Tag: Title Teaser

  • ಕಿಚ್ಚನ ಮಾರ್ಕ್ ಟೈಟಲ್ ಟೀಸರ್‌ಗೆ ಫುಲ್ ಮಾರ್ಕ್ಸ್

    ಕಿಚ್ಚನ ಮಾರ್ಕ್ ಟೈಟಲ್ ಟೀಸರ್‌ಗೆ ಫುಲ್ ಮಾರ್ಕ್ಸ್

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್ ಟೀಸರ್ ದಾಖಲೆ ಬರೆದಿದೆ.

    ಮಾರ್ಕ್ (Mark) ಟೈಟಲ್ ಟೀಸರ್ ಯೂಟ್ಯೂಬ್ ನಲ್ಲಿ 5.01 ಮಿಲಿಯನ್ ವೀವ್ಸ್ ಕಂಡಿದೆ. ಇನ್‌ಸ್ಟಾಗ್ರಾಂನಲ್ಲಿ 4.3 ಮಿಲಿಯನ್ ವೀಕ್ಷಣೆ ಕಂಡಿದೆ. ಯೂಟ್ಯೂಬ್ ಹಾಗೂ ಇನ್‌ಸ್ಟಾ ಒಟ್ಟಾರೆ ಸೇರಿ ಮಾರ್ಕ್ ಟೈಟಲ್ ಟೀಸರ್ 9.3 ಮಿಲಿಯನ್ ವೀವ್ಸ್ ಕಂಡಿದೆ.ಇದನ್ನೂ ಓದಿ: ‘ಮಹಾನ್’ ಚಿತ್ರ ಒಪ್ಪಿಕೊಂಡ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ

    ‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. ಈ ಮೊದಲು ‘ಮ್ಯಾಕ್ಸ್’ ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಅವರೇ ಈಗ ‘ಮಾರ್ಕ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದೇ ವರ್ಷ ಡಿಸೆಂಬರ್ 25ರಂದು ಮಾರ್ಕ್ ಚಿತ್ರ ತೆರೆಗೆ ಬರ್ತಿದೆ.

  • ಚಿರು ನಟನೆಯ 156ನೇ ಸಿನಿಮಾದ ಟೈಟಲ್ ಟೀಸರ್ ರಿಲೀಸ್

    ಚಿರು ನಟನೆಯ 156ನೇ ಸಿನಿಮಾದ ಟೈಟಲ್ ಟೀಸರ್ ರಿಲೀಸ್

    ವಾಲ್ಟೇರ್ ವೀರಯ್ಯ ಸಿನಿಮಾ ಮೂಲಕ ಕಳೆದ ಸಂಕ್ರಾಂತಿ ಹಬ್ಬಕ್ಕೆ ಮನರಂಜನೆ ಬಾಡೂಟ ಬಡಿಸಿದ್ದ ಮೆಗಾಸ್ಟಾರ್ ಚಿರಂಜೀವಿ (Chiranjeevi), ಈ ವರ್ಷ ವಿಶ್ವಂಭರ ಟೈಟಲ್ ಟೀಸರ್ (Title Teaser) ಮೂಲಕ ಸುಗ್ಗಿ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ. ಚಿರು ನಟಿಸುತ್ತಿರುವ 156ನೇ ಸಿನಿಮಾದ ಟೈಟಲ್ ಟೀಸರ್ ಸಂಕ್ರಾಂತಿ ವಿಶೇಷವಾಗಿ ನಿನ್ನೆ ಬಿಡುಗಡೆಯಾಗಿದೆ.

    ಜಗದೇಕ ವೀರುಡು ಅತಿಲೋಕ ಸುಂದರಿ ಸಿನಿಮಾದ ಬಳಿಕ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಶ್ವಂಭರ ಎಂಬ ಟೈಟಲ್ ಇಡಲಾಗಿದೆ. ಈ ಟೈಟಲ್ ಟೀಸರ್ ನಲ್ಲಿ ಗ್ರಾಫಿಕ್ಸ್ ಕೆಲಸ ಪರಿಣಾಮಕಾರಿಯಾಗಿದೆ. ಈ ಮೆಗಾ ಫ್ಯಾಂಟಸಿ ಸಾಹಸವನ್ನು ಬಿಂಬಿಸಾರ ಖ್ಯಾತಿಯ ವಸಿಷ್ಠ ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ದೇಶಿಸಿದ್ದಾರೆ. ವಿಕ್ರಮ್, ವಂಶಿ ಮತ್ತು ಪ್ರಮೋದ್ ಹಣ ಹಾಕುತ್ತಿದ್ದು, ಚಿರಂಜೀವಿ ಸಿನಿಕರಿಯ್ ನಲ್ಲಿ ಅತ್ಯಂತ ದುಬಾರಿ ವೆಚ್ಚದ ಚಿತ್ರವಾಗಿದೆ.

    ವಿಶ್ವಂಭರ (Vishwambhara) ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಚೋಟಾ ಕೆ ನಾಯ್ಡು ಅವರ ಛಾಯಾಗ್ರಹಣವಿದೆ. ಎಎಸ್ ಪ್ರಕಾಶ್ ನಿರ್ಮಾಣ ವಿನ್ಯಾಸ, ಸುಶ್ಮಿತಾ ಕೊನಿಡೇಲ ವಸ್ತ್ರ ವಿನ್ಯಾಸ ಮಾಡಲಿದ್ದಾರೆ. ಕೋಟಗಿರಿ ವೆಂಕಟೇಶ್ವರರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಚಿತ್ರಕ್ಕೆ ಸಂಕಲನಕಾರರು. ಶ್ರೀ ಶಿವಶಕ್ತಿ ದತ್ತ ಮತ್ತು ಚಂದ್ರಬೋಸ್ ಗೀತರಚನೆಕಾರರಾಗಿದ್ದರೆ, ಶ್ರೀನಿವಾಸ್ ಗವಿರೆಡ್ಡಿ, ಗಂಟಾ ಶ್ರೀಧರ್, ನಿಮ್ಮಗಡ್ಡ ಶ್ರೀಕಾಂತ್ ಮತ್ತು ಮಯೂಖ್ ಆದಿತ್ಯ ಅವರು ಚಿತ್ರಕಥೆ ಸಹಾಯಕರಾಗಿದ್ದಾರೆ. 2025 ರ ಸಂಕ್ರಾಂತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ.

  • ಯಶ್ ನಟನೆಯ ‘ಟಾಕ್ಸಿಕ್’ ಟೈಟಲ್ ಬಗ್ಗೆ ಶಿವಣ್ಣ ಮೆಚ್ಚುಗೆ

    ಯಶ್ ನಟನೆಯ ‘ಟಾಕ್ಸಿಕ್’ ಟೈಟಲ್ ಬಗ್ಗೆ ಶಿವಣ್ಣ ಮೆಚ್ಚುಗೆ

    ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಗ್ಗೆ ಅನೇಕ ಕಡೆ ಚರ್ಚೆಯಾಗುತ್ತಿದೆ. ಅನೇಕರು ಟೈಟಲ್ ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಿರಿಯ ನಟಿ ಶಿವರಾಜ್ ಕುಮಾರ್ (Shivaraj Kumar) ಕೂಡ ಟೈಟಲ್ ಟೀಸರ್ ಬಗ್ಗೆ ಮಾತನಾಡಿದ್ಧಾರೆ. ಯಶ್ ಅವರ ಬೆಳವಣಿಗೆ ನೋಡ್ತಾ ಇದ್ದರೆ ನನ್ನ ತಮ್ಮನೇ ಬೆಳೆಯುತ್ತಿದ್ದಾನೆ ಅನಿಸುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅಪ್ಪು ಅವರನ್ನೂ ಶಿವರಾಜ್ ಕುಮಾರ್ ನೆನಪಿಸಿಕೊಂಡಿದ್ದಾರೆ.

    ಒಂದು ನಿಮಿಷ ಹದಿನೆಂಟು ಸೆಕೆಂಡ್ಟಾಕ್ಸಿಕ್‘ (Toxic Film) ವಿಡಿಯೋ ಸೈಕ್ ಮಾಡ್ತಿದೆ. ಪ್ರತಿ ಬಾರಿ ಟೈಟಲ್ ಟೀಸರ್ ನೋಡಿದಾಗ ಹೊಸದೊಂದು ಅನುಭವ ಕೊಡ್ತಿದೆ. ಅಷ್ಟೋಂದು ವಿಷಗಳನ್ನ ಪುಟ್ಟ ವಿಡಿಯೋದಲ್ಲಿ ಅಡಗಿಸಲಾಗಿದೆ. ಟೀಸರ್ನಲ್ಲಿ ್ಯಾಪ್ ಮಾಡಿರೋದು ಯಾರು? ಮ್ಯೂಸಿಕ್ ಕೊಟ್ಟವರು ಯಾರು? ಡಿಸೈನರ್ ಯಾರು ಅನ್ನೋ ಹಲವಾರು ಪ್ರಶ್ನೆಗಳು ಅಭಿಮಾನಿಗಳು ಕೇಳ್ತಿದ್ದಾರೆ.

    ಕಾಯಿಸಿಸತಾಯಿಸಿ ಯಶ್ ಅದ್ಬುತವಾದ ಕಂಟೆಂಟ್ ಜನರ ಮುಂದಿಟ್ಟಿದ್ದಾರೆ. ಡಿಸೆಂಬರ್ 8ರಂದು ರಿಲೀಸ್ ಆದಟಾಕ್ಸಿಕ್ಟೈಟಲ್ ಟೀಸರ್ ಗಂಟೆಗಳಲ್ಲಿ ಲಕ್ಷ ಲಕ್ಷ ವ್ಯೂವ್ಸ್ ಪಡೆದು ಕೊಳ್ತು. ನಿರ್ದೆಶಕಿ ಗೀತೂ ಮೋಹನ್ದಾಸ್ ಪ್ರತಿ ಫ್ರೆಮ್ನೂ ಮುತ್ತು ಪೋಣಿಸಿದ ಹಾಗೇ ಪೋಣಿಸಿದ್ದಾರೆ. ಪ್ರತಿ ಸೆಕೆಂಡ್ನಲ್ಲೂ ಒಂದಿಷ್ಟು ವಿಚಾರಳನ್ನ ಅಡಗಿಸಿ ಜನರ ಮಡಿಲಿಗೆ ಅರ್ಪಿಸಿದ್ದಾರೆ. ಸದ್ಯಟಾಕ್ಸಿಕ್ಮ್ಯೂಸಿಕ್ ವಿಚಾರ ಪಾಸಿಟಿವ್ ನೋಟ್ನಲ್ಲಿ ಸದ್ದು ಮಾಡ್ತಿದೆ.

     

    ಚರಣ್ರಾಜ್ ಮ್ಯೂಸಿಕ್ ಸ್ಟುಡಿಯೋದಲ್ಲಿ ಯಶ್ (Yash) ಹೊಸ ಸಿನಿಮಾ ಕೆಲಸ ಮಾಡಿಸ್ತಿದ್ದಾರೆ ಅನ್ನೋ ವಿಚಾರ ಕೇಳಿದ್ವಿ. ಈಗ ಲಂಡನ್ ಮೂಲದ ಜೆರೆಮಿಸ್ಟಾಕ್ ಹೆಸರು ಚಾಲ್ತಿಯಲ್ಲಿದೆ. ದೇಶವಿದೇಶದಲ್ಲಿ ಮೆರವಣಿಗೆ ಹೊರಡಲಿರುವ ಟಾಕ್ಸಿಕ್ಗೆ ಇಬ್ಬರೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ ಅನ್ನೋ ಟಾಕ್ ಕೂಡ ಇದೇ. ಟೀಸರ್ನಲ್ಲಿ ್ಯಾಪ್ಗೆ ಶೃತಿ ಹಾಸನ್ (Shruti Haasan) ಕಂಠ ಕುಣಿಸಿದ್ದಾರೆ ಅನ್ನೋ ಟಾಕ್ ಕೂಡ ಇದೇ. ನಮ್ಮ ಮಣ್ಣಿನ ಬೇರು ಹೊಸ ಚಿಗುರು ಅನ್ನೋ ಕಾನ್ಸೆಪ್ಟ್ಗೆಟಾಕ್ಸಿಕ್ಟೀಮ್ ಕೈ ಹಾಕಿದೆ ಅನಿಸ್ತಿದೆ.

  • ಗುಂಡನಿಗೆ ಸಾಥ್ ನೀಡಿದ ಧ್ರುವ ಸರ್ಜಾ: ಟೈಟಲ್ ಟೀಸರ್ ರಿಲೀಸ್

    ಗುಂಡನಿಗೆ ಸಾಥ್ ನೀಡಿದ ಧ್ರುವ ಸರ್ಜಾ: ಟೈಟಲ್ ಟೀಸರ್ ರಿಲೀಸ್

    ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ (Naanu Mattu Gunda 2) ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘು ಹಾಸನ್ (Raghu Haasan) ಆಕ್ಷನ್ ಕಟ್ ಹೇಳಿದ್ದರು.   ಈಗ ಅದರ  ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ-2’ ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ  ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ.  ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದ್ದು, ಬುಧವಾರ ಸಂಜೆ ಈ ಚಿತ್ರದ  ಟೈಟಲ್ ಟೀಸರನ್ನು (Title Teaser) ನಟ ಧ್ರುವಸರ್ಜಾ (Dhruva Sarja) ಬಿಡುಗಡೆ ಮಾಡಿದರು.

    ಚಿತ್ರದ  ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ  ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ.  ಸಿಂಬು ನಾಲ್ಕು ದಿನವಷ್ಟೇ  ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್  ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು  ಸುತ್ತಮುತ್ತ 50 ದಿನಗಳ  ಶೂಟಿಂಗ್ ನಡೆಸಲಾಗಿದ್ದು, ಊಟಿ ಭಾಗದ‌ 20 ದಿನದ ಚಿತ್ರೀಕರಣವಷ್ಟೇ ಬಾಕಿಯಿದೆ.  ನಾನು ಪಾತ್ರವನ್ನು ಸದ್ಯದಲ್ಲೇ ರಿವೀಲ್ ಮಾಡುತ್ತೇವೆ.

    ಕಳೆದಬಾರಿ ಫಂಡಿಂಗ್ ಕೊರತೆಯಿಂದ ಹೆಚ್ಚು ಪ್ರಚಾರ ಮಾಡಲಾಗಿರಲಿಲ್ಲ, ಈಗ ಆರಂಭದಿಂದಲೇ ಪ್ರೊಮೋಷನ್  ಮಾಡುತ್ತಿದ್ದೇವೆ ಎಂದು ಹೇಳಿದರು. ನಂತರ ಧ್ರುವ ಸರ್ಜ ಮಾತನಾಡಿ ನಾನು ಮತ್ತು ಗುಂಡ ನನಗೆ ಮತ್ತು ನನ್ನ ಪತ್ನಿಗೆ ತುಂಬಾ ಇಷ್ಟವಾಗಿತ್ತು. ಅದರ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಈ ಟೈಟಲ್ ಟೀಸರ್ ತುಂಬಾ ಚನ್ನಾಗಿ ಬಂದಿದೆ. ಯುವ ಪ್ರತಿಭೆಗಳಿಗೆ ನಾವೆಲ್ಲ ಪ್ರೋತ್ಸಾಹ ನೀಡಬೇಕು. ಅಂತವರು ಬೆಳೆಯುತ್ತಾರೆ ಎಂದು ಹೇಳಿದರು.

    ಸಂಭಾಷಣೆ ಸಾಹಿತ್ಯ ಬರೆದ ರೋಹಿತ್ ರಮನ್ ಮಾತನಾಡಿ  ಮೊದಲ ಭಾಗದಲ್ಲೂ ನಾನೇ ಸಾಹಿತ್ಯ ಬರೆದಿದ್ದೆ. ನಾಯಿ ಇಟ್ಟುಕೊಂಡು ಸಿನಿಮಾ ಮಾಡೋದು ದೊಡ್ಡ ಚಾಲೆಂಜ್, ಅಂತಾದ್ರಲ್ಲಿ ರಘು ಎರಡನೇ ಭಾಗವನ್ನೂ ಮಾಡ್ತಿದ್ದಾರೆ ಎಂದರು. ಹಿನ್ನೆಲೆ ಸಂಗೀತ ನೀಡಿದ  ರುತ್ವಿಕ್ ಮುರಳೀಧರ್ ಮಾತನಾಡಿ  ಟೀಸರ್ ಎಲ್ಲರಿಗೂ ಇಷ್ಟವಾಗುತ್ತೆ ಎಂದರು.  ಛಾಯಾಗ್ರಹಣ ನಿರ್ವಹಿಸಿದ  ತನ್ವಿಕ್ ಮಾತನಾಡಿ  ಹಿಂದೆ ದಿಲ್ ಮಾರ್ ಚಿತ್ರಕ್ಕೆ ಕ್ಯಾಮೆರಾ ಮಾಡಿದ್ದೆ. ತಕ್ಷಣ ಒಪ್ಪಿಕೊಂಡು ಮಾಡಿದ ಚಿತ್ರವಿದು ಎಂದರು. ಈ ಚಿತ್ರದಲ್ಲಿ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಅಭಿನಯಿಸಿದೆ. ಸಿಂಬು ಈಗಾಗಲೇ ಅವನು ಮತ್ತು ಶ್ರಾವಣಿ ಎಂಬ ಧಾರಾವಾಹಿಯಲ್ಲೂ ನಟಿಸುತ್ತಿದೆ.

     

    ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ  ನಾನು ಮತ್ತು ಗುಂಡ-೨  ಚಿತ್ರಕ್ಕೆ ಆರ್.ಪಿ.ಪಟ್ನಾಯಕ್  ಅವರ ಸಂಗೀತ ಸಂಯೋಜನೆ,  ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ

  • ಕಿಚ್ಚ 46: ಮಧ್ಯರಾತ್ರಿ ಟೈಟಲ್ ಟೀಸರ್ ರಿಲೀಸ್

    ಕಿಚ್ಚ 46: ಮಧ್ಯರಾತ್ರಿ ಟೈಟಲ್ ಟೀಸರ್ ರಿಲೀಸ್

    ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕಾಗಿ ಅವರ ಹೊಸ ಸಿನಿಮಾದ ಟೈಟಲ್ ಟೀಸರ್ (Title Teaser) ರೆಡಿಯಾಗಿದ್ದು, ಸೆಪ್ಟೆಂಬರ್ 2ರಂದು ಮಧ್ಯರಾತ್ರಿ 12.01ಕ್ಕೆ ಟೀಸರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಟೈಟಲ್ ಏನಿರಲಿದೆನ್ನುವ ಕುತೂಹಲ ಎಲ್ಲರದ್ದು.

    ನೆಚ್ಚಿನ ನಟ-ನಟಿಯರ ಬರ್ತ್‌ಡೇ ಅಂದರೆ ಅಭಿಮಾನಿಗಳ ಪಾಲಿಗೆ ವಿಶೇಷ. ಇದೀಗ ಅಭಿನಯ ಚಕ್ರವರ್ತಿ ಸುದೀಪ್(Kichcha Sudeep) ಹುಟ್ಟುಹಬ್ಬಕ್ಕೆ (Birthday) ಕೌಂಟ್ ಡೌನ್ ಶುರುವಾಗಿದೆ. ಅದಕ್ಕಾಗಿ ತೆರೆಮರೆಯಲ್ಲಿ ಸಿದ್ಧತೆ ಕೂಡ ಶುರುವಾಗಿದೆ. ಇದನ್ನೂ ಓದಿ:ಸಿನಿಮಾ ಬಿಟ್ಟು ರಾಜಕೀಯದತ್ತ ರಮ್ಯಾ ಕೃಷ್ಣನ್? ಸ್ಪಷ್ಟನೆ ನೀಡಿದ ನಟಿ

    ಕಿಚ್ಚ ಸುದೀಪ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಲು ನಿರ್ಧರಿಸಿದ್ದಾರೆ. ಸೆಪ್ಟಂಬರ್ 1ರಂದು ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ರಾತ್ರಿ 10ರಿಂದ 12ರ ತನಕ ಅದ್ಧೂರಿ ಆಚರಣೆ ಪ್ಲ್ಯಾನ್ ಮಾಡಿದ್ದು, ರಾತ್ರಿ 12 ಗಂಟೆಗೆ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಲಿದ್ದಾರೆ. ಈ ದಿನ ಅಭಿಮಾನಿಗಳಿಗೆ ಹಲವು ಸರ್ಪ್ರೈಸ್‌ಗಳು ಕೂಡ ಇವೆ.

     

    ಹುಟ್ಟುಹಬ್ಬದ ದಿನ ಸೆ.2ರಂದು ಜೆಪಿ ನಗರ ಮನೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ತನಕ ಅಭಿಮಾನಿಗಳನ್ನ ಮೀಟ್ ಮಾಡಲಿದ್ದಾರೆ. ಸುದೀಪ್ ಮನೆ ಬಳಿಯೂ ಅಭಿಮಾನಿಗಳು ಜಮಾಯಿಸಲಿದ್ದಾರೆ. ಕಿಚ್ಚನ ಬರ್ತ್‌ಡೇ ದಿನ (ಸೆ.2) ಮುಂದಿನ ಸಿನಿಮಾದ ಲುಕ್ ಜೊತೆ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸುದೀಪ್ ಗುಡ್ ನ್ಯೂಸ್ ಕೊಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಜೋಗಿ ಪ್ರೇಮ್ (Prem) ಮತ್ತು ಧ್ರುವ ಸರ್ಜಾ (Dhruv Sarja) ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈ ಸಿನಿಮಾದ ಟೈಟಲ್ ಟೀಸರ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯುತ್ತಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಇದೇ  ಅಕ್ಟೋಬರ್ 20 ರಂದು ಕಾರ್ಯಕ್ರಮವು ಬೆಂಗಳೂರಿನಲ್ಲೇ ನಡೆಯುತ್ತಿದೆ.


    ಈಗಾಗಲೇ ಈ ಟೀಸರ್ (Title Teaser) ಲಾಂಚ್ ಮಾಡಲು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಆಗಮಿಸಲಿದ್ದಾರೆ ಎಂದು ಪ್ರೇಮ್ ತಿಳಿಸಿದ್ದರು. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ ಫೋಟೋವನ್ನೂ ಅವರು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ತ (Sanjay Dutt) ಕೂಡ ಆಗಮಿಸಲಿದ್ದಾರೆ ಅಂದಿದ್ದಾರೆ. ಇಂದು ಮುಂಬೈನಲ್ಲಿ ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿ ಆಹ್ವಾನಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್

    ಭಾರತೀಯ ಸಿನಿಮಾ ರಂಗದ ಮೇರು ನಟರು ಮಾತ್ರವಲ್ಲ, ನಿನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನೂ ಪ್ರೇಮ್ ಭೇಟಿ ಮಾಡಿದ್ದರು. ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ಈ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಅವರೂ ಸಾಕ್ಷಿಯಾಗಲಿದ್ದಾರೆ.

    ಈಗಾಗಲೇ ಸಿನಿಮಾದ ಮುಹೂರ್ತ ಮೈಸೂರಿನಲ್ಲಿ ನಡೆದಿದೆ. ಇನ್ನಷ್ಟೇ ಚಿತ್ರೀಕರಣ ಶುರುವಾಗಬೇಕು. ಅದಕ್ಕಾಗಿ ಎಲ್ಲ ಸಿದ್ಧತೆಯನ್ನೂ ಚಿತ್ರತಂಡ ಮಾಡಿಕೊಂಡಿದೆ. ಅದಕ್ಕೂ ಮುನ್ನ ಟೈಟಲ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಂದ ಸಿನಿಮಾದ ಇತರ ಕೆಲಸಗಳು ಶುರುವಾಗಲಿವೆಯಂತೆ. ಪ್ರೇಮ್ ಸಿನಿಮಾಗಳು ಅಂದರೆ, ಅಲ್ಲೊಂದು ಅಬ್ಬರ ಇರಲೇಬೇಕು. ಆ ಅಬ್ಬರವೂ ಮೊದಲ ದಿನದಿಂದಲೇ ಶುರುವಾಗಿರುವುದು ಮತ್ತೊಂದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್ (Title Teaser) ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ (Mohanlal) ಬರಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

    ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್ (Jogi Prem) ಹಂಚಿಕೊಂಡಿದ್ದು, ಇದೊಂದು ಅಪರೂಪದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ. ಇಂತಹ ಮಹಾನ್ ಕಲಾವಿದನನ್ನು ಭೇಟಿ ಮಾಡಿದ್ದು ಸಂಭ್ರಮ ತಂದಿದೆ ಎಂದಿರುವ ಪ್ರೇಮ್, ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದೂ ಅವರು ಕೋರಿದ್ದಾರೆ. ಇದನ್ನೂ ಓದಿ:ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಕೆವಿಎನ್ (KVN) ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮೈಸೂರಿನಲ್ಲಿ ಸಿನಿಮಾದ ಮುಹೂರ್ತವಾಗಿದ್ದು, ಅರ್ಜುನ್ ಜನ್ಯ ಈ ಸಿನಿಮಾಗಾಗಿ ಸಂಗೀತ ಸಂಯೋಜನೆಯ ಕೆಲಸವನ್ನೂ ಆರಂಭಿಸಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಮಾತೂ ಇದೆ.

    Live Tv
    [brid partner=56869869 player=32851 video=960834 autoplay=true]