Tag: Tirupati Laddu Row

  • ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

    ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

    – ಸೋಮವಾರ ತಿರುಮಲದಲ್ಲಿ ಮಹಾಶಾಂತಿ ಹೋಮ

    ಅಮರಾವತಿ: ತಿರುಪತಿ ಲಡ್ಡು (Tirupati Laddu Row) ಅಪವಿತ್ರವಾಗಿದೆ ಎಂಬ ಆರೋಪಗಳು ಲಡ್ಡು ಪ್ರಸಾದಕ್ಕೆ ಬೇಡಿಕೆ ಕುಸಿಯಬಹುದು ಎಂದು ಎಲ್ಲರೂ ಅಂದಾಜಿಸಿದ್ದರು. ಆದರೆ, ಅಂಥಾದ್ದೇನು ಆಗಿಲ್ಲ. ಈ ಆರೋಪಗಳು ಭಕ್ತರ ಮೇಲೆ ಹೆಚ್ಚಿನ ಪ್ರಭಾವ ಬೀರಿಲ್ಲ. ಕಳಂಕರಹಿತ ಎಂದು ಟಿಟಿಡಿ ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ತಿಮ್ಮಪ್ಪನ ಮಹಾ ಪ್ರಸಾದ ಲಡ್ಡುಗೆ ಮತ್ತೆ ಬೇಡಿಕೆ ಹೆಚ್ಚಿದೆ.

    ಲಡ್ಡು ತಯಾರಿಯಲ್ಲಿ ಅಪಚಾರ ನಡೆದಿದೆ ಎಂಬ ಆರೋಪಗಳ ನಡುವೆಯೂ ತಿಮ್ಮಪ್ಪನ ಪ್ರಸಾದವನ್ನು ಪರಮವಿತ್ರ ಎಂದೇ ಭಕ್ತರು ಪರಿಗಣಿಸಿದ್ದಾರೆ. ಇದಕ್ಕೆ ಲಡ್ಡು ಮಾರಾಟದ ಲೆಕ್ಕವೇ ಸಾಕ್ಷಿಯಾಗಿದೆ. ಸೆ. 19 ರಂದು 3.69 ಲಕ್ಷ, 20 ರಂದು 3.16 ಲಕ್ಷ, 21 ರಂದು 3.66 ಲಕ್ಷ ಲಡ್ಡುಗಳನ್ನು ಟಿಟಿಡಿ ಮಾರಾಟ ಮಾಡಿದೆ. ಇದನ್ನೂ ಓದಿ: ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

    ಅಂದ ಹಾಗೇ, ಲಡ್ಡು ಅಪಚಾರ ಸಂಬಂಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಾಳೆ ಮಹಾಶಾಂತಿ ಯಾಗ ನಿರ್ವಹಿಸಲು ಟಿಟಿಡಿ ಅಧಿಕಾರಿಗಳು ಶರವೇಗದ ಸಿದ್ಧತೆಗಳನ್ನು ನಡೆಸಿದ್ದಾರೆ. ನಾಳೆಯ ಶುಭ ರೋಹಿಣಿ ನಕ್ಷತ್ರದಲ್ಲಿ ಮೊದಲಿಗೆ ಮಹಾಶಾಂತಿ ಹೋಮ ನಿರ್ವಹಿಸಿ ನಂತರ ವಾಸ್ತು ಹೋಮವನ್ನು ಆಗಮ ಪಂಡಿತರು ನೆರವೇರಿಸಲಿದ್ದಾರೆ. ಅಂತಿಮವಾಗಿ ಪಂಚಗವ್ಯಗಳಿಂದ ಸಂಪ್ರೋಕ್ಷಣೆ ಮಾಡಲಿದ್ದಾರೆ.

    ತಿಮ್ಮಪ್ಪನ ಆರ್ಜಿತ ಸೇವೆಗಳಿಗೆ ಭಂಗ ಉಂಟಾಗದಂತೆ ನಾಳೆಯೇ ಎಲ್ಲಾ ಯಾಗಗಳನ್ನು ಮುಗಿಸಲಿದ್ದಾರೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಟಿಟಿಡಿ ಅಧಿಕಾರಿಗಳು ಮತ್ತು ಆಗಮ ಪಂಡಿತರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಹಾಗೆಯೇ, ಬ್ರಹ್ಮೋತ್ಸವಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಇನ್ನು, ಡಿಸಿಎಂ ಪವನ್ ಕಲ್ಯಾಣ್ ಇಂದಿನಿಂದ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ. ಇದು 11 ದಿನ ಮುಂದುವರಿಯಲಿದೆ. ಈ ಮಧ್ಯೆ, ಬೆಂಗಳೂರಿನ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಬಿ.ಸುರೇಂದ್ರನಾಥ್ ನೇತೃತ್ವದ ತಜ್ಞರ ಸಮಿತಿ, ಭವಿಷ್ಯದಲ್ಲಿ ಲಡ್ಡುಗೆ ಬಳಸುವ ತುಪ್ಪದ ವಿಚಾರದಲ್ಲಿ ಯಾವುದೇ ಅನಾಹುತಗಳು ಉಂಟಾಗದ ರೀತಿಯಲ್ಲಿ ಹಲವು ಶಿಫಾರಸು ಮಾಡಿದೆ. ಇದನ್ನೂ ಓದಿ: ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ – ಸುರಕ್ಷತೆಗೆ ಜಿಪಿಎಸ್ ಅಳವಡಿಸಲು ಮುಂದಾದ KMF

  • ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

    ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

    ಅಮರಾವತಿ: ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ (Tirupati) ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ (Tirupati Laddu Row) ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

    ಈ ಹಿಂದೆ ಆಡಳಿತಾರೂಢ ತೆಲುಗು ದೇಶಂ ಪಕ್ಷವು (TDP), ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

    ಕಳೆದ ಐದು ವರ್ಷಗಳಲ್ಲಿ ತಿರುಮಲದಲ್ಲಿ ಅನೇಕ ಅಪವಿತ್ರ ಕೆಲಸಗಳನ್ನು ಮಾಡಲಾಗಿದೆ. ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ನಿಕಟವರ್ತಿಗಳನ್ನು ಟಿಟಿಡಿ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದರು ಎಂದು ಟಿಡಿಪಿ ಆರೋಪಿಸಿದೆ.

    ಬುಧವಾರ ಎನ್‍ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿಎಂ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿ (Jagan Mohan Reddy) ಸರ್ಕಾರದ ಅವಧಿಯಲ್ಲಿ ವೆಂಕಟೇಶ್ವರ ದೇವಸ್ಥಾನದ ಲಡ್ಡೂಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದರು. ಇದು ದೇಶದೆಲ್ಲಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇದಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಜಗನ್ ಮೋಹನ್ ರೆಡ್ಡಿಯವರು, ತಿರುಪತಿ ದೇವಸ್ಥಾನದ ನಿಯಮಗಳ ಅಡಿ ತುಪ್ಪವನ್ನು ಪರಿಶೀಲಿಸಿ ಬಳಿಕ ಲಡ್ಡು ತಯಾರಿಕೆಗೆ ಬಳಸಲಾಗುತ್ತದೆ. ಈ ಪ್ರಕ್ರಿಯೆಯು ಹಲವು ದಶಕಗಳಿಂದ ಜಾರಿಯಲ್ಲಿದೆ. ಅಲ್ಲದೇ ತುಪ್ಪದ ಟ್ಯಾಂಕರ್‌ಗಳನ್ನು ತಿರಸ್ಕರಿಸಿದ ಹಲವಾರು ನಿದರ್ಶನಗಳಿವೆ. ನಾಯ್ಡು ಅವರು ದೇವರನ್ನು ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

