Tag: toll rate

  • ಇಂದಿನಿಂದ ಟೋಲ್ ದರ ಏರಿಕೆ ಬಿಸಿ- ವಾಹನ ಸವಾರರ ಆಕ್ರೋಶ

    ಇಂದಿನಿಂದ ಟೋಲ್ ದರ ಏರಿಕೆ ಬಿಸಿ- ವಾಹನ ಸವಾರರ ಆಕ್ರೋಶ

    ನೆಲಮಂಗಲ(ಬೆಂಗಳೂರು): ರಾಜ್ಯದಲ್ಲಿ ಹೀಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗೆಟ್ಟಿದ್ದಾರೆ. ಇತ್ತ ನೆಲಮಂಗಲ-ಹಾಸನ (Nelamangala- Hassan) ನಡುವಿನ ರಾಷ್ಟ್ರೀಯ ಹೆದ್ದಾರಿ 48ರ ನೆಲಮಂಗಲ ದೇವಿಹಳ್ಳಿ ಎಕ್ಸ್ ಪ್ರೆಸ್ ಹೈವೇ ಟೋಲ್ ಶುಲ್ಕ (Toll Price) ಹೆಚ್ಚಳಕ್ಕೆ ಇಂದು ಮಧ್ಯ ರಾತ್ರಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ.

    ಲಘು ವಾಹನಗಳಿಗೆ ಬರೋಬ್ಬರಿ 5 ರೂಪಾಯಿ, ಹೆವಿ ವಾಹನಗಳಿಗೆ 10 ರೂ. ಹೆಚ್ಚಳವಾಗಿದ್ದು ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ತೆರಿಗೆ (Tax) ಹಾಗೂ ರಾಷ್ಟ್ರೀಯ ಹೆದ್ದಾರಿಯ ಟೋಲ್ ದರ ಹೆಚ್ಚಳದಿಂದಾಗಿ ರೈತಾಪಿ ಜನರ ಮೇಲೆ ಸಹ ಸಾಕಷ್ಟು ಪರಿಣಾಮ ಬೀರುತ್ತದೆ. ದಿಢೀರ್ ಟೋಲ್ ದರದ ಪರಿಣಾಮ ಸಾಕಷ್ಟು ಪ್ರಮಾಣದಲ್ಲಿ ವಿವಿಧ ಸಮಸ್ಯೆಗಳಿಗೆ ಕಾರಣವಾಗಿದೆ.

    ಯಾವುಕ್ಕೆ ಎಷ್ಟು ಶುಲ್ಕ..?:
    1. ಬಸ್ ಟ್ರಕ್
    ಹಳೆ ದರ: 185 – ಸಿಂಗಲ್ ವೇ, 275 – ಡಬಲ್ ವೇ
    ಹೊಸ ದರ: 200 – ಸಿಂಗಲ್ ವೇ, 300 – ಡಬಲ್ ವೇ

    2. ಕಾರ್/ಜೀಪು
    ಹಳೆ ದರ: 50 – ಸಿಂಗಲ್, 80 – ಡಬಲ್
    ಹೊಸ ದರ: 55 – ಸಿಂಗಲ್, 85 – ಡಬಲ್

    3. ಎಲ್‍ಸಿವಿ
    ಹಳೆ ದರ: 90 – ಸಿಂಗಲ್, 135 – ಡಬಲ್
    ಹೊಸ ದರ: 100 – ಸಿಂಗಲ್, 150 – ಡಬಲ್

    4. ಮಲ್ಟಿ ಆಕ್ಸಲ್
    ಹಳೆ ದರ: 295 – ಸಿಂಗಲ್, 440 – ಡಬಲ್
    ಹೊಸ ದರ: 320 – ಸಿಂಗಲ್, 485 – ಡಬಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ರಾಮನಗರ: ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು ಟೋಲ್ ದರ ಏರಿಕೆ ಮಾಡಿದೆ.

    ಜೂನ್ 1 ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಫಾಸ್ಟ್ ಟ್ಯಾಗ್ (Fastag) ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ. ಕಾರ್, ವ್ಯಾನ್, ಜೀಪ್‍ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ. ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‍ಗಳ ಏಕಮುಖ ಟೋಲ್ 220 ರೂ.ನಿಂದ 270ಕ್ಕೆ ಏರಿಕೆ(50ರೂ ಹೆಚ್ಚಳ).

    ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ). ಭಾರೀ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಏಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ.

    ಈ ಹಿಂದೆ ಏಪ್ರಿಲ್ 1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಭಾರೀ ಆಕ್ರೋಶ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ (Toll Rate) ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು?

  • ಶನಿವಾರದಿಂದ ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ – 22% ಟೋಲ್ ದರ ಹೆಚ್ಚಳ

    ಶನಿವಾರದಿಂದ ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ – 22% ಟೋಲ್ ದರ ಹೆಚ್ಚಳ

    ರಾಮನಗರ: ಲೋಕಾರ್ಪಣೆಗೊಂಡ ದಿನದಿಂದಲೂ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru – Mysuru Expressway) ಟೋಲ್ ದರ ಮತ್ತೆ ಏರಿಕೆಗೊಂಡಿದೆ. ಶನಿವಾರದಿಂದ ಪರಿಷ್ಕೃತ ದರ ಅನ್ವಯವಾಗಲಿದ್ದು ದಶಪಥ ಹೆದ್ದಾರಿ ಸಂಚಾರ ಮತ್ತಷ್ಟು ದುಬಾರಿ ಆಗಲಿದೆ.

    ಕೇಂದ್ರ ಹೆದ್ದಾರಿ ಪ್ರಾಧಿಕಾರದ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ, ಹಳೆಯ ದರಕ್ಕಿಂತ ಶೇ.22ರಷ್ಟು ಟೋಲ್ ದರ ಏರಿಕೆಯಾಗಲಿದೆ. ಕಾರು, ವ್ಯಾನ್ ಹಾಗೂ ಜೀಪ್‍ಗೆ ಏಕಮುಖ ಸಂಚಾರ 165 ರೂ. ನಿಗದಿ (30ರೂ. ಹೆಚ್ಚಳ) ಮಾಡಲಾಗಿದೆ. ದ್ವಿಮುಖ ಸಂಚಾರಕ್ಕೆ 250 ರೂ. (45 ರೂ. ಹೆಚ್ಚಳ), ಲಘು ವಾಹನಗಳು ಹಾಗೂ ಮಿನಿ ಬಸ್‍ಗೆ 270 ರೂ. (50 ರೂ. ಹೆಚ್ಚಳ), ದ್ವಿಮುಖ ಸಂಚಾರ 405 ರೂ. (75 ರೂ. ಹೆಚ್ಚಳ), ಟ್ರಕ್, ಬಸ್ ಹಾಗೂ ಎರಡು ಆಕ್ಸೆಲ್ ವಾಹನ 565 ರೂ. (165 ರೂ. ಹೆಚ್ಚಳ), ದ್ವಿಮುಖ ಸಂಚಾರ 850 ರೂ. (160 ರೂ. ಹೆಚ್ಚಳ), ಮೂರು ಆಕ್ಸೆಲ್ ವಾಣಿಜ್ಯ ವಾಹನಗಳು ಏಕಮುಖ ಸಂಚಾರ 615 ರೂ. (115 ರೂ. ಹೆಚ್ಚಳ), ದ್ವಿಮುಖ ಸಂಚಾರ 925 ರೂ. (225 ರೂ. ಹೆಚ್ಚಳ), ಭಾರಿ ಕಟ್ಟಡ ನಿರ್ಮಾಣ ವಾಹಗನಳು, ಅರ್ಥ್ ಮೂವರ್ಸ್ 4-6 ಆಕ್ಸೆಲ್ ವಾಹನಗಳು 885 ರೂ. (165 ರೂ. ಹೆಚ್ಚಳ), ದ್ವಿಮುಖ ಸಂಚಾರ 1,330 ರೂ. (250 ರೂ. ಹೆಚ್ಚಳ), 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು 1,080 ರೂ. (200 ರೂ. ಹೆಚ್ಚಳ), ದ್ವಿಮುಖ ಸಂಚಾರ 1,620 ರೂ. (305 ರೂ. ಹೆಚ್ಚಳ) ಮಾಡಲಾಗಿದೆ. ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಸಿಎಂ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು!

