Tag: Toby

  • ಸ್ವಿಮ್ ಸೂಟ್ ಧರಿಸಿ ಹಾಟ್ ಅವತಾರ ತಾಳಿದ ಚೈತ್ರಾ ಆಚಾರ್

    ಸ್ವಿಮ್ ಸೂಟ್ ಧರಿಸಿ ಹಾಟ್ ಅವತಾರ ತಾಳಿದ ಚೈತ್ರಾ ಆಚಾರ್

    ನ್ನಡದ ‘ಟೋಬಿ’ (Toby) ನಟಿ ಚೈತ್ರಾ ಆಚಾರ್‌ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಮಸ್ತ್ ಫೋಟೋಶೂಟ್‌ವೊಂದನ್ನು ನಟಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಯಾರು ಏನೇ ಹೇಳಿದ್ರೂ ಅಮ್ಮನೇ ನನ್ನ ಹೀರೋ: ಮಧ್ಯರಾತ್ರಿ ಅಮ್ಮನ ನೆನೆದ ಪವಿತ್ರಾ ಗೌಡ ಮಗಳು

    ಕಪ್ಪು ಬಣ್ಣದ ಸ್ವಿಮ್ ಸೂಟ್ ಧರಿಸಿ ನಟಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಕೊಳದಲ್ಲಿ ಇಳಿದು ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಫೋಟೋ ಪೋಸ್ಟ್ ಮಾಡಿ ಹಲವು ಗಂಟೆ ಕಳೆದರೂ ಒಂದೇ ಒಂದು ಕಾಮೆಂಟ್ ಕೂಡ ಬಂದಿಲ್ಲ.

     

    View this post on Instagram

     

    A post shared by Chaithra J Achar (@chaithra.j.achar)


    ಇನ್ನೂ ಇತ್ತೀಚೆಗೆ ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಕ್ಸ್ ಮಿ ಸೆಷನ್ ಮಾಡಿದ್ದರು. ಈ ವೇಳೆ ಅಭಿಮಾನಿಯೊಬ್ಬ, ನೀವು ಸಿನಿಮಾ ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಕೇಳಿದ್ದರು. ಅದಕ್ಕೆ ನಟಿ ತಕ್ಕ ಉತ್ತರವನ್ನೇ ನೀಡಿದ್ದರು. ಅವಕಾಶಕ್ಕಾಗಿ ಎಂದು ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಖಡಕ್ ಆಗಿ ಹೇಳಿದ್ದರು.

    ಬಳಿಕ ಮತ್ತೊಬ್ಬರು, ನಿಮ್ಮ ಕನ್ಯತ್ವ ಹೇಗೆ ಕಳೆದುಕೊಂಡ್ರಿ? ಮತ್ತು ಆ ಅನುಭವ ಹೇಗಿತ್ತು ಎಂದು ಕೇಳಿದ್ದರು. ಅದಕ್ಕೆ ನಟಿ, ನಿಮ್ಮ ಮನೆಯಲ್ಲಿ ನಿಮ್ಮ ತಾಯಿ, ತಂಗಿ ಇದ್ದಾರೆ ಅಲ್ಲವೇ? ಅವರನ್ನೇ ಕೇಳಿ. ಇದರ ಪ್ರೋಸೆಸ್ ಹೇಗಿತ್ತು? ಎಂದು ಕೇಳಿ ಜೊತೆಗೆ ಡೆಮೋ ತೋರಿಸಲು ಹೇಳಿ ಅಣ್ಣ. ಅದನ್ನು ನೀವು ಹತ್ತಿರದಿಂದ ನೋಡಬಹುದು ಎಂದು ತಕ್ಕ ಉತ್ತರ ನೀಡಿದ್ದರು ಚೈತ್ರಾ.

    ಅಂದಹಾಗೆ, ಕನ್ನಡದ ಜೊತೆ ತಮಿಳಿನ ನಟ ಸಿದ್ಧಾರ್ಥ್‌ಗೆ (Siddarth) ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಮತ್ತು ‘ಟೋಬಿ’ ಚಿತ್ರದಲ್ಲಿನ ಚೈತ್ರಾ ನಟನೆಗೆ ಅಭಿಮಾನಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ.

  • ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು

    ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು

    ನ್ನಡದ ‘ಟೋಬಿ’ ಬ್ಯೂಟಿ ಚೈತ್ರಾ ಆಚಾರ್‌ಗೆ (Chaithra Achar) ಕನ್ನಡ ಮತ್ತು ತಮಿಳು ಚಿತ್ರರಂಗದಿಂದ ಅವಕಾಶಗಳು ಅರಸಿ ಬರುತ್ತಿವೆ. ಎರಡು ಕಡೆ ನಟಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.

    ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಕ್ಸ್ ಮಿ ಸೆಷನ್ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ, ನೀವು ಸಿನಿಮಾ ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ನಟಿ ತಕ್ಕ ಉತ್ತರವನ್ನೇ ನೀಡಿದ್ದಾರೆ. ಅವಕಾಶಕ್ಕಾಗಿ ಎಂದು ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಎಂದಿದ್ದಾರೆ.

    ಬಳಿಕ ಮತ್ತೊಬ್ಬರು, ನಿಮ್ಮ ಕನ್ಯತ್ವ ಹೇಗೆ ಕಳೆದುಕೊಂಡ್ರಿ? ಮತ್ತು ಆ ಅನುಭವ ಹೇಗಿತ್ತು ಎಂದಿದ್ದಾರೆ. ಅದಕ್ಕೆ ನಟಿ, ನಿಮ್ಮ ಮನೆಯಲ್ಲಿ ನಿಮ್ಮ ತಾಯಿ, ತಂಗಿ ಇದ್ದಾರೆ ಅಲ್ಲವೇ? ಅವರನ್ನೇ ಕೇಳಿ. ಇದರ ಪ್ರೋಸೆಸ್ ಹೇಗಿತ್ತು? ಎಂದು ಕೇಳಿ ಜೊತೆಗೆ ಡೆಮೋ ತೋರಿಸಲು ಹೇಳಿ ಅಣ್ಣ. ಅದನ್ನು ನೀವು ಹತ್ತಿರದಿಂದ ನೋಡಬಹುದು ಎಂದು ತಕ್ಕ ಉತ್ತರ ಕೊಟ್ಟಿದ್ದಾರೆ ಚೈತ್ರಾ. ನಟಿಯ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಅಂದಹಾಗೆ, ಕನ್ನಡದ ಜೊತೆ ತಮಿಳಿನ ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಮತ್ತು ‘ಟೋಬಿ’ ಚಿತ್ರದಲ್ಲಿನ ಚೈತ್ರಾ ನಟನೆಗೆ ಅಭಿಮಾನಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ.

  • ಕಿಶನ್, ಚೈತ್ರಾ ಆಚಾರ್ ಶೃಂಗಾರ ದೃಶ್ಯ ಕಾವ್ಯ

    ಕಿಶನ್, ಚೈತ್ರಾ ಆಚಾರ್ ಶೃಂಗಾರ ದೃಶ್ಯ ಕಾವ್ಯ

    ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಮೋಡಿ ಮಾಡುತ್ತಲೇ ಇರುತ್ತಾರೆ. ಇದೀಗ ಚೈತ್ರಾ ಆಚಾರ್, ಅಂತಃಪುರದ ರಾಣಿಯಾಗಿ ಕಂಗೊಳಿಸಿದಲ್ಲದೇ ಹೀರೋ ಕಿಶನ್ ಬಿಳಗಲಿ (Kishen Bilagali) ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇಬ್ಬರ ಡ್ಯುಯೇಟ್‌ ಸಾಂಗ್‌ ವೈರಲ್‌ ಆಗಿದೆ.

    ಟೋಬಿ ನಟಿ ಆಗಾಗ ಹೊಸ ಪರಿಕಲ್ಪನೆಯ ಫೋಟೋಶೂಟ್ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಾರೆ. ಮತ್ತೆ ಗಾಯಕಿಯಾಗಿಯೂ ಗುರುತಿಸಿಕೊಂಡಿರುವ ಚೈತ್ರಾ, ಇದೀಗ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಚೈತ್ರಾ ಬ್ಯೂಟಿಗೆ ಮತ್ತು ಡ್ಯಾನ್ಸ್‌ಗೆ ಡ್ಯಾನ್ಸರ್ ಕಿಶನ್ ಪಾಗಲ್ ಆಗಿದ್ದಾರೆ.‌ ಇದನ್ನೂ ಓದಿ:ಮೃಣಾಲ್ ಬ್ಯೂಟಿ ಬಗ್ಗೆ ಬಣ್ಣಿಸಿದ ವಿಜಯ್ ದೇವರಕೊಂಡ

    ರಣ್‌ಬೀರ್ ಕಪೂರ್ (Ranbir Kapoor), ತೃಪ್ತಿ ದಿಮ್ರಿ (Tripti Dimri) ನಟನೆಯ ‘ಅನಿಮಲ್’ (Animal) ಚಿತ್ರದ ಹಾಡಿಗೆ ರೊಮ್ಯಾಂಟಿಕ್ ಇಬ್ಬರೂ ಡ್ಯಾನ್ಸ್ ಮಾಡಿದ್ದಾರೆ. ಶೃಂಗಾರದ ಹಲವು ಸ್ಟೇಪ್ಸ್ ಹಾಕುವ ಮೂಲಕ ಈ ಜೋಡಿ ನೋಡುಗರ ಗಮನ ಸೆಳೆದಿದೆ. ಬಿಳಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಕರ್ಷಕವಾಗಿ ಹೆಜ್ಜೆ ಹಾಕುವ ಮೂಲಕ ಕಿಶನ್ ಮತ್ತು ಚೈತ್ರಾ ಸೈ ಎನಿಸಿಕೊಂಡಿದ್ದಾರೆ.

    ಈ ವಿಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಪಡೆದುಕೊಂಡಿದೆ. ಇಬ್ಬರ ಜೋಡಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ರಿಯಲ್ ಹಾಡನ್ನೇ ಮೀರಿಸುವಂತಿದೆ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ.

    ನಟಿ ಚೈತ್ರಾ ಆಚಾರ್ ಇತ್ತೀಚೆಗೆ ನಟಿಸಿದ ‘ಟೋಬಿ’ (Toby Film) ಸಿನಿಮಾ ಮತ್ತು ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಎಲ್ಲರ ಗಮನ ಸೆಳೆದಿತ್ತು. ಕನ್ನಡದ ಹಲವು ಸಿನಿಮಾಗಳಲ್ಲಿ ರಕ್ಷಿತ್ ಶೆಟ್ಟಿ ನಾಯಕಿ ಬ್ಯುಸಿಯಾಗಿದ್ದಾರೆ.

  • ‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ

    ‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ

    ಸ್ಯಾಂಡಲ್‌ವುಡ್ ಬ್ಯೂಟಿ ಚೈತ್ರಾ ಆಚಾರ್ (Chaithra Achar) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸಂಚಲನ ಮೂಡಿಸುತ್ತಲೇ ಇರುತ್ತಾರೆ. ಇದೀಗ ‘ಟೋಬಿ’ (Toby) ಹುಡುಗಿಯ ನ್ಯೂ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.

    ಕಪ್ಪು ಬಣ್ಣದ ಶಾರ್ಟ್ ಟಾಪ್ ಮತ್ತು ನೀಲಿ ಬಣ್ಣದ ಜೀನ್ಸ್ ತೊಟ್ಟು ನಟಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ನಯಾ ಲುಕ್ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಚೈತ್ರಾ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಬಗೆ ಬಗೆಯ ಕಾಮೆಂಟ್ ಹಾಕುತ್ತಿದ್ದಾರೆ.

    ಇತ್ತೀಚೆಗೆ ಫೋಟೋಶೂಟ್‌ವೊಂದಕ್ಕೆ ನೆಗೆಟಿವ್ ಕಾಮೆಂಟ್ ಮತ್ತು ಟ್ರೋಲ್ (Troll) ಆಗಿತ್ತು. ಅದಕ್ಕೆ ಖಡಕ್ ಆಗಿ ಚೈತ್ರಾ ರಿಯಾಕ್ಟ್ ಮಾಡಿದ್ದರು. ದೇವರ ಹಾಡು ಹಾಡ್ತಾರೆ ಆದರೆ ಹಾಕುವ ಬಟ್ಟೆ ಈ ತರಹ ಎಂದು ಕಾಮೆಂಟ್ ಮಾಡುವವರಿಗೆ ನಟಿ ತಕ್ಕ ಉತ್ತರ ನೀಡಿದ್ದರು.

    ಬೇರೇ ಮನೆ ಹೆಣ್ಣು ಮಗಳ ಮರ್ಯಾದೆ ತೆಗೆಯಬೇಕು ಎಂದು ಪಣ ತೊಟ್ಟವರಿಗೆ ಏನು ಹೇಳೋದು ಅಂತಾ ನಟಿ ಗರಂ ಆಗಿದ್ದರು. ನನಗೆ ಯಾವ ವಿಚಾರ ತಪ್ಪು ಅಥವಾ ಸರಿ. ಎಲ್ಲಿ ಯಾವ ತರಹ ಇರಬೇಕು ಅನ್ನೋದು ಚೆನ್ನಾಗಿ ಗೊತ್ತು. ನಾನು ಬೆಳೆದು ಹಾದಿಯಲ್ಲಿ ನನ್ನ ಪೋಷಕರು ಮತ್ತು ಶಿಕ್ಷಕರು ನನಗೆ ಕಲಿಸಿ ಕೊಟ್ಟಿದ್ದಾರೆ ಎಂದು ನಟಿ ಪ್ರತಿಯುತ್ತರ ನೀಡಿದ್ದರು. ಇದನ್ನೂ ಓದಿ:ಇದುವರೆಗೂ ನಮ್ರತಾ ಕುಟುಂಬವನ್ನು ಕಾಂಟ್ಯಾಕ್ಟ್ ಮಾಡದ ಸ್ನೇಹಿತ್- ಅಸಲಿ ಕಾರಣವೇನು?

    ನನ್ನ ಸಿನಿಮಾಗಳ ಮೂಲಕ ಜನಕ್ಕೆ ರೀಚ್ ಆಗುತ್ತೀದ್ದಿನಿ. ನಾನು ಏನೋ ಕೆಲಸ ಮಾಡಿದಾಗ ಒಳ್ಳೆತನದಿಂದ ಹಾರೈಸೋದು ತುಂಬಾ ಕಮ್ಮಿ. ಅವರನ್ನ ಕೆಳಗೆ ಇಳಿಸುವಂತಹ ಮನಸ್ಥಿತಿ ಇರೋರು. ಯಾವುದೇ ರೀತಿಯ ಪೋಸ್ಟ್ ಇದ್ದರು ಕೆಟ್ಟ ಕಾಮೆಂಟ್‌ಗಳನ್ನೇ ಮಾಡುತ್ತಾರೆ ಅಂತಹವರಿಗೆ ಏನು ಹೇಳೋದು ಎಂದು ಅಸಮಾಧಾನ ಹೊರಹಾಕಿದ್ದರು.

    2023ರಲ್ಲಿ ‘ಟೋಬಿ’ (Toby) ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಪಾರ್ಟ್ 2 ಈ ಚಿತ್ರಗಳು ಚೈತ್ರಾ ಆಚಾರ್ (Chaithra Achar) ಕೆರಿಯರ್‌ಗೆ ಬಿಗ್ ಬ್ರೇಕ್ ನೀಡಿದೆ. ಇದೀಗ ದೀಕ್ಷಿತ್ ಶೆಟ್ಟಿ ಜೊತೆಗಿನ ‘ಬ್ಲಿಂಕ್’ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳು ಚೈತ್ರಾ ಕೈಯಲ್ಲಿದೆ.

  • ಒಟಿಟಿಗೂ ಬಂದ ರಾಜ್ ಬಿ ಶೆಟ್ಟಿ ಅವರ ಟೋಬಿ

    ಒಟಿಟಿಗೂ ಬಂದ ರಾಜ್ ಬಿ ಶೆಟ್ಟಿ ಅವರ ಟೋಬಿ

    ವರ್ಷ ತೆರೆಕಂಡ ಅನೇಕ ಸಿನಿಮಾಗಳಲ್ಲಿ ಪ್ರೇಕ್ಷಕರಿಂದ  ಅಪಾರ ಪ್ರಶಂಸೆಗೆ, ಚರ್ಚೆಗೆ ಒಳಗಾದ ಚಿತ್ರ ಟೋಬಿ (Toby) . ರಾಜ್ ಬಿ ಶೆಟ್ಟಿ ((Raj B Shetty)) ಬರೆದು, ನಟಿಸಿದ ದೊಡ್ಡ ವೆಚ್ಚದ ಚಿತ್ರ ಟೋಬಿ ಭಾಷೆಯ ಎಲ್ಲೆಯನ್ನೂ ಮೀರಿ ದೇಶದಾದ್ಯಂತ ಮೆಚ್ಚುಗೆಯನ್ನು ಪಡೆದಿತ್ತು.

    ಥಿಯೇಟರ್ ನಲ್ಲಿ ಗೆದ್ದ ಟೋಬಿಯನ್ನು ಒಟಿಟಿಯಲ್ಲಿ ನೋಡಲು ಕಾಯುತ್ತಿದ್ದ ಸಿನಿ ರಸಿಕರಿಗೆ ಹೊಸ ಮಾಹಿತಿಯೊಂದು ಬಂದಿದೆ, ಹೌದು ಟೋಬಿ ಚಿತ್ರ ಇದೇ ಡಿಸೆಂಬರ್ 22 ಕ್ಕೆ ಪ್ರಖ್ಯಾತ ಸೋನಿ ಲಿವ್ ಒಟಿಟಿ ಆ್ಯಪ್ ನಲ್ಲಿ ಬಿಡುಗಡೆಗೊಳ್ಳಲಿದೆ. ಒಟಿಟಿಯಲ್ಲಿ  ನೋಡಬೇಕು ಎಂದು ಕಾದವರಿಗೆ ಅವಕಾಶ ಸಿಕ್ಕಿದೆ.

    ಪುನೀತ್ ರಾಜ್ ಕುಮಾರ್ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ನ ನಂತರ ಸೋನಿ ಸಂಸ್ಥೆ ಯಲ್ಲಿ ಬಿಡುಗಡೆಗೊಳ್ಳಲಿರುವ ಎರಡನೇ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯೂ ಟೋಬಿಗೆ ಸಿಕ್ಕಿದೆ. ಜೇಮ್ಸ್ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಈ ಸಿನಿಮಾಗೂ ಸಿಗಲಿದೆ ಎನ್ನುವ ವಿಶ್ವಾಸ ಸಂಸ‍್ಥೆಯದ್ದು.

    ರಾಜ್ ಬಿ ಶೆಟ್ಟಿ ಬರೆದು ನಟಿಸಿರುವ ಚಿತ್ರಕ್ಕೆ ಬಾಸಿಲ್ ಅಲ್ಚಾಲಕ್ಕಲ್ ನಿರ್ದೇಶನವಿದ್ದು,  ಪ್ರವೀಣ್ ಶ್ರೀಯಾನ್ ಛಾಯಗ್ರಹಣ ಮತ್ತು ಮಿಥುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್, ಅಗಸ್ತ್ಯ ಫಿಲ್ಮ್ಸ್, ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಜಂಟಿಯಾಗಿ ನಿರ್ಮಿಸಿದ್ದಾರೆ. ರಾಜ್ ಬಿ ಶೆಟ್ಟಿ ಯ ಜೊತೆಗೆ ಚೈತ್ರ ಜೆ ಆಚಾರ್, ಸಂಯುಕ್ತ ಹೊರನಾಡು, ಗೋಪಾಲಕೃಷ್ಣ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ, ಭರತ್ ಜಿ.ಬಿ ಮತ್ತಿತರ ತಾರಗಣವಿದೆ.

  • ‘ಟೋಬಿ’ ಚಿತ್ರಕ್ಕೆ ಸಾಥ್ ನೀಡಿದ ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್

    ‘ಟೋಬಿ’ ಚಿತ್ರಕ್ಕೆ ಸಾಥ್ ನೀಡಿದ ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್

    ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಅವರ ಟೋಬಿ (Toby) ಸಿನಿಮಾ ನಾಳೆಯಿಂದ ಕೇರಳದಾದ್ಯಂತ ಮಲಯಾಳಂನಲ್ಲಿ (Malayalam) ಬಿಡುಗಡೆ ಆಗುತ್ತಿದೆ. ಈ ಚಿತ್ರದ ವಿತರಣೆಯನ್ನು ಮಲಯಾಳಂನ ಖ್ಯಾತ ಸ್ಟಾರ್ ನಟ ದುಲ್ಕರ್ ಸಲ್ಮಾನ್ (Dulquer Salmaan) ಮಾಡುತ್ತಿದ್ದಾರೆ. ಮಾಲಿವುಡ್ ನಲ್ಲಿ ಬಿಡುಗಡೆ ಆಗುತ್ತಿರುವ ಈ ಸಿನಿಮಾದ ಸಂಪೂರ್ಣ ಜವಾಬ್ದಾರಿಯನ್ನು ದುಲ್ಕರ್ ಅವರ ಪ್ರೊಡಕ್ಷನ್ ಹೌಸ್ ನಿರ್ವಹಿಸುತ್ತಿದೆ.

    ಕನ್ನಡದಲ್ಲಿ ಟೋಬಿ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಜ್ ಬಿ ಶೆಟ್ಟಿ ನಟನೆಯ ಬಗ್ಗೆ ಪ್ರೇಕ್ಷಕರು ಒಪ್ಪಿಕೊಂಡಿದ್ದರೂ, ಒಟ್ಟಾರೆಯಾಗಿ ಸಿನಿಮಾವನ್ನು ನಿರೀಕ್ಷೆಯ ಮಟ್ಟಕ್ಕೆ ಒಪ್ಪಿಕೊಂಡಿರಲಿಲ್ಲ. ಮಲಯಾಳಂ ಸಿನಿ ಪ್ರೇಕ್ಷಕರು ಈ ಸಿನಿಮಾವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಇದನ್ನೂ ಓದಿ:ವೈಟ್‌ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ

    ರಾಜ್ ಬಿ ಶೆಟ್ಟಿ ಅವರ ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಮಲಯಾಳಂನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೇ, ರಾಜ್ ಬಿ ಶೆಟ್ಟಿ ಅವರು ಮಲಯಾಳಂ ಚಿತ್ರೋದ್ಯಮದಲ್ಲೂ ಹಲವಾರು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರದ್ದೇ ಆದ ಅಭಿಮಾನಿ ವರ್ಗ ಕೂಡ ಅಲ್ಲಿದೆ. ಹೀಗಾಗಿ ಟೋಬಿ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

    ಕನ್ನಡದಲ್ಲಿ ಆಗಸ್ಟ್ 25ರಂದು ನೈಜ ಕಥೆಯನ್ನ ಆಧರಿಸಿದ ‘ಟೋಬಿ’ ಸಿನಿಮಾ ತೆರೆ ಕಂಡಿತ್ತು. ರಾಜ್ ಬಿ ಶೆಟ್ಟಿ (Raj B Shetty) ನಟನೆಗೆ ಕರ್ನಾಟಕ ಜನತೆ ಮಾರು ಹೋಗಿತ್ತು. ರಾಜ್- ಚೈತ್ರಾ ಆಚಾರ್ ಕಾಂಬೋ ಮೋಡಿ ಮಾಡಿತ್ತು. ಈಗ ಮಲಯಾಳಂ ಭಾಷೆಯಲ್ಲೂ ಕೂಡ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಥಿಯೇಟರ್ ಮುಂದೆ ಯುವತಿಗೆ ನಿಂದನೆ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

    ಥಿಯೇಟರ್ ಮುಂದೆ ಯುವತಿಗೆ ನಿಂದನೆ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

    ಟೋಬಿ (Toby) ಸಿನಿಮಾ ಚೆನ್ನಾಗಿಲ್ಲ ಎಂದು ಯುವತಿಯೊಬ್ಬಳು ಥಿಯೇಟರ್ (Theatre) ಮುಂದೆ ಹೇಳಿದ ಕಾರಣಕ್ಕಾಗಿ ಯುವಕನೊಬ್ಬ ಆ ಹುಡುಗಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಆ ಹುಡುಗಿ ತನ್ನ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಕ್ಕಾಗಿ ಥಿಯೇಟರ್ ನಿಂದ ಆಚೆ ಹೊರಡು ಎಂದು ಬೆದರಿಸಿದ್ದ, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಈ ನಡೆಗೆ ಆಕ್ರೋಶ ಕೂಡ ವ್ಯಕ್ತವಾಗಿತ್ತು.

    ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಚಿತ್ರದ ಕಥೆ ಬರೆದ ಟಿ.ಕೆ. ದಯಾನಂದ್ ಕ್ಷಮೆ ಯಾಚಿಸಿದ್ದರು. ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ದಯಾನಂದ್, ಆ ಹುಡುಗ ತಮ್ಮ ತಂಡದವನು ಅಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದರು. ಆದರೂ ತಂಡದ ಪರವಾಗಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು. ಇದೀಗ ರಾಜ್ ಬಿ ಶೆಟ್ಟಿ (Raj B Shetty) ಕೂಡ ಕ್ಷಮೆ ಕೇಳಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ:Breaking- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ಅತ್ಯುತ್ತಮ ನಟ ಅಲ್ಲು ಅರ್ಜುನ್, ನಟಿ ಆಲಿಯಾ ಭಟ್ ಮತ್ತು ಕೀರ್ತಿ ಸನನ್

    ಸಿನಿಮಾ ಕೂಡ ವಿಮರ್ಶೆ ಮಾಡುವ ಮಾಧ್ಯಮ. ಸಾವಿರಾರು ಕೋಟಿ ರೂಪಾಯಿ ಗಳಿಸಿದ ಸಿನಿಮಾಗಳು ಕೂಡ ಕೆಲವರಿಗೆ ಇಷ್ಟವಾಗಿರುವುದಿಲ್ಲ. ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುವ ಹಕ್ಕು ಇದೆ. ಯಾರನ್ನೂ ನಿಂದಿಸಬಾರದು. ಆ ಯುವತಿಗೆ ಬೈದ ಹುಡುಗ ನಮ್ಮ ತಂಡದವನು ಅಲ್ಲ. ಆದರೂ, ನಾನು ಮನಸಾರೆ ಆ ಹುಡುಗಿಗೆ ಕ್ಷಮೆ ಕೇಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

     

    ಟೋಬಿ ರಾಜ್ಯಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಹಲವರು ಹಲವು ರೀತಿಯಲ್ಲಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ಇಂಥದ್ದೊಂದು ಘಟನೆ ನಡೆದು, ಚಿತ್ರತಂಡವನ್ನು ಮುಜುಗರಕ್ಕೀಡು ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೋಬಿ ನನ್ನ ಬಿಗ್ ಬಜೆಟ್ ಸಿನಿಮಾ : ರಾಜ್ ಬಿ ಶೆಟ್ಟಿ

    ಟೋಬಿ ನನ್ನ ಬಿಗ್ ಬಜೆಟ್ ಸಿನಿಮಾ : ರಾಜ್ ಬಿ ಶೆಟ್ಟಿ

    ಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಟೋಬಿ’ (Toby) ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ರಾಜ್ ಬಿ ಶೆಟ್ಟಿ  (Raj B Shetty) ಫಸ್ಟ್ ಲುಕ್ (First Look) ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಕುರುಚಲು ಗಡ್ಡ,  ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ಹಲವು ವಿಶೇಷತೆಗಳುಳ್ಳ ಈ ವಿಭಿನ್ನ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಟೀಸರ್, ಟ್ರೇಲರ್ ಸದ್ಯದಲ್ಲೇ ಬರಲಿದೆ.

    ಬರಹಗಾರ ಟಿ.ಕೆ.ದಯಾನಂದ್  ‘ಟೋಬಿ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ನಾನು ಕಾರವಾರದಲ್ಲಿ ಕಂಡ ಒಬ್ಬ ವಿಲಕ್ಷಣ ವ್ಯಕ್ತಿತ್ವದ ವ್ಯಕ್ತಿಯ ಕಥೆಯಿದು. ನೀವೊಬ್ಬರನ್ನು ನೋಡಿದಾಗ ಇವರು ಇಂತಹವರು ಅಂತ ಹೇಳಬಹುದು. ಆದರೆ ಈ ವ್ಯಕ್ತಿಯನ್ನು ಆ ರೀತಿ ಹೇಳಲಾಗದು. ನಾನು ಆತನ ಕುರಿತು ಕಥೆ ಬರೆದಿದ್ದೇನೆ. ಅದು ಈಗ ಟೋಬಿ ಚಿತ್ರವಾಗಿದೆ ಎಂದು ಟಿ.ಕೆ.ದಯಾನಂದ್ ತಿಳಿಸಿದರು. ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ಯಾಗಿ ಲವರ್‌ ಬಾಯ್‌ ಲುಕ್‌ನಲ್ಲಿ ಗೋಲ್ಡನ್‌ ಸ್ಟಾರ್‌ ಎಂಟ್ರಿ

    ಸಿನಿಮಾ ನೋಡಲು ಬಂದ ಪ್ರೇಕ್ಷಕನಿಗೆ ಮೊದಲು ಸಿನಿಮಾ ಇಷ್ಟ ಆಗಬೇಕು. ಅಂತಹ ಸಿನಿಮಾ ಮಾಡುವ ಆಸೆ ನನಗೆ. ಟೋಬಿ ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಎನ್ನಬಹುದು. ನೀವು ಫಸ್ಟ್ ಲುಕ್ ನಲ್ಲಿ ನೋಡುತ್ತಿರುವುದು ಚಿತ್ರದ ಒಂದು ಭಾಗವಷ್ಟೆ. ಇಡೀ ಚಿತ್ರ ಈ ರೀತಿ ಇರುವುದಿಲ್ಲ. ನನಗೆ ಈ ಚಿತ್ರದ ಕಥೆ ಹೊಸತು ಎನಿಸಿತು. ನನ್ನ ಪಾತ್ರ ಕೂಡ ಹಿಂದಿನ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ.  ನನಗೆ ಗೊತ್ತಿಲ್ಲದ ವಿಷಯವನ್ನು ಕಲಿತು ಈ ಚಿತ್ರದಲ್ಲಿ ಹೇಳಿದ್ದೇನೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ರಾಜ್ ಬಿ ಶೆಟ್ಟಿ.

    ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲಂಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    ನಿರ್ದೇಶಕ ಬಾಸಿಲ್, ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್,  ಚಿತ್ರದ ನಾಯಕಿಯರಾದ ಸಂಯುಕ್ತ ಹೊರನಾಡು (Samyukta Horanadu), ಚೈತ್ರಾ ಆಚಾರ್ (Chaitra Achar) ಚಿತ್ರದಲ್ಲಿ ನಟಿಸಿರುವ ಗೋಪಾಲಕೃಷ್ಣ ದೇಶಪಾಂಡೆ,  ರಾಜ್ ದೀಪಕ್ ಶೆಟ್ಟಿ, ಶ್ರೀಕಾಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ “ಟೋಬಿ” ಚಿತ್ರದ ಕುರಿತು ಮಾತನಾಡಿದರು‌.  ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ರಾಜ್ ಬಿ ಶೆಟ್ಟಿ ಅವರ ಈ ಹಂದಿನ ಚಿತ್ರಗಳಿಗಿಂತ ಟೋಬಿ ಬಿಗ್ ಬಜೆಟ್ ನ ಚಿತ್ರವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ನಿನ್ನೆಯಿಂದ ರಾಜ್ ಬಿ ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಟ್ರೆಂಡಿಂಗ್ ನಲ್ಲಿದೆ. ವಿಲಕ್ಷಣವಾದ ಪೋಸ್ಟರ್ ಇದಾಗಿದ್ದು, ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ಪೋಸ್ಟರ್ ಗೂ ಕಥೆಗೂ ಏನಾದರೂ ಸಂಬಂಧವಿದೆಯಾ ಎನ್ನುವ ಪ್ರಶ್ನೆಯೂ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ಈ ಸಿನಿಮಾದ ಕಥೆ, ಚಿತ್ರಕಥೆ ಬರೆದಿರುವುದು ಕಥೆಗಾರ ಟಿ.ಕೆ.ದಯಾನಂದ್ (TK Dayanand). ಅವರೇ ಸಿನಿಮಾದ ಕಥೆಯ ಗುಟ್ಟನ್ನೂ ರಟ್ಟು ಮಾಡಿದ್ದಾರೆ. ತಾವೇ ಸ್ವತಃ ನೋಡಿದ ಕಾರವಾರದ (Karwar) ವಿಲಕ್ಷಣ ವ್ಯಕ್ತಿಯ ಬದುಕನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ. ಆ ವ್ಯಕ್ತಿಯನ್ನು ನೋಡಿದಾಗಿಂದ, ನನ್ನಲ್ಲಿ ಆತ  ನಾನಾ ರೀತಿಯಲ್ಲಿ ಕಾಡಿದ. ಆ ಕಾಡಿದ ವ್ಯಕ್ತಿಯ ಕಥೆಯೇ ಟೋಬಿ ಸಿನಿಮಾ ಎಂದಿದ್ದಾರೆ ಟಿ.ಕೆ.ದಯಾನಂದ್.

    ನಿನ್ನೆ ‘ಟೋಬಿ’ (Toby) ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದ ಮೂಲಕ ರಾಜ್ ಧೂಳೆಬ್ಬಿಸಲು ರೆಡಿಯಾಗಿದ್ದಾರೆ. ಸದ್ಯ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಮೂಲಕ ರಾಜ್ ಬಿ ಶೆಟ್ಟಿ (Raj B Shetty) ಸಂಚಲನ ಮೂಡಿಸಿದ್ದಾರೆ. ಇದನ್ನೂ ಓದಿ:‘ಎಮರ್ಜೆನ್ಸಿ’ ನಂತರದ ಸಿನಿಮಾ ಸುಳಿವು ಕೊಟ್ಟ ಕಂಗನಾ ರಣಾವತ್

    ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ನಟ ಕಮ್ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ ಅವರು ಭಿನ್ನ ಕಥೆಗಳನ್ನ ಆಯ್ಕೆ ಮಾಡಿ, ಸಿನಿಮಾ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ರಾಜ್ ಬಿ ಶೆಟ್ಟಿ, ಅವರ ಮೇಲಿನ ಕ್ರೇಜ್ ಫ್ಯಾನ್ಸ್ಗೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ‘ಟೋಬಿ’ ಚಿತ್ರದ ಸುದ್ದಿನೂ ಅದಕ್ಕೆ ಸಾಕ್ಷಿ ಆಗಿದೆ. ಸೋಷಿಯಲ್ ಮೀಡಿಯಾದ ಯಾವುದೇ ಪೇಜ್ ತೆಗೆದ್ರು ಅಷ್ಟೇನೆ, ಅಲ್ಲಿ `ಟೋಬಿ’ ಚಿತ್ರದ ಕ್ರೇಜ್ ಕಂಡು ಬರುತ್ತಿದೆ. ಅಷ್ಟರ ಮಟ್ಟಿಗೆ ಸಿನಿಮಾ ರಿಲೀಸ್ ಮುನ್ನವೇ ಸಂಚಲನ ಸೃಷ್ಟಿಸಿದೆ.

    ಇತ್ತೀಚಿಗಷ್ಟೇ ಟೋಬಿ ಸಿನಿಮಾದ ಸಣ್ಣ ಝಲಕ್‌ವೊಂದು ರಿವೀಲ್ ಆಗಿತ್ತು. ಇದು ಸೋಷಿಯಲ್ ಮೀಡಿಯಾ ಶೇಕ್ ಮಾಡುವಷ್ಟು ಸಿನಿಪ್ರಿಯರ ಗಮನ ಸೆಳೆಯಿತು. ಈಗ ಟೋಬಿ ಚಿತ್ರದ ಫಸ್ಟ್ ರಿವೀಲ್ ಆಗಿದೆ. ಅದರಲ್ಲಿ ರಾಜ್ ಬಿ ಶೆಟ್ಟಿ ಅವರು ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಮೂಗಿಗೆ ರಿಂಗ್ ಧರಿಸಿದ್ದು, ಮುಖದ ಇಂಟು ಮಾರ್ಕ್ ಇದೆ. ಟೋಟಲಿ ರಾ ಲುಕ್‌ನಲ್ಲಿ ಶೆಟ್ರು ಶೈನ್ ಆಗಿದ್ದಾರೆ. ಫಸ್ಟ್‌ ಲುಕ್‌ ಟೀಸರ್‌ನಲ್ಲಿ ರಕ್ತ-ಸಿಕ್ತ ಅವತಾರದಲ್ಲಿ ನಟ ಕಾಣಿಸಿಕೊಂಡಿದ್ದಾರೆ. ‘ಟೋಬಿ’ ಸಿನಿಮಾದ ಮೂಲಕ ಶೆಟ್ರು ಏನೋ ಹೇಳೋದ್ದಕ್ಕೆ ಹೊರಟಿದ್ದಾರೆ ಏನು ಎಂಬ ಕುತೂಹಲ ಈಗಾಗಲೇ ಅಭಿಮಾನಿಗಳಲ್ಲಿ ಮೂಡಿದೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಚೈತ್ರಾ ಆಚಾರ್ ನಟಿಸಿದ್ದಾರೆ.

     

    ‘ಟೋಬಿ’ ಸಿನಿಮಾದಲ್ಲಿ ಕಂಟೆಂಟ್ ಇದೆ. ಕಮರ್ಷಿಯಲ್ ಟಚ್ ಕೂಡ ಇದೆ. ಎರಡೂ ಇರೋ ಈ ಚಿತ್ರವನ್ನ ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಅಂತಲೇ ರಾಜ್ ಬಿ ಶೆಟ್ರು ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ರಾಜ್ ಬಿ ಶೆಟ್ರ ಚಿತ್ರ ಜೀವನದ ಮೊದಲ ಕರ್ಮಷಿಯಲ್ ಸಿನಿಮಾ ಕೂಡ ಆಗಿದೆ. ಫಸ್ಟ್ ಲುಕ್ ನೋಡಿದ್ರೆ ರಾಜ್ ಬಿ ಶೆಟ್ಟಿ ಅವರ ಕೆರಿಯರ್‌ನಲ್ಲಿ ಈ ಸಿನಿಮಾ ಮೈಲುಗಲ್ಲು ಸೃಷ್ಟಿಸೋದಂತೂ ಗ್ಯಾರಂಟಿ ಅಂತಿದ್ದಾರೆ ಸಿನಿಪಂಡಿತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]