Tag: Tirupati Laddu Row

  • ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ – ನಾಲ್ವರನ್ನು ಬಂಧಿಸಿದ ಸಿಬಿಐ

    ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ – ನಾಲ್ವರನ್ನು ಬಂಧಿಸಿದ ಸಿಬಿಐ

    ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡುಪ್ರಸಾದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

    ಉತ್ತರಾಖಂಡನ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್‌ನ ಎಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳು. ಇದನ್ನೂ ಓದಿ: ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

    ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಧೂಮಪಾನ ಮಾಡದ ಮಹಿಳೆಯರಲ್ಲಿ ಶ್ವಾಸಕೋಶದ ಕ್ಯಾನ್ಸರ್‌ ಹೆಚ್ಚುತ್ತಿದೆ! ಯಾಕೆ?

    ಆರೋಪಿಗಳು ತುಪ್ಪ ಪೂರೈಕೆಯ ನೆಪದಲ್ಲಿ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ವೈಷ್ಣವಿ ಡೈರಿ ಮುಂದೆ ಎಆರ್ ಡೈರಿ ಹೆಸರಿರುವ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ಬಳಸಿ ಟೆಂಡರ್ ಪಡೆದಿದೆ ಎನ್ನಲಾಗಿದೆ. ಹೀಗಾಗಿ ತುಪ್ಪದ ಟೆಂಡರ್ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ದಾಖಲೆಗಳನ್ನು ತಿರುಚಲಾಗಿರುವುದು, ಅಲ್ಲದೇ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿರುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಟಿ.ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

    ಈ ಘಟನೆ ಬಳಿಕ ಟಿಟಿಡಿಯು ಕರ್ನಾಟಕದ ಕೆಎಂಎಫ್‌ನಿಂದ ತುಪ್ಪ ಮರುಖರೀದಿಗೆ ಮುಂದಾಗಿತ್ತು. ಇದನ್ನೂ ಓದಿ: ಗಮನಿಸಿ – ಏರ್‌ ಶೋ ಹಿನ್ನೆಲೆ ಬೆಂಗಳೂರು ಏರ್‌ಪೋರ್ಟ್‌ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ‌

  • ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    – ಆಂಧ್ರಪ್ರದೇಶದ ಸಿಎಂಗೆ ಕೆಎಸ್‌ಟಿಡಿಸಿ ಅಧ್ಯಕ್ಷ ಬೇಡಿಕೆ
    – ಭಕ್ತಾದಿಗಳಿಗೆ 350 ರೂಮ್‌ಗಳ ವ್ಯವಸ್ಥೆ

    ಅಮರಾವತಿ/ಬೆಂಗಳೂರು: ಭಾರತದ ಅತೀ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ (Tirumala Tirupati Devasthanam) ಒಂದು. ತಿರುಪತಿ ತಿಮ್ಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ (Tirupati Laddu Row) ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ (Karnataka) ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ (KSTDC), ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ.

    ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್‌ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್‌ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

    ಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

  • ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

    ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

    – ಬೆಂಗಳೂರಿಗೆ ತಿರುಪತಿ ಅರ್ಚಕರ ಆಗಮನ

    ಬೆಂಗಳೂರು: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಟಿಟಿಡಿ ಅಧೀನದ ದೇವಾಲಯದಲ್ಲಿ ಮತ್ತೆ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ನಡೆಯುತ್ತಿದೆ.

    ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ಶುದ್ಧಿಕಾರ್ಯ ನಡೆಯಲಿದೆ. ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ.

    ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ‌ ಪೂಜೆ, ಹೋಮ, ಹವನ ಮಾಡಲಿದ್ದಾರೆ.

    ಈಗಾಗಲೇ ಟಿಟಿಡಿ ದೇವಾಲಯದಲ್ಲಿ ಅಗ್ನಿಕುಂಡ ಹೋಮಕುಂಡಗಳ ತಯಾರಿ ಮಾಡಿಕೊಳ್ಳಲಾಗಿದೆ. ಪವಿತ್ರೋತ್ಸವ ಶುದ್ಧಿ ಕಾರ್ಯದಲ್ಲಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೂ ಅವಕಾಶ ನೀಡಿದೆ. ಇಬ್ಬರು 1 ಸಾವಿರ ರೂ. ರಶೀದಿ ಪಡೆದು ಪೂಜೆಯಲ್ಲಿ ಭಾಗಿಯಾಗಲು ಕಲ್ಪಿಸಲಾಗಿದೆ.

  • ತಿರುಪತಿ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆರೋಪ – ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಿದ ಟಿಟಿಡಿ

    ತಿರುಪತಿ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆರೋಪ – ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಿದ ಟಿಟಿಡಿ

    ಬೆಂಗಳೂರು: ತಿರುಪತಿ ಲಡ್ಡು (Titupati Laddu Row) ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಮಿಶ್ರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನ (TTD) ಆಡಳಿತ ಮಂಡಳಿ ಅಧಿಕಾರಿ ಜೆ. ಶ್ಯಾಮಲಾ ಅವರಿಂದ ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಲಾಗಿದೆ.

    ವೈಎಸ್‌ಆರ್‌ಪಿ (YSRP) ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ವಿವಾದದ ಬೆನ್ನಲ್ಲೇ ಪ್ರಕರಣವನ್ನು ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿಕೆ ನೀಡಿತ್ತು. ಇದೀಗ ಸರ್ಕಾರಕ್ಕೆ ಟಿಟಿಡಿ 40 ಪುಟಗಳ ವರದಿ ಸಲ್ಲಿಸಿದೆ. ಇದನ್ನೂ ಓದಿ: Breaking | ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಟಿಟಿಡಿ ವರದಿಯಲ್ಲಿ ಏನಿದೆ?
    ತಿರುಮಲ ಮತ್ತು ತಿರುಚನೂರು ದೇಗುಲಗಳಲ್ಲಿ ಲಾಡು ಮತ್ತು ಇತರ ಪ್ರಸಾದಗಳನ್ನು ಸಿದ್ಧಪಡಿಸಲು ಆರು ತಿಂಗಳಿಗೊಮ್ಮೆ ಅಗ್‌ಮಾರ್ಕ್ ಗುರುತು ಹೊಂದಿರುವ ಹಸುವಿನ ತುಪ್ಪವನ್ನು ಇ-ಟೆಂಡರ್ ಮೂಲಕ ಖರೀದಿಸಲಾಗುತ್ತದೆ. ಟಿಟಿಡಿ ಮತ್ತು ಎಫ್‌ಎಸ್‌ಎಸ್‌ಎಐ ಮಾನದಂಡಗಳ ಪ್ರಕಾರ ತುಪ್ಪ ಗುಣಮಟ್ಟ ಹೊಂದಿರಬೇಕು ಎಂದು ಟೆಂಡರ್‌ನಲ್ಲಿ ಹೇಳಲಾಗಿರುತ್ತದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ಬೆಂಗಳೂರಿನ ದೇವಸ್ಥಾನದಲ್ಲಿ ಆಗಮಶಾಸ್ತ್ರದಂತೆ ಶುದ್ಧಿಕಾರ್ಯ

    ದಿನಕ್ಕೆ 15 ಸಾವಿರ ಕೆ.ಜಿಯಂತೆ ವಾರ್ಷಿಕ ಸುಮಾರು 200 ಕೋಟಿ ರೂ. ಮೌಲ್ಯದ ತುಪ್ಪ ಖರೀದಿಗೆ ಟೆಂಡರ್ ಕರೆಯಲಾಗುತ್ತದೆ. ನಿರ್ದಿಷ್ಟ ಮಾನದಂಡಗಳನ್ನು ನಿಗದಿ ಮಾಡಲಾಗಿದೆಯಾದರೂ, ಅವುಗಳ ಪರೀಕ್ಷೆಗೆ ಅಗತ್ಯವಿರುವ ಸಾಧನಗಳು ಟಿಟಿಡಿಯ ಪ್ರಯೋಗಾಲಯದಲ್ಲಿಲ್ಲ. ಹೀಗಾಗಿ ಕಲಬೆರಕೆ ಕುರಿತು ಪರೀಕ್ಷೆಗಳನ್ನು ನಡೆಸಲಾಗುತ್ತಿಲ್ಲ. ಗುತ್ತಿಗೆದಾರರು ಟ್ಯಾಂಕರ್‌ಗಳಲ್ಲಿ ಕಳುಹಿಸಿದ ತುಪ್ಪದ ತೇವಾಂಶ, ಕೊಬ್ಬಿನಾಮ್ಲ, ಮಿಶ್ರಿತ ಬಣ್ಣ, ಕರಗುವ ಬಿಂದು ಸೇರಿದಂತೆ ಕೆಲ ಮೂಲ ಪರೀಕ್ಷೆಗಳನ್ನಷ್ಟೇ ಮಾಡಲಾಗುತ್ತದೆ. ಈ ವೇಳೆ ಏನಾದರೂ ವ್ಯತ್ಯಾಸ ಕಂಡು ಬಂದರೆ, ಆ ಟ್ಯಾಂಕರ್‌ಗಳ ತುಪ್ಪವನ್ನು ತಿರಸ್ಕರಿಸಲಾಗುತ್ತದೆ. ಇದನ್ನೂ ಓದಿ: ಕನ್ನಡಿಗರನ್ನ ಕೆಣಕಿದ್ದ ʻಸುಗಂಧʼ ರಾಣಿ – ಕೆಲಸದಿಂದ ಕಿತ್ತೊಗೆದು ಬಿಸಿಮುಟ್ಟಿಸಿದ ಕಂಪನಿ

     

    ಕಲಬೆರಕೆ ಹೊರತುಪಡಿಸಿ ಇತರ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾದ 14 ಮಾದರಿಗಳನ್ನು 2022ರಲ್ಲಿ ತಿರಸ್ಕರಿಸಲಾಗಿತ್ತು. ಎನ್‌ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಕಲಬೆರಕೆಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ನಡೆಸಬಹುದಾಗಿದ್ದರೂ ಅದನ್ನು ಎಂದಿಗೂ ಮಾಡಿಲ್ಲ. ತಮಿಳುನಾಡು ಮೂಲದ ಎ.ಆರ್ ಡೈರಿಯ ಶಂತಿಕ ತುಪ್ಪವನ್ನು ಲಡ್ಡು ತಯಾರಿಕೆಗೆ ಬಳಸಿಲ್ಲ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

  • ತಿರುಪತಿ ಲಡ್ಡು ವಿವಾದ – ಬೆಂಗಳೂರಿನ ದೇವಸ್ಥಾನದಲ್ಲಿ ಆಗಮಶಾಸ್ತ್ರದಂತೆ ಶುದ್ಧಿಕಾರ್ಯ

    ತಿರುಪತಿ ಲಡ್ಡು ವಿವಾದ – ಬೆಂಗಳೂರಿನ ದೇವಸ್ಥಾನದಲ್ಲಿ ಆಗಮಶಾಸ್ತ್ರದಂತೆ ಶುದ್ಧಿಕಾರ್ಯ

    ಬೆಂಗಳೂರು: ತಿರುಪತಿ ಲಡ್ಡು (Tirupati Laddu) ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅರ್ಚಕರು ಸಂಪ್ರೋಕ್ಷಣೆ ಮಾಡಿ ಶುದ್ಧೀಕರಣ ಮಾಡಿದರು. ಆಗಮಶಾಸ್ತ್ರದಂತೆ ಶುದ್ಧಿಕಾರ್ಯ (Ritualistic Cleansing) ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ಬೆಳಗ್ಗೆ 10:30 ರಿಂದ ಆರಂಭವಾಗಿರುವ ಶುದ್ಧಿಕಾರ್ಯ ಸಂಜೆ 4:30ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಸಂಜೆ 6:30ರ ಬಳಿಕ ಭಕ್ತರು ಎಂದಿನಂತೆ ದೇವರ ದರ್ಶನ ಪಡೆಯಬಹುದಾಗಿದೆ. ಲಡ್ಡು ಕೌಂಟರ್‌ ಸಹ 6 ಗಂಟೆಯ ನಂತರ ಓಪನ್‌ ಇರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

    ಒಂದು ದಿನದ ಹಿಂದೆಯಷ್ಟೇ ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿದ್ದರು. ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನಲ್ಲೂ ಶುದ್ಧೀಕರಣ ಕಾರ್ಯ ನಡೆದಿದೆ.

    ಈ ಕುರಿತು ಮಾತನಾಡಿರುವ ಟಿಟಿಡಿ ಸಿಬ್ಬಂದಿ, ಈ ಹಿಂದೆ ಕಡಿಮೆ ಲಡ್ಡು ಸೇಲ್ ಆಗ್ತಿತ್ತು. ಇದೀಗ ಹೆಚ್ಚು ಲಡ್ಡನ್ನು ಭಕ್ತರು ತೆಗೆದುಕೊಂಡು ಹೋಗ್ತಿದ್ದಾರೆ. ಯಾರು ತಿರುಪತಿಯಲ್ಲಿ ಆದ ಘಟನೆ ಬಗ್ಗೆ ಕೇಳ್ತಿಲ್ಲ. ಲಡ್ಡು ತೆಗೆದುಕೊಂಡು ಹೋಗ್ತಿದ್ದಾರೆ. ಪ್ರತಿನಿತ್ಯ ಒಂದು ಸಾವಿರ ಲಡ್ಡು ಮಾರಾಟವಾಗ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    ಅಕ್ರಮಗಳ ತನಿಖೆಗೆ SIT ರಚನೆ:
    ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ (Tirupati) ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ (Tirupati Laddu Row) ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

    ಈ ಹಿಂದೆ ಆಡಳಿತಾರೂಢ ತೆಲುಗು ದೇಶಂ ಪಕ್ಷವು (TDP), ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

  • ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    – ನಮ್ಮ ಕೆಎಂಎಫ್‌, ನಮ್ಮ ಹೆಮ್ಮೆ.. ‘ನಂದಿನಿ’ ತುಪ್ಪ ಬಳಸಿ ಸ್ವಾಧಿಷ್ಟ ಲಡ್ಡು ತಯಾರಿಸಿ ಎಂದ ಕನ್ನಡಿಗ ಭಕ್ತ

    ಅಮರಾವತಿ: ನಂದಿನಿ ತುಪ್ಪ ಬಳಸಿ ತಯಾರಿಸಲಾಗುತ್ತಿರುವ ತಿರುಪತಿ ಲಡ್ಡು (Tirupati Laddu Row) ಸವಿದು ಭಕ್ತರು ಖುಷಿ ವ್ಯಕ್ತಪಡಿಸಿದ್ದಾರೆ. ಪ್ರಸಾದಕ್ಕೆ ಕಲಬೆರಕೆ, ಅಪವಿತ್ರ ವಿವಾದದ ಬೆನ್ನಲ್ಲೇ ದೇವಾಲಯ ಶುದ್ಧೀಕರಿಸಲಾಗಿದ್ದು, ಹೆಚ್ಚೆಚ್ಚು ಜನರು ತಿರುಪತಿಗೆ ಆಗಮಿಸಿ ಶ್ರೀ ವೆಂಕಟರಮಣದ ದರ್ಶನ ಪಡೆಯುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದ ತೆಗೆದುಕೊಳ್ಳುತ್ತಿದ್ದಾರೆ.

    ಬೆಂಗಳೂರಿನಿಂದ (Bengaluru) ತಿರುಪತಿ ದೇವಾಲಯಕ್ಕೆ (Tirupati Temple) ಬಂದಿದ್ದ ಜಗದೀಶ್‌ ಮಾತನಾಡಿ, ಲಡ್ಡುನಲ್ಲಿ ಏನೇನೊ ಕಲಬೆರಕೆ ಮಾಡಲಾಗಿದೆ ಅಂತಾರೆ. ಸದ್ಯಕ್ಕೆ ಏನೂ ಇಲ್ಲ, ಎಲ್ಲಾ ಬದಲಾಗಿದೆ. ಲಡ್ಡು ಟೇಸ್ಟ್‌ ಮಾಡಿದ್ದೇವೆ. ತುಂಬಾ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಮತ್ತೊಬ್ಬರು ಭಕ್ತರು, ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್‌ ಸೂಪರ್‌ ಆಗಿದೆ. ನಮ್ಮ ಕೆಎಂಎಫ್‌.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

    ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಕರ್ನಾಟಕದವರೇ ಆದ ಇನ್ನೊಬ್ಬರು ಭಕ್ತರು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ಲಡ್ಡು ಟೇಸ್ಟ್‌ ಬಹಳ ಚೆನ್ನಾಗಿದೆ. ತಾಜಾ ತುಪ್ಪದ್ದೇ ಆಗಿದೆ. ಮೊದಲು ಇದ್ದ ಟೇಸ್ಟ್‌ ಥರಾನೆ ಇದೆ ಲಡ್ಡು. ತಿಂದು ಬಹಳ ಖುಷಿಯಾಯಿತು ನಮಗೆ. ನನ್ನ ಬರ್ತ್‌ಡೇ ಸೆಲಬ್ರೇಷನ್‌ ಇಲ್ಲೇ ಆಯಿತು ಎಂದು ಕುಟುಂಬ ಸಮೇತರಾಗಿ ತಿರುಪತಿಗೆ ಆಗಮಿಸಿದ್ದ ಭಕ್ತೆಯೊಬ್ಬರು ಸಂತಸ ವ್ಯಕ್ತಪಡಿಸಿದರು.

  • ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    – ‘ನಂದಿನಿ’ ತುಪ್ಪ ಬಳಕೆ ಬಳಿಕ ಸ್ವಾಧಿಷ್ಟ, ಗುಣಮಟ್ಟ ಕಾಯ್ದುಕೊಂಡ ತಿರುಪತಿ ಲಡ್ಡು
    – ಪರಸ್ಪರರಿಗೆ ಲಡ್ಡು ತಿನ್ನಿಸಿ ಭಕ್ತರ ಸಂಭ್ರಮ

    ಕೋಲಾರ/ಅಮರಾವತಿ: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಗೊಂದಲ, ಅಪವಿತ್ರದ ಸುದ್ದಿಗಳಿಗೆ ತಲೆಕೆಡಿಸಿಕೊಳ್ಳದ ಭಕ್ತರು ಸೋಮವಾರ ತಿರುಪತಿ ತಿಮ್ಮಪ್ಪನ (Tirupati) ದರ್ಶನ ಪಡೆದು ಲಡ್ಡುಗಾಗಿ ಮುಗಿಬಿದ್ದರು.

    ತಿರುಪತಿ ಲಡ್ಡು ಪ್ರಸಾದ (Tirupati Laddu Row) ಅಪವಿತ್ರ ಭಾವನೆಯನ್ನು ಭಕ್ತರಿಂದ ತೊಡೆದುಹಾಕಲು, ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಶುದ್ಧೀಕರಣ ಮಾಡಲಾಯಿತು. ಜೊತೆಗೆ ಮಹಾಶಾಂತಿ ಹೋಮ ಕೂಡ ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ಪ್ರಸಾದದ ವಿಚಾರವಾಗಿ ಸಾಕಷ್ಟು ವಿವಾದ ಎದ್ದಿದ್ದರೂ ಅದ್ಯಾವುದಕ್ಕೂ ಭಕ್ತರು ತಲೆಕೆಡೆಸಿಕೊಳ್ಳದೇ ಅಪಾರ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆದರು.

    ತಿಮ್ಮಪ್ಪನ ದರ್ಶನ ಬಳಿಕ ಲಡ್ಡು ತೆಗೆದುಕೊಳ್ಳಲು ಭಕ್ತರ ದಂದೇ ಸರತಿ ಸಾಲಿನಲ್ಲಿ ನಿಂತಿತ್ತು. ದರ್ಶನದ ಮಾದರಿಯಲ್ಲೇ ಲಡ್ಡುಗಾಗಿ ಉದ್ದುದ್ದ ಕ್ಯೂ ನಿಂತಿದ್ದರು. ಪ್ರಸಾದ ಕಲಬೆರಕೆ, ಅಪವಿತ್ರದ ಸುದ್ದಿಗಳಿಗೆ ಜನ ಡೋಂಟ್ ಕೇರ್ ಎಂದಿರುವಂತೆ ಕಂಡುಬಂತು. ಎಂದಿನಂತೆ ಲಡ್ಡು ಖರೀದಿ ಭರಾಟೆ ಜೋರಾಗಿತ್ತು. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

    ಅದರಲ್ಲೂ ಕೆಎಂಎಫ್ ನಂದಿನಿ ತುಪ್ಪ ಬಳಕೆ ಬಳಿಕ ಸ್ವಾಧಿಷ್ಟ, ಗುಣಮಟ್ಟವನ್ನು ಲಡ್ಡು ಕಾಯ್ದುಕೊಂಡಿದೆ. ಲಡ್ಡು ಸ್ವೀಕರಿಸಿ ಭಕ್ತರು ಖುಷಿ ಹಂಚಿಕೊಂಡರು. ಕೆಲವರು ಅಲ್ಲೇ ಪರಸ್ಪರ ಲಡ್ಡು ತಿನ್ನಿಸಿ ಭಕ್ತಿ ಮೆರೆದರು.

  • ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    – ಅನ್ನ ಪ್ರಸಾದ, ಲಡ್ಡು ತಯಾರಿಕಾ ಸ್ಥಳ, ಗೋದಾಮಿನಲ್ಲಿ ಸಂಪ್ರೋಕ್ಷಣೆ
    – ಶಾಂತಿ, ವಾಸ್ತು ಹೋಮ ನೆರವೇರಿಸಿದ ಅರ್ಚಕರು
    – ದೇವಾಲಯ ಶುದ್ಧೀಕರಣ ಬಳಿಕ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

    ತಿರುಪತಿ: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ಸೋಮವಾರ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿದರು. ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.

    ಟಿಟಿಡಿ ಇಓ ಜೆ ಶ್ಯಾಮಲಾ ರಾವ್ ಈ ಬಗ್ಗೆ ಮಾಹಿತಿ ನೀಡಿದರು. ಇಂದಿನಿಂದ ಶ್ರೀನಿವಾಸನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

    ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಯಿತು. ವಿವಿಧ ಪಂಡಿತರು, ವೇದಶಾಸ್ತ್ರ ವಿದ್ವಾಂಸರು ಶುದ್ಧೀಕರಣದಲ್ಲಿ ಭಾಗಿಯಾಗಿದ್ದರು. ತಿರುಪತಿ ತಿರುಮಲದ ಪ್ರಧಾನ ಅರ್ಚಕರು, ಆಗಮ ಪಂಡಿತರಿಂದ ಪವಿತ್ರೋತ್ಸವ ನೆರವೇರಿತು. ದೇವಾಲಯದ ಸುತ್ತ ಸಂಪ್ರೋಕ್ಷಣೆ ಮಾಡಲಾಯಿತು. ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಯಾಗ ನಡೆಯಿತು.

    ದೇವಾಲಯ ಆವರಣದಲ್ಲಿ ವೇದ ಶಾಸ್ತ್ರ ಪಂಡಿತರು, ಆಗಮಿಕರಿಂದ ಮಹಾ ಶಾಂತಿ ಯಾಗ ಜರುಗಿತು. ಯಾಗದಲ್ಲಿ ನೂರಾರು ಆಗಮಿಕರು, ಅರ್ಚಕರು ಭಾಗಿಯಾಗಿದ್ದರು. ಶುದ್ದೀಕರಣ ಬಳಿಕ ಎಂದಿನಂತೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವರ ದರ್ಶನ ಮಾಡಿ ಭಕ್ತರು ಪುನೀತರಾದರು.

    ಮೊದಲಿಗೆ ಶಾಂತಿ ಹೋಮ ನಡೆಯಿತು. ಬಳಿಕ ಅರ್ಚಕರು ವಾಸ್ತು ಹೋಮ ನಡೆಸಿದರು. ಹೋಮ ಬಳಿಕ ತುಪ್ಪ ಬಳಕೆ ಮಾಡಿದ್ದ ಸ್ಥಳದಲ್ಲಿ ಸಂಪ್ರೋಕ್ಷಣೆ ಸಿಂಪಡಣೆ ಮಾಡಲಾಯಿತು. ಅನ್ನ ಪ್ರಸಾದ, ಲಡ್ಡು ತಯಾರಿಕೆ ಸ್ಥಳ, ಗೋದಾಮು ಸೇರಿದಂತೆ ಎಲ್ಲೆಡೆ ಸಂಪ್ರೋಕ್ಷಣೆ ಮಾಡಿದರು.

