ತೆಲುಗಿನ ಮಾಸ್ ಮಹಾರಾಜ ರವಿತೇಜ (Ravi Teja) ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ (Tiger Nageshwara Rao) ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. 5 ಭಾಷೆಯಲ್ಲಿ ಈ ಸಿನಿಮಾದ ಹಾಡು ಅನಾವರಣಗೊಂಡಿದೆ. ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ- ನೂಪುರ್ ಸನೋನ್ (Nupur Sanon)ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್‌ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.
70ರ ಕಾಲಘಟ್ಟದ ಹೈದ್ರಾಬಾದ್‌ನ ಬಳಿ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದೆ. ಈ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ.
ನೂಪುರ್ ಸನೋನ್- ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಇದನ್ನೂ ಓದಿ:ಸೆನ್ಸಾರ್ ಪಾಸಾದ ‘ಲೈನ್ ಮ್ಯಾನ್’ಗೆ ಸಿಕ್ತು ಯು ಸರ್ಟಿಫಿಕೇಟ್
‘ಟೈಗರ್ ನಾಗೇಶ್ವರ್ ರಾವ್’ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ದಸರಾ ಹಬ್ಬದ ಸಂದರ್ಭ, ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ. ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ (Raviteja)ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ (Release) ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ (Tiger Nageswara Rao) ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ.
ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ
70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.
ʻಧಮಾಕʼ (Dhamaka) ಚಿತ್ರದ ಸಕ್ಸಸ್ ಬಳಿಕ ತೆಲುಗು (Telagu) ಚಿತ್ರರಂಗದ ಮಾಸ್ ಮಹಾರಾಜ ರವಿತೇಜ (Raviteja) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ `ಟೈಗರ್ ನಾಗೇಶ್ವರ್ ರಾವ್’ ಬಿಡುಗಡೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ Tiger Nageswara Rao ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ವೇಳೆಯಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.
ವಂಶಿ ನಿರ್ದೇಶನದಲ್ಲಿ ತಯಾರಾಗಿರುವ `ಟೈಗರ್ ನಾಗೇಶ್ವರ್ ರಾವ್’ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ಅವರು `ಅರ್ಗವಾಲ್ ಆರ್ಟ್ಸ್’ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಂತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ.
70ರ ಕಾಲಘಟ್ಟದ ಹೈದ್ರಾಬಾದ್ ಸ್ಟುವರ್ಟ್‌ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಂಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್. ಮಧಿ- ಛಾಯಾಗ್ರಹಣ, ಶ್ರೀಕಾಂತ್ ವೀಸಾ- ಸಂಭಾಷಣೆ, ವಿ ಪ್ರಕಾಶ್ ಕುಮಾರ್- ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.
ಮಾಸ್ ಮಹಾರಾಜ ರವಿತೇಜ್ (Ravitej) ಅಕೌಂಟ್ ನಲ್ಲಿರುವ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ನಾಗೇಶ್ವರ ರಾವ್’ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ವಂಶಿ (Vamshi) ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪವನ್ ಕಲ್ಯಾಣ್ (Pawan Kalyan) ಮಾಜಿ ಪತ್ನಿ ರೇಣು ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ರೇಣು ಸಿನಿಮಾದಲ್ಲಿ ಪ್ರಮುಖವಾದ ಪಾತ್ರವೊಂದು ಪ್ಲೇ ಮಾಡುತ್ತಿದ್ದು, ಅವರ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಆಗಿದೆ.
ಭಾರತೀಯ ಸಾಮಾಜಿಕ ಕಾರ್ಯಕರ್ತೆ, ಲೇಖಕಿಯೂ ಆಗಿರುವ, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೇಮಲತಾ ಲವಣಂ ಪಾತ್ರದಲ್ಲಿ ರೇಣು ದೇಸಾಯಿ (Renu Desai) ಅಭಿನಯಿಸುತ್ತಿದ್ದು, ಶುಭ್ರ ಬಿಳಿ ಬಣ್ಣದ ಸೀರೆಯುಟ್ಟು ಪವರ್ ಫುಲ್ ಎಂಟ್ರಿ ಕೊಟ್ಟಿರುವ ರೇಣು ದೇಸಾಯಿ ಟೀಸರ್ ಝಲಕ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಕಾವ್ಯಶ್ರೀ ರೂಪೇಶ್‌ಗೆ ಪ್ರಪೋಸ್ ಮಾಡಿದ್ರೆ ಸಾನ್ಯಗ್ಯಾಕೆ ಸಿಟ್ಟು?
ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಾಣ ಮಾಡಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ ‘ಟೈಗರ್ ನಾಗೇಶ್ವರ ರಾವ್’ (Tiger Nageswara Rao) ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮೂಲಕ ರವಿ ತೇಜ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.
ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ನಟಿಸುತ್ತಿದ್ದು, ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಆರ್.ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿರ್ಮಾಪಕ ಅಭಿಷೇಕ್ ಅರ್ಗವಾಲ್ ಟೈಗರ್ ನಾಗೇಶ್ವರ್ ರಾವ್ ಎಂಬ ಪ್ಯಾನ್ ಇಂಡಿಯಾ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಮಾಸ್ ಮಹಾರಾಜ ರವಿತೇಜ್ ನಾಯಕನಾಗಿ ಬಣ್ಣ ಹಚ್ಚಿದ್ದು, ಯುಗಾದಿ ಹಬ್ಬಕ್ಕೆ ಅದ್ಧೂರಿಯಾಗಿ ಮುಹೂರ್ತ ನೆರವೇರಿದೆ. ಮೆಗಾಸ್ಟಾರ್ ಚಿರಂಜೀವಿ, ಈ ಸಿನಿಮಾಗೆ ಕ್ಲಾಪ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಬಳಿಕ ಟೈಗರ್ ನಾಗೇಶ್ವರ್ ರಾವ್ ಪ್ರಿ ಲುಕ್ ರಿಲೀಸ್ ಮಾಡಿ ಮಾತಿಗೆ ಇಳಿದ ಚಿರಂಜೀವಿ, ಕೋವಿಡ್ ಸಂದರ್ಭದಲ್ಲಿ ಟೈಗರ್ ನಾಗೇಶ್ವರ್ ರಾವ್ ಕಥೆಯನ್ನು ಹೇಳಿದ್ದರು. ಆದರೆ ಕೆಲ ಸಮಸ್ಯೆಯಿಂದ ನಾನು ಈ ಸಿನಿಮಾ ಒಪ್ಪಿಕೊಳ್ಳಲಿಲ್ಲ. ಈಗ ನನ್ನ ತಮ್ಮ ರವಿತೇಜ್ ಈ ಸಿನಿಮಾ ಮಾಡ್ತಿದ್ದಾರೆ. ನಾನು ಚಿಕ್ಕವನಿದ್ದಾಗ ಸ್ಟುವರ್ಟ್‍ಪುರಂ ನಾಗೇಶ್ವರ ರಾವ್ ಬಗ್ಗೆ ಕೇಳಿದ್ದೆ. ನನ್ನ ತಂದೆ ಚಿರಾಳ ಪೇರಾಲದಲ್ಲಿ ಕೆಲಸ ಮಾಡುತ್ತಿದ್ದರು. ಸ್ಟುವರ್ಟ್‍ಪುರಂ ಪಕ್ಕದಲ್ಲೇ ಇತ್ತು. ಅಲ್ಲಿನ ಜನರೆಲ್ಲ ನಾಗೇಶ್ವರನನ್ನು ಹೀರೋ ಎಂದು ಹೊಗಳುತ್ತಿದ್ದರು. ವರ್ಷಗಳ ನಂತರ ವಂಶಿ ಒಂದು ಕಮರ್ಷಿಯಲ್ ಕಥೆಯೊಂದಿಗೆ ಬಂದರು. ರವಿತೇಜ ಈ ಸಿನಿಮಾ ಮಾಡುತ್ತಿರುವುದು ಚೆನ್ನಾಗಿದೆ. ಅಭಿಷೇಕ್ ಅಗರ್ವಾಲ್ ಇದನ್ನು ಮಾಡುತ್ತಿರುವುದು ನನಗೆ ಖುಷಿ ತಂದಿದೆ. ರವಿತೇಜ್, ಅಭಿಷೇಕ್ ಮತ್ತು ವಂಶಿ ಅವರು ಕಾಶ್ಮೀರ ಫೈಲ್‍ಗಳಿಗಿಂತ ದೊಡ್ಡ ಹಿಟ್ ಆಗಲಿ ಎಂದು ಹಾರೈಸಿದರು. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ
ನಾಯಕ ಕಿಶನ್ ರೆಡ್ಡಿ, ಅಭಿಷೇಕ್ ಅಗರ್ವಾಲ್ ಮತ್ತು ಅವರ ತಂದೆ ಹಲವು ವರ್ಷಗಳಿಂದ ಕುಟುಂಬ ಸ್ನೇಹಿತರು. ಅವರು ಇತ್ತೀಚೆಗೆ ದಿ ಕಾಶ್ಮೀರ್ ಎಂಬ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಕಾಶ್ಮೀರಿ ಪಂಡಿತರ ಸಂಕಟವನ್ನು ಭಾರತೀಯರೆಲ್ಲರಿಗೂ ತಿಳಿಯುವಂತೆ ಮಾಡಿದರು. ನಿರ್ದೇಶಕ ವಿವೇಕ್ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಥೆಯನ್ನು ತೋರಿಸಿದರು. ಪಂಡಿತರ ಬಗ್ಗೆ ಇನ್ನೂ ಹೆಚ್ಚಿನ ಚರ್ಚೆ ಇದೆ. ಹೆಚ್ಚು ಜನ ಸಿನಿಮಾ ಮಾಡುತ್ತಾರೆ. ಈಗ ಅವರು ಟೈಗರ್ ನಾಗೇಶ್ವರ ರಾವ್ ಅವರ ಕಥೆಯನ್ನು ಆಯ್ಕೆ ಮಾಡಿದ್ದಾರೆ. ಈ ಚಿತ್ರವೂ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದರು.