  • Tirupati Laddu Row | ಚಂದ್ರಬಾಬು ನಾಯ್ಡು `ಮಹಾ ಸುಳ್ಳುಗಾರ’: ಪ್ರಧಾನಿಗೆ ಬರೆದ ಪತ್ರದಲ್ಲಿ ಜಗನ್ ಕಿಡಿ

    Tirupati Laddu Row | ಚಂದ್ರಬಾಬು ನಾಯ್ಡು `ಮಹಾ ಸುಳ್ಳುಗಾರ’: ಪ್ರಧಾನಿಗೆ ಬರೆದ ಪತ್ರದಲ್ಲಿ ಜಗನ್ ಕಿಡಿ

    ಹೈದರಾಬಾದ್: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು (Tirupati Laddu Row) ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿಯವರು (Jagan Mohan Reddy) ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಹಾಲಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು `ಮಹಾ ಸುಳ್ಳುಗಾರ’ ಎಂದು ಕರೆದಿದ್ದಾರೆ. ಕೇವಲ ರಾಜಕೀಯ ಉದ್ದೇಶಗಳಿಗಾಗಿ ಕೋಟಿಗಟ್ಟಲೆ ಜನರ ನಂಬಿಕೆಗಳನ್ನು ಅವರು ಘಾಸಿಗೊಳಿಸಿದ್ದಾರೆ. ಸುಳ್ಳುಗಳನ್ನು ಹರಡುವ ಅವರ ನಾಚಿಕೆಯಿಲ್ಲದ ಕೃತ್ಯಕ್ಕಾಗಿ ಅವರು ತೀವ್ರ ರೀತಿಯಲ್ಲಿ ವಾಗ್ದಂಡನೆಗೆ ಒಳಗಾಗುವುದು ಅತ್ಯಗತ್ಯ. ಇದಕ್ಕಾಗಿ ದೇಶದ ಜನ ಪ್ರಧಾನಿಗಳ ಕಡೆ ನೋಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: Tirupati Laddu Row| ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ

    ನಾಯ್ಡು ಅವರು ತಿರುಪತಿ ದೇವಸ್ಥಾನದ ಪವಿತ್ರತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡಬಹುದು. ಅದ್ದರಿಂದ ಕೋಟ್ಯಂತರ ಹಿಂದೂಗಳ ಮನಸ್ಸಿನಲ್ಲಿರುವ ಅನುಮಾನಗಳನ್ನು ನಿವಾರಿಸಲು `ಸತ್ಯವನ್ನು ಬೆಳಕಿಗೆ ತರಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

    ಸರ್ಕಾರದ ವೈಫಲ್ಯಗಳನ್ನು ಮರೆಮಾಚಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ಲಡ್ಡು ತಯಾರಿಕೆ ಬಗ್ಗೆ ಸುಳ್ಳನ್ನು ಹಬ್ಬಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಬುಧವಾರ ಎನ್‍ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿಎಂ ಚಂದ್ರಬಾಬು ನಾಯ್ಡು, ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ವೆಂಕಟೇಶ್ವರ ದೇವಸ್ಥಾನದ ಲಡ್ಡೂಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದರು. ಇದು ದೇಶದೆಲ್ಲಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇದಾದ ಬಳಿಕ ಪತ್ರೀಕಾಗೋಷ್ಠಿ ನಡೆಸಿದ್ದ ಜಗನ್ ಮೋಹನ್ ರೆಡ್ಡಿಯವರು, ತಿರುಪತಿ ದೇವಸ್ಥಾನದ ನಿಯಮಗಳ ಅಡಿ ತುಪ್ಪವನ್ನು ಪರಿಶೀಲಿಸಿ ಬಳಿಕ ಲಡ್ಡು ತಯಾರಿಕೆಗೆ ಬಳಸಲಾಗುತ್ತದೆ. ಈ ಪ್ರಕ್ರಿಯೆಯು ಹಲವು ದಶಕಗಳಿಂದ ಜಾರಿಯಲ್ಲಿದೆ. ಅಲ್ಲದೇ ತುಪ್ಪದ ಟ್ಯಾಂಕರ್‌ಗಳನ್ನು ತಿರಸ್ಕರಿಸಿದ ಹಲವಾರು ನಿದರ್ಶನಗಳಿವೆ. ನಾಯ್ಡು ಅವರು ದೇವರನ್ನು ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: Tirupati Laddu Row | ಟಿಟಿಡಿ ಲಡ್ಡು ತಯಾರಿಕೆಗೆ ಪ್ರಮಾಣಿಕೃತ ತುಪ್ಪವನ್ನೇ ಬಳಸಲಾಗಿದೆ: ಜಗನ್ ಸ್ಪಷ್ಟನೆ

  • ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ: ದಿನೇಶ್ ಗುಂಡೂರಾವ್

    ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ: ದಿನೇಶ್ ಗುಂಡೂರಾವ್

    ಬೆಂಗಳೂರು: ರಾಜ್ಯದಲ್ಲಿ ತುಪ್ಪ (Ghee) ಉತ್ಪಾದನೆ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ (Health Department) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದೆ. ನಂದಿನಿ‌ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ‌ ನಿರ್ಧರಿಸಲಾಗಿದೆ. ತುಪ್ಪದ ಗುಣಮಟ್ಟ ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ. ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

    ಆಹಾರ ಸುರಕ್ಷತಾ ಆಯುಕ್ತರಿಗೆ ಈ ಬಗ್ಗೆ ಹೇಳಿದ್ದೇನೆ. ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ. ಈಗಾಗಲೇ ಸ್ಯಾಂಪಲ್ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯೇ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

    ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತು ಎಂದು ಹೇಳಿರುವುದು ಆತಂಕಕಾರಿಯಾದ ವಿಚಾರವಾಗಿದೆ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ. ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ ಎಂದಿದ್ದಾರೆ.

    ತಿರುಪತಿ ಲಡ್ಡು (Tirupati Laddu Row) ವಿಚಾರದಲ್ಲಿ ಈ ರೀತಿ ಇದೆ ಅಂತ ಆದಾಗ ಯಾರನ್ನು ನಂಬಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತಹ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡ್ತೇವೆ ಎಂದಿದ್ದಾರೆ.

  • ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    – ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ

    ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ (Pejavara Shree) ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ (Tirupati Laddu Row) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ. ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

     

    ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಕ್ಷೇತ್ರದಲ್ಲಿ ಹಸು ಹುತ್ತಕ್ಕೆ ಹಾಲು ಎರೆಯುತ್ತಿತ್ತಂತೆ. ಮಾಲೀಕ ಹಸುವಿನ ಮೂಲಕ ಹುತ್ತವನ್ನು ಹೊಡೆಯಲು ಬಂದನಂತೆ. ಆಗ ಹುತ್ತದಿಂದ ಮೇಲೆ ಬಂದ ಶ್ರೀನಿವಾಸ ಮಾಲೀಕನ ಏಟಿಗೆ ಮೈಯೊಡ್ಡಿದನಂತೆ. ಹಸುವನ್ನು ರಕ್ಷಿಸಿದ ಶ್ರೀನಿವಾಸ ಅನ್ನೋದು ಇತಿಹಾಸ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದೊಂದು ಬಹುದೊಡ್ಡ ಅಪರಾಧವಾಗಿದೆ. ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದಾಗಿದೆ. ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ. ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವಾಲಯಕ್ಕೆ ಬಳಸಿದ್ದೀರಿ. ಇಂತಹ ತುಪ್ಪ ತಯಾರಿಸುವ ಅಡ್ಡಗಳನ್ನು ಕಂಡುಹಿಡಿದು ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ ಎಂದರು. ಇದನ್ನೂ ಓದಿ: ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ

    ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು. ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೀಗೆ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ. ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ (Tirupati Temple) ಆಡಳಿತ ನೀಡಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌

  • ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ದಿನೇಶ್ ಗುಂಡೂರಾವ್ ಸೂಚನೆ

    ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ದಿನೇಶ್ ಗುಂಡೂರಾವ್ ಸೂಚನೆ

    ಬೆಂಗಳೂರು: ನಂದಿನಿ ತುಪ್ಪ (Nandini Ghee) ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ (Tirupati) ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯಾ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತೆಂದು ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ ಎಂದರು. ಇದನ್ನೂ ಓದಿ: ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ – ಸುರಕ್ಷತೆಗೆ ಜಿಪಿಎಸ್ ಅಳವಡಿಸಲು ಮುಂದಾದ KMF

    ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಎಂದು ಆದಾಗ ಯಾರನ್ನ ನಂಬಬೇಕು ಅನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

  • ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ

    ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ

    ವಿಜಯಪುರ: ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರು ಸಿಎಂ ಆದ ಸಂದರ್ಭದಲ್ಲಿ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ. ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( K S Eshwarappa) ವಿಜಯಪುರದಲ್ಲಿ (Vijayapura) ಹೇಳಿದರು.

    ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌

    ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಇದು ಅಂತ್ಯವಾಗಬೇಕು. ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ (CBI) ತನಿಖೆಗೆ ಕೊಡಬೇಕು. ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಹೇಳಿದ್ದಾರೆ. ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

    ಬಿಜೆಪಿ (BJP) ಪಕ್ಷ ನನ್ನ ತಾಯಿ ಇದ್ದ ಹಾಗೆ. ಆ ತಾಯಿ ಬಿಟ್ಟು ನಾನು ಬೇರೆ ಯಾವ ಪಕ್ಷಕ್ಕೂ ಹೋಗಲ್ಲ. ಈ ಪಕ್ಷದಲ್ಲಿ ಶುದ್ಧೀಕರಣವಾಗಲಿ ಎಂಬ ಕಾರಣಕ್ಕೆ ನಾನು ಪಕ್ಷದಿಂದ ದೂರ ಇದ್ದೇನೆ. ಇವತ್ತಲ್ಲ ನಾಳೆ ಈ ವಿಚಾರವಾಗಿ ಹೈಕಮಾಂಡ್‌ನವರು ಚಿಂತಿಸಿ ಮಾತನಾಡುವ ನಂಬಿಕೆ ಇದೆ. ಆಗ ನಾನು ಕೂಡಾ ಬಿಜೆಪಿಗೆ ಸೇರುವ ವಿಚಾರವಾಗಿ ತೀರ್ಮಾನ ಮಾಡುವೆ ಎಂದರು. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ

    ಈಶ್ವರಪ್ಪನವರನ್ನು ಬಿಜೆಪಿಗೆ ಕರೆ ತಂದು ಸಿಎಂ ಮಾಡುತ್ತೇವೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯತ್ನಾಳ್ ಓರ್ವ ಹಿಂದುತ್ವದ ಹುಲಿ. ಅವರ ಪ್ರೀತಿಯ ಮಾತಿಗೆ ನಾನು ಅಭಿನಂದಿಸುವೆ. ಬಿಜೆಪಿಯಲ್ಲಿನ ಅವ್ಯವಸ್ಥೆಯಿಂದ ನಾನು ಪಕ್ಷ ಬಿಟ್ಟೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ನಾನು ಬಿಜೆಪಿ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿ – ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

    ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಪೋಲಿಸ್‌ನವರು ರಾಷ್ಟ್ರದೋಹಿ ಚಟುವಟಿಕೆಗಳ ವಿರುದ್ಧ ಎಪ್‌ಐಆರ್ ಹಾಕಿದ್ದು ಅಭಿನಂದನಾರ್ಹ. ದಾವಣಗೆರೆ ಎಸ್ಪಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಪೊಲೀಸ್ ಇಲಾಖೆಯ ಬಗ್ಗೆ ಭಯ ಹುಟ್ಟಿಸಿದ್ದಕ್ಕೆ ಅಭಿನಂದನೆಗಳು. ಮಾನ್ಯ ಗೃಹ ಸಚಿವರು ಇಂತಹ ಪೋಲಿಸರಿಗೆ ಬೆಂಬಲ, ಪ್ರಶಸ್ತಿ ಕೊಡಬೇಕು. ಗಲಭೆ ಮಾಡಲು ಬಿಡಲ್ಲ ಎಂದು ದಾವಣಗೆರೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಅಭಿನಂದನೆ. ಇಡೀ ರಾಜ್ಯದಲ್ಲಿ ಈ ತರಹ ಪೋಲಿಸರು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಬರ್ಬರ ಹತ್ಯೆ, ಮಚ್ಚಿನೇಟಿಂದ ಪತ್ನಿ ಗಂಭೀರ

  • ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ದಿನ ಬಂದಿತ್ತು 300 ಕೆಜಿ ತಿರುಪತಿ ಲಡ್ಡು

    ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ದಿನ ಬಂದಿತ್ತು 300 ಕೆಜಿ ತಿರುಪತಿ ಲಡ್ಡು

    ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಪ್ರತಿಷ್ಠಾಪನೆ ದಿನ 300 ಕೆಜಿ ತಿರುಪತಿ ಲಡ್ಡು (Tirupati Laddu) ಪ್ರಸಾದ ಬಂದಿತ್ತು ಎಂದು ಅಯೋಧ್ಯೆಯ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ತಿಳಿಸಿದ್ದಾರೆ.

    ರಾಮಮಂದಿರದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಗಿತ್ತು. ಜನವರಿಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ತಿರುಪತಿ ದೇವಸ್ಥಾನದಿಂದ 300 ಕೆಜಿ ಪ್ರಸಾದವನ್ನು ಭಕ್ತರಿಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯ ಅರ್ಚಕರು ಖಚಿತಪಡಿಸಿದ್ದಾರೆ. ಇದನ್ನೂ ಓದಿ: Tirupati Laddu Row| ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ

    ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಸುದ್ದಿ ದೇಶಾದ್ಯಂತ ಚರ್ಚೆ ಹುಟ್ಟುಹಾಕಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ YSRCP, ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದೆ.

    ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ‘ಪ್ರಸಾದ’ (ಲಡ್ಡು) ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸುತ್ತಿದ್ದ ಬಗ್ಗೆ ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ.

  • ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್

    ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್

    ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಸಿದ ಪ್ರಕರಣ (Tirupati Laddu row) ತನಿಖೆ ಆಗಲಿ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕವಾಗಿ ಪಾವಿತ್ರ್ಯ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ಮೊದಲೆಲ್ಲ ಕೆಎಂಎಫ್ ತಿರುಪತಿಗೆ ತುಪ್ಪ ಪೂರೈಸುತ್ತಿತ್ತು. ಆಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ. ಈ ಬಗ್ಗೆ ನಾನು ಕೆಎಂಎಫ್ ಅಧ್ಯಕ್ಷರ ಜೊತೆ ಕೂಡ ಮಾತನಾಡಿದ್ದೇನೆ. ಯಾರೇ ಆದರೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು. ಈ ಪ್ರಕರಣ ತನಿಖೆಯಾಗಲಿ ಎಂದು ಅವರು ಒತ್ತಾಯಿಸಿದರು. ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

  • ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ

    ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ

    – ನಂದಿನಿ ತುಪ್ಪದ ದರದಲ್ಲಿ ಬದಲಾವಣೆ ಯೋಚನೆ ಇಲ್ಲ

    ಬೆಂಗಳೂರು: ನಾವು ಗುಣಮಟ್ಟದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ದೇಶದ ಯಾವ ಲ್ಯಾಬ್‌ನಲ್ಲಾದರೂ ಪರೀಕ್ಷೆ ಮಾಡಲಿ ಎಂದು ಕೆಎಂಎಫ್ (KMF) ಎಂಡಿ ಜಗದೀಶ್ ಹೇಳಿದ್ದಾರೆ.

    ತಿರುಮಲ ತಿರುಪತಿ ದೇವಾಲಯ ಲಡ್ಡು ವಿವಾದದ (Tirupati Laddu Row) ಕುರಿತು ‘ಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಅವರು, ರೈತರಿಂದ ನೇರವಾಗಿ ಹಾಲು ಖರೀದಿಸಿ, ರೈತರ ಪರವಾಗಿ ಕೆಲಸ ಮಾಡುವ ಸಂಸ್ಥೆ ನಮ್ಮದು. ಇಡೀ ದೇಶದಲ್ಲೇ ಅತ್ಯುತ್ತಮ ಲ್ಯಾಬ್ ವ್ಯವಸ್ಥೆ ಇರೋದು ನಮ್ಮಲ್ಲಿಯೇ. ಎನ್‌ಎಬಿಎಲ್‌ನಿಂದ ಮಾನ್ಯತೆ ಪಡೆದಿರೋ ಏಕೈಕ ಲ್ಯಾಬ್ ನಮ್ಮ ಕೆಎಂಎಫ್ ಸಂಸ್ಥೆಯಲ್ಲಿದೆ. ನಮ್ಮ ಲ್ಯಾಬ್‌ನಲ್ಲೇ ಟೆಸ್ಟ್ ಮಾಡುವ ಸೌಲಭ್ಯವಿದೆ ಎಂದರು. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ

    ನಾವು ಗುಣಮಟ್ಟದಲ್ಲಿ ರಾಜಿಯಾಗದೇ ಇರೋದಕ್ಕೆ ಕಾರಣವೇ ನಮ್ಮಲ್ಲಿರೋ ಸೌಲಭ್ಯ ಮತ್ತು ಸೌಕರ್ಯಗಳು. ಪ್ರತಿ ಹಂತದಲ್ಲೂ ಗುಣಮಟ್ಟದ ಪರೀಕ್ಷೆ ಮಾಡಿಯೇ ತುಪ್ಪದ ಉತ್ಪಾದನೆ ನಡೆಯಲಿದೆ. ಆಹಾರ ಗುಣಮಟ್ಟದ ಪರೀಕ್ಷೆಯನ್ನು ಮೈಸೂರು ಲ್ಯಾಬ್‌ನಲ್ಲಿ ಅಲ್ಲ ಯಾವುದೇ ಲ್ಯಾಬ್‌ನಲ್ಲಿ ಬೇಕಾದರೂ ಮಾಡಿಸಲಿ. ನಮ್ಮದು ಅತ್ಯುತ್ತಮ ಗುಣಮಟ್ಟದ ಪ್ರೊಡಕ್ಟ್ ಎಂದು ಹೇಳಿದರು. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ನಂದಿನಿ ತುಪ್ಪದ (Nandini Ghee) ದರದ ಬದಲಾವಣೆ ಮಾಡುವ ಯೋಚನೆ ಇಲ್ಲ. ತಿರುಮಲದಿಂದ ಮತ್ತೆ ನಮಗೆ ಟೆಂಡರ್ ನೀಡಿದ್ದಾರೆ. ಅವರು ಎಷ್ಟೇ ಬೇಡಿಕೆ ಇಟ್ಟರೂ ಅಷ್ಟು ಪ್ರಮಾಣದ ತುಪ್ಪವನ್ನು ಸರಬರಾಜು ಮಾಡುತ್ತೇವೆ. ಬೇಡಿಕೆ ಹೆಚ್ಚಾದರೂ ಗುಣಮಟ್ಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ತಿರುಮಲಕ್ಕೆ ಟ್ಯಾಂಕರ್ ಮೂಲಕ ತುಪ್ಪವನ್ನು ಕಳುಹಿಸಿಕೊಡಲಾಗುತ್ತದೆ. ಟ್ಯಾಂಕರ್‌ಗಟ್ಟಲೆ ತುಪ್ಪ ಕಳುಹಿಸುವುದರಿಂದ ಆ ತುಪ್ಪದ ಬೆಲೆ ಬೇರೆಯಾಗಿಯೇ ಇರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