Tag: TipuSultan

  • ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ

    ಅಶ್ವಥ್ ನಾರಾಯಣ್ ಹೇಳಿಕೆ ನಾನೂ ಒಪ್ಪಲ್ಲ, ಯಾವತ್ತೂ ಸಾವು ಬಯಸಬಾರದು – ಸಿ.ಟಿ ರವಿ

    ನವದೆಹಲಿ: ಸಚಿವ ಅಶ್ವಥ್ ನಾರಾಯಣ್‌ (Ashwath Narayan) ನೀಡಿದ ಹೇಳಿಯನ್ನು ನಾನೂ ಒಪ್ಪುವುದಿಲ್ಲ. ಸಿದ್ದರಾಮಯ್ಯ (Siddaramaiah) ನಮ್ಮವರೆ. ನಮ್ಮ ನಡುವೆ ಸೈದ್ಧಾಂತಿಕ, ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸಾವನ್ನು ಯಾವತ್ತೂ ಬಯಸಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ.

    ಅಶ್ವಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 30ಕ್ಕೂ ಅಧಿಕ ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ (BJP). ನಮ್ಮ ಪಕ್ಷವೂ ಇಂತಹ ಹೇಳಿಕೆಯನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯ ಅವರನ್ನು ಸೋಲಿಸಿ ಎನ್ನುವ ಹೇಳಿಕೆಗೆ ನಮ್ಮ ವಿರೋಧ ಇಲ್ಲ. ರಾಜಕೀಯದಲ್ಲಿ ಇದು ಸಾಮಾನ್ಯ. ಆದರೆ ಅಶ್ವಥ್ ನಾರಾಯಣ್ ಯಾವ ಆಯಾಮದಲ್ಲಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಪೂರ್ಣ ಮಾಹಿತಿ ಇಲ್ಲದೇ ಮಾತನಾಡುವುದು ತಪ್ಪಾಗುತ್ತದೆ. ಅದೇನಿದ್ದರೂ ಸಿದ್ದರಾಮಯ್ಯ (Siddaramaiah) ಅವರಿಗೆ ದೇವರು ದೀರ್ಘಾಯುಷ್ಯ ಕರುಣಸಲಿ ಎಂದು ಹಾರೈಸಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

    ಶಾಸಕ ಯು.ಟಿ ಖಾದರ್ (UT Khader) ಅವರ ಮೀರ್ ಸಾಧಿಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೀರ್ ಸಾಧಿಕ್ ಟಿಪ್ಪು ಸುಲ್ತಾನ್ (Tipu Sultan) ಆಶ್ರಯದಲ್ಲಿದ್ದವರು. ಟಿಪ್ಪುವನ್ನ ಯಾರು ಪ್ರೀತಿಸ್ತಾರೆ? ಟಿಪ್ಪುವನ್ನ ಪ್ರೀತ್ಸೋರು ಕಾಂಗ್ರೆಸ್‌ನವ್ರು. ಹೀಗಾಗಿ ಕಾಂಗ್ರೆಸ್‌ನವರು ಮೀರ್ ಸಾಧಿಕ್‌ಗಳು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮೋದಿ ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ: ಕೌಸರ್‌ ಜಹಾನ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ

    ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ

    ಉಡುಪಿ: ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

    ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬಂಧಿಸಿದಂತೆ ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಲಾಂ ತೆಗೆದು ದೇವರ ಹೆಸರಿನಲ್ಲಿ ಪೂಜೆ ಮಾಡಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಹಿಂದೂ ವಿರೋಧಿ ಎಂಬುದಕ್ಕೆ ಆಧಾರವೇನಿದೆ..?: ಪ್ರೊ.ಟಿ ಮುರುಗೇಶಿ

    tippu

    ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ. ಹಿಂದೂ ಸಮಾಜವನ್ನು ನಾಶ ಮಾಡಿದ್ದಾನೆ. ಇಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವಂತಹ ಅಪಮಾನ. ಸಲಾಂ ಹೆಸರನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇಲ್ಲದಿದ್ದರೆ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

    ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಕಿಡಿ ಕಾರಿದ್ದಾರೆ.