Tag: tobacco

  • ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

    ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು.

    ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23ರಂದು ಅಂಕಿತ ಹಾಕಿದರು. ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆ ಜಾರಿಗೆ ತರಲಾಗಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

     

    ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

    ಅಲ್ಲದೆ ಹೋಟೆಲ್‌ಗಳು, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೂ ಅವಕಾಶ ಇಲ್ಲ. ನಿಷೇಧವನ್ನು ಉಲ್ಲಂಘಿಸಿದವರಿಗೆ 50,000 ದಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಇದನ್ನೂ ಓದಿ: Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

  • ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ – ಯುವತಿ ನೇಣಿಗೆ ಶರಣು

    ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ – ಯುವತಿ ನೇಣಿಗೆ ಶರಣು

    ಹಾವೇರಿ: ತಂಬಾಕು (Tobacco) ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣಿಗೆ ಶರಣಾದ ಘಟನೆ ಹಾವೇರಿ (Haveri) ತಾಲೂಕಿನ ಕರ್ಜಗಿ (Karjagi) ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

    ಮೃತ ಯುವತಿಯನ್ನು ಬೀಬಿಜಾನ್ ಸೊಂಡಿ (18) ಎಂದು ಗುರುತಿಸಲಾಗಿದೆ. ಮನೆಗೆಲಸ ಮಾಡುತ್ತಿದ್ದ ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್‌ಗೆ ತಂದೆ ತಾಯಿ ಬುದ್ಧಿವಾದ ಹೇಳಿದ್ದರು. ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಜನರ ನಂಬಿಕೆಯನ್ನು ಉಳಿಸಿದರೆ ಚಾನೆಲ್‌ ಗಟ್ಟಿಯಾಗಿ ನಿಲ್ಲುತ್ತದೆ: ಡಿಕೆ ಶಿವಕುಮಾರ್‌

    ಮನೆಯಲ್ಲೇ ಯುವತಿ ನೇಣಿಗೆ ಶರಣಾಗಿದ್ದಾಳೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಯ ಅವಹೇಳನ ಆರೋಪ – ರಾಹುಲ್ ಗಾಂಧಿಗೆ ಲಕ್ನೋ ಕೋರ್ಟ್‌ ಸಮನ್ಸ್

  • ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ಹೈದರಾಬಾದ್: ತೆಲಂಗಾಣದ (Telangana) ಖಮ್ಮಂ (Khammam) ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು (Tirupati Laddu) ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು (Tobacco) ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.

    ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ. ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

    ಗೊಲ್ಲಗುಡೆಂ (Gollagudem) ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್‌ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿರುವುದು ಇದೇ ಮೊದಲಲ್ಲ. 2012ರಲ್ಲೂ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಗಮನಾರ್ಹ. ಈಗಾಗಲೇ ತುಪ್ಪದಲ್ಲಿ ಕಲಬೆರಕೆ ವಿಷಯ ವಿವಾದವಾಗಿದ್ದು, ಈ ಬೆನ್ನಲ್ಲೇ ಗುಟ್ಕಾ ಪತ್ತೆಯಾಗಿದೆ ಎಂಬ ಆರೋಪವೂ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ಆಂಧ್ರಪ್ರದೇಶದ ತಿರುಪತಿ ದೇಗುಲದಲ್ಲಿ ಪ್ರಸಾದ ರೂಪದಲ್ಲಿ ನೀಡುತ್ತಿದ್ದ ಲಡ್ಡು ಈಗ ಮಹಾ ವಿವಾದಕ್ಕೆ ಕಾರಣವಾಗಿದೆ. ಲಡ್ಡುವಿನಲ್ಲಿಗೋವು, ಹಂದಿಯ ಕೊಬ್ಬು ಮಿಶ್ರಣ ಮಾಡಲಾಗಿದೆ, ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

  • ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ತಂಬಾಕು ಜಪ್ತಿ

    ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ತಂಬಾಕು ಜಪ್ತಿ

    ಬೀದರ್ : ಅಕ್ರಮವಾಗಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸುತ್ತಿದ್ದ 7. 20 ಲಕ್ಷ ರೂ. ಮೌಲ್ಯದ ತಂಬಾಕು (Tobacco) ಜಪ್ತಿ ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಂಗ್ಲಾ ಕ್ರಾಸ್ ಬಳಿ ನಡೆದಿದೆ.

    ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಪ್ರತಿಷ್ಠಿತ M – SCENTED TOBACOO GOLD ಕಂಪನಿಯ ತಂಬಾಕು ಪ್ಯಾಕೆಟ್‌ಗಳನ್ನು ಸಾಗಿಸಲಾಗುತ್ತಿತ್ತು. ಇದನ್ನೂ ಓದಿ: Loksabha Election: ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ?

     

    ಹೈದರಾಬಾದ್‌ನಿಂದ ಮುಂಬೈಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಫರ್ಮಿಯಾ ಎಂಬಾತನ ಮೇಲೆ ಮೇಲೆ ಎಫ್ಐಆರ್ ದಾಖಲಾಗಿದೆ. ಅಕ್ರಮ ಸಾಗಾಟಕ್ಕೆ ಬಳಸಿದ್ದ 20 ಲಕ್ಷ ಮೌಲ್ಯದ ವಾಹನವೂ ಜಪ್ತಿ ಮಾಡಲಾಗಿದ್ದು ಈ ಕುರಿತು ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟೈಮ್ಸ್‌ ನೌ ಸಮೀಕ್ಷೆ – NDA 366, INDIA 104 ಸೀಟ್‌: ಕರ್ನಾಟಕದಲ್ಲಿ ಬಿಜೆಪಿ ದಳ ಮೈತ್ರಿಗೆ 23 ಸ್ಥಾನ

  • ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ಕೇಂದ್ರ ಸರ್ಕಾರ ನೋಟಿಸ್

    ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ಕೇಂದ್ರ ಸರ್ಕಾರ ನೋಟಿಸ್

    ನವದೆಹಲಿ: ತಂಬಾಕು (Tobacco) ಕಂಪನಿಗಳನ್ನು ಅನುಮೋದಿಸಿದ್ದಕ್ಕೆ ನಟರಾದ ಶಾರುಖ್ ಖಾನ್ (Shah Rukh Khan), ಅಕ್ಷಯ್ ಕುಮಾರ್ (Akshay Kumar) ಹಾಗೂ ಅಜಯ್ ದೇವಗನ್ (Ajay Devgn) ಅವರಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿದೆ.

    ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸಿದ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅಕ್ಟೋಬರ್ 20 ರಂದು ತಂಬಾಕು ಕಂಪನಿಗಳನ್ನು ಅನುಮೋದಿಸಿದ್ದಕ್ಕಾಗಿ ನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಅವರಿಗೆ ಸಿಸಿಪಿಎ ನೋಟಿಸ್ ನೀಡಿದೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠಕ್ಕೆ ತಿಳಿಸಿದ್ದಾರೆ.

    ವಕೀಲ ಮೋತಿಲಾಲ್ ಯಾದವ್ ಅವರು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಕೆಲವು ಉತ್ಪನ್ನಗಳು, ವಸ್ತುಗಳ ಜಾಹೀರಾತುಗಳು ಅಥವಾ ಅನುಮೋದನೆಗಳಲ್ಲಿ ಸೆಲೆಬ್ರಿಟಿಗಳು, ವಿಶೇಷವಾಗಿ ಪದ್ಮ ಪ್ರಶಸ್ತಿ ಪುರಸ್ಕೃತರು ಭಾಗವಹಿಸುವ ಕುರಿತು ಸಮಸ್ಯೆಗಳನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಲೋಕ ಸಮರ ಗೆಲ್ಲಲು ಕಾಂಗ್ರೆಸ್‌ ತಯಾರಿ – 4 ಕ್ಷೇತ್ರದಲ್ಲಿ ನಿಲ್ತಾರಾ ಸೆಲೆಬ್ರಿಟಿ ಅಭ್ಯರ್ಥಿಗಳು?

    ಸೆಪ್ಟೆಂಬರ್ 2022ರ ಆದೇಶವನ್ನು ಪಾಲಿಸದಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಿದ ಮನವಿಯಲ್ಲಿ ನ್ಯಾಯಾಲಯವು ಆಗಸ್ಟ್ 2023 ರಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ, ಮುಖ್ಯ ಆಯುಕ್ತರು ಮತ್ತು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಇದರಲ್ಲಿ ಅರ್ಜಿದಾರರಿಗೆ ಭಾರತ ಸರ್ಕಾರವನ್ನು ಸಂಪರ್ಕಿಸಲು ತಿಳಿಸಲಾಗಿದೆ.

    ನೋಟಿಸ್‌ಗೆ ಪ್ರತಿಕ್ರಿಯಿಸಿದ ಡೆಪ್ಯುಟಿ ಸಾಲಿಸಿಟರ್ ಜನರಲ್, ನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಅವರಿಗೆ ಅಕ್ಟೋಬರ್ 20 ರಂದು ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರ ಪೀಠಕ್ಕೆ ತಿಳಿಸಿದರು.

    ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಒಪ್ಪಂದವನ್ನು ರದ್ದುಗೊಳಿಸಿದ್ದರೂ, ತಮ್ಮ ಜಾಹೀರಾತು ತೋರಿಸಿದ ತಂಬಾಕು ಕಂಪನಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯ ಮುಂದಿನ ವಿಚಾರಣೆಯನ್ನು 2024ರ ಮೇ 9ಕ್ಕೆ ನಿಗದಿಪಡಿಸಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಇಂದು ಸುಪ್ರೀಂನಿಂದ ತೀರ್ಪು

  • ಒಟಿಟಿಯಲ್ಲಿ ಇನ್ನು ತಂಬಾಕು ವಿರೋಧಿ ಎಚ್ಚರಿಕೆ ಕಡ್ಡಾಯ: ಆರೋಗ್ಯ ಸಚಿವಾಲಯ ವಾರ್ನಿಂಗ್

    ಒಟಿಟಿಯಲ್ಲಿ ಇನ್ನು ತಂಬಾಕು ವಿರೋಧಿ ಎಚ್ಚರಿಕೆ ಕಡ್ಡಾಯ: ಆರೋಗ್ಯ ಸಚಿವಾಲಯ ವಾರ್ನಿಂಗ್

    ನವದೆಹಲಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲೂ (OTT Platform) ತಂಬಾಕು ವಿರೋಧಿ ಎಚ್ಚರಿಕೆ (Anti Tobacco Warning) ನೀಡುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ (Health ministry) ಕಡ್ಡಾಯಗೊಳಿಸಿದೆ.

    ಸಿನಿಮಾ ಥಿಯೇಟರ್‌ಗಳಲ್ಲಿ ಹಾಗೂ ದೂರದರ್ಶನ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆಯನ್ನು ಈ ಹಿಂದೆಯಿಂದಲೂ ಪ್ರದರ್ಶಿಸಲಾಗುತ್ತಿದೆ. ಆದರೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿರಲಿಲ್ಲ. ಇದೀಗ ಆರೋಗ್ಯ ಸಚಿವಾಲಯ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನು ಕಡ್ಡಾಯಗೊಳಿಸಿದೆ. ಈ ಹೊಸ ನಿಯಮವನ್ನು ಪ್ಲಾಟ್‌ಫಾರ್ಮ್‌ಗಳು ಅನುಸರಿಸದೇ ಹೋದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ಕಾರ್ಯಕ್ರಮದ ಸಮಯದಲ್ಲಿ ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸುವಾಗ ಒಟಿಟಿ ಪ್ಲಾಟ್‌ಫಾರ್ಮ್‌ಗಳು ತಂಬಾಕು ವಿರೋಧಿ ಆರೋಗ್ಯದ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸಬೇಕು. ಅಲ್ಲದೇ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕನಿಷ್ಟ 20 ಸೆಕೆಂಡುಗಳ ವರೆಗೆ ಆಡಿಯೋ ಅಥವಾ ದೃಶ್ಯದ ರೂಪದಲ್ಲಿ ಕಾರ್ಯಕ್ರಮದ ಪ್ರಾರಂಭದಲ್ಲಿ ಇಲ್ಲವೇ ನಡುವೆ ಪ್ರದರ್ಶಿಸಬೇಕೆಂದು ಆರೋಗ್ಯ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ

    ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರವಾಗುವ ವೆಬ್‌ಸೀರೀಸ್, ಚಲನಚಿತ್ರಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಧೂಮಪಾನವನ್ನು ವ್ಯಾಪಕವಾಗಿ ಪ್ರದರ್ಶಿಸಲಾಗುತ್ತಿದೆ. ಇದು ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಕಾಯಿದೆ 2003ರ ಉಲ್ಲಂಘನೆಯಾಗಿದೆ. ಇದೀಗ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಹೆಚ್ಚು ಜನಪ್ರಿಯವಾಗಿದ್ದು, ದೇಶದಲ್ಲಿ ಯುವಕರು ಹಾಗೂ ಮಕ್ಕಳಿಗೆ ತಂಬಾಕು ಬಳಕೆಯನ್ನು ಉತ್ತೇಜಿಸುವಲ್ಲಿ ಇದು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಗಾ ಭಾಷಣದ ಮಧ್ಯೆ ಮೊಳಗಿತು ಖಲಿಸ್ತಾನ್ ಜಿಂದಾಬಾದ್ ಘೋಷಣೆ

  • ಚುನಾವಣೆಗೆ ಮುನ್ನ ಭರ್ಜರಿ ಕಾರ್ಯಾಚರಣೆ – ಚೆಕ್‌ಪೋಸ್ಟ್‌ಗಳಲ್ಲಿ 15 ಲಕ್ಷ, ತಂಬಾಕು ಸೀಜ್

    ಚುನಾವಣೆಗೆ ಮುನ್ನ ಭರ್ಜರಿ ಕಾರ್ಯಾಚರಣೆ – ಚೆಕ್‌ಪೋಸ್ಟ್‌ಗಳಲ್ಲಿ 15 ಲಕ್ಷ, ತಂಬಾಕು ಸೀಜ್

    ಗದಗ: ಚುನಾವಣೆ ಮುನ್ನವೇ ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ (Checkpost) ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ತಂಬಾಕು (Tobacco) ಸೇರಿದಂತೆ ಅನೇಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.

    ನಗರದ ಮುಳಗುಂದ ರಸ್ತೆಯಲ್ಲಿನ ಚೆಕ್‌ಪೋಸ್ಟ್ ತಪಾಸಣೆ ವೇಳೆ 15 ಲಕ್ಷ ರೂ. ಹಣ (Money) ಸಿಕ್ಕಿದೆ. ಹಾವೇರಿ ಜಿಲ್ಲೆ ಹುಲಗೂರನಿಂದ ಗದಗ ಮಾರ್ಗವಾಗಿ ದೇವದುರ್ಗಕ್ಕೆ ಹೊರಟಿದ್ದ ಕಾರಿನಲ್ಲಿ ದಾಖಲೆ ಇಲ್ಲದೇ ತೆಗೆದುಕೊಂಡು ಹೊರಟಿದ್ದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

    ಮುಂಡರಗಿ ಚೆಕ್‌ಪೋಸ್ಟ್‌ನಲ್ಲಿ ತಂಬಾಕು ಸೀಜ್ ಮಾಡಲಾಗಿದೆ. ಶಿವರಾಜ್ ನಾಗರಕಟ್ಟಿ ಎಂಬವರು ಬಿಲ್ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 1 ಲಕ್ಷ 84 ಸಾವಿರ ರೂ. ಮೌಲ್ಯದ ತಂಬಾಕು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನು ಗದಗದಿಂದ ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ರವಾನೆ ಮಾಡಲಾಗುತ್ತಿತ್ತು. ಇದನ್ನೂ ಓದಿ: ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚೆಕ್‌ಪೋಸ್ಟ್‌ನಲ್ಲಿ ಸಹ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 1 ಲಕ್ಷ 10 ಸಾವಿರ ರೂ. ಮೌಲ್ಯದ ತಂಬಾಕು ಜಪ್ತಿ ಮಾಡಲಾಗಿದೆ. ಇದು ರಾಣೆಬೆನ್ನೂರಿನಿಂದ ಶಿರಹಟ್ಟಿಗೆ ಶ್ಯಾಮ ನವಲೆ ಎಂಬವರು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಗದಗ ಎಸ್‌ಪಿ ಬಿಎಸ್ ನೇಮಗೌಡ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಗದಗ, ಮುಂಡರಗಿ ಹಾಗೂ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರತ್ಯೇಕ ಪ್ರಕರಣಗಳು ಕಂಡು ಬಂದಿವೆ. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

  • ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಅಧಿವೇಶನದಲ್ಲಿ ತಂಬಾಕು ತಿನ್ನೋದ್ರಲ್ಲಿ, ಗೇಮ್ ಆಡೋದ್ರಲ್ಲಿ ಶಾಸಕರು ಬ್ಯುಸಿ – ಬಿಜೆಪಿ ವಿರುದ್ಧ ಎಸ್‍ಪಿ ವ್ಯಂಗ್ಯ

    ಲಕ್ನೋ: ವಿಧಾನಸಭೆಯಲ್ಲಿ ಅಧಿವೇಶನ (Assembly) ನಡೆಯುತ್ತಿದ್ದಾಗ ಉತ್ತರ ಪ್ರದೇಶದ (UttarPradesh) ಬಿಜೆಪಿ ಶಾಸಕರು ತಂಬಾಕು (Tobacco) ಸೇವನೆ ಮತ್ತು ಗೇಮ್ (Game) ಆಡಿದ್ದಾರೆ.

    ಈ ಇಬ್ಬರು ಶಾಸಕರ ವೀಡಿಯೋವನ್ನು ಸಮಾಜವಾದಿ ಪಕ್ಷ (Samajwadi Party) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶಾಸಕರ ಅಶಿಸ್ತನ್ನು ಖಂಡಿಸಿದೆ. ಮಹೋಬಾದ (Mahoba) ಬಿಜೆಪಿ ಶಾಸಕ ರಾಕೇಶ್‌ ಗೋಸ್ವಾಮಿ (Rakesh Goswami) ಮೂರು ಎಲೆಗಳಿರುವ ಇಸ್ಪೀಟ್ ಗೇಮ್ ಆಡಿದ್ದರೆ, ಝಾನ್ಸಿ (Jhansi) ಶಾಸಕ ರವಿಕುಮಾರ್ ಶರ್ಮಾ (Ravi Sharmar Sharma) ಅವರ ಟೇಬಲ್ ಕೆಳಗೆ ಮುಚ್ಚಿಟ್ಟುಕೊಂಡು ತಂಬಾಕು ತಿಂದಿದ್ದಾರೆ. ಶಾಸಕರ ವರ್ತನೆಯಿಂದ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದೆ. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಎಲ್‍ಜಿ ವಾರ್ – ಮನೀಷ್ ಸಿಸೋಡಿಯಾ ವಿರುದ್ಧ ತನಿಖೆಗೆ ಸೂಚನೆ

    ಗುರುವಾರದ ಸದನದಲ್ಲಿ ಮಹಿಳೆಯರ ವಿಶೇಷ ದಿನವಾಗಿ ಆಚರಿಸಲಾಗಿತ್ತು. ಈ ವಿಶೇಷ ದಿನದಂದೇ ಬಿಜೆಪಿ ಶಾಸಕರು ಅಶಿಸ್ತು ತೋರಿಸಿದ್ದಾರೆ. ಇದನ್ನೂ ಓದಿ:  ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಪುರಸಭೆ

    Live Tv
    [brid partner=56869869 player=32851 video=960834 autoplay=true]

  • ರಸ್ತೆ ಬದಿಯಲ್ಲಿ ಮೂಟೆಗಟ್ಟಲೇ ಗುಟ್ಕಾ, ತಂಬಾಕು ಪ್ಯಾಕೆಟ್‍ ಪತ್ತೆ

    ರಸ್ತೆ ಬದಿಯಲ್ಲಿ ಮೂಟೆಗಟ್ಟಲೇ ಗುಟ್ಕಾ, ತಂಬಾಕು ಪ್ಯಾಕೆಟ್‍ ಪತ್ತೆ

    ಚಿಕ್ಕಬಳ್ಳಾಪುರ: ಅನುಮಾನಸ್ಪದವಾಗಿ ಸಾವಿರಾರು ರೂಪಾಯಿ ಮಾಲ್ಯದ ತಂಬಾಕು ಪ್ಯಾಕೆಟ್‍ಗಳನ್ನು ರಸ್ತೆ ಬದಿಯಲ್ಲಿನ ಹಳ್ಳಕ್ಕೆ ಎಸೆದು, ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಬಳಿ ಕಂಡುಬಂದಿದೆ.

    ಕೊಡಿಗೇಹಳ್ಳಿ ಸಮೀಪದ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿನ ಗುಂಡಿಯಲ್ಲಿ, ಸುಮಾರು ಮೂರು ದೊಡ್ಡ ದೊಡ್ಡ ಚೀಲಗಳಲ್ಲಿ ತುಂಬಿದ ವಿವಿಧ ಕಂಪನಿಗಳ ಸಾವಿರಾರು ಮೌಲ್ಯದ ತಂಬಾಕು ಪ್ಯಾಕೆಟ್‍ಗಳನ್ನು ಎಸೆದು ಬೆಂಕಿ ಹಚ್ಚಲಾಗಿದೆ. ಆದರೆ ಬೆಂಕಿ ಪೂರ್ಣ ಪ್ರಮಾಣದಲ್ಲಿ ಹರಡದೆ ಪ್ಯಾಕೆಟ್‍ಗಳು ಅರ್ಧಂಬರ್ಧ ಸುಟ್ಟು ಹೋಗಿವೆ. ಇದನ್ನೂ ಓದಿ: ರಾಖಿ ಕಟ್ಟಲು ಹೋಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

    ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿಯೇ ಖಾಸಗಿ ವಿದ್ಯಾಸಂಸ್ಥೆಯೊಂದಿದ್ದು, ಇಷ್ಟು ದೊಡ್ಡ ಮಟ್ಟದ ತಂಬಾಕು ಪ್ಯಾಕೆಟ್‍ಗಳನ್ನು ರಸ್ತೆ ಬದಿ ಎಸೆದು, ಬೆಂಕಿ ಹಚ್ಚಲು ಕಾರಣವೇನು ಎಂಬ ಅನುಮಾನ ಸ್ಥಳೀಯರನ್ನು ಕಾಡುತ್ತಿದೆ. ಇದನ್ನೂ ಓದಿ: ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ವಿಮಾನದಲ್ಲಿ ಗುಟ್ಕಾ ಕಲೆ – ಸೂಪರ್‌ಸ್ಟಾರ್‌ಗಳ ಕಾಲೆಳೆದ ನೆಟ್ಟಿಗರು

    ವಿಮಾನದಲ್ಲಿ ಗುಟ್ಕಾ ಕಲೆ – ಸೂಪರ್‌ಸ್ಟಾರ್‌ಗಳ ಕಾಲೆಳೆದ ನೆಟ್ಟಿಗರು

    ನವದೆಹಲಿ: ಕೇಂದ್ರ ಸರ್ಕಾರವು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತದೆ. ಆದರೆ ಈ ಮಧ್ಯೆ ಭಾರತದಲ್ಲಿ ಅನೇಕ ಮಂದಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.

    ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹಲವಾರು ಪ್ರಸಿದ್ಧ ಸ್ಮಾರಕಗಳ ಸುತ್ತಮುತ್ತ ಗುಟ್ಕಾ ಮತ್ತು ವೀಳ್ಯದೆಲೆ ಕಲೆಗಳನ್ನು ನೀವು ಬಹುಶಃ ನೋಡಿರಬಹುದು. ಆದರೆ ಈಗ ವಿಮಾನದಲ್ಲಿ ಉಗುಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಛತ್ತೀಸ್‍ಗಢ ಕೇಡರ್‌ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು, ತಮ್ಮ ಟ್ವಿಟ್ಟರ್‌ನಲ್ಲಿ ವಿಮಾನದ ಕಿಟಕಿಯ ಕೆಳಗೆ ಗುಟ್ಕಾವನ್ನು ಉಗುಳಿರುವ ಕಲೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಯಾರೋ ತಮ್ಮ ಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ವೈರಲ್ ಆಗುತ್ತಿರುವ ಈ ಫೋಟೋ ಹಿಂದಿರುವ ವ್ಯಕ್ತಿ ಯಾರು ಎಂಬ ಕುತೂಹಲ ಮೂಡಿದೆ. ಈ ಪೋಸ್ಟ್‌ಗೆ 16,000 ಕ್ಕೂ ಹೆಚ್ಚು ಲೈಕ್‍ಗಳು ಬಂದಿದ್ದು, ಕೆಲವು ಟ್ವಿಟ್ಟರ್ ಬಳಕೆದಾರರು ಸೂಪರ್‌ಸ್ಟಾರ್‌ಗಳ ತಂಬಾಕು ಸೇವನೆಯ ಜಾಹೀರಾತುಗಳನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಅಧ್ಯಯನಗಳು ತಿಳಿಸಿದೆ. ಹಲವಾರು ಕಂಪನಿಗಳು ತಂಬಾಕು ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ಯಾಕ್‌ ಮೇಲೆ ನಮೂದಿಸಿರುತ್ತದೆ. ಜೊತೆಗೆ  ಚಲನಚಿತ್ರಗಳು ಪ್ರಾರಂಭವಾಗುವ ಮುನ್ನ ಚಿತ್ರಮಂದಿರಗಳಲ್ಲಿ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು  ಪ್ರಸಾರ ಮಾಡುವ ಮೂಲಕ ಸಂದೇಶ ಸಾರಲಾಗುತ್ತದೆ.