ಬೆಂಗಳೂರು: ಬ್ಯಾಂಕಾಕ್‍ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಜಯಗಳಿಸಿದ ಭಾರತ ತಂಡದ ಸದಸ್ಯ ಹಾಗೂ ಬೆಂಗಳೂರಿನಲ್ಲಿದ್ದುಕೊಂಡು ತರಬೇತಿ ಪಡೆದಿರುವ ಲಕ್ಷ್ಯ ಸೇನ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.
14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ. ಸದ್ಯ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋಟ್ರ್ಸ್ ಸೆಂಟರ್‍ನಲ್ಲಿ ಲಕ್ಷ್ಯ ಸೇನ್ ತರಬೇತಿ ಪಡೆಯುತ್ತಿದ್ದಾರೆ. ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ. ಇದನ್ನೂ ಓದಿ: ಮಹಿಳಾ T20 ಚಾಲೆಂಜ್‍ಗೆ ದೀಪ್ತಿ, ಹರ್ಮನ್‍ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ
ಬೆಂಗಳೂರು: ಇದೇ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ. ಭಾರತದ ಗೆಲುವಿಗೆ ತಮ್ಮದೇ ಕೊಡುಗೆ ನೀಡಿರುವ ಬೆಂಗಳೂರಿನ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಲಕ್ಷ್ಯ ಸೇನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಥಾಮಸ್ ಕಪ್ ಗೆಲುವಿಗೆ ಕಾರಣವಾದ ಭಾರತದ ಮೆನ್ ಬ್ಯಾಡ್ಮಿಂಟನ್ ತಂಡದ ಕೋಚ್, ಮಾಜಿ ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋ ಕುರಿತು ಕಲರ್ ಕಲರ್ ಸುದ್ದಿಗಳು ಬಿಟೌನ್ ನಲ್ಲಿ ಹರಿದಾಡುತ್ತಿವೆ. ಇಂಥದ್ದೊಂದು ದೊಡ್ಡ ಸಾಧನೆ ಮಾಡಿರುವ ತಂಡದ ಸುದ್ದಿಗಿಂತ ಕೋಚ್ ಮಥಿಯಾಸ್ ಸುದ್ದಿಯಾಗಿದ್ದು, ಅವರು ಬಾಲಿವುಡ್ ಜೊತೆ ನಂಟು ಇಟ್ಟುಕೊಂಡಿದ್ದಾರೆ ಎನ್ನುವ ಕಾರಣಕ್ಕೆ ಎನ್ನುವುದು ವಿಶೇಷ. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!
ಭಾರತದ ತಂಡವು ಪ್ರತಿಷ್ಠಿತ ಟ್ರೋಪಿ ಗೆಲ್ಲುತ್ತಿದ್ದಂತೆಯೇ ಬಾಲಿವುಡ್ ಹೆಸರಾಂತ ನಟಿ ತಾಪ್ಸಿ ಪೊನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಶುಭ ಹಾರೈಸಿ ಪೋಸ್ಟ್ ಮಾಡಿದ್ದರು. ‘ದಿ ಬಾಯ್ಸ್ ಡಿಡ್ ಇಟ್’ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದರು. ಅದರಲ್ಲೂ ಕೋಚ್ ಮಥಿಯಾಸ್ ಕುರಿತು ವಿಶೇಷವಾಗಿ ಪ್ರೀತಿ ತೋರಿದ್ದರು. ಈ ಪ್ರೀತಿಯ ಹಿಂದೆ ಲವ್ ಕಹಾನಿ ಇದೆ ಎನ್ನುತ್ತಿದೆ ಬಾಲಿವುಡ್. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ
ಮಥಿಯಾಸ್ ಮತ್ತು ತಾಪ್ಸಿ ಕುರಿತು ಹಲವು ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡಿದ್ದವು. ಅದಕ್ಕೆ ಕಾರಣ ಇವರಿಬ್ಬರ ನಡುವಿನ ಆತ್ಮೀಯ ಬಾಂಧವ್ಯ ಮತ್ತು ಹಲವು ಫೋಟೋಗಳು. ಮಥಿಯಾಸ್ ಮತ್ತು ತಾಪ್ಸಿ ಹಲವು ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹುಟ್ಟು ಹಬ್ಬಗಳನ್ನು ಒಟ್ಟೊಟ್ಟಿಗೆ ಆಚರಿಸಿಕೊಂಡಿದ್ದರು. ಅಲ್ಲದೇ, ಮಥಿಯಾಸ್ ಹುಟ್ಟು ಹಬ್ಬದ ದಿನದಂದು, ‘ನನಗೆ ಆಪ್ತರಲ್ಲಿ ನೀವು ತೀರಾ ಆಪ್ತರು’ ಎಂದು ತಾಪ್ಸಿ ಬರೆದುಕೊಂಡಿದ್ದರು. ಹಾಗಾಗಿ ತಾಪ್ಸಿ ಮತ್ತು ಮಥಿಯಾಸ್ ಇಬ್ಬರೂ ಡೇಟಿಂಗ್‌ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!
ತಾಪ್ಸಿ ಈ ಹಿಂದೆ ಸಂದರ್ಶನವೊಂದರಲ್ಲಿ ‘ನಾನು ಸಿನಿಮಾ ರಂಗದವರ ಜೊತೆ ಡೇಟ್ ಮಾಡುವುದಿಲ್ಲ. ಅದಕ್ಕೆ ನನ್ನದೇ ಆದ ಕಾರಣಗಳು ಇವೆ. ನಾನು ಡೇಟ್ ಮಾಡುವುದಾದರೆ, ನನ್ನ ವೃತ್ತಿಯಲ್ಲದವರ ಜೊತೆ’ ಎಂದು ಹೇಳಿ ಕುತೂಹಲಕ್ಕೆ ಕಾರಣವಾಗಿದ್ದರು. ಈ ಮಾತಿಗೆ ಕಾರಣ ಮಥಿಯಾಸ್ ಮೇಲಿನ ಪ್ರೀತಿ ಎಂದು ವಿಶ್ಲೇಷಿಸಲಾಗುತ್ತಿದೆ.
ನವದೆಹಲಿ: ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ 43 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಚಾಂಪಿಯನ್ ಆದ ಭಾರತದ ಪುರುಷರ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?
ಭಾರತ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ. ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ಬಲಿಷ್ಠ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಸಾಧನೆಗಳಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ. ಇದನ್ನೂ ಓದಿ: ಥಾಮಸ್ ಕಪ್ ಬ್ಯಾಡ್ಮಿಂಟನ್ – ಭಾರತ ಚಾಂಪಿಯನ್, ಇತಿಹಾಸ ಸೃಷ್ಟಿ
1 ಕೋಟಿ ರೂ. ಬಹುಮಾನ:
43 ವರ್ಷಗಳ ಬಳಿಕ ಬ್ಯಾಡ್ಮಿಂಟನ್‍ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತದ ಪುರುಷರ ತಂಡಕ್ಕೆ 1 ಕೋಟಿ ರೂ. ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದು, ಇದೊಂದು ಐತಿಹಾಸಿಕ ಸಾಧನೆ. ದೇಶಕ್ಕೆ ಹೆಮ್ಮೆ ತಂದಿದೆ ಎಂದು ಸಂಭ್ರಮಪಟ್ಟರು.
43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿದೆ. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ ಎನ್ನುವುದು ವಿಶೇಷ. ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಹಿಂದೆ 1979ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ
ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.
ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ ಅವರು ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸುಕಮುಲ್ಜೊ ಜೊತೆ ಮೊದಲ ಪಂದ್ಯವನ್ನು 18-21 ರಿಂದ ಸೋತಿದ್ದರೂ ನಂತರ 23-21, 21-19 ಗೇಮ್ಗಳಿಂದ ಗೆಲ್ಲುವ ಮೂಲಕ ಗೆಲುವಿನ ಸಮೀಪ ತಂದರು. ಇದನ್ನೂ ಓದಿ: ಗುಜರಾತ್ ಗುನ್ನಕ್ಕೆ ಚೆನ್ನೈ ಚಿಂದಿ – ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ
ಮೂರನೇ ಪಂದ್ಯದಲ್ಲಿ ಶ್ರೀಕಾಂತ್ ಕಿಡಂಬಿ ಅವರು ಜೊನಾಟನ್ ಕ್ರಿಸ್ಟಿ ಅವರ ವಿರುದ್ಧ 21-15, 23-21 ನೇರ ಸೆಟ್ಗಳಿಂದ ಗೆಲುವು ಸಾಧಿಸಿ ಭಾರತಕ್ಕೆ ಟ್ರೋಫಿಯನ್ನು ಗೆದ್ದುಕೊಟ್ಟರು.
A special interaction with our badminton 🏸 champions, who have won the Thomas Cup and made 135 crore Indians proud. pic.twitter.com/KdRYVscDAK
ಈ ಸಾಧನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಷ್ಟ್ರೀಯ ಕೋಚ್ ಹಾಗೂ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಉಪಾಧ್ಯಕ್ಷ ಪುಲ್ಲೇಲ ಗೋಪಿಚಂದ್, ಇದು ನಿಜವಾಗಿಯೂ ದೊಡ್ಡ ಸಾಧನೆ. 1983ರಲ್ಲಿ ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದಂತೆ ಆಗಿದೆ. ಇಂಡೋನೇಷ್ಯಾ ಬ್ಯಾಡ್ಮಿಂಟನ್ ಮತ್ತು ಥಾಮಸ್ ಕಪ್‍ನಲ್ಲಿ ದೊಡ್ಡ ಖ್ಯಾತಿ ಮತ್ತು ಪರಂಪರೆಯನ್ನು ಹೊಂದಿದೆ. ಈ ತಂಡವನ್ನು ಸೋಲಿಸುವ ಮೂಲಕ ವಿಶ್ವ ಮಟ್ಟದಲ್ಲಿ ನಾವು ಬಲಿಷ್ಠವಾಗುತ್ತಿದ್ದೇವೆ ಎಂಬುದಕ್ಕೆ ಸಾಕ್ಷಿ ಎಂದರು.
As #TeamIndia defeats 14-time #ThomasCup Champions Indonesia (🇮🇳3-0🇮🇩) to win its 1️⃣st ever #ThomasCup2022, @IndiaSports is proud to announce a cash award of ₹ 1 crore for the team in relaxation of rules to acknowledge this unparalleled feat!
ನಾವು ಸೈನಾ ಮತ್ತು ಸಿಂಧು ಅವರನ್ನು ಮಹಿಳಾ ಶಕ್ತಿ ಎಂದು ಕರೆಯಲ್ಪಟ್ಟಿದ್ದೇವೆ, ಆದರೆ ಈಗ ನಮ್ಮ ಹುಡುಗರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಈ ಸಾಧನೆ ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳು ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಭಾರತದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸವಾಲು ಇದೆ. ಕ್ರೀಡಾಪಟುಗಳಿಗೆ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಪ್ರಧಾನಿ ಮೋದಿ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.
ಬ್ಯಾಂಕಾಕ್: ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ (Thomas Cup 2022 final) ಫೈನಲ್‌ಗೆ ಮೊದಲ ಬಾರಿ ಪ್ರವೇಶ ಪಡೆದ ಭಾರತದ ಪುರುಷರ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇಂಡೋನೇಷ್ಯಾದ ವಿರುದ್ಧ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಇತಿಹಾಸವನ್ನು ಸೃಷ್ಟಿಸಿದೆ.
43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿದೆ. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ ಎನ್ನುವುದು ವಿಶೇಷ. ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಹಿಂದೆ 1979ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು.
ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.
ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ ಅವರು ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸುಕಮುಲ್ಜೊ ಜೊತೆ ಮೊದಲ ಪಂದ್ಯವನ್ನು 18-21 ರಿಂದ ಸೋತಿದ್ದರೂ ನಂತರ 23-21, 21-19 ಗೇಮ್ಗಳಿಂದ ಗೆಲ್ಲುವ ಮೂಲಕ ಗೆಲುವಿನ ಸಮೀಪ ತಂದರು.
ಮೂರನೇ ಪಂದ್ಯದಲ್ಲಿ ಶ್ರೀಕಾಂತ್ ಕಿಡಂಬಿ ಅವರು ಜೊನಾಟನ್ ಕ್ರಿಸ್ಟಿ ಅವರ ವಿರುದ್ಧ 21-15, 23-21 ನೇರ ಸೆಟ್ಗಳಿಂದ ಗೆಲುವು ಸಾಧಿಸಿ ಭಾರತಕ್ಕೆ ಟ್ರೋಫಿಯನ್ನು ಗೆದ್ದುಕೊಟ್ಟರು. ಇದನ್ನೂ ಓದಿ: IPLಗೆ ಗುಡ್ ಬೈ ಹೇಳಿದ CSK ಸ್ಟಾರ್ ಅಂಬಾಟಿ ರಾಯುಡು?
ಲೀಗ್ ಹಂತದಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಗೆದ್ದಿದ್ದ ಭಾರತ ಬಳಿಕ ಕೊರಿಯಾ ವಿರುದ್ಧ ಪರಾಭವಗೊಂಡಿತ್ತು. ಆದರೆ ಕ್ವಾರ್ಟರ್ ಫೈನಲ್ ಹಾಗೂ ಸೆಮೀಸ್‌ನಲ್ಲಿ ಕ್ರಮವಾಗಿ ಮಲೇಷ್ಯಾ ಮತ್ತು ಡೆನ್ಮಾರ್ಕ್‌ಗೆ ಸೋಲುಣಿಸಿತ್ತು. ಮತ್ತೊಂದೆಡೆ ದಾಖಲೆಯ 14 ಬಾರಿ ಚಾಂಪಿಯನ್ ಇಂಡೋನೇಷ್ಯಾ ಲೀಗ್‌ನಲ್ಲಿ ಅಜೇಯವಾಗಿ ಉಳಿದಿದ್ದು, ನಾಕೌಟ್‌ನಲ್ಲಿ ಚೀನಾ ಮತ್ತು ಜಪಾನ್ ವಿರುದ್ಧ ಗೆದ್ದಿತ್ತು.