ನಿರ್ದೇಶಕ ವಂಶಿ, ನಾನು ರವಿತೇಜ ಅವರೊಂದಿಗೆ ನಾಲ್ಕು ವರ್ಷ ಪ್ರಯಾಣ ಮಾಡಿದ್ದೇನೆ. ಅವರು ಕಥೆಯನ್ನು ಇಷ್ಟಪಟ್ಟಿದ್ದಾರೆ ಮತ್ತು ಅದನ್ನು ಮಾಡಲು ಒಪ್ಪಿಕೊಂಡಿದ್ದಾರೆ. ರವಿತೇಜ್ ಅಭಿಮಾನಿಗಳು ಮಾತ್ರವಲ್ಲದೆ ಎಲ್ಲಾ ತೆಲುಗು ನಾಯಕರ ಅಭಿಮಾನಿಗಳು ಚಿತ್ರವನ್ನು ಮೆಚ್ಚುತ್ತಾರೆ ಎನ್ನುವ ಆತ್ಮವಿಶ್ವಾಸದಿಂದ ಹೇಳಿದರು.
ನಿರ್ಮಾಪಕ ಅಭಿಷೇಕ್ ಅಗರ್ವಾಲ್, ಚಿರಂಜೀವಿ, ಕಿಶನ್ ರೆಡ್ಡಿ ಅವರಿಗೆ ಧನ್ಯವಾದಗಳು. ಕಾಶ್ಮೀರ್ ಫೈಲ್ಸ್ ಅನ್ನು ದೊಡ್ಡ ಹಿಟ್ ಮಾಡಿದ ಪ್ರೇಕ್ಷಕರಿಗೆ ನಾನು ಮತ್ತೊಮ್ಮೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರು ಟೈಗರ್ ನಾಗೇಶ್ವರ ರಾವ್ ಸಿನಿಮಾ ಆಶೀರ್ವಾದ ಮಾಡಿ ಎಂದರು.
ರವಿತೇಜ ಸಿನಿಕರಿಯರ್ ಬಿಗ್ ಬಜೆಟ್ ಚಿತ್ರ: ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಮೂಲಕ ಬಾಲಿವುಡ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಕನಸಿನ ಸಿನಿಮಾವಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾ, 1970ರಲ್ಲಿ ಸ್ಟುವರ್ಟ್‍ಪುರಂ ಎಂಬಲ್ಲಿ ನಡೆದ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣವಾಗಿ ತಮ್ಮ ಮೇಕ್ ಓವರ್‌ನ್ನು ಬದಲಿಸಿಕೊಂಡಿದ್ದಾರೆ. ಒಂದು ವಿಭಿನ್ನ ಪಾತ್ರದಲ್ಲಿ ರವಿತೇಜ್ ಮಿಂಚಲಿದ್ದಾರೆ. ಬಾಲಿವುಡ್ ಬ್ಯೂಟಿ ಕೃತಿ ಸನೂನ್ ಸಹೋದರಿ ನೂಪೂರ್ ಸನೂನ್ ರವಿತೇಜ್‍ಗೆ ಜೋಡಿಯಾಗಿ ಮಿಂಚಲಿದ್ದಾರೆ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ
ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದ್ದು, 70ರ ದಶಕದ ಟಚ್ ಜೊತೆಗೆ ಮೈ ಜುಮ್ ಎನಿಸುವ ಆಕ್ಷನ್ ಸೀನ್ಸ್ ಸಿನಿಮಾದಲ್ಲಿರಲಿದೆ. ಆರ್.ಮ್ಯಾಥಿ ಐಎಸ್ ಸಿ ಕ್ಯಾಮೆರಾ ವರ್ಕ್, ಜೆವಿ ಪ್ರಕಾಶ್ ಕುಮಾರದ್ ಸಂಗೀತ, ಶ್ರೀಕಾಂತ್ ವಿಸ್ಸಾ ಸಂಭಾಷಣೆ ಬರೆದಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಶರತ್ ಮಂಡವ, ತ್ರಿನಾಧ್ ರಾವ್ ನಿಕ್ಕಿನಾ, ಸುಧೀರ್ ವರ್ಮಾ, ತೇಜ ಮತ್ತು ಇತರರು ಉಪಸ್ಥಿತಿರಿದ್ದರು.