    ಈ ನೂತನ ದರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ (BJP) ಸರ್ಕಾರ ಜನಸಾಮಾನ್ಯರ ಬಳಿ ಲೂಟಿ ಮಾಡುತ್ತಿದೆ. ಇದು ಡಬಲ್ ಇಂಜಿನ್ ಸರ್ಕಾರದ ಕೊಡುಗೆ. ದಶಪಥ ಹೆದ್ದಾರಿ ಬಡವರ ಉಪಯೋಗಕ್ಕಲ್ಲ, ಕೇವಲ ಹಣವಂತರು ಮಾತ್ರ ಉಪಯೋಗಿಸುವಂತಹ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ಟೋಲ್ ಸಂಗ್ರಹ ಪ್ರಾರಂಭ ಆದಾಗಿನಿಂದಲೂ ದುಬಾರಿ ಶುಲ್ಕ ಎಂದು ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಕಾಂಗ್ರೆಸ್ (Congress) , ಜೆಡಿಎಸ್ (JDS) ಸೇರಿ ಹಲವು ಕನ್ನಡ ಪರ ಸಂಘಟನೆಗಳು ಸಹ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಸರ್ವೀಸ್ ರಸ್ತೆ ಹಾಗೂ ಮೂಲಭೂತ ಸೌಕರ್ಯ ನೀಡಿಲ್ಲ ಎಂಬ ಆರೋಪ ಸಹ ಮಾಡಿದ್ದವು. ಇದೀಗ ಟೋಲ್ ಆರಂಭವಾದ 17 ದಿನಕ್ಕೆ ಮತ್ತೆ ದರ ಏರಿಕೆ ಮಾಡಿರುವುದಕ್ಕೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

    ಪ್ರತಾಪ್ ಸಿಂಹ ಮನವಿ:
    ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷ ಟೋಲ್ ದರ ಹೆಚ್ಚಿಳ ಮಾಡುವುದು ಸಾಮಾನ್ಯ ವಿಷಯ. ದೇಶದ ಎಲ್ಲಾ ಟೋಲ್ ದರಗಳಲ್ಲೂ ಹೆಚ್ಚಳ ಆಗಿದೆ. ಆದರೆ ಮೈಸೂರು-ಬೆಂಗಳೂರು ಹೆದ್ದಾರಿ ಮಾ.14 ರಂದು ಪ್ರಾರಂಭ ಆಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯ ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕು. ದರ ಯಥಾಸ್ಥಿತಿ ಮುಂದುವರೆಸುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಶುಕ್ರವಾರ ಸಂಜೆ ಒಳಗಾಗಿ ಅಧಿಕಾರಿಗಳು ನಿರ್ಣಯ ತಿಳಿಸಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು

  • ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‍ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ.

    ನೈಸ್ ಕಂಪೆನಿ ಜುಲೈ 1 ರಿಂದ ಶೇ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವುದರಿಂದ ಈ ಕಂಪೆನಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

    ಕ್ರಿಯಾ ಒಪ್ಪಂದ (ಫ್ರೇಮ್ ವರ್ಕ್ ಅಗ್ರಿಮೆಂಟ್) ಜಾರಿಗೊಳಿಸದೇ ಕರ್ತವ್ಯ ಲೋಪ ಎಸಗಿರುವ ಸಂಬಂಧ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ಇನ್ನೂ ಇತ್ಯರ್ಥ ಆಗಿಲ್ಲ. ಅಷ್ಟರಲ್ಲೇ ಟೋಲ್ ದರ ಹೆಚ್ಚಿಸಿರುವುದು ಅಕ್ರಮ. ಕೂಡಲೇ ಈ ತೀರ್ಮಾನ ಹಿಂದಕ್ಕೆ ಪಡೆಯಬೇಕು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ.