Tag: thunderstorm

  • ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

    ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

    ಹನೋಯಿ: ವಿಯೆಟ್ನಾಂನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 8ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಶನಿವಾರ ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಾ ಲಾಂಗ್ ಕೊಲ್ಲಿ ಪ್ರವಾಸಿ ತಾಣದಲ್ಲಿ ದುರ್ಘಟನೆ ನಡೆದಿದೆ.

    ಪ್ರವಾಸಿ ದೋಣಿಯಲ್ಲಿ 48 ಮಂದಿ ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು. ಅವರೆಲ್ಲರೂ ವಿಯೆಟ್ನಾಮ್‌ನವರೇ ಎಂದು ವದರಿಗಳು ತಿಳಿಸಿವೆ. ವಿಷಯ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, 11 ಜನರನ್ನ ರಕ್ಷಣೆ ಮಾಡಿದ್ದಾರೆ.

  • ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

    ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

    – ಓರ್ವ ಬಾಲಕನಿಗೆ ಗಂಭೀರ ಗಾಯ

    ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು (Thunderstorm) ಬಡಿದು ಒಂದೇ ಕುಟುಂಬದ ಇಬ್ಬರು ದಾರುಣವಾಗಿ ಮೃತಪಟ್ಟು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ.

    ರಾರಾವಿ ಗ್ರಾಮದ ಭೀರಪ್ಪ (45), ಸುನೀಲ್ (26) ಮೃತ ದುರ್ದೈವಿಗಳುದ್ಸಿಡಿಲು ಬಡಿದ ಪರಿಣಾಮ ವಿನೋದ್ (14) ಗಂಭೀರ ಗಾಯಗೊಂಡಿದ್ದಾನೆ. ಒಂದೇ ಕುಟುಂಬದ ಭೀರಪ್ಪ, ಸುನೀಲ್ ಹಾಗೂ ವಿನೋದ್ ಕುರಿ ಮೇಯಿಸಲು ಹೋದಾಗ, ಮಳೆ ಬಂದಿದ್ದರಿಂದ ಮರದ ಆಶ್ರಯ ಪಡೆದಿದ್ದರು. ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್‌ನಿಂದ ಇಂದಿರಾಗಾಂಧಿ ಪೋಸ್ಟರ್ – ಬಿಜೆಪಿ ಕಿಡಿ

    ಗಂಭೀರ ಗಾಯಗೊಂಡಿರುವ ವಿನೋದ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಇಡೀ ರಾರಾವಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್

  • ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಯಾದಗಿರಿ: ಸಿಡಿಲು ಬಡಿದು ಒಂದೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೀನಕೇರ ತಾಂಡದಲ್ಲಿ ನಡೆದಿದೆ.

    ಮೃತರನ್ನು ಜೀನಕೇರ ತಾಂಡದ ನಿವಾಸಿಗಳಾದ ಒಂದೇ ಕುಟುಂಬದ ಚೇನು (22), ಕಿಶನ್ (30), ಸುಮಿ ಬಾಯಿ (30) ಸಾವನ್ನಪ್ಪಿದ್ದು, ಇನ್ನೊಬ್ಬ ಮೃತ ಬಾಲಕನ ಗುರುತು ಪತ್ತೆಯಾಗಿಲ್ಲ.ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ಕುಟುಂಬಸ್ಥರು ಸೇರಿ ಈರುಳ್ಳಿ ಹಚ್ಚಲು ಜಮೀನಿಗೆ ತೆರಳಿದ್ದರು. ಈ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಕ್ಷಿಸಿಕೊಳ್ಳಲು ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಇದೇ ವೇಳೆ ಸಿಡಿಲು ಬಡಿದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

    ಅವಘಡ ಸಂಭವಿಸಿದ ತಕ್ಷಣವೇ ಸ್ಥಳೀಯ ಆಸತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.

    ಯಾದಗಿರಿ (Yadagiri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಬಿಗ್ ಬಾಸ್ ಆರಂಭಕ್ಕೂ ಮೊದಲೇ ಕಂಟೆಸ್ಟೆಂಟ್ ಅನೌನ್ಸ್- ಯಾರದು?

  • ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ –  20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ – 20 ಲಕ್ಷ ಮೌಲ್ಯದ ವಸ್ತುಗಳು ನಾಶ

    ಚಿಕ್ಕಮಗಳೂರು: ಭಾರೀ ಗಾಳಿ-ಮಳೆಯ ವೇಳೆ ಅಡಿಕೆ ಶೆಡ್‍ಗೆ ಸಿಡಿಲು ಬಡಿದು ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವಿಟ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಭಾನುವಾರ ಮಧ್ಯಾಹ್ನದಿಂದ ಸಂಜೆವರೆಗೂ ಭಾರೀ ಮಳೆ ಸುರಿದಿದ್ದು, ರಾತ್ರಿ 9 ಗಂಟೆ ವೇಳೆಗೆ ಧಾರಾಕಾರ ಮಳೆ ವೇಳೆ ಬಡಿದ ಸಿಡಿಲು ಅಡಿಕೆ ಗೋಡೌನ್‍ಗೆ ಬಡಿದಿದೆ. ಈ ವೇಳೆ ಗೋಡಾನ್‍ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಟ್ರ್ಯಾಕ್ಟರ್-ಟ್ರಿಲ್ಲರ್, 15 ಕ್ವಿಂಟಾಲ್ ಒಣ ಅಡಿಕೆ, ಒಂದು ಅಡಿಕೆ ಸುಲಿಯುವ ಮೆಷಿನ್, ಒಂದು ಗೊರಗಲು ಮೆಷಿನ್ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ಬೆಂಕಿಗಾವುತಿಯಾಗಿದೆ.  ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

    ಗೋಡೌನ್ ಮುಂಭಾಗದಲ್ಲಿದ್ದ ಗೊಬ್ಬರಿಗಳನ್ನು ಸ್ಥಳಿಯರು ಬೇರೆ ಕಡೆ ಶಿಫ್ಟ್ ಮಾಡಿದ್ದಾರೆ. ಅಡಿಕೆ ಗೋಡೌ ನ್‍ನಲ್ಲಿದ್ದವರು ಮಳೆ ಕಡಿಮೆಯಾಗಿದೆ ಎಂದು ಮನೆಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರು ಗೋಡೌನ್‍ನಲ್ಲಿಯೇ ಇದ್ದಿದ್ದರೆ ಬಹುಶಃ ದೊಡ್ಡ ಮಟ್ಟದ ಸಾವು-ನೋವುಗಳು ಸಂಭವಿಸುವ ಸಾಧ್ಯತೆ ಇತ್ತು. ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

    ಗೋಡೌನ್‍ಗೆ ಬೆಂಕಿ ಬಿದ್ದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಆದರೆ, ಅವರು ಬೇರೆ ಕಡೆ ಹೋಗಿದ್ದರಿಂದ ಬರುವುದು ತಡವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಸ್ಥಳೀಯರೇ ಬೆಂಕಿಯನ್ನು ನಾಂದಿಸಿದ್ದರು. ಆದರೆ, ಇಡೀ ರಾತ್ರಿ ಹೊತ್ತಿ ಉರಿದ ಟ್ರ್ಯಾಕ್ಟರ್ ಬೆಳಗ್ಗೆ 10 ಗಂಟೆಯಾದರೂ ಉರಿಯುತ್ತಲೇ ಇದೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಕಳೆದುಕೊಂಡು ಕುಟುಂಬ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದೆ. ಸರ್ಕಾರ ನಮಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

  • ಕಲಬುರಗಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ, ಚಿಕ್ಕೋಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿ ಹೋದ 35 ಜಾನುವಾರುಗಳು

    ಕಲಬುರಗಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ, ಚಿಕ್ಕೋಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿ ಹೋದ 35 ಜಾನುವಾರುಗಳು

    ಕಲಬುರಗಿ/ಚಿಕ್ಕೋಡಿ: ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಆರ್ಭಟ ಇನ್ನೂ ನಿಲ್ಲುತ್ತಿಲ್ಲ. ಭಾರೀ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿದ್ದು, ಕಲಬುರಗಿಯಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕೋಡಿಯಲ್ಲಿ ಪ್ರವಾಹಕ್ಕೆ ಹಾನುವಾರುಗಳು ಕೊಚ್ಚಿ ಹೋಗಿವೆ.

    ಕಲಬುರಗಿಯ ಬಳವಡಗಿ ಗ್ರಾಮದ ರಾಜ್ ಅಹ್ಮದ್ (65) ಹಾಗೂ ಜಬ್ಬಾರ್ (32) ಸಿಡಿಲಿಗೆ ಬಲಿಯಾದವರು. ಮಂಗಳವಾರ ಮಧ್ಯಾಹ್ನ 3ಗಂಟೆಗೆ ಏಕಾಏಕಿ ಮೋಡಗಳ ಘರ್ಜನೆ ಶುರುವಾಗಿ ಸಿಡಿಲು ಅಪ್ಪಳಿಸಿದೆ. ಗ್ರಾಮದ ವಿಶ್ವನಾಥ ರೆಡ್ಡಿ ಮಾಲಿ ಪಾಟೀಲ್ ಅವರ ಹೊಲದಲ್ಲಿ ಕೂಲಿಯಾಳುಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸಿಡಿಲಬ್ಬರದ ಮಳೆಯ ಆರ್ಭಟಕ್ಕೆ ಹೆದರಿ ರಾಜ್ ಅಹ್ಮದ್ ಮತ್ತು ಜಬ್ಬಾರ್ ಸಮೀಪದ ಮರದ ಆಸರೆ ಪಡೆದಿದ್ದಾರೆ.

    ಈ ವೇಳೆ ದೊಡ್ಡ ಸದ್ದಿನ ಮೂಲಕ ಧರೆಗಪ್ಪಳಿಸಿದ ಸಿಡಿಲಿನ ಹೊಡೆತಕ್ಕೆ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರ ಶವಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊಚ್ಚಿ ಹೋದ ಜಾನುವಾರುಗಳು
    ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ 35ಕ್ಕೂ ಹೆಚ್ಚು ಜಾನುವಾರುಗಳು ಹಳ್ಳದಲ್ಲಿ ಉಂಟಾದ ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ಮಹಾಗಾಂವ ತಾಲೂಕಿನ ಬಲದೇರಿ ಗ್ರಾಮದಲ್ಲಿ ನಡೆದಿದೆ.

    ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿ ಜಾನುವಾರುಗಳು ಕೊಚ್ಚಿ ಹೋಗುವ ವೀಡಿಯೋ ಈಗ ವೈರಲ್ ಆಗಿದೆ. ರೈತರು ಜಾನುವಾರುಗಳನ್ನು ಮೇಯಿಸಲು ಹೋದ ಸಂದರ್ಭದಲ್ಲಿ ಏಕಾಏಕಿ ಪ್ರವಾಹ ಉಂಟಾಗಿ ಜಾನುವಾರುಗಳು ಕೊಚ್ಚಿ ಹೋಗಿವೆ. ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ 35 ಜಾನುವಾರುಗಳ ಪೈಕಿ 20ಕ್ಕೂ ಹೆಚ್ಚು ಜಾನುವಾರುಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೊಚ್ಚಿ ಹೋಗಿರುವ 15ಕ್ಕೂ ಹೆಚ್ಚು ರಾಸುಗಳಿಗೆ ಶೋಧ ಕಾರ್ಯ ಭರದಿಂದ ಸಾಗಿದೆ.

  • ಮನೆಯ ಗೋಡೆ ಕುಸಿದು 5 ವರ್ಷದ ಮಗು ಸಾವು- ಸಿಡಿಲಿಗೆ ಮೂವರು ರೈತ ಮಹಿಳೆಯರು ಬಲಿ

    ಮನೆಯ ಗೋಡೆ ಕುಸಿದು 5 ವರ್ಷದ ಮಗು ಸಾವು- ಸಿಡಿಲಿಗೆ ಮೂವರು ರೈತ ಮಹಿಳೆಯರು ಬಲಿ

    ಹಾವೇರಿ: ಇಂದು ಸಂಜೆ ವೇಳೆಗೆ ಸುರಿದ ಭಾರೀ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಐದು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ಐದು ವರ್ಷದ ಸಂದೀಪ ಮೆಳ್ಳಳ್ಳಿ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ 6 ವರ್ಷದ ಪ್ರತಾಪ, ಹದಿಮೂರು ವರ್ಷದ ರಕ್ಷಿತಾ ಮತ್ತು ನಾಲ್ವತ್ತೈದು ವರ್ಷದ ನೀಲಮ್ಮ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಅಕ್ಕಿಆಲೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಗ್ರಾಮದ ಗುಡ್ಡಪ್ಪ ಅಂಗಡಿ ಎಂಬುವರ ಮನೆಗೆ ಮಕ್ಕಳು ಆಟವಾಡಲು ತೆರಳಿದ್ದ ವೇಳೆ ಗುಡ್ಡಪ್ಪನ ಪಕ್ಕದ ಮನೆಯ ಗೋಡೆ ಬಿದ್ದು ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಆಡೂರು ಠಾಣೆ ಪಿಎಸ್‍ಐ ಆಂಜನೇಯ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ಹಾವೇರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬೆಳಗ್ಗಿನಿಂದ ಸಂಜೆವರೆಗೂ ಬಿಸಿಲಿನ ತಾಪ ಹೆಚ್ಚಾಗಿದ್ದರೆ, ರಾತ್ರಿ ವೇಳೆಗೆ ಗುಡುಗು ಸಿಡಿಲಲು ಸಮೇತ ಧಾರಾಕಾರವಾಗಿ ಮಳೆಯಾಗುತ್ತಿದೆ. ಜಿಲ್ಲೆಯ ರಾಣೇಬೆನ್ನೂರು, ಸವಣೂರು ಹಾಗೂ ಹಾವೇರಿ ನಗರದ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.

    ಸಿಡಲಿಗೆ 3 ಸಾವು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಕಿರಟಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಮೃತರನ್ನು ದ್ರಾಕ್ಷಾಯಿಣಿ ತೋಟಗೇರಿ (35), ವಿಜಯಲಕ್ಷ್ಮಿ ತೋಟಗೇರಿ (39) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಒಂದೇ ಕುಟುಂಬದವರಾಗಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದ ಬೆಟಗೇರಿ ಪೊಲೀಸರು, ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ರಾಜನಾಳ ಗ್ರಾಮದ ಸುಶಿಲೆವ್ವ ಪರಸಪ್ಪ ಚಿಮ್ಮಲಗಿ (50) ಎಂಬವರು ಕೂಡ ಸಿಡಿಲಿಗೆ ಬಲಿಯಾಗಿದ್ದು, ಜಮೀನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೈಸೂರು: ದನ ಮೇಯಿಸುತ್ತಿದ್ದಾಗ ಸಿಡಿಲು ಬಡಿದು 6 ಮಂದಿ ಸಾವು

    ಮೈಸೂರು: ದನ ಮೇಯಿಸುತ್ತಿದ್ದಾಗ ಸಿಡಿಲು ಬಡಿದು 6 ಮಂದಿ ಸಾವು

    ಮೈಸೂರು: ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ. ದನ ಮೇಯಿಸುವಾಗ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ನಂದಿನಾಥಪುರದಲ್ಲಿ ನಡೆದಿದೆ.

    ಪುಟ್ಟಣ್ಣ(60), ಸುವರ್ಣಮ್ಮ(45), ಸುದೀಪ್ ಹಾಗೂ ತಿಮ್ಮೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಾದ ಸುಜಯ್(18) ಮತ್ತು ಉಮೇಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

    ದನ ಮೇಯಿಸುತ್ತಿದ್ದ ವೇಳೆ ಜೋರಾಗಿ ಮಳೆ ಸುರಿಯಲು ಆರಂಭಿಸಿತ್ತು. ಮಳೆ ಜೋರಾದ ಕಾರಣ ರಕ್ಷಣೆಗಾಗಿ ಗುಡಿಯ ಆಶ್ರಯ ಪಡೆದಿದ್ದವರಿಗೆ ಏಕಕಾಲಕ್ಕೆ ಸಿಡಿಲು ಬಡಿದಿದೆ.

    ಮೃತರೆಲ್ಲರೂ ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.

  • ಧಾರವಾಡದಲ್ಲಿ ಭಾರೀ ಗಾಳಿ: ಹಾರಿ ಹೋದ 10 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ

    ಧಾರವಾಡದಲ್ಲಿ ಭಾರೀ ಗಾಳಿ: ಹಾರಿ ಹೋದ 10 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ

    ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮದಲ್ಲಿ ಭಾರಿ ಗಾಳಿಗೆ 10ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣೆಗಳು ಹಾರಿಹೋಗಿವೆ.

    ಇಂದು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಗಾಳಿ ಬೀಸಿದ್ದರಿಂದ ಮನೆಯ ತಗಡಿನ ಮೇಲ್ಛಾವಣಿಗಳು ಹಾರಿಹೋಗಿವೆ. ವಾಸವಿದ್ದ ಮನೆಗಳ ಮೇಲ್ಛಾವಣೆಯ ತಗಡುಗಳು ಹಾರಿದ್ದರಿಂದ ಗ್ರಾಮದ ಜನರು ಬಯಲಲ್ಲಿ ಕೂರುವಂತಾಗಿದೆ. ಗ್ರಾಮದ ಕೆಲ ಮನೆಗಳ ಹೆಂಚುಗಳು ಸಹ ಭಾರೀ ಗಾಳಿಗೆ ಹಾರಿವೆ.

    ಇನ್ನು ಧಾರವಾಡ ನಗರದ ಮಂಗಳವಾರಪೇಟೆಯಲ್ಲಿ ಯಂಡಿಗೇರಿ ಎಂಬವರ ಮನೆಯ ಆವರಣದಲ್ಲಿಯ ತೆಂಗಿನ ಮರಕ್ಕೆ ಸಿಡಲು ತಾಗಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ತೆಂಗಿನ ಮರಕ್ಕೆ ತಗುಲಿದ್ದ ಬೆಂಕಿಯನ್ನು ನಂದಿಸಿದ್ದಾರೆ.