ನವದೆಹಲಿ: ಟೋಲ್ (Toll) ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ಪಾವತಿಯನ್ನ ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ.
ಸಹೌದು. ಫಾಸ್ಟ್ ಟ್ಯಾಗ್ (FASTag) ಹೊಂದದೇ ಇರುವ ವಾಹನಗಳು ನವೆಂಬರ್ 15ರಿಂದ ನಗದುರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದ್ರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದ್ರೆ ಯುಪಿಐ (UPI) ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ ಶುಲ್ಕ ವಿಧಿಸಲಾಗುತ್ತದೆ. ಇದನ್ನೂ ಓದಿ: ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ
ಫಾಸ್ಟ್‌ಟ್ಯಾಗ್ ಬಳಕೆದಾರರಲ್ಲದವರಿಗೆ ಅವರ ಟೋಲ್ ಶುಲ್ಕ (Toll) ಪಾವತಿಯ ವಿಧಾನವನ್ನ ಆಧರಿಸಿ ವಿಭಿನ್ನ ಶುಲ್ಕಗಳನ್ನು ವಿಧಿಸಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ (MORTH) ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಹಾಗೂ ಆದಾಯ ನಿರ್ಧಾರ) ನಿಯಮಗಳು, 2008 ಅನ್ನು ತಿದ್ದುಪಡಿಗೊಳಿಸಿದೆ. ಟೋಲ್ ಪ್ಲಾಜಾಗಳಲ್ಲಿ (Toll Plaza) ಡಿಜಿಟಲ್ ಪಾವತಿ ಉತ್ತೇಜಿಸುವುದು ಹಾಗೂ ನಗದು ಬಳಕೆಯನ್ನು ಕಡಿಮೆಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ನವೆಂಬರ್ 15ರಿಂದ ನಿಯಮ ಜಾರಿ
ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟು ಕಡಿಮೆಮಾಡಲು ಈ ಬದಲಾವಣೆ ತರಲಾಗಿದ್ದು, ನವೆಂಬರ್ 15ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಅಲ್ಲದೇ ಡಿಜಿಟಲ್ ಪಾವತಿ ಮಾಡುವುದರಿಂದ ಪಾರದರ್ಶಕತೆ ಕಾಯ್ದುಕೊಳ್ಳುವ ಜೊತೆಗೆ ವಾಹನ ದಟ್ಟಣೆಯೂ ಕಡಿಮೆಯಾಗಲಿದೆ, ಹೆದ್ದಾರಿ ಬಳಕೆದಾರರ ಪ್ರಯಾಣ ಸಮಯ ಉಳಿತಾಯ ಕೂಡ ಮಾಡಬಹುದಾಗಿದೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ಉದಾಹರಣೆಗೆ
ಫಾಸ್ಟ್‌ಟ್ಯಾಗ್ ಮೂಲಕ ವಾಹನದ ಟೋಲ್ ಶುಲ್ಕ 100 ರೂ. ಆಗಿದ್ದರೆ, ನಗದು ರೂಪದಲ್ಲಿ ಪಾವತಿಸಿದರೆ 200 ರೂ. ಆಗುತ್ತದೆ, ಆದರೆ UPI ಮೂಲಕ ಡಿಜಿಟಲ್ ಆಗಿ ಪಾವತಿಸಿದರೆ 125 ರೂ. ಮಾತ್ರ ಆಗುತ್ತದೆ. ಇದರರ್ಥ ನವೆಂಬರ್ 15 ರಿಂದ FASTag ಅಲ್ಲದ ಬಳಕೆದಾರರು UPI ಮೂಲಕ ಪಾವತಿ ಮಾಡಿದ್ರೆ 100 ರೂ.ನಲ್ಲಿ 75 ರೂ. ಉಳಿತಾಯ ಮಾಡಬಹುದಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ; ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ
ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು
ಏನಿದು ಘಟನೆ?
ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಕಪಿಲ್ ಕವಾಡ್, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ.
ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್‌ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು
ಲಕ್ನೋ: ದೇಶದಲ್ಲಿ ಇತ್ತೀಚೆಗೆ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ದೇಶ ಕಾಯುವ ಯೋಧರಿಗೂ ಬೆಲೆ ಕೊಡದ ಸ್ಥಿತಿ ನಿರ್ಮಾಣವಾಗಿದೆ. ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ (Toll Plaza Workers) ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Meerut) ನಡೆದಿದೆ.
Kapil, an Indian Army Soldier posted in Kashmir was brutally assaulted by goons of Meerut Toll Plaza. Most of these toll plazas are being operated by criminal gangs and commuters face such lawlessness by these goons on a daily routine.pic.twitter.com/k2mvIqWb4P
— NCMIndia Council For Men Affairs (@NCMIndiaa) August 18, 2025
ಏನಿದು ಘಟನೆ?
ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಕಪಿಲ್ ಕವಾಡ್, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ. ಇದನ್ನೂ ಓದಿ: ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ
ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್‌ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ನವದೆಹಲಿ: 3,000 ರೂ. ಪಾವತಿಸಿ ದೇಶದ ಯಾವುದೇ ಟೋಲ್‌ಗಳಲ್ಲಿ ಒಂದು ವರ್ಷ ಅಥವಾ 200 ಟ್ರಿಪ್‌ಗೆ ಅನುಮತಿಸುವ ವಾರ್ಷಿಕ ಫಾಸ್ಟ್ಯಾಗ್ ಪಾಸ್ (FASTag Annual Pass) ಆ.15ರಿಂದ ಲಭಿಸಲಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಫಾಸ್ಟ್‌ಟ್ಯಾಗ್‌ಗಳಿಗಾಗಿ ಹೊಸ ವಾರ್ಷಿಕ ಪಾಸ್ ಅನ್ನು ಜೂನ್ ತಿಂಗಳಲ್ಲಿ ಘೋಷಿಸಿತ್ತು. ಪಾಸ್‌ಗಳ ವಿತರಣಾ ಕಾರ್ಯಕ್ಕೆ ಆ.15ರಂದು ಚಾಲನೆ ಸಿಗಲಿದೆ. ಈ ಪಾಸ್ ಇದ್ದವರು, ಖಾಸಗಿ ಕಾರುಗಳು/ಜೀಪ್‌ಗಳು/ವ್ಯಾನ್‌ಗಳನ್ನು ಗೊತ್ತುಪಡಿಸಿದ ರಾಷ್ಟ್ರೀಯ ಹೆದ್ದಾರಿ (NH) ಮತ್ತು ರಾಷ್ಟ್ರೀಯ ಮೋಟಾರುಮಾರ್ಗ (NE) ಶುಲ್ಕ ಪ್ಲಾಜಾಗಳಲ್ಲಿ ಒಂದು ವರ್ಷ ಅಥವಾ 200 ಟ್ರಿಪ್ ಹೋಗಬಹುದು. ಪ್ರತಿ ಬಾರಿ ಟೋಲ್ ಶುಲ್ಕ ಕೊಡುವುದು ತಪ್ಪುತ್ತದೆ. ಇದನ್ನೂ ಓದಿ: FAStag ವ್ಯವಹಾರ – ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ
ವಾರ್ಷಿಕ ಪಾಸ್ ಆ.15 ರಿಂದ ಜಾರಿಗೆ ಬರಲಿದ್ದು, ಟೋಲ್ ಬೂತ್‌ಗಳಲ್ಲಿ ಕಾಯುವ ಸಮಯ, ದಟ್ಟಣೆ ಮತ್ತು ಸಂಘರ್ಷಗಳನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಇದರ ಪರಿಣಾಮವಾಗಿ ಲಕ್ಷಾಂತರ ಖಾಸಗಿ ಕಾರು ಮಾಲೀಕರಿಗೆ ಅನುಕೂಲಕರ ಪ್ರಯಾಣದ ಅನುಭವ ಸಿಗುತ್ತದೆ.
ಬಳಕೆದಾರರು ತಮ್ಮ ಫಾಸ್ಟ್‌ಟ್ಯಾಗ್‌ಗಳನ್ನು 3,000 ರೂ.ಗಳಿಗೆ ನವೀಕರಿಸುವ ಮೂಲಕ ಮಾನ್ಯತೆಯ ಅವಧಿ ಮುಗಿಯುವವರೆಗೆ ಯಾವುದೇ ರಾಷ್ಟ್ರೀಯ ಹೆದ್ದಾರಿಯನ್ನು ಬಳಸಬಹುದು. ಈ ಪಾಸ್‌ಗಳ ಮಾನ್ಯತೆಯ ಅವಧಿ ಮುಗಿದಾಗ, ಬಳಕೆದಾರರು ಪ್ರಸ್ತುತ ಫಾಸ್ಟ್ಯಾಗ್ ವ್ಯವಸ್ಥೆಯಂತೆ ಅವುಗಳನ್ನು ರೀಚಾರ್ಜ್ ಮಾಡಬಹುದು. ಇದನ್ನೂ ಓದಿ: PublicTV Explainer: ಫಾಸ್ಟ್ಯಾಗ್ 3,000 ರೂ. ವಾರ್ಷಿಕ ಪಾಸ್ – ನಿಮಗೆ ಲಾಭನಾ, ನಷ್ಟನಾ?
ರಾಷ್ಟ್ರೀಯ ಹೆದ್ದಾರಿ (NH) ಮತ್ತು ರಾಷ್ಟ್ರೀಯ ಮೋಟಾರ್‌ವೇ (NE) ಶುಲ್ಕ ಪ್ಲಾಜಾಗಳಲ್ಲಿ ಮಾತ್ರ ಪ್ರವೇಶಿಸಬಹುದು. ಮೋಟಾರು ಮಾರ್ಗಗಳು, ರಾಜ್ಯ ಹೆದ್ದಾರಿಗಳು (SH) ಮತ್ತು ರಾಜ್ಯ ಸರ್ಕಾರಗಳು ಅಥವಾ ಸ್ಥಳೀಯ ಅಧಿಕಾರಿಗಳು ನಿಯಂತ್ರಿಸುವ ಇತರ ಸ್ಥಳಗಳು ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿನ ಶುಲ್ಕ ಪ್ಲಾಜಾಗಳಲ್ಲಿ ಇದು ಸಾಮಾನ್ಯ ಫಾಸ್ಟ್ಯಾಗ್‌ನಂತೆ ಕಾರ್ಯನಿರ್ವಹಿಸುತ್ತದೆ.
– ಎಲ್ಲಾ ಟೋಲ್ ಪ್ಲಾಜಾಗಳು ವಾರ್ಷಿಕ ಪಾಸ್ ಅಡಿ ಬರುತ್ತವೆಯೇ? – ಈಗಾಗಲೇ ಫಾಸ್ಟ್ಯಾಗ್ ಇರುವವರು ಏನು ಮಾಡಬೇಕು?
ಭಾರತ ಸರ್ಕಾರವು ಖಾಸಗಿ ವಾಹನಗಳಿಗಾಗಿ ಹೊಸ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಅನ್ನು ಪರಿಚಯಿಸಿದೆ. 3000 ರೂ. ಕೊಟ್ಟರೆ ಒಂದು ವರ್ಷದ ಅವಧಿಗೆ ನಿಮ್ಮ ಫಾಸ್ಟ್ಯಾಗ್ ಮಾನ್ಯವಾಗಿರುತ್ತದೆ. ಖಾಸಗಿ ವಾಹನ ಮಾಲೀಕರಿಗೆ ವೆಚ್ಚವನ್ನು ಕಡಿಮೆ ಮಾಡುವುದು, ಹೆದ್ದಾರಿಗಳಲ್ಲಿನ ದಟ್ಟಣೆಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ವಾಹನ ಮಾಲೀಕರಿಗೆ ಸಾಮಾನ್ಯವಾಗಿ ಫಾಸ್ಟ್ಯಾಗ್ ಬಗ್ಗೆ ತಿಳಿದೇ ಇರುತ್ತದೆ. ಆದರೆ, ಕೇಂದ್ರದ ವಾರ್ಷಿಕ ಪಾಸ್ ಪರಿಕಲ್ಪನೆ ಏನು? ಅದರಿಂದಾಗುವ ಪ್ರಯೋಜನವೇನು? ವಾರ್ಷಿಕ ಪಾಸ್‌ಗೆ ಇರುವ ನಿಯಮಗಳೇನು? ಮೊದಲಾದ ಪ್ರಶ್ನೆಗಳಿಗೆ ಪೂರ್ಣ ವಿವರ ಇಲ್ಲಿದೆ.
ಫಾಸ್ಟ್ಯಾಗ್ ಎಂದರೇನು?
ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಗೆ ಟೋಲ್ ಶುಲ್ಕ ಪಾವತಿ ತ್ರಾಸದಾಯಕವಾಗಿತ್ತು. ಈ ಪ್ರಕ್ರಿಯೆಯಿಂದ ಟ್ರಾಫಿಕ್ ಜಾಮ್ ಕೂಡ ಹೆಚ್ಚಾಗುತ್ತಿತ್ತು. ಇದನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಸೌಲಭ್ಯವೊಂದನ್ನು ಪರಿಚಯಿಸಿತು. ಅದೇ ‘ಫಾಸ್ಟ್ಯಾಗ್’ ಸೌಲಭ್ಯ. ಇದು ಪ್ರಿಪೇಯ್ಡ್ ಟ್ಯಾಗ್ ಸೌಲಭ್ಯ. ಇದನ್ನು ಕಾರು ಮುಂಭಾಗದ ಗಾಜಿಗೆ ಅಂಟಿಸಲಾಗುತ್ತದೆ. ನಗದು ರಹಿತ ಮತ್ತು ತ್ವರಿತವಾಗಿ ಟೋಲ್ ಶುಲ್ಕ ಪಾವತಿಸಲು ಇದು ಸಹಕಾರಿಯಾಯಿತು. ಟೋಲ್‌ನಲ್ಲಿ ಹೆಚ್ಚಿನ ಸಮಯ ನಿಂತು ಹಣ ಪಾವತಿಸುವ ಕಿರಿಕಿರಿ ತಪ್ಪಿದಂತಾಯಿತು. ಇದನ್ನೂ ಓದಿ: ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್ ಪಾಸ್!
ಹಣ ಪಾವತಿ ಹೇಗೆ?
ವಾಹನ ಮುಂಭಾಗದ ಗಾಜಿಗೆ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಆಧಾರಿತ ಫಾಸ್ಟ್ಯಾಗ್ ಅಂಟಿಸಲಾಗುತ್ತದೆ. ರೇಡಿಯೋ ಫ್ರೀಕ್ವೆನ್ಸಿ ಮೂಲಕ ಈ ಟ್ಯಾಗ್ ಸ್ಕ್ಯಾನ್ ಆಗಲಿದೆ. ಬಳಿಕ ನಿಮ್ಮ ಖಾತೆಯಿಂದ ಹಣ ಕಡಿತವಾಗಲಿದೆ. ಇದಕ್ಕೆ ನಿಮ್ಮ ಖಾತೆಯಲ್ಲಿ ಮುಂಗಡ ಹಣ ಇರಬೇಕು. ಎಲ್ಲಾ ಪ್ರಮುಖ ಬ್ಯಾಂಕ್‌ಗಳಲ್ಲಿ ಈ ಫಾಸ್ಟಾö್ಯಗ್ ಸೌಲಭ್ಯ ನೀಡಲಾಗುತ್ತಿದೆ. ಫಾಸ್ಟ್ಯಾಗನ್ನು ವಾಹನದ ನೋಂದಣಿ ಸಂಖ್ಯೆಗೆ ಜೋಡಿಸಲಾಗಿರುತ್ತದೆ. ಜೊತೆಗೆ ಇದನ್ನು ಗ್ರಾಹಕರ ಉಳಿತಾಯ ಖಾತೆಗೆ ಲಿಂಕ್ ಮಾಡಲಾಗುತ್ತದೆ. ಟ್ಯಾಗ್ ರೀಡ್ ಮಾಡುವ ಮೂಲಕ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಕಡಿತವಾಗುತ್ತದೆ.
ಫಾಸ್ಟ್ಯಾಗ್ ಹೇಗೆ ಕೆಲಸ ಮಾಡುತ್ತೆ?
ಟೋಲ್ ಪ್ಲಾಜಾದೊಳಗೆ ಸೆನ್ಸಾರ್ ಸ್ಥಾಪಿಸಲಾಗಿರುತ್ತದೆ. ವಾಹನವು ಟೋಲ್ ಪ್ಲಾಜಾದೊಳಗೆ ಬಂದಾಗ, ಆ ಸೆನ್ಸಾರ್ ವಾಹನದ ವಿಂಡ್‌ಸ್ಕ್ರೀನ್‌ನಲ್ಲಿ ಅಂಟಿಸಿರುವ ಫಾಸ್ಟ್ಯಾಗ್ ಅನ್ನು ಟ್ರ್ಯಾಕ್ ಮಾಡುತ್ತದೆ. ನಿಮ್ಮ ಖಾತೆಯಿಂದ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಕಡಿತವಾಗುತ್ತದೆ. ಇದಕ್ಕಾಗಿ ನೀವು ಮುಂಚಿತವಾಗಿಯೇ ನಿಮ್ಮ ಪ್ರಿಪೇಯ್ಡ್ ಫಾಸ್ಟ್ಯಾಗ್ ಖಾತೆಯಲ್ಲಿ ಹಣ ಜಮೆ ಮಾಡಿರಬೇಕು.
ಯಾವ್ಯಾವ ಬ್ಯಾಂಕ್‌ಗಳಲ್ಲಿ ಫಾಸ್ಟ್ಯಾಗ್ ಸಿಗುತ್ತೆ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಫೆಡರಲ್ ಬ್ಯಾಂಕ್, ಐಸಿಐಸಿಐ, ಹೆಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಯೆಸ್ ಬ್ಯಾಂಕ್, ಪಂಜಾಬ್ & ಮಹಾರಾಷ್ಟ್ರ ಬ್ಯಾಂಕ್ ಸಹಕಾರಿ ಬ್ಯಾಂಕ್, ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಾರತ್ವತ್ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್ ಪಾಸ್
ವಾರ್ಷಿಕ ಪಾಸ್ ಯಾವಾಗಿನಿಂದ ಜಾರಿ?
ಆಗಸ್ಟ್ 15ರಿಂದ ಜಾರಿಗೆ ಬರುತ್ತದೆ.
ಯಾವ ವಾಹನಗಳಿಗೆ ಪಾಸ್ ಸಿಗುತ್ತೆ?
ಇದನ್ನು ವಾಣಿಜ್ಯ ಉದ್ದೇಶಕ್ಕಲ್ಲದ ವಾಹನಗಳಿಗೆ ಮಾತ್ರ ವಿತರಿಸಲಾಗುವುದು. ಕಾರು, ಜೀಪ್, ವ್ಯಾನ್‌ಗಳು ಪಾಸ್ ಪಡೆದುಕೊಳ್ಳಬಹುದು.
ನಿಯಮ ಏನು?
ಫಾಸ್ಟ್ಯಾಗ್ ಆಧಾರಿತ ಪಾಸ್‌ಗಳು ಒಂದು ವರ್ಷ ಅವಧಿ ಅಥವಾ 200 ಟ್ರಿಪ್‌ಗಳಿಗೆ ಮಾತ್ರ ಅನ್ವಯಿಸುತ್ತದೆ.
ಫಾಸ್ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಎಂದರೇನು?
ಫಾಸ್ಟ್ಟ್ಯಾಗ್ ಎನ್ನುವುದು ರಾಷ್ಟ್ರೀಯ ಪಾವತಿ ನಿಗಮ (NPCI) ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ವಹಿಸುವ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯಾಗಿದೆ. ಫಾಸ್ಟ್ಯಾಗ್ ಸ್ಟಿಕ್ಕರ್ ಅನ್ನು ಸಾಮಾನ್ಯವಾಗಿ ಕಾರಿನ ವಿಂಡ್‌ಸ್ಕ್ರೀನ್‌ನಲ್ಲಿ ಅಂಟಿಸಲಾಗುತ್ತದೆ. ಇದನ್ನು 2014 ರಲ್ಲಿ ಪೈಲಟ್ ಯೋಜನೆಯಾಗಿ ಪ್ರಾರಂಭಿಸಲಾಯಿತು. 2021 ರಲ್ಲಿ ದೇಶದ ಪ್ರತಿಯೊಂದು ಟೋಲ್ ಪ್ಲಾಜಾದಲ್ಲಿ ಕಡ್ಡಾಯಗೊಳಿಸಲಾಯಿತು.
ವಾರ್ಷಿಕ ಪಾಸ್ 200 ಟ್ರಿಪ್‌ಗಳನ್ನು ಪೂರ್ಣಗೊಳಿಸಿದ ನಂತರ ಅಥವಾ ಒಂದು ವರ್ಷದ ಅವಧಿ ಮುಗಿದ ನಂತರ ಅದು ಸ್ವಯಂಚಾಲಿತವಾಗಿ ನಿಯಮಿತ FASTagಗೆ ಮರಳುತ್ತದೆ. ಒಂದು ವರ್ಷದ ಅವಧಿ ಮುಗಿಯದಿದ್ದರೂ, 200 ಟ್ರಿಪ್‌ಗಳನ್ನು ಪೂರ್ಣಗೊಳಿಸಿದರೆ ಬಳಕೆದಾರ ಪಾಸ್‌ನ್ನು ಮತ್ತೆ ಖರೀದಿಸಬೇಕಾಗುತ್ತದೆ.
ಪಾಸನ್ನು ಬೇರೆಯವರು ಉಪಯೋಗಿಸಬಹುದೇ?
ಪಾಸ್ ಅನ್ನು ಬೇರೆಯವರಿಗೆ ವರ್ಗಾಯಿಸುವಂತಿಲ್ಲ. FASTag ಅಂಟಿಸಿದ ಮತ್ತು ನೋಂದಾಯಿಸಿದ ವಾಹನಕ್ಕೆ ಮಾತ್ರ ಇದು ಮಾನ್ಯವಾಗಿರುತ್ತದೆ.
ಟ್ರಿಪ್ ಲೆಕ್ಕಾಚಾರ ಹೇಗೆ?
ಒಂದು ಟೋಲ್ ಪ್ಲಾಜಾವನ್ನು ದಾಟಿದರೆ ಅದನ್ನು ಒಂದು ಟ್ರಿಪ್ ಎಂದು ಪರಿಗಣಿಸಲಾಗುತ್ತದೆ. ಹೋದ ಮಾರ್ಗದಲ್ಲೇ ಮತ್ತೆ ವಾಪಸ್ ಬರುವುದಾದರೆ ಎರಡು ಟ್ರಿಪ್‌ಗಳಾಗಿ ಕೌಂಟ್ ಮಾಡಲಾಗುತ್ತದೆ.
ಪಾಸ್‌ನಿಂದ ನಿಮಗೆ ಲಾಭನಾ?
ನೀವು ನಿಯಮಿತ ಪ್ರಯಾಣಿಕರಾಗಿದ್ದರೆ, ಮಾಸಿಕ ಟೋಲ್ ಪಾಸ್‌ಗೆ 340 ರೂ. (ಅದು ಕೂಡ ಕೇವಲ ಒಂದು ಟೋಲ್ ಪ್ಲಾಜಾಗೆ.) ಪಾವತಿಸುತ್ತೀರಿ. 12 ತಿಂಗಳಲ್ಲಿ, ನೀವು 4,080 ರೂ. ಪಾವತಿಸಬೇಕಾಗುತ್ತದೆ. ಆದರೆ, ನೀವು ವಾರ್ಷಿಕ ಪಾಸ್ ಅನ್ನು ತೆಗೆದುಕೊಂಡರೆ, ನೀವು 3,000 ರೂ. ಮಾತ್ರ ಪಾವತಿಸಬೇಕಾಗುತ್ತದೆ. ಇದರಿಂದ ಉಳಿತಾಯವೂ ಸಾಧ್ಯವಾಗುತ್ತದೆ.
FASTag ವಾರ್ಷಿಕ ಪಾಸ್ ಕಡ್ಡಾಯವೇ?
ಇಲ್ಲ, ವಾರ್ಷಿಕ ಪಾಸ್ ಕಡ್ಡಾಯವಲ್ಲ. ಪಾಸ್ ಪಡೆಯದ ಬಳಕೆದಾರರು ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಸಿ ಪ್ರಯಾಣಿಸಬಹುದು.
ಪಾಸ್ ಪಡೆಯೋದು ಹೇಗೆ?
ಹೊಸ ಪಾಸ್ ಪಡೆಯುವ ಅಥವಾ ನವೀಕರಿಸುವ ಸೌಲಭ್ಯವು ಶೀಘ್ರದಲ್ಲಿ ರಾಜ್‌ಮಾರ್ಗ್ ಯಾತ್ರಾ ಆ್ಯಪ್‌ನಲ್ಲಿ ಲಭ್ಯವಾಗಲಿದೆ. ಇದರೊಂದಿಗೆ ಎನ್‌ಹೆಚ್‌ಎಐ ಮತ್ತು ಎಂಒಆರ್‌ಟಿಹೆಚ್ ಅಂತರ್ಜಾಲ ಪುಟಗಳಲ್ಲೂ ಲಭ್ಯ.
ಈಗಾಗಲೇ FASTag ಇರುವವರು ಏನು ಮಾಡಬೇಕು?
ಈಗಾಗಲೇ FASTag ಹೊಂದಿರುವವರು ಹೊಸ ಪಾಸನ್ನು ಖರೀದಿಸುವ ಅಗತ್ಯವಿಲ್ಲ. ವಾರ್ಷಿಕ ಪಾಸ್ ಅನ್ನು ಅಸ್ತಿತ್ವದಲ್ಲಿರುವ FASTagನಲ್ಲಿ ಸಕ್ರಿಯಗೊಳಿಸಬಹುದು.
ಎಲ್ಲಾ ಟೋಲ್ ಪ್ಲಾಜಾಗಳು ಪಾಸ್ ಅಡಿಯಲ್ಲಿ ಬರುತ್ತವೆಯೇ?
ಇಲ್ಲ, ಇದು ರಾಷ್ಟ್ರೀಯ ಹೆದ್ದಾರಿ ಮತ್ತು ರಾಷ್ಟ್ರೀಯ ಎಕ್ಸ್ಪ್ರೆಸ್‌ವೇ ಶುಲ್ಕ ಪ್ಲಾಜಾಗಳಲ್ಲಿ ಮಾತ್ರ ಮಾನ್ಯವಾಗಿರುತ್ತದೆ. ರಾಜ್ಯ ಸರ್ಕಾರಗಳು ಅಥವಾ ಸ್ಥಳೀಯ ಸಂಸ್ಥೆಗಳು ನಿರ್ವಹಿಸುವ ಎಕ್ಸ್‌ಪ್ರೆಸ್‌ವೇಗಳು, ರಾಜ್ಯ ಹೆದ್ದಾರಿಗಳಿಗೆ ಪಾಸ್ ಅನ್ವಯಿಸುವುದಿಲ್ಲ.
ಪ್ರಯೋಜನ ಏನು?
* 60 ಕಿಮೀ ವ್ಯಾಪ್ತಿಯಲ್ಲಿನ ಟೋಲ್ ಪ್ಲಾಜಾಗಳು ಮತ್ತು ಟೋಲ್ ಪಾವತಿ ಸರಳೀಕರಣ.
* ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯ ತಗ್ಗಲಿದೆ.
* ಒತ್ತಡ ಮತ್ತು ಟೋಲ್ ಸಿಬ್ಬಂದಿ ಜೊತೆಗಿನ ಅನಗತ್ಯ ವಿವಾದ ತಪ್ಪಿಸಬಹುದು.
* ವಾರ್ಷಿಕ ಪಾಸ್ ಮೂಲಕ ಸಂಚಾರ ಇನ್ನಷ್ಟು ವೇಗ ಪಡೆಯಲಿದೆ.
* ಆರಾಮದಾಯಕ ಅನುಭವ ಖಾಸಗಿ ವಾಹನ ಮಾಲೀಕರದ್ದಾಗುತ್ತದೆ.
ಬೆಂಗಳೂರು: ಏಪ್ರಿಲ್ 1ರಿಂದ ಹೊಸ ಟೋಲ್ ನೀತಿ ಜಾರಿಯಾಗಲಿದ್ದು, ಕರ್ನಾಟಕದಾದ್ಯಂತ ಟೋಲ್ ಶುಲ್ಕ (Toll Price) ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ.
ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎಂದು ತಿಳಿದುಬಂದಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ (Toll Plaza) ಹೆಚ್ಚಿನ ಟೋಲ್ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.
ರಾಷ್ಟ್ರೀಯ ಹೆದ್ದಾರಿಗಳ ಮೇಲಿನ ಸುಂಕಗಳಿಗೆ ಕೇಂದ್ರ ಸರ್ಕಾರ ಶೀಘ್ರವೇ ಹೊಸ ನೀತಿ ಪ್ರಕಟಿಸಲಿದೆ. ಇದರಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿ ದೊರೆಯಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರೂ ಅದಿನ್ನೂ ಜಾರಿಯಾಗಿಲ್ಲ. 2008ರ ನೀತಿಯೇ ಅನ್ವಯವಾಗಲಿದೆ. ಟೋಲ್ ಗುತ್ತಿಗೆ ಅವಧಿಯನ್ನು ಆಧರಿಸಿ ದರಗಳು ಬದಲಾಗಲಿವೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ತಿಳಿಸಿದೆ.
ಕರ್ನಾಟಕದಲ್ಲಿ ಎಲ್ಲೆಲ್ಲಿ ಟೋಲ್ ಹೆಚ್ಚಳ?
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹೇಳಿರುವಂತೆ, ಗರಿಷ್ಠ ಶೇ.5 ಮತ್ತು ಕನಿಷ್ಠ ಶೇ.3 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು-ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ., 2024-25 ರಲ್ಲಿ 64,809 ಕೋಟಿ ರೂ. ಟೋಲ್ ಸಂಗ್ರಹ ಆಗಿದೆ. ಈ ವರ್ಷ ಈ ಗುರಿಯನ್ನ 1 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ 58 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.
ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಗಡಿಗಳಲ್ಲಿ ನಿರ್ಮಿಸಲಾದ ಟೋಲ್ ಸಂಗ್ರಹಣಾ ಪಾಯಿಂಟ್‌ಗಳಿಂದ (Toll Plaza) ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಇವುಗಳನ್ನು ಮುಖ್ಯ ಹೆದ್ದಾರಿಯಿಂದ ತೆಗೆದುಹಾಕಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಎಂಸಿಡಿಗೆ ಸೂಚನೆ ನೀಡಲಿದೆ ಎಂದು ವರದಿಯಾಗಿದೆ.
ಎಂಸಿಡಿ ಪ್ರಸ್ತುತ ದೆಹಲಿ ಗಡಿಗಳ ಐದು ಪ್ರಮುಖ ಸ್ಥಳಗಳಲ್ಲಿ ಇಸಿಸಿಯನ್ನು ಸಂಗ್ರಹಿಸುತ್ತದೆ. ಗುರುಗ್ರಾಮ್‌ನ ಸಿರ್ಹೌಲ್ ಗಡಿ, ಘಾಜಿಪುರ (NH 9), ಬದರ್ಪುರ್ (NH 19), ಟಿಕ್ರಿ (NH 10) ಮತ್ತು ಕುಂಡ್ಲಿ (NH 44) ಟೋಲ್ ಬೂತ್‌ಗಳು ಈ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆಯನ್ನು ಉಂಟುಮಾಡುತ್ತವೆ. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಐಸಿಸ್ ಕಮಾಂಡರ್ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್
ಕೇಂದ್ರ ಸರ್ಕಾರ ದೆಹಲಿ ಮತ್ತು ಹರಿಯಾಣ ಆಡಳಿತದೊಂದಿಗೆ ಈ ವಿಷಯವನ್ನು ಚರ್ಚಿಸಿದೆ. ಈಗ ಅಂತಿಮ ನಿರ್ಧಾರವು ಸುಪ್ರೀಂ ಕೋರ್ಟ್‌ನ ನಿಲುವಿನ ಮೇಲೆ ನಿರ್ಧಾರವಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ದೆಹಲಿ-ಎನ್‌ಸಿಆರ್‌ನ ಲಕ್ಷಾಂತರ ಪ್ರಯಾಣಿಕರು ಸಂಚಾರ ದಟ್ಟಣೆಯಿಂದ ಹೆಚ್ಚಿನ ಪರಿಹಾರ ಪಡೆಯಬಹುದು. ಇದನ್ನೂ ಓದಿ: ಹರ್ಯಾಣ| ಭೂ ವಿವಾದ; ಬಿಜೆಪಿ ಮಂಡಲ ಅಧ್ಯಕ್ಷನ ಭೀಕರ ಹತ್ಯೆ
ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ಸಂಚಾರಕ್ಕೆ ಮುಕ್ತಗೊಂಡಿದ್ದು, ಮಾರ್ಚ್ 14ರಿಂದಲೇ ಟೋಲ್ (Toll) ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.
ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಯಹಳ್ಳಿ ಮತ್ತು ಕಣಮಿಣಕಿಯ ಟೋಲ್‌ಗಳು ಕಾರ್ಯಾಚರಣೆ ಆರಂಭಿಸಲಿವೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುವವರು ಕಣಮಿಣಕಿ ಬಳಿ, ಮೈಸೂರು ಕಡೆಯಿಂದ ಬೆಂಗಳೂರು ಬರುವವರು ಶೇಷಗಿರಿಹಳ್ಳಿಯ ಟೋಲ್‌ನಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ. ಮೊದಲ ಹಂತದ 55.63 ಕಿಮೀ ರಸ್ತೆಗೆ ಶುಲ್ಕ ಸಂಗ್ರಹ ಮಾಡಲಾಗುತ್ತದೆ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ
ಈ ಬೆನ್ನಲ್ಲೇ ಕಾಮಗಾರಿ ಪೂರ್ಣಗೊಳಿಸದೇ, ಸರ್ವೀಸ್ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡಬಾರದೆಂದು ಹಲವು ಸಂಘ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ನಡುವೆ ಟೋಲ್ ಸಂಗ್ರಹ ಮಾಡಲು ಎನ್‌ಹೆಚ್‌ಎಐ (NHAI) ಮುಂದಾಗಿದೆ. ಮಂಗಳವಾರ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ
ಪ್ರಧಾನಿ ನರೇಂದ್ರ ಮೋದಿ (NarendraModi) ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಳಿಸಿದ ಬಳಿಕ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಟೋಲ್ ಶುಲ್ಕ ಎಷ್ಟು – ಹೇಗೆ?
NHAI ಟೋಲ್ ಸಂಗ್ರಹಿಸಲು 6 ರೀತಿಯಲ್ಲಿ ವಾಹನಗಳನ್ನ ವರ್ಗೀಕರಿಸಲಾಗಿದೆ. ನಿಗದಿತ ಶುಲ್ಕದ ಪ್ರಕಾರ ಬೆಂಗಳೂರು-ನಿಡಘಟ್ಟ ವಿಭಾಗದಲ್ಲಿ ಒಂದು ಟ್ರಿಪ್‌ಗೆ ಕಾರು ಮಾಲೀಕರು 135 ರೂ. ಪಾವತಿಸಬೇಕಾಗುತ್ತದೆ. ಅಲ್ಲದೇ ಒಂದೇ ದಿನದಲ್ಲಿ ಮರಳಿದರೆ, 205 ರೂ. ನಿಗದಿಮಾಡಲಾಗಿದೆ. ಮಿನಿ ಬಸ್‌ಗೆ 220 ರೂ. ಹಾಗೂ ಬಸ್‌ಗೆ ಒಂದು ಬಾರಿ ಪ್ರಯಾಣಕ್ಕೆ 460 ರೂ. ಶುಲ್ಕ ವಿಧಿಸಲಾಗುತ್ತದೆ ಎಂದು NHAI ಹೇಳಿದೆ.
ಮುಂಬೈ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯರಿಬ್ಬರು (Women) ಪರಸ್ಪರ ಕೂದಲು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಾಸಿಕ್ (Nashik) ಬಳಿಯ ಪಿಂಪಲ್ಗಾವ್ ಟೋಲ್ ಬೂತ್ (Toll Plaza) ಬಳಿ ನಡೆದಿದೆ.
A shocking incident has come to light that a fierce fight took place between women at the Pimpalgaon toll booth near Nashik. @IGPNashikRangepic.twitter.com/1PwGTugSqo
ಸಿಆರ್‌ಪಿಎಫ್ (CRPF) ಅಧಿಕಾರಿಯ ಪತ್ನಿ ಹಾಗೂ ಟೋಲ್ ಸಿಬ್ಬಂದಿ (Toll Employee) ಟೋಲ್‌ಬೂತ್ ರಸ್ತೆಯಲ್ಲೇ ನಿಂತು ಪರಸ್ಪರ ಮುಂದಲೆ ಹಿಡಿದು ಎಳೆದಾಡಿದ್ದಾರೆ, ನಿಂದಿಸಿದ್ದಾರೆ. ಮಹಿಳೆಯರಿಬ್ಬರ ನಡುವಿನ ಮಾರಾಮಾರಿ ದೃಶ್ಯ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಇದನ್ನೂ ಓದಿ: ಮೂಲಂಗಿ ಮಾರಿ ಜೀವನ ನಡೆಸುತಿದ್ದ ಪತ್ನಿಯನ್ನ ಕುಡಿದ ಅಮಲಿನಲ್ಲಿ ಕೊಲೆ ಮಾಡಿದ ಪತಿ
ಟೋಲ್ (Toll) ಪಾವತಿಸುವ ವಿಚಾರಕ್ಕೆ ಇಬ್ಬರ ನಡುವೆ ಆರಂಭದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಂತರ ಇದು ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿದೆ. ಬಳಿಕ ಇಬ್ಬರು ಜುಟ್ಟು ಹಿಡಿದು ಎಳೆದಾಡಿದ್ದಾರೆ, ಕಪಾಳಕ್ಕೆ ಬಾರಿಸಿದ್ದಾರೆ. ಹತ್ತಾರು ಮಂದಿ ಸ್ಥಳದಲ್ಲೇ ನಿಂತಿದ್ದರೂ ಘಟನೆಯನ್ನು ಮೊಬೈಲ್‌ನಲ್ಲಿ (Mobile) ಸೆರೆ ಹಿಡಿಯುತ್ತಿದ್ದರೆ ಹೊರತು, ಯಾರೊಬ್ಬರೂ ಜಗಳ ಬಿಡಿಸುವ ಪ್ರಯತ್ನ ಮಾಡಲಿಲ್ಲ. ಸುಮಾರು 10 ನಿಮಿಷದ ಬಳಿಕ ಜಗಳ ಬಿಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಟೋಲ್ ಪ್ಲಾಜಾಗಳನ್ನು (Toll Plaza) ನೋಡುತ್ತವೆ. ಅಲ್ಲಿ ಟೋಲ್ (Toll) ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.
ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ (Nitin Gadkari), ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು ನಡೆಸುತ್ತಿದೆ. ಇದು ವಾಹನ ಮಾಲೀಕರ ಬ್ಯಾಂಕ್ ಖಾತೆಗಳಿಂದ (Bank Account) ಶುಲ್ಕವನ್ನು ಖಡಿತಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ
ಫಾಸ್ಟ್ಯಾಗ್‌ಗಳನ್ನು (FASTags) ಪರಿಚಯಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(NHAI) ಟೋಲ್ ಆದಾಯವು ವರ್ಷಕ್ಕೆ 15 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅದಕ್ಕಾಗಿ ಈಗ ಆಟೋ ಮೊಬೈಲ್ ನಂಬರ್‌ಪ್ಲೇಟ್(ಸ್ವಯಂಚಾಲಿನ ನಂಬರ್‌ಪ್ಲೇಟ್ ರೀಡರ್ ಕ್ಯಾಮೆರಾ) (Automatic Number Plate Reader Cameras) ತ್ರಜ್ಞಾನವನ್ನು ಪರಿಚಯಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು
2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ (Toll Plaza) ವಾಹನಗಳು ಕಾಯುತ್ತಿದ್ದ ಸಮಯ ಸರಿಸುಮಾರು 8 ನಿಮಿಷಗಳಿತ್ತು. 2020 ರಿಂದ 2022ರ ಅವಧಿಯಲ್ಲಿ ಫಾಸ್ಟ್ಯಾಗ್‌ಗಳನ್ನು ಪರಿಚಯಿಸಿದ ನಂತರ ವಾಹನಗಳ ಸರಾಸರಿ ಸಮಯವು 47 ಸೆಕೆಂಡುಗಳಿಗೆ ಇಳಿಕೆಯಾಯಿತು. ಹೀಗಿದ್ದೂ ಕೆಲವು ನಗರಗಳಲ್ಲಿ ಸಂದಿಗ್ಧ ಸಮಯಗಳಲ್ಲಿ ಹೆಚ್ಚಿನ ವಿಳಂಬವಾಗುತ್ತಿವೆ. ಅದಕ್ಕಾಗಿ ಸಂಪೂರ್ಣ ಬದಲಿ ವ್ಯವಸ್ಥೆ ಕಲ್ಪಿಸಲು ಸ್ವಯಂಚಾಲಿನ ಟೋಲ್ ಸಂಗ್ರಹಿಸುವ ವಿಧಾನವನ್ನು ಪರಿಚಯಿಸಲಾಗುತ್ತಿದೆ ಎಂದಿದ್ದಾರೆ.
ಸರ್ಕಾರ ಒಟ್ಟು ಎರಡು ರೀತಿಯ ಆಯ್ಕೆಗಳನ್ನು ಎದುರುನೋಡುತ್ತಿದೆ. ಮೊದಲಿಗೆ ಟೋಲ್ ಅನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸುವುದು, 2ನೇ ಅಯ್ಕೆಯಾಗಿ ಕಾರಿನಲ್ಲಿ ಜಿಪಿಎಸ್ ಅಳವಡಿಸಿ ಉಪಗ್ರಹ ಆಧಾರಿತವಾಗಿ ಟೋಲ್ ಸಂಗ್ರಹ ಮಾಡುವ ವಿಧಾನವನ್ನು ಎದುರು ನೋಡುತ್ತಿದೆ. ಉಪಗ್ರಹ ವಿಧಾನ ಅನುಸರಿಸಿದರೆ ಫಾಸ್ಟ್ಯಾಗ್ ಬದಲಾಗಿ ಜಿಪಿಎಸ್ ಅಳವಡಿಸಬೇಕಾಗುತ್ತದೆ. ಯಾವ ಆಯ್ಕೆಯನ್ನು ಈಗಲೇ ಅಂತಿಮಗೊಳಿಸಿಲ್ಲ. ಆದರೆ ಟೋಲ್ ಪ್ಲಾಜಾಗಳಿಂದ ಮುಕ್ತಿ ನೀಡುವುದು ಖಚಿತ. ಸ್ವಯಂ ಚಾಲಿತ ಟೋಲ್ ಸಂಗ್ರಹಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]