Tag: thug life film

  • ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ

    ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ

    ನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ (Kamal Haasan) ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ. ಇದನ್ನೂ ಓದಿ:ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ

    ಇಂದು (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

    ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.

  • Thug Life: ಕಮಲ್ ಹಾಸನ್ ಜೊತೆ ಚಿತ್ರೀಕರಣದಲ್ಲಿ ನಟ ಸಿಂಬು ಭಾಗಿ- ಲೀಕ್ ಆಯ್ತು ಫೋಟೋ

    Thug Life: ಕಮಲ್ ಹಾಸನ್ ಜೊತೆ ಚಿತ್ರೀಕರಣದಲ್ಲಿ ನಟ ಸಿಂಬು ಭಾಗಿ- ಲೀಕ್ ಆಯ್ತು ಫೋಟೋ

    ಕಾಲಿವುಡ್ ಸ್ಟಾರ್ ನಟ ಕಮಲ್ ಹಾಸನ್ (Kamal Hasaan) ಸದ್ಯ ಮಣಿರತ್ನಂ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ‘ಥಗ್ ಲೈಫ್’ (Thug Life) ಸಿನಿಮಾದ ಶೂಟಿಂಗ್ ದೆಹಲಿಯಲ್ಲಿ ಭರದಿಂದ ಸಾಗುತ್ತಿದೆ. ಚಿತ್ರೀಕರಣ ಫೋಟೋವೊಂದು ಲೀಕ್ ಆಗಿದೆ. ಕಮಲ್ ಹಾಸನ್ ಜೊತೆ ಭಾಗಿಯಾಗಿರುವ ಸಿಂಬು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಕಮಲ್ ಹಾಸನ್ ನಟನೆಯ 234ನೇ ಚಿತ್ರ ಇದಾಗಿದ್ದು, 36 ವರ್ಷಗಳ ನಂತರ ಮಣಿರತ್ನಂ ಜೊತೆ ಕೈಜೋಡಿಸಿದ್ದಾರೆ. ಇನ್ನೂ ‘ಥಗ್ ಲೈಫ್’ ಚಿತ್ರವು ಏಪ್ರಿಲ್ ಕೊನೆಯ ವಾರದಿಂದ ದೆಹಲಿಯಲ್ಲಿ ಶೂಟಿಂಗ್‌ಗಾಗಿ ಚಿತ್ರತಂಡ ಬೀಡು ಬಿಟ್ಟಿದೆ. ಮೇ 12ರವರೆಗೂ ಚೆನ್ನೈ ಮತ್ತು ದೆಹಲಿಯಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ:ಥೈಲ್ಯಾಂಡ್ ಬೀಚ್: ಬಿಕಿನಿಯಲ್ಲಿ ಕಾಣಿಸಿಕೊಂಡ ದಿಶಾ

    ಕಮಲ್ ಹಾಸನ್ ನಟನೆಯ ಸಿನಿಮಾದಲ್ಲಿ ತಮಿಳು ನಟ ಸಿಂಬು (Simbu) ಎಂಟ್ರಿ ಕೊಟ್ಟಿದ್ದಾರೆ. ಕಮಲ್ ಜೊತೆ ಸಿಂಬು ಚಿತ್ರೀಕರಣಕ್ಕೆ ಭಾಗಿಯಾಗಿರುವ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ಕಮಲ್, ಅಭಿರಾಮಿ, ಸಿಂಬು ಇದ್ದಾರೆ. ಕಮಲ್ ಸಖತ್ ಯಂಗ್ ಆಗಿ ಕಾಣಿಸಿಕೊಂಡ್ರೆ, ಸಿಂಬು ಕಪ್ಪು ಕನ್ನಡಕ ಧರಿಸಿರೋದು ನೋಡುಗರ ಗಮನ ಸೆಳೆದಿದೆ.

    ‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್, ಸಿಂಬು, ಅಭಿರಾಮಿ, ನಾಸರ್, ಜಯಂ ರವಿ, ತ್ರಿಶಾ, ಗೌತಮ್ ಕಾರ್ತಿಕ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್‌ನಲ್ಲಿದೆ ಚಿತ್ರತಂಡ.