    ಹೋಮ, ಯಾಗ, ಶುದ್ಧೀಕರಣದಲ್ಲಿ ಭಾಗಿಯಾಗಿದ್ದ ಅರ್ಚಕರ ತಂಡವನ್ನು ಟಿಟಿಡಿ ಬೀಳ್ಕೊಟ್ಟಿತು. ಎರಡು ಆನೆಗಳ ಸಹಿತ ಅರ್ಚಕರನ್ನು ಬೀಳ್ಕೊಡಲಾಯಿತು. ಮಹಾ ಶಕ್ತಿ ಹೋಮದ ಬಳಿಕ ಹೊಸ ಬಟ್ಟೆ, ಆಭರಣಗಳನ್ನ ಅರ್ಚಕರು ತೊಡಿಸಿದರು. ಶಾಸ್ತ್ರೋಕ್ತವಾಗಿ ಅರ್ಚಕರು ಶಾಂತಿ ಹೋಮ ನೆರವೇರಿಸಿದರು. ಅದರಂತೆ ತಿಮ್ಮಪನಿಗೆ ಹೊಸ ಬಟ್ಟೆ, ಆಭರಣ ತೊಡಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

  • ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

    ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

    – ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಗೆ ಸ್ವಾಮೀಜಿ ಖಂಡನೆ

    ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subhudendra Theertha Swamiji) ಒತ್ತಾಯಿಸಿದ್ದಾರೆ.

    ರಾಯಚೂರಿನಲ್ಲಿ (Raichuru) ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು. ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶದಲ್ಲಿ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ (Tirupati Laddu Row) ಪ್ರಕರಣದಂತ ತೊಂದರೆಗಳು ಆಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

    ಆಯಾ ಪ್ರಾಂತದ ಮಠ, ದೇವಾಲಯಗಳು ಅಲ್ಲಿನ ಜನರ ನೇತೃತ್ವದಲ್ಲಿ ನಡೆಯಬೇಕು. ಇದಕ್ಕೆ ಸನಾತನ ಧರ್ಮ‌ ಪರಿರಕ್ಷಣ ಸಂಬಂಧ ಯೋಜನೆಯನ್ನ ನಾವು ಕೂಡ ಬೆಂಬಲಿಸುತ್ತೇವೆ. ನಮ್ಮ ಊರಿನ ಆಚಾರ-ಸಂಪ್ರದಾಯ ಬಗ್ಗೆ ಬೇರೆ ಯಾರೋ ಬಂದು ಹೇಳುವುದಲ್ಲಾ. ನಮ್ಮ ಊರಿನ ಹಿರಿಯರು, ಸಮುದಾಯದ ಹಿರಿಯರು, ವಿದ್ವಾಂಸರು, ಮಠಾಧೀಶರ ನೇತೃತ್ವದಲ್ಲಿ ನಡೆಯಬೇಕು ಎಂದಿದ್ದಾರೆ.

    ಮುಜರಾಯಿ ಇಲಾಖೆಯಿಂದ ಮಠ ಮಾನ್ಯಗಳು, ದೇವಾಲಯ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮುಕ್ತವಾಗಬೇಕು ಅಂತಾ ಒತ್ತಾಯಿಸುತ್ತೇವೆ ಎಂದು ಮಂತ್ರಾಲಯ ಶ್ರೀಗಳು ಹೇಳಿದ್ದಾರೆ. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

  • ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಕೂಡಲಿ ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

    ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಕೂಡಲಿ ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

    ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಕೂಡಲಿ ಶೃಂಗೇರಿ (Sringeri) ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು (Shri Abhinava Shankara Bharathi) ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ.

    ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ (Tirupati Laddu Row) ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್‌ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ

    ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ ಮಾಡಿಕೊಳ್ಳುವ ವಿಧಾನವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