Tag: Tirupati Tirumala Temple

  • 8 ತಿಂಗಳು ಬಂದ್ ಆಗಲಿದೆ ತಿರುಪತಿಯ ಗರ್ಭಗುಡಿ!

    8 ತಿಂಗಳು ಬಂದ್ ಆಗಲಿದೆ ತಿರುಪತಿಯ ಗರ್ಭಗುಡಿ!

    ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ (Tirupati Tirumala Temple) ಮುಖ್ಯ ಗರ್ಭಗುಡಿಯನ್ನು (Sanctum) 2023ರ ಹೊಸ ವರ್ಷದಲ್ಲಿ ಕನಿಷ್ಠ 6 ರಿಂದ 8 ತಿಂಗಳು ಮುಚ್ಚುವ ಸಾಧ್ಯತೆಯಿದೆ.

    ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ (ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು (Gold Plating) ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಬಂದ್ರೆ ಕ್ವಾರಂಟೈನ್‌

    ನೂತನ ಚಿನ್ನದ ಲೇಪನ (Gold Plating) ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಫೆಬ್ರವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.

    ಈ ಸಮಯದಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆಯೋದಕ್ಕಾಗಿ ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್- ಅಂಗಡಿಯಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯ

    `ಆಗಮ ಶಾಸ್ತç’ ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಮೂಲ ದೇವಾಲಯವನ್ನು ಪುನಃಸ್ಥಾಪಿಸುವವರೆಗೆ, ಎಲ್ಲಾ ದೈನಂದಿನ ಆಚರಣೆಗಳನ್ನು ತಾತ್ಕಾಲಿಕ ದೇವಾಲಯದಲ್ಲಿ ಮಾಡಲಾಗುವುದು ಮತ್ತು ಭಕ್ತರಿಗೆ ದೇವರ ದರ್ಶನವನ್ನು ಇಲ್ಲೇ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನ!

    ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನ!

    – ಸಾಮಾಜಿಕ ಅಂತರ ಪಾಲನೆ ಹಿನ್ನೆಲೆ ಸಿಬ್ಬಂದಿ, ಸ್ಥಳೀಯರಿಗೆ ಮಾತ್ರ ಅವಕಾಶ

    ಹೈದರಾಬಾದ್: ಕೊರೊನಾ ಹಿನ್ನೆಲೆಯಲ್ಲಿ ಕಳೆದ 70 ದಿನಗಳಿಂದ ಬಂದ್ ಆಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ.

    ಜೂನ್ 8ರಿಂದ ದೇವಾಲಯದಲ್ಲಿ ದರ್ಶನ ಆರಂಭವಾಗಲಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ಪ್ರಯೋಗಾತ್ಮಕವಾಗಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ. ಸಾಮಾನ್ಯ ಭಕ್ತರಿಗೆ ಯಾವಾಗ ಅವಕಾಶ ನೀಡಲಾಗುತ್ತದೆ ಎಂಬ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ತಿಮ್ಮಪ್ಪನ ದರ್ಶನ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡಲು, ಗಂಟೆಗೆ 300 ಭಕ್ತರಿಗೆ ಮಾತ್ರ ದರ್ಶನ ಕಲ್ಪಿಸಲು ಟಿಟಿಡಿ ಸಿದ್ಧತೆ ನಡೆಸಿದೆ.

    ಟಿಟಿಡಿ ಮಂಡಳಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ಕಾರ ಪ್ರಯೋಗಾತ್ಮಕವಾಗಿ ದರ್ಶನ ವ್ಯವಸ್ಥೆಯನ್ನು ನಡೆಸಲು ಅನುಮತಿ ನೀಡಿದೆ. ಲಾಕ್‍ಡೌನ್ ನಿಯಮಗಳಿಂದ ವಿನಾಯಿಸತಿ ಸಿಕ್ಕ ಮೊದಲ ಭಾಗದ ಹಿನ್ನೆಲೆಯಲ್ಲಿ ದೇಶದ ವಿವಿಧ ದೇವಾಲಯಗಳು ಭಕ್ತರಿಗೆ ದರ್ಶನ ನೀಡಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಆದರೆ ಆಂಧ್ರ ಪ್ರದೇಶ ಸರ್ಕಾರ ಲಾಕ್‍ಡೌನ್ ಸಡಿಲಿಕೆಯ ಫೇಸ್-1 ಕುರಿತು ಇದುವರೆಗೂ ಯಾವುದೇ ನಿಯಮಾವಳಿಗಳನ್ನು ಬಿಡುಗಡೆಗೊಳಿಸಿಲ್ಲ.

    ಕೇಂದ್ರ ಸರ್ಕಾರ ಹಾಗೂ ಸಚಿವಾಲಯ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಶ್ರೀವಾರಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಮಗೆ ಭಕ್ತರಿಂದ ಸಾಕಷ್ಟು ಇ-ಮೇಲ್, ಸಂದೇಶಗಳು ಬರುತ್ತಿದ್ದು, ದೇವರ ದರ್ಶನ ಆರಂಭದ ಕುರಿತು ಮಾಹಿತಿ ಕೇಳುತ್ತಿದ್ದಾರೆ. ಆದರೆ ಸರ್ಕಾರದ ನೀಡುವ ಲಾಕ್‍ಡೌನ್ ನಿರ್ದೇಶನಗಳ ಮೇಲೆ ಎಲ್ಲವೂ ಆಧಾರವಾಗಿರುತ್ತದೆ. ಮಾರ್ಚ್ 19 ರಿಂದ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲದಿರುವುದರಿಂದ ಪ್ರತಿ ತಿಂಗಳು 200 ಕೋಟಿ ರೂ. ನಷ್ಟ ಎದುರಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಆದಾಯಕ್ಕೆ ಹೊಡೆತ ಬಿದ್ದ ಪರಿಣಾಮ ಟಿಟಿಡಿ ಸಿಬ್ಬಂದಿಯ ವೇತನ ನೀಡಲು ಸಮಸ್ಯೆ ಎದುರಿಸಿದೆ. ಪ್ರತಿದಿನ ಭಕ್ತರು ದೇವರ ಹುಂಡಿಗೆ ಸಲ್ಲಿಸುತ್ತಿದ್ದ ಕಾಣಿಕೆಗಳು ದೇವಾಲಯದ ಪ್ರಮುಖ ಆದಾಯದ ಮೂಲವಾಗಿತ್ತು. ಹುಂಡಿಯಲ್ಲಿ ಪ್ರತಿದಿನ 50 ಲಕ್ಷ ರೂ. ಆದಾಯ ಲಭಿಸುತ್ತಿತ್ತು.