇಶ್ ಎಂಬವನಿಗೆ ಪೊಲೀಸರು (Police) ಸಿಡಿಆರ್ ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ಅನುದಾನ ಖಾಲಿ – 3 ವರ್ಷ ಜಾರಿಯಿದ್ದ ಮಹಿಳಾ ಪರ ಯೋಜನೆ ಸ್ಥಗಿತ
ಈ ಸಿಡಿಆರ್ ಬಳಸಿ ಆ ಕಳ್ಳ ಮಹಿಳಾ ಪೇದೆಗೆ ಪ್ರೀತಿಸುವಂತೆ ಮಾನಸಿಕ ಕಿರುಕುಳ ನೀಡಿದ್ದಾನೆ. ಪೇದೆ ಪ್ರೀತಿಯನ್ನು ಒಪ್ಪದಾಗ ಕರೆ ಮಾಹಿತಿಯನ್ನು ಆಕೆಯ ಜೊತೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಕಳುಹಿಸಿ ನಾವಿಬ್ಬರು ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಕಳ್ಳನ ಮಾತನ್ನು ನಂಬಿದ ಆ ಯುವಕ ಮಹಿಳಾ ಪೇದೆ ಜೊತೆ ಮಾಡಿಕೊಂಡಿದ್ದ ನಿಶ್ಚಿತಾರ್ಥವನ್ನು ರದ್ದು ಮಾಡಿದ್ದಾನೆ.
ನೊಂದ ಪೇದೆ ಈಗ ಸಿಡಿಆರ್ ನೀಡಿರುವ ಅಧಿಕಾರಿಗಳ ವಿರುದ್ಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ್ ಗೆ ದೂರು ನೀಡಿದ್ದಾರೆ. ತನಿಖೆ ವೇಳೆ ಮಹಿಳಾ ಠಾಣೆಯಲ್ಲಿ ದಾಖಲಾದ ಕ್ರೈ ನಂಬರ್ 47 ರ ತನಿಖೆ ಹೆಸರಲ್ಲಿ ಮಹಿಳಾ ಪೇದೆ ನಂಬರ್ ಸೇರಿಸಿ ಸಿಡಿಆರ್ ಕೊಟ್ಟಿರುವ ವಿಷಯ ಬೆಳಕಿಗೆ ಬಂದಿದೆ.
– ಗರ್ಲ್‌ಫ್ರೆಂಡ್ ಜೊತೆ ಕ್ಯಸಿನೋದಲ್ಲಿ ಹೆಡೆಮುರಿಕಟ್ಟಿದ ಪೊಲೀಸರು
ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ ಕೆಜಿ ಕೆಜಿ ಚಿನ್ನ (Gold) ದೋಚುತ್ತಿದ್ದ (Theft) ಖತರ್ನಾಕ್ ಕಳ್ಳನನ್ನು ಗೋವಿಂದರಾಜನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಬೆಂಗಳೂರಿನ (Bengaluru) ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ (Escape Karthik) ಅರೆಸ್ಟ್ ಆಗಿದ್ದಾನೆ. ಆರೋಪಿ ಬಳಿಯಿಂದ ಬರೋಬ್ಬರಿ 1 ಕೆಜಿ 200 ಗ್ರಾಂ ಕದ್ದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ಬೆಂಗಳೂರಿನಲ್ಲಿ 83 ಕ್ಕೂ ಹೆಚ್ಚು ಮನೆಗಳ್ಳತನ ಕೇಸ್‌ಗಳಿವೆ. ನಗರ ಮಾತ್ರವಲ್ಲದೆ ಕರ್ನಾಟಕದ ಬೇರೆ ಭಾಗಗಳಲ್ಲಿಯೂ ಕಳ್ಳತನದ ಆರೋಪವಿದೆ.
ಕೊಳಚೆ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಚಿನ್ನ:
ಎಸ್ಕೇಪ್ ಕಾರ್ತಿಕ್ ಮನೆಯೊಂದರಲ್ಲಿ ಮುಕ್ಕಾಲು ಕೆಜಿ ಚಿನ್ನವನ್ನು ಕದ್ದು ತನ್ನ ಗರ್ಲ್‌ಫ್ರೆಂಡ್ ಜೊತೆ ಗೋವಾದ ಕ್ಯಸಿನೋಗೆ ಹೊರಟಿದ್ದ. ಆದರೆ ರೈಲು ತಡವಾಗಿದ್ದರಿಂದ ಕದ್ದಿದ್ದ ಚಿನ್ನವನ್ನು ಅಡವಿಡಲಾಗದೇ ಖತರ್ನಾಕ್ ಪ್ಲ್ಯಾನ್ ಮಾಡಿ ಕೊಳಚೆ ಪ್ರದೇಶದಲ್ಲಿ ಹೂತಿಟ್ಟು ಎಸ್ಕೇಪ್ ಆಗಿದ್ದ.
ಓಕಳಿಪುರಂನಲ್ಲಿ ರೈಲ್ವೆ ಕಾಲೋನಿಯಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಕಾರ್ತಿಕ್ ಯಾರೂ ಓಡಾಡದ ಕೊಳಚೆ ಜಾಗದಲ್ಲಿ 2 ಅಡಿ ಗುಂಡಿ ತೆಗೆದು ಕದ್ದ ಚಿನ್ನವನ್ನು ಹೂತಿಟ್ಟಿದ್ದ. ಗುಂಡಿ ತೆಗೆದ ಜಾಗದಲ್ಲಿ ಗುರುತಿಗೆ ಮೇಲೆ ಕಲ್ಲೊಂದನ್ನು ಇಟ್ಟಿದ್ದ. ಬಳಿಕ ಗರ್ಲ್‌ಫ್ರೆಂಡ್ ಜೊತೆ ಗೋವಾಕ್ಕೆ ಹೋಗಿದ್ದ.
ಕೆಲ ದಿನಗಳ ಹಿಂದೆ ಗೋವಾದ ಕ್ಯಸಿನೋದಲ್ಲಿ ಗೆಳತಿಯ ಜೊತೆ ಸಿಕ್ಕಿಬಿದ್ದಿದ್ದ ಆರೋಪಿ ಕದ್ದ ಚಿನ್ನ ಎಲ್ಲಿಟ್ಟಿದ್ದ ಎಂಬುದನ್ನು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಚಿನ್ನವನ್ನು ಹೂತಿಟ್ಟಿದ್ದ ಜಾಗ ಕಂಡು ಪೊಲೀಸರೇ ದಂಗಾಗಿದ್ದಾರೆ. ಮುಕ್ಕಾಲು ಕೆಜಿ ಚಿನ್ನವನ್ನು ಮಣ್ಣಿನಿಂದ ಕಾರ್ತಿಕ್ ಹೊರಗೆ ತೆಗೆದು ಗೋವಿಂದರಾಜನಗರ ಪೊಲೀಸರ ಕೈಗೆ ಕೊಟ್ಟಿದ್ದಾನೆ. ಇದನ್ನೂ ಓದಿ: ಸೌದಿಯಲ್ಲಿ 11 ತಿಂಗಳ ಜೈಲುವಾಸದ ಬಳಿಕ ಯುವಕ ತಾಯ್ನಾಡಿಗೆ ವಾಪಸ್
ಚನ್ನೈ, ತಿರುಪತಿ ಸೇರಿದಂತೆ ಬೇರೆ ಬೇರೆ ರಾಜ್ಯದಲ್ಲಿಯೂ ಕಳ್ಳತನ ಮಾಡುತ್ತಿದ್ದ ಕಾರ್ತಿಕ್ ವಿರುದ್ಧ ನ್ಯಾಯಾಲಯದಿಂದ 18 ಅರೆಸ್ಟ್ ವಾರೆಂಟ್ ಬಾಕಿ ಇತ್ತು. ಆರೋಪಿ ಕಾರ್ತಿಕ್ ಒಂಟಿ ಮನೆಗಳನ್ನು ಮತ್ತು ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಯಾವಾಗಲೂ ಒಂಟಿಯಾಗಿ ಕಳ್ಳತನ ಮಾಡುತ್ತಿದ್ದ ಕಾರ್ತಿಕ್ ಈ ಬಾರಿ ಇಬ್ಬರು ಸಹಚಚರ ಜೊತೆಗೆ ಕಳ್ಳತನ ಮಾಡಿದ್ದಾನೆ.
