ನವದೆಹಲಿ: ಮನೆಯೊಂದರಲ್ಲಿ ಕಳ್ಳತನ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ಸೆಕ್ಟರ್ 63 ಪೊಲೀಸ್ ಠಾಣೆ ವ್ಯಾಪ್ತಿಯ ಚೋಟ್‍ಪುರ್ ಗ್ರಾಮದಲ್ಲಿ ಜನರು ಕಳ್ಳನನ್ನು ಹಿಡಿದು ಬೆಳಿಗ್ಗೆ 5.30 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಒಂದು ಪಿಸ್ತೂಲ್ ಮತ್ತು ಕೆಲವು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ತೀವ್ರವಾಗಿ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ
ಮೃತ ವ್ಯಕ್ತಿಯನ್ನು ಪಂಕಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಕನ್ನೌಜ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ಚೋಟ್‍ಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಜಿಗಿಯುತ್ತಿದ್ದ ವೇಳೆ ಶಬ್ಧ ಕೇಳಿಸಿಕೊಂಡ ಕೆಲವು ಸ್ಥಳೀಯ ನಿವಾಸಿಗಳು ಶೀಘ್ರವೇ ಆತನನ್ನು ಹಿಡಿದಿದ್ದಾರೆ. ಈ ವೇಳೆ ಕಳ್ಳ ತನ್ನ ಬಳಿ ಇದ್ದ ಪಿಸ್ತೂಲ್ ಹೊರ ತೆಗೆದಿದ್ದಾನೆ. ಆಗ ಅಲ್ಲಿದ್ದ ಸ್ಥಳೀಯರು ಆತನನ್ನು ಚೆನ್ನಾಗಿ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox copy: ಮೋದಿ ವ್ಯಂಗ್ಯ
ಚಿಕ್ಕೋಡಿ: ಕೈ, ಕಾಲು ಕಟ್ಟಿ ಹಾಕಿ ಸಿನಿಮಾ ರೀತಿಯಲ್ಲಿ ಮನೆಯನ್ನ ದರೋಡೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಪಟ್ಟಣದ ಹೊರವಲಯದಲ್ಲಿರುವ ಎರಡು ಮನೆಗಳಲ್ಲಿ ದರೋಡೆ ಮಾಡಲಾಗಿದ್ದು ,ಇದರಲ್ಲಿ ರಾಮ ಕಿಲ್ಲೆದಾರ ಅವರ ಮನೆಯಲ್ಲಿ ಯಾರು ಇಲ್ಲದಿದಾಗ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಕುಂತಲಾ ಕಿಲ್ಲೆದಾರ ಅವರ ಮನೆಗೆ ನುಗ್ಗಿ ಮನೆಯಲ್ಲಿದ್ದ ವೃದ್ಧೆ ಶಕುಂತಲಾ ಸೇರಿದಂತೆ ಮೂವರನ್ನ ಕೈಕಾಲು ಕಟ್ಟಿ ,ಕುತ್ತಿಗೆಗೆ ಚಾಕು ಹಿಡಿದು ಹೆದರಿಸಿ ಕಳ್ಳತನ ಮಾಡಲಾಗಿದೆ. ಇದನ್ನೂ ಓದಿ: ನೀನು ಜಮೀರ್ ಥರಾ ಆಡ್ತೀಯಲ್ಲೋ – ರೇಣುಕಾಚಾರ್ಯಗೆ ಮಾತಿನಿಂದ ತಿವಿದ ಬಿಎಸ್‍ವೈ
ಈ ಎರಡು ಮನೆಯಲ್ಲಿ ಒಟ್ಟು 140 ಗ್ರಾಂ ಚಿನ್ನ ,ಹಾಗೂ 75 ಸಾವಿರ ನಗದು ದೋಚಿ ಕಳ್ಳರ ಪರಾರಿಯಾಗಿದ್ದಾರೆ. ಸುಮಾರು ಎಂಟರಿಂದ ಹತ್ತು ಜನರು ಗುಂಪು ಏಕಾಏಕಿ ಮನೆಗೆ ನುಗ್ಗಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮನೆಯಲ್ಲಿದ್ದ ಮೂವರನ್ನು ಕಟ್ಟಿ ಹಾಕಿದ್ದಾರೆ. ಹಾಗೂ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿ ಮನೆಯಲ್ಲಿದ್ದ ಚಿನ್ನ ,ನಗದು ಹಣ ದರೋಡೆ ಮಾಡಿದ್ದಾರೆ ಎಂದು ಘಟನೆ ಕುರಿತು ಕುಟುಂಸ್ಥರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ
ಘಟನೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಭೇಟಿ ನೀಡಿದ್ದು, ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು. ಪಿಎಸ್‍ಐ ಗಣಪತಿ ಕೊಂಗನೊಳಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೋಪಾಲ್: ವೇದಿಕೆಗೆ ಹೋಗಿ ಮದುಮಕ್ಕಳ ಜೊತೆ ಫೋಟೋ ತೆಗೆಸಿಕೊಳ್ಳಲು ಹೋಗಿದ್ದ ಖತರ್ನಾಕ್ ಕಳ್ಳನೊಬ್ಬ ಮಂಟಪದಿಂದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಕ್ರೈಂ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‍ಪಿ) ರಾಜೇಶ್ ದಂಡೋಟಿಯಾ ಮಾತನಾಡಿ, ಮದುವೆ ಉದ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳಿಂದ ವೀಡಿಯೋವನ್ನು ಸಂಗ್ರಹಿಸಲಾಗಿದೆ. ಈ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ:ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ
ಸಿಸಿ ಟಿವಿಯಲ್ಲಿ ಸೆರೆಯಾದ ವೀಡಿಯೋದಲ್ಲಿ ಏನಿದೆ?: ಕಪ್ಪು ಬಟ್ಟೆಯನ್ನು ಧರಿಸಿದ್ದ ವ್ಯಕ್ತಿ ಮದುವೆ ಮನೆಗೆ ಬಂದಿದ್ದಾನೆ. ನವ ದಂಪತಿಯ ಜೊತೆಗೆ ಫೋಟೋ ತೆಗೆಸಿಕೊಳ್ಳಲು ವೇದಿಕೆ ಮೇಲೆ ಬಂದಿದ್ದಾನೆ. ಈ ವೇಳೆ ಅಲ್ಲಿದ್ದ ಬಗ್ಯಾನ್ನು ಹೊತ್ತುಯ್ಯದಿದ್ದಾನೆ. ಈ ವಿಡಿಯೋ ಫೂಟೇಜ್‍ನಲ್ಲಿ ಅವನ ಮುಖ ಕಾಣುತ್ತಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಅವನು ಮದುವೆ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಬ್ಯಾಗ್‍ನಲ್ಲಿ 1 ಲಕ್ಷ ರೂ. ನಗದು ಮತ್ತು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿತ್ತು ಎಂದು ತಿಳಿದು ಬಂದಿದೆ.
ಬೆಂಗಳೂರು: ದೇವರ ಮೈಮೇಲಿನ ಚಿನ್ನಾಭರಣವನ್ನು ಕದಿಯಲು ಬಂದಿದ್ದ ಕಳ್ಳ ದೇವರಿಗೆ ನಮಿಸಿ ಹಾಗೇ ಹೊರಬಂದಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ತಾವರೆಕೆರೆಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಬೀಗವೊಡೆದು ಒಳಗೆ ಪ್ರವೇಶಿಸಿದ ಕಳ್ಳ ಅರೆಬೆತ್ತಲಾಗಿ ಇಡೀ ದೇವಸ್ಥಾನದ ತುಂಬೆಲ್ಲಾ ಅಡ್ಡಾಡಿದ.
ನಂತರ ಗರ್ಭಗುಡಿಯ ಬಾಗಿಲು ತೆಗೆದು ಒಳಗೆ ಹೋದ. ಚಿನ್ನಾಭರಣ ಕದಿಯೋಕೆ ಬಂದು ದೇವರನ್ನು ನೋಡಿ ಫುಲ್ ಸೈಲೆಂಟ್ ಆದ. ಕೆಲ ಕಾಲ ಗರ್ಭಗುಡಿಯಲ್ಲೇ ಇದ್ದು ಭಕ್ತಿಯಿಂದ ದೇವರಿಗೆ ನಮಸ್ಕರಿಸಿದ್ದಾನೆ. ಆದರೆ ದೇವರ ಮೇಲಿನ ಯಾವುದೇ ಚಿನ್ನಾಭರಣ, ನಗದು ತೆಗೆದುಕೊಳ್ಳದೆ ಹೊರಗೆ ಬಂದಿದ್ದಾನೆ. ಇದನ್ನೂ ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ದೇವಸ್ಥಾನದಲ್ಲಿ ಕಳ್ಳನ ಓಡಾಟ, ಗರ್ಭಗುಡಿಗೆ ಪ್ರವೇಶಿಸಿದ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ನೋಡಿದ ದೇವಸ್ಥಾನದ ಆಡಳಿತ ಮಂಡಳಿ ತಾವರೆಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ ಸರಣಿ ಸ್ಫೋಟ ಪ್ರಕರಣದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅರೆಸ್ಟ್
ಬೀದರ್: ಎಟಿಎಂ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಕಳ್ಳನೊಬ್ಬ ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಬಸ್ ನಿಲ್ದಾಣ ಬಳಿ ನಡೆದಿದೆ.
ಬಸವಕಲ್ಯಾಣ ಪಟ್ಟಣದ ಈಶ್ವರ ಸಿಂಗ್ ಕಾಲೋನಿಯ ರಮೇಶ್ ಕಲ್ಲಮೋಡೆ ಬಂಧಿತ ಆರೋಪಿ. ಎಟಿಎಂ ಯಂತ್ರಗಳನ್ನು ಧ್ವಂಸ ಮಾಡಿ ಹಣ ಕದಿಯಲು ಯತ್ನಿಸುತ್ತಿದ್ದ. ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರಿಗೆ ಅವನು ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ
ಕಳ್ಳನನ್ನು ಬಂಧಿಸಿ ಬಸವಕಲ್ಯಾಣ ನಗರ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಆರೋಗ್ಯದಲ್ಲಿ ಸಮಸ್ಯೆಯಿದೆ ಎಂದು ತನ್ನ ಅಳಲು ತೋಡಿಕೊಂಡ ಮಹಿಳೆಗೆ ಮಾಟ-ಮಂತ್ರದ ಭಯ ಹುಟ್ಟಿಸಿ ಲಕ್ಷಾಂತರ ರೂ. ದೋಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಮಂತ್ರವಾದಿ ಮಹಾದೇವಸ್ವಾಮಿಯಿಂದ ಭವ್ಯ ಮೋಸ ಹೋಗಿದ್ದಾಳೆ. ಪ್ರಸ್ತುತ ಮಹಾದೇವಸ್ವಾಮಿಯನ್ನು ಪೊಲೀಸರು ಬಂಧಿಸಿದ್ದು, 2 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆ, 2.5 ಲಕ್ಷ ರೂ. ಹಣ ಮಾಯ ಮಾಡಿದ್ದೇನೆ ಎಂದು ಪೊಲೀಸರಿಗೆ ಹೇಳುತ್ತಿದ್ದಾನೆ. ಇದನ್ನೂ ಓದಿ: ಮಹಿಳೆಯರಿಬ್ಬರನ್ನು ಕಟ್ಟಿ ಹಾಕಿ ನಗದು, ಚಿನ್ನ ದೋಚಿದ ಖದೀಮರು
ಏನಿದು ಮಾಯ-ಮಂತ್ರದ ಕಥೆ: ಭವ್ಯಾ ಅವರಿಗೆ ಇತ್ತೀಚಿಗೆ ಆರೋಗ್ಯದಲ್ಲಿ ಸಮಸ್ಯೆ ಇತ್ತು. ಪರಿಣಾಮ ಮಂತ್ರವಾದಿ ಮಹಾದೇವಸ್ವಾಮಿ ಬಳಿ ತೆರಳಿ ತನ್ನ ಅಳಲು ತೋಡಿಕೊಂಡಿದ್ದಾರೆ. ಅದಕ್ಕೆ ಮಹಾದೇವಸ್ವಾಮಿ ಮಾಟ-ಮಂತ್ರದ ಕಥೆ ಕಟ್ಟಿ ಪೂಜೆ ಮಾಡಿದರೆ ಸರಿ ಹೋಗಲಿದೆ ಎಂದು ನಂಬಿಸಿದ್ದಾನೆ. ಅದರಂತೆ ಕಳೆದ ಆಗಸ್ಟ್ 9 ರ ರಾತ್ರಿ ಮನೆಗೆ ಬಂದು ಕುಡಿಕೆಯೊಂದನ್ನು ಇಟ್ಟು ಒಡವೆ, ನಗದು ಇದರಲ್ಲಿ ಹಾಕಿ ಪೂಜೆ ನಂತರ ಕೊಡುತ್ತೇನೆ ಎಂದಿದ್ದಾನೆ. ಈತನನ್ನು ನಂಬಿದ ಭವ್ಯ ತನ್ನ ಬಳಿ ಇದ್ದ ಸರ, ಓಲೆ, ಹಣ ಎಲ್ಲವನ್ನೂ ಕುಡಿಕೆಯೊಳಗೆ ಹಾಕಿದ್ದಾಳೆ.
ಬಳಿಕ ಮಹಾದೇವಸ್ವಾಮಿ, ಭವ್ಯಗೆ ಕಪ್ಪು ಬಣ್ಣದ ಚುಕ್ಕೆಯನ್ನು ಹಣೆಗೆ ಇಟ್ಟಿದ್ದಾನೆ. ನಂತರ ಆಕೆ ಮೂರ್ಛೆ ಹೋಗಿದ್ದಾಳೆ. ತಕ್ಷಣ ಅಲ್ಲಿಂದ ಮಹಾದೇವಸ್ವಾಮಿ ಹಣ, ಒಡವೆಯೊಂದಿಗೆ ಪರಾರಿಯಾಗಿದ್ದಾನೆ ಎಂದು ಕಳೆದ ಫೆ.1 ರಂದು ದೂರು ಕೊಟ್ಟಿದ್ದಾಳೆ. ದೂರು ಪಡೆದ ಕೊಳ್ಳೇಗಾಲ ಪಟ್ಟಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ರನ್ನು ನಾವು ಬೆಂಬಲಿಸುತ್ತೇವೆ: ಮಮತಾ ಬ್ಯಾನರ್ಜಿ
ಧಾರವಾಡ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಬೇಕಾದರೆ ಪೊಲೀಸರ ಕಣ್ಣುತಪ್ಪಿಸಿ ಅಥವಾ ಠಾಣೆಯ ದೂರದಲ್ಲಿ ಕಳ್ಳತನ ಮಾಡುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆಸಿದೆ.
ಅಣ್ಣಿಗೇರಿ ನಗರದ ನಾಗಪ್ಪ ಹಡಪದ ಬಂಧಿತ ಆರೋಪಿ. ನಾಗಪ್ಪ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಬೋಲೆರೊ ವಾಹನವನ್ನು ಕಳ್ಳತನ ಮಾಡಿದ್ದಾನೆ. ನಂತರ ಅದನ್ನು ಹಾವೇರಿ ಜಿಲ್ಲೆಯ ಬ್ಯಾಡಗಿವರೆಗೆ ತೆಗೆದುಕೊಂಡು ಹೋಗಿದ್ದಾನೆ. ಇದನ್ನೂ ಓದಿ: ದೇಶದ ಪ್ರಗತಿಗಾಗಿ ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ಸಿಎಂ ಕೆಸಿಆರ್
ನಿನ್ನೆ ಬೆಳಗಿನ ಜಾವ 4 ಗಂಟೆಗೆ ವಾಹನ ತೆಗೆದುಕೊಂಡು ಪರಾರಿಯಾಗಿದ್ದ ನಾಗಪ್ಪ ಬ್ಯಾಡಗಿವರೆಗೆ ಹೋಗಿರುವ ವಿಷಯವನ್ನು ಪೊಲೀಸರು ತಿಳಿದಿದ್ದಾರೆ. ಆತನನ್ನು ಹಾಗೂ ವಾಹನವನ್ನು ಬ್ಯಾಡಗಿಯಲ್ಲೇ ಹಿಡಿದಿದ್ದಾರೆ. ಸದ್ಯ ಪೊಲೀಸರು ಬ್ಯಾಡಗಿಯಿಂದ ಪೊಲೀಸ್ ಜಿಪ್ ಹಾಗೂ ನಾಗಪ್ಪನನ್ನು ಕರೆತಂದು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕ ನಿತೇಶ್ ರಾಣೆಗೆ ಜಾಮೀನು ನಿರಾಕರಿಸಿದ ಕೋರ್ಟ್
ಬೆಂಗಳೂರು: ಹಣಕ್ಕಾಗಿ ಕುಟುಂಬವೇ ಕಳ್ಳರಾದ ಇಂಟರೆಸ್ಟಿಂಗ್ ಸ್ಟೋರಿ ಇದಾಗಿದೆ. ಬ್ಯಾಂಕ್‍ನಲ್ಲಿ ಚಿನ್ನವನ್ನು ಅಡವಿಟ್ಟು, ಕಳ್ಳತನವಾಗಿದೆ ಎಂದು ಠಾಣೆಯಲ್ಲಿ ಸುಳ್ಳು ದೂರನ್ನು ನೀಡುತ್ತಿದ್ದ ಕುಟುಂಬವನ್ನು ಪೊಲೀಸರು ಬಂಧಿಸಿದ್ದಾರೆ.
ಕುಟುಂಬದ ಯಜಮಾನ ರವಿ ಪ್ರಕಾಶ್, ಮಗ ಮಿಥುನ್ ಕುಮಾರ್. ಆತನ ಹೆಂಡತಿ ಸಂಗೀತಾ, ತಂಗಿ ಆಶಾ ಮತ್ತು ಆಕೆಯ ಗಂಡ ಚರಣ್ ಹಾಗೂ ಮಿಥುನ್ ಕುಮಾರ್ ಪ್ರಿಯತಮೆ ಅಸ್ಮಾ ಹಾಗೂ ಸ್ನೇಹಿತ ದೀಪಕ್ ಬಂಧಿತ ಆರೋಪಿಗಳಾಗಿದ್ದಾರೆ. ಕಳ್ಳ ಮಾರ್ಗದ ಮೂಲಕ ಹಣ ಮಾಡಲು ಹೋಗಿ ಈಗ ಇಡೀ ಕುಟುಂಬವೇ ಪರಪ್ಪನ ಅಗ್ರಹಾರ ಜೈಲು ಪಾಲಾಗಿದೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ
ಬೆಂಗಳೂರು ಹೊರವಲಯದ ಸರ್ಜಾಪುರದಲ್ಲಿ ನಿವಾಸಿಯಾಗಿರುವ ಕುಟುಂಬವೊಂದು ಮನೆಯಲ್ಲಿದ್ದ ಚಿನ್ನ ಅಡವಿಟ್ಟು, ಚಿನ್ನ ಕಳುವಾಗಿದೆ ಎಂದು ಪೊಲೀಸರಿಗೆ ಸುಳ್ಳು ಮಾಹಿತಿ ನೀಡುತ್ತಿತ್ತು. ಪರಿಚಿತರ ಹೆಸರಿನಲ್ಲಿ ಚಿನ್ನ ಅಡವಿಡುತ್ತಿದ್ದ, ಕಳ್ಳ ಕುಟುಂಬದ ಸುಳ್ಳನ್ನು ಸರ್ಜಾಪುರ ಪೊಲೀಸರು ಬಯಲಿಗೆಳೆದಿದ್ದಾರೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ
ಕುಟುಂಬದ ಪ್ಲ್ಯಾನ್ ಏನು ಗೊತ್ತಾ?: ನಾವು ಇಡೀ ಕುಟುಂಬಸ್ಥರು ದೇವಸ್ಥಾನಕ್ಕೆ ಹೊರ ಹೋಗಿದ್ದೆವು. ಸುಮಾರು 25 ಲಕ್ಷ ಮೌಲ್ಯದ ಒಂದೂಕಾಲು ಕೆಜಿ ಚಿನ್ನ ಕಳ್ಳತನವಾಗಿದೆ ಎಂದು ಆರೋಪಿಗಳಲ್ಲಿ ಒಬ್ಬನಾದ ರವಿ ಪ್ರಕಾಶ್ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ಸರ್ಜಾಪುರ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆರೋಪಿಗಳು ಮಾತ್ರ ಪತ್ತೆಯಾಗಿರಲಿಲ್ಲ. ಕೊನೆಗೆ ಮನೆಯವರ ಮೇಲೆ ಸಂಶಯ ಮೂಡಿ ತನಿಖೆಗಿಳಿದಾಗ ಸ್ಫೋಟಕ ಸತ್ಯ ಬಯಲಾಗಿದೆ. ಆರೋಪಿಗಳು ಈ ಹಿಂದೆ ಸಹ ಇದೇ ರೀತಿ ಯಶವಂತಪುರ ಸೇರಿದಂತೆ ಎರಡು ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದರು. ಒಡವೆ ಕಳವು ಪ್ರಕರಣ ದಾಖಲು ಮಾಡಿ ಒಡವೆ ಪಡೆದುಕೊಂಡಿದ್ದರು. ಈ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರ ತನಿಖೆಯ ದಿಕ್ಕು ಕಳ್ಳತನದ ದೂರು ನೀಡಿದ್ದ ಕುಟುಂಬಸ್ಥರ ಮೇಲೆ ಅನುಮನ ಮೂಡುವಂತೆ ಮಾಡಿದೆ.
ನಂತರ ಪೊಲೀಸರು ದೂರುದಾರ ರವಿ ಪ್ರಕಾಶ್, ಮಗ ಮಿಥುನ್ ಕುಮಾರ್ ತನ್ನ ಸ್ನೇಹಿತ ದೀಪಕ್ ಮೂಲಕ ಬ್ಯಾಂಕೊಂದರಲ್ಲಿ ಒಡವೆಗಳನ್ನು ಗಿರವಿಯಿಡಿಸುತ್ತಾನೆ. ಉಳಿದವರು ಒಡವೆ ಕಳ್ಳತನವಾದಂತೆ ಪೊಲೀಸರಿಗೆ ನಂಬಿಸುವಂತೆ ನಾಟಕವಾಡುತ್ತಾರೆ. ಕೊನೆಗೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಡೀ ಮನೆ ಮಂದಿಯನ್ನು ವಿಚಾರಣೆಗೊಳಪಡಿಸಿದಾಗ ತಮ್ಮ ಬಳಿ ಇರುವ ಎಲ್ಲಾ ಚಿನ್ನಾಭರಣವನ್ನು ಪರಿಚಿತನೊಬ್ಬನ ಮೂಲಕ ಗಿರವಿ ಇಟ್ಟು ಹಣ ಪಡೆದುಕೊಳ್ಳುವುದು. ಬಳಿಕ ದೂರು ನೀಡುವುದು ಗಿರವಿ ಇಟ್ಟ ಸ್ನೇಹಿತರ ಮೇಲೆಯೇ ಕೇಸು ದಾಖಲಿಸುವ ಹುನ್ನಾರ ನಡೆಸುವುದು ಇವರ ಪ್ಲ್ಯಾನ್ ಆಗಿತ್ತು ಎನ್ನುವ ಅಸಲಿ ಕಹಾನಿ ಬಯಲಾಗಿದೆ.
ರಾಂಚಿ: ಕೋಟಿ ಬೆಲೆ ಬಾಳುವ ಚಿನ್ನ, ವಜ್ರ ಖಚಿತವಾದ ಐಫೋನ್ ಕದ್ದ ಕಳ್ಳರ ಗ್ಯಾಂಗ್ ವಾಟ್ಸಪ್ ಸ್ಟೇಟಸ್ ಮೂಲಕವಾಗಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಚಿನ್ನ ಮತ್ತು ವಜ್ರ ಖಚಿತ ಐಫೋನ್ ಪ್ರೋ ಮ್ಯಾಕ್ಸ್ ಫೋನ್ ಕದ್ದಿದ್ದ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಜಾರ್ಖಂಡ್‍ನ ಸಾಹಿಬ್‍ಗಂಜ್‍ನಲ್ಲಿ ಬಂಧಿಸಿದ್ದಾರೆ. ಆದರೆ ಈ ಐನಾತಿ ಕಳ್ಳರು ಸಿಕ್ಕಿ ಬಿದ್ದಿರವ ಕಥೆ ಸಿನಿಮಾ ಸ್ಟೋರಿಯನ್ನು ಮೀರಿಸುವಂತಿದೆ.
ಕಳ್ಳರ ಗ್ಯಾಂಗ್ ಬೇರೆ ಕಡೆ ಕದ್ದಿದ್ದ ವಿಶೇಷವಾಗಿ ಚಿನ್ನ ಮತ್ತು ವಜ್ರದಿಂದ ತಯಾರಿಸಿದ್ದ ಐಫೋನ್ ಅನ್ನು ಮಾರಾಟ ಮಾಡಲು ಸ್ಥಳೀಯರಿಗೆ ತೋರಿಸಿದ್ದಾರೆ. ಇದನ್ನು ನೋಡಿದವರು ಒಂದು ಕ್ಷಣ ಅಚ್ಚರಿಗೊಂಡಿದ್ದಾರೆ. ಕೆಲ ಯುವಕರು ಮೊಬೈಲ್ ಹಿಡಿದು ಸೆಲ್ಫಿ ತೆಗೆದುಕೊಂಡು ಆ ಫೋಟೋಗಳನ್ನು ವಾಟ್ಸಪ್ ಸ್ಟೇಟಸ್‍ನಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಭಾರಿ ವೈರಲ್ ಆಗುತ್ತಿದ್ದಂತೆ ವಿಷಯ ಪೊಲೀಸರ ಗಮನಕ್ಕೂ ಬಂದಿದೆ. ಕೂಡಲೇ ಎಚ್ಚೆರಿತುಕೊಂಡ ಖಾಕಿ ಪಡೆ ಕಳ್ಳರನ್ನು ಬಂಧಿಸಿ ದುಬಾರಿ ಬೆಲೆಯ ಐಫೋನ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
ಈ ಮೊಬೈಲ್ 24 ಕ್ಯಾರೆಟ್‍ನ ಚಿನ್ನದಿಂದ ಮಾಡಲಾಗಿದ್ದು, ಇದರಲ್ಲಿ ಡೈಮಂಡ್ ಕೂಡ ಇದೆ. ಮಾರುಕಟ್ಟೆ ಬೆಲೆ ಸುಮಾರು 4 ಲಕ್ಷ ರೂಪಾಯಿ ಇದೆ. ಕಳ್ಳರನ್ನು ಬಂಧಿಸಿದ್ದೇವೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.