Tag: Tirthahalli

  • ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

    ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

    ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ

    ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

    ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಗುಡ್ ಬೈ ಎಂದು ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ

  • ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

    ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

    ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುಗ ಆಘಾತಕಾರಿ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ.

    ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಪುತ್ರ ಭರತ್ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ರಮೇಶ್ ಕೊನೆಯುಸಿರು

    ದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್

    ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್

    ಶಿವಮೊಗ್ಗ: ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಡಬಲ್ ಮರ್ಡರ್ (Murder) ಆಗಿರುವ ಭೀಕರ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನಲ್ಲಿ ನಡೆದಿದೆ.

    ತೀರ್ಥಹಳ್ಳಿಯ ಕುರುವಳ್ಳಿ ಸಮೀಪದ ಸಮುದಾಯ ಭವನದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಬಂದ ಕೂಲಿ ಕಾರ್ಮಿಕರನ್ನು ಹತ್ಯೆ ಮಾಡಲಾಗಿದ್ದು, ಅವರನ್ನು ದಾವಣಗೆರೆ ಮೂಲದ ಮಂಜಪ್ಪ(45) ಹಾಗೂ ಬೀರಪ್ಪ(46) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ – ನಾಲ್ವರು ಸಾವು, 15 ಮಂದಿಗೆ ಗಾಯ

    ಹಣದ ವ್ಯವಹಾರಕ್ಕೆ ಸಂಬಂಧಪಟ್ಟಂತೆ ರಾಜಪ್ಪ ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ 25 ರಂದು ವಿಶ್ವಕರ್ಮ ಸಮುದಾಯ ಭವನ ಉದ್ಘಾಟನೆಗೊಳ್ಳಬೇಕಿತ್ತು. ಇದೀಗ ಸಮುದಾಯ ಭವನ ಉದ್ಘಾಟನೆಗೂ ಕೆಲವೇ ದಿನಗಳ ಮುನ್ನ ಇಬ್ಬರ ಕೊಲೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆಗೈದ ಪತಿಯ ಅಣ್ಣ!

  • ನೋ ಟವರ್, ನೋ ಪವರ್-ಆನ್‍ಲೈನ್ ಶಿಕ್ಷಣಕ್ಕಾಗಿ ಮಕ್ಕಳು, ಪೋಷಕರ ಪರದಾಟ

    ನೋ ಟವರ್, ನೋ ಪವರ್-ಆನ್‍ಲೈನ್ ಶಿಕ್ಷಣಕ್ಕಾಗಿ ಮಕ್ಕಳು, ಪೋಷಕರ ಪರದಾಟ

    -ಮಲೆನಾಡಿನ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ

    ಶಿವಮೊಗ್ಗ : ಆನ್‍ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್‍ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ ಇದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಬಗ್ಗೆ ಒಲವು ತೋರುತ್ತಿಲ್ಲ. ನೆಟ್ ವರ್ಕ್ ಸಿಗಬೇಕು ಅಂದ್ರೆ ಊರಿಂದ ಆಚೆ ಹೋಗಬೇಕಿದೆ.

    ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಈ ಮಹಾಮಾರಿಯಿಂದ ಮಕ್ಕಳ ಶೈಕ್ಷಣಿಕ ಕಲಿಕೆಯ ಮೇಲೆಯೂ ಪರಿಣಾಮ ಬೀರಿದೆ. ಕೊರೊನಾ ಭಯದಿಂದಾಗಿ ಇದುವರೆಗೂ ಶಾಲಾ ಕಾಲೇಜುಗಳು ಆರಂಭವಾಗಿಲ್ಲ. ಆದರೆ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸಕಾರ ಇತ್ತೀಚಿಗೆ ಆನ್‍ಲೈನ್ ಕ್ಲಾಸ್ ನ ಮೊರೆ ಹೋಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಮಾತ್ರ ಈ ವ್ಯವಸ್ಥೆ ವರ್ಕ್ ಔಟ್ ಆಗುತ್ತಿಲ್ಲ ಎಂಬ ಮಾತಿಗೆ ಸಾಕ್ಷಿ ದೊರೆತಿದ್ದು, ಅದೆಷ್ಟೋ ಗ್ರಾಮಗಳಲ್ಲಿ ಮಳೆಗಾಲ ಆಗಿರುವುದರಿಂದಾಗಿ 2 ದಿನಕ್ಕೊಮ್ಮೆ ಕರೆಂಟ್ ಬರುತ್ತಿದ್ದು, ಇದು ಕೂಡ ಸಮಸ್ಯೆಯಲ್ಲೊಂದಾಗಿದೆ. ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಸರ್ಕಾರ, ಸದ್ಯ ಆನ್‍ಲೈನ್ ಶಿಕ್ಷಣಕ್ಕೆ ಅವಕಾಶ ಮಾಡಿ ಕೊಟ್ಟಿದೆ. ಈ ಆನ್‍ಲೈನ್ ಶಿಕ್ಷಣ ನಗರ ಪ್ರದೇಶದ ಮಕ್ಕಳಿಗೆ ಮಾತ್ರ ಅನುಕೂಲಕರವಾಗುತ್ತದೆಯೇ ಹೊರತು ಗ್ರಾಮೀಣ ಭಾಗದ ಮಕ್ಕಳಿಗಲ್ಲ. ಇದನ್ನೂ ಓದಿ:  ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ- ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆ

    ಇಂತಹ ಸ್ಥಿತಿಯಿಂದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೆಂದಾಳುಬೈಲು ಹೊರತಾಗಿಲ್ಲ. ಕುಂದಾದ್ರಿ ಬೆಟ್ಟದ ಬುಡದಲ್ಲಿ ಇರುವ ಪುಟ್ಟ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಇದೆ. ಇಲ್ಲಿನ ಬಹುತೇಕ ಮಂದಿ ಕೂಲಿ ಮಾಡಿ ಜೀವನ ನಡೆಸುವವರು. ಇವರು ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ಹಿಂದೆ ಮುಂದೆ ನೋಡ್ತಾರೆ. ಅದರಲ್ಲೂ ಮಕ್ಕಳಿಗೆ ಮೊಬೈಲ್ ಕೊಡಿಸುವುದು ಆಗದ ಮಾತು. ಮೊಬೈಲ್ ಇದ್ದರೂ ನೆಟ್‍ವರ್ಕ್ ಇಲ್ಲ. ಮೊಬೈಲ್ ಚಾರ್ಜ್ ಮಾಡಲು ಪವರ್ ಇರುವುದಿಲ್ಲ. ಇದು ಇಲ್ಲಿನ ಸಮಸ್ಯೆ. ನಗರ ಭಾಗದ ಬಹುತೇಕ ಪೋಷಕರಿಗೆ ಆನ್‍ಲೈನ್ ಶಿಕ್ಷಣ ಮಾಡಿರುವುದು ಸಂತಸ ತಂದಿದೆ. ಮಕ್ಕಳಿಗೆ ಶಿಕ್ಷಣ ಸಿಗುತ್ತದೆ ಅನ್ನುವುದಕ್ಕಿಂತ, ಮಕ್ಕಳು ಮನೆಯಲ್ಲಿ ನೀಡುತ್ತಿದ್ದ ಕಾಟದಿಂದ ಬೇಸತ್ತು ಪೋಷಕರು ಒಪ್ಪಿಕೊಂಡಿದ್ದಾರೆ. ಆದರೆ ಶಿಕ್ಷಣದಿಂದ ವಂಚಿತರಾಗುವ ಭಯದಲ್ಲಿ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪೋಷಕರು ಇದ್ದಾರೆ. ಇದನ್ನೂ ಓದಿ: ಮಗಳ ಆನ್‍ಲೈನ್ ಶಿಕ್ಷಣಕ್ಕಾಗಿ ಕಿವಿಯೊಲೆ ಮಾರಿದ ತಾಯಿ

    ಅಷ್ಟಕ್ಕೂ ಆನ್‍ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಅತೀ ಮುಖ್ಯವಾಗಿದೆ. ಆದರೆ, ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡೂ ಇಲ್ಲ. ವಿದ್ಯುತ್ ಸಮಸ್ಯೆಯಿಂದಾಗಿ, ವಿದ್ಯಾರ್ಥಿಗಳು ಹೇಗೆ ಆನ್‍ಲೈನ್ ಕ್ಲಾಸ್ ನೋಡಲು ಸಾಧ್ಯವಾಗುತ್ತದೆ ಎಂದು ಪೋಷಕರು ಪ್ರಶ್ನಿಸುವಂತಾಗಿದೆ. ಮಲೆನಾಡಿನ ಭಾಗದಲ್ಲಿ ಮೊಬೈಲ್ ಟವರ್ ಗಳ ಸಮಸ್ಯೆ ವಿಪರೀತವಿದೆ. ಇದನ್ನೂ ಓದಿ: ಆನ್‍ಲೈನ್ ಕ್ಲಾಸ್‍ಗಾಗಿ ದಟ್ಟಾರಣ್ಯದಲ್ಲಿ ಟೆಂಟ್ ಹಾಕಿ ಕುಳಿತ ವಿದ್ಯಾರ್ಥಿಗಳು

    ಇಲ್ಲಿ ಸಾಮಾನ್ಯವಾಗಿ ಫೋನ್ ನಲ್ಲಿ ಮಾತನಾಡಬೇಕಾದರೆ ಮನೆ ಮೇಲೆ ಹತ್ತಬೇಕು, ಮರ ಏರಬೇಕು ಇಲ್ಲವೇ ಸಮೀಪದ ಬೆಟ್ಟ ಹತ್ತುವ ಸ್ಥಿತಿ ಇದೆ. ಹೀಗಿರುವಾಗ ಶಿಕ್ಷಣದಿಂದ ವಂಚಿತರಾಗುವ ಭಯದಲ್ಲಿ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಸ್ಥಿತಿಯಲ್ಲಿ ಮೊಬೈಲ್ ಇಂಟರ್ ನೆಟ್ ನೆಟ್‍ವರ್ಕ್ ದೊರೆಯುವುದು ಸಾಹಸವೇ ಸರಿ. ವಿದ್ಯಾಭ್ಯಾಸದ ಬಗ್ಗೆ ಅರಿವು ಇರುವುದರಿಂದ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಾರೆ. ಆದರೆ ಅವರಿಗೆ ಮೊಬೈಲ್ ನೀಡುವ ಶಕ್ತಿ ಇರುವುದಿಲ್ಲ. ಅದಕ್ಕೆ ಪ್ರತಿ ತಿಂಗಳು ರೀಚಾರ್ಜ್ ಮಾಡಿಸಲು ಸಹ ಆಗುವುದಿಲ್ಲ. ಇಂತಹ ಸ್ಥಿತಿ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಇದೆ. ಅದರಲ್ಲೂ ಆನ್‍ಲೈನ್ ಕ್ಲಾಸ್ ಗಳು ಸಾಮಾನ್ಯ ತರಗತಿಗಿಂತ ಭಿನ್ನವಾಗಿರುತ್ತವೆ. ಸಾಮಾನ್ಯ ತರಗತಿಯಲ್ಲಿ ಶಿಕ್ಷಕರು ಪಾಠ ಮಾಡಿದ ಮೇಲೆ ಅಲ್ಲಿಯೇ ಚರ್ಚೆ ನಡೆಸಬಹುದು. ಆನ್‍ಲೈನ್ ಕ್ಲಾಸ್ ನಲ್ಲಿ ಅವರು ಹೇಳಿದ್ದು, ಬೇಗ ಅರ್ಥವಾಗುವುದಿಲ್ಲ. ಪ್ರಶ್ನೆ ಕೇಳಲು ಸಹ ಆಗುವುದಿಲ್ಲ. ಇದರಿಂದ ಆನ್‍ಲೈನ್ ಕ್ಲಾಸ್ ಗಳನ್ನು ಮಲೆನಾಡಿನ ವಿದ್ಯಾರ್ಥಿಗಳು ಮತ್ತು ಪೋಷಕರು ಅಷ್ಟಾಗಿ ಇಷ್ಟಪಡುತ್ತಿಲ್ಲ.

    ಒಟ್ಟಾರೆ ಆನ್‍ಲೈನ್ ಶಿಕ್ಷಣ ಎಂಬುದು ಎಲ್ಲರಿಗೂ ಅಲ್ಲ ಎಂಬುದು ಕೆಲವೇ ದಿನಗಳಲ್ಲಿಯೇ ತಿಳಿದು ಬಂದಿದ್ದು, ಮಲೆನಾಡು ಸೇರಿದಂತೆ, ಅದೆಷ್ಟೋ ಗ್ರಾಮಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಇದು ತಲೆನೋವಾಗಿ ಪರಿಣಮಿಸಿದೆ

  • ಕುಸಿದು ಬಿತ್ತು ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ- ತಪ್ಪಿದ ಭಾರೀ ಅನಾಹುತ

    ಕುಸಿದು ಬಿತ್ತು ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ- ತಪ್ಪಿದ ಭಾರೀ ಅನಾಹುತ

    ಶಿವಮೊಗ್ಗ: ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

    ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದ ಕಟ್ಟಡ ಹಲವು ವರ್ಷಗಳಿಂದ ಶಿಥಿಲಗೊಂಡಿತ್ತು. ಶಿಥಿಲಗೊಂಡಿದ್ದ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು. ಆದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದರು.

