Tag: Titli

  • ತಿತ್ಲಿ ಚಂಡಮಾರುತಕ್ಕೆ ತತ್ತರಿಸಿ ಕೊಚ್ಚಿ ಹೋಯ್ತು ಸೇತುವೆ: ವಿಡಿಯೋ ನೋಡಿ

    ತಿತ್ಲಿ ಚಂಡಮಾರುತಕ್ಕೆ ತತ್ತರಿಸಿ ಕೊಚ್ಚಿ ಹೋಯ್ತು ಸೇತುವೆ: ವಿಡಿಯೋ ನೋಡಿ

    ಭುವನೇಶ್ವರ: ತಿತ್ಲಿ ಚಂಡಮಾರುತದ ಅಬ್ಬರಕ್ಕೆ ಒಡಿಶಾದಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಗಂಜಮ್ ಜಿಲ್ಲೆಯ ಕಳಿಂಗದಳ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬಹುದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

    ಬಂಗಾಳಕೊಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತ ದೇಶದ ಕರಾವಳಿ ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಂಧ್ರ ಪ್ರದೇಶ ಹಾಗೂ ಒಡಿಶಾ ರಾಜ್ಯಗಳೇ ಹೆಚ್ಚಿನ ಪರಿಣಾಮವನ್ನು ಎದುರಿಸಿತ್ತಿವೆ.

    ಒರಿಶಾ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಗಂಜಮ್, ಗಜಪತಿ ಹಾಗೂ ರಾಯಗಡ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರವಾಹ ಉಂಟಾಗಿದ್ದು, ಬಹುದಾ, ಋಷಿಕುಲ್ಯ ಹಾಗೂ ವಂಶಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗಂಜಮ್ ಜಿಲ್ಲೆಯ 22 ಬ್ಲಾಕ್‍ನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಸಾವಿರಾರು ಜನರನ್ನು ಸ್ಥಳಾಂತರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತ ಎಫೆಕ್ಟ್ – ಮನೆಗಳಿಗೆ ನುಗ್ಗುತ್ತಿದೆ ನೀರು

    ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತ ಎಫೆಕ್ಟ್ – ಮನೆಗಳಿಗೆ ನುಗ್ಗುತ್ತಿದೆ ನೀರು

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತದ ಪರಿಣಾಮ ಮಂಗಳೂರಿನ ಉಳ್ಳಾಲ, ಸೋಮೇಶ್ವರದಲ್ಲಿ ಕಡಲು ಉಕ್ಕೇರುತ್ತಿದೆ.

    ಕಳೆದ ಎರಡು ದಿನಗಳಿಂದ ಕಡಲು ಉಕ್ಕೇರುತ್ತಿದ್ದು, ಸಮುದ್ರದ ಸಮೀಪದ ಮನೆಗಳಿಗೆ ನೀರು ನುಗ್ಗುತ್ತಿದೆ. ಉಳ್ಳಾಲ ಸಮೀಪದ ಸೋಮೇಶ್ವರ, ಪೆರಿಬೈಲ್‍ನಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಇಷ್ಟೇಲ್ಲ ಅನಾಹುತವಾದರೂ ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡದೆ ಬೇಜವಾಬ್ದಾರಿ ಮೆರದಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದನ್ನು ಓದಿ: ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ಸಾಮಾನ್ಯವಾಗಿ ಮಧ್ಯಾಹ್ನ 11 ಗಂಟೆಯಿಂದ ಸಂಜೆ 5ವರೆಗೆ, ಮತ್ತೆ ರಾತ್ರಿ 12ರ ನಂತರ ಕಡಲು ಉಕ್ಕೇರುತ್ತದೆ. ಹೀಗಾಗಿ ಸಮುದ್ರದ ಸಮೀಪದಲ್ಲಿ ಮನೆಯಿರುವ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಇದಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಮುಂದಾಗದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಒಡಿಶಾ, ಆಂಧ್ರಪ್ರದೇಶದಲ್ಲಿ ತಿತ್ಲಿ ಚಂಡಮಾರುತ ತೀವ್ರಗೊಂಡಿದೆ. ಗಂಟೆಗೆ 145 ಕಿಮೀ ವೇಗದಲ್ಲಿ ಗಾಳಿ ಬೀಸ್ತಿದೆ. ಮುಂದಿನ 18 ಗಂಟೆಗಳಲ್ಲಿ ಅದು ಮತ್ತಷ್ಟು ತೀವ್ರಗೊಳ್ಳಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಒಡಿಶಾ ಸರ್ಕಾರ ಕರಾವಳಿಯ ತಟದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಅಲ್ಲದೇ ಶಾಲೆ-ಕಾಲೇಜಿಗೂ ರಜೆ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರದಲ್ಲಿ ಕರಾವಳಿ ತೀರದಲ್ಲಿ ಕಡಲಬ್ಬರ ಜೋರಾಗಿದೆ.

    ಉಲ್ಲಾಳದಲ್ಲಿ ಮನೆ ಮಸೀದಿಗಳಿಗೆ ನೀರು ನುಗ್ಗಿದೆ. ಅಲೆಗಳ ಹೊಡೆತ ತಾಳಲಾರದೆ ಮುಕ್ಕಚ್ಚೇರಿ ಕಿಲೇರಿಯಾ ನಗರ, ಕೈಕೋದ ಎಂಟು ಮನೆ ಮಂದಿ ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ. ಹೀಗಾಗಿ ಯಾರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಒಡಿಶಾದ ಗೋಪಾಲ್ಪುರ ಹಾಗೂ ಆಂಧ್ರ ಪ್ರದೇಶದ ಕಳಿಂಗಪಟ್ಟಣಂ ನಡುವೆ ಗುರುವಾರ ಬೆಳಗ್ಗೆ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಸಲಾಗಿತ್ತು. ತಿತ್ಲಿ ಗಂಟೆಗೆ 10 ಕಿ.ಮೀ. ವೇಗದಲ್ಲಿ ಬೀಸಲಿದ್ದು ಚಂಡಮಾರುತ ಪ್ರಭಾವವು ಒಡಿಶಾದ ಗೋಪಾಲ್ಪುರದಿಂದ 370 ಕಿಮೀ ಆಗ್ನೇಯಕ್ಕೆ ಹೆಚ್ಚಾಗಿರಲಿದೆ ಎಂದು ಐಎಂಡಿ ಬುಲೆಟಿನ್ ನಲ್ಲಿ ಹೇಳಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv