Tag: tirupati balaji temple

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಿಷಬ್ ಪಂತ್

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಿಷಬ್ ಪಂತ್

    ತಿರುಪತಿ: ಟೀಂ ಇಂಡಿಯಾ (Team India) ಆಟಗಾರ ರಿಷಬ್ ಪಂತ್ (Rishabh Pant) ಮತ್ತು ಅಕ್ಷರ್ ಪಟೇಲ್ (Axar Patel) ಇಂದು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ (Tirupati Balaji Temple) ಆಶೀರ್ವಾದ ಪಡೆದಿದ್ದಾರೆ.

    ಈ ಬಗ್ಗೆ ರಿಷಬ್, ದೇವಾಲಯದ ಶಕ್ತಿಯನ್ನು ವಿವರಿಸಲು ಪದಗಳು ಸಾಕಾಗುವುದಿಲ್ಲ. ದೇವಸ್ಥಾನದಿಂದ ಹೊರಬರಲು ಮನಸ್ಸಾಗಲಿಲ್ಲ. ನಂಬಲಾಗದ ಧನಾತ್ಮಕ ಶಕ್ತಿ ಮತ್ತು ಆಧ್ಯಾತ್ಮಿಕ ಶಕ್ತಿ ಅಲ್ಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಬೌಲರ್‌ಗಳಿಗೆ ಸ್ಪೆಷಲ್‌ ಬಾಲ್‌ ಕೊಡ್ತಿದ್ದಾರೆ – ಗೆಲುವಿನ ಬಗ್ಗೆ ಪಾಕ್‌ ಮಾಜಿ ಕ್ರಿಕೆಟಿಗ ಟೀಕೆ

    ರಿಷಬ್ ಪಂತ್ ಕಳೆದ 2022ರಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಹಲವು ತಿಂಗಳುಗಳಿಂದ ಕ್ರಿಕೆಟ್‍ನಿಂದ ದೂರ ಉಳಿದಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರು ಕ್ರಿಕೆಟ್‍ಗೆ ಮರಳುವ ನಿರೀಕ್ಷೆ ಇದೆ.

    ವಿಶ್ವಕಪ್‍ಗೆ ಆಯ್ಕೆಯಾಗಿದ್ದ ಅಕ್ಷರ್ ಪಟೇಲ್ ಗಾಯದ ಸಮಸ್ಯೆಯಿಂದ ಕೊನೆಯ ಕ್ಷಣದಲ್ಲಿ ಪಂದ್ಯಗಳಿಂದ ವಂಚಿತರಾದರು. ಅಕ್ಷರ್ ಅವರ ಸ್ಥಾನಕ್ಕೆ ಆರ್ ಅಶ್ವಿನ್ ಆಯ್ಕೆಯಾದರು. ಪ್ರಸ್ತುತ ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅಕ್ಷರ್ ಪಟೇಲ್ ಟೀಂ ಇಂಡಿಯಾ ಪರ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 23 ಇನ್ನಿಂಗ್ಸ್‌ಗಳಿಂದ 50 ವಿಕೆಟ್ ಪಡೆದಿದ್ದಾರೆ. 54 ಏಕದಿನ ಪಂದ್ಯಗಳನ್ನು ಆಡಿ 59 ವಿಕೆಟ್ ಗಳಿಸಿದ್ದಾರೆ. 45 ಟಿ20 ಪಂದ್ಯಗಳಿಂದ 39 ವಿಕೆಟ್ ಉರುಳಿಸಿದ್ದಾರೆ.

    ರಿಷಬ್ ಪಂತ್ ಟೀಂ ಇಂಡಿಯಾ ಪರ 33 ಟೆಸ್ಟ್ ಪಂದ್ಯಗಳಿಂದ 2,271 ರನ್ ಗಳಿಸಿದ್ದಾರೆ. ಇದರಲ್ಲಿ 11 ಅರ್ಧ ಶತಕಗಳು ಹಾಗೂ 5 ಶತಕಗಳು ಸೇರಿವೆ. 30 ಏಕದಿನ ಪಂದ್ಯಗಳಿಂದ 865 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ, 5 ಅರ್ಧ ಶತಕಗಳು ಸೇರಿವೆ. 66 ಟಿ20 ಪಂದ್ಯಗಳಿಂದ 987 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧ ಶತಕಗಳಿವೆ. ಇದನ್ನೂ ಓದಿ: World Cup 2023: ಶ್ರೇಯಸ್‌ ಅಯ್ಯರ್‌ಗೆ ಸರ್ಪ್ರೈಸ್‌ ಗಿಫ್ಟ್‌ ಕೊಟ್ಟ ಕ್ರಿಕೆಟ್‌ ದೇವರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ವರ್ಷ ನನ್ನ ಮೇಲೆ ಕಡಿಮೆ ಪೊಲೀಸ್‌ ಪ್ರಕರಣ ದಾಖಲಾಗಲಿ: ಕಂಗನಾ ಪ್ರಾರ್ಥನೆ

    ಈ ವರ್ಷ ನನ್ನ ಮೇಲೆ ಕಡಿಮೆ ಪೊಲೀಸ್‌ ಪ್ರಕರಣ ದಾಖಲಾಗಲಿ: ಕಂಗನಾ ಪ್ರಾರ್ಥನೆ

    ಅಮರಾವತಿ: ಹೊಸ ವರ್ಷದ ದಿನದಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ತಿರುಪತಿಯ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

    ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸುತ್ತಿರುವ ಪೋಟೋವನ್ನು ಕಂಗನಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ನ್ಯೂ ಇಯರ್ ಶುಭಾಶಯ ಹೇಳಿದ ಬಾಲಿವುಡ್ ಮಂದಿ

    ಜಗತ್ತಿನಲ್ಲಿ ಒಂದೇ ಒಂದು ರಾಹು ಕೇತು ದೇವಾಲಯ ಇದೆ. ತಿರುಪತಿಯ ಬಾಲಾಜಿ ದೇವಸ್ಥಾನಕ್ಕೆ ತುಂಬಾ ಹತ್ತಿರದಲ್ಲಿದೆ. ಅಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು ಎಂದು ಕಂಗನಾ ತಿಳಿಸಿದ್ದಾರೆ.

     

    View this post on Instagram

     

    A post shared by Kangana Thalaivii (@kanganaranaut)

    ನನ್ನ ಪ್ರೀತಿಯ ಶತ್ರುಗಳ ಕರುಣೆ ಹೊಂದಲು ನಾನು ದೇವಸ್ಥಾನಕ್ಕೆ ಹೋಗಿದ್ದೆ. ಈ ವರ್ಷ ನನ್ನ ಮೇಲೆ ಹೆಚ್ಚಿನ ನನ್ನ ಮೇಲೆ ಕಡಿಮೆ ಪೊಲೀಸ್‌ ದೂರುಗಳು ಮತ್ತು ಎಫ್‌ಐಆರ್‌ಗಳು ದಾಖಲಾಗಲಿ. ಹೆಚ್ಚಿನ ಪ್ರೇಮ ಪತ್ರಗಳು ಬರಲಿ. ಜೈ ರಾಹು ಕೇತು ಎಂದು ಕಂಗನಾ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: New Year 2022 – ಅಭಿಮಾನಿಗಳಿಗೆ ಸಂದೇಶ ನೀಡಿದ ಸ್ಯಾಂಡಲ್‍ವುಡ್ ಸೆಲೆಬ್ರಿಟಿಗಳು

    ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಟೀಕೆಗೆ ಗುರಿಯಾಗಿರುವ ಕಂಗನಾ ಅವರು ಹೊಸ ವರ್ಷದಲ್ಲಿ ಶತ್ರುಗಳಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.