Tag: threat letter

  • ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

    ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

    ಕೋಲ್ಕತ್ತಾ: ಗೋವು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ಅನುಬ್ರತಾ ಮೊಂಡಲ್‌ಗೆ ಜಾಮೀನು ಮಂಜೂರು ಮಾಡಿ. ಇಲ್ಲದೇ ಹೋದರೆ ಸ್ವತಃ ನ್ಯಾಯಾಧೀಶರೇ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಹೀಗೆಂದು ಅಸನ್ಸೋಲ್‌ನ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬಂದಿದೆ.

    ಗೋವು ಕಳ್ಳಸಾಗಣೆ ಪ್ರಕರಣದಲ್ಲಿ ಅನುಬ್ರತಾ ವಿರುದ್ಧದ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಸಿಬಿಐ ವಶದಲ್ಲಿರುವ ಅನುಬ್ರತಾ ಅವರ ಜಾಮೀನು ಅರ್ಜಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನ ಅನುಬ್ರತಾಗೆ ಜಾಮೀನು ಕೋರಿ ಮತ್ತೊಂದು ಅರ್ಜಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ತಲುಪಿದೆ. ಸಿಬಿಐ ಮೂಲಗಳ ಪ್ರಕಾರ, ಗೋವು ಕಳ್ಳಸಾಗಣೆ ಪ್ರಕರಣದಲ್ಲಿ ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲದಿದ್ದರೆ ಕುಟುಂಬವನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲಾಗುವುದು ಎಂದು ಪತ್ರದಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್‌ ಅಮಾನತು

    ಅಸನ್ಸೋಲ್‌ನ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಚಕ್ರವರ್ತಿ ಅವರು ಆಗಸ್ಟ್ 20 ರಂದು ಬೆದರಿಕೆ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪತ್ರವನ್ನು ಬಪ್ಪಾ ಚಟರ್ಜಿ ಹೆಸರಿನಲ್ಲಿ ಕಳುಹಿಸಲಾಗಿದೆ. ಸೋಮವಾರ ಬೆದರಿಕೆ ಪತ್ರ ಬಂದಿರುವ ಬಗ್ಗೆ ಕುರಿತು ಸಿಬಿಐ ನ್ಯಾಯಾಧೀಶರು ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡಿದರು. ಬಳಿಕ ಅವರು ಈ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಕೋಟಿ ಕೋಟಿ ನಮನ – ಸಚಿವ ಸುಧಾಕರ್

    ತನ್ನನ್ನು ಹಾಗೂ ತನ್ನ ಕುಟುಂಬವನ್ನು ಎನ್‌ಡಿಪಿಎಸ್ ಪ್ರಕರಣ(ಡ್ರಗ್ಸ್ ಪ್ರಕರಣ)ದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ನ್ಯಾಯಮೂರ್ತಿ ಚಕ್ರವರ್ತಿ ತಿಳಿಸಿದ್ದಾರೆ. ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡದಿದ್ದರೆ, ನನ್ನ ಕುಟುಂಬವನ್ನು ಡ್ರಗ್ ಪ್ರಕರಣದಲ್ಲಿ ಸಿಲುಕಿಸಲಾಗುವುದು ಎಂದು ಪತ್ರದಲ್ಲಿ ಬರೆಯಲಾಗಿದೆ. ಬಪ್ಪಾ ಚಟರ್ಜಿ ಎಂಬ ವ್ಯಕ್ತಿಯಿಂದ ಈ ಬೆದರಿಕೆ ಪತ್ರ ಬಂದಿರುವುದಾಗಿ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ದೇಗುಲದ ಅರ್ಚಕರ ತಲೆ ಕಡಿಯೋದಾಗಿ ಬೆದರಿಕೆ ಪತ್ರ – ಉದಯಪುರ ಮತ್ತೆ ಉದ್ವಿಗ್ನ

    ದೇಗುಲದ ಅರ್ಚಕರ ತಲೆ ಕಡಿಯೋದಾಗಿ ಬೆದರಿಕೆ ಪತ್ರ – ಉದಯಪುರ ಮತ್ತೆ ಉದ್ವಿಗ್ನ

    ಜೈಪುರ್: 10 ದಿನಗಳಲ್ಲಿ ದೇವಸ್ಥಾನ ಖಾಲಿ ಮಾಡದಿದ್ದರೆ ತಲೆ ಕಡಿಯಲಾಗುವುದು ಎಂದು ರಾಜಾಸ್ಥಾನದ ಭರತಪುರ್ ಜಿಲ್ಲೆಯ ಎಂಎಸ್‌ಜೆ ಕಾಲೇಜಿನಲ್ಲಿರುವ ದೇವಸ್ಥಾನದ ಅರ್ಚಕರಿಗೆ ಬೆದರಿಕೆ ಪತ್ರವೊಂದು ರವಾನೆಯಾಗಿದೆ.

    ಅರ್ಚಕರಿಗೆ ಸಾರ್ವಜನಿಕವಾಗಿ ಬೆದರಿಕೆ ನೀಡಿದ್ದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸಿದೆ. ಈಗಾಗಲೇ ಉದಯಪುರ್‌ದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಬಳಿಕ ಮತ್ತೊಂದು ಬೆದರಿಕೆ ಪತ್ರ ರವಾನೆಯಾಗಿದೆ ಇಂತಹ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅರ್ಚಕರಿಗೆ ಬಿಗಿ ಭದ್ರತೆ ನೀಡಬೇಕೆಂದು ಒತ್ತಾಯಿಸಲಾಗಿದೆ.

    Udaipur

    ಹಿಂದಿನ ಅರ್ಚಕರ ಮೇಲೆಯೇ ಅನುಮಾನ: ಈ ದೇವಸ್ಥಾನಲ್ಲಿ ಮೊದಲಿದ್ದ ಅರ್ಚಕರು ಹಾಗೂ ಈಗಿನ ಅರ್ಚಕರ ನಡುವೆ ಮನಸ್ತಾಪಗಳಿದ್ದು, ಮೊದಲಿನ ಅರ್ಚಕರೇ ಬೆದರಿಕೆ ಪತ್ರ ರವಾನಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಕನ್ಹಯ್ಯ ಲಾಲ್ ಹತ್ಯೆ: ಕೆಲ ದಿನಗಳ ಹಿಂದೆ ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ ಕಾರಣಕ್ಕಾಗಿಯೇ ಉದಯ್‌ಪುರದಲ್ಲಿ ಕನ್ಹಯ್ಯ ಲಾಲ್ ಶಿರಚ್ಛೇದ ಮಾಡಲಾಗಿತ್ತು. ಇದಕ್ಕೂ ಮುನ್ನ ಆತನಿಗೆ ಅನೇಕ ಬೆದರಿಕೆ ಕರೆಗಳೂ ಬಂದಿದೆ ಎಂಬುದು ತನಿಖೆ ವೇಳೆ ಬಯಲಾಗಿತ್ತು.

    ಕನ್ಹಯ್ಯಲಾಲ್‌ಗೆ ರಕ್ಷಣೆ ನೀಡದ ಪೊಲೀಸರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದರು. ಹತ್ಯೆ ಬಳಿಕ ವೀಡಿಯೋ ಮಾಡಿ ಹರಿಬಿಟ್ಟ ಮುಸ್ಲಿಂ ಯುವಕರು, ಪ್ರಧಾನಿ ಮೋದಿ ಹಾಗೂ ಹಿಂದೂ ಸಮುದಾಯಕ್ಕೂ ಎಚ್ಚರಿಕೆ ನೀಡಿದ್ದರು. ಈ ಹತ್ಯೆ ಉದಯಪುರದಲ್ಲಿ ಉದ್ವಿಗ್ನ ವತಾವರಣ ಸೃಷ್ಟಿಸಿತ್ತು. ಅಲ್ಲದೆ ಇಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಆಸ್ತಿಗಾಗಿ ಸಂಜನಾ, ರಾಗಿಣಿ ಜಾಮೀನಿಗಾಗಿ ಬೆದರಿಕೆ ಪತ್ರ – ಇಬ್ಬರ ಬಂಧನ

    ಆಸ್ತಿಗಾಗಿ ಸಂಜನಾ, ರಾಗಿಣಿ ಜಾಮೀನಿಗಾಗಿ ಬೆದರಿಕೆ ಪತ್ರ – ಇಬ್ಬರ ಬಂಧನ

    ತುಮಕೂರು: ಬೆಂಗಳೂರಿನ ಎನ್‍ಡಿಪಿಎಸ್ ಕೋರ್ಟಿನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರರಕಣದಲ್ಲಿ ಟ್ವಿಸ್ಟ್ ಲಭಿಸಿದ್ದು, ಕೌಟುಂಬಿಕ ಕಲಹದ ದ್ವೇಷದ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಪಟೂರು ಮೂಲದ ರಾಜಶೇಖರ್ ಹಾಗೂ ಗುಬ್ಬಿ ತಾಲೂಕು ಹಾಗಲವಾಡಿ ಮೂಲದ ವೇದಾಂತ ಎಂಬವರನ್ನು ಬಂಧಿಸಲಾಗಿದೆ. ಕೌಟುಂಬ ಕಲಹದ ದ್ವೇಷ ಕಾರಣದಿಂದ ರಾಜಶೇಖರ್ ಪತ್ರವನ್ನು ಕಳುಹಿಸಿದ್ದ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭಿಸಿದೆ.

    ಕೌಟುಂಬಿಕ ಕಲಹ: ಸದ್ಯ ಬಂಧನವಾಗಿರುವ ರಾಜಶೇಖರ್, ರಮೇಶ್ ಎಂಬಾತನ ಮೇಲೆ ದ್ವೇಷ ಸಾಧಿಸಲು ಪತ್ರ ಕಳುಹಿಸಿದ್ದ ಎನ್ನಲಾಗಿದೆ. ಈ ಇಬ್ಬರು ಒಂದೇ ಕುಟುಂಬದಲ್ಲಿ ಮದುವೆಯಾಗಿದ್ದಾರೆ. ಕೆಲ ಸಮಯದಿಂದ ರಾಜಶೇಖರ್ ಹಾಗೂ ರಮೇಶ್ ನಡುವೆ ಆಸ್ತಿ ವಿಚಾರವಾಗಿ ಜಗಳವಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ರಮೇಶ್‍ನನ್ನು ಸಿಲುಕಿಸಲು ಪ್ಲಾನ್ ಮಾಡಿದ್ದ ರಾಜಶೇಖರ್, ವೇದಾಂತನ ಸಹಾಯ ಪಡೆದು ಪತ್ರ ಬರೆಯಿಸಿದ್ದ. ಆ ಬಳಿಕ ಚೇಳೂರು ಅಂಚೆ ಕಚೇರಿಯಿಂದ ಪೋಸ್ಟ್ ಮಾಡಿದ್ದ.

    ರಾಜಶೇಖರ್ ಮಾವನ ಮನೆಯ ಆಸ್ತಿಗಾಗಿ ಅವರ ಇಬ್ಬರು ಮಕ್ಕಳನ್ನು ಮದುವೆ ಆಗಬೇಕು ಎಂದು ಪ್ಲಾನ್ ಮಾಡಿದ್ದ. ಆದರೆ ಅದು ಫಲಕಾರಿ ಆಗಿರಲಿಲ್ಲ. ಕಳೆದ 9 ತಿಂಗಳ ಹಿಂದೆ ರಮೇಶ್ ಅದೇ ಮನೆಯಲ್ಲಿ ಮದುವೆಯಾಗಿದ್ದ, ಪರಿಣಾಮ ಆತನ ವಿರುದ್ಧ ಪಿತೂರಿ ಮಾಡಿದ್ದ ರಾಜಶೇಖರ್ ಪತ್ರ ಬರೆದಿದ್ದ. ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ರಾಜಶೇಖರ್ ಆಸ್ತಿಗಾಗಿ ಕಳೆದ ವರ್ಷಗಳಿಂದ ನಾಟಕ ಮಾಡುತ್ತಿದ್ದ. ಅತ್ತೆ, ಹೆಂಡತಿ, ಮಾವ, ನಾದಿನಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡುತ್ತಿದ್ದ. ಈ ಹಿಂದೆ 2019ರಲ್ಲಿ ನಕಲಿ ಛಾಪಾ ಕಾಗದ ಸೃಷ್ಟಿ ಮಾಡಿ ರಮೇಶ್ ಹಾಗೂ ಮಾವನ ಮೇಲೆ ಆರೋಪ ಮಾಡಿದ್ದ. ಛಾಪಾಕಾಗದಲ್ಲಿ ಒಂದೂವರೆ ಲಕ್ಷಕ್ಕೆ ಮಗಳನ್ನೇ ಮಾರಾಟ ಮಾಡಿದ್ದಾರೆ ಎಂದು ಸೃಷ್ಟಿಸಿ ಆರೋಪಿಸಿದ್ದ. ಈ ವೇಳೆ ನಕಲಿ ಛಾಪಾಕಾಗದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ವೇಳೆ ಚೇಳೂರು ಪೊಲೀಸರು ರಾಜಶೇಖರನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಪೊಲೀಸರ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸಿದ ರಾಜಶೇಖರ್ ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದ ಎರಡು ಪ್ರಮುಖ ಪ್ರಕರಣಗಳ ಹೆಸರು ಬಳಿಸಿಕೊಂಡು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದು ಆ ಆರೋಪವನ್ನು ರಮೇಶ್ ಮೇಲೆ ಹೋಗುವಂತೆ ಮಾಡಿದ್ದ ಎಂಬ ಮಾಹಿತಿ ಲಭಿಸಿದೆ.

  • ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

    ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

    ಬೆಂಗಳೂರು: ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

    ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, ಜಂಟಿ ಪೊಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರಿಗೆ ಪತ್ರ ಬರೆದಿದ್ದರು.

    ಈ ಬೆದರಿಕೆ ಪತ್ರವನ್ನು ದ್ವೇಷದ ಹಿನ್ನೆಲೆಯಲ್ಲಿ ಬರೆಯಲಾಗಿದೆ ಎಂದು ಶಂಕಿಸಲಾಗಿದೆ. ಪತ್ರ ಕಳುಹಿಸಿರುವ ವ್ಯಕ್ತಿ ಪತ್ರದ ಜೊತೆಗೆ ವ್ಯಕ್ತಿಯೊಬ್ಬರ ವೋಟರ್ ಐಡಿ ಮತ್ತು ಎರಡು ಮೊಬೈಲ್ ನಂಬರ್ ಕಳುಹಿಸಿದ್ದ. ಪತ್ರದಲ್ಲಿರುವ ವೋಟರ್ ಐಡಿ ಕೊಡಿಯಳ್ಳಿ ಪಂಚಾಯತ್, ಹರಿವೇಸಂದ್ರ ಗ್ರಾಮ ಶಿವಪ್ರಕಾಶ್ ಎಂಬ ಹೆಸರಿನಲ್ಲಿದೆ. ಈ ಬೆದರಿಕೆ ಪತ್ರಗಳು ನಿನ್ನೆ ಸಂಜೆ ಐದು ಗಂಟೆ ವೇಳೆ ಬಂದಿದ್ದವು.

    ಎನ್‍ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬಂದಿದ್ದು, ನಟಿ ಸಂಜನಾ ಮತ್ತು ರಾಗಿಣಿಗೆ ಜಾಮೀನು ನೀಡಬೇಕು. ಇಲ್ಲವಾದಲ್ಲಿ ಕಾರು ಉಡಾಯಿಸೋದಾಗಿ ಹೇಳಲಾಗಿದೆ. ಇದಲ್ಲದೆ ಸಿಸಿಬಿ ಡಿಸಿಪಿ ರವಿಕುಮಾರ್ ಮತ್ತು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಗೆ ಸಹ ಬೆದರಿಕೆ ಪತ್ರ ಬಂದಿದೆ. ಡ್ರಗ್ ಕೇಸ್ ಹಾಗು ಡಿಜೆ ಹಳ್ಳಿ ಕೇಸ್ ತನಿಖೆ ನಿಲ್ಲಿಸದಿದ್ರೆ ಸರಿ ಇರೋದಿಲ್ಲ ಅಂತಾ ಕೂಡ ಎಚ್ಚರಿಸಲಾಗಿದೆ. ತುಮಕೂರಿನಿಂದ ಬಂದಿರುವ ಅನಾಮಧೇಯ ಪತ್ರದಲ್ಲಿ ಬಾಂಬ್ ಇದೆ ಅಂತಾ ಹೆದರಿಸಲಾಗಿತ್ತು. ಪತ್ರದ ಒಳಗೆ ಕೇಬಲ್ ವೈರ್ ಮತ್ತು ಬಂಡೆ ಕತ್ತರಿಸಲು ಬಳಸುವ ಡಿಟೋನೇಟರ್ ಇತ್ತು.