    ಇಂದು ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದೆ. ಆದರೆ ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಜನ ಪ್ರತಿನಿಧಿಗಳು ಇನ್ನಾದರೂ ಈ ಕುರಿತು ಚಿತ್ತ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

    ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

    – ಬಾಳೇಬೈಲು ಬಳಿಯ ನರ್ಸ್‍ಗೆ ಕೊರೊನಾ
    – ಮನೆ, ಹೋಟೆಲ್ ಸೀಲ್ ಡೌನ್

    ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ವರೆಗೆ ತೀರ್ಥಹಳ್ಳಿ ತಾಲೂಕಿನ 7 ಮಂದಿಗೆ ಸೋಂಕು ಪತ್ತೆಯಾಗಿತ್ತು. ಆದರೆ ಇದೀಗ 8ನೇ ಪ್ರಕರಣ ಪತ್ತೆಯಾಗಿದೆ. ಇದು ತೀರ್ಥಹಳ್ಳಿ ಪಟ್ಟಣದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ.

    ಈ ಬಾರಿ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲುವಿನ 33 ವರ್ಷದ ನರ್ಸ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದ ಮನೆ, ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದೆ. ಪಾಸಿಟಿವ್ ಪತ್ತೆಯಾದ ನರ್ಸ್ ಕುಟುಂಬದ 8 ಮಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

    ಕೊರೊನಾ ಪಾಸಿಟಿವ್ ಬಂದಿರುವ ಮಹಿಳೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಸೋಂಕಿತ ನರ್ಸ್ ಉಡುಪಿಯ ಅಜ್ಜರಕಾಡು ಹೆಬ್ರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಸೋಂಕು ತಗುಲಿರಬಹುದು ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅವರ ಮನೆ ಸುತ್ತಮುತ್ತ ಸೀಲ್ ಡೌನ್ ಮಾಡಲಾಗಿದೆ. ತೀರ್ಥಹಳ್ಳಿಯ ಇಂದಿರಾನಗರಕ್ಕೆ ಹೋಗುವ ರಸ್ತೆಯಿಂದ ಸುಮಾರು 300 ಮೀಟರ್ ಸೀಲ್ ಡೌನ್ ಮಾಡಲಾಗಿದೆ.

    ಇಲ್ಲಿ 4 ಕುಟುಂಬಗಳಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ನರ್ಸ್ ಪತಿ ಆಟೋ ಚಾಲಕನಾಗಿದ್ದು, ಅನೇಕ ಕಡೆ ಓಡಾಡಿರುವ ಶಂಕೆ ಇದೆ. ಮನೆ ಪಕ್ಕದ ಸ್ಥಳೀಯ ಹೋಟೆಲ್ ಕೂಡ ಸೀಲ್‍ಡೌನ್ ಮಾಡಲಾಗಿದೆ. ಅಂದಹಾಗೆ ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಪ್ರಕರಣವಾಗಿ ಇದು ದಾಖಲಾಗಿದ್ದು, ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

    ಶಿವಮೊಗ್ಗದ ಜಿ.ಎಸ್.ಕೆ.ಎಂ. ರಸ್ತೆಯಲ್ಲಿರುವ ಪಿ.ಡಬ್ಲೂ.ಡಿ ಕ್ವಾಟ್ರಸ್ ನಲ್ಲಿಯೂ ಓರ್ವ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಬಡಾವಣೆಯ ಒಂದು ರಸ್ತೆಯನಗನು ಸೀಲ್ ಡೌನ್ ಮಾಡಲಾಗಿದೆ. ಈತ ಕಳೆದೆರೆಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಆಗಮಿಸಿದ್ದ ಎಂದು ತಿಳಿದು ಬಂದಿದ್ದು, ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕಲೆ ಹಾಕುತ್ತಿದೆ.