ಈ ಹಿಂದೆ ಕೊಲೆ ಕೇಸ್‌ಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಜೊತೆಗೆ ಸೇರಿಸಿಕೊಂಡು ಕಾರ್ತಿಕ್ ಕಳ್ಳತನ ಮಾಡುತ್ತಿದ್ದ. ಕದ್ದ ಚಿನ್ನವನ್ನು ಒಂದೇ ಕಡೆ ಅಡವಿಡುತ್ತಿದ್ದ. ನಂತರ ಗರ್ಲ್‌ಫ್ರೆಂಡ್ ಜೊತೆ ಗೋವಾದ ಕ್ಯಸಿನೋಗೆ ಹೋಗಿ ಆ ಹಣ ಖರ್ಚು ಮಾಡುತ್ತಿದ್ದ. ಸದ್ಯ ಆರೋಪಿ ಬಳಿಯಿಂದ 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಶಿವಾಜಿಗೆ ಅಪಮಾನ – ಧಾರವಾಡದ ಇಬ್ಬರು ಅರೆಸ್ಟ್
ರಾಮನಗರ: ಕನಕಪುರ (Kanakapura) ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಮನೆಗಳ್ಳರನ್ನು (Thief) ಬಂಧಿಸಿ 17 ಲಕ್ಷ ಮೌಲ್ಯದ 290 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ, ಕನಕಪುರ ತಾಲೂಕಿನ ಬಸವೇಶ್ವರ ನಗರದ ನಿವಾಸಿ ವನಿತಾ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಕನಕಪುರ ಪೊಲೀಸ್ ಠಾಣೆಯಲ್ಲಿ ಮನೆ ಒಡತಿ ವನಿತಾ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಕನಕಪುರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಐಎನ್‌ಎಸ್ ಗರುಡ ರನ್‌ವೇಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನ – ಓರ್ವ ಸಿಬ್ಬಂದಿ ಸಾವು
ಶಿವಮೊಗ್ಗ ಮೂಲದ ಜಾವೀದ್ ಅಲಿ ಹಾಗೂ ಬೆಂಗಳೂರು ಮೂಲದ ಮೀರ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 290 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮುಕೇಶ್ ಅಂಬಾನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್
ಚಿಕ್ಕೋಡಿ: ಟೊಮೆಟೋ (Tomato) ಕಳ್ಳತನ ಮಾಡುವಾಗ ವ್ಯಕ್ತಿಯೋರ್ವ ರೆಡ್ ಹ್ಯಾಂಡ್ ಆಗಿ ರೈತನ ಕೈಯಲ್ಲಿ ಸಿಕ್ಕಿಬಿದ್ದ ಘಟನೆ ಬೆಳಗಾವಿ (Belegavi) ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ.
ಟೊಮೆಟೋ ಬೆಳೆದಿದ್ದ ರೈತ ಕುಮಾರ್ ಅಲಗೌಂಡ ಗೂಡೋಡಗಿ ಕೈಯಲ್ಲಿ ಟೊಮೆಟೋ ಕಳ್ಳತನ (Theft) ಮಾಡುವಾಗ ಕಳ್ಳ ಭುಜಪ್ಪ ಗಾಣೀಗೇರ ಸಿಕ್ಕಿಬಿದ್ದಿದ್ದಾನೆ. ಯಲ್ಪಾರಟ್ಟಿ ಗ್ರಾಮದಲ್ಲಿ ಅರ್ಧ ಎಕರೆ ಜಾಗದಲ್ಲಿ ರೈತ ಟೊಮೆಟೋ ಬೆಳೆದಿದ್ದ. ಕಳೆದ 2 ಬಾರಿ 25 ಕೆಜಿಯ 200 ಟ್ರೇ ಟೊಮೆಟೋ ಕಳ್ಳತನವಾಗಿದ್ದರಿಂದ ರೈತ ಎಚ್ಚೆತ್ತುಕೊಂಡಿದ್ದು, ಮಂಗಳವಾರ ಬೆಳ್ಳಂ ಬೆಳಗ್ಗೆ 5:30ರ ಸುಮಾರಿಗೆ ಕಳ್ಳತನ ಮಾಡುವಾಗ ಭುಜಪ್ಪ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು 41 ಲಕ್ಷ ಕಳೆದುಕೊಂಡ ಯುವಕ
ಯಲ್ಪಾರಟ್ಟಿ ಗ್ರಾಮದ ಪಕ್ಕದ ಗ್ರಾಮ ಸಿದ್ದಾಪುರ ನಿವಾಸಿ ಭುಜಪ್ಪ ಗಾಣಿಗೇರ ಕಳೆದ ಹಲವು ದಿನಗಳಿಂದ ಟೊಮೆಟೋ ಕಳ್ಳತನ ಮಾಡುತ್ತಿದ್ದ ಎಂದು ರೈತ ಕುಮಾರ್ ಆರೋಪಿಸಿದ್ದಾರೆ. ಕಳ್ಳತನ ಮಾಡುವದನ್ನು ಗಮನಿಸಿ 112ಕ್ಕೆ ಕರೆ ಮಾಡಿದ್ದು, ಟೊಮೆಟೋ ಕಳ್ಳ ಭುಜಪ್ಪ ಗಾಣಿಗೇರನನ್ನು ಸ್ಥಳೀಯರ ಸಹಾಯದಿಂದ ಪೋಲಿಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತರಕಾರಿ ಬೆಲೆಯೂ ತುಟ್ಟಿ – ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ; ಯಾವ ತರಕಾರಿಗೆ ಎಷ್ಟು ದರ?
ಹಾಸನ: ಉಪಕರಣಗಳ ಸಮೇತ ಮಸೀದಿಗೆ (Mosque) ನುಗ್ಗಿದ ಖತರ್ನಾಕ್ ಕಳ್ಳ (Thief) ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ಹಾಸನ (Hassana) ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ.
ತಡರಾತ್ರಿ ಖುಬಾ ಮಸೀದಿಗೆ ಬಂದಿರುವ ಕಳ್ಳ ಕೆಲಕಾಲ ಹೊಂಚು ಹಾಕಿದ್ದಾನೆ. ನಂತರ ಗೇಟ್ ಹಾರಿ ಒಳಬಂದಿರುವ ಚೋರ ಮಸೀದಿಯ ಮುಖ್ಯದ್ವಾರದ ಬೀಗ ಮುರಿದು ಹುಂಡಿ ಕದಿಯಲು ಯತ್ನಿಸಿದ್ದಾನೆ. ಇದು ಸಾಧ್ಯವಾಗದಿದ್ದಾಗ ಮಸೀದಿಯ ಕಚೇರಿಯ ಬೀಗ ಮುರಿದು ಒಳ್ಳನುಗ್ಗಿದ್ದಾನೆ. ಅಲ್ಲಿದ್ದ ಕಂಪ್ಯೂಟರ್ ಹಾಗೂ ಕೆನಾನ್ ಕ್ಯಾಮೆರಾವನ್ನು ಕದ್ದೊಯ್ದಿದ್ದಾನೆ.
ಕಳ್ಳತನದ ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು 3 ಲಕ್ಷ ರೂ. ಬೆಲೆಬಾಳುವ ಕಂಪ್ಯೂಟರ್, ಕ್ಯಾಮೆರಾ ಕಳುವಾಗಿದೆ. ರಾತ್ರಿ ಮಳೆ ಬರುತ್ತಿದ್ದ ಕಾರಣ ಪ್ರಮುಖ ಪತ್ರಿಕೆಯ ಛಾಯಾಗ್ರಾಹಕ ಅತೀಕ್ ಉರ್ ರೆಹಮಾನ್ ತಮ್ಮ ಕ್ಯಾಮೆರಾವನ್ನು ಮಸೀದಿಯ ಕಚೇರಿಯಲ್ಲಿಟ್ಟು ಮನೆಗೆ ತೆರಳಿದ್ದರು. ಆ ಕ್ಯಾಮೆರಾದೊಂದಿಗೆ ಕಳ್ಳ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: 3 ದಿನಗಳ ಹಿಂದೆ ಉದ್ಘಾಟನೆಗೊಂಡಿದ್ದ ವಂದೇ ಭಾರತ್ ರೈಲಿಗೆ ಮಳೆಯಿಂದ ಹಾನಿ – ಸಂಚಾರ ಸ್ಥಗಿತ