Tag: Tirupati Laddoo Row

  • Tirupati Laddoo Row | ಇದು ಕೋಟ್ಯಂತರ ಜನರ ನಂಬಿಕೆ ವಿಚಾರ : ವಿಶೇಷ ತನಿಖೆಗೆ ಆದೇಶಿಸಿದ ಸುಪ್ರೀಂ

    – ಈ ಪ್ರಕರಣದಲ್ಲಿ ರಾಜಕೀಯ ನಾಟಕ ನೋಡಲು ಬಯಸುವುದಿಲ್ಲ

    ನವದೆಹಲಿ: ತಿರುಪತಿ ಲಡ್ಡು ವಿವಾದವನ್ನು (Tirupati Laddoo Row) ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

    ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ. ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ

    ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ  (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

    ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.

    ಆಂಧ್ರಪ್ರದೇಶದ ಹಿಂದಿನ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಬೆನ್ನಲ್ಲೇ ದೇಶದೆಲ್ಲೆಡೆ ಭಾರೀ ಸಂಚಲಕ್ಕೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಲಾಗಿತ್ತು. ಇದನ್ನೂ ಓದಿ: ಮಾತನಾಡಲು ವಿಷಯವಿಲ್ಲದೆ ಕುಮಾರಸ್ವಾಮಿಗೆ ಪೂರ್ತಿ ಹುಚ್ಚು ಹಿಡಿದಿದೆ: ಬೋಸರಾಜು

  • ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ನವದೆಹಲಿ: ತಿರುಪತಿ ಲಡ್ಡು ವಿವಾದದ (Tirupati Laddoo Row) ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಲಡ್ಡುಗಳನ್ನು ತಯಾರಿಸಲು ತುಪ್ಪದ ಪೂರೈಕೆ ಮಾಡುತ್ತಿದ್ದ ಎಆರ್ ಡೈರಿಗೆ ಶೋಕಾಸ್ ನೋಟಿಸ್ ನೀಡಿದೆ.

    ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ರವಾನಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಡೈರಿ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ ಒಂದರಲ್ಲಿ ತುಪ್ಪದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿ ಕೊಬ್ಬು ಸೇರಿದೆ ಎಂದು ವರದಿ ನೀಡಿತ್ತು. ಇದನ್ನೂ ಓದಿ: ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ

    ವಿವಾದದ ಬೆನ್ನಲ್ಲೇ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ಮೇಲೆ ದೇವಾಲಯದ ಮಂಡಳಿಯು ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್‍ನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಕಂಪನಿಯ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ಘೋಷಿಸಿದ್ದರು.

    ತಮಿಳುನಾಡು ಮೂಲದ ಎಆರ್ ಡೈರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಲಬೆರಕೆ ಆರೋಪಗಳನ್ನು ಬಲವಾಗಿ ನಿರಾಕರಿಸಿದೆ. ದೇವಾಲಯಕ್ಕೆ ಪ್ರತಿ ದಿನ 10 ಟನ್ ತುಪ್ಪದ ಅವಶ್ಯಕತೆಯಿದೆ. ನಾವು 0.1% ಅಗತ್ಯವನ್ನು ಪೂರೈಸಿಲ್ಲ ಎಂದು ಹೇಳಿಕೊಂಡಿದೆ.

    ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ, ಜಗನ್ ಮೋಹನ್ ರೆಡ್ಡಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ ತುಪ್ಪ ಬಳಕೆ ಮಾಡಲಾಗಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು