Tag: tirupti

  • ನಾರಾಯಣಮೂರ್ತಿ ದಂಪತಿಯಿಂದ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ

    ನಾರಾಯಣಮೂರ್ತಿ ದಂಪತಿಯಿಂದ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ

    ಬೆಂಗಳೂರು: ಇನ್ಫೋಸಿಸ್ (Infosys) ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ (Narayanamurthy) ಹಾಗೂ ಸುಧಾಮೂರ್ತಿ (Sudhamurthy) ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ (Tirupati) ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ.

    ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ.

    ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ – ಇಂದು ಪಿಎಂ ಉದ್ಘಾಟನೆ

    ರಾಜ್ಯಪಾಲರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ಅವರನ್ನು ಸ್ವಾಗತಿಸಿದ್ದಾರೆ. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರ ನೀಡಿ ರಾಜ್ಯಪಾಲರನ್ನು ಗೌರವಿಸಿದ್ದಾರೆ. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಿದ್ದಾರೆ. ಇದನ್ನೂ ಓದಿ: ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ

    ಈ ಸಂದರ್ಭದಲ್ಲಿ ತಿರುಪತಿ ಜಿಲ್ಲೆಯ ಬಿಜೆಪಿ ಮುಖಂಡ ಭಾನುಪ್ರಕಾಶ್ ರೆಡ್ಡಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಟಿಟಿಡಿ ಅಧ್ಯಕ್ಷರಾಗಿ ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಆಯ್ಕೆ

    ಟಿಟಿಡಿ ಅಧ್ಯಕ್ಷರಾಗಿ ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಆಯ್ಕೆ

    ಅಮರಾವತಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಮಂಡಳಿಯ ಅಧ್ಯಕ್ಷರನ್ನಾಗಿ ತಮ್ಮ ಚಿಕ್ಕಪ್ಪ ವೈಎಸ್‍ಆರ್ ಕಾಂಗ್ರೆಸ್ ಪಕ್ಷ (ವೈಎಸ್‍ಆರ್‍ಸಿಪಿ)ದ ಮುಖಂಡ ವೈ.ವಿ.ಸುಬ್ಬಾರೆಡ್ಡಿ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

    ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷರನ್ನಾಗಿ ವೈ.ವಿ.ಸುಬ್ಬಾ ರೆಡ್ಡಿ ಅವರನ್ನು ನೇಮಕ ಮಾಡಿರುವ ಕುರಿತು ಸರ್ಕಾರದ ವಿಶೇಷ ಮುಖ್ಯ ಕಾರ್ಯದರ್ಶಿ ಮನ್ ಮೋಹನ್ ಸಿಂಗ್ ಆದೇಶ ಹೊರಡಿಸಿದ್ದಾರೆ.

    ಜಗನ್ ಚಿಕ್ಕಪ್ಪ ವೈ.ವಿ.ಸುಬ್ಬಾರೆಡ್ಡಿ ಅವರು ವೈಎಸ್‍ಆರ್‍ಸಿಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಇಂದು ಟಿಟಿಡಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಟಿಟಿಡಿ ಮಂಡಳಿಯ ಉಳಿದ ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ.

    ತಿರುಮಲ ತಿರುಪತಿ ಒಂದು ದೇವಸ್ವ ಮಂಡಳಿಯಾಗಿದ್ದು, ತಿರುಪತಿ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಆಂಧ್ರ ಪ್ರದೇಶದಲ್ಲಿ ಟಿಟಿಡಿ ಅಧ್ಯಕ್ಷ ಸ್ಥಾನ ತುಂಬಾ ಪ್ರಭಾವಿಯಾಗಿದ್ದು, ವೆಂಕಟೇಶ್ವರ ದೇವಸ್ಥಾನಕ್ಕೆ ಆಗಮಿಸುವ ಕ್ಯಾಬಿನೆಟ್ ಸಚಿವರು ಹಾಗೂ ಇತರ ಗಣ್ಯರು ಟಿಟಿಡಿ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ನಂತರ ದೇವರ ದರ್ಶನ ಪಡೆಯುವುದು ವಾಡಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

    ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಪುಟ್ಟ ಸುಭಾಕರ್ ರೆಡ್ಡಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವೈ.ವಿ.ಸುಬ್ಬಾರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ನಾಲ್ಕು ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿಯನ್ನು ಪುನರ್ ರಚನೆ ಮಾಡುವಂತೆ ವೈಎಸ್‍ಆರ್ ಸರ್ಕಾರ ಸೂಚಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಟಿಟಿಡಿ ಅಧ್ಯಕ್ಷರನ್ನಾಗಿ ಸುಬ್ಬಾರೆಡ್ಡಿ ಅವರನ್ನು ಆಯ್ಕೆ ಮಾಡಿರುವುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]