Tag: Thithi Cinema

  • ತಿಥಿ ಚಿತ್ರದ ಗಡ್ಡಪ್ಪ ಆರೋಗ್ಯ ಸ್ಥಿರ

    ತಿಥಿ ಚಿತ್ರದ ಗಡ್ಡಪ್ಪ ಆರೋಗ್ಯ ಸ್ಥಿರ

    ಮಂಡ್ಯ: ಕೆಲ ಕಿಡಿಗೇಡಿಗಳು ತಿಥಿ ಚಿತ್ರದ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಗಡ್ಡಪ್ಪ ಸಂಬಂಧಿಯೊಬ್ಬರು, ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗೊಂದಲ ಬೇಡ ಎಂದು ತಿಳಿಸಿದ್ದಾರೆ.

    ಗಡ್ಡಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಚೇತರಿಸಿಕೊಂಡಿದ್ದು, ಪಾರ್ಶ್ವವಾಯು ಸಮಸ್ಯೆಯಿಂದಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರು ಚನ್ನಾಗಿದ್ದಾರೆ ಅಭಿಮಾನಿಗಳು ಸುಳ್ಳು ಸುದ್ದಿ ನಂಬಬೇಡಿ ಎಂದು ಗಡ್ಡಪ್ಪ ಅವರ ಸಂಬಂಧಿ ಯಶವಂತ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

    ಗಡ್ಡಪ್ಪ ಅವರ ಜೊತೆಗೆ ನಿಂತು ಅಭಿಮಾನಿಗಳಿಗೆ ಯಶವಂತ ಸ್ಪಷ್ಟನೆ ನೀಡಿದ್ದಾರೆ. ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು, ವಾಟ್ಸಪ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಮಂಡ್ಯ ತಾಲೂಕಿನ ನೊದೇಕೊಪ್ಪಲು ಗ್ರಾಮದವರಾದ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದರು. ತಿಥಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರು ಡಿಸೆಂಬರ್ 24ರಂದು ಪಾರ್ಶ್ವವಾಯು ಸಮಸ್ಯೆ ತುತ್ತಾಗಿದ್ದರು. ಇದರಿಂದಾಗಿ ಅವರನ್ನು ಕುಟುಂಬಸ್ಥರು ಪಾಂಡವಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

    ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

    ಮಂಡ್ಯ: ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯ ಪೀಡಿತರಾಗಿದ್ದು, ಹಾಸಿಗೆ ಹಿಡಿದಿದ್ದಾರೆ.

    ಮಂಡ್ಯ ತಾಲೂಕಿನ ನೊದೇಕೊಪ್ಪಲು ಗ್ರಾಮದವರಾದ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದಾರೆ. ತಿಥಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರಿಗೆ ನಾಲ್ಕು ದಿನಗಳ ಹಿಂದೆ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಅವರಿಗೆ ಮಾತನಾಡಲೂ ಕೂಡ ಕಷ್ಟ ಆಗಿದೆ.

    ಮೊದಲೇ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರ ಆರೋಗ್ಯದಲ್ಲಿ ಏರುಪೇರಾದ್ದರಿಂದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯಕ್ಕೆ ಗಡ್ಡಪ್ಪಗೆ ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಗಡ್ಡಪ್ಪಗೆ ಚಿಕಿತ್ಸೆ ನೀಡಿರುವ ವೈದ್ಯರು ಬೆಡ್ ರೆಸ್ಟ್ ತೆಗೆದುಕೊಳ್ಳಲು ಸೂಚಿಸಿದ್ದಾರೆ. ವೈದ್ಯರ ಸಲಹೆಯಂತೆ ಗಡ್ಡಪ್ಪಗೆ ಸಂಬಂಧಿಕರು ಔಷಧೋಪಚಾರ ಮಾಡುತ್ತಿದ್ದಾರೆ.

    ತಿಥಿ ಸಿನಿಮಾವನ್ನು ಈರೇಗೌಡ ಕಥೆ ರಚಿಸಿ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕರ್ನಾಟಕದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿತ್ತು. ಅಷ್ಟೇ ಅಲ್ಲದೇ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪ್ರಾದೇಶಿಕ ಚಲನಚಿತ್ರ ವಿಭಾಗ ಪ್ರಶಸ್ತಿಗಳಲ್ಲಿ ‘ತಿಥಿ’